Lok Sabha Election 2024 : ಬೆಳಗಾವಿ ಬೇಡ ಅಂತಿದಾರೆ ಶೆಟ್ಟರ್‌; ನೀವೇ ಅಭ್ಯರ್ಥಿ ಎಂದ ಶಾ, ಬಿಎಸ್‌ವೈ! - Vistara News

ರಾಜಕೀಯ

Lok Sabha Election 2024 : ಬೆಳಗಾವಿ ಬೇಡ ಅಂತಿದಾರೆ ಶೆಟ್ಟರ್‌; ನೀವೇ ಅಭ್ಯರ್ಥಿ ಎಂದ ಶಾ, ಬಿಎಸ್‌ವೈ!

Lok sabha Election 2024 : ಶೆಟ್ಟರ್‌ ಧಾರವಾಡ ಅಥವಾ ಹಾವೇರಿ ಕೇಳಿದ್ದರೆ ಬಿಜೆಪಿ ಹೈಕಮಾಂಡ್‌ ಬೆಳಗಾವಿ ಎನ್ನುತ್ತಿದೆ. ಬೆಳಗಾವಿ ನಮ್ಮದು ಅನ್ನುತ್ತಿದ್ದಾರೆ ಮಂಗಳಾ ಅಂಗಡಿ. ಹಾಗಿದ್ದರೆ ಬೆಳಗಾವಿಗಾಗಿ ದೊಡ್ಡ ಹೋರಾಟವೇ ನಡೆಯುತ್ತದಾ?

VISTARANEWS.COM


on

Lok sabha Election 2024 Jagadish Shettar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು/ಹುಬ್ಬಳ್ಳಿ : ಧಾರವಾಡ ಇಲ್ಲವೇ ಹಾವೇರಿ ಕ್ಷೇತ್ರದ ಟಿಕೆಟ್‌ ಕೇಳಿದ್ದ (Lok sabha Election 2024) ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ (Jagadish Shettar) ಅವರಿಗೆ ಬಿಜೆಪಿ ಹೈಕಮಾಂಡ್‌ (BJP High Command) ಮತ್ತು ರಾಜ್ಯ ನಾಯಕರು ಬೆಳಗಾವಿಯಿಂದಲೇ ಸ್ಪರ್ಧಿಸಬೇಕು ಎಂದು ಹಠ ಹಿಡಿದಿದ್ದಾರೆ. ಆರಂಭದಲ್ಲಿ ಅದಕ್ಕೆ ತಗಾದೆ ಎತ್ತಿ ಹಿಂದೇಟು ಹಾಕಿದ್ದ ಶೆಟ್ಟರ್‌ ಅಂತಿಮವಾಗಿ ಬಿಜೆಪಿ ಹಿರಿಯ ನಾಯಕ ಅಮಿತ್‌ ಶಾ (Amit Shah) ಮತ್ತು ಬಿ.ಎಸ್‌. ಯಡಿಯೂರಪ್ಪ (BS Yediyurappa) ಅವರ ಮಾತಿಗೆ ಕಟ್ಟುಬಿದ್ದು ಬೆಳಗಾವಿಯಿಂದ (Belagavi Constituency) ಸ್ಪರ್ಧಿಸಲು ಒಪ್ಪಿದ್ದಾರೆ.

ಬುಧವಾರ ಬಿಡುಗಡೆಯಾದ ರಾಜ್ಯದ ಲೋಕಸಭಾ ಕ್ಷೇತ್ರಗಳ ಬಿಜೆಪಿ ಮೊದಲ ಪಟ್ಟಿಯಲ್ಲಿ ತಮ್ಮ ಹೆಸರು ಕಾಣದೆ ಜಗದೀಶ್‌ ಶೆಟ್ಟರ್‌ ಸಿಟ್ಟಿಗೆದ್ದಿದ್ದರು. ಹೊರಗಿನಿಂದ ಜಗದೀಶ್‌ ಶೆಟ್ಟರ್‌ ಅವರು ಬೆಳಗಾವಿ ಕ್ಷೇತ್ರಕ್ಕೆ ತಮ್ಮ ಅಥವಾ ಮಂಗಳಾ ಅಂಗಡಿ ಕುಟುಂಬದ ಯಾರಿಗಾದರೂ ಟಿಕೆಟ್‌ ಕೊಟ್ಟರೆ ಸಾಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಸುದ್ದಿ ಇತ್ತು. ಆದರೆ, ಆಂತರಿಕವಾಗಿ ಜಗದೀಶ್‌ ಶೆಟ್ಟರ್‌ ಅವರು ತಮಗೆ ಧಾರವಾಡ ಇಲ್ಲವೇ ಹಾವೇರಿ ಕೊಡಬೇಕು, ‌ ತಮ್ಮ ಕುಟುಂಬಕ್ಕೆ ಬೆಳಗಾವಿ ಕೊಡಬೇಕು ಎಂದು ಬಯಸಿದ್ದರು.

ಆದರೆ, ಹಾವೇರಿ ಮತ್ತು ಧಾರವಾಡ ಎರಡೂ ಕ್ಷೇತ್ರಗಳು ಮಿಸ್‌ ಆದ ಹಿನ್ನೆಲೆಯಲ್ಲಿ ಶೆಟ್ಟರ್‌ ಆಕ್ರೋಶಿತರಾಗಿದ್ದರು. ಧಾರವಾಡ, ಹಾವೇರಿ ಕ್ಷೇತ್ರದ ಟಿಕೆಟ್‌ ಕೊಡದ ನಾಯಕರ ವಿರುದ್ಧ ಸಿಟ್ಟಿಗೆದ್ದಿದ್ದರು. ಅವರು ತಮ್ಮ ಆಪ್ತರ ಜತೆ ಮಾತುಕತೆ ನಡೆಸಿ ಮುಂದಿನ ನಿರ್ಣಯ ತೆಗೆದುಕೊಳ್ಳುವ ಬಗ್ಗೆ ಮಾತನಾಡಿದ್ದರು. ಬಿ.ಎಸ್‌. ಯಡಿಯೂರಪ್ಪ ಮತ್ತು ಬಿವೈ ವಿಜಯೇಂದ್ರ ಅವರ ಮುಂದೆ ತಮ್ಮ ಅಸಮಾಧಾನ ತೋಡಿಕೊಂಡಿದ್ದರು. ಅದರ ನಡುವೆಯೇ ಸ್ವತಃ ಹಿರಿಯ ನಾಯಕ ಅಮಿತ್‌ ಶಾ ಅವರು ಅವರಿಗೆ ಕರೆ ಮಾಡಿ ನೀವು ಬೆಳಗಾವಿಯಿಂದ ಸ್ಪರ್ಧೆ ಮಾಡಿ ಎಂದು ಸೂಚಿಸಿದ್ದರು.

ಬೆಳಗಾವಿ ಸ್ಪರ್ಧೆ ಎಂಬುದು ಶೆಟ್ಟರ್‌ಗೆ ಮತ್ತೊಂದು ಪೀಕಲಾಟ!

ಆದರೆ, ಇದು ಜಗದೀಶ್‌ ಶೆಟ್ಟರ್‌ಗೆ ಮತ್ತೊಂದು ರೀತಿಯಲ್ಲಿ ಪೀಕಲಾಟಕ್ಕೆ ಇಟ್ಟುಕೊಂಡಿತು. ಯಾಕೆಂದರೆ, ಬೆಳಗಾವಿಯ ಹಾಲಿ ಸಂಸದರಾಗಿರುವ ಮಂಗಳಾ ಅಂಗಡಿ ಅವರು ತಮ್ಮ ಕ್ಷೇತ್ರವನ್ನು ಜಗದೀಶ್‌ ಶೆಟ್ಟರ್‌ ಅವರಿಗೆ ಪರಭಾರೆ ಮಾಡಲು ಅಷ್ಟು ಆಸಕ್ತರಾಗಿರಲಿಲ್ಲ. ಅವರು ತಮ್ಮ ಇಬ್ಬರು ಹೆಣ್ಮಕ್ಕಳಾದ ಶ್ರದ್ಧಾ ಶೆಟ್ಟರ್‌ ಅಥವಾ ಸ್ಫೂರ್ತಿ ಪಾಟೀಲ್‌ ಅವರಿಗೆ ಕೊಡಬೇಕು ಎಂದು ಬಯಸಿದ್ದರು.

ನಿಜವೆಂದರೆ, ಬೆಳಗಾವಿ ಕ್ಷೇತ್ರದ ಟಿಕೆಟನ್ನು ತಮ್ಮ ಕುಟುಂಬಕ್ಕೇ ನೀಡಬೇಕು ಎಂದು ಹಿರಿಯರ ಮುಂದೆ ಪಟ್ಟು ಹಿಡಿಯಲು ಮಂಗಳಾ ಅಂಗಡಿ ದಿಲ್ಲಿಗೆ ತೆರಳಿದ್ದಾರೆ. ಈಗ ಬೆಳಗಾವಿ ಕ್ಷೇತ್ರವನ್ನು ತಾವು ಸ್ವೀಕರಿಸಿದರೆ ಮಂಗಳಾ ಅಂಗಡಿ ಕುಟುಂಬಕ್ಕೆ ಅನ್ಯಾಯ ಮಾಡಿದಂತಾಗುತ್ತದೆ ಎಂಬ ಧರ್ಮ ಸಂಕಟದಲ್ಲಿ ಸಿಲುಕಿದರು. ಆದರೆ, ಅಮಿತ್‌ ಶಾ ಹೇಳಿದ ಮಾತಿಗೆ ಕಟ್ಟು ಬಿದ್ದರು.

ಅಷ್ಟಾದರೂ ಬಿ.ಎಸ್‌. ಯಡಿಯೂರಪ್ಪ ಮತ್ತು ಬಿ.ವೈ ವಿಜಯೇಂದ್ರ ಅವರ ಜತೆ ಮಾತನಾಡಿ ಬದಲಾವಣೆ ಮಾಡಿಸುವ ಪ್ರಯತ್ನವಾಗಿ ಅವರು ಬೆಂಗಳೂರಿಗೆ ಧಾವಿಸಿದರು.

ಯಡಿಯೂರಪ್ಪ ಮುಂದೆ ಹೊಸ ಪ್ರಸ್ತಾಪವಿಟ್ಟ ಶೆಟ್ಟರ್‌

ಬೆಂಗಳೂರಿಗೆ ಬಂದು ಬಿ.ಎಸ್‌. ಯಡಿಯೂರಪ್ಪ ಅವರ ಜತೆಗೆ ಸುದೀರ್ಘ ಚರ್ಚೆ ನಡೆಸಿದ ಜಗದೀಶ್‌ ಶೆಟ್ಟರ್‌ ಅವರು, ಬೆಳಗ್ಗೆಯಿಂದ‌ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಮಾಡಿದ್ದೇನೆ. ಧಾರವಾಡ ಕ್ಷೇತ್ರವಾಗಿದ್ದರೆ ಸ್ಪರ್ಧೆ ಮಾಡುತ್ತಿದ್ದೆ. ನಾನು ಬೆಳಗಾವಿಯಿಂದ ಸ್ಪರ್ಧೆ ಮಾಡುವುದಿಲ್ಲ.. ನನ್ನ ಬದಲಾಗಿ ಮಂಗಳಾ ಅಂಗಡಿ ಅವರ ಕುಟುಂಬದಲ್ಲಿ ಇಬ್ಬರು ಹೆಣ್ಣುಮಕ್ಕಳು ಇದ್ದಾರೆ. ಇಬ್ಬರಲ್ಲಿ ಒಬ್ಬರಿಗೆ ಟಿಕೆಟ್ ಕೊಡಿ ಎಂದು ಪ್ರಸ್ತಾಪಿಸಿದರು. ಸ್ಫೂರ್ತಿ ಪಾಟೀಲ್ ಅಥವಾ ಶ್ರದ್ಧಾ ಶೆಟ್ಟರ್ ಗೆ ಟಿಕೆಟ್ ಕೊಡಿ ಎಂದು ಕೋರಿದರು.

ಆದರೆ, ಜಗದೀಶ್‌ ಶೆಟ್ಟರ್‌ ಪ್ರಸ್ತಾಪವನ್ನು ಬಿ.ಎಸ್‌.ವೈ ತಳ್ಳಿ ಹಾಕಿದರು. ನಿಮ್ಮ ಹೆಸರು ಶಿಫಾರಸು ಮಾಡಿದ್ದೇವೆ. ಗೆಲುವಿಗೆ ಯಾವುದೇ ಅಡ್ಡಿ ಇಲ್ಲ. ನೀವೇ ಸ್ಪರ್ಧೆ ಮಾಡಿ ಎಂದು ಹೇಳಿದರು ಯಡಿಯೂರಪ್ಪ. ಆ ಹೊತ್ತಿನಲ್ಲಿ ಬಿ.ವೈ ವಿಜಯೇಂದ್ರ ಕೂಡಾ ಆಗಮಿಸಿದರು. ಅಂತಿಮವಾಗಿ ಅಪ್ಪ ಮತ್ತು ಮಗನ ಮಾತಿಗೆ ಕಟ್ಟುಬಿದ್ದು ಬೆಳಗಾವಿಯಿಂದ ಕಣಕ್ಕಿಳಿಯಲು ಶೆಟ್ಟರ್‌ ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಶುಕ್ರವಾರ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗುವ ನಿರೀಕ್ಷೆ ಇದ್ದು ಅದರಲ್ಲಿ ಬೆಳಗಾವಿಯಿಂದ ಶೆಟ್ಟರ್‌ಗೆ ಟಿಕೆಟ್‌ ಘೋಷಣೆಯಾಗುವುದು ಖಚಿತವಾಗಿದೆ.

ಇದನ್ನೂ ಓದಿ: Lok Sabha Election 2024: ರಾಜವಂಶಸ್ಥ ಯದುವೀರ್‌ಗೆ ಮೈಸೂರು ಟಿಕೆಟ್‌; ಸಂಸದ ಪ್ರತಾಪ್‌ ಸಿಂಹ ಅಭಿನಂದನೆ

ಶೆಟ್ಟರ್‌ ಸ್ಪರ್ಧೆಗೆ ಸ್ಥಳೀಯರು ಏನಂತಾರೆ? ಮಂಗಳಾ ಅಂಗಡಿ ಕುಟುಂಬ ಏನನ್ನುತ್ತದೆ?

ನಿಜವೆಂದರೆ ಬೆಳಗಾವಿಗೆ ಸ್ಥಳೀಯರನ್ನೇ ಕಣಕ್ಕಿಳಿಸಬೇಕು ಎಂಬ ಬೇಡಿಕೆ ಜೋರಾಗಿದೆ. ಹಾಲಿ ಸಂಸದೆ ಮಂಗಳಾ ಅಂಗಡಿ ಅವರು ತಮ್ಮ ಕುಟುಂಬಕ್ಕೇ ಟಿಕೆಟ್‌ ಕೇಳಿದ್ದಾರೆ. ಟಿಕೆಟ್‌ ಕೈತಪ್ಪುವ ಸಾಧ್ಯತೆಗಳ ಚರ್ಚೆ ನಡೆಯುತ್ತಿದ್ದಂತೆಯೇ ಅವರು ಬೆಳಗಾವಿ ವಿಮಾನ ನಿಲ್ದಾಣದ ಮೂಲಕ ದಿಲ್ಲಿಗೆ ದೌಡಾಯಿಸಿದ್ದಾರೆ. ಇತ್ತ ಬೆಂಗಳೂರಿನಲ್ಲಿರುವ ಪುತ್ರಿಯರಾದ ಸ್ಪೂರ್ತಿ ಪಾಟೀಲ, ಶೃದ್ಧಾ ‌ಶೆಟ್ಟರ್ ದೆಹಲಿಗೆ ಪ್ರಯಾಣಿಸಿದ್ದಾರೆ.

ಕೇಂದ್ರ ನಾಯಕರನ್ನು ಭೇಟಿಯಾಗಿ ಇನ್ನೊಂದು ಅವಧಿಗೆ ಟಿಕೆಟ್ ಕೊಡುವಂತೆ ಮಂಗಳಾ ಅಂಗಡಿ ಮನವಿ ಮಾಡಿದ್ದರು. ಕೆಲ‌ವು ದಿನಗಳ ‌ಹಿಂದೆ ಮನೆಗೆ ಬಂದಿದ್ದ ಜೆಪಿ‌ ನಡ್ಡಾಗೂ ನಮ್ಮ ಕುಟುಂಬಕ್ಕೆ ಟಿಕೆಟ್ ನೀಡುವಂತೆ ಮನವಿ‌‌ ಮಾಡಿದ್ದರು ಮಂಗಳಾ ಅಂಗಡಿ. ಈಗ ದೆಹಲಿಯಲ್ಲಿ ಬೀಡುಬಿಟ್ಟು ಟಿಕೆಟ್ ‌ಗಿಟ್ಟಿಸಿಕೊಳ್ಳಲು ಮಂಗಲ ಅಂಗಡಿ ಪ್ರಯತ್ನ ಮಾಡುತ್ತಿದ್ದಾರೆ. ಜಗದೀಶ್‌ ಶೆಟ್ಟರ್‌ ಅವರು ಕೂಡಾ ಮಂಗಳಾ ಅಂಗಡಿ ಕುಟುಂಬಕ್ಕೇ ಕೊಡಿ ಎನ್ನುತ್ತಿದ್ದಾರೆ. ಆದರೆ, ವರಿಷ್ಠರು ಮಾತ್ರ ಜಗದೀಶ್‌ ಶೆಟ್ಟರ್‌ ಅವರನ್ನೇ ಕಣಕ್ಕಿಳಿಸಲು ಯತ್ನಿಸುತ್ತಿದ್ದಾರೆ. ಇತ್ತ ಸ್ಪರ್ಧಾಕಾಂಕ್ಷಿಯಾಗಿರುವ ಮಹಂತೇಶ್‌ ಕವಟಗಿಮಠ ಅವರು ಸ್ಥಳೀಯರಿಗೇ ಕೊಡಬೇಕು ಎಂಬ‌ ಒತ್ತಡ ಹೇರುತ್ತಿದ್ದಾರೆ. ಶೆಟ್ಟರ್‌ಗೆ ಇದೆಲ್ಲವೂ ಇರಸು ಮುರಸು ಉಂಟು ಮಾಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

VISTARANEWS.COM


on

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್‌ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್‌ ಅರ್ಲೇಕರ್‌ ಅವರು ಪ್ರಮಾಣ ವಚನ ಬೋಧಿಸಿದರು. ತಿರುವನಂತಪುರದ ಸೆಂಟ್ರಲ್‌ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ವಿ.ಡಿ. ಸತೀಶನ್‌ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

10 ವರ್ಷಗಳ ನಂತರ ಯುಡಿಎಫ್‌ ಸರ್ಕಾರ ಅಧಿಕಾರ ಸ್ವೀಕಾರದೊಂದಿಗೆ ಕೇರಳ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ.

Continue Reading

ಪ್ರಮುಖ ಸುದ್ದಿ

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

VISTARANEWS.COM


on

ಚೆನ್ನೈ: ತಮಿಳು ನಟ ವಿಜಯ್‌ ಮುಖ್ಯಮಂತ್ರಿ ಆಗಿರುವುದಕ್ಕೆ ನನಗೆ ಯಾವುದೇ ಅಸೂಯೆ ಇಲ್ಲ ಎಂದು ತಮಿಳು ನಟ, ಸೂಪರ್‌ ಸ್ಟಾರ್‌ ರಜನೀಕಾಂತ್‌ ಸ್ಪಷ್ಟಪಡಿಸಿದ್ದಾರೆ.

ಚೆನ್ನೈನಲ್ಲಿ ಮಾತನಾಡಿದ ಅವರು, ಪ್ರಬಲ ಮೈತ್ರಿಕೂಟಗಳನ್ನು ಸೋಲಿಸಿ ವಿಜಯ್‌ ಸಿಎಂ ಆಗಿದ್ದಾರೆ. ಇದರಿಂದ ನನಗೆ ಯಾವುದೇ ಅಸೂಯೆ ಇಲ್ಲ. ನನಗೆ ತುಂಬಾ ಸಂತೋಷವಾಗಿದೆ ಎಂದಿದ್ದಾರೆ.

ನಾನು ರಾಜಕೀಯ ಪ್ರವೇಶಿಸಿದ್ದರೆ ಶೇ.100 ರಷ್ಟು ಯಶಸ್ಸು ಸಾಧಿಸುತ್ತಿದ್ದೆ. ಆದರೆ ನಾನು ರಾಜಕೀಯದಿಂದ ದೂರ ಸರಿದು ಬಹಳ ದಿನಗಳಾಗಿವೆ ಎಂದು ಹೇಳಿದ್ದಾರೆ.

ವಿಜಯ್‌ ಮತ್ತು ನನ್ನ ನಡುವೆ ಒಂದು ಜನರೇಶನ್‌ ಗ್ಯಾಪ್‌ ಇದೆ. ನಮ್ಮಿಬ್ಬರ ನಡುವೆ ಸುಮಾರು 25 ವರ್ಷದ ಅಂತರವಿದೆ. ಅವರ ಬಗ್ಗೆಯಾಗಲಿ, ಅವರ ಸಿಎಂ ಆಗಿರುವುದಕ್ಕಾಗಲಿ ನನಗೆ ಯಾವುದೇ ಅಸೂಯೆ ಇಲ್ಲ ಎಂದು ಸ್ಪಷ್ಟಪಡಿಸಿದರು. ವಿಜಯ್‌ ಸಿಎಂ ಆದ ತಕ್ಷಣವೇ ನಾನು ಅವರಿಗೆ ಅಭಿನಂದನೆ ಸಲ್ಲಿಸಿದ್ದೇನೆ ಎಂದು ರಜನೀಕಾಂತ್‌ ತಿಳಿಸಿದರು.

ಚುನಾವಣೆ ಬಳಿಕ ತಮ್ಮ ವಿರುದ್ಧ ಕೇಳಿಬರುತ್ತಿರುವ ಟೀಕೆಗಳ ಕುರಿತೂ ರಜನೀಕಾಂತ್‌ ಪ್ರತಿಕ್ರಿಯೆ ನೀಡಿದರು. ಚುನಾವಣೆ ನಂತರ ನನ್ನ ವಿರುದ್ಧ ಅನೇಕ ಟೀಕೆಗಳು ಬರುತ್ತಿವೆ. ನಾನು ಅವಕ್ಕೆ ಪ್ರತಿಕ್ರಿಯಿಸದಿದ್ದರೆ ಅವು ಸತ್ಯ ಎಂದು ಭಾವಿಸುವ ಸಾಧ್ಯತೆ ಇದೆ ಎಂದರು.

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿ ಮಾಡಿದ ವಿಚಾರಕ್ಕೂ ಸ್ಪಷ್ಟನೆ ನೀಡಿದ ರಜನೀಕಾಂತ್‌, ಸ್ಟಾಲಿನ್‌ ಮತ್ತು ನನ್ನ ಸ್ನೇಹ ರಾಜಕೀಯವನ್ನೂ ಮೀರಿದ್ದು, ನಮ್ಮ ಸ್ನೇಹಕ್ಕೆ ಸುಮಾರು 35 ವರ್ಷಗಳ ಇತಿಹಾಸ ಇದೆ ಎಂದು ಹೇಳಿದರು.

“ಕೊಳತ್ತೂರಿನಲ್ಲಿ ಸ್ಟಾಲಿನ್‌ ಸೋತಿದ್ದಕ್ಕೆ ನನಗೆ ಬೇಸರವಾಯಿತು. ಸ್ನೇಹಿತನಾಗಿ ಅವರನ್ನು ಭೇಟಿಯಾಗಿ ಸಮಾಧಾನ ಮಾಡಿದ್ದೇನೆ. ಆದರೆ ಆ ವಿಚಾರದಲ್ಲೂ ಕೆಲವರು ನನ್ನನ್ನು ಟೀಕಿಸುತ್ತಿದ್ದಾರೆ, ಅದಕ್ಕೆ ಈ ಸ್ಪಷ್ಟನೆ ನೀಡುತ್ತಿದ್ದೇನೆ ಎಂದು ರಜನೀಕಾಂತ್‌ ಹೇಳಿದ್ದಾರೆ.

Continue Reading

Latest

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

VISTARANEWS.COM


on

ತಿರುವನಂತಪುರಂ: ಕೇರಳಂ ಕಾಂಗ್ರೆಸ್‌ನ ಹಿರಿಯ ನಾಯಕ ವಿ.ಡಿ. ಸತೀಶನ್‌ ಅವರು ನಾಳೆ ಕೇರಳಂನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ತಿರುವನಂತಪುರಂನ ಸೆಂಟ್ರಲ್‌ ಸ್ಟೇಡಿಯಂನಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

ನಾಳೆ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲರು, ಸತೀಶನ್ ಅವರಿಗೆ ಪ್ರಮಾಣ ವಚನ ಭೋದಿಸಲಿದ್ದಾರೆ. ಇದೇ ವೇಳೆ ಹೊಸ ಸಚಿವ ಸಂಪುಟದ ಸದಸ್ಯರೂ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ಈ ಬಾರಿ 21 ಸದಸ್ಯರ ಸಚಿವ ಸಂಪುಟ ರಚನೆಗೆ ಯುಡಿಎಫ್‌ ಸಿದ್ಧತೆ ನಡೆಸಿದೆ. ಈಗಾಗಲೇ ಈ ಕುರಿತು ಮಿತ್ರ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿರುವ ಕಾಂಗ್ರೆಸ್‌, ಕ್ಯಾಬಿನೆಟ್‌ ರಚನೆಯ ಕಸರತ್ತು ನಡೆಸುತ್ತಿದೆ. ಸದ್ಯದ ಮಾಹಿತಿಯ ಪ್ರಕಾರ ಕ್ಯಾಬಿನೆಟ್‌ನಲ್ಲಿ ಮುಸ್ಲಿಂ ಲೀಗ್‌ಗೆ ಐದು ಸ್ಥಾನಗಳು ಲಭಿಸಬಹುದು ಎನ್ನಲಾಗಿದೆ.

ಪ್ರಮಾಣವಚನ ಸಮಾರಂಭಕ್ಕೆ ರಾಜಕೀಯ ನಾಯಕರು, ಗಣ್ಯರು ಹಾಗೂ ಸಾವಿರಾರು ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆಯಿದೆ.

Continue Reading

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading
Advertisement
Latest11 hours ago

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

Latest12 hours ago

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

Latest15 hours ago

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

Latest16 hours ago

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

ಪ್ರಮುಖ ಸುದ್ದಿ2 days ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest2 days ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest3 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest4 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest4 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest4 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌