Site icon Vistara News

Lok Sabha Election 2024: ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಪರ ಭರ್ಜರಿ ಪ್ರಚಾರ

Election campaign for Congress candidate Samyukta Patil in Prajadhwani convention at Bagalkot

ಬಾಗಲಕೋಟೆ: ಇಲ್ಲಿನ ನವನಗರದ ಅಂಜುಮಾನ್‌ ಇಸ್ಲಾಂ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಪಕ್ಷದ ಪ್ರಜಾಧ್ವನಿ ಸಮಾವೇಶದಲ್ಲಿ ಬಾಗಲಕೋಟೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಅವರ ಪರ ಭರ್ಜರಿ ಮತಯಾಚನೆ (Lok Sabha Election 2024) ಮಾಡಲಾಯಿತು.

ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಹಲವು ಸಚಿವರು, ಮುಖಂಡರು ಮಾತನಾಡಿದರು. ಯುವನಾಯಕಿಯನ್ನು ಗೆಲ್ಲಿಸಿ, ಸಂಸತ್ತಿನಲ್ಲಿ ಜಿಲ್ಲೆಯ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ. ಅವರಿಗೆ ಮತವೆಂಬ ಆಶೀರ್ವಾದ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: AC Blast : ಕಲ್ಯಾಣ್​ ಜ್ಯುವೆಲರಿಯಲ್ಲಿ ಭಾರಿ ಅವಘಡ; ಏರ್​ ಕಂಡೀಷನರ್​ ಬ್ಲಾಸ್ಟ್​ ಆಗಿ ಮೂವರಿಗೆ ಗಾಯ

ಕಾಂಗ್ರೆಸ್‌ ಮುಖಂಡ ನಿಕೇತ್‌ ರಾಜ್‌ ಮೌರ್ಯ ಮಾತನಾಡಿ, ಕರ್ನಾಟಕ ಕಾಂಗ್ರೆಸ್‌ ಗ್ಯಾರಂಟಿ ಬಗ್ಗೆ ಇಡೀ ದೇಶದ ಜನ ಚರ್ಚೆ ಮಾಡುತ್ತಿದ್ದಾರೆ. ರಾಜ್ಯ ಕಾಂಗ್ರೆಸ್‌ ಸರ್ಕಾರವು ನುಡಿದಂತೆ ನಡೆದಿದ್ದು, 5 ಗ್ಯಾರೆಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ, ಜನರಿಗೆ ತಲುಪಿಸಿದೆ. ಆದರೆ ಗ್ಯಾರಂಟಿ ನೋಡಿ ಸಹಿಸಲು ಸಾಧ್ಯವಾಗದೇ ಬಿಜೆಪಿ ವಿನಾಕಾರಣ ಟೀಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ಬಾರಿಯ ಚುನಾವಣೆಯಲ್ಲಿ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಗೆದ್ದೇ ಗೆಲ್ಲುತ್ತಾರೆ. ಸಂಸದರಾಗುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದರು.

ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪುರ ಮಾತನಾಡಿದರು.

ಇದನ್ನೂ ಓದಿ: Lok Sabha Election 2024: ಮಹಾರಾಷ್ಟ್ರ ಸಿಎಂ ಕರೆಸಿ ಕನ್ನಡಿಗರಿಗೆ ಅವಮಾನ ಮಾಡಿದ ಜೋಶಿ: ಸಂತೋಷ್‌ ಲಾಡ್‌

ಸಮಾವೇಶದಲ್ಲಿ ಸಚಿವರಾದ ಕೆ.ಎನ್‌. ರಾಜಣ್ಣ, ಶಿವಾನಂದ ಪಾಟೀಲ್‌, ಶಾಸಕರಾದ ವಿಜಯಾನಂದ ಕಾಶಪ್ಪನವರ್‌, ಭೀಮಸೇನ್‌ ಚಿಮ್ಮನಕಟ್ಟಿ, ಎಚ್‌.ವೈ. ಮೇಟಿ, ಪ್ರದೀಪ್‌ ಈಶ್ವರ್‌, ಮಾಜಿ ಶಾಸಕಿ ಸೌಮ್ಯಾ ರೆಡ್ಡಿ, ಮೊಹಮ್ಮದ್‌ ನಲಪಾಡ್‌ ಹ್ಯಾರಿಸ್‌, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ನಂಜಯ್ಯನಮಠ, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ರಕ್ಷಿತಾ ಈಟಿ, ಆನಂದ ನ್ಯಾಮಗೌಡ, ಅಜಯ್‌ ಕುಮಾರ್‌ ಸರ್‌ ನಾಯಕ್‌, ಪಕ್ಷದ ಮುಖಂಡರಾದ ಬಿ.ಆರ್‌. ಯಾವಗಲ್‌, ಎಂ.ಪಿ. ನಾಡಗೌಡ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Exit mobile version