Maneka gandhi: ಮಗ ವರುಣ್‌ ಗಾಂಧಿಗೆ ಟಿಕೆಟ್‌ ನಿರಾಕರಿಸಿದ ಬಿಜೆಪಿ; ಮೇನಕಾ ಗಾಂಧಿ ಮುಂದಿನ ನಡೆ ಏನು? - Vistara News

ರಾಜಕೀಯ

Maneka gandhi: ಮಗ ವರುಣ್‌ ಗಾಂಧಿಗೆ ಟಿಕೆಟ್‌ ನಿರಾಕರಿಸಿದ ಬಿಜೆಪಿ; ಮೇನಕಾ ಗಾಂಧಿ ಮುಂದಿನ ನಡೆ ಏನು?

maneka gandhi reaction: ಉತ್ತರ ಪ್ರದೇಶದ ಸುಲ್ತಾನ್‌ಪುರಕ್ಕೆ ಆಗಮಿಸಿದ ಬಿಜೆಪಿ ಸಂಸದೆ ಮೇನಕಾ ಗಾಂಧಿ ಅವರು ತಮ್ಮ ಮಗ, ಬಿಜೆಪಿ ಸಂಸದ ವರುಣ್‌ ಗಾಂಧಿ ಅವರಿಗೆ ಕ್ಷೇತ್ರದಿಂದ ಟಿಕೆಟ್‌ ನಿರಾಕರಿಸಿದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ತಾವು ಬಿಜೆಪಿ ಪಕ್ಷದ ಭಾಗವಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸುಲ್ತಾನ್‌ಪುರ: ನಾನು ಬಿಜೆಪಿಯಲ್ಲಿ (bjp) ಇದ್ದೇನೆ ಎಂಬುದೇ ನನಗೆ ಬಹಳ ಸಂತೋಷ. ಸುಲ್ತಾನ್‌ಪುರದ (Sultanpur) ಟಿಕೆಟ್ ನೀಡಿರುವುದಕ್ಕೆ ಕೇಂದ್ರ ಗೃಹ ಸಚಿವ (central home minister) ಅಮಿತ್ ಶಾ (amit shah), ಪ್ರಧಾನಿ (pm) ನರೇಂದ್ರ ಮೋದಿ (narendra modi) ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ (BJP National President) ಜೆ.ಪಿ. ನಡ್ಡಾ (j.p.  nadda) ಅವರಿಗೆ ಧನ್ಯವಾದಗಳು ಎಂದು ಸಂಸದೆ (mp) ಮೇನಕಾ ಗಾಂಧಿ (Maneka Gandhi) ಹೇಳಿದರು.

ಪುತ್ರ, ಬಿಜೆಪಿ ಸಂಸದ ವರುಣ್‌ ಗಾಂಧಿ (Varun Gandhi) ಅವರಿಗೆ ಕ್ಷೇತ್ರದಿಂದ ಟಿಕೆಟ್‌ ನಿರಾಕರಿಸಿದ ಬಳಿಕ ಉತ್ತರ ಪ್ರದೇಶದ (uttarpradesh) ಸುಲ್ತಾನ್‌ಪುರಕ್ಕೆ ಆಗಮಿಸಿದ ಅವರು ಈ ಕುರಿತು ಪ್ರತಿಕ್ರಿಯಿಸಿ, ಪಕ್ಷದ ಭಾಗವಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ವರುಣ್ ಗಾಂಧಿ ಮುಂದೇನು ಮಾಡುತ್ತಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮೇನಕಾ ಗಾಂಧಿ, ವರುಣ್ ಏನು ಮಾಡುತ್ತಾರೆ ಎಂಬುದನ್ನು ಅವರನ್ನೇ ಕೇಳಿ. ಚುನಾವಣೆಯ ಅನಂತರ ನಾವು ಇದನ್ನು ಪರಿಗಣಿಸುತ್ತೇವೆ. ಇದಕ್ಕೆ ಇನ್ನೂ ಸಮಯವಿದೆ ಎಂದರು.

ನಾನು ಎಲ್ಲಿ ಕಣಕ್ಕೆ ಇಳಿಯಬೇಕು ಎನ್ನುವ ಸಂದಿಗ್ಧತೆ ಉಂಟಾಗಿತ್ತು. ಟಿಕೆಟ್ ಬಹಳ ತಡವಾಗಿ ಘೋಷಿಸಲಾಯಿತು. ಪಕ್ಷವು ಈಗ ತೆಗೆದುಕೊಂಡಿರುವ ನಿರ್ಧಾರಕ್ಕೆ ನಾನು ಕೃತಜ್ಞನಾಗಿದ್ದೇನೆ ಎಂದು ಅವರು ಹೇಳಿದರು.

ಸುಲ್ತಾನ್‌ಪುರಕ್ಕೆ ಹಿಂತಿರುಗಿದ್ದಕ್ಕೆ ತುಂಬಾ ಸಂತೋಷವಾಗಿದೆ. ಏಕೆಂದರೆ ಈ ಸ್ಥಳವು ಒಮ್ಮೆ ಗೆದ್ದವರು ಮತ್ತೆ ಅಧಿಕಾರಕ್ಕೆ ಬರದ ಇತಿಹಾಸವನ್ನು ಹೊಂದಿದೆ ಎಂದರು.

ಮೊದಲ ಬಾರಿಗೆ ಸುಲ್ತಾನ್‌ಪುರಕ್ಕೆ ಭೇಟಿ

ಲೋಕಸಭಾ ಟಿಕೆಟ್ ಘೋಷಣೆಯ ಬಳಿಕ ಮೊದಲ ಬಾರಿಗೆ ಪಿಲಿಭಿತ್ ಅಥವಾ ಸುಲ್ತಾನ್‌ಪುರಕ್ಕೆ ಆಗಮಿಸಿದ ಅವರು, ಜಿಲ್ಲೆಯಲ್ಲಿ 10 ದಿನಗಳ ಉಳಿದು ಇಡೀ ಲೋಕಸಭಾ ಕ್ಷೇತ್ರದ 101 ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.

ಕ್ಷೇತ್ರಕ್ಕೆ ಆಗಮಿಸಿದ ಅವರಿಗೆ ಕಟ್ಕಾ ಗುಪ್ತರಗಂಜ್, ತತಿಯಾನಗರ, ತೆಧುಯಿ, ಗೋಲಾಘಾಟ್, ಶಹಗಂಜ್ ಚೌಕ್, ದರಿಯಾಪುರ ತಿರಾಹಾ ಮತ್ತು ಪಯಾಗಿಪುರ ಚೌಕ್‌ದಂತಹ ವಿವಿಧ ಸ್ಥಳಗಳಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಆತ್ಮೀಯ ಸ್ವಾಗತವನ್ನು ನೀಡಿದರು.

ಸುಲ್ತಾನ್‌ಪುರದಲ್ಲಿ ಅವರು ಬಿಜೆಪಿಯ ಮೂಲಪುರುಷರಾದ ಶ್ಯಾಮ ಪ್ರಸಾದ್ ಮುಖರ್ಜಿ ಮತ್ತು ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಪ್ರತಿಮೆಗಳಿಗೆ ಗೌರವ ಸಲ್ಲಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಆರ್.ಎ. ವರ್ಮಾ, ಬಿಜೆಪಿ ರಾಜ್ಯ ಸಚಿವೆ ಮೀನಾ ಚೌಬೆ, ಲೋಕಸಭೆ ಉಸ್ತುವಾರಿ ದುರ್ಗೇಶ್ ತ್ರಿಪಾಠಿ, ಲೋಕಸಭೆಯ ಸಂಚಾಲಕ ಜಗಜಿತ್ ಸಿಂಗ್ ಚಾಂಗು, ಶಾಸಕ ರಾಜ್ ಪ್ರಸಾದ್ ಉಪಾಧ್ಯಾಯ, ಶಾಸಕ ರಾಜೇಶ್ ಗೌತಮ್, ವಕ್ತಾರ ವಿಜಯ ರಘುವಂಶಿ ಉಪಸ್ಥಿತರಿದ್ದರು.

ಇದನ್ನು ಓದಿ: Lok Sabha Election 2024: ಇಂದು ರಾಜ್ಯದಲ್ಲಿ ಅಮಿತ್‌ ಶಾ ಬಿರುಗಾಳಿ ಪ್ರಚಾರ; ಸುಮಲತಾ ಮನ ಒಲಿಸ್ತಾರ?

ವರುಣ್ ಗಾಂಧಿ ಪತ್ರ

ಮೇನಕಾ ಗಾಂಧಿ ಅವರಿಗೆ ಟಿಕೆಟ್ ಘೋಷಣೆಯಾಗುವ ಮೊದಲು ವರುಣ್ ಗಾಂಧಿ ತಮ್ಮ ಕ್ಷೇತ್ರದ ಜನತೆಗೆ ಮನದಾಳದ ಪತ್ರ ಬರೆದಿದ್ದು, ಉತ್ತರ ಪ್ರದೇಶದ ಪಿಲಿಭಿತ್ ಜೊತೆಗಿನ ಸಂಬಂಧ ತನ್ನ ಕೊನೆಯ ಉಸಿರು ಇರುವವರೆಗೂ ಕೊನೆಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ವರುಣ್ ಗಾಂಧಿ ಅವರು ಈ ಪ್ರದೇಶಕ್ಕೆ ಮೊದಲ ಬಾರಿಗೆ ಕಾಲಿಟ್ಟಾಗ ತಮ್ಮ ಬಾಲ್ಯದ ನೆನಪುಗಳನ್ನು ನೆನಪಿಸಿಕೊಂಡಿದ್ದರು. ಅದು ತನ್ನ ಕರ್ಮ ಭೂಮಿ ಮಾತ್ರವಲ್ಲ ತನ್ನ ಜೀವನದ ಪ್ರಯಾಣದ ಅವಿಭಾಜ್ಯ ಅಂಶ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದರು.

ಟಿಕೆಟ್ ಸಿಗದ ಇದ್ದರೂ ಸಮುದಾಯದ ಸೇವೆಯನ್ನು ಮುಂದುವರಿಸುವುದಾಗಿ ಪಣ ತೊಟ್ಟಿರುವ ವರುಣ್ ಗಾಂಧಿ, ಸಂಸದನಾಗಿ ಇಲ್ಲದಿದ್ದರೆ, ಮಗನಾಗಿ, ನನ್ನ ಜೀವನದುದ್ದಕ್ಕೂ ನಿಮ್ಮ ಸೇವೆ ಮಾಡಲು ನಾನು ಬದ್ಧನಾಗಿದ್ದೇನೆ ಮತ್ತು ಮೊದಲಿನಂತೆ ನನ್ನ ಮನೆಯ ಬಾಗಿಲು ಯಾವಾಗಲೂ ನಿಮಗಾಗಿ ತೆರೆದಿರುತ್ತದೆ ಎಂದು ಹೇಳಿದ್ದಾರೆ.

ತಾಯಿ- ಮಗನ ಕ್ಷೇತ್ರ

ಪಿಲಿಭಿತ್ ಕ್ಷೇತ್ರವು 1996ರಿಂದ ಮೇನಕಾ ಗಾಂಧಿ ಅಥವಾ ಅವರ ಮಗ ವರುಣ್ ಗಾಂಧಿಯವರ ಬಳಿ ಉಳಿದಿತ್ತು. ವರುಣ್ ಗಾಂಧಿ ಅವರು 2009 ಮತ್ತು 2019ರಲ್ಲಿ ಇಲ್ಲಿಂದಲೇ ಬಿಜೆಪಿ ಅಭ್ಯರ್ಥಿಯಾಗಿ ಗೆದ್ದಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Prashant Kishor: ಈ ಬಾರಿ ಮೋದಿಗೆ ಹಿನ್ನಡೆ ಆಗುತ್ತಾ? ಪ್ರಶಾಂತ್ ಕಿಶೋರ್ ಲೇಟೆಸ್ಟ್ ಲೆಕ್ಕಾಚಾರ ಹೀಗಿದೆ

Prashant Kishor: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಲೋಕಸಭಾ ಚುನಾವಣೆಯ ಫಲಿತಾಂಶವನ್ನು ಊಹಿಸಿದ್ದು, 2019ರ ಚುನಾವಣೆಗೆ ಹೋಲಿಸಿದರೆ ಈ ಬಾರಿ ಬಿಜೆಪಿ ಹೆಚ್ಚುವರಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ. ಬಿಜೆಪಿ ಬಹುಮತ ಪಡೆಯುವ ಸಾಧ್ಯತೆಯಿಲ್ಲ ಮತ್ತು ಮೊದಲ ಕೆಲವು ಹಂತಗಳ ಮತದಾನ ಆಡಳಿತ ಪಕ್ಷದ ಪರವಾಗಿಲ್ಲ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದು, ಕೆಲವು ವರದಿಗಳು ಇದನ್ನೇ ಊಹಿಸಿರುವ ಮಧ್ಯೆ ಪ್ರಶಾಂತ್‌ ಕಿಶೋರ್‌ ಈ ರೀತಿ ಹೇಳಿಕೆ ನೀಡಿರುವುದು ಕಮಲ ಪಾಳಯಕ್ಕೆ ಕೊಂಚ ಮಟ್ಟಿನ ಸಮಾಧಾನ ತಂದಿತ್ತಿದೆ.

VISTARANEWS.COM


on

Prashant Kishor
Koo

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election)ಯ ಮೊದಲ 5 ಹಂತಗಳ ಮತದಾನ ಮುಗಿದಿದೆ. ಇನ್ನು ಎರಡು ಹಂತಗಳ ಮತದಾನ ಬಾಕಿ ಇದ್ದು, ಸೋಲು-ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ. ಈ ಮಧ್ಯೆ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ (Prashant Kishor) ಫಲಿತಾಂಶವನ್ನು ಊಹಿಸಿದ್ದು, 2019ರ ಚುನಾವಣೆಗೆ ಹೋಲಿಸಿದರೆ ಈ ಬಾರಿ ಬಿಜೆಪಿ ಹೆಚ್ಚುವರಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಬಿಜೆಪಿ ಸ್ಪಷ್ಟ ಬಹುಮತ ಹೊಂದಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼʼಈ ಚುನಾವಣೆಯಲ್ಲಿ ಬಿಜೆಪಿ ಅತ್ಯುತ್ತಮ ಪ್ರದರ್ಶನ ತೋರಲಿದೆ. ಜತೆಗೆ ಸೀಟುಗಳ ಸಂಖ್ಯೆಯನ್ನೂ ವೃದ್ಧಿಸಿಕೊಳ್ಳಲಿದೆ. ಅದರಲ್ಲಿಯೂ ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ ಬಿಜೆಪಿ ಇನ್ನಷ್ಟು ಶಕ್ತವಾಗಲಿದೆ. ಅಲ್ಲದೆ ಪೂರ್ವ ಮತ್ತು ದಕ್ಷಿಣ ಭಾಗಗಳಲ್ಲಿಯೂ ಸೀಟು ಹೆಚ್ಚಳವಾಗುವ ನಿರೀಕ್ಷೆ ಇದೆʼʼ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ಬಹುಮತ ಪಡೆಯುವ ಸಾಧ್ಯತೆಯಿಲ್ಲ ಮತ್ತು ಮೊದಲ ಕೆಲವು ಹಂತಗಳ ಮತದಾನ ಆಡಳಿತ ಪಕ್ಷದ ಪರವಾಗಿಲ್ಲ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದು, ಕೆಲವು ವರದಿಗಳು ಇದನ್ನೇ ಊಹಿಸಿರುವ ಮಧ್ಯೆ ಪ್ರಶಾಂತ್‌ ಕಿಶೋರ್‌ ಈ ರೀತಿ ಹೇಳಿಕೆ ನೀಡಿರುವುದು ಕಮಲ ಪಾಳಯಕ್ಕೆ ಕೊಂಚ ಮಟ್ಟಿನ ಸಮಾಧಾನ ತಂದಿತ್ತಿದೆ. ಆದಾಗ್ಯೂ ಅವರು ರಾಜ್ಯವಾರು ಫಲಿತಾಂಶಗಳನ್ನು ಊಹಿಸಲು ನಿರಾಕರಿಸಿದ್ದಾರೆ.

ಮೋದಿ ಬ್ರ್ಯಾಂಡ್‌ ಕುಸಿತ

ಬಿಜೆಪಿಯ ಬಗ್ಗೆ ಈಗಲೂ ಜನರಲ್ಲಿ ಸಕಾರಾತ್ಮಕ ಭಾವನೆ ಇದೆ ಎಂದಿರುವ ಪ್ರಶಾಂತ್‌ ಕಿಶೋರ್‌, ಮೋದಿ ಬ್ರ್ಯಾಂಡ್‌ ಮಾತ್ರ ಕುಸಿಯುತ್ತಿದೆ. ಪ್ರಧಾನಿಯ ಪ್ರಭಾವ ಕ್ಷೀಣಿಸುತ್ತಿದೆ ಎಂದು ಹೇಳಿದ್ದಾರೆ. ಇತ್ತ ವಿರೋಧ ಪಕ್ಷಗಳ ಕಾರ್ಯ ವೈಖರಿಯನ್ನೂ ಅವರು ಟೀಕಿಸಿದ್ದಾರೆ. ಬಿಜೆಪಿ ವಿರುದ್ಧ ಪ್ರಯೋಗಿಸಬಹುದಾದ ಅನೇಕ ಅಸ್ತ್ರಗಳನ್ನು, ಅವಕಾಶಗಳನ್ನು ʼಇಂಡಿಯಾʼ ಮೈತ್ರಿಕೂಟ ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ರಾಜ್ಯ ವಿಧಾನಸಭಾ ಚುನಾವಣೆಗಳ ಮೇಲೆ ಗಮನ ಕೇಂದ್ರೀಕರಿಸಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಮತ್ತು ಡಿಸೆಂಬರ್ ನಡುವಿನ ನಿರ್ಣಾಯಕ ತಿಂಗಳುಗಳು ವ್ಯರ್ಥವಾಗಿದೆ. ಇದು ʼಇಂಡಿಯಾʼ ಬಣದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಡಿಸೆಂಬರ್‌ನಲ್ಲಿ ಮೂರು ರಾಜ್ಯಗಳಲ್ಲಿನ ಬಿಜೆಪಿಯ ಗೆಲುವು ಮತ್ತು ಜನವರಿಯಲ್ಲಿ ನಡೆದ ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ಕಮಲ ಪಡೆಯ ಗೆಲುವಿಗೆ ಇನ್ನಷ್ಟು ಶಕ್ತಿ ನೀಡಲಿದೆ ಎಂದಿದ್ದಾರೆ.

ಇದನ್ನೂ ಓದಿ: Lok Sabha Election 2024: ಪ್ರತಿಪಕ್ಷಗಳಿಗೆ ರೆಡ್‌ ಅಲರ್ಟ್‌ ನೀಡಿದ ಪ್ರಶಾಂತ್‌ ಕಿಶೋರ್‌; ಏನವರ ಚುನಾವಣಾ ಲೆಕ್ಕಾಚಾರ?

ರಾಹುಲ್‌ ಗಾಂಧಿಗೆ ಸಲಹೆ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರಿಗೆ ಸಲಹೆ ನೀಡಿದ ಪ್ರಶಾಂತ್‌ ಕಿಶೋರ್, ಚುನಾವಣಾ ಫಲಿತಾಂಶಗಳು ಕಾಂಗ್ರೆಸ್ ಪರವಾಗಿಲ್ಲದಿದ್ದರೆ ಐದು ವರ್ಷಗಳ ವಿರಾಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಮೂರನೇ ಅವಧಿಯಲ್ಲಿ ಬಿಜೆಪಿಗೆ ಅನೇಕ ಕಠಿಣ ಸವಾಲು ಎದುರಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಭೂ ಮಸೂದೆ ವಿರೋಧಿ ಪ್ರತಿಭಟನೆ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ವಿರೋಧಿಸಿ ನಡೆದ ಪ್ರತಿಭಟನೆ ಮತ್ತು ರೈತರ ಹೋರಾಟವನ್ನು ಉಲ್ಲೇಖಿಸಿ ಅವರು ಸವಾಲುಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಈ ಎಲ್ಲ ಸವಾಲುಗಳಿಂದ ಮೋದಿ ದುರ್ಬಲ ಪ್ರಧಾನಿ ಎನಿಸಿಕೊಳ್ಳಲಿದ್ದಾರೆ ಎಂದೂ ಅಭಿಪ್ರಾಯಪಟ್ಟಿದ್ದಾರೆ.

Continue Reading

ದೇಶ

Kangana Ranaut: ಕಂಗನಾ ರಣಾವತ್‌ ಮೇಲೆ ಕಲ್ಲು ತೂರಾಟ; ಚು.ಆಯೋಗಕ್ಕೆ ದೂರು

Kangana Ranaut: ಮಂಡಿ ಲೋಕಸಭಾ ಕ್ಷೇತ್ರದ ಲಾಹೌಲ್‌ ಮತ್ತು ಸ್ಪಿತಿ ಪ್ರದೇಶಗಳಲ್ಲಿ ಪ್ರಚಾರ ಕಾರ್ಯಕ್ರಮ ಕೈಗೊಂಡಿದ್ದ ಕಂಗನಾ ಅಲ್ಲಿ ತಲುಪುತ್ತಿದ್ದಂತೆ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಕೈಯಲ್ಲಿ ಕಪ್ಪು ಬಾವುಟ ಹಿಡಿದು ಕಂಗನಾ ವಿರುದ್ಧ ಗೋ ಬ್ಯಾಕ್‌ ಘೋಷಣೆಗಳನ್ನು ಕೂಗಿದ್ದರು. ಇದಾ ಬಳಿಕ ಕಾಂಗ್ರೆಸ್‌ ಕಾರ್ಯಕರ್ತರು ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.

VISTARANEWS.COM


on

Kangana Ranaut
Koo

ಹಿಮಾಚಲಪ್ರದೇಶ:ಮಂಡಿ(Mandi) ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕಂಗನಾ ರಣಾವತ್‌(Kangana Ranaut) ಹಾಗೂ ಬಿಜೆಪಿ ಕಾರ್ಯಕರ್ತರ(BJP Workers) ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ಕಲ್ಲು ತೂರಾಟ(Stone Pelting) ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ಅಧಿಕೃತ ದೂರು ನೀಡಿದೆ. ನಿನ್ನೆ ಸಂಜೆ ಲಾಹೌಲ್‌ ಮತ್ತು ಸ್ಪಿತಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಪಕ್ಷದ ಇಬ್ಬರು ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಬಿಜೆಪಿ ದೂರಿದೆ.

ನಿನ್ನೆ ಮಂಡಿ ಲೋಕಸಭಾ ಕ್ಷೇತ್ರದ ಲಾಹೌಲ್‌ ಮತ್ತು ಸ್ಪಿತಿ ಪ್ರದೇಶಗಳಲ್ಲಿ ಪ್ರಚಾರ ಕಾರ್ಯಕ್ರಮ ಕೈಗೊಂಡಿದ್ದ ಕಂಗನಾ ಅಲ್ಲಿ ತಲುಪುತ್ತಿದ್ದಂತೆ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಕೈಯಲ್ಲಿ ಕಪ್ಪು ಬಾವುಟ ಹಿಡಿದು ಕಂಗನಾ ವಿರುದ್ಧ ಗೋ ಬ್ಯಾಕ್‌ ಘೋಷಣೆಗಳನ್ನು ಕೂಗಿದ್ದರು. ಇದಾ ಬಳಿಕ ಕಾಂಗ್ರೆಸ್‌ ಕಾರ್ಯಕರ್ತರು ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.

ಘಟನೆ ಬಗ್ಗೆ ಸ್ವತಃ ಕಂಗನಾ ಪ್ರತಿಕ್ರಿಯಿಸಿದ್ದು, ನಮ್ಮ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಕಾಂಗ್ರೆಸ್‌ ಹಿಂಸಾಚಾರ ನಡೆಸುವುದಕ್ಕಾಗಿಯೇ ಪ್ರತಿಭಟನೆ ಹಮ್ಮಿಕೊಂಡಿತ್ತು. ಇಲ್ಲಿನ ಸ್ಥಾನ ಕೈ ತಪ್ಪುವುದು ಅವರಿಗೆ ಖಚಿತವಾಗಿದೆ. ಹೀಗಾಗಿ ಅವರು ಬೀದಿಗಿಳಿದು ಪ್ರೊಟೆಸ್ಟ್‌ ಮಾಡುತ್ತಿದ್ದಾರೆ. ಹಿಂಸಾಚಾರಕ್ಕೆ ಮುಂದಾಗಿದ್ದಾರೆ. ಇನ್ನು ನಮ್ಮ ಪಕ್ಷದ ಇಬ್ಬರು ಕಾರ್ಯಕರ್ತರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಂಗ್ರೆಸ್‌ನ ಈ ವರ್ತನೆ ಅತೀವ ಬೇಸರ ತಂದಿದೆ ಎಂದು ಹೇಳಿದ್ದಾರೆ. ಇನ್ನು ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಇನ್ನು ಘಟನೆ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಬಿಜೆಪಿ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಇನ್ನು ಬಿಜೆಪಿ ಆರೋಪದ ಬಗ್ಗೆ ಕಾಂಗ್ರೆಸ್‌ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್ ರದ್ದು ಮಾಡಲು ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

Continue Reading

ಕರ್ನಾಟಕ

Prajwal Revanna Case: ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್ ರದ್ದು ಮಾಡಲು ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

Prajwal Revanna Case: ಪ್ರಜ್ವಲ್ ವಿರುದ್ಧದ ಪ್ರಕರಣಗಳ ಬಗ್ಗೆ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿರುವ ಎಸ್‌ಐಟಿ, ಈ ಕೂಡಲೇ ಸಂಸದನ ಪಾಸ್‌ ಪೋರ್ಟ್‌ ರದ್ದು ಮಾಡಬೇಕು ಎಂದು ಕೋರಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ವಿದೇಶದಲ್ಲಿ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ನಗರದ 42ನೇ ಎಸಿಎಂಎಂ ಕೋರ್ಟ್‌, ಇತ್ತೀಚೆಗೆ ಸಂಸದನ ವಿರುದ್ಧ ಬಂಧನ ವಾರಂಟ್‌ ಹೊರಡಿಸಿ, ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಲು ಅನುಮತಿ ನೀಡಿತ್ತು. ಹೀಗಾಗಿ‌ ಪ್ರಜ್ವಲ್ ಪಾಸ್‌ ಪೋರ್ಟ್ ರದ್ದು ಮಾಡುವಂತೆ ಕೋರಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಎಸ್‌ಐಟಿ ಪತ್ರ ಬರೆದಿದೆ.

ಈ ಕೂಡಲೇ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪಾಸ್ ಪೋರ್ಟ್ ರದ್ದು ಮಾಡಬೇಕು ಎಂದು ಮನವಿ ಮಾಡಿರುವ ಎಸ್‌ಐಟಿ, ಲುಕ್ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ಎಲ್ಲವನ್ನೂ ಪತ್ರದ ಜತೆ ಟ್ಯಾಗ್ ಮಾಡಿದೆ. ಜತೆಗೆ ಪ್ರಜ್ವಲ್ ವಿರುದ್ಧದ ಪ್ರಕರಣಗಳ ಬಗ್ಗೆ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿದ್ದು, ಸಂಸದ ಯಾವ ದೇಶದಲ್ಲಿ ಇದ್ದಾನೆ ಎಂಬ ಮಾಹಿತಿ ನೀಡುವಂತೆ ಮನವಿ ಮಾಡಿದೆ.

ಇದನ್ನೂ ಓದಿ | Legislative Council Election: ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಫಿಕ್ಸ್;‌ ಜೂನ್‌ 13ಕ್ಕೆ ಮತದಾನ

ಪ್ರಜ್ವಲ್‌ ತನಿಖೆ ಎದುರಿಸುವುದೇ ಸೂಕ್ತ: ನಿಖಿಲ್‌ ಕುಮಾರಸ್ವಾಮಿ

Nikhil Kumaraswamy

ಬೆಂಗಳೂರು: ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಅವರು ಎಸ್ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸಬೇಕು ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಅಭಿಪ್ರಾಯಪಟ್ಟಿದ್ದಾರೆ.

ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ, ಸಂತ್ರಸ್ತೆ ಹೆಣ್ಣು ಮಕ್ಕಳ ಮುಖವನ್ನು ಬ್ಲರ್ ಮಾಡಿಯೂ ತೋರಿಸಿಲ್ಲ. ರಾಜಕಾರಣಕ್ಕಾಗಿ ಈ ರೀತಿ ಮಾಡುವುದು ಎಷ್ಟು ಸರಿ? ಇಡೀ ರಾಜ್ಯದ ಜನಕ್ಕೆ ಈ ರೀತಿಯ ತೋರಿಸಿದ್ದು ಯಾರು? ಅವರ ಬಗ್ಗೆ ಯಾಕೆ ತನಿಖೆ ಆಗುತ್ತಿಲ್ಲ? ಇದರಲ್ಲಿ ಯಾರ ಪಾತ್ರ ಇದೆಯೋ , ರಾಜ್ಯ ಸರ್ಕಾರದ ಜವಾಬ್ದಾರಿ ಇದೆ. ಇದು ಇವತ್ತು ರಾಷ್ಟ್ರದ ಮಟ್ಟದಲ್ಲಿ ಸುದ್ದಿ ಆಗಿದೆ. ಇದಕ್ಕೆ ಉತ್ತರ ಸಿಗಬೇಕು. ತನಿಖೆ ಪಾರದರ್ಶಕವಾಗಿ ಆಗಬೇಕು ಅಲ್ವಾ‌? ಎಂದು ನಿಖಿಲ್‌ ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಇದನ್ನೂ ಓದಿ | MLC Election: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಎನ್. ರವಿಕುಮಾರ್

ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ ಹಿನ್ನೆಲೆಯಲ್ಲಿ ತಲೆ ಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಎಸ್ಐಟಿ ತನಿಖೆ ಎದುರಿಸುವುದು ಸೂಕ್ತ. ಘಟ‌ನೆ ಆದ ದಿನವೇ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ಉಪ್ಪು ತಿಂದವರು ನೀರು ಕುಡಿಯಬೇಕು ಅಂತ. ಎಸ್‌ಐಟಿ ತನಿಖೆ ಮಾಡುತ್ತಲಿದೆ. ಹೀಗಾಗಿ ಸಂಸದರು ಎಸ್ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸಬೇಕು. ಇದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ಪ್ರಜ್ವಲ್‌ ನನ್ನ ಜತೆಯಂತೂ ಸಂಪರ್ಕದಲ್ಲಿಲ್ಲ ಎಂದು ನಿಖಿಲ್‌ ಹೇಳಿದರು.

Continue Reading

ಪ್ರಮುಖ ಸುದ್ದಿ

Congress Guarantee: ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ ಸರ್ಕಾರ ಮಾಡಿದ ಖರ್ಚು ಎಷ್ಟು ಸಾವಿರ ಕೋಟಿ?

Congress Guarantee: ರಾಜ್ಯದಲ್ಲಿ ಪಂಚ ಗ್ಯಾರಂಟಿಗಳು ಜಾರಿಯಾದಾಗಿನಿಂದ ಈವರೆಗೆ ಬಳಕೆಯಾಗಿರುವ ಅನುದಾನದ ಮಾಹಿತಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

VISTARANEWS.COM


on

Congress Guarantee
Koo

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಮೇ 20ಕ್ಕೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ್ದು, ಸರ್ಕಾರದ ಸಾಧನೆಗಳ ಬಗ್ಗೆ ಕೈ ನಾಯಕರು ಸ್ಮರಿಸುತ್ತಿದ್ದಾರೆ. ವಿಧಾನಸಭೆ ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು (Congress Guarantee) ಜಾರಿ ಮಾಡಿರುವ ಕಾಂಗ್ರೆಸ್‌ ಸರ್ಕಾರ, ಪಂಚ ಗ್ಯಾರಂಟಿಗಳು ಜಾರಿಯಾದಾಗಿನಿಂದ ಈವರೆಗೆ ಬಳಕೆಯಾಗಿರುವ ಅನುದಾನದ ಮಾಹಿತಿ ಬಿಡುಗಡೆ ಮಾಡಿದೆ.

ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳಲ್ಲಿ 5 ಕೆಜಿ ಅಕ್ಕಿಯ ಜತೆಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ತಲಾ 170 ರೂ. ನೀಡುವ ʼಅನ್ನಭಾಗ್ಯ ಯೋಜನೆʼ, ಮನೆ ಯಜಮಾನಿಗೆ ಮಾಸಿಕ 2000 ರೂ. ಮಾಸಾಶನ ನೀಡುವ ʼಗೃಹ ಲಕ್ಷ್ಮಿ ಯೋಜನೆʼ, ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್‌ ಒದಗಿಸುವ ʼಗೃಹ ಜ್ಯೋತಿ ಯೋಜನೆʼ, ಮಹಿಳೆಯರಿಗೆ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣದ ʼಶಕ್ತಿ ಯೋಜನೆʼಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದೆ. ಇನ್ನು ಐದನೇ ಗ್ಯಾರಂಟಿಯಾದ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3000 ರೂ., ಡಿಪ್ಲೊಮಾ ಮಾಡಿದವರಿಗೆ 1500 ರೂ. ನೀಡುವ ಯುವ ನಿಧಿ ಯೋಜನೆ ಅನುಷ್ಠಾನದ ಹಂತದಲ್ಲಿದೆ.

ಇದನ್ನೂ ಓದಿ | Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇನ್ನೊಬ್ಬ ಎಸ್‌ಪಿಪಿ ನೇಮಕ; ಹೈಕೋರ್ಟ್‌ನಲ್ಲಿ ವಾದಕ್ಕೆ ಸಜ್ಜಾದ ಸರ್ಕಾರ

ಗ್ಯಾರಂಟಿಗಳಿಗೆ ಆಗಿರುವ ವೆಚ್ಚ

ಗ್ಯಾರಂಟಿ ಯೋಜನೆಗಳು ಜಾರಿಯಾದಾಗಿನಿಂದ ಮೇ 19ರವರೆಗೆ ಬಳಕೆಯಾಗಿರುವ ಅನುದಾನದಲ್ಲಿ ಗೃಹ ಲಕ್ಷ್ಮಿ ಯೋಜನೆಗೆ 23,098 ಕೋಟಿ ರೂ., ಗೃಹಜ್ಯೋತಿ ಯೋಜನೆಗೆ 10,207 ಕೋಟಿ ರೂ., ಶಕ್ತಿ ಯೋಜನೆಗೆ 4,054 ಕೋಟಿ ರೂ., ಅನ್ನ ಭಾಗ್ಯ ಯೋಜನೆಗೆ 7,364 ಕೋಟಿ ರೂ. ಹಾಗೂ ಯುವ ನಿಧಿ ಯೋಜನೆಗೆ 93 ಕೋಟಿ ರೂ. ವೆಚ್ಚವಾಗಿದೆ. ಶಕ್ತಿ ಯೋಜನೆಯಲ್ಲಿ 211.5 ಕೋಟಿ ಟ್ರಿಪ್‌ಗಳಲ್ಲಿ ಮಹಿಳೆಯರು ಸರ್ಕಾರಿ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸಿದ್ದಾರೆ.

ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು: ಸಿಎಂ

ಕಾಂಗ್ರೆಸ್‌ ಸರ್ಕಾರ 1 ವರ್ಷದ ಪೂರೈಸಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆ ಎಂದು ತಿಳಿಸಿದ್ದಾರೆ.

ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದಗಳಿಂದಾಗಿ ನಲುಗಿಹೋಗಿದ್ದ ರಾಜ್ಯದ ಆಡಳಿತವನ್ನು ಮತ್ತೆ ಸರಿದಾರಿಗೆ ತರುವ ದೊಡ್ಡ ಜವಾಬ್ದಾರಿಗೆ ಹೆಗಲು ಕೊಟ್ಟಾಗ ಅದರ ಭಾರದ ಅರಿವು ನಮಗಿತ್ತು. ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಲು ನಾವು ಹೋರಾಟವನ್ನೇ ಮಾಡಬೇಕಾಯಿತು. ನಮ್ಮ ಕೈಗಳ ಬಲಕುಂದಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಕೇಂದ್ರ ಸರ್ಕಾರದ ಜೊತೆಗೂಡಿ ರಾಜ್ಯ ಬಿಜೆಪಿ ನಡೆಸಿದೆ. ಇಂತಹ ಸವಾಲುಗಳ ನಡುವೆಯೂ ನಮ್ಮ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ನಮ್ಮ ಮಾತು ಉಳಿಸಿಕೊಂಡಿದ್ದೇವೆ. ನಮ್ಮ ಸಂಕಲ್ಪ ಕೇವಲ ಗ್ಯಾರಂಟಿ ಯೋಜನೆಗಳಲ್ಲ, ಅಭಿವೃದ್ದಿಯ ರಥವನ್ನು ಗ್ಯಾರಂಟಿಗಳ ಆಚೆಗೆ ಕೊಂಡೊಯ್ದು ರಾಜ್ಯವನ್ನು ಸುಖಿ ಮತ್ತು ಸ್ವಾವಲಂಬಿಯನ್ನಾಗಿ ಮಾಡುವುದು.

ಸಾಧನೆಯ ಬಲದಲ್ಲಿ ನಮ್ಮನ್ನು ಎದುರಿಸಲಾಗದ ನಮ್ಮ ವಿರೋಧಪಕ್ಷಗಳು ಜಾತಿ -ಧರ್ಮಗಳನ್ನು ರಾಜಕೀಯದ ಅಸ್ತ್ರಗಳನ್ನಾಗಿ ಬಳಸಿಕೊಂಡು ನಮ್ಮ ಮೇಲೆ ಎರಗುತ್ತಿದ್ದಾರೆ. ರಾಜ್ಯದ ಪ್ರಜ್ಞಾವಂತ ಜನತೆ ಈ ವಿಭಜನಕಾರಿ ಮತ್ತು ವಿನಾಶಕಾರಿ ಅಜೆಂಡಾಗೆ ಬಲಿಯಾಗದೆ ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಯೇ ಉಳಿಸಿಕೊಳ್ಳಲು ಸಹಕರಿಸಬೇಕೆಂದಷ್ಟೇ ನನ್ನ ಕೋರಿಕೆ ಎಂದು ಹೇಳಿದ್ದಾರೆ.ʼ

ಇದನ್ನೂ ಓದಿ | Reservation in Outsourcing: ಇನ್ನು ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ; ಸಿದ್ದರಾಮಯ್ಯ ಸರ್ಕಾರದ ಮಹತ್ವದ ಆದೇಶ

ಉಳಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ದಿಯ ಕಾಯಕವನ್ನು ನಮಗೆ ಬಿಟ್ಟು ಬಿಡಿ. ನುಡಿದಂತೆ ನಡೆದಿದ್ದೆವು, ನುಡಿದಂತೆ ನಡೆಯುತ್ತಿರುವೆವು, ಮುಂದೆಯೂ ನುಡಿದಂತೆಯೇ ನಡೆಯುವೆವು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | CM Siddaramaiah: ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಕಾರ ಕಾಂಗ್ರೆಸ್‌ಗೆ ಎಷ್ಟು ಸೀಟ್‌? ಸಂಪುಟ ಪುನಾರಚನೆ ಇಲ್ಲ!

ಅಭಿವೃದ್ಧಿ ಮತ್ತು ಜನರ ಕಲ್ಯಾಣವನ್ನೇ ಮೂಲಮಂತ್ರವಾಗಿಟ್ಟುಕೊಂಡಿರುವ ನಮ್ಮ ಸರ್ಕಾರವು ಒಂದು ವರ್ಷದ ಆಡಳಿತವನ್ನು ಯಶಸ್ವಿಯಾಗಿ ಪೂರೈಸಿದೆ. ಈ ಅವಧಿಯಲ್ಲಿ ಗ್ಯಾರಂಟಿ ಯೋಜನೆಗಳ ಜೊತೆಗೆ ನಾಡಿನ ಅಭಿವೃದ್ಧಿಯ ರಥವನ್ನು ಸಮಾನವಾಗಿ ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ನುಡಿದಂತೆ ನಡೆಯುತ್ತಿರುವ ನಮಗೆ ನಿಮ್ಮ ಬೆಂಬಲ – ಸಹಕಾರ ಮುಂದೆಯೂ ಇರಲಿ ಎಂದು ಆಶಿಸುತ್ತಾ, ಈ ಒಂದು ವರ್ಷದ ಅವಧಿಯಲ್ಲಿ ನಮ್ಮ ಕೆಲವು ಪ್ರಮುಖ ಸಾಧನೆಗಳನ್ನು ನಿಮ್ಮ ಗಮನಕ್ಕೆ ತರುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Continue Reading
Advertisement
gold rate today sruthi hassan
ಚಿನ್ನದ ದರ6 mins ago

Gold Rate Today: ಚಿನ್ನದ ಬೆಲೆಯಲ್ಲಿ ಇಂದು ಇಳಿಕೆ, ಗ್ರಾಹಕರಿಗೆ ತುಸು ನಿರಾಳ

India Head Coach
ಕ್ರೀಡೆ14 mins ago

India Head Coach: ಭಾರತ ತಂಡದ ಕೋಚ್​ ಆಗಲು ಫ್ಲೆಮಿಂಗ್​ಗೆ ಮನವೊಲಿಸುವಂತೆ ಧೋನಿಗೆ ಮನವಿ ಮಾಡಿದ ಬಿಸಿಸಿಐ!

Viral Video
ವೈರಲ್ ನ್ಯೂಸ್22 mins ago

Viral Video: ಪೆಟ್ರೋಲ್ ಬಂಕ್‌ನಲ್ಲಿ ಹೊತ್ತಿಕೊಂಡ ಬೆಂಕಿಯನ್ನು ಈತ ಏಕಾಂಗಿಯಾಗಿ ಹೇಗೆ ನಂದಿಸಿದ ನೋಡಿ!

Contaminated Water
ಮೈಸೂರು31 mins ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Viral video
ವೈರಲ್ ನ್ಯೂಸ್37 mins ago

Chudidar Gang: ಚಡ್ಡಿ ಗ್ಯಾಂಗ್ ಆಯ್ತು, ಈಗ ದರೋಡೆಕೋರರ ಚೂಡಿದಾರ್ ಗ್ಯಾಂಗ್ ಆ್ಯಕ್ಟಿವ್ ಆಗಿದೆ; ಹುಷಾರ್! ವಿಡಿಯೊ ನೋಡಿ

Actor Upendra Ajaneesh Visited Hangary To Record Music
ಸ್ಯಾಂಡಲ್ ವುಡ್59 mins ago

Actor Upendra: ಹಂಗೆರಿಯಲ್ಲಿ ಉಪೇಂದ್ರ, ಅಜನೀಶ್: ʻUIʼ ಸಿನಿಮಾದ ಬಿಗ್‌ ಅಪ್‌ಡೇಟ್‌!

RCB
ಕ್ರೀಡೆ1 hour ago

RCB: ಅಮೆರಿಕದ ಘಟಿಕೋತ್ಸವದಲ್ಲೂ ಆರ್​ಸಿಬಿಯದ್ದೇ ಹವಾ: ವಿಡಿಯೊ ವೈರಲ್​

Dog Attack in raichur
ರಾಯಚೂರು1 hour ago

Dog Attack: ಆಟವಾಡುತ್ತಿದ್ದವಳ ಕಿತ್ತು ತಿಂದ ಬೀದಿ ನಾಯಿ; ರಕ್ತಸ್ರಾವವಾಗಿ 4 ವರ್ಷದ ಬಾಲಕಿ ಸಾವು

jain monk samadhi sena chikkodi sallekhana
ಚಿಕ್ಕೋಡಿ1 hour ago

Sallekhana: ಸಲ್ಲೇಖನ ವ್ರತ ಸ್ವೀಕರಿಸಿ ಸಮಾಧಿಸೇನ ಮುನಿ ಜಿನೈಕ್ಯ

Viral Video
ವೈರಲ್ ನ್ಯೂಸ್1 hour ago

Viral Video: ಅಬ್ಬಾ…ಇವರೆಂಥಾ ರಾಕ್ಷಸರು! ಸೊಸೆ ಮೇಲೆ ಅತ್ತೆ, ನಾದಿನಿಯಿಂದ ಅಟ್ಯಾಕ್‌; ವಿಡಿಯೋ ವೈರಲ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ22 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌