Site icon Vistara News

Lok Sabha Election 2024 : ಕಲಬುರಗಿ ಲೋಕಸಭಾ ಕ್ಷೇತ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಅಳಿಯ ಅಭ್ಯರ್ಥಿ?

Radhakrishna Doddamani and Mallikarjuna Kharge

ಯಾದಗಿರಿ: ಲೋಕಸಭಾ ಚುನಾವಣೆ (Lok Sabha Election 2024) ಸಮೀಪಿಸುತ್ತಿದೆ. ಇದರ ಬೆನ್ನಲ್ಲೇ ರಾಜಕೀಯ ಚಟುವಟಿಕೆ ಗರಿಗೆದರಿವೆ. ರಾಜ್ಯದಲ್ಲಿ ಕಾಂಗ್ರೆಸ್‌ ಅನ್ನು ಮಣಿಸಲು ಬಿಜೆಪಿ – ಜೆಡಿಎಸ್‌ ಮೈತ್ರಿ (BJP JDS alliance) ಮಾಡಿಕೊಂಡಿವೆ. ಇತ್ತ ಕಾಂಗ್ರೆಸ್‌ ಕೂಡಾ ರಣತಂತ್ರವನ್ನು ಹೆಣೆಯುತ್ತಿದೆ. ಲೋಕಸಭಾ ಕ್ಷೇತ್ರಗಳಿಗೆ ಸೂಕ್ತ ಅಭ್ಯರ್ಥಿಗಳ ಹುಡುಕಾಟದಲ್ಲಿದೆ. ಈಗ ಕಲಬುರಗಿ ಲೋಕಸಭಾ ಕ್ಷೇತ್ರದ (Kalaburagi Lok Sabha constituency) ಕಾಂಗ್ರೆಸ್ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (ICC President Mallikarjun Kharge) ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ (Radhakrishna Doddamani) ಸ್ಪರ್ಧೆ ಮಾಡಲಿದ್ದಾರೆ ಎಂಬ ವಿಷಯ ಹೊರಬಿದ್ದಿದೆ.

ಗುರುಮಿಠಕಲ್ ಪಟ್ಟಣದಲ್ಲಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರು (Former minister Baburao Chinchansur) ಈ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ (Congress Party) ಅಧಿಕೃತ ಟಿಕೆಟ್ ಆಕಾಂಕ್ಷಿಗಳ ಅಭ್ಯರ್ಥಿಗಳ ಘೋಷಣೆ ಮುನ್ನವೇ ಅವರು ರಾಧಾಕೃಷ್ಣ ದೊಡ್ಡಮನಿ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ.

ಇದನ್ನೂ ಓದಿ: Cauvery Water Dispute : ಕಾವೇರಿ ಒಳಹರಿವು ಹೆಚ್ಚಳ, ರಾಜ್ಯ ನಿರಾಳ: ಡಿಸಿಎಂ ಡಿ.ಕೆ. ಶಿವಕುಮಾರ್

ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರು ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಬಹುದು ಎಂದು ಬಾಬುರಾವ್ ಚಿಂಚನಸೂರು ಹೇಳಿದ್ದಾರೆ.

ನನ್ನ ಪ್ರಕಾರ ರಾಧಾಕೃಷ್ಣ ದೊಡ್ಡಮನಿ ಸ್ಪರ್ಧಿ

ನನ್ನ ಪ್ರಕಾರ ರಾಧಾಕೃಷ್ಣ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಬಹುದು. ರಾಧಾಕೃಷ್ಣ ಅವರು ನಿಂತರೆ ಅವರಿಗೆ ಹೆಚ್ಚಿನ ಮತ ನೀಡಿ ಅವರನ್ನು ಲೋಕಸಭಾ ಸದಸ್ಯರನ್ನಾಗಿ ಆಯ್ಕೆ ಮಾಡುತ್ತೇವೆ. ನಾವು ರಾಧಾಕೃಷ್ಣ ಅವರಿಗೆ ಟಿಕೆಟ್ ನೀಡಲು ಒತ್ತಾಯ ಮಾಡುತ್ತೇವೆ. ಕಲಬುರಗಿ ಲೋಕಸಭಾ ಚುನಾವಣೆಯಲ್ಲಿ ಯಾರು ಸ್ಪರ್ಧಿಸುತ್ತಾರೆ ಎಂಬುದು ಗೊತ್ತಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ಯಾರಿಗೆ ಟಿಕೆಟ್‌ ನೀಡುತ್ತಾರೋ ಗೊತ್ತಿಲ್ಲ ಎಂದು ಬಾಬುರಾವ್ ಚಿಂಚನಸೂರು ಹೇಳಿದ್ದಾರೆ.

ನಾನು ಡಿಸಿಎಂ ಆಗಿಯೇ ನಿವೃತ್ತನಾಗುವೆ: ಚಿಂಚನಸೂರು

ಮತದಾರರಿಗೆ ನ್ಯಾಯ ಕೊಡಿಸುವ ಸಲುವಾಗಿ ನಾನು ರಾಜಕೀಯದಲ್ಲಿ ಜೀವಂತ ಇದ್ದು, ಉಪ ಮುಖ್ಯಮಂತ್ರಿಯಾಗಿ ರಾಜಕೀಯ ನಿವೃತ್ತಿಯಾಗುತ್ತೇನೆ. ವಿಧಾನಸಭೆ ಚುನಾವಣೆ ವೇಳೆ ರಸ್ತೆ ಅಪಘಾತವಾಗಿತ್ತು. ನನಗೆ ಆರು ಆಪರೇಷನ್ ಆಗಿವೆ. ನನ್ನ ವಿರೋಧಿಗಳು ನಾನು ಸಾಯುತ್ತೇನೆ ಎಂದು ಚುನಾವಣೆ ಸಂದರ್ಭದಲ್ಲಿ ಅಪ ಪ್ರಚಾರ ಮಾಡಿದರು. ಇದರಿಂದ ನಾನು ಸೋತಿದ್ದೇನೆ. ಹೀಗಾಗಿ ನನ್ನ ಆತ್ಮಕ್ಕೆ ಬೆಂಕಿ ಹತ್ತಿದೆ. ಕೋಲಿ ಸಮಾಜವನ್ನು ಎಸ್‌ಟಿಗೆ ಸೇರ್ಪಡೆ ಮಾಡುತ್ತೇನೆ ಎಂದು ಬಾಬುರಾವ್ ಚಿಂಚನಸೂರು ಹೇಳಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಬಾಬುರಾವ್‌ ಚಿಂಚನಸೂರು, ಮೈತ್ರಿಯಿಂದ ಯಾವುದೇ ಪರಿಣಾಮ ಆಗುವುದಿಲ್ಲ. ಕಾಂಗ್ರೆಸ್ ಪಕ್ಷವು ಮತ್ತೆ ಸ್ಟ್ರಾಂಗ್ ಆಗುತ್ತದೆ. ಲೋಕಸಭಾ ಚುನಾವಣೆಯಲ್ಲಿ ಕಲಬುರಗಿ ಕಾಂಗ್ರೆಸ್ ಅಭ್ಯರ್ಥಿ ಹೆಚ್ಚು ಮತಗಳಿಂದ ಗೆಲ್ಲುತ್ತಾರೆ. ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: Liquor News : ಕೇಂದ್ರ ಮನೆ ಮನೆಗೆ ನೀರು ಬಿಟ್ಟರೆ, ರಾಜ್ಯ ಕಾಂಗ್ರೆಸ್‌ ಎಣ್ಣೆ ಕೊಡುತ್ತಿದೆ: ಬಿ.ವೈ. ರಾಘವೇಂದ್ರ ಕಿಡಿ

ವಿಧಾನಸಭಾ ಚುನಾವಣೆಯಲ್ಲಿ ರಸ್ತೆ ಅಪಘಾತವಾಗಿ 5 ತಿಂಗಳ ನಂತರ ಗುರುಮಿಠಕಲ್‌ನಲ್ಲಿ ಬಾಬುರಾವ್‌ ಚಿಂಚನಸೂರು ಕಾಣಿಸಿಕೊಂಡಿದ್ದಾರೆ.

Exit mobile version