Lok Sabha Election 2024 : ಹಾಸನ, ಮಂಡ್ಯ, ಕೋಲಾರ ಜೆಡಿಎಸ್‌ಗೆ: ಎಚ್‌ಡಿಕೆ ಘೋಷಣೆ - Vistara News

ರಾಜಕೀಯ

Lok Sabha Election 2024 : ಹಾಸನ, ಮಂಡ್ಯ, ಕೋಲಾರ ಜೆಡಿಎಸ್‌ಗೆ: ಎಚ್‌ಡಿಕೆ ಘೋಷಣೆ

Lok Sabha Election 2024 : ಕೇವಲ ಎರಡು ಕ್ಷೇತ್ರಗಳ ಸ್ಪರ್ಧೆಗೆ ಸೀಮಿತವಾಗಬಹುದು ಎಂದು ಪಕ್ಷದ ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ ಬೆನ್ನಿಗೇ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಜೆಡಿಎಸ್‌ ಕೋಲಾರದಿಂದಲೂ ಕಣಕ್ಕಿಳಿಯಲಿದೆ ಎಂದು ಘೋಷಿಸಿದ್ದಾರೆ.

VISTARANEWS.COM


on

Lok sabha Election 2024 HD Kumaraswamy JDS
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ರಾಜ್ಯದಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ಮತ್ತು ಜೆಡಿಎಸ್‌ ನಡುವಿನ ಸೀಟು ಹಂಚಿಕೆಯ (BJP-JDS Seat Sharing) ಅಂತಿಮ ಚಿತ್ರಣ ಹೊರಬಿದ್ದಿದೆ. ಜೆಡಿಎಸ್‌ ರಾಜ್ಯದ ಹಾಸನ,‌ ಮಂಡ್ಯ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಜೆಡಿಎಸ್‌ ಸ್ಪರ್ಧೆ ಮಾಡಲಿದೆ ಎಂದು ಸೋಮವಾರ ನಡೆದ ಜೆಡಿಎಸ್‌ ಕೋರ್‌ ಕಮಿಟಿ ಸಭೆಯ ಬಳಿಕ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ (HD Kumaraswamy) ಅವರು ಘೋಷಣೆ ಮಾಡಿದ್ದಾರೆ. ಕೋಲಾರ ಕ್ಷೇತ್ರವನ್ನು ಕೂಡಾ (JDS to contest in Kolara) ಬಿಜೆಪಿಯೇ ಇಟ್ಟುಕೊಳ್ಳಲು ಪ್ರಯತ್ನಿಸುತ್ತಿರುವ ನಡುವೆ ಎಚ್‌.ಡಿ ಕುಮಾರಸ್ವಾಮಿ ಘೋಷಣೆ ಗಮನ ಸೆಳೆದಿದೆ.

ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದ ಉಸ್ತುವಾರಿಗಳು, ಮಾಜಿ ಶಾಸಕರ ಸಭೆ ಮಾಡಿದ್ದೇವೆ. ಆ ಸಭೆಯಲ್ಲಿ ಹಲವಾರು ಪ್ರಮುಖರ ಅಭಿಪ್ರಾಯಗಳನ್ನು ಕೇಳಿಸಿಕೊಂಡಿದ್ದೇವೆ ಎಂದು ಹೇಳಿದರಿ.

ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರು, ಜೆಡಿಎಸ್ ಪಕ್ಷಕ್ಕೆ ಮೂರು ಕ್ಷೇತ್ರ ಅಥವಾ ನಾಲ್ಕು ಕ್ಷೇತ್ರ ಮಾತ್ರ ಕೇಳಿದ್ದೀವಿ. 8- 10 ಕ್ಷೇತ್ರಗಳನ್ನ ಕೇಳಿಲ್ಲ. ನಾವು ಗೆಲ್ಲುವ ಕ್ಷೇತ್ರಗಳನ್ನ ಕೇಳ್ತಾ ಇದ್ದೀವಿ. ನಮ್ಮ ಪಕ್ಷದ ಶಕ್ತಿ ಇದೆ ಅಲ್ಲಿ ಕೇಳ್ತಾ ಇದ್ದೇವೆ. ಹೀಗಾಗಿ ಮೂರು ಕ್ಷೇತ್ರಗಳನ್ನು ಕೊಡಲೇಬೇಕು ಎಂಬ ವಾದವನ್ನು ಮಂಡಿಸಿದರು. ಇದಕ್ಕೆ ಕೋರ್‌ ಕಮಿಟಿ ಒಪ್ಪಿತು.

ʻʻನಾಳೆಯಿಂದ ನಾನು ಚಿಕಿತ್ಸೆಗಾಗಿ 5 ದಿನ ಚೆನ್ನೈಗೆ ಹೋಗುತ್ತಿದ್ದೇನೆ. ಮಾರ್ಚ್‌ 21ರಂದು ಚಿಕಿತ್ಸೆಗಾಗಿ ಸಮಯ ನಿಗದಿ ಮಾಡಿಕೊಂಡಿದ್ದಾರೆ. ಅದಕ್ಕೋಸ್ಕರ ಕೋರ್ ಕಮಿಟಿ ಸಭೆ ನಡೆಸಲಾಗಿದೆ. ಜಿಲ್ಲಾ ಉಸ್ತುವಾರಿಗಳು ಮತ್ತು ಜಿಲ್ಲಾಘಟಕದ ಅಧ್ಯಕ್ಷರು ಮಾಜಿ ಶಾಸಕರ ಸಭೆ ಕರೆದು ಚರ್ಚೆ ಮಾಡಿದ್ದೇನೆʼʼ ಎಂದು ಎಚ್.ಡಿ ಕುಮಾರಸ್ವಾಮಿ ಹೇಳಿದರು.

ʻʻನಮ್ಮ ಉದ್ದೇಶ ಕಾಂಗ್ರೆಸ್‌ನ್ನು 28 ಕ್ಷೇತ್ರಗಳಲ್ಲಿ ಸೋಲಿಸುವುದು, ಉತ್ತರ ಕರ್ನಾಟಕ ಭಾಗದ ವಿಜಯಪುರ, ಕಲಬುರಗಿಯಲ್ಲಿ ನಮ್ಮ ಶಕ್ತಿ ಬಿಜೆಪಿಗಿಂತ ಹೆಚ್ಚಾಗಿದೆ. ಇಂತಹ ಕ್ಷೇತ್ರಗಳಲ್ಲಿ ನಮ್ಮನ್ನ ಹೇಗೆ ಬಳಕೆ ಮಾಡಿಕೊಳ್ಳಬೇಕು ಎಂಬುದಕ್ಕೆ ಬಿಜೆಪಿ ಹೈಕಮಾಂಡ್ ಜೊತೆ ಚರ್ಚೆಯಾಗಬೇಕು. ನಮ್ಮನ್ನು ಕಡೆಗಣಿಸಿದರೆ ಅದರಿಂದಾಗುವ ಪರಿಣಾಮಗಳನ್ನು ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಬಿಜೆಪಿ ಹೈಕಮಾಂಡ್‌ಗೆ ಈ ಎಲ್ಲಾ ವಿಚಾರಗಳನ್ನು ಮುಟ್ಟಿಸಬೇಕೆಂದು ಎಲ್ಲರು ಚರ್ಚೆ ಮಾಡಿದ್ದಾರೆʼʼ ಎಂದು ಎಚ್.‌ಡಿ ಕುಮಾರಸ್ವಾಮಿ ವಿವರಿಸಿದ್ದಾರೆ.

“18 ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತಗಳು 3% ಮತಗಳು ಸ್ವಿಂಗ್ ಆದ್ರೆ ಬಿಜೆಪಿಗೆ ಅನುಕೂಲವಾಗುತ್ತದೆ. ಇದನ್ನ ಹೈಕಮಾಂಡ್ ಗಮನಕ್ಕೆ ತನ್ನಿ ಅಂತಾ ಹೇಳಿದ್ದಾರೆʼʼ ಎಂದು ವಿವರಿಸಿದರು.

ಇದನ್ನೂ ಓದಿ : HD Kumaraswamy: ಕಾಂಗ್ರೆಸ್‌ ಮತದಿಂದ ಸುಮಲತಾರನ್ನು ಗೆಲ್ಲಿಸಿದ ಕಲಿಯುಗದ ಶಕುನಿ ಸಿದ್ದರಾಮಯ್ಯ: ಎಚ್‌ಡಿಕೆ ಆಕ್ರೋಶ

ಎರಡು ಸೀಟಿಗಾಗಿ ಮೈತ್ರಿ ಮಾಡಿಕೊಳ್ಳಬೇಕಾಗಿತ್ತಾ?

ಕೋಲಾರ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಬಿಜೆಪಿ ಮೀನಾಮೇಷ ಎಣಿಸುತ್ತಿದೆ. ಕೇವಲ ಎರಡು ಸೀಟಿಗಾಗಿ ನಾವು ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ? ಇಂಥ ಅನಿಶ್ಚಿತತೆಯಿಂದ ಪಕ್ಷಕ್ಕೆ ನಷ್ಟವಾಗುತ್ತದೆ. ಹೀಗಾಗಿ ಇವತ್ತೇ ಕೋಲಾರ ಅಭ್ಯರ್ಥಿಯನ್ನು ಘೋಷಣೆ ಮಾಡಿ ಎಂದು ಸಭೆಯಲ್ಲಿ ಒತ್ತಡ ಹೇರಲಾಯಿತು.

ʻʻಕೋಲಾರ ಜೆಡಿಎಸ್ ಪಾಲಿನ ಕ್ಷೇತ್ರ ಎಂದು ಮೊದಲಿನಿಂದ ಹೇಳುತ್ತಿದ್ದೀರಿ. ಕೋಲಾರ, ಹಾಸನ, ಮಂಡ್ಯ ಸೇರಿದಂತೆ 5 ಕ್ಷೇತ್ರಗಳು ಜೆಡಿಎಸ್ ಗೆ ಬರುತ್ತವೆ ಎಂದು ನೀವು ಹೇಳಿದ್ದಿರಿ. ಆದರೆ, ಈಗ ನೋಡಿದರೆ ಬಿಜೆಪಿ 2 ಸೀಟಿಗೆ ಬಂದು ನಿಂತಿದೆʼʼ ಎಂದು ಕುಮಾರಸ್ವಾಮಿ ಅವರನ್ನು ಕೇಳಿದ್ದಾರೆ ಉಸ್ತುವಾರಿಗಳು. ಮುಖಂಡರು, ಉಸ್ತುವಾರಿಗಳಿಗೆ ದೇವೇಗೌಡರು, ಕುಮಾರಸ್ವಾಮಿ ಸಮಾಧಾನ ಹೇಳಿದರು. ಕೊನೆಗೆ ಕೋಲಾರದಿಂದಲೂ ಜೆಡಿಎಸ್‌ ಸ್ಪರ್ಧೆ ಮಾಡಲಿದೆ ಎಂದು ಘೋಷಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ರಾಮಲಿಂಗಾರೆಡ್ಡಿ ಜೊತೆ ಮಾತನಾಡುತ್ತೇನೆ – ಡಿಕೆಶಿ

VISTARANEWS.COM


on

ಖಾತೆ ಹಂಚಿಕೆಯಿಂದ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಮಲಿಂಗಾರೆಡ್ಡಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಮಾತನಾಡುತ್ತೇನೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಸಚಿವ ಖಾತೆ ಹಂಚಿಕೆಯ ನಂತರ ರಾಮಲಿಂಗಾರೆಡ್ಡಿ ರಾಜೀನಾಮೆ, ಮುನಿಯಪ್ಪ ಅಸಮಾಧಾನ ಬಹಿರಂಗಗೊಂಡಿದ್ದು, ಈ ಕುರಿತು ಮೊದಲ ಬಾರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಮಲಿಂಗಾ ರೆಡ್ಡಿ ಅವರಿಗೆ ನಾವು ಮಾತು ಕೊಟ್ಟಿದ್ದು ನಿಜ. ಅವರು ಹಿರಿಯ ನಾಯಕರು. ಬೆಂಗಳೂರಿನ ಅಭಿವೃದ್ಧಿ ಜವಾಬ್ದಾರಿ ನೀಡುವ ಕುರಿತು ಚರ್ಚೆ ನಡೆದಿತ್ತು. ಆದರೆ ಹೈಕಮಾಂಡ್ ತೀರ್ಮಾನ ಮಾಡಿದೆ. ಅದನ್ನು ಮೀರಿ ನಾವು ಏನೂ ಮಾಡಲು ಸಾಧ್ಯವಿಲ್ಲ” ಎಂದು ಹೇಳಿದರು.

“ರಾಮಲಿಂಗಾ ರೆಡ್ಡಿ ಅವರು ಸದ್ಯ ಹೊರಗಡೆ ಇದ್ದಾರೆ. ಅವರು ಬಂದ ಬಳಿಕ ಖುದ್ದಾಗಿ ನಾನೇ ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ. ಈ ವಿಚಾರವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಪ್ರಯತ್ನಿಸುತ್ತೇನೆ” ಎಂದರು.

ಇನ್ನು ಕೆ.ಹೆಚ್‌. ಮುನಿಯಪ್ಪ ಅವರ ಅಸಮಾಧಾನದ ಬಗ್ಗೆ ಪ್ರತಿಕ್ರಿಯಿಸಿ, ಅವರ ಜೊತೆಯೂ ಮಾತಾಡಿದ್ದೇನೆ. ಪಕ್ಷ ಏನೇ ಜವಾಬ್ದಾರಿ ಕೊಟ್ಟರೂ ಅದನ್ನು ನಿರ್ವಹಿಸುತ್ತೇನೆಂದು ಅವರು ಹೇಳಿದ್ದಾರೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು.

Continue Reading

Latest

ಬಿಜೆಪಿಗೆ ರಾಜೀನಾಮೆ ಬಳಿಕ ಹೊಸ ರಾಜಕೀಯ ಚಳವಳಿ ಘೋಷಿಸಿದ ಅಣ್ಣಾಮಲೈ; ತಮಿಳುನಾಡಿನಲ್ಲಿ ಏಕಾಂಗಿ ಹೋರಾಟದ ನಿರ್ಧಾರ

VISTARANEWS.COM


on

ಬಿಜೆಪಿಗೆ ರಾಜೀನಾಮೆ ನೀಡಿದ ಬಳಿಕ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ತಮ್ಮ ಮುಂದಿನ ರಾಜಕೀಯ ಹೆಜ್ಜೆ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ. ತಮಿಳುನಾಡಿನಲ್ಲಿ ಹೊಸ ರಾಜಕೀಯ ಚಳವಳಿಯನ್ನು ಆರಂಭಿಸುವುದಾಗಿ ಘೋಷಿಸಿರುವ ಅವರು, ಮುಂದಿನ ದಿನಗಳಲ್ಲಿ ಜನರೊಂದಿಗೆ ನೇರವಾಗಿ ಹೆಜ್ಜೆ ಹಾಕಲು ತೀರ್ಮಾನಿಸಿರುವುದಾಗಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಣ್ಣಾಮಲೈ, “ಬಿಜೆಪಿಗೆ ನಾನು ಯಾವುದೇ ಸಮಸ್ಯೆಯಾಗಲು ಬಯಸುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಹಿರಿಯ ನಾಯಕರ ಬಗ್ಗೆ ನನಗೆ ಅಪಾರ ಗೌರವವಿದೆ” ಎಂದು ಹೇಳಿದರು.

“ನನ್ನ ರಾಜೀನಾಮೆ ನಿರ್ಧಾರವನ್ನು 2025ರ ಡಿಸೆಂಬರ್‌ನಲ್ಲಿಯೇ ಪಕ್ಷದ ವರಿಷ್ಠರಿಗೆ ತಿಳಿಸಿದ್ದೆ. ಕಳೆದ 18 ತಿಂಗಳಿಂದ ಪಕ್ಷದೊಳಗೆ ಕೆಲವು ಭಿನ್ನಾಭಿಪ್ರಾಯಗಳು ಇದ್ದವು. ಆದರೆ ಯಾವುದೇ ಗದ್ದಲವಿಲ್ಲದೆ ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ್ದೇನೆ” ಎಂದು ಅವರು ಸ್ಪಷ್ಟಪಡಿಸಿದರು.

ತಮಿಳುನಾಡಿನ ಹಿತಾಸಕ್ತಿಗಳ ಬಗ್ಗೆ ಮಾತನಾಡಿದ ಅಣ್ಣಾಮಲೈ, “ತಮಿಳುನಾಡಿನ ಅಸ್ಮಿತೆಯನ್ನು ನಾನು ಎಂದಿಗೂ ಬಿಟ್ಟುಕೊಟ್ಟಿಲ್ಲ. ಈ ಮಣ್ಣು, ನೀರು ಮತ್ತು ರಾಜ್ಯದ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಟ ನಡೆಸಿದ್ದೇನೆ. ನಾನು ಹೆಮ್ಮೆಯ ಭಾರತೀಯ ಹಾಗೂ ಸಾಂಪ್ರದಾಯಿಕ ತಮಿಳಿಗ” ಎಂದರು.

“ತಮಿಳುನಾಡಿನ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ. ಮೇಕೆದಾಟು ಅಣೆಕಟ್ಟು ಯೋಜನೆ ಸೇರಿದಂತೆ ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ಹಲವು ವಿಷಯಗಳಲ್ಲಿ ತಮಿಳುನಾಡಿನ ಪರವಾಗಿ ನಿಲುವು ತಾಳಿದ್ದೇನೆ. ಟಂಗ್‌ಸ್ಟನ್, ಮೀಥೇನ್ ಹಾಗೂ ಹೈಡ್ರೋಕಾರ್ಬನ್ ಯೋಜನೆಗಳ ವಿರುದ್ಧವೂ ಹೋರಾಟ ನಡೆಸಿದ್ದೇನೆ” ಎಂದು ಹೇಳಿದರು.

ಮುಂದಿನ ರಾಜಕೀಯ ಯೋಜನೆ ಕುರಿತು ಮಾತನಾಡಿದ ಅವರು, “ತಮಿಳುನಾಡಿನಲ್ಲಿ ಹೊಸ ರಾಜಕೀಯ ಚಳವಳಿಗೆ ಅಧಿಕೃತ ಚಾಲನೆ ನೀಡುತ್ತಿದ್ದೇನೆ. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ನಮ್ಮ ಪಕ್ಷ ಸ್ಪರ್ಧಿಸಲಿದೆ. ಜನರ ಆಶಯಗಳನ್ನು ಪ್ರತಿಬಿಂಬಿಸುವ ಪರ್ಯಾಯ ರಾಜಕೀಯ ಶಕ್ತಿಯನ್ನು ಕಟ್ಟುವ ಗುರಿ ಹೊಂದಿದ್ದೇವೆ” ಎಂದು ಘೋಷಿಸಿದರು.

Continue Reading

Latest

ರಾಹುಲ್ ಗಾಂಧಿ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

VISTARANEWS.COM


on

ರಾಜ್ಯದಲ್ಲಿ ರಾಜ್ಯಸಭಾ ಚುನಾವಣೆಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರು ರಾಹುಲ್‌ ಗಾಂಧಿ ಅವರೊಂದಿಗೆ ವಿಧಾನಸೌಧಕ್ಕೆ ಆಗಮಿಸಿ, ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ಹಲವು ಹಿರಿಯ ನಾಯಕರು ಉಪಸ್ಥಿತರಿದ್ದರು.

ಜೂನ್ 18ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಮೊದಲ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸಿದ್ದಾರೆ.

ಎರಡನೇ ಅಭ್ಯರ್ಥಿಯಾಗಿ ಪವನ್‌ ಖೇರಾ ಹಾಗೂ ಮೂರನೇ ಅಭ್ಯರ್ಥಿಯಾಗಿ ಮನ್ಸೂರ್‌ ಆಲಿ ಖಾನ್‌ ನಾಳೆ ಜೂನ್‌ 6 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

Continue Reading

Latest

ಖಾತೆ ಹಂಚಿಕೆ ಬಗ್ಗೆ ಮುನಿಯಪ್ಪ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಜೀನಾಮೆ ಚಿಂತನೆ?

VISTARANEWS.COM


on

ಖಾತೆ ಹಂಚಿಕೆ ಬೆನ್ನಲ್ಲೇ ಭುಗಿಲೆದ್ದಿರುವ ಅಸಮಾಧಾನ ಸರ್ಕಾರಕ್ಕೆ ಕಗ್ಗಂಟಾಗಿ ಪರಿಣಮಿಸಿದೆ. ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡಿದ ಬೆನ್ನಲ್ಲೇ ಹಿರಿಯ ನಾಯಕ ಹಾಗೂ ಸಚಿವ ಕೆ.ಹೆಚ್‌.ಮುನಿಯಪ್ಪ ಅವರ ಅಸಮಾಧಾನವೂ ಬಹಿರಂಗವಾಗಿದೆ.

ತಮಗೆ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ನೀಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಕೆ.ಹೆಚ್‌.ಮುನಿಯಪ್ಪ ಖಾತೆ ಬದಲಾವಣೆ ಕುರಿತು ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆ ರಾಜ್ಯ ಕಾಂಗ್ರೆಸ್‌ನಲ್ಲಿ ಖಾತೆ ಹಂಚಿಕೆ ಕುರಿತ ಅಸಮಾಧಾನ ಮುಂದುವರಿದಿರುವ ಸೂಚನೆ ನೀಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮುನಿಯಪ್ಪ, “ನಾನು ಎಂಟು ಬಾರಿ ಚುನಾವಣೆಯಲ್ಲಿ ಗೆದ್ದಿದ್ದೇನೆ. ಆದರೆ ಖಾತೆ ಹಂಚಿಕೆ ವೇಳೆ ನನ್ನ ಸೀನಿಯಾರಿಟಿಯನ್ನು ಪರಿಗಣಿಸಲಾಗಿಲ್ಲ. ಎಲ್ಲರನ್ನೂ ಸಮಾನವಾಗಿ ನೋಡಬೇಕು” ಎಂದು ಹೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲರನ್ನೂ ಒಂದೇ ರೀತಿಯಲ್ಲಿ ನೋಡಬೇಕು. ಖಾತೆ ಹಂಚಿಕೆ ಸಮತೋಲನದಿಂದ ಆಗಬೇಕಿತ್ತು. ಈ ರೀತಿಯ ನಿರ್ಧಾರಗಳು ಮುಂದುವರಿದರೆ 2028ರ ಚುನಾವಣೆಯಲ್ಲಿ ಪಕ್ಷಕ್ಕೆ ಕಷ್ಟವಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

ನಾನು ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ನನ್ನ ಅಸಮಾಧಾನವನ್ನು ತಿಳಿಸಿದ್ದೇನೆ. ನನ್ನ ಖಾತೆಯನ್ನು ಬದಲಾಯಿಸುವಂತೆ ಮನವಿ ಮಾಡುತ್ತೇನೆ ಎಂದು ಮುನಿಯಪ್ಪ ಹೇಳಿದ್ದಾರೆ.

ಇದರಿಂದ ರಾಜ್ಯ ಕಾಂಗ್ರೆಸ್‌ನಲ್ಲಿ ಖಾತೆ ಹಂಚಿಕೆ ವಿವಾದ ಮತ್ತಷ್ಟು ತೀವ್ರವಾಗುವ ಸಾಧ್ಯತೆ ಕಂಡುಬರುತ್ತಿದೆ.

Continue Reading
Advertisement
Latest19 hours ago

ಟೀಮ್‌ ಇಂಡಿಯಾಗೆ ವೈಭವ್‌ ಸೂರ್ಯವಂಶಿ ಎಂಟ್ರಿ

Latest21 hours ago

ಸಿಇಟಿ ಫಲಿತಾಂಶ ಪ್ರಕಟ

ಅವಿಭಾಗೀಕೃತ22 hours ago

ರಾಮಲಿಂಗಾರೆಡ್ಡಿ ರಾಜೀನಾಮೆ ಕಗ್ಗಂಟಿಗೆ ತೆರೆ? ಸುರ್ಜೇವಾಲಾ ಮಾತುಕತೆ ಯಶಸ್ವಿ?

Latest2 days ago

ರಾಮಲಿಂಗಾರೆಡ್ಡಿ ಜೊತೆ ಮಾತನಾಡುತ್ತೇನೆ – ಡಿಕೆಶಿ

Latest2 days ago

ಬಿಜೆಪಿಗೆ ರಾಜೀನಾಮೆ ಬಳಿಕ ಹೊಸ ರಾಜಕೀಯ ಚಳವಳಿ ಘೋಷಿಸಿದ ಅಣ್ಣಾಮಲೈ; ತಮಿಳುನಾಡಿನಲ್ಲಿ ಏಕಾಂಗಿ ಹೋರಾಟದ ನಿರ್ಧಾರ

Latest2 days ago

ರಾಹುಲ್ ಗಾಂಧಿ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

Latest2 days ago

ಖಾತೆ ಹಂಚಿಕೆ ಬಗ್ಗೆ ಮುನಿಯಪ್ಪ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಜೀನಾಮೆ ಚಿಂತನೆ?

Latest2 days ago

ರಾಮಲಿಂಗಾ ರೆಡ್ಡಿ ರಾಜೀನಾಮೆ ಕಾಂಗ್ರೆಸ್ ಒಳಜಗಳದ ಪರಿಣಾಮ: ವಿಜಯೇಂದ್ರ ವಾಗ್ದಾಳಿ

Latest2 days ago

ಅಣ್ಣಾಮಲೈ ರಾಜೀನಾಮೆ ಸ್ವೀಕಾರ : ಹೊಸ ಪಕ್ಷ ಘೋಷಣೆ ಕುರಿತು ಇಂದು ಮಹತ್ವದ ಸುದ್ದಿಗೋಷ್ಠಿ

Latest2 days ago

ರಾಜ್ಯಸಭಾ ಚುನಾವಣೆಗೆ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಲಿರುವ ಮಲ್ಲಿಕಾರ್ಜುನ ಖರ್ಗೆ

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌