Lok Sabha Election 2024: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರಗಾಲ ಗ್ಯಾರಂಟಿ: ಬಿ.ಎಲ್. ಸಂತೋಷ್ - Vistara News

ರಾಜಕೀಯ

Lok Sabha Election 2024: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರಗಾಲ ಗ್ಯಾರಂಟಿ: ಬಿ.ಎಲ್. ಸಂತೋಷ್

Lok Sabha Election 2024: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಬರಗಾಲ ಗ್ಯಾರಂಟಿ, ಅಲ್ಲಲ್ಲಿ ಬಾಂಬ್ ಸ್ಫೋಟ ಗ್ಯಾರಂಟಿ, ಜಾತಿ ಜಾತಿ ಜಗಳ ಗ್ಯಾರಂಟಿ, ಹಿಂದೂಗಳ ಹತ್ಯೆ ಗ್ಯಾರಂಟಿ ಸಿಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಆರೋಪಿಸಿದರು. ಕಲಬುರಗಿಯಲ್ಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾದವ್ ಅವರ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಪ್ರಚಾರ ಭಾಷಣ ಮಾಡಿದರು.

VISTARANEWS.COM


on

Election campaign meeting for Kalaburgi Lok Sabha constituency BJP candidate Umesh Jadav at kalaburagi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಲಬುರಗಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಬರಗಾಲ ಗ್ಯಾರಂಟಿ, ಅಲ್ಲಲ್ಲಿ ಬಾಂಬ್ ಸ್ಫೋಟ ಗ್ಯಾರಂಟಿ, ಜಾತಿ ಜಾತಿ ಜಗಳ ಗ್ಯಾರಂಟಿ, ಹಿಂದೂಗಳ ಹತ್ಯೆ ಗ್ಯಾರಂಟಿ ಸಿಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ (Lok Sabha Election 2024) ಎಚ್ಚರಿಸಿದರು.

ಕಲಬುರಗಿಯಲ್ಲಿ ಹಮ್ಮಿಕೊಂಡಿದ್ದ ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾದವ್ ಅವರ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ: Wonderla Bengaluru: ಬೇಸಿಗೆ ರಜೆಯನ್ನು ಇನ್ನಷ್ಟು ಮಜವಾಗಿಸಲು ವಂಡರ್‌ಲಾದಲ್ಲಿ ʼಸಮ್ಮರ್‌ಲಾ ಫಿಯೆಸ್ಟಾ-2024ʼ: ಭರಪೂರ ಆಫರ್ಸ್‌

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ರೂಪದಲ್ಲಿ ನಮ್ಮ ಹಣ ನಮಗೆ ನೀಡುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಯಾವುದೇ ಭ್ರಷ್ಟಾಚಾರ ಇಲ್ಲದೆ ಮೋದಿ ಗ್ಯಾರಂಟಿಯನ್ನು ಜನರ ಮನೆ ಬಾಗಿಲಿಗೆ ಯಾವುದೇ ದಲ್ಲಾಳಿಗಳ ನೆರವಿಲ್ಲದೆ ಮುಟ್ಟಿಸುತ್ತಿದ್ದಾರೆ. ಉಜ್ವಲ ಯೋಜನೆ ಅಡಿ 10 ಕೋಟಿ ಜನರಿಗೆ ನೆರವು ದೊರೆತಿದೆ. ಮೋದಿ ಅವರ ಗ್ಯಾರಂಟಿ ಸಣ್ಣ ಸಣ್ಣ ಊರುಗಳಿಗೂ ಮುಟ್ಟಿದೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್‌ನ ಜನವಿರೋಧಿ ಕ್ರಮಗಳನ್ನು ಬಿಜೆಪಿಯ ಕಾರ್ಯಕರ್ತರು ಮನೆ ಮನೆಗೂ ಮುಟ್ಟಿಸುವ ದೊಡ್ಡ ಕೆಲಸವನ್ನು ಮಾಡಬೇಕು ಎಂದು ಮನವಿ ಮಾಡಿದರು.

ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾದವ್ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು.

ಇದನ್ನೂ ಓದಿ: Summer Tour: ಕಾಶ್ಮೀರ ಪ್ರವಾಸ ಮಾಡಲೊಂದು ಚಾನ್ಸ್! ಐ ಆರ್ ಸಿ ಟಿ ಸಿಯಿಂದ ವಿಶೇಷ ಪ್ಯಾಕೇಜ್

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಬಿ.ಜಿ ಪಾಟೀಲ್, ಜೆಡಿಎಸ್ ಮಾಜಿ ಅಧ್ಯಕ್ಷ ಅವಿನಾಶ್ ಕುಲಕರ್ಣಿ, ಬಿಜೆಪಿ ನಗರ ಅಧ್ಯಕ್ಷ ಚಂದು ಪಾಟೀಲ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Chetan Ahimsa: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಟ ಚೇತನ್ ಆಗ್ರಹ; ಆ.28ಕ್ಕೆ ಕಾಂಗ್ರೆಸ್ ಹಠಾವೋ, ದಲಿತ ಬಚಾವೋ ಹೋರಾಟ

Actor Chetan Ahimsa: ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣವನ್ನು ದುರ್ಬಳಕೆ ಮಾಡಿಕೊಂಡು ದಲಿತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಆದಿವಾಸಿ ವಿರೋಧಿ, ದಲಿತ ವಿರೋಧಿ ಧೋರಣೆ ಗಟ್ಟಿಗೊಳಿಸುತ್ತಿರುವ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ನಟ ಚೇತನ್ ಒತ್ತಾಯಿಸಿದ್ದಾರೆ.

VISTARANEWS.COM


on

Actor Chetan Ahimsa
Koo

ಚಿಕ್ಕಬಳ್ಳಾಪುರ: ದಲಿತರು, ಶೋಷಿತರಿಗೆ ನ್ಯಾಯ ಒದಗಿಸುತ್ತೇವೆ ಎಂದು ಬಣ್ಣದ ಬಣ್ಣದ ಮಾತುಗಳನ್ನಾಡುತ್ತಾರೆ. ನಾನು ಬಸವ ಅನುಯಾಯಿ, ಅಂಬೇಡ್ಕರ್ ವಾದಿ ಎನ್ನುತ್ತಾರೆ. ಸಿದ್ದರಾಮಯ್ಯ ಟೋಕನಿಸಂ ರೀತಿ ಸಾಂಕೇತಿಕವಾಗಿ ಮಾತನಾಡುತ್ತಾರೆ. ಆದರೆ ಅಂಬೇಡ್ಕರ್, ಬಸವಣ್ಣನವರ ತತ್ವದ ವಿರುದ್ಧವಾಗಿದ್ದಾರೆ. ಮಾಡಬೇಕಾದುದನ್ನೆಲ್ಲ ಮಾಡುತ್ತಿಲ್ಲ, ಮಾಡಬಾರದ್ದನ್ನು ಮಾಡುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಲಿ ಎಂದು ನಟ ಚೇತನ್ ಅಹಿಂಸಾ (Actor Chetan Ahimsa) ಆಗ್ರಹಿಸಿದ್ದಾರೆ.

ಕರ್ನಾಟಕ ಅಹಿಂದ ಸಂಘಟನೆಯ ಒಕ್ಕೂಟದಿಂದ ನಗರದ ಪತ್ರಕರ್ತರ ಭವನದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತ ಹಾಗೂ ಆದಿವಾಸಿಗಳ 25 ಸಾವಿರ ಕೋಟಿ ಹಣಕ್ಕೆ ತೇಪೆ ಹಚ್ಚುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣವನ್ನು ದುರ್ಬಳಕೆ ಮಾಡಿಕೊಂಡು ದಲಿತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇನ್ನು ಆದಿವಾಸಿ ವಿರೋಧಿ, ದಲಿತ ವಿರೋಧಿ ಧೋರಣೆ ಗಟ್ಟಿಗೊಳಿಸುತ್ತಿದ್ದಾರೆ. ಹೀಗಾಗಿ ರಾಜೀನಾಮೆ ಕೊಡಲಿ ಎಂದು ಒತ್ತಾಯಿಸಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಇದೇ ವಿಚಾರದಲ್ಲಿ ಖಂಡಿಸಿದ್ದೇನೆ, ಜೈಲಿಗೂ ಹೋಗಿಬಂದಿದ್ದೇನೆ. ಬಿಜೆಪಿಯ ಕೋಮುವಾದವನ್ನ ನಾವು ಒಪ್ಪಲ್ಲ. ಅಸಮಾನತೆ ತೋರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎಲ್ಲ ಪಕ್ಷಗಳನ್ನು ವಿರೋಧಿಸುತ್ತೇನೆ. ಯಾರು ಉತ್ತಮ ಆಡಳಿತ ಕೊಡುತ್ತಾರೋ ಅವರಿಗೆ ಬೆಂಬಲ ಕೊಡುತ್ತೇನೆ. ನಟ ಚೇತನ್ ಹೇಳಿಕೆ..

ಇದನ್ನೂ ಓದಿ | CLP Meeting: ಆ.22ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಬೇರೆಯವರಿಗೆ ಅವಕಾಶ ನೀಡಲಿ

ಸಿಎಂ ಸಿದ್ದರಾಮಯ್ಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಚೇತನ್‌ ಅಹಿಂಸಾ ಅವರು, ಕಳೆದ ಒಂದು ವರ್ಷದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ ಜನರನ್ನು ವಿಫಲಗೊಳಿಸಿದ್ದಾರೆ.
ಬಡವರು, ದಲಿತರು, ಆದಿವಾಸಿಗಳು, ರೈತರು, ಕನ್ನಡ ಹಕ್ಕುಗಳು, ಭ್ರಷ್ಟಾಚಾರ ವಿರೋಧಿ ಮತ್ತು ಇನ್ನೂ ಹೆಚ್ಚಿನವರಿಗೆ ನೋವುಂಟು ಮಾಡುವ ನೀತಿಗಳನ್ನು ಸಕ್ರಿಯವಾಗಿ ತರುವ ಮೂಲಕ ಅವರು ಈಗಾಗಲೇ ಅನ್ಯಾಯದ ವ್ಯವಸ್ಥೆಯನ್ನು ಹೆಚ್ಚು ಅನ್ಯಾಯದಂತೆ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ 6 + ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ಮಾಡಿದ್ದಾರೆ. ಅವರು ರಾಜೀನಾಮೆ ನೀಡಲಿ ಮತ್ತು ಬೇರೆಯವರಿಗೆ ಅವಕಾಶ ನೀಡಲಿ ಎಂದು ಒತ್ತಾಯಿಸಿದ್ದಾರೆ.

ಆ.28ರಂದು ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ಹಠಾವೋ, ದಲಿತ ಬಚಾವೋ ಹೋರಾಟ

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆ.28ರಂದು ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ಹಠಾವ್ ದಲಿತ್ ಬಚಾವೋ ಬೃಹತ್ ಪ್ರತಿಭಟನೆಯನ್ನು ಕಾರ್ಯಕ್ರಮ ನಡೆಯಲಿದೆ. ಕಾಂಗ್ರೆಸ್ ಅಳಿಸಿ, ದಲಿತರನ್ನು ಉಳಿಸಿ ಎಂಬ ಘೋಷವಾಕ್ಯದಡಿ ಬೃಹತ್ ಪ್ರತಿಭಟನೆ ಮಾಡುತ್ತಿದ್ದು, ದಲಿತ ವಿರೋಧಿಗಳಾದರೆ, ಕಾಂಗ್ರೆಸ್ ಆಗಲಿ ಬಿಜೆಪಿ ಆಗಲಿ, ಜೆಡಿಎಸ್ ಆಗಲಿ ಅವರನ್ನೂ ವಿರೋಧಿಸುತ್ತೇವೆ. ಎಲ್ಲಾ ಸಮಾನತಾವಾದಿಗಳು ನಮ್ಮೊಂದಿಗೆ ಸೇರಬೇಕು ಎಂದು ನಟ ಚೇತನ್‌ ಹೇಳಿದರು.

Continue Reading

ಕರ್ನಾಟಕ

Pavithra gowda: ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಪವಿತ್ರಾ ಗೌಡ; ಆ.22ಕ್ಕೆ ವಿಚಾರಣೆ

Actor Darshan: ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್‌ಗೆ ಆ.28ರವರೆಗೆ ಕೋರ್ಟ್‌ ನ್ಯಾಯಾಂಗ ಬಂಧನ ವಿಸ್ತರಿಸಿತ್ತು. ಜೈಲು ಸೇರಿದ ಬರೋಬ್ಬರಿ 72 ದಿನಗಳ ನಂತರ ಇದೀಗ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಪವಿತ್ರಾ ಗೌಡ, ಬರೋಬ್ಬರಿ 72 ದಿನಗಳ ನಂತರ ಇದೀಗ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಜಾಮೀನು ಕೋರಿ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್​ಗೆ ಪವಿತ್ರಾ ಗೌಡ (Pavithra gowda) ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ಆ.22ಕ್ಕೆ ನಡೆಯಲಿದೆ.

ಸೋಮವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿರುವ ಕೋರ್ಟ್, ಆಗಸ್ಟ್ 22ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಪವಿತ್ರಾ ಗೌಡ ಜತೆ ಮತ್ತೊಬ್ಬ ಆರೋಪಿ ಅನುಕುಮಾರ್ ಕೂಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಇನ್ನು ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್‌ಗೆ (Actor Darshan) ಆ.28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ‌ ಮುಂದುವರಿಸುವಂತೆ ಪೊಲೀಸರು ರಿಮ್ಯಾಂಡ್ ಅರ್ಜಿ‌ ಸಲ್ಲಿಸಿದ್ದರು. ಹೀಗಾಗಿ ಆರೋಪಿಗಳಿಗೆ 24ನೇ ಎಸಿಎಂಎಂ ನ್ಯಾಯಾಲಯದ ಇನ್‌ಚಾರ್ಜ್ ಕೋರ್ಟ್‌, ನ್ಯಾಯಾಂಗ ಬಂಧನವನ್ನು ಆ.14ರಂದು ವಿಸ್ತರಿಸಿತ್ತು

ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ 13 ಹಾಗೂ ತುಮಕೂರು ಜೈಲಿನಿಂದ 4 ಆರೋಪಿಗಳನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಮುಂದೆ ಹಾಜರು ಪಡಿಸಲಾಗಿತ್ತು. ಆದರೆ, ಆಗಸ್ಟ್ 28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದ್ದರಿಂದ ದರ್ಶನ್ ಗ್ಯಾಂಗ್‌ಗೆ ಸೆರೆವಾಸ ಮುಂದುವರಿದಿದೆ.

ಇದನ್ನೂ ಓದಿ | Actor Darshan: ನಟ ದರ್ಶನ್‌ಗೆ ಮನೆಯೂಟ ನಿರಾಕರಿಸಿದ ಜೈಲಾಧಿಕಾರಿಗಳು; ಕೋರ್ಟ್‌ಗೆ ವರದಿ

ಪಿತ್ರಾರ್ಜಿತ ಆಸ್ತಿಗಾಗಿ ತಾರಕಕ್ಕೇರಿದ ಗಲಾಟೆ; ವ್ಯಕ್ತಿಯ ಕೊಲೆಯಲ್ಲಿ ಅಂತ್ಯ

murder case
murder case

ಚಿಕ್ಕಬಳ್ಳಾಪುರ: ಪಿತ್ರಾರ್ಜಿತ ಆಸ್ತಿಗಾಗಿ ದಾಯಾದಿಗಳ ನಡುವಿನ ಗಲಾಟೆಯೂ ತಾರಕಕ್ಕೇರಿದ್ದು ವ್ಯಕ್ತಿಯ ಕೊಲೆಯಲ್ಲಿ (Murder Case) ಅಂತ್ಯವಾಗಿದೆ. ಆಸ್ತಿಗಾಗಿ ತಮ್ಮನ ಮಕ್ಕಳಿಂದಲೇ ಅಣ್ಣನ ಕೊಲೆಯಾಗಿದೆ. ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ನಡುವನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ನಂಜುಂಡಯ್ಯ (55) ಗಲಾಟೆಯಲ್ಲಿ ಕೊಲೆಯಾದವರು. ಕಲ್ಲು ದೊಣ್ಣೆಗಳಿಂದ ಬಡಿದಾಟದಲ್ಲಿ ತೀವ್ರ ಗಾಯಗೊಂಡಿದ್ದ ನಂಜುಂಡಯ್ಯರನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ನಂಜುಂಡಯ್ಯ ಮೃತಪಟ್ಟಿದ್ದಾರೆ.

ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಡುವನಹಳ್ಳಿ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Road Accident : ಸರ್ಜಾಪುರದಲ್ಲಿ ಎದೆ ಝುಲ್‌ ಎನ್ನುವ ಡೆಡ್ಲಿ ಆ್ಯಕ್ಸಿಡೆಂಟ್‌; ಬೈಕ್‌ ಸವಾರ ಬದುಕಿದ್ದೆ ಪವಾಡ

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮಂಡ್ಯದ ಮೊಗರಹಳ್ಳಿ ಬಳಿ ಘಟನೆ ನಡೆದಿದೆ. ಮಂಟಿ ಗ್ರಾಮದ ಅನಿಲ್ (28) ಮೃತ ದುರ್ದೈವಿ. ಮೊಗರಹಳ್ಳಿ ಗ್ರಾಮದ ಸ್ಮಶಾನದ ಬಳಿ ಶವ ಪತ್ತೆಯಾಗಿದೆ. ಸೋಮವಾರ ಬೆಳಗ್ಗೆ ನೇತಾಡುತ್ತಿದ್ದ ಶವ ಕಂಡ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರೆಂಟ್‌ ಶಾಕ್‌ಗೆ ಯುವಕ ಬಲಿ

ಕೃಷಿ ಚಟುವಟಿಕೆಯ ವೇಳೆ ಆಕಸ್ಮಿಕ ವಿದ್ಯುತ್‌ ಸ್ಪರ್ಶಿಸಿ ಯುವಕನೊರ್ವ ಮೃತಪಟ್ಟಿದ್ದಾನೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ‌ ತಾಂವಶಿ ಗ್ರಾಮದಲ್ಲಿ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆ ದ್ರಾಕ್ಷಿ ತೋಟದಲ್ಲಿ ಪಂಪ್ ಸೆಟ್ ಶುರು ಮಾಡಲು ಹೋದಾಗ ಈ ದುರ್ಘಟನೆ ನಡೆದಿದೆ. ಸಂಗಪ್ಪ ನಾನಪ್ಪ ತಳವಾರ (28) ಮೃತ ದುರ್ದೈವಿ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Medical Registration Bill: ವೈದ್ಯರ ಮೇಲೆ ಹಲ್ಲೆ ಮಾಡಿದ್ರೆ 7 ವರ್ಷ ಜೈಲು, 2 ಲಕ್ಷ ದಂಡ; ರಾಜ್ಯ ಸರ್ಕಾರ ಅಧಿಸೂಚನೆ

Medical Registration Bill: ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು (ತಿದ್ದುಪಡಿ) ವಿಧೇಯಕ – 2024ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಕಾಯ್ದೆ ಜಾರಿ ಸಂಬಂಧಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

VISTARANEWS.COM


on

Medical Registration Bill
Koo

ಬೆಂಗಳೂರು: ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿ ಮಾಡಲು ಮುಂದಾಗಿರುವ ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು (ತಿದ್ದುಪಡಿ) ವಿಧೇಯಕ – 2024ಕ್ಕೆ (Medical Registration Bill) ರಾಜ್ಯಪಾಲರು ಅಂಕಿತ ಹಾಕಿದ್ದು, ಕಾಯ್ದೆ ಜಾರಿ ಸಂಬಂಧಿಸಿ ಇದೀಗ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಮಳೆಗಾಲದ ಅಧಿವೇಶನದಲ್ಲಿ ಜುಲೈ 25ರಂದು ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು (ತಿದ್ದುಪಡಿ) ವಿಧೇಯಕ – 2024ಕ್ಕೆ ವಿಧಾನಪರಿಷತ್‌ನಲ್ಲಿ ಅಂಗೀಕಾರ ಸಿಕ್ಕಿತ್ತು. ಇದೀಗ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

ಈ ಕಾಯ್ದೆ ಪ್ರಕಾರ ಉದ್ದೇಶಪೂರ್ವಕವಾಗಿ ವೈದರ ಮೇಲೆ ಹಲ್ಲೆ, ನಿಂದನೆ, ಅವಮಾನಿಸುವುದನ್ನು ನಿಷೇಧಿಸಲಾಗಿದೆ. ವೈದ್ಯರ ಮೇಲಿನ ಹಲ್ಲೆಗೆ 3 ವರ್ಷದಿಂದ 7 ವರ್ಷದ ತನಕ ಜೈಲು ಶಿಕ್ಷೆ ಹಾಗೂ 25 ಸಾವಿರದಿಂದ 2 ಲಕ್ಷದವರೆಗೆ ದಂಡ ವಿಧಿಸಲು ಅವಕಾಶವಿದೆ. ಇನ್ನು ನಕಲಿ ವೈದ್ಯರ ಮೇಲಿನ ದಂಡ 10 ಸಾವಿರದಿಂದ 1 ಲಕ್ಷದವರೆಗೆ ಏರಿಕೆ ಮಾಡಲಾಗಿದೆ.

ಇನ್ನು ವೈದ್ಯಕೀಯ ಪರಿಷತ್‌ನ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರನ್ನು ಹೊರತುಪಡಿಸಿ ಇತರೆ ಸದಸ್ಯರು, ನಾಮನಿರ್ದೇಶಿತರ ಅವಧಿಯನ್ನು 5 ವರ್ಷಕ್ಕೆ ನಿಗದಿಪಡಿಸಲಾಗಿದೆ. ಎರಡು ಅವಧಿಗೆ ಅಧ್ಯಕ್ಷ ಅಥವಾ ಉಪಾಧ್ಯಕ್ಷರಾಗಿದ್ದವರು ಮತ್ತೆ ಅದೇ ಸ್ಥಾನಕ್ಕೆ ಚುನಾಯಿತರಾಗಲು ಅವಕಾಶವಿರುವುದಿಲ್ಲ. ಪರಿಷತ್‌ಗೆ 3 ವರ್ಷಗಳ ಅವಧಿಗೆ ಒಬ್ಬ ರಿಜಿಸ್ಟ್ರಾರ್‌ ಮತ್ತು ಉಪ ರಿಜಿಸ್ಟ್ರಾರ್‌ ನೇಮಕ ಮಾಡಲಾಗುತ್ತದೆ.

ಈ ಕಾಯ್ದೆ ಪ್ರಕಾರ ವೈದ್ಯರು ವೃತ್ತಿಯಲ್ಲಿ ಕಾರ್ಯ ನಿರ್ವಹಿಸಬೇಕಾದರೆ, ವೈದ್ಯಕೀಯ ಪರಿಷತ್ತಿನಲ್ಲಿ ಕಡ್ಡಾಯವಾಗಿ ನೋಂದಣಿಯಾಗಿರಬೇಕು. ಒಂದು ವೇಳೆ ನೋಂದಣಿಯಾಗದೆ ವೃತ್ತಿ ಅಭ್ಯಾಸ ಮಾಡುತ್ತಿದ್ದರೆ, ಅಂತಹವರ ವಿರುದ್ಧ ಪರಿಷತ್‌ ಕ್ರಮ ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಪರಿಷತ್ತಿನಲ್ಲಿ ನೋಂದಣಿಯಾಗದವರು ವೈದ್ಯ ವೃತ್ತಿ ನಿರ್ವಹಿಸುವಂತಿಲ್ಲ. ನಕಲಿ ವೈದ್ಯರ ವಿರುದ್ಧ ಪರಿಷತ್‌ ಸ್ವಯಂಪ್ರೇರಣೆಯಿಂದ ದೂರು ಸಲ್ಲಿಸಬಹುದಾಗಿದೆ.

ವೈದ್ಯಕೀಯ ಪರಿಷತ್ತಿಗೆ ರಿಜಿಸ್ಟರ್‌ ಹಾಗೂ ಉಪ ರಿಜಿಸ್ಟರ್‌ಗಳನ್ನು ನೇಮಕ ಮಾಡುವ ವ್ಯವಸ್ಥೆಯಲ್ಲೂ ಬದಲಾವಣೆ ತರಲಾಗಿದೆ. ಪರಿಷತ್ತಿಗೆ ಸಭೆ ನಡೆಸುವ ವೇಳೆ, ಸ್ಥಳ ಹಾಗೂ ಕಾರ್ಯವಿಧಾನಗಳ ಬಗ್ಗೆಯೂ ವಿವರಿಸಲಾಗಿದೆ. ಅಧ್ಯಕ್ಷರ ಅನುಪಸ್ಥಿತಿಯಲ್ಲಿ ಉಪಾಧ್ಯಕ್ಷರು, ಒಂದು ವೇಳೆ ಇಬ್ಬರು ಲಭ್ಯವಿಲ್ಲದ ಸಂದರ್ಭದಲ್ಲಿ ಸದಸ್ಯರು ಸಭೆಯ ಅಧ್ಯಕ್ಷತೆ ವಹಿಸಬಹುದು ಎಂದು ತಿಳಿಸಲಾಗಿದೆ. ಪರಿಷತ್ತಿನ ರಿಜಿಸ್ಟ್ರಾರ್‌ ಅವರು ವೈದ್ಯಕೀಯ ವೃತ್ತಿಗರ ಪಟ್ಟಿಯನ್ನು ಪ್ರತಿದಿನ ಅಧಿಕೃತ ಜಾಲತಾಣದಲ್ಲಿ ನಿರ್ವಹಿಸಬೇಕು ಮತ್ತು ರಾಷ್ಟ್ರೀಯ ಆಯೋಗಕ್ಕೆ ತಿಳಿಸಬೇಕು ಎಂದು ಸೂಚಿಸಲಾಗಿದೆ.

ಇನ್ನು ಮುಂದೆ ವೈದ್ಯಕೀಯ ಸೇವಾ ಸಿಬ್ಬಂದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ, ಆಡಿಯೊ-ವಿಡಿಯೊಗಳಲ್ಲಿ, ಆಸ್ಪತ್ರೆಗಳಲ್ಲಾಗಲಿ ಫೋಟೊ, ವಿಡಿಯೋ ತೆಗೆಯುವ ಮೂಲಕ ಅಗೌರವಿಸುವ, ದೌರ್ಜನ್ಯ ಎಸಗುವ ಕೃತ್ಯಗಳನ್ನು ನಡೆಸಿದರೆ ಅಂತಹ ಕೃತ್ಯಗಳೂ ದಂಡನಾರ್ಹವಾಗಲಿವೆ.

ಇದನ್ನೂ ಓದಿ | Hoax Bomb Threat: ವೈಟ್ ಫೀಲ್ಡ್‌ನ ಮಾಲ್ ಸೇರಿ‌ ಬೆಂಗಳೂರಿನ ಹಲವು ಮಾಲ್‌ಗಳಿಗೆ ಬಾಂಬ್ ಬೆದರಿಕೆ!

ಆ.22ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಪಾರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಲ್ಲಿ ತಲ್ಲಣ ಶುರುವಾಗಿದೆ. ಹೀಗಾಗಿ ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚೆ ನಡೆಸಲು ಸಿಎಂ ಸಿದ್ದರಾಮಯ್ಯ ಅವರು ಆ.28ರಂದು ಸಂಜೆ 4 ಗಂಟೆಗೆ ವಿಧಾನಸೌಧದ 3ನೇ ಮಹಡಿಯಲ್ಲಿರುವ ಕೊಠಡಿ ಸಂ. 334, ಸಮ್ಮೇಳನ ಸಭಾಂಗಣದಲ್ಲಿ ‘ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ’ (CLP Meeting)ಯನ್ನು ಕರೆದಿದ್ದಾರೆ.

ಇದನ್ನೂ ಓದಿ | ಇದನ್ನೂ ಓದಿ: CM Siddaramaiah: ಆ.23ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ; ಕಾನೂನು ಹೋರಾಟಕ್ಕೆ ಹೈ ‌ಕಮಾಂಡ್ ಬೆಂಬಲ ಕೋರಲು ಭೇಟಿ

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಈ ಸಭೆಯಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು, ವಿಧಾನ ಪರಿಷತ್ತಿನ ಸಭಾ ನಾಯಕರಾದ ಎನ್.ಎಸ್. ಭೋಸರಾಜು ರವರು ಹಾಗೂ ಪಕ್ಷದ ಎಲ್ಲಾ ಕಾರ್ಯಾಧ್ಯಕ್ಷರುಗಳು ಉಪಸ್ಥಿತರಿರುತ್ತಾರೆ. ಆದ್ದರಿಂದ ಎಲ್ಲಾ ಸದಸ್ಯರು ತಪ್ಪದೇ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಬೇಕೆಂದು ಕಾರ್ಯದರ್ಶಿ ಅಲ್ಲಮಪ್ರಭು ಹೇಳಿದ್ದಾರೆ.

Continue Reading

ಕರ್ನಾಟಕ

Congress Protest: 10 ಜನ್ಮ ಎತ್ತಿ ಬಂದ್ರೂ ನಮ್ಮ ಸರ್ಕಾರವನ್ನು ಬೀಳಿಸಲು ಸಾಧ್ಯವಿಲ್ಲ ಎಂದ ಡಿಕೆಶಿ

Congress Protest: ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಕೇವಲ ಡಿ.ಕೆ.ಶಿವಕುಮಾರ್ ನಿಂತಿಲ್ಲ, ಕಟ್ಟಕಡೆಯ ಕಾರ್ಯಕರ್ತರ ರಕ್ಷೆ ಇದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

VISTARANEWS.COM


on

DK Shivakumar
Koo

ಬೆಂಗಳೂರು: ಈ ಸರ್ಕಾರ ಇನ್ನೂ 10 ವರ್ಷ ಬಲಿಷ್ಠವಾಗಿರುತ್ತದೆ. ನಮ್ಮ ಸರ್ಕಾರವನ್ನು 10 ಜನ್ಮ ಎತ್ತಿ ಬಂದರೂ ಬೀಳಿಸಲು ಸಾಧ್ಯವಿಲ್ಲ. ಮಂತ್ರದಿಂದ ಮಾವಿನಕಾಯಿ ಉದುರಲ್ಲ. ಹೊಟ್ಟೆ ಉರಿ ಬಂದರೆ ಔಷದ ಕಳುಹಿಸುತ್ತೇವೆ, ಡಾಕ್ಟರ್ ಇದ್ದಾರೆ. ಆದರೆ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆ ಬರುವುದಿಲ್ಲ. ಈ ಸರ್ಕಾರವನ್ನು (Congress Protest) ಉಳಿಸಿಕೊಳ್ಳುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದರು.

ರಾಜ್ಯಪಾಲರ ನಡೆ ಖಂಡಿಸಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಷಣ ಮಾಡಿದ ಅವರು, ಜನರಿಂದ ಜನರಿಗೋಸ್ಕರ ಬಂದ ಸರ್ಕಾರ ಇದು. ಈ ಸರ್ಕಾರಕ್ಕೆ ಪ್ರಮಾಣವಚನ ಬೋಧನೆ ಮಾಡಿದ್ದು ಇದೇ ಗವರ್ನರ್. ಈಗ ಯಾಕೆ ಒಳಸಂಚು ನಡೆಸುತ್ತಿದ್ದೀರಿ? ಸಂವಿಧಾನ ಕಾಪಾಡಬೇಕೇ ಹೊರತು ದುರುಪಯೋಗ ಮಾಡಿಕೊಳ್ಳಬಾರದು. ನಿಮ್ಮ ಖುರ್ಚಿಗೆ ಕಳಂಕ ತರಬಾರದು. ನಿಮಗೆ ಯಾರಾದರೂ ತನಿಖೆ ಮಾಡಿ ಎಂದು ವರದಿ ಕೊಟ್ಟಿದ್ದಾರಾ? ಯಾವುದಾದರೂ ಅಧಿಕಾರಿ ತನಿಖಾ ರಿಪೋರ್ಟ್ ಕೊಟ್ಟಿದ್ದಾರಾ ಎಂದು ರಾಜ್ಯಪಾಲರಿಗೆ ಪ್ರಶ್ನಿಸಿದರು.

ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಜನತಾ ದಳದ ಅಗ್ರಗಣ್ಯ ನಾಯಕ, ನವರಂಗಿ ನಕಲಿ ಸ್ವಾಮಿ, ಬರೀ ಬುರುಡೇ ಬಿಟ್ಟುಕೊಂಡು ಇರುತ್ತಾರೆ. ಲೋಕಾಯುಕ್ತ ವರದಿ ಇದ್ದರೂ ನವರಂಗಿ ನಕಲಿ ಸ್ವಾಮಿ ವಿರುದ್ಧ ಯಾಕೆ ಪ್ರಾಸಿಕ್ಯೂಷನ್‌ಗೆ ಕೊಡಲಿಲ್ಲ? ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಕೇವಲ ಡಿ.ಕೆ.ಶಿವಕುಮಾರ್ ನಿಂತಿಲ್ಲ, ಕಟ್ಟಕಡೆಯ ಕಾರ್ಯಕರ್ತರ ರಕ್ಷೆ ಇದೆ ಎಂದು ಹೇಳಿದರು.

ನಮಗೆ ನ್ಯಾಯಾಲಯದ ಮೇಲೆ ನಂಬಿಕೆ ಇದೆ. ಪ್ರಾಸಿಕ್ಯೂಷನ್ ಧಿಕ್ಕರಿಸಿ ನಮಗೆ ನ್ಯಾಯ ಸಿಗುವ ನಂಬಿಕೆ‌ ಇದೆ. ನಮ್ಮ ಹೋರಾಟ ಇಲ್ಲಿಗೇ ಮುಗಿಯುವುದಿಲ್ಲ. ಸರ್ಕಾರವನ್ನು ಯಾರೂ ಕೂಡ ಕಿತ್ತು ಹಾಕಲು ಸಾಧ್ಯವಿಲ್ಲ. ನಾವೆಲ್ಲ ಒಗ್ಗಟ್ಟಿನಿಂದ ನಿಂತು ಸಿದ್ದರಾಮಯ್ಯಗೆ ಧೈರ್ಯ ತುಂಬಿದ್ದೇವೆ. ಬಿಜೆಪಿ ಕೈಗೆ ಯಾಕೆ ಅಧಿಕಾರ ಬರಲಿಲ್ಲ? ಹೀಗಾಗಿ ಸರ್ಕಾರ ಬೀಳಿಸಲು ಒಂದು ಹೆಜ್ಜೆ ಟ್ರೈ ಮಾಡಿದರು, ಆ ರೀತಿ ಆಗಿಲ್ಲ, ಮುಂದೆಯೂ ಆಗುವುದಿಲ್ಲ. ಅದಕ್ಕೆ ಈ ರೀತಿ ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ | Muda Scam: ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್‌; ರಿಟ್‌ ಅರ್ಜಿ ವಿಚಾರಣೆ ಆ.29ಕ್ಕೆ ಮುಂದೂಡಿದ ಹೈಕೋರ್ಟ್‌

ಸಚಿವ ಸತೀಶ್ ಜಾರಕಿಹೊಳಿ‌ ಮಾತನಾಡಿ, ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪಕ್ಷ, ವಿವಿಧ ಸಂಘಟನೆಗಳು, ಬುದ್ಧಿಜೀವಿಗಳು ಪ್ರತಿಭಟನೆ ಮಾಡುತ್ತಿದ್ದಾರೆ, ಅದು‌ ಮುಂದುವರಿಯಬೇಕು. ಸಿಎಂ ಸಿದ್ದರಾಮಯ್ಯ ಪರವಾಗಿ ನಿಲ್ಲುವ ಕರ್ತವ್ಯ ನಮಗಿದೆ. ಸಿದ್ದರಾಮಯ್ಯ ಪರವಾಗಿ ಹೈಕಮಾಂಡ್ ಸಹ ಗಟ್ಟಿಯಾಗಿ ನಿಲ್ಲಬೇಕು. ಹೈಕಮಾಂಡ್ ಕೂಡ ಗಟ್ಟಿಯಾಗಿ ಸಿದ್ದರಾಮಯ್ಯ ಬೆನ್ನಿಗೆ ನಿಲ್ಲಬೇಕು. ನಾವೆಲ್ಲ ಸಚಿವರೂ ಸಿದ್ದರಾಮಯ್ಯ ಬೆನ್ನಿಗೆ ನಿಲ್ಲಬೇಕು. ಇಲ್ಲದಿದ್ದರೆ ನಾಳೆ ತೆಲಂಗಾಣ ಸಿಎಂನೂ ಇಳಿಸ್ತಾರೆ, ಮತ್ತೊಂದು ರಾಜ್ಯದ ಸಿಎಂನೂ ಇಳಿಸ್ತಾರೆ. ರಾಜ್ಯದ 34 ಸಚಿವರ ವಿರುದ್ಧವೂ ಹೀಗೆಯೇ ಆರೋಪ ಮಾಡಿ ಇಳಿಸುತ್ತಾರೆ, ಇಳಿಯಬೇಕಾಗುತ್ತದೆ. ಅದಕ್ಕಾಗಿ ಸಿದ್ದರಾಮಯ್ಯ ಪರವಾಗಿ ಗಟ್ಟಿಯಾಗಿ ನಾವು ನಿಲ್ಲಬೇಕು ಎಂದರು.

Continue Reading
Advertisement
Kolkata Doctor murder case
ದೇಶ5 mins ago

Kolkata Doctor murder case: ಕೋಲ್ಕತ್ತಾ ಟ್ರೈನಿ ವೈದ್ಯೆಯ ಕೊಲೆ ಪ್ರಕರಣ- ಇಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ

Tungabhadra dam
ಪ್ರಮುಖ ಸುದ್ದಿ9 mins ago

Tungabhadra Dam : ತುಂಗಭದ್ರಾ ಜಲಾಶಯದ ಬಳಿ ವಿಧಿಸಿದ್ದ ಸೆಕ್ಷನ್‌ 144 ವಾಪಸ್‌‌

Paneer test
ಆರೋಗ್ಯ42 mins ago

Use Of Paneer Water: ಪನೀರ್‌ ಮಾಡುವಾಗ ಉಳಿದ ನೀರನ್ನು ಚೆಲ್ಲಬೇಡಿ; ಹೀಗೆ ಬಳಸಿ ಪೋಷಕಾಂಶ ಪಡೆಯಿರಿ!

Raichur News
ಪ್ರಮುಖ ಸುದ್ದಿ49 mins ago

Raichur News : ಉಸಿರಾಡುತ್ತಿವೆ ಮುಸ್ಲಿಂ ಧರ್ಮಗುರುಗಳ ಗೋರಿಗಳು, ಪವಾಡ ಎಂದ ಭಕ್ತರು

Vastu Tips
ಧಾರ್ಮಿಕ2 hours ago

Vastu Tips: ಸ್ನಾನಗೃಹದಲ್ಲಿ ಯಾವ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ!

Karnataka Weather Forecast
ಮಳೆ2 hours ago

Karnataka Weather : ಮುಕ್ಕಾಲು ಕರ್ನಾಟಕಕ್ಕೆ ಇಂದು ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ3 hours ago

Dina Bhavishya : ಹೊಸ ಒಪ್ಪಂದ ಮಾಡ್ಬೇಡಿ; ಆತುರದಲ್ಲಿ ಯಾವ ತೀರ್ಮಾನವನ್ನೂ ಕೈಗೊಳ್ಳಬೇಡಿ

Justice KS Hegde
ಕರ್ನಾಟಕ8 hours ago

Justice KS Hegde: ಜಸ್ಟೀಸ್‌ ಕೆ.ಎಸ್.ಹೆಗ್ಡೆ ಜೀವನ, ಕೊಡುಗೆ ಕುರಿತು ಚಂದನ ವಾಹಿನಿಯಲ್ಲಿ ವಿಶೇಷ ಕಾರ್ಯಕ್ರಮ

Paris Olympics 2024
ಪ್ರಮುಖ ಸುದ್ದಿ9 hours ago

Paris Olympics 2024 : ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಚೀನಾದ ಅಥ್ಲೀಟ್​ ಈಗ ರೆಸ್ಟೋರೆಂಟ್​​ನಲ್ಲಿ ವೇಟರ್​!

Sudha Murthy'
ಪ್ರಮುಖ ಸುದ್ದಿ9 hours ago

Sudha Murthy : ವಿವಾದ ಸೃಷ್ಟಿಸಿದ ಸುಧಾ ಮೂರ್ತಿಯವರ ‘ರಕ್ಷಾ ಬಂಧನ’ದ ಕತೆ; ಸ್ಪಷ್ಟನೆ ನೀಡಿದ ಸಂಸದೆ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌