Mekedatu project: ನಾನು ಜಲ ಸಂಪನ್ಮೂಲ ಖಾತೆ ಪಡೆದಿದ್ದು ಏಕೆ? ಸಕಾರಣ ಕೊಟ್ಟ ಡಿಸಿಎಂ ಡಿ.ಕೆ. ಶಿವಕುಮಾರ್ - Vistara News

ರಾಜಕೀಯ

Mekedatu project: ನಾನು ಜಲ ಸಂಪನ್ಮೂಲ ಖಾತೆ ಪಡೆದಿದ್ದು ಏಕೆ? ಸಕಾರಣ ಕೊಟ್ಟ ಡಿಸಿಎಂ ಡಿ.ಕೆ. ಶಿವಕುಮಾರ್

Mekedatu project: ಮೇಕೆದಾಟು ಯೋಜನೆ ಬಗ್ಗೆ ಬದ್ಧತೆ ಇರುವ ಕಾರಣಕ್ಕೆ ನಾವು ಪೂರ್ವಭಾವಿ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದೇವೆ. ಈ ಯೋಜನೆಯನ್ನು ಮಾಡಲೇಬೇಕು ಅಂತಲೇ ನಾನು ನೀರಾವರಿ ಇಲಾಖೆಯ ಜವಾಬ್ದಾರಿ ತೆಗೆದುಕೊಂಡಿದ್ದೇನೆ ಡಿ.ಕೆ. ಶಿವಕುಮಾರ್‌ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದಾರೆ.

VISTARANEWS.COM


on

Why DK Shivakumar get water resources portfolio here real reason
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಅವರು ನೀರಾವರಿ ಖಾತೆಯನ್ನು ಏಕೆ ತೆಗೆದುಕೊಂಡರು? ತಮಗೇ ಈ ಖಾತೆ ಬೇಕು ಎಂದು ಅವರು ಪಟ್ಟು ಹಿಡಿದಿದ್ದು ಏಕೆ? ಎಂದು ಹಲವು ಬಾರಿ ಚರ್ಚೆಯಾದ ವಿಚಾರವಾಗಿತ್ತು. ಆದರೆ, ಈಗ ಇದಕ್ಕೆ ಸ್ವತಃ ಡಿಕೆಶಿ ಕಾರಣವನ್ನು ಹೇಳಿದ್ದಾರೆ. ಅವರು ಜಲ ಸಂಪನ್ಮೂಲ ಖಾತೆಯನ್ನು (Water Resources) ಪಡೆದುಕೊಳ್ಳಲು “ಮೇಕೆದಾಟು” ಯೋಜನೆಯೇ (Mekedatu project) ಕಾರಣವಂತೆ.

ಕರ್ನಾಟಕದಲ್ಲಿ ನೀರಿನ ಸಮಸ್ಯೆ ತಲೆದೋರುತ್ತಿದೆ. ಅಲ್ಲದೆ, ಬೆಂಗಳೂರು ದಿನೇ ದಿನೆ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ನೀರಿಗೆ ಸಾಕಷ್ಟು ಸಮಸ್ಯೆಗಳು ಆಗುತ್ತಿವೆ. ಅಲ್ಲದೆ, ಪ್ರತಿ ವರ್ಷ ಮಳೆ ಸರಿಯಾಗಿ ಆಗದೇ ಇದ್ದಾಗ ತಮಿಳುನಾಡಿಗೆ ನೀರು ಬಿಡುವ ವಿಷಯದಲ್ಲಿ ಸಮಸ್ಯೆ ಆಗುತ್ತಲೇ ಇದೆ. ಇದಕ್ಕೆ ಪರಿಹಾರವನ್ನು ಕಂಡುಕೊಳ್ಳಬೇಕೆಂದರೆ ಮೇಕೆದಾಟು ಯೋಜನೆ ಜಾರಿಗೆ ಬರಬೇಕು ಎಂಬುದು ಕಾಂಗ್ರೆಸ್‌ನ ವಾದವಾಗಿದೆ. ಈ ಸಂಬಂಧ ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಆಗಿನ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಪಾದಯಾತ್ರೆಯನ್ನು ಸಹ ಕೈಗೊಳ್ಳಲಾಗಿತ್ತು. ಬಳಿಕ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದ್ದು, ಬಜೆಟ್‌ನಲ್ಲಿ ಸಹ ಮೇಕೆದಾಟು ಯೋಜನೆಯನ್ನು ಪ್ರಸ್ತಾಪ ಮಾಡಿದೆ.

ನೀರಾವರಿ ಖಾತೆ ಬಗ್ಗೆ ಡಿ.ಕೆ. ಶಿವಕುಮಾರ್‌ ಹೇಳಿದ್ದೇನು?

ನಮ್ಮ ಸರ್ಕಾರಕ್ಕೆ ಬದ್ಧತೆ ಇರುವ ಕಾರಣ ಮೇಕೆದಾಟು ಯೋಜನೆ ಜಾರಿಗೆ ಅರಣ್ಯ ಪ್ರದೇಶದಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ. ಅರಣ್ಯ ಪ್ರದೇಶಕ್ಕೆ ಪರ್ಯಾಯ ಜಾಗ ಗುರುತಿಸಲಾಗಿದೆ. ಬದ್ಧತೆ ಇರುವ ಕಾರಣಕ್ಕೆ ನಾವು ಪೂರ್ವಭಾವಿ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದೇವೆ. ಈ ಯೋಜನೆಯನ್ನು ಮಾಡಲೇಬೇಕು ಅಂತಲೇ ನಾನು ನೀರಾವರಿ ಇಲಾಖೆಯ ಜವಾಬ್ದಾರಿ ತೆಗೆದುಕೊಂಡಿದ್ದೇನೆ ಡಿ.ಕೆ. ಶಿವಕುಮಾರ್‌ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದಾರೆ.

ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆಗೆ ಮೇಕೆದಾಟು ಯೊಜನೆಯೊಂದೇ ಶಾಶ್ವತ ಪರಿಹಾರವಾಗಿದೆ. ಆದರೆ ಸದ್ಯದ ಮಟ್ಟಿಗೆ ನೀರಿನ ಅಭಾವ ನೀಗಿಸಲು ಹಾಲಿ ಇರುವ ಕೊಳವೆ ಬಾವಿಗಳನ್ನು ಮತ್ತೆ ಕೊರೆಸುವುದು ಮತ್ತು ಹೊಸ ಕೊಳವೆ ಬಾವಿಯನ್ನು ಕೊರೆಸಲು ತೀರ್ಮಾನಿಸಿದ್ದೇವೆ. ಕೈಗಾರಿಕೆ, ಕಟ್ಟಡ ನಿರ್ಮಾಣ ಸೇರಿದಂತೆ ಎಲ್ಲರಿಗೂ ನೀರು ಪೂರೈಸುತ್ತೇವೆ. ಇದಕ್ಕಾಗಿ ಆನೇಕಲ್ ಹಾಗೂ ಬೆಂಗಳೂರು ದಕ್ಷಿಣ ಭಾಗದ ಹಳ್ಳಿಗಳ ರೈತರ ಜತೆಗೂ ಒಪ್ಪಂದ ಮಾಡಿಕೊಂಡು ಅವರ ಕೊಳವೆ ಬಾವಿ ನೀರನ್ನು ಬಳಸಿಕೊಳ್ಳಲಾಗುವುದು ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಮೇ ಅಂತ್ಯದೊಳಗೆ ಕಾವೇರಿ 5ನೇ ಹಂತ ಪೂರ್ಣ

ನೀರಿನ ಪೂರೈಕೆಯಲ್ಲಿ ನಡೆಯುತ್ತಿದ್ದ ದಂಧೆಯನ್ನು ನಾವು ತಡೆದಿದ್ದೇವೆ. ಜನರಿಗೆ ಸೂಕ್ತ ದರದಲ್ಲಿ ನೀರು ಸಿಗುವಂತೆ ಮಾಡಿದ್ದೇವೆ. ಕೆಲವು ಕೊಳಗೇರಿ ಪ್ರದೇಶದಲ್ಲಿ ಉಚಿತವಾಗಿ ನೀರು ನೀಡುತ್ತಿದ್ದೇವೆ. ಉಳಿದಂತೆ ಅಪಾರ್ಟ್ಮೆಂಟ್‌ಗಳಿಗೆ ಪೂರೈಸುವ ನೀರಿಗೆ ದರ ನಿಗದಿ ಮಾಡಿದ್ದು, ಕೈಗಾರಿಕೆಗಳ ಬಳಕೆಗೆ ಪ್ರತ್ಯೇಕ ದರ ನಿಗದಿ ಮಾಡಲಾಗಿದೆ. ಈಗಾಗಲೇ 1500ಕ್ಕೂ ಹೆಚ್ಚು ಟ್ಯಾಂಕರ್ ಗಳನ್ನು ನೋಂದಣಿ ಮಾಡಲಾಗಿದ್ದು, ಬೇರೆಯವರಿಗೆ ನೋಂದಣಿ ಮಾಡಿಕೊಳ್ಳಲು ಕಾಲಾವಕಾಶ ನೀಡಿದ್ದೇವೆ. ಪೊಲೀಸ್, ಆರ್‌ಟಿಒ, ಪಾಲಿಕೆ ಅವರಿಗೆ ಸೂಚನೆ ನೀಡಿ ನೋಂದಾಯಿತ ಟ್ಯಾಂಕರ್‌ಗಳ ಮೇಲೆ ಸರ್ಕಾರದ ನಾಮಫಲಕ ಅಳವಡಿಸುವಂತೆ ಮಾಡುತ್ತೇವೆ. ಆ ಮೂಲಕ ಸರ್ಕಾರದ ನಿಯಂತ್ರಿತ ಕಾನೂನುಬಾಹಿರವಾಗಿ ಜನರಿಂದ ವಸೂಲಿ ಮಾಡುವುದನ್ನು ತಡೆಗಟ್ಟಲು ಮುಂದಾಗಿದ್ದೇವೆ. ಬೆಂಗಳೂರಿನ ಸುತ್ತಮುತ್ತಲು ಇರುವ ನೀರಾವರಿ ಕೊಳವೆ ಬಾವಿಯನ್ನು ನಾವು ಗುರುತಿಸಿದ್ದು, ಅಗತ್ಯ ಬಿದ್ದರೆ ಅವುಗಳನ್ನು ಬಳಸಿಕೊಳ್ಳುತ್ತೇವೆ. ಇನ್ನು ಬೆಂಗಳೂರಿನ ಹೊರವಲಯದ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆ ಮೇ ಅಂತ್ಯದೊಳಗೆ ಪೂರ್ಣಗೊಳಿಸುತ್ತೇವೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ತಮಿಳುನಾಡಿಗೆ ನೀರು ಬಿಟ್ಟಿಲ್ಲ

ತಮಿಳುನಾಡಿಗೆ ನೀರು ಬಿಡಲಾಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, “ತಮಿಳುನಾಡಿಗೆ ನೀರು ಬಿಟ್ಟಿರುವ ಆರೋಪ ಸುಳ್ಳು. ತಮಿಳುನಾಡಿಗೆ ಈ ಸಂದರ್ಭದಲ್ಲಿ ನೀರು ಬಿಡುವ ಪ್ರಶ್ನೆಯೇ ಇಲ್ಲ. ತಮಿಳುನಾಡಿಗೆ ನೀರು ಬಿಟ್ಟಿಲ್ಲ, ಬಿಡುವುದೂ ಇಲ್ಲ. ತಮಿಳುನಾಡಿಗೆ ಹೋಗುವ ಪ್ರತಿಯೊಂದು ನೀರಿನ ಲೆಕ್ಕ ದಾಖಲಾಗಿರುತ್ತದೆ. ನಾವು ಬಿಜೆಪಿಯವರಂತೆ ಮೂರ್ಖರಲ್ಲ. ನಾವು ನೀರಿನ ವಿಚಾರದಲ್ಲಿ ಜವಾಬ್ದಾರಿ ಹೊಂದಿದ್ದೇವೆ. ಕಾವೇರಿ ಭಾಗದ ರೈತರನ್ನು ನಾವು ಈ ಹಿಂದೆಯೂ ಕಾಪಾಡಿದಿದ್ದೇವೆ. ಈಗಲೂ ಕಾಪಾಡುತ್ತಿದ್ದೇವೆ. ತಮಿಳುನಾಡು ನೀರು ಕೇಳುತ್ತಿಲ್ಲದಿರುವಾಗ ನಾವು ಯಾಕೆ ಅವರಿಗೆ ನೀರನ್ನು ಬಿಡೋಣ? ಕುಡಿಯುವ ನೀರಿನ ಪೂರೈಕೆ ನಮ್ಮ ಸರ್ಕಾರದ ಮೊದಲ ಆದ್ಯತೆ. ಶಿವ ಡ್ಯಾಂನಲ್ಲಿ ನೀರಿನ ಮಟ್ಟ 2 ಅಡಿ ಕಡಿಮೆ ಇದ್ದ ಕಾರಣ ಬೆಂಗಳೂರಿಗೆ ಪೂರೈಸಲು ನೀರನ್ನು ಪಂಪ್ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಈ ಕೊರತೆಯನ್ನು ತುಂಬಲು ಬಿಡಬ್ಲ್ಯೂಎಸ್ಎಸ್‌ಬಿ ಮನವಿ ಮೇರೆಗೆ ಕೆಆರ್‌ಎಸ್‌ನಿಂದ ನೀರು ಹರಿಸಿದ್ದೇವೆಯೇ ಹೊರತು, ತಮಿಳುನಾಡಿಗೆ ನೀರು ಹರಿಸಿಲ್ಲ ಎಂದು ಡಿ.ಕೆ. ಶಿವಕುಮಾರ್‌ ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: Lok Sabha Election 2024: ಬೀದರ್‌, ಕೊಪ್ಪಳಕ್ಕೆ ಬಿಜೆಪಿಯಿಂದ ಅಚ್ಚರಿಯ ಅಭ್ಯರ್ಥಿ? ಬಳತೆ, ಮಲ್ಕಾಪುರೆಗೆ ಟಿಕೆಟ್?

ಸ್ನಾನಕ್ಕೂ ನೀರಿಲ್ಲ ಎನ್ನುವ ಬುದ್ಧಿವಂತರು!

ಕೆಲವು ಬುದ್ಧಿವಂತರು ಸ್ನಾನಕ್ಕೂ ನೀರಿಲ್ಲ ಎಂದು ಟ್ವೀಟ್ ಮಾಡುತ್ತಾರೆ. ಈ ಮಧ್ಯೆ ವಾರ್ಡ್, ವಲಯ ಮಟ್ಟದಲ್ಲಿ ಕಾಲ್ ಸೆಂಟರ್‌ಗಳನ್ನು ನಿರ್ಮಾಣ ಮಾಡಿದ್ದೇವೆ. ಬೆಂಗಳೂರಿನ ಇತಿಹಾಸದಲ್ಲೇ ಇಷ್ಟು ಪರಿಣಾಮಕಾರಿಯಾದ ವ್ಯವಸ್ಥೆಯನ್ನು ಯಾವ ಸರ್ಕಾರವೂ ಮಾಡಿರಲಿಲ್ಲ ಎಂದು ಡಿ.ಕೆ. ಶಿವಕುಮಾರ್‌ ಹೇಳಿಕೊಂಡರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Eid Celebration: ಯೋಗಿ ವಾರ್ನಿಂಗ್‌ ಎಫೆಕ್ಟ್‌; ಉ.ಪ್ರದೇಶದ ಯಾವ ರಸ್ತೆಯಲ್ಲೂ ಬಕ್ರೀದ್‌ ನಮಾಜ್‌ ನಡೆಯಲಿಲ್ಲ!

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಖಡಕ್‌ ಸೂಚನೆಯ ಅನಂತರ ಉತ್ತರ ಪ್ರದೇಶ ರಾಜ್ಯದಾದ್ಯಂತ ಸಂಚಾರಕ್ಕೆ ಅಡ್ಡಿಯಾಗದಂತೆ ಈದ್ ಆಚರಣೆ ಈ ಬಾರಿ ನಡೆದಿದೆ. ಮುಸ್ಲಿಂ ಧಾರ್ಮಿಕ ಮುಖಂಡರು ಮುಖ್ಯಮಂತ್ರಿಯ ಸೂಚನೆಯನ್ನು ಬೆಂಬಲಿಸಿದ್ದು, ವಿಶೇಷವಾಗಿ ಗೊತ್ತುಪಡಿಸಿದ ಈದ್ಗಾಗಳು ಮತ್ತು ಸಾಂಪ್ರದಾಯಿಕ ಸ್ಥಳಗಳಲ್ಲಿ ಮಾತ್ರ ಈದ್ ಪ್ರಾರ್ಥನೆಗಳನ್ನು ( Eid Celebration) ನಡೆಸಲಾಯಿತು.

VISTARANEWS.COM


on

By

Eid Celebration
Koo

ಲಖನೌ: ಬಕ್ರೀದ್‌ ವೇಳೆ ನಿಗದಿತ ಸ್ಥಳಗಳಲ್ಲೇ ನಮಾಜ್‌ ಮಾಡಬೇಕು. ಇದನ್ನು ಬಿಟ್ಟು ರಸ್ತೆಗಳಲ್ಲಿ ನಮಾಜ್‌ ಮಾಡಿದರೆ ಹುಷಾರ್‌ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ (Chief Minister) ಯೋಗಿ ಆದಿತ್ಯನಾಥ್ (Yogi Adityanath) ಎಚ್ಚರಿಕೆ ಕೊಟ್ಟಿದ್ದರು. ಯೋಗಿ ವಾರ್ನಿಂಗ್‌ ಫಲ ಕೊಟ್ಟಿದೆ. ಸೋಮವಾರ ಈದ್-ಉಲ್-ಅಝಾ ಸಂದರ್ಭದಲ್ಲಿ ರಾಜ್ಯದಾದ್ಯಂತ ಸಂಚಾರಕ್ಕೆ ಅಡ್ಡಿಯಾಗದಂತೆ ಗೊತ್ತುಪಡಿಸಿದ ಪ್ರದೇಶಗಳಲ್ಲಿ ಮಾತ್ರ ಈದ್ ಪ್ರಾರ್ಥನೆ (Eid Celebration) ನಡೆಸಲಾಗಿದೆ.

ಮುಸ್ಲಿಂ ಧಾರ್ಮಿಕ ಮುಖಂಡರು ಮುಖ್ಯಮಂತ್ರಿಯ ಸೂಚನೆಯನ್ನು ಬೆಂಬಲಿಸಿದ್ದಾರೆ. ಈದ್ ಪ್ರಾರ್ಥನೆಗಳನ್ನು ವಿಶೇಷವಾಗಿ ಗೊತ್ತುಪಡಿಸಿದ ಈದ್ಗಾಗಳು ಮತ್ತು ಇತರ ಸಾಂಪ್ರದಾಯಿಕ ಸ್ಥಳಗಳಲ್ಲಿ ಮಾತ್ರ ನಡೆಸಲಾಯಿತು. ಮಸೀದಿ ಮತ್ತು ಈದ್ಗಾಗಳು ಸೀಮಿತ ಸ್ಥಳವನ್ನು ಹೊಂದಿರುವ ಪ್ರದೇಶಗಳಲ್ಲಿ ಪ್ರಾರ್ಥನೆಗಳನ್ನು ವಿವಿಧ ಪಾಳಿಗಳಲ್ಲಿ ನಡೆಸಲಾಯಿತು.

ಸೂಕ್ಷ್ಮ ಪ್ರದೇಶಗಳಲ್ಲಿ ಡ್ರೋನ್ ಕಣ್ಗಾವಲು ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತಾ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಹೆಚ್ಚುವರಿಯಾಗಿ, ಸಾರ್ವಜನಿಕರಿಗೆ ಅವರ ಸುರಕ್ಷತೆಯ ಬಗ್ಗೆ ಭರವಸೆ ನೀಡಲು ಭಾರೀ ಪೊಲೀಸ್ ಪಡೆ ಹಿಂದಿನ ದಿನ ಧ್ವಜ ಮೆರವಣಿಗೆಯನ್ನು ನಡೆಸಿತು. ಈ ಹಿಂದೆ ಕೂಡ ಈದ್-ಉಲ್-ಫಿತರ್ ಸಮಯದಲ್ಲಿ ರಸ್ತೆಗಳಲ್ಲಿ ಅಲ್ಲ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿ ಎಂದು ಮುಖ್ಯಮಂತ್ರಿ ಸೂಚನೆ ನೀಡಿದ್ದರು.

ಈದ್ ಸಿದ್ಧತೆ ಕುರಿತು ಸಿಎಂ ಯೋಗಿ ಎಲ್ಲಾ ಜಿಲ್ಲೆಗಳ ಅಧಿಕಾರಿಗಳು ಮತ್ತು ರಾಜ್ಯ ಮಟ್ಟದ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸಾರ್ವಜನಿಕರಿಗೆ ಸಕಾರಾತ್ಮಕ ಸಂದೇಶವನ್ನು ರವಾನಿಸುವುದನ್ನು ಖಚಿತಪಡಿಸಿಕೊಳ್ಳಲು ಧಾರ್ಮಿಕ ಮುಖಂಡರು ಮತ್ತು ಇತರ ಪ್ರಮುಖ ಸಮುದಾಯದ ಸದಸ್ಯರೊಂದಿಗೆ ಸಂವಾದವನ್ನು ನಿರ್ವಹಿಸುವ ಮಹತ್ವವನ್ನು ಅವರು ಒತ್ತಿ ಹೇಳಿದ್ದರು. ಪೊಲೀಸ್ ಠಾಣೆ, ವೃತ್ತ, ಜಿಲ್ಲೆ, ವ್ಯಾಪ್ತಿ, ವಲಯ, ವಿಭಾಗ ಮಟ್ಟದ ಹಿರಿಯ ಅಧಿಕಾರಿಗಳು ಶಾಂತಿ ಸಮಿತಿ ಸಭೆ ನಡೆಸಿ ಮಾಧ್ಯಮದವರನ್ನು ತೊಡಗಿಸಿಕೊಂಡು ಶಾಂತಿ ಸೌಹಾರ್ದತೆ ಕಾಪಾಡುವಂತೆ ಸಲಹೆ ನೀಡಿದ್ದರು.

ಹೆಚ್ಚುವರಿಯಾಗಿ ಗೊತ್ತುಪಡಿಸಿದ ಪ್ರದೇಶಗಳನ್ನು ಮುಂಚಿತವಾಗಿ ಗುರುತಿಸಬೇಕೆಂದು ಅವರು ನಿರ್ದೇಶನ ನೀಡಿದ್ದರು. ನಿಷೇಧಿತ ಪ್ರಾಣಿಗಳ ಬಲಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದ್ದರು. ಬಲಿದಾನದ ಅನಂತರ ತ್ಯಾಜ್ಯ ವಿಲೇವಾರಿಗೆ ವ್ಯವಸ್ಥಿತ ಯೋಜನೆ ಪ್ರತಿ ಜಿಲ್ಲೆಯಲ್ಲೂ ಜಾರಿಯಾಗಬೇಕು ಎಂದು ಹೇಳಿದ್ದರು.

30 ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ನಮಾಜ್

ಅಂದಾಜಿನ ಪ್ರಕಾರ ಈ ವರ್ಷ, ರಾಜ್ಯದಾದ್ಯಂತ 30,000ಕ್ಕೂ ಹೆಚ್ಚು ಸ್ಥಳಗಳಲ್ಲಿ ನಮಾಜ್ ಮಾಡಲಾಯಿತು. ಸುಮಾರು 3,000 ಗೊತ್ತುಪಡಿಸಿದ ಸ್ಥಳಗಳಲ್ಲಿ ಬಲವಾದ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ.

ಇದನ್ನೂ ಓದಿ: NEET UG 2024: ನೀಟ್ ಯುಜಿ ವಿವಾದ; ಶೇ. 0.001ರಷ್ಟು ನಿರ್ಲಕ್ಷ್ಯವೂ ಸಹಿಸಲು ಸಾಧ್ಯವಿಲ್ಲ ಎಂದು ಚಾಟಿ ಬೀಸಿದ ಸುಪ್ರೀಂ ಕೋರ್ಟ್‌

ಈ ಹಿಂದೆ ರಾಜ್ಯದ ಹಲವು ನಗರಗಳಲ್ಲಿ ಲಕ್ಷಾಂತರ ಜನರು ರಸ್ತೆ ಮತ್ತಿತರ ಕಡೆ ನಮಾಜ್ ಮಾಡಿ ಸಂಚಾರಕ್ಕೆ ತೊಂದರೆಯಾಗುತ್ತಿತ್ತು. ಆದರೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕರೆಯಿಂದಾಗಿ ದೇಶದಾದ್ಯಂತ ಹೊಸ ಸಂದೇಶ ರವಾನೆಯಾಗುತ್ತಿದ್ದು, ರಾಜ್ಯದ ಪ್ರತಿಯೊಂದು ಜಿಲ್ಲೆಯ ಮಸೀದಿಗಳು ಮತ್ತು ಈದ್ಗಾಗಳಲ್ಲಿ ಶಾಂತಿಯುತವಾಗಿ ನಮಾಜ್ ಮಾಡಲಾಗುತ್ತಿದೆ.

ಹೆಚ್ಚುವರಿಯಾಗಿ ಭಾನುವಾರ ಗಂಗಾ ದಸರಾ, ಸೋಮವಾರ ಈದ್-ಉಲ್-ಅಝಾ ಮತ್ತು ಮಂಗಳವಾರ ಜ್ಯೇಷ್ಠ ಮಾಸದ ಬಡಾ ಮಂಗಲ್ ರಾಜ್ಯ ಪೊಲೀಸ್ ಇಲಾಖೆಯನ್ನು ಹೆಚ್ಚು ಜಾಗೃತವಾಗಿ ಇರುವಂತೆ ಮಾಡಿದೆ. ಈ ಪೂರ್ವಭಾವಿ ವಿಧಾನವು ಸಂಭಾವ್ಯ ವಿವಾದಗಳ ಭಯವನ್ನು ಹೋಗಲಾಡಿಸಲು ಸಹಾಯ ಮಾಡಿತು. ಎಲ್ಲಾ 75 ಜಿಲ್ಲೆಗಳಿಂದ ವರದಿಯಾದ ಸಂತೋಷದಾಯಕ ಮತ್ತು ಉತ್ಸಾಹಭರಿತ ಆಚರಣೆಗಳಿಗೆ ಕಾರಣವಾಯಿತು.

Continue Reading

ಕರ್ನಾಟಕ

Kuwait Fire: ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟ ವಿಜಯಕುಮಾರ್ ಕುಟುಂಬಕ್ಕೆ 5 ಲಕ್ಷ ಪರಿಹಾರ ಕೊಟ್ಟ ಸಿಎಂ

Kuwait Fire: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸರಸಂಬ ಗ್ರಾಮದ ವಿಜಯಕುಮಾರ್, ಜೂನ್‌ 12ರಂದು ಕುವೈತ್‌ನಲ್ಲಿ ನಡೆದ ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದರು. ಅವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

VISTARANEWS.COM


on

Kuwait Fire
Koo

ಬೆಂಗಳೂರು: ಕುವೈತ್ ಅಗ್ನಿ ದುರಂತದಲ್ಲಿ (Kuwait Fire) ಮೃತಪಟ್ಟ ಕಲಬುರಗಿ ಮೂಲದ ವಿಜಯಕುಮಾರ್ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ದುಬೈನಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸರಸಂಬ ಗ್ರಾಮದ ವಿಜಯಕುಮಾರ್, ಜೂನ್‌ 12ರಂದು ಕುವೈತ್‌ನ ಮಂಗಾಫ್‌ನಲ್ಲಿ ನಡೆದ ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದರು. ಅನಿವಾಸಿ ಭಾರತೀಯ ಸಮಿತಿ ಮನವಿ ಮೇರೆಗೆ ಮೃತ ವ್ಯಕ್ತಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ.

ಈ ಬಗ್ಗೆ ಅನಿವಾಸಿ ಭಾರತೀಯ ಸಮಿತಿ ರಾಜ್ಯ ಘಟಕದ ಅಧ್ಯಕ್ಷೆ ಡಾ.ಆರತಿ ಕೃಷ್ಣ ಮಾಹಿತಿ ನೀಡಿದ್ದಾರೆ. ಪ್ರಪಂಚದಾದ್ಯಂತ ಹಲವು ರಾಷ್ಟ್ರಗಳಿಂದ ಅದರಲ್ಲೂ ಭಾರತೀಯರು ಕೆಲಸವನ್ನರಸಿ ಗಲ್ಫ್‌ ರಾಷ್ಟ್ರಗಳಿಗೆ ತಮ್ಮ ಜೀವನ ಗುಣಮಟ್ಟ ಸುಧಾರಣೆಗಾಗಿ ವಲಸೆ ಹೋಗುವುದು ಸರ್ವೆಸಾಮಾನ್ಯವಾಗಿದೆ. ಕುವೈತ್‌ನ ಮಂಗಾಫ್‌ನ ವಸತಿ ಸಮುಚ್ಚಯವೊಂದರಲ್ಲಿ ಜೂನ್12ರಂದು ಆಕಸ್ಮಿಕವಾಗಿ ನಡೆದ ಅಗ್ನಿ ದುರಂತದಲ್ಲಿ ಸುಮಾರು 45 ಭಾರತೀಯ ಪ್ರಜೆಗಳು ಸಾವನ್ನಪ್ಪಿದ್ದು, ಹಲವರು ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೊಂದು ದುರಾದೃಷ್ಟಕರ ಸಂಗತಿಯಾಗಿದ್ದು, ಘಟನೆಯ ಕುರಿತು ನಮ್ಮೆಲ್ಲರಿಗೂ ವಿಷಾಧವಿದೆ.

ಈ ಅಗ್ನಿ ದುರಂತದಲ್ಲಿ ಪ್ರಾಣ ಕಳಕೊಂಡವರ ಪೈಕಿ ಕೇರಳ ರಾಜ್ಯದವರೇ ಹೆಚ್ಚಿನವರಾಗಿದ್ದು, ನಮ್ಮ ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸರಸಂಬ ಗ್ರಾಮದ 40 ವರ್ಷ ವಯಸ್ಸಿನ ವಿಜಯಕುಮಾರ್ ಸಹ ಒಬ್ಬರಾಗಿದ್ದರು. ಇವರು ವಾಹನ ಚಾಲಕರಾಗಿ ಕುವೈತ್‌ನಲ್ಲಿ ಸುಮಾರು 8 ವರ್ಷಗಳಿಂದ ನೆಲೆಸಿತ್ತು. ಮೃತರ ಅವಲಂಬಿತ ಕುಟುಂಬದಲ್ಲಿ 8 ಸದಸ್ಯರಿದ್ದಾರೆ. ಅವರಿಗೆ ಮೃತ ದೇಹವನ್ನು ಕುವೈತ್‌ನಿಂದ ಭಾರತಕ್ಕೆ ತರುವ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಅನಿವಾಸಿ ಭಾರತೀಯ ಸಮಿತಿಯು, ಭಾರತ ಸರ್ಕಾರದೊಂದಿಗೆ ಹಾಗೂ ಕುವೈತ್‌ನ ರಾಯಭಾರಿ ಕಚೇರಿಯೊಂದಿಗೆ ನಿಕಟ ಸಂಪರ್ಕದಲ್ಲಿತ್ತು. ತದನಂತರ ಮೃತದೇಹವನ್ನು ಕೊಚ್ಚಿಯಿಂದ ಹೈದರಾಬಾದ್ ಮೂಲಕ ಮೃತರ ಸ್ವಗ್ರಾಮಕ್ಕೆ ತಲುಪಿಸುವಲ್ಲಿ ಸರ್ಕಾರದ ಅನೇಕ ಅಧಿಕಾರಿ ಸಿಬ್ಬಂದಿ ಸಹಕರಿಸಿದ್ದಾರೆ. ನಂತರ ಮೃತ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಈಗಾಗಲೇ ಕೇರಳ ರಾಜ್ಯ ಸರ್ಕಾರವು ಅಗ್ನಿ ದುರಂತದಲ್ಲಿ ಸತ್ತವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಆರ್ಥಿಕ ಪರಿಹಾರ ಘೋಷಿಸಿದೆ. ಮುಂದುವರಿದು ಅನಿವಾಸಿ ಭಾರತೀಯ ಸಮಿತಿ, ಕರ್ನಾಟಕ ವತಿಯಿಂದ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ರಾಜ್ಯ ಸರ್ಕಾರವು ಮೃತ ವಿಜಯಕುಮಾರ್ ಕುಟುಂಬಕ್ಕೆ ಗರಿಷ್ಠ ಮಟ್ಟದ ಆರ್ಥಿಕ ನೆರವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪಾವತಿಸುವಂತೆ ಕೋರಲಾಗಿತ್ತು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಅವಲಂಬಿತ ಕುಟುಂಬದವರಿಗೆ ಐದು ಲಕ್ಷಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೀಡಲು ಅನುಮೋದಿಸಿದ್ದಾರೆ ಎಂದು ಡಾ.ಆರತಿ ಕೃಷ್ಣ ತಿಳಿಸಿದ್ದಾರೆ.

ಇದನ್ನೂ ಓದಿ | Electric shock : ಮೀನು ಹಿಡಿಯಲು ಹೋದಾಗ ವಿದ್ಯುತ್‌ ಪ್ರವಹಿಸಿ ಬಾಲಕರಿಬ್ಬರು ಮೃತ್ಯು; ಕುಟುಂಬಸ್ಥರ ಆಕ್ರಂದನ

Continue Reading

ಕರ್ನಾಟಕ

Kempegowda Jayanti: ಬೆಂಗಳೂರಲ್ಲಿ ಜೂನ್ 27ಕ್ಕೆ ಕೆಂಪೇಗೌಡ ಜಯಂತಿ: ಡಿಸಿಎಂ ಡಿ.ಕೆ.ಶಿವಕುಮಾರ್‌

Kempegowda Jayanti: ಜೂನ್ 27ರಂದು ಬೆಂಗಳೂರಿನಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಆಗಲಿದೆ. ಜಯಂತಿ ನಡೆಯುವ ಸ್ಥಳದ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ನಿರ್ಧಾರ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

VISTARANEWS.COM


on

Kempegowda Jayanti
Koo

ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕೆಂಪೇಗೌಡ ಜಯಂತಿ (Kempegowda Jayanti) ಪೂರ್ವಭಾವಿ ಸಭೆ ಮಂಗಳವಾರ ನಡೆಯಿತು. ಜಾಗದ ಸಮಸ್ಯೆ ‌ಕಾರಣಕ್ಕೆ ಸ್ಟೇಡಿಯಂ ಅಥವಾ ಅರಮನೆ ಮೈದಾನದಲ್ಲಿ ಜಯಂತಿ ಮಾಡಲು ಸಲಹೆಗಳು ಬಂದಿದ್ದು, ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಕೆಂಪೇಗೌಡರ 515ನೇ ಜಯಂತಿ ಪ್ರಯುಕ್ತ ಸಭೆ ಮಾಡಲಾಗಿದೆ. ಸಂಘ, ಸಂಸ್ಥೆಗಳ‌ ಮುಖಂಡರನ್ನು ಆಹ್ವಾನಿಸಿ ಚರ್ಚೆ ಮಾಡಿದ್ದೇವೆ. ಪಕ್ಷ, ಜಾತಿ, ಧರ್ಮ ದೂರವಿಟ್ಟು ಸಭೆ ಮಾಡಿದ್ದೇವೆ. ಜೂನ್ 27ರಂದು ಬೆಂಗಳೂರಿನಲ್ಲಿ ಜಯಂತಿ ಆಚರಣೆ ಆಗಲಿದೆ ಎಂದು ತಿಳಿಸಿದರು.

ವಿಧಾನಸೌಧದಲ್ಲಿ ಮಾಡಿದರೆ ಜಾಗ ಚಿಕ್ಕದು, ಹಾಗಾಗಿ ಬೇಡ ಎಂದಿದ್ದಾರೆ. ಅರಮನೆ ಮೈದಾನ ಅಥವಾ ಸ್ಟೇಡಿಯಂನಲ್ಲಿ ಮಾಡಿ ಎಂದು ಸಲಹೆ ಬಂದಿದೆ. ಎಲ್ಲಿ ಮಾಡಬೇಕು ಎಂಬುವುದನ್ನು ತೀರ್ಮಾನ ಮಾಡಬೇಕು ಎಂದು ಹೇಳಿದರು.

ಇದನ್ನೂ ಓದಿ | Petrol Diesel Price Hike: ಕೇಂದ್ರ ಸರ್ಕಾರ ಹಣ ಕೊಟ್ಟಿದ್ರೆ ತೆರಿಗೆ ಹೆಚ್ಚಿಸುವ ಅಗತ್ಯವೇ ಇರ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ವರ್ಷದೊಳಗೆ ಕೆಂಪೇಗೌಡ ಪ್ರಾಧಿಕಾರದ ಕಟ್ಟಡ

ಜಯಂತಿಗೆ ಆರು ಕಡೆಯಿಂದ ಜ್ಯೋತಿಗಳು ಬರುತ್ತವೆ. ಎಂದಿನಂತೆ ಕಾರ್ಯಕ್ರಮ ನಡೆಯುತ್ತವೆ. ಸಭೆಯಲ್ಲಿ ಸಾಕಷ್ಟು ಸಲಹೆಗಳು ಬಂದಿವೆ. ಮುನಿಯಪ್ಪ ಅವರ ಒತ್ತಡದ ಮೇಲೆ ಕೆಂಪೇಗೌಡ ಜನ್ಮಸ್ಥಳ ಅಭಿವೃದ್ಧಿ ಆಗಬೇಕು ಎಂಬ ಒತ್ತಡ ಇದೆ. ಅದರ ಬಗ್ಗೆ ಸ್ಥಳ ಪರಿಶೀಲನೆ ಮಾಡಿ ತೀರ್ಮಾನ ಮಾಡುತ್ತೇವೆ. ಮುಂದಿನ ವರ್ಷದೊಳಗೆ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಕಟ್ಟಡಕ್ಕೆ ನಿರ್ಮಾಣ ಮಾಡಬೇಕು. ಸುಮನಹಳ್ಳಿಯಲ್ಲಿ 5 ಎಕರೆ ನೀಡಿದ್ದೇವೆ. ಸಾಧ್ಯವಾದರೆ ಕೆಂಪೇಗೌಡ ಜಯಂತಿ ದಿನ ಭೂಮಿ ಪೂಜೆ ಮಾಡುತ್ತೇವೆ ಎಂದು ತಿಳಿಸಿದರು.

ಪ್ರತೀ ವಿಧಾನಸಭೆ ಕ್ಷೇತ್ರದಲ್ಲಿ ವಿಚಾರ ಸಂಕಿರಣ, ಚರ್ಚಾ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇವೆ. ವಿಧಾನಸಭಾ ಕ್ಷೇತ್ರವಾರು 1 ಲಕ್ಷ ಹಣ ನೀಡಲು ತೀರ್ಮಾನ ಮಾಡುತ್ತೇವೆ. ಇನ್ನು ಕೆಂಪೇಗೌಡರ ಪ್ರಶಸ್ತಿ ನೀಡಲು ಬಿ.ಎಲ್. ಶಂಕರ್ ಅವರ ನೇತೃತ್ವದಲ್ಲಿ ಸಮಿತಿ ರಚನೆ ಆಗಿದೆ ಎಂದಯ ಹೇಳಿದರು.

ಅಕ್ಕಪಕ್ಕದ ರಾಜ್ಯಗಳಲ್ಲಿ‌ ಒಂದೇ ದರ ಇರಲಿ ಎಂದು ತೆರಿಗೆ ಹೆಚ್ಚಳ!

ಬೆಲೆ ಏರಿಕೆ ಖಂಡಿಸಿ ಬಿಜೆಪಿ, ಜೆಡಿಎಸ್‌ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿ, ಪ್ರತಿಭಟನೆ ಮಾಡುವುದು ಅವರ ಡ್ಯೂಟಿ, ಅದನ್ನು ಬೇಡ ಎನ್ನುವುದಿಲ್ಲ. ಅವರು (ಬಿಜೆಪಿ) ಎಷ್ಟು ಬಾರಿ ಏರಿಸಿದ್ದರು. ಪಕ್ಕದ ರಾಜ್ಯದಲ್ಲಿ ಎಷ್ಟಿದೆ ನೋಡಲಿ, ನಾನು ಸಹ ಅಂಕಿ ಅಂಶಗಳ ಸಮೇತ ಟ್ವೀಟ್ ಮಾಡುತ್ತೇನೆ. ಗ್ಯಾರೆಂಟಿಗಳಿಗೂ, ಬೆಲೆ ಏರಿಕೆಗೂ ಸಂಬಂಧ ಇಲ್ಲ. ಬಾರ್ಡರ್‌ನಲ್ಲಿ‌ ಪೆಟ್ರೋಲ್, ಡೀಸೆಲ್ ತುಂಬಿಸಿಕೊಂಡು ಹೋಗುತ್ತಿದ್ದಾರೆ. ಅಕ್ಕಪಕ್ಕದ ರಾಜ್ಯಗಳಲ್ಲಿ‌ ಒಂದೇ ದರ ಇರಲಿ ಅಂತ ಈ ರೀತಿ ಮಾಡಿದ್ದೇವೆ ಎಂದು ಸಮರ್ಥಿಸಿಕೊಂಡರು.

ಕೇಂದ್ರ ನಮ್ಮ‌ ಹಣ ನಮಗೆ ಕೊಡಲಿ. ಯಾವುದೇ ವಸ್ತು ಆಗಲಿ ಶೇ. 18-20 ಜಿಎಸ್‌ಟಿ ಇದೆ, ಅದಮ್ಮು ಕಡಿಮೆ ಮಾಡಲಿ. 14 ವರ್ಷದಿಂದ ಕುಡಿಯುವ ನೀರಿನ ಬೆಲೆ‌ ಏರಿಕೆ ಆಗಿಲ್ಲ, ಜಲಮಂಡಳಿಗೆ ವಿದ್ಯುತ್ ಬಿಲ್ ಕಟ್ಟೋಕೆ‌ ಆಗುತ್ತಿಲ್ಲ. ಇದರ ಜತೆಗೆ ಈಗ ವಿದ್ಯುತ್ ದರವೂ ಏರಿಕೆ ಆಗಿದೆ. 400 ರೂ. ಇದ್ದ ಸಿಲಿಂಡರ್ ಬೆಲೆ ಈಗ ಎಷ್ಟಾಗಿದೆ? ಅದರ ಬಗ್ಗೆಯೂ ನೀವು ಮಾತನಾಡಬೇಕು. ಕೃಷಿ ಯಂತ್ರೋಪಕರಣಗಳಿಗೂ ಜಿಎಸ್‌ಟಿ ಹಾಕಿದ್ದಾರೆ. ಪೆಟ್ರೋಲ್, ಡೀಸೆಲ್ ದರ ಮಹಾರಾಷ್ಟ್ರ, ಗುಜರಾತ್‌ನಲ್ಲಿ‌ 104 ರೂ. ಇದೆ, ಜನರಿಗೆ ಹೊರೆ ಆಗುತ್ತಿಲ್ಲ, ಅವರಿಗೆ ಅರ್ಥ ಆಗುತ್ತೆ ಎಂದು ತಿಳಿಸಿದರು.

ದೇವನಹಳ್ಳಿಯಲ್ಲಿ ಕೆಂಪೇಗೌಡರ ಪ್ರತಿಮೆಯನ್ನು ಮೋದಿಯಿಂದ ಉದ್ಘಾಟನೆ ಮಾಡಿಸಿ, ಕಾಮಗಾರಿ ಅರ್ಧಕ್ಕೆ ನಿಲ್ಲಿಸಿದ್ದಾರೆ. ಅಲ್ಲಿ ಅಭಿವೃದ್ಧಿ ಕಾರ್ಯಕ್ರಮ ಮಾಡಲಿದ್ದೇವೆ. ಈ ಬಗ್ಗೆ ಕೃಷ್ಣ ಬೈರೇಗೌಡ ಜತೆ ‌ಮಾತನಾಡಲಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ | Actor Darshan: ದರ್ಶನ್ ಮನೆ ಒತ್ತುವರಿ ತೆರವಿಗೆ ಸರ್ಕಾರ ಗ್ರೀನ್‌ ಸಿಗ್ನಲ್‌; ಬುಲ್ಡೋಜರ್‌ ರೆಡಿ ಮಾಡುತ್ತಿದೆ ಬಿಬಿಎಂಪಿ

ನೀಟ್ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿ, ಜೂನ್ 4ರಂದು ಫಲಿತಾಂಶ ಪ್ರಕಟವಾಯಿತು. ಇದರಲ್ಲಿ ನಡೆದಿರುವ ಅಕ್ರಮ ಮುಚ್ಚಿ ಹಾಕೋಕೆ ಪ್ರಯತ್ನ ಮಾಡಿದರು. ಈಗ ಕೇಂದ್ರ ಸಚಿವರೇ ಅಕ್ರಮ ನಡೆದಿದೆ ಅಂತ ಒಪ್ಪಿಕೊಂಡಿದ್ದಾರೆ. ರದ್ದು ಮಾಡಬೇಕು, ಮರು‌ ಪರೀಕ್ಷೆ ನಡೆಸಬೇಕು, ಮಕ್ಕಳಿಗೆ ನ್ಯಾಯ ಒದಗಿಸಿಕೊಡಬೇಕು. ತಮಿಳುನಾಡಿನ ಪ್ರಕಾರವೇ ನಾವೂ ಯೋಚನೆ ಮಾಡಬೇಕು. ಇದರ ಬಗ್ಗೆ ದೊಡ್ಡ ಮಟ್ಟದಲ್ಲಿ‌ ಚಿಂತನೆ ಮಾಡಬೇಕಿದೆ, ಮಾಡುತ್ತೇವೆ ಎಂದರು.

Continue Reading

ರಾಜಕೀಯ

Opposition Leader: 10 ವರ್ಷ ಬಳಿಕ ಲೋಕಸಭೆಯಲ್ಲಿ ವಿರೋಧಪಕ್ಷ ನಾಯಕ! ಇವರಿಗೆ ಸಿಗುವ ಸವಲತ್ತುಗಳೇನು?

Opposition Leader: ವಿರೋಧ ಪಕ್ಷದ ನಾಯಕನ ಸ್ಥಾನ ಖಾಲಿಯಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ದೇಶದಲ್ಲಿ ಎಂಟು ಬಾರಿ ಪ್ರತಿಪಕ್ಷ ಅತ್ಯಂತ ಕಡಿಮೆ ಸ್ಥಾನಗಳನ್ನು ಗಳಿಸಿದ್ದರಿಂದ ಅಧಿಕೃತವಾಗಿ ಪ್ರತಿಪಕ್ಷ ನಾಯಕನ ಆಯ್ಕೆ ಆಗಿರಲಿಲ್ಲ. ಕಳೆದ 10 ವರ್ಷಗಳಲ್ಲಿ ಕಾಂಗ್ರೆಸ್ ಸಂಸದರ ಸಂಖ್ಯೆ ಒಟ್ಟು ಲೋಕಸಭೆ ಸದಸ್ಯರ ಪೈಕಿ ಶೇ.10ಕ್ಕಿಂತ ಕಡಿಮೆ ಇತ್ತು. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಿಗೆ ಸಂಬಂಧಿಸಿದ ಕೆಲವು ಪ್ರಮುಖ ವಿಷಯಗಳು ಇಲ್ಲಿವೆ.

VISTARANEWS.COM


on

By

Leader of the Opposition
Koo

ಲೋಕಸಭೆ ಚುನಾವಣೆ (loksabha election) ಫಲಿತಾಂಶ ಹೊರಬಿದ್ದು ಹದಿನೈದು ದಿನ ಕಳೆದಿದೆ. ಈಗ ಭಾರಿ ಚರ್ಚೆಯಲ್ಲಿರುವ ವಿಷಯ ವಿರೋಧ ಪಕ್ಷದ ನಾಯಕನ (Opposition Leader) ಸ್ಥಾನದ್ದು. ಯಾಕೆಂದರೆ 10 ವರ್ಷಗಳ ಬಳಿಕ ದೇಶದ ಕೆಳಮನೆಯಲ್ಲಿ (loksabha) ಪ್ರತಿಪಕ್ಷದ ನಾಯಕ ತನ್ನ ಸ್ಥಾನವನ್ನು ಅಲಂಕರಿಸಲಿದ್ದಾರೆ. 2014ರಿಂದ ಈ ಹುದ್ದೆ ಖಾಲಿಯಿತ್ತು. ಆದರೆ ಈ ಬಾರಿ ಕಾಂಗ್ರೆಸ್ (congress) ಸಾಕಷ್ಟು ಸ್ಥಾನಗಳನ್ನು ಗಳಿಸಿರುವುದರಿಂದ ವಿರೋಧ ಪಕ್ಷದ ನಾಯಕನ ಆಯ್ಕೆ ಶೀಘ್ರದಲ್ಲಿ ನಡೆಯಲಿದೆ.

ಕಳೆದ 10 ವರ್ಷಗಳಲ್ಲಿ ಕಾಂಗ್ರೆಸ್ ಸಂಸದರ ಸಂಖ್ಯೆ ಒಟ್ಟು ಲೋಕಸಭೆ ಸದಸ್ಯರ ಪೈಕಿ ಶೇ.10ಕ್ಕಿಂತ ಕಡಿಮೆ ಇತ್ತು. ವಿಶೇಷವೆಂದರೆ, ವಿರೋಧ ಪಕ್ಷದ ನಾಯಕನ ಸ್ಥಾನ ಖಾಲಿಯಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ದೇಶದಲ್ಲಿ ಎಂಟು ಬಾರಿ ಇಂತಹ ಘಟನೆ ನಡೆದಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಿಗೆ ಸಂಬಂಧಿಸಿದ ಕೆಲವು ಪ್ರಮುಖ ವಿಷಯಗಳು ಇಲ್ಲಿದೆ.

ವಿರೋಧ ಪಕ್ಷದ ಮೊದಲ ನಾಯಕ

ಪಂಡಿತ್ ಜವಾಹರಲಾಲ್ ನೆಹರೂ ಪ್ರಧಾನಿ ಆಗಿದ್ದ ಮೊದಲ, ಎರಡನೇ ಮತ್ತು ಮೂರನೇ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕನ ಹುದ್ದೆ ಖಾಲಿ ಉಳಿದಿತ್ತು. ನಾಲ್ಕನೇ ಲೋಕಸಭೆಯಲ್ಲಿ ದೇಶದಲ್ಲಿ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿದ್ದು ರಾಮ್ ಸುಭಾಗ್ ಅವರು ಈ ಸ್ಥಾನ ಪಡೆದರು.

ಎಂಟು ಬಾರಿ ಸ್ಥಾನ ಖಾಲಿಯಾಗಿತ್ತು

ಐದು, ಏಳು ಮತ್ತು ಎಂಟನೇ ಲೋಕಸಭೆಯಲ್ಲಿ ಈ ಹುದ್ದೆ ಖಾಲಿ ಉಳಿದಿತ್ತು. 16ನೇ ಲೋಕಸಭೆ ಚುನಾವಣೆ 2014 ಮತ್ತು 17ನೇ ಲೋಕಸಭೆ 2019ರಲ್ಲಿ ವಿರೋಧ ಪಕ್ಷಗಳು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಲಿಲ್ಲ. 18ನೇ ಲೋಕಸಭೆಯಲ್ಲಿ ಪ್ರಪ್ರಥಮ ಬಾರಿಗೆ ನರೇಂದ್ರ ಮೋದಿ ವಿರುದ್ಧ ಅಧಿಕೃತವಾಗಿ ಪ್ರತಿಪಕ್ಷ ನಾಯಕನನ್ನು ನೇಮಿಸುವ ಅವಕಾಶ ವಿಪಕ್ಷಗಳಿಗೆ ಸಿಕ್ಕಿದೆ. ಲೋಕಸಭೆಯಲ್ಲಿ ಒಟ್ಟು ಎಂಟು ಬಾರಿ ವಿರೋಧ ಪಕ್ಷದ ನಾಯಕನ ಸ್ಥಾನ ಖಾಲಿ ಉಳಿದಿತ್ತು.

10 ವರ್ಷಗಳ ಅನಂತರ ಕಾಂಗ್ರೆಸ್‌ಗೆ ಅವಕಾಶ

2024ರ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) 240 ಸ್ಥಾನಗಳನ್ನು ಪಡೆದುಕೊಂಡಿದೆ. ಆದರೆ ಬಿಜೆಪಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) 292 ಲೋಕಸಭಾ ಸ್ಥಾನಗಳೊಂದಿಗೆ ಸಂಪೂರ್ಣ ಬಹುಮತವನ್ನು ಪಡೆದುಕೊಂಡಿದೆ. ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 52 ಸ್ಥಾನಗಳನ್ನು ಪಡೆಯಲು ಶಕ್ತವಾಗಿತ್ತು. ಆದರೆ ಈ ಬಾರಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವಷ್ಟು ಸ್ಥಾನಗಳನ್ನು ಪಡೆದಿದೆ.

ಇದನ್ನೂ ಓದಿ: Petrol Diesel Price Hike: ಬಿಜೆಪಿಯವರು ಪ್ರತಿಭಟನೆ ಮಾಡಬೇಕಿರೋದು ಕೇಂದ್ರದ ವಿರುದ್ಧ: ಸಿಎಂ ತಿರುಗೇಟು

ವಿರೋಧ ಪಕ್ಷದ ನಾಯಕನಿಗೆ ಸಿಗುವ ಸೌಲಭ್ಯಗಳೇನು?

ವಿರೋಧ ಪಕ್ಷದ ನಾಯಕನ ಹುದ್ದೆಯು ಕ್ಯಾಬಿನೆಟ್ ಸಚಿವರಿಗೆ ಸಮಾನವಾಗಿದೆ. ಅವರು ಕೇಂದ್ರ ಸಚಿವರಿಗೆ ಸಮಾನವಾದ ಸಂಬಳ, ಭತ್ಯೆಗಳು ಮತ್ತು ಇತರ ಸೌಲಭ್ಯಗಳನ್ನು ಪಡೆಯುತ್ತಾರೆ. ವಸತಿ ಮತ್ತು ಚಾಲಕನೊಂದಿಗೆ ಕಾರನ್ನು ಒದಗಿಸಲಾಗುತ್ತದೆ. ವಿರೋಧ ಪಕ್ಷದ ನಾಯಕರಿಗೂ ಸಿಬ್ಬಂದಿ ಸಿಗುತ್ತಾರೆ. ವಿರೋಧ ಪಕ್ಷದ ನಾಯಕರು ಸಾರ್ವಜನಿಕ ಖಾತೆಗಳು, ಸಾರ್ವಜನಿಕ ಉದ್ಯಮಗಳು ಮತ್ತು ಅಂದಾಜುಗಳಂತಹ ಪ್ರಮುಖ ಸಮಿತಿಗಳ ಸದಸ್ಯರಾಗಿರುತ್ತಾರೆ. ಅವರು ಹಲವಾರು ಇತರ ಜಂಟಿ ಸಂಸದೀಯ ಸಮಿತಿಗಳ ಸದಸ್ಯರೂ ಆಗಿರುತ್ತಾರೆ.

ಸಿಬಿಐ, ಎನ್‌ಎಚ್‌ಆರ್‌ಸಿ, ಕೇಂದ್ರ ಜಾಗೃತ ಆಯೋಗ, ಕೇಂದ್ರ ಮಾಹಿತಿ ಆಯೋಗದ ಮುಖ್ಯಸ್ಥರನ್ನು ನೇಮಿಸುವ ಆಯ್ಕೆ ಸಮಿತಿಗಳಲ್ಲಿ ವಿರೋಧ ಪಕ್ಷದ ನಾಯಕನನ್ನು ಸದಸ್ಯರನ್ನಾಗಿ ಮಾಡಲಾಗುತ್ತದೆ. ಸಂಸತ್ತಿನಲ್ಲಿ ಸರ್ಕಾರದ ನೀತಿಗಳನ್ನು ಟೀಕಿಸುವ ಸ್ವಾತಂತ್ರ್ಯ ವಿರೋಧ ಪಕ್ಷದ ನಾಯಕನಿಗೆ ಇರುತ್ತದೆ.

Continue Reading
Advertisement
International Yoga Day 2024
ಆರೋಗ್ಯ13 mins ago

International Yoga Day 2024: ಹಿರಿಯರಿಗೆ ಸೂಕ್ತವಾದ ಯೋಗಾಸನಗಳಿವು

Lucknow Airport
ದೇಶ19 mins ago

Lucknow Airport: ವಿಮಾನ ಸಿಬ್ಬಂದಿ ಮೇಲೆ ಏಕಾಏಕಿ ದಾಳಿ ನಡೆಸಿದ ಮಹಿಳೆ; ಕಾರಣ ಏನು?

USA vs SA
ಕ್ರಿಕೆಟ್21 mins ago

USA vs SA: ಇಂದು ದಕ್ಷಿಣ ಆಫ್ರಿಕಾ-ಅಮೆರಿಕ ನಡುವೆ ಸೂಪರ್​-8 ಕದನ

Vastu Tips
ಧಾರ್ಮಿಕ34 mins ago

Vastu Tips: ಗಂಗಾ ಜಲ ಮನೆಯಲ್ಲಿಟ್ಟರೆ ಸಾಲದು; ಅದನ್ನು ಎಲ್ಲಿ ಇಡಬೇಕು, ಹೇಗೆ ಇಡಬೇಕು?

actor Darshan Arrested
ಕ್ರೈಂ50 mins ago

Actor Darshan: `ನಾನೇ 30 ಲಕ್ಷ ರೂ. ಕೊಟ್ಟೆ….’ ಕೊಲೆ ಬಗ್ಗೆ ಸ್ವ ಇಚ್ಛೆ ಹೇಳಿಕೆ ನೀಡಿದ ದರ್ಶನ್‌

Narendra Modi
ದೇಶ1 hour ago

Narendra Modi: ಕಾಶಿಯಲ್ಲಿ ವೈಭವದ ಗಂಗಾ ಆರತಿ ಕಣ್ತುಂಬಿಕೊಂಡ ಮೋದಿ; ಇಲ್ಲಿದೆ Photo Gallery

New criminal laws
ದೇಶ1 hour ago

New Criminal Laws: ಹೊಸ ಕ್ರಿಮಿನಲ್ ಕಾನೂನು ಜು.1ರಿಂದ ಜಾರಿ; ಯಾವ ಕಾನೂನು? ಏನು ಬದಲಾವಣೆ? Complete Details!

renuka swamy murder case
ಕ್ರೈಂ1 hour ago

Renuka Swamy Murder Case: ರಾಜಕಾಲುವೆ ಪಾಲಾದ ಮೊಬೈಲ್‌ ಹುಡುಕಾಟಕ್ಕೆ ಅಗ್ನಿಶಾಮಕ ದಳ

International Yoga Day 2024
ದೇಶ1 hour ago

International Yoga Day 2024: ಅಂತಾರಾಷ್ಟ್ರೀಯ ಯೋಗ ದಿನ ಭಾರತದ ಹೆಮ್ಮೆ; ಈ ವರ್ಷದ ಥೀಮ್‌ ಏನು?

karnataka weather Forecast
ಮಳೆ2 hours ago

Karnataka Weather : ಭಾರಿ ಮಳೆ ಜತೆಗೆ ಬೀಸಲಿದೆ ಬಿರುಗಾಳಿ; ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು2 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು2 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ3 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ3 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ3 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ4 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ5 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು5 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು5 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ5 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌