Lok Sabha Election 2024: ಬಿಜೆಪಿ, ಕಾಂಗ್ರೆಸ್‌ ಜತೆ ಇರುವ ಮಿತ್ರ ಪಕ್ಷಗಳು ಯಾವುವು? ಇಲ್ಲಿದೆ ಅಂತಿಮ ಚಿತ್ರಣ - Vistara News

ರಾಜಕೀಯ

Lok Sabha Election 2024: ಬಿಜೆಪಿ, ಕಾಂಗ್ರೆಸ್‌ ಜತೆ ಇರುವ ಮಿತ್ರ ಪಕ್ಷಗಳು ಯಾವುವು? ಇಲ್ಲಿದೆ ಅಂತಿಮ ಚಿತ್ರಣ

Lok Sabha Election 2024: ಏಕತೆಯನ್ನು ತೋರ್ಪಡಿಸಲು ದೇಶದ ಎರಡು ಬಲಿಷ್ಠ ಪಕ್ಷಗಳು ತನ್ನದೇ ಆದ ಮೈತ್ರಿ ಕೂಟವನ್ನು ರಚಿಸಿಕೊಂಡಿದೆ. ಈ ಬಾರಿ ಲೋಕಸಭೆ ಚುನಾವಣೆ- 2024ಕ್ಕೆ ಮುಂಚಿತವಾಗಿ ಎನ್ ಡಿಎ ಮತ್ತು ಕಾಂಗ್ರೆಸ್ ತನ್ನ ಸಾಮರ್ಥ್ಯ ತೋರ್ಪಡಿಸಲು ಮೈತ್ರಿಗೆ ಹೆಚ್ಚಿನ ಗಮನ ಹರಿಸಿ ಶಕ್ತಿ ಪ್ರದರ್ಶನ ಮಾಡಿವೆ. ಬಿಜೆಪಿ ಮತ್ತು ಕಾಂಗ್ರೆಸ್‌ ಜತೆ ಇರುವ ಮಿತ್ರ ಪಕ್ಷಗಳ ಪಟ್ಟಿ ಇಲ್ಲಿದೆ.

VISTARANEWS.COM


on

Lok Sabha Election-2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಹೊಸದಿಲ್ಲಿ: ಲೋಕಸಭಾ ಚುನಾವಣೆ 2024ರಲ್ಲಿ (Lok Sabha Election 2024) ಈ ಬಾರಿ ದೇಶದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಪರಸ್ಪರ ಹೋರಾಡುತ್ತಿದ್ದು, ಸಣ್ಣ ಪಕ್ಷಗಳನ್ನು ತನ್ನ ತೆಕ್ಕೆಯೊಳಗೆ ಸೇರಿಸಿಕೊಂಡಿವೆ. ಹಿಂದಿನ ಚುನಾವಣೆಯಲ್ಲಿ ಎರಡು ಬಾರಿ ಅಧಿಕಾರಕ್ಕೆ ಏರಿರುವ ಎನ್‌ಡಿಎಯನ್ನು (NDA) ಸೋಲಿಸುವ ಉದ್ದೇಶದಿಂದ ಕಾಂಗ್ರೆಸ್ (congress) ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟವನ್ನು (India alliance) ರಚಿಸಲಾಗಿದೆ. ಅದೇ ರೀತಿ ಎನ್‌ಡಿಎ ಕೂಡ ತನ್ನ ಸಾಮರ್ಥ್ಯವನ್ನು ವೃದ್ಧಿಸಲು ಕೆಲವು ಪಕ್ಷಗಳನ್ನು ತನ್ನೊಳಗೆ ಸೇರಿಸಿಕೊಂಡಿದೆ.

ಕಾಂಗ್ರೆಸ್ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟ ರಚನೆಯಾದ ಬಳಿಕ ಎನ್‌ಡಿಎ ಕೂಡ ಹಳೆಯ ಮತ್ತು ಹೊಸ ಘಟಕಗಳನ್ನು ಸೇರಿಸಿ ತನ್ನ ಸಾಮರ್ಥ್ಯವನ್ನು ವೃದ್ಧಿಸಿಕೊಂಡಿದೆ.

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (ಎನ್‌ಡಿಎ) ನವ ಭಾರತವನ್ನು (N-New India), ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ( D-Developed Nation) ಮಾಡಲು ಬಯಸುವ ಆಕಾಂಕ್ಷೆಯುಳ್ಳ ಭಾರತದ ಜನರು (A-Aspiration of People of India) ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಇಂಡಿಯಾ ಮೈತ್ರಿ ಕೂಟ ರಚನೆಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಇದನ್ನು ಘೋಷಿದ್ದರು.


ಇದನ್ನೂ ಓದಿ: CM Siddaramaiah: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ; ಮೋದಿ, ಅಮಿತ್ ಶಾಗೆ ಗೋ ಬ್ಯಾಕ್‌ ಘೋಷಣೆ


ಇಂಡಿಯಾ

2024ರ ಲೋಕಸಭೆ ಚುನಾವಣೆಗಾಗಿ ವಿರೋಧ ಪಕ್ಷಗಳು ಒಗ್ಗೂಡಿ ರಚಿಸಿದ ಮೈತ್ರಿ ಕೂಟ. 2024ರ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು, ಸಂವಿಧಾನವನ್ನು ರಕ್ಷಿಸುವುದು, ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿಯನ್ನು ಉತ್ತೇಜಿಸುವುದು ಮತ್ತು ಜಾತ್ಯತೀತತೆಯನ್ನು ಎತ್ತಿಹಿಡಿಯುವುದು ಇದರ ಮುಖ್ಯ ಉದ್ದೇಶ ಎಂದು ಘೋಷಿಸಿದೆ.

ಇಂಡಿಯಾ ಒಕ್ಕೂಟದಲ್ಲಿವೆ 26 ಪಕ್ಷಗಳು

ಕಾಂಗ್ರೆಸ್ ನೇತೃತ್ವದಲ್ಲಿ 26 ವಿರೋಧ ಪಕ್ಷಗಳು ಒಗ್ಗೂಡಿವೆ. ಅವುಗಳೆಂದರೆ:

  • – ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ)
  • – ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ)
  • – ಆಮ್ ಆದ್ಮಿ ಪಕ್ಷ (ಎಎಪಿ)
  • – ರಾಷ್ಟ್ರೀಯ ಜನತಾ ದಳ (RJD)
  • – ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ)
  • – ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಶರದ್ ಪವಾರ್ ಬಣ
  • – ಶಿವಸೇನೆ (UBT)
  • – ಸಮಾಜವಾದಿ ಪಕ್ಷ (SP)
  • – ರಾಷ್ಟ್ರೀಯ ಲೋಕದಳ (RLD)
  • – ಅಪ್ನಾ ದಳ (ಕಾಮೆರವಾಡಿ)
  • – ಜಮ್ಮು ಮತ್ತು ಕಾಶ್ಮೀರ ರಾಷ್ಟ್ರೀಯ ಕಾನ್ಫರೆನ್ಸ್‌ (NC)
  • – ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (PDP)
  • – ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದಿ)
  • – ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ)
  • – ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸಿಸ್ಟ್-ಲೆನಿನಿಸ್ಟ್) ಲಿಬರೇಶನ್
  • – ಕ್ರಾಂತಿಕಾರಿ ಸಮಾಜವಾದಿ ಪಕ್ಷ (RSP)
  • – ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್, ಮರುಮಲಾರ್ಚಿ ದ್ರಾವಿಡ ಮುನ್ನೇತ್ರ ಕಳಗಂ (MDMK)
  • – ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ)
  • – ಕೊಂಗುನಾಡು ಮಕ್ಕಳ್ ದೇಸಿಯ ಕಚ್ಚಿ (KMDK)
  • – ಮನಿತನೇಯ ಮಕ್ಕಳ್ ಕಚ್ಚಿ (ಎಂಎಂಕೆ)
  • – ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML)
  • – ಕೇರಳ ಕಾಂಗ್ರೆಸ್ (ಎಂ)
  • – ಕೇರಳ ಕಾಂಗ್ರೆಸ್ (ಜೋಸೆಫ್)


ಎನ್‌ಡಿಎ ಬಣದಲ್ಲಿ 38 ಪಕ್ಷಗಳು

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಆಡಳಿತಾರೂಢ ಎನ್‌ಡಿಎಯ 38 ಪಕ್ಷಗಳು ಲೋಕಸಭಾ ಚುನಾವಣೆಯಲ್ಲಿ ಭಾಗವಹಿಸುತ್ತಿದೆ. ಮೈತ್ರಿಯಲ್ಲಿ ಭಾರತೀಯ ಜನತಾ ಪಕ್ಷದ ಬಹುದೊಡ್ಡ ಶಕ್ತಿಯಾಗಿದೆ.

ಎನ್‌ಡಿಎ ಘಟಕದಲ್ಲಿ ಇವರು ಪಕ್ಷಗಳು ಹೀಗಿವೆ:

-ಭಾರತೀಯ ಜನತಾ ಪಕ್ಷ

  • – ಶಿವಸೇನೆ (ಏಕನಾಥ್ ಶಿಂಧೆ ಬಣ)
  • – ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಎನ್‌ಸಿಪಿ (ಅಜಿತ್ ಪವಾರ್ ಬಣ)
  • – ಜನತಾ ದಳ ಸಂಯುಕ್ತ (ನಿತೀಶ್‌ ಕುಮಾರ್‌)
  • – ಜೆಡಿಎಸ್‌ (ದೇವೇಗೌಡ)
  • – ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷ (ಪಶುಪತಿ ಕುಮಾರ್ ಪರಸ್ ಬಣ)
  • – ಅಪ್ನಾ ದಲ್ (ಸೋನೆಲಾಲ್)
  • -ನ್ಯಾಷನಲ್ ಪೀಪಲ್ಸ್ ಪಾರ್ಟಿ
  • – ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ನೈಫಿಯು ರಿಯೊ)
  • – ಜಾರ್ಖಂಡ್ ವಿದ್ಯಾರ್ಥಿಗಳ ಒಕ್ಕೂಟ
  • – ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ
  • – ಮಿಜೋ ನ್ಯಾಷನಲ್ ಫ್ರಂಟ್‌
  • – ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ
  • – ನಾಗಾ ಪೀಪಲ್ಸ್ ಫ್ರಂಟ್
  • – ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ),
  • -ಅಸೋಮ್ ಗಣ ಪರಿಷತ್
  • – ಪಟ್ಟಾಲಿ ಮಕ್ಕಳ್ ಕಚ್ಚಿ
  • – ತಮಿಳು ಮಾನಿಲ ಕಾಂಗ್ರೆಸ್
  • – ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್
  • – ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷ (ಓಂ ಪ್ರಕಾಶ್ ರಾಜಭರ್)
  • – ಶಿರೋಮಣಿ ಅಕಾಲಿ ದಳ (ಸಂಯುಕ್ತ)
  • – ಮಹಾರಾಷ್ಟ್ರವಾದಿ ಗೋಮಾಂತಕ ಪಕ್ಷ
  • – ಜನನಾಯಕ ಜನತಾ ಪಾರ್ಟಿ
  • – ಪ್ರಹಾರ್ ಜನಶಕ್ತಿ ಪಾರ್ಟಿ
  • – ರಾಷ್ಟ್ರೀಯ ಸಮಾಜ ಪಕ್ಷ
  • – ಜನ ಸುರಾಜ್ಯ ಶಕ್ತಿ ಪಾರ್ಟಿ
  • – ಕುಕಿ ಪೀಪಲ್ಸ್ ಅಲೈಯನ್ಸ್ (ಮಣಿಪುರ)
  • – ಯುನೈಟೆಡ್ ಡೆಮಾಕ್ರಟಿಕ್ ಪಕ್ಷ
  • – ಹಿಲ್ ಸ್ಟೇಟ್ ಪೀಪಲ್ಸ್, ಡೆಮಾಕ್ರಟಿಕ್ ಪಾರ್ಟಿ
  • – ನಿಶಾದ್ ಪಾರ್ಟಿ
  • – ಅಖಿಲ ಭಾರತ ಎನ್ ಆರ್ ಕಾಂಗ್ರೆಸ್
  • – ಹಿಂದೂಸ್ತಾನ್ ಅವಾಮ್ ಮೋರ್ಚಾ
  • – ಜನಸೇನಾ ಪಕ್ಷ
  • – ಹರಿಯಾಣ ಲೋಕ್‌ಹಿತ್ ಪಾರ್ಟಿ
  • -ಭಾರತ ಧರ್ಮ ಜನ ಸೇನೆ
  • -ಕೇರಳ ಕಾಮರಾಜ್ ಕಾಂಗ್ರೆಸ್
  • – ಪುಟ್ಟಿಯ ತಮಿಳಗಂ
  • – ಲೋಕ ಜನಶಕ್ತಿ ಪಕ್ಷ
  • – ಗೂರ್ಖಾ ನ್ಯಾಷನಲ್ ಲಿಬರೇಶನ್ ಫ್ರಂಟ್
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ರಾಮಲಿಂಗಾರೆಡ್ಡಿ ಜೊತೆ ಮಾತನಾಡುತ್ತೇನೆ – ಡಿಕೆಶಿ

VISTARANEWS.COM


on

ಖಾತೆ ಹಂಚಿಕೆಯಿಂದ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಮಲಿಂಗಾರೆಡ್ಡಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಮಾತನಾಡುತ್ತೇನೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಸಚಿವ ಖಾತೆ ಹಂಚಿಕೆಯ ನಂತರ ರಾಮಲಿಂಗಾರೆಡ್ಡಿ ರಾಜೀನಾಮೆ, ಮುನಿಯಪ್ಪ ಅಸಮಾಧಾನ ಬಹಿರಂಗಗೊಂಡಿದ್ದು, ಈ ಕುರಿತು ಮೊದಲ ಬಾರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಮಲಿಂಗಾ ರೆಡ್ಡಿ ಅವರಿಗೆ ನಾವು ಮಾತು ಕೊಟ್ಟಿದ್ದು ನಿಜ. ಅವರು ಹಿರಿಯ ನಾಯಕರು. ಬೆಂಗಳೂರಿನ ಅಭಿವೃದ್ಧಿ ಜವಾಬ್ದಾರಿ ನೀಡುವ ಕುರಿತು ಚರ್ಚೆ ನಡೆದಿತ್ತು. ಆದರೆ ಹೈಕಮಾಂಡ್ ತೀರ್ಮಾನ ಮಾಡಿದೆ. ಅದನ್ನು ಮೀರಿ ನಾವು ಏನೂ ಮಾಡಲು ಸಾಧ್ಯವಿಲ್ಲ” ಎಂದು ಹೇಳಿದರು.

“ರಾಮಲಿಂಗಾ ರೆಡ್ಡಿ ಅವರು ಸದ್ಯ ಹೊರಗಡೆ ಇದ್ದಾರೆ. ಅವರು ಬಂದ ಬಳಿಕ ಖುದ್ದಾಗಿ ನಾನೇ ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ. ಈ ವಿಚಾರವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಪ್ರಯತ್ನಿಸುತ್ತೇನೆ” ಎಂದರು.

ಇನ್ನು ಕೆ.ಹೆಚ್‌. ಮುನಿಯಪ್ಪ ಅವರ ಅಸಮಾಧಾನದ ಬಗ್ಗೆ ಪ್ರತಿಕ್ರಿಯಿಸಿ, ಅವರ ಜೊತೆಯೂ ಮಾತಾಡಿದ್ದೇನೆ. ಪಕ್ಷ ಏನೇ ಜವಾಬ್ದಾರಿ ಕೊಟ್ಟರೂ ಅದನ್ನು ನಿರ್ವಹಿಸುತ್ತೇನೆಂದು ಅವರು ಹೇಳಿದ್ದಾರೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು.

Continue Reading

Latest

ಬಿಜೆಪಿಗೆ ರಾಜೀನಾಮೆ ಬಳಿಕ ಹೊಸ ರಾಜಕೀಯ ಚಳವಳಿ ಘೋಷಿಸಿದ ಅಣ್ಣಾಮಲೈ; ತಮಿಳುನಾಡಿನಲ್ಲಿ ಏಕಾಂಗಿ ಹೋರಾಟದ ನಿರ್ಧಾರ

VISTARANEWS.COM


on

ಬಿಜೆಪಿಗೆ ರಾಜೀನಾಮೆ ನೀಡಿದ ಬಳಿಕ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ತಮ್ಮ ಮುಂದಿನ ರಾಜಕೀಯ ಹೆಜ್ಜೆ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ. ತಮಿಳುನಾಡಿನಲ್ಲಿ ಹೊಸ ರಾಜಕೀಯ ಚಳವಳಿಯನ್ನು ಆರಂಭಿಸುವುದಾಗಿ ಘೋಷಿಸಿರುವ ಅವರು, ಮುಂದಿನ ದಿನಗಳಲ್ಲಿ ಜನರೊಂದಿಗೆ ನೇರವಾಗಿ ಹೆಜ್ಜೆ ಹಾಕಲು ತೀರ್ಮಾನಿಸಿರುವುದಾಗಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಣ್ಣಾಮಲೈ, “ಬಿಜೆಪಿಗೆ ನಾನು ಯಾವುದೇ ಸಮಸ್ಯೆಯಾಗಲು ಬಯಸುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಹಿರಿಯ ನಾಯಕರ ಬಗ್ಗೆ ನನಗೆ ಅಪಾರ ಗೌರವವಿದೆ” ಎಂದು ಹೇಳಿದರು.

“ನನ್ನ ರಾಜೀನಾಮೆ ನಿರ್ಧಾರವನ್ನು 2025ರ ಡಿಸೆಂಬರ್‌ನಲ್ಲಿಯೇ ಪಕ್ಷದ ವರಿಷ್ಠರಿಗೆ ತಿಳಿಸಿದ್ದೆ. ಕಳೆದ 18 ತಿಂಗಳಿಂದ ಪಕ್ಷದೊಳಗೆ ಕೆಲವು ಭಿನ್ನಾಭಿಪ್ರಾಯಗಳು ಇದ್ದವು. ಆದರೆ ಯಾವುದೇ ಗದ್ದಲವಿಲ್ಲದೆ ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ್ದೇನೆ” ಎಂದು ಅವರು ಸ್ಪಷ್ಟಪಡಿಸಿದರು.

ತಮಿಳುನಾಡಿನ ಹಿತಾಸಕ್ತಿಗಳ ಬಗ್ಗೆ ಮಾತನಾಡಿದ ಅಣ್ಣಾಮಲೈ, “ತಮಿಳುನಾಡಿನ ಅಸ್ಮಿತೆಯನ್ನು ನಾನು ಎಂದಿಗೂ ಬಿಟ್ಟುಕೊಟ್ಟಿಲ್ಲ. ಈ ಮಣ್ಣು, ನೀರು ಮತ್ತು ರಾಜ್ಯದ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಟ ನಡೆಸಿದ್ದೇನೆ. ನಾನು ಹೆಮ್ಮೆಯ ಭಾರತೀಯ ಹಾಗೂ ಸಾಂಪ್ರದಾಯಿಕ ತಮಿಳಿಗ” ಎಂದರು.

“ತಮಿಳುನಾಡಿನ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ. ಮೇಕೆದಾಟು ಅಣೆಕಟ್ಟು ಯೋಜನೆ ಸೇರಿದಂತೆ ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ಹಲವು ವಿಷಯಗಳಲ್ಲಿ ತಮಿಳುನಾಡಿನ ಪರವಾಗಿ ನಿಲುವು ತಾಳಿದ್ದೇನೆ. ಟಂಗ್‌ಸ್ಟನ್, ಮೀಥೇನ್ ಹಾಗೂ ಹೈಡ್ರೋಕಾರ್ಬನ್ ಯೋಜನೆಗಳ ವಿರುದ್ಧವೂ ಹೋರಾಟ ನಡೆಸಿದ್ದೇನೆ” ಎಂದು ಹೇಳಿದರು.

ಮುಂದಿನ ರಾಜಕೀಯ ಯೋಜನೆ ಕುರಿತು ಮಾತನಾಡಿದ ಅವರು, “ತಮಿಳುನಾಡಿನಲ್ಲಿ ಹೊಸ ರಾಜಕೀಯ ಚಳವಳಿಗೆ ಅಧಿಕೃತ ಚಾಲನೆ ನೀಡುತ್ತಿದ್ದೇನೆ. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ನಮ್ಮ ಪಕ್ಷ ಸ್ಪರ್ಧಿಸಲಿದೆ. ಜನರ ಆಶಯಗಳನ್ನು ಪ್ರತಿಬಿಂಬಿಸುವ ಪರ್ಯಾಯ ರಾಜಕೀಯ ಶಕ್ತಿಯನ್ನು ಕಟ್ಟುವ ಗುರಿ ಹೊಂದಿದ್ದೇವೆ” ಎಂದು ಘೋಷಿಸಿದರು.

Continue Reading

Latest

ರಾಹುಲ್ ಗಾಂಧಿ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

VISTARANEWS.COM


on

ರಾಜ್ಯದಲ್ಲಿ ರಾಜ್ಯಸಭಾ ಚುನಾವಣೆಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರು ರಾಹುಲ್‌ ಗಾಂಧಿ ಅವರೊಂದಿಗೆ ವಿಧಾನಸೌಧಕ್ಕೆ ಆಗಮಿಸಿ, ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ಹಲವು ಹಿರಿಯ ನಾಯಕರು ಉಪಸ್ಥಿತರಿದ್ದರು.

ಜೂನ್ 18ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಮೊದಲ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸಿದ್ದಾರೆ.

ಎರಡನೇ ಅಭ್ಯರ್ಥಿಯಾಗಿ ಪವನ್‌ ಖೇರಾ ಹಾಗೂ ಮೂರನೇ ಅಭ್ಯರ್ಥಿಯಾಗಿ ಮನ್ಸೂರ್‌ ಆಲಿ ಖಾನ್‌ ನಾಳೆ ಜೂನ್‌ 6 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

Continue Reading

Latest

ಖಾತೆ ಹಂಚಿಕೆ ಬಗ್ಗೆ ಮುನಿಯಪ್ಪ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಜೀನಾಮೆ ಚಿಂತನೆ?

VISTARANEWS.COM


on

ಖಾತೆ ಹಂಚಿಕೆ ಬೆನ್ನಲ್ಲೇ ಭುಗಿಲೆದ್ದಿರುವ ಅಸಮಾಧಾನ ಸರ್ಕಾರಕ್ಕೆ ಕಗ್ಗಂಟಾಗಿ ಪರಿಣಮಿಸಿದೆ. ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡಿದ ಬೆನ್ನಲ್ಲೇ ಹಿರಿಯ ನಾಯಕ ಹಾಗೂ ಸಚಿವ ಕೆ.ಹೆಚ್‌.ಮುನಿಯಪ್ಪ ಅವರ ಅಸಮಾಧಾನವೂ ಬಹಿರಂಗವಾಗಿದೆ.

ತಮಗೆ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ನೀಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಕೆ.ಹೆಚ್‌.ಮುನಿಯಪ್ಪ ಖಾತೆ ಬದಲಾವಣೆ ಕುರಿತು ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆ ರಾಜ್ಯ ಕಾಂಗ್ರೆಸ್‌ನಲ್ಲಿ ಖಾತೆ ಹಂಚಿಕೆ ಕುರಿತ ಅಸಮಾಧಾನ ಮುಂದುವರಿದಿರುವ ಸೂಚನೆ ನೀಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮುನಿಯಪ್ಪ, “ನಾನು ಎಂಟು ಬಾರಿ ಚುನಾವಣೆಯಲ್ಲಿ ಗೆದ್ದಿದ್ದೇನೆ. ಆದರೆ ಖಾತೆ ಹಂಚಿಕೆ ವೇಳೆ ನನ್ನ ಸೀನಿಯಾರಿಟಿಯನ್ನು ಪರಿಗಣಿಸಲಾಗಿಲ್ಲ. ಎಲ್ಲರನ್ನೂ ಸಮಾನವಾಗಿ ನೋಡಬೇಕು” ಎಂದು ಹೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲರನ್ನೂ ಒಂದೇ ರೀತಿಯಲ್ಲಿ ನೋಡಬೇಕು. ಖಾತೆ ಹಂಚಿಕೆ ಸಮತೋಲನದಿಂದ ಆಗಬೇಕಿತ್ತು. ಈ ರೀತಿಯ ನಿರ್ಧಾರಗಳು ಮುಂದುವರಿದರೆ 2028ರ ಚುನಾವಣೆಯಲ್ಲಿ ಪಕ್ಷಕ್ಕೆ ಕಷ್ಟವಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

ನಾನು ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ನನ್ನ ಅಸಮಾಧಾನವನ್ನು ತಿಳಿಸಿದ್ದೇನೆ. ನನ್ನ ಖಾತೆಯನ್ನು ಬದಲಾಯಿಸುವಂತೆ ಮನವಿ ಮಾಡುತ್ತೇನೆ ಎಂದು ಮುನಿಯಪ್ಪ ಹೇಳಿದ್ದಾರೆ.

ಇದರಿಂದ ರಾಜ್ಯ ಕಾಂಗ್ರೆಸ್‌ನಲ್ಲಿ ಖಾತೆ ಹಂಚಿಕೆ ವಿವಾದ ಮತ್ತಷ್ಟು ತೀವ್ರವಾಗುವ ಸಾಧ್ಯತೆ ಕಂಡುಬರುತ್ತಿದೆ.

Continue Reading
Advertisement
Latest1 day ago

ಟೀಮ್‌ ಇಂಡಿಯಾಗೆ ವೈಭವ್‌ ಸೂರ್ಯವಂಶಿ ಎಂಟ್ರಿ

Latest1 day ago

ಸಿಇಟಿ ಫಲಿತಾಂಶ ಪ್ರಕಟ

ಅವಿಭಾಗೀಕೃತ1 day ago

ರಾಮಲಿಂಗಾರೆಡ್ಡಿ ರಾಜೀನಾಮೆ ಕಗ್ಗಂಟಿಗೆ ತೆರೆ? ಸುರ್ಜೇವಾಲಾ ಮಾತುಕತೆ ಯಶಸ್ವಿ?

Latest2 days ago

ರಾಮಲಿಂಗಾರೆಡ್ಡಿ ಜೊತೆ ಮಾತನಾಡುತ್ತೇನೆ – ಡಿಕೆಶಿ

Latest2 days ago

ಬಿಜೆಪಿಗೆ ರಾಜೀನಾಮೆ ಬಳಿಕ ಹೊಸ ರಾಜಕೀಯ ಚಳವಳಿ ಘೋಷಿಸಿದ ಅಣ್ಣಾಮಲೈ; ತಮಿಳುನಾಡಿನಲ್ಲಿ ಏಕಾಂಗಿ ಹೋರಾಟದ ನಿರ್ಧಾರ

Latest2 days ago

ರಾಹುಲ್ ಗಾಂಧಿ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

Latest2 days ago

ಖಾತೆ ಹಂಚಿಕೆ ಬಗ್ಗೆ ಮುನಿಯಪ್ಪ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಜೀನಾಮೆ ಚಿಂತನೆ?

Latest2 days ago

ರಾಮಲಿಂಗಾ ರೆಡ್ಡಿ ರಾಜೀನಾಮೆ ಕಾಂಗ್ರೆಸ್ ಒಳಜಗಳದ ಪರಿಣಾಮ: ವಿಜಯೇಂದ್ರ ವಾಗ್ದಾಳಿ

Latest2 days ago

ಅಣ್ಣಾಮಲೈ ರಾಜೀನಾಮೆ ಸ್ವೀಕಾರ : ಹೊಸ ಪಕ್ಷ ಘೋಷಣೆ ಕುರಿತು ಇಂದು ಮಹತ್ವದ ಸುದ್ದಿಗೋಷ್ಠಿ

Latest2 days ago

ರಾಜ್ಯಸಭಾ ಚುನಾವಣೆಗೆ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಲಿರುವ ಮಲ್ಲಿಕಾರ್ಜುನ ಖರ್ಗೆ

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌