MLA Muniratna: ಅತ್ಯಾಚಾರ, ಹನಿಟ್ರ್ಯಾಪ್‌ ಆರೋಪ; ಜೈಲಿನಿಂದ ಹೊರಬರುತ್ತಿದ್ದಂತೆ ಶಾಸಕ ಮುನಿರತ್ನ ಮತ್ತೆ ಅರೆಸ್ಟ್‌ - Vistara News

ರಾಜಕೀಯ

MLA Muniratna: ಅತ್ಯಾಚಾರ, ಹನಿಟ್ರ್ಯಾಪ್‌ ಆರೋಪ; ಜೈಲಿನಿಂದ ಹೊರಬರುತ್ತಿದ್ದಂತೆ ಶಾಸಕ ಮುನಿರತ್ನ ಮತ್ತೆ ಅರೆಸ್ಟ್‌

MLA Muniratna: ಜಾತಿನಿಂದನೆ ಪ್ರಕರಣದಿಂದ ಜಾಮೀನು ಪಡೆದು ಹೊರ ಬಂದ ಶಾಸಕ ಮುನಿರತ್ನರನ್ನು ಅತ್ಯಾಚಾರ ಹಾಗೂ ಹನಿಟ್ರ್ಯಾಪ್‌ ಆರೋಪದ (Physical abuse) ಮೇಲೆ ಕಗ್ಗಲಿಪುರ ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

allegations of rape honeytrap Mla Munirathna arrested again by Kaggalipura police as soon as he came out of jail
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಜಾತಿ ನಿಂದನೆ ಹಾಗೂ ಕೊಲೆ ಬೆದರಿಕೆ ಕೇಸ್‌ನಲ್ಲಿ ಜೈಲುಪಾಲಾಗಿದ್ದ ಶಾಸಕ ಮುನಿರತ್ನಗೆ (MLA Muniratna) ಕೋರ್ಟ್‌ ಷರತ್ತು ಬದ್ಧ ಜಾಮೀನು ನೀಡಿತ್ತು. ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್‌ ಆಗಿ ಹೊರ ಬಂದಾತಕ್ಷಣ ಕಗ್ಗಲಿಪುರ ಪೊಲೀಸರು (Kaggalipura police) ಹಾಗೂ ಡಿವೈಎಸ್‌ಪಿ ದಿನಕರ್ ಶೆಟ್ಟಿ ಮುನಿರತ್ನರನ್ನು ವಶಕ್ಕೆ ಪಡೆದಿದ್ದಾರೆ. ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್‌ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆಯಾದ ಬಳಿಕ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇನ್ನು ಅತ್ಯಾಚಾರ ಪ್ರಕರಣ ಸಂಬಂಧ ನಿನ್ನೆ ಗುರುವಾರ ಪೊಲೀಸರು ಸಂತ್ರಸ್ತೆಯನ್ನು ಕರೆದೊಯ್ದು ಕೃತ್ಯ ನಡೆದ ಸ್ಥಳದಲ್ಲಿ ಮಹಜರು ನಡೆಸಿದ್ದಾರೆ. ಮುತ್ಯಾಲನಗರದ ಗೋಡೌನ್, ನೆಲಮಂಗಲ ಬಳಿ ಮಹಜರು ಮಾಡಿ ನ್ಯಾಯಾಧೀಶರ ಮುಂದೆ ಸಿಆರ್ ಪಿಸಿ 164 ಅಡಿಯಲ್ಲಿ ಸಂತ್ರಸ್ತೆಯ ಹೇಳಿಕೆ ದಾಖಲಿಸಿದ್ದಾರೆ.

ಏನಿದು ಪ್ರಕರಣ?

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಕೋವಿಡ್ ಸಮಯದಲ್ಲಿ ನನ್ನ ಸಾಮಾಜಿಕ ಸೇವೆಯನ್ನು ಗುರುತಿಸಿ ಮುನಿರತ್ನ ಕರೆ ಮಾಡಿದ್ದರು. ಅದರಂತೆ ಭೇಟಿಯಾದ ಸಂತ್ರಸ್ತೆ ಹಾಗೂ ಮುನಿರತ್ನ ನಡುವೆ ಆತ್ಮೀಯತೆ ಬೆಳೆದಿತ್ತು. ಆಗಾಗ ವಿಡಿಯೊ ಕಾಲ್‌ ಮೂಲಕ ಮಾತನಾಡುತ್ತಿದ್ದರು. ಹೀಗೊಂದು ದಿನ ನಗ್ನವಾಗಿ ವಿಡಿಯೊ ಕರೆ ಮಾಡುವಂತೆ ಒತ್ತಾಯಿಸಿದಾಗ ಸಂತ್ರಸ್ತೆ ನಿರಾಕರಿಸಿದ್ದರಂತೆ. ಇದಾದ ಬಳಿಕ ಸಂತ್ರಸ್ತೆಯನ್ನು ಗೋಡೌನ್‌ಗೆ ಕರೆಸಿಕೊಂಡು ನಿನ್ನ ನೋಡಿದರೆ ಮೈ ಜುಮ್‌ ಎನಿಸುತ್ತೆ ಎಂದೇಳಿ ತಬ್ಬಿಕೊಳ್ಳಲು ಮುಂದಾಗಿದ್ದರಂತೆ.

ಇದಕ್ಕೆ ಸಂತ್ರಸ್ತೆ ಆಕ್ಷೇಪಿಸಿದಾಗ ರಾಜಕೀಯಕ್ಕೆ ಬರಬೇಕಾದರೆ ಇದೆಲ್ಲಾ ಕಾಮನ್ ಎಂದಿದ್ದಾರೆ. ನಾನು ಕಿರುಚಿಕೊಳ್ಳುತ್ತೇನೆ ಎಂದಾಗ ನಾನು ಶಾಸಕ, ಅಪಾರ ಜನಬೆಂಬಲವಿದೆ ಸುಮ್ಮನಿದ್ದರೆ ಸರಿ , ಇಲ್ಲವಾದರೆ ನಿನ್ನ ವಿರುದ್ಧವೇ ಕಂಪ್ಲೆಂಟ್ ನೀಡುತ್ತೇನೆ ಎಂದು ಹೆದರಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದರಂತೆ. ಅತ್ಯಾಚಾರದ ಬಳಿಕ ಈ ರೂಂನಲ್ಲಿ ಸೀಕ್ರೆಟ್ ವೀಡಿಯೊ ರೆಕಾರ್ಡರ್ ಇಟ್ಟಿದ್ದು, ಎಲ್ಲಾ ದೃಶ್ಯಗಳು ಸೆರೆಯಾಗಿದೆ. ನಿನ್ನ ವಿಡಿಯೊ ಎಡಿಟ್ ಮಾಡಿ ಹಂಚುತ್ತೇನೆ. ಹೇಳಿದಂತೆ ಕೇಳಬೇಕು ಅಂತಾ ಹನಿಟ್ರ್ಯಾಪ್ ಮಾಡುವಂತೆ ಹೇಳಿ ನನ್ನನ್ನು ಬಳಸಿಕೊಂಡರು ಎಂದು ಸಂತ್ರಸ್ತೆ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ.

ಜತೆಗೆ ಚಿತ್ರೀಕರಿಸಿದ ವಿಡಿಯೊಗಳನ್ನು ಟಿವಿಯಲ್ಲಿ ಹಾಕಿ ತೋರಿಸುತ್ತಾ, 2020 ರಿಂದ 2022ರ ಅವಧಿಯಲ್ಲಿ ನಿರಂತರ ಅತ್ಯಾಚಾರ ನಡೆಸಿದ್ದಾರೆ. ಇದೇ ವೇಳೆ ಹನಿಟ್ರ್ಯಾಪ್‌ಗು ಬಳಕೆ ಮಾಡಿಕೊಂಡಿದ್ದಾರೆ. ಹೇಳಿದಂತೆ ಕೇಳಲಿಲ್ಲ ಅಂದರೆ ಗಂಡ ಮತ್ತು ಮಕ್ಕಳಿಗೆ ವಿಡಿಯೊ ತೋರಿಸೋದಾಗಿ ಬೆದರಿಕೆ ಹಾಕಿದ್ದಾರೆ. ತನಗೆ ಪರಿಚಯ ಇರುವ ಮತ್ತೊಬ್ಬ ಮಹಿಳೆ ಜತೆ ಸೇರಿ ಆತ ಹೇಳಿದವರನ್ನು ಹನಿಟ್ರ್ಯಾಪ್ ಮಾಡಿಸಿದ್ದಾರೆ. ಮರ್ಯಾದೆ ಹಾಗು ಪ್ರಾಣಕ್ಕೆ ಅಂಜಿ ಶಾಸಕ ಮುನಿರತ್ನ ಹೇಳಿದಂತೆ ಕೇಳಿದ್ದೇನೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಯಾವ್ಯಾವ ಸೆಕ್ಷನ್‌ನಡಿ ಕೇಸ್?

354A – ಲೈಂಗಿಕ ದೌರ್ಜನ್ಯ
354C – ಮಹಿಳೆಯರ ಇಚ್ಛೆಗೆ ವಿರುದ್ಧವಾಗಿ ಚಿತ್ರೀಕರಣ
376N(2) – ಸರ್ಕಾರಿ ಸೇವಕನಿಂದ ಅತ್ಯಾಚಾರ
506 – ಜೀವ ಬೆದರಿಕೆ
504 – ಉದ್ದೇಶಪೂರ್ವಕವಾಗಿ ನಿಂದನೆ
120(B) – ಅಪರಾಧಿಕ ಒಳಸಂಚು
149 -ಕಾನೂನು ಬಾಹಿರ ಸಭೆ
406 – ನಂಬಿಕೆ ದ್ರೋಹ
384 – ಸುಲಿಗೆ
308 – ಹತ್ಯೆ ಮಾಡಲು ಪ್ರಯತ್ನ, ಐಟಿ ಆಕ್ಟ್ 66,66e

ಮಹಿಳೆಯೊಬ್ಬರನ್ನು ಮುಂದಿಟ್ಟುಕೊಂಡು ಮುನಿರತ್ನ ಹನಿಟ್ರ್ಯಾಪ್‌ ಮಾಡಿಸುತ್ತಿದ್ದನಂತೆ. ತನಗೆ ಆಗದವರನ್ನು ಮಟ್ಟ ಹಾಕಲು ಹನಿಟ್ರ್ಯಾಪ್‌ ಮಾಡಿ ಅವರಿಗೆ ಏಡ್ಸ್‌ ಸೋಂಕಿತರ ರಕ್ತ ಇಂಜೆಕ್ಟ್‌ ಮಾಡಿಸುತ್ತಿದ್ದ ಎನ್ನಲಾಗಿದೆ. ಮುನಿರತ್ನನ ಈ ಭಯಾನಕ ಕೃತ್ಯಕ್ಕೆ ಹಲವರು ಬಲಿಯಾಗಿದ್ದಾರೆ. ತನ್ನ ಎದುರಾಳಿ ಸ್ಥಳೀಯ ಕಾರ್ಪೋರೇಟರ್‌ಗಳನ್ನು ಸೈಲೆಂಟ್ ಮಾಡಿಸಿದ್ದು ಹೀಗೆ, ಅದರಲ್ಲಿ ಮಾಗಡಿ ಎಂಎಲ್‌ಎ ಸಹ ಒಬ್ಬರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹನಿಟ್ರ್ಯಾಪ್, ಏಡ್ಸ್ ಹರಡಿಸುವ ಕೃತ್ಯ, ಡ್ರಗ್ಸ್ ದಂಧೆ ಬಗ್ಗೆಯೂ ಎಫ್ಐಆರ್‌ನಲ್ಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ದೇಶ

Jammu-Kashmir Election: ಕಾಶ್ಮೀರದಲ್ಲಿ ಕಾಂಗ್ರೆಸ್ ಮೈತ್ರಿಯ ಕಮಾಲ್, ಚೇತರಿಸಿಕೊಂಡ ಕಮಲ ಪಡೆ; ತಲೆಕೆಳಗಾಯ್ತು ಹರಿಯಾಣ ಚುನಾವಣೆ ಸಮೀಕ್ಷೆ ಲೆಕ್ಕಾಚಾರ

ಹರಿಯಾಣದಲ್ಲಿ ಬಿಜೆಪಿ ಮೂರನೇ ಬಾರಿ ಅಧಿಕಾರಕ್ಕೆ ಬಂದಿದ್ದು, ಹ್ಯಾಟ್ರಿಕ್ ಗೆಲವು ಸಾಧಿಸಿದೆ. ಇತ್ತ ಕಾಶ್ಮೀರದಲ್ಲಿ ಕಾಂಗ್ರೆಸ್ ಮೈತ್ರಿಯು ಕಮಾಲ್ ಮಾಡಿದೆ.

VISTARANEWS.COM


on

By

Congress alliance wins in Kashmir Haryana poll survey Calculations turned upside down
Koo

ಲೋಕಸಭಾ ಚುನಾವಣೆ ಬಳಿಕ ನಡೆದ 2 ರಾಜ್ಯಗಳ ಚುನಾವಣಾ ಫಲಿತಾಂಶ ಗುರುವಾರ ಪ್ರಕಟಗೊಂಡಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ (Jammu-Kashmir Election) ಕಾಂಗ್ರೆಸ್ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮೈತ್ರಿ ಸಕ್ಸಸ್ ಆಗಿದ್ದರೆ ಈ ಬಾರಿ ಹರಿಯಾಣದಲ್ಲಿ ಕಾಂಗ್ರೆಸ್ ಸರ್ಕಾರವೇ ಬರಲಿದೆ ಎಂಬ ಲೆಕ್ಕಾಚಾರ ಉಲ್ಟಾ ಆಗಿದೆ. ಕಾಶ್ಮೀರದಲ್ಲಿ 3 ಹಂತದಲ್ಲಿ ಚುನಾವಣೆ ನಡೆದಿದ್ರೆ, ಹರಿಯಾಣದ 90 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆದಿತ್ತು. ಎಲ್ಲಾ ಚುನಾವನೋತ್ತರ ಸಮೀಕ್ಷೆಗಳು ಸಹ ಕಾಶ್ಮೀರದಲ್ಲಿ ಅತಂತ್ರವಾಗಿದೆ. ಹರ್ಯಾಣದಲ್ಲಿ ಈ ಬಾರಿ ಕಾಂಗ್ರೆಸ್ ಗೆ ಅಧಿಕಾರ ಫಿಕ್ಸ್ ಎಂದು ಭವಿಷ್ಯ ನುಡಿದಿದ್ವು. ಅದರಂತೆ ಫಲಿತಾಂಶದ ದಿನವಾದ ಗುರುವಾರ, ಹರ್ಯಾಣದಲ್ಲಿ ಕಾಂಗ್ರೆಸ್ ಪ್ರಾರಂಭದಲ್ಲಿ ಗೆಲ್ಲುವ ಹುಮ್ಮಸ್ಸಿದ್ದರೂ, 10.30 ಆಗುತ್ತಿದ್ದಂತೆ ಲೆಕ್ಕಾಚಾರವೇ ಬೇರೆ ಆಗೋಗಿತ್ತು.

ಆಡಳಿತ ವಿರೋಧಿ ಅಲೆ, 2 ಬಾರಿ ಬಿಜೆಪಿ ಅಧಿಕಾರ ನಡೆಸಿದೆ. ಈ ಬಾರಿ ಹರಿಯಾಣ ಜನ ಬದಲಾವಣೆ ಬಯಸಿದ್ದಾರೆ ಅನ್ನುವಷ್ಟರಲ್ಲಿ ಮತ್ತೆ ಬಿಜೆಪಿ ಮುನ್ನಡೆ ಸಾಧಿಸಿತ್ತು. ಇನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಹಾಗೂ NC ಮೈತ್ರಿ ವರ್ಕೌಟ್ ಆಗಿ ಅಧಿಕಾರ ದೊರೆತಿದ್ರೆ, ಬಿಜೆಪಿ ಕಳೆದ ಬಾರಿಗಿಂತ ಉತ್ತಮ ಪ್ರದರ್ಶನ ನೀಡಿದೆ. ಆದರೆ ಮೆಹಬೂಬ ಮಫ್ತಿರ ಪಿಡಿಪಿ ಪಕ್ಷ ಮಾತ್ರ ಎರಡಂಕಿ ದಾಟುವಲ್ಲೂ ಸಹ ಯಶಸ್ವಿಯಾಗಿಲ್ಲ.

 Congress alliance wins in Kashmir Haryana poll survey Calculations turned upside down
Congress alliance wins in Kashmir Haryana poll survey Calculations turned upside down

ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಲು ಕಾರಣಗಳೇನು?

-ಪ್ರಬಲ ಆಡಳಿತ ವಿರೋಧಿ ಅಲೆಯನ್ನ ಚುನಾವಣಾ ಸಂಧರ್ಭದಲ್ಲಿ ಎದುರುಸಿರುವುದು
-ಕಳೆದ ಸರ್ಕಾರದಲ್ಲಿ ಮನೋಹರ್ ಲಾಲ್ ಖಟ್ಟರ್ ಅವರ ಬದಲಿಗೆ ನಯಾಬ್ ಸಿಂಗ್ ಸೈನಿ ರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿರುವುದು
-ಸೈನರನ್ನ ಮುಖ್ಯಮಂತ್ರಿಯಾಗಿ ನೇಮಕ ಮಾಡುವ ಮೂಲಕ ಬಿಜೆಪಿ ಒಬಿಸಿ ಪರವಾಗಿ ಇದೇ ಎಂಬ ಸಂದೇಶ ರವಾನೆ
-ಒಬಿಸಿ ಸಮುದಾಯದ ಮೊದಲ ಮುಖ್ಯಮಂತ್ರಿಯಾಗಿ ಹರ್ಯಾಣದಲ್ಲಿ ಸೈನಿ ನೇಮಕ
-ಜಾಟ್ ಸಮುದಾಯದ ಕೆಂಗಣ್ಣಿಗೆ ಬಿಜೆಪಿ ಗುರಿಯಾಗಿದ್ದರು ಸಹ, ಜಾಟ್ ಸಮುದಾಯ ಹೊರತುಪಡಿಸಿ ಬೇರೆ ಸಮುದಾಯದ ವೋಟ್ ಬ್ಯಾಂಕ್ ಭದ್ರಪಡಿಸಿಕೊಂಡಿದ್ದು
-ಹರಿಯಾಣದಲ್ಲಿ 30% ಜಾಟ್‌, 34% ಒಬಿಸಿ, ದಲಿತರು 16%, ಮತ್ತು 23% ಪಂಜಾಬಿಗಳು ಹಾಗೂ ಬ್ರಾಹ್ಮಣರು, ರಜಪೂತರು, ಅಗರ್‌ವಾಲ್‌ಗಳು, ಅಹಿರ್, ಗುಜ್ಜರ್ ಮತ್ತು ಸೈನಿಗಳು ಹರಿಯಾಣದಲ್ಲಿ ಸುಮಾರು 11% ಜನಸಂಖ್ಯೆ ಹೊಂದಿದೆ.
-ಜಾತಿ ಲೆಕ್ಕಾಚಾರ ಬಿಜೆಪಿಯ ಕೈ ಹಿಡಿದಿರುವುದು
-ಜಾಟ್ ಸಮುದಾಯ ಹೊರತುಪಡಿಸಿ, ಒಬಿಸಿ ಹಾಗೂ ದಲಿತ ವೋಟ್ ಗಳನ್ನ ಭದ್ರಪಡಿಸಿಕೊಂಡಿದ್ದು
-ಮುಖ್ಯಮಂತ್ರಿಯಾಗಿ ಸೈನಿ 70 ದಿನಗಳ ಅಧಿಕಾರಾವಧಿಯಲ್ಲಿ ತೆಗೆದುಕೊಂಡ ನಿರ್ಧಾರಗಳು ಹಾಗೂ ಆಡಳಿತ ಶೈಲಿ
-ಪ್ರಧಾನಿ ಮೋದಿ ಭಾಷಣ ಹಾಗೂ ಅಮಿತ್ ಶಾ ಮತ್ತು ಮೋದಿ ಒಟ್ಟಾರೆ ನಡೆಸಿದ್ದ 14 ರೋಡ್ ಶೋಗಳು
-ರೈತಾಪಿ ವರ್ಗದಿಂದ ಬಿಜೆಪಿ ಮೇಲಿದ್ದ ಕೋಪ ಹಾಗೂ ಅಗ್ನಿವೀರ್ ಯೋಜನೆ ಬಗ್ಗೆ ಇದ್ದ ಕಳವಳ ನಿವಾರಿಸುವಲ್ಲಿ ಬಿಜೆಪಿ ಯಶಸ್ವಿಯಾಗಿತ್ತು.

ಹರಿಯಾಣದಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣಗಳೇನು?

-ಬಿಜೆಪಿಗಿದ್ದ ಆಡಳಿತ ವಿರೋಧಿ ಅಲೆಯನ್ನ ಸದುಪಯೋಗಪಡಿಸಿಕೊಳ್ಳದಿರುವುದು
-ಜಾಟ್ ಸಮುದಾಯದ ಮೇಲಿನ ಅತಿಯಾದ ನಂಬಿಕೆ ಹಾಗೂ ಜಾಟ್ ವೋಟ್ ಗಳ ಮೇಲೆಯೇ ಹೆಚ್ಚು ನಿಗಾ ವಹಿಸಿದ್ದು
-ರಾಹುಲ್ ಗಾಂಧಿ ತಮ್ಮ ಭಾಷಣದ ವೇಳೆ ದಲಿತ ಮತಗಳ ಕ್ರೂಡಿಕರಣಕ್ಕೆ ಪ್ರಯತ್ನಿಸಿದ್ದಾದರೂ, ಸ್ಥಳೀಯ ನಾಯಕರು ಈ ಬಗ್ಗೆ ಗಮನ ಹರಿಸದಿರುವುದು
-ಜಾಟ್ ಮತಗಳ ಮೇಲಿನ ಅವಲಂಬನೆ, ಒಳಜಗಳ, ಹೂಡಾಗಳ ಮೇಲಿನ ಅತಿಯಾದ ಅವಲಂಬನೆ
-ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಕಲಹ ಜನರಿಗೆ ಬೇಸರ ತರಿಸಿತ್ತು
-ದಲಿತ ನಾಯಕಿ ಮತ್ತು ಸಿರ್ಸಾ ಸಂಸದೆ ಕುಮಾರಿ ಸೆಲ್ಜಾ ಮತ್ತು ಮಾಜಿ ಸಿಎಂ ಮತ್ತು ಜಾಟ್ ನಾಯಕ ಭೂಪಿಂದರ್ ಸಿಂಗ್ ಹೂಡಾ ನಡುವಿನ ಕಲಹವು ಸೋಲಿಗೆ ಪ್ರಮುಖ ಕಾರಣ
-ಕಾಂಗ್ರೆಸ್ ದಲಿತ ವಿರೋಧಿ ಎಂದು ಆರೋಪಿಸಿದಾಗ, ಸರಿಯಾಗಿ ರಾಜ್ಯ ನಾಯಕರು ಬಿಜೆಪಿಗೆ ಕೌಂಟರ್ ನೀಡದಿರುವುದು
-ಅಭ್ಯರ್ಥಿ ಆಯ್ಕೆ ಬಳಿಕ ಬಂಡಾಯವನ್ನ ಶಮನ ಮಾಡಲು ವಿಫಲ ಆಗಿರುವುದು
-ಲೋಕಸಭೆ ಚುನಾವಣೆಯಲ್ಲಿ 10 ಕ್ಷೇತ್ರದ ಪೈಕಿ ಕಾಂಗ್ರೆಸ್ 5 ಕ್ಷೇತ್ರದಲ್ಲಿ ಗೆಲುವು ಸಾಧಿಸಿತ್ತು, ಈ ಅತಿಯಾದ ಆತ್ಮವಿಶ್ವಾಸ ಸಹ ಸೋಲಿಗೆ ಕಾರಣ
-ಪರಿಣಾಮಕಾರಿಯಲ್ಲದ ಪ್ರಚಾರ ಮತ್ತು ಸ್ಥಳೀಯ ಸಮಸ್ಯೆಗಳ ಬಗ್ಗೆ ಗಮನ ನೀಡದಿರುವುದು

Continue Reading

ದಕ್ಷಿಣ ಕನ್ನಡ

Self Harming: ಮಾಜಿ ಶಾಸಕ‌ ಮೊಯ್ದೀನ್ ಬಾವಾ ಸಹೋದರನ ಮೃತದೇಹ ಪತ್ತೆ; ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದವರ ವಿರುದ್ಧ ಎಫ್‌ಐಆರ್‌

Self Harming: ಮಾಜಿ ಶಾಸಕ‌ ಮೊಯ್ದೀನ್ ಬಾವಾ ಸಹೋದರನ ಮೃತದೇಹ ಪತ್ತೆಯಾಗಿದೆ. ಇತ್ತ ಮುಮ್ತಾಜ್‌ ಅಲಿಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದವರ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

Self harming
Koo

ಮಂಗಳೂರು: ಮಾಜಿ ಶಾಸಕ ಮೊಯ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ (52) ಎಂಬುವವರು ಸಾಯುವುದಾಗಿ ಕುಟುಂಬಸ್ಥರಿಗೆ ಮಸೇಜ್‌ ಕಳಿಸಿ ಮಂಗಳೂರು ಹೊರವಲಯದ ಕೂಳೂರು ಬ್ರಿಡ್ಜ್‌ನಲ್ಲಿ ಕಾರು ನಿಲ್ಲಿಸಿ ನಾಪತ್ತೆ (Missing Case) ಆಗಿದ್ದರು. ಇದೀಗ ಇಪ್ಪೆತ್ತೆಂಟು ಗಂಟೆಗಳ ಸತತ ಕಾರ್ಯಾಚರಣೆ ಬಳಿಕ ಮುಮ್ತಾಜ್ ಅವರ ಮೃತದೇಹ (Self Harming) ಸಿಕ್ಕಿದೆ. ತಣ್ಣೀರುಬಾವಿ ಮುಳುಗುಗಾರರು ಮೃತದೇಹ ಪತ್ತೆ ಮಾಡಿ ಹೊರತೆಗೆದಿದ್ದಾರೆ. ಮೃತದೇಹ ಕಂಡು ಮಾಜಿ ಶಾಸಕ ಮೊಯಿದ್ದೀನ್ ಬಾವ ಗೋಳಾಡಿದರು.

ನಿನ್ನೆ ಭಾನುವಾರ ಬೆಳಗಿನ ಜಾವ ಮೂರು ಗಂಟೆಗೆ ಮನೆಯಿಂದ ಹೊರಟ್ಟಿದ್ದ ಮುಮ್ತಾಜ್ ಆಲಿ, ಬೆಳಗ್ಗೆ 5 ಗಂಟೆಗೆ ಕೂಳೂರು ಸೇತುವೆ ಮೇಲೆ ಡ್ಯಾಮೇಜ್‌ ಆದ ಸ್ಥಿತಿಯಲ್ಲಿ ಬಿಎಂಡಬ್ಲ್ಯೂ ಕಾರು ಪತ್ತೆಯಾಗಿತ್ತು. ಬಳಿಕ ನಿನ್ನೆ ದಿನವಿಡೀ ಹುಡುಕಿದರೂ ಮುಮ್ತಾಜ್ ಆಲಿ ಸುಳಿವು ಸಿಕ್ಕಿರಲಿಲ್ಲ. ಹೀಗಾಗಿ ಸೋಮವಾರ ಮತ್ತೆ ನದಿಯಲ್ಲಿ ಶೋಧ ಕಾರ್ಯ ಆರಂಭಿಸಲಾಗಿತ್ತು.

ಸಹೋದರನ ನೆನೆದು ಕಣ್ಣೀರು

ಸಹೋದರನನ್ನು ನೆನೆದು ಮಾಜಿ ಶಾಸಕ ಮೋಹಿಯುದ್ದೀನ್ ಬಾವ ಕಣ್ಣೀರು ಹಾಕಿದರು. ಬ್ಲ್ಯಾಕ್‌ ಮೇಲ್‌ನಿಂದಲೇ ನನ್ನ ಸಹೋದರ ಈ ನಿರ್ಧಾರಕ್ಕೆ ಬಂದಿದ್ದಾನೆ. ನನ್ನ ಸಹೋದರ ಶೈಕ್ಷಣಿಕವಾಗಿ, ಧಾರ್ಮಿಕ ಕಾರ್ಯಗಳಿಂದ ಹೆಸರು ಗಳಿಸಿದ್ದ. ಆತನ ಪ್ರಚಾರವನ್ನು ಸಹಿಸದ ಕೆಲವು ಶಕ್ತಿಗಳು ಕುತಂತ್ರ ಮಾಡಿದ್ದಾರೆ. ಈ ಕಾರಣದಿಂದಲೇ ನನ್ನ ಸಹೋದರ ಈ ನಿರ್ಧಾರಕ್ಕೆ ಬಂದಿದ್ದಾನೆ. ಆತನ ಫೋನ್ ಹಾಗೂ ವಾಟ್ಸ್ ಅಪ್ ಪರಿಶೀಲನೆ ಮಾಡುತ್ತಿದ್ದಾರೆ. ನನ್ನ ಸಹೋದರನ ಈ ಸ್ಥಿತಿಗೆ ಕಾರಣರಾದವರಿಗೆ ತಕ್ಕ ಶಿಕ್ಷೆಯಾಗಲಿ. ರಾಜಕೀಯ ರಹಿತವಾಗಿ ಕೆಲಸ ಮಾಡಿದ್ದ ಆತನನ್ನು ಪ್ರಚೋದನೆ ನೀಡಿ ಮುಗಿಸಿದ್ದಾರೆ ಎಂದು ಕಣ್ಣೀರು ಹಾಕಿದರು.

Self harming
Self harming

ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಮಹಿಳೆ ಗ್ಯಾಂಗ್‌ ಅರೆಸ್ಟ್‌

ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಆಲಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ ಆರು ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮುಮ್ತಾಜ್ ಆಲಿ ಸಹೋದರ ಹೈದರ್ ದೂರಿನ ಮೇರೆಗೆ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮಹಿಳೆಯನ್ನು ಬಳಸಿಕೊಂಡು ದುರುದ್ದೇಶದಿಂದ ಆತ್ಮಹತ್ಯೆ ಪ್ರಚೋದನೆ ದೂರು ನೀಡಿರುವ ಸಂಬಂಧ ಮಹಿಳೆ ರೆಹಮತ್ ಹಾಗೂ ಅಬ್ದುಲ್ ಸತ್ತಾರ್, ಶಾಫಿ, ಮುಸ್ತಾಫ, ಶೋಯೆಬ್ ಹಾಗೂ ಸಿರಾಜ್ ವಿರುದ್ಧ ದೂರು ದಾಖಲಾಗಿದೆ. ಸಹೋದರ ಮುಮ್ತಾಜ್ ಆಲಿ ಸಮಾಜದ ಗೌರವಾನ್ವಿತ ವ್ಯಕ್ತಿಯಾಗಿದ್ದಾರೆ. ಅವರ ಗೌರವ ಹಾಳು ಮಾಡಲು ಮಹಿಳೆಯ ಬಳಸಿಕೊಂಡು ಷಡ್ಯಂತ್ರ ಮಾಡಿರುವ ಆರೋಪವಿದೆ. ರೆಹಮತ್ ಅಕ್ರಮ ಸಂಬಂಧ ಇದೆ ಎಂದು ಸುಳ್ಳು ಪ್ರಚಾರದ ಬೆದರಿಕೆ ಹಾಕಿದ್ದಾರೆ.

2024ರ ಜುಲೈನಿಂದ ಈವರೆಗೆ 50 ಲಕ್ಷ ವಸೂಲಿ ಮಾಡಿದ್ದಾರೆ. 25 ಲಕ್ಷ ಹಣವನ್ನು ಚೆಕ್ ಮೂಲಕವೂ ಮಹಿಳೆ ಪಡೆದಿದ್ದಾಳೆ. ಸತ್ತಾರ್ ಎಂಬಾತ ಮುಮ್ತಾಜ್ ಆಲಿಯ ರಾಜಕೀಯ ವಿರೋಧಿಯಾಗಿದ್ದಾನೆ. ಅಕ್ರಮ ಸಂಬಂಧ ಇದೆ ಎಂದು ಇವರು ನಿರಂತರ ಬ್ಲ್ಯಾಕ್ ಮೇಲ್ ಮಾಡಿದ್ದರು. ಜೀವ ಬೆದರಿಕೆ ಜತೆಗೆ ಮುಮ್ತಾಜ್ ಆಲಿ ಕುಟುಂಬಕ್ಕೂ ಬೆದರಿಸಿದ್ದರು. ಹೀಗಾಗಿಯೇ ಸಹೋದರ ಮುಮ್ತಾಜ್ ಆಲಿ ಮೆಸೇಜ್ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರು ನೀಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

HD Kumaraswamy : ಎಲೆಕ್ಷನ್‌ಗೆ 50 ಕೋಟಿ ರೂ.ಗೆ ಡಿಮ್ಯಾಂಡ್‌ ಮಾಡಿ ಉದ್ಯಮಿಗೆ ಬೆದರಿಕೆ; ಎಚ್‌ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

HD Kumaraswamy : ಎಲೆಕ್ಷನ್‌ಗಾಗಿ ಎಚ್‌ಡಿ ಕುಮಾರಸ್ವಾಮಿ ಅವರು 50 ಕೋಟಿ ರೂ.ಗೆ ಡಿಮ್ಯಾಂಡ್‌ ಮಾಡಿ ಉದ್ಯಮಿಗೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಸದ್ಯ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲಾಗಿದೆ.

VISTARANEWS.COM


on

By

HD kumaraswamy And Vijayetata
Koo

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ವಿರುದ್ಧ ಉದ್ಯಮಿ ವಿಜಯ ಟಾಟಾ ಎಂಬುವವರಿಂದ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ 50 ಕೋಟಿ ರೂ. ಹಣಕ್ಕೆ ಡಿಮ್ಯಾಂಡ್ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ವಿಜಯ್ ಟಾಟಾ ದೂರಿನಲ್ಲಿ ಏನಿದೆ?

ರಿಯಲ್ ಎಸ್ಟೇಟ್ ಉದ್ಯಮಿಯಾದ ನಾನು 2018 ರಿಂದ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದೇನೆ. ಎಚ್‌ಡಿ ದೇವೆಗೌಡರ ಪಕ್ಷದ ಸೋಷಿಯಲ್‌ ಮೀಡಿಯಾ ಉಪಾಧ್ಯಕ್ಷನಾಗಿ ನನ್ನನ್ನು ನೇಮಿಸಿದರು. 2019ರ ಮಂಡ್ಯ ಲೋಕಸಭಾ ಚುನಾವಣೆ ವೇಳೆ ಕುಮಾರಸ್ವಾಮಿ ಪರ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಅಭಿಯಾನ ನಡೆಸಿದ್ದೇನೆ. ಕಳೆದ ಕೆಲ ವರ್ಷಗಳಿಂದ ರಿಯಲ್ ಎಸ್ಟೇಟ್ ಉದ್ಯಮದ ಬಗ್ಗೆ ಗಮನಹರಿಸಿದ್ದೆ. ಪಕ್ಷದ ಕಾರ್ಯಗಳಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಆಗಸ್ಟ್ 24, 2024 ರಂದು ರಮೇಶ್ ಗೌಡ ನನ್ನ ನಿವಾಸಕ್ಕೆ ಆಗಮಿಸಿದ್ದರು.

ನನ್ನ ಮನೆಯಲ್ಲಿ ಜತೆಯಲ್ಲಿ ಊಟ ಮಾಡುತ್ತಾ ಚೆನ್ನಪಟ್ಟಣ ಚುನಾವಣೆ ಬಗ್ಗೆ ವಿವರಿಸಿದರು. ನಿಖಿಲ್ ಕುಮಾರಸ್ವಾಮಿಯವರಿಗೆ ಚನ್ನಪಟ್ಟಣ ಚುನಾವಣೆಗೆ ಟಿಕೆಟ್ ನೀಡುವುದು ಅಂತಿಮವಾಗಿದೆ ಎಂದರು. ಇದೇ ವೇಳೆ ಕುಮಾರಸ್ವಾಮಿ ಫೋನ್ ಮಾಡಿದ್ದರು. ನಿಖಿಲ್ ಚನ್ನಪಟ್ಟಣ ಚುನಾವಣೆಗೆ ನಿಲ್ಲುತ್ತಿದ್ದಾರೆ, ಚುನಾವಣೆಗೆ 50 ಕೋಟಿ ರೂ. ಕೊಡಿ ಅಂದರು. ಈ ವೇಳೆ ನಾನು ಆಗಲ್ಲ ಸರ್ ಅಂತೇಳ್ದೆ, ಅದಕ್ಕೆ ಕುಮಾರಸ್ವಾಮಿ ಕೋಪ ಮಾಡಿಕೊಂಡರು. ನೀವು ಬೆಂಗಳೂರಲ್ಲಿ ರಿಯಲ್ ಎಸ್ಟೇಟ್ ನಡೆಸೋದಷ್ಟೇ ಅಲ್ಲ. ಬದುಕುವುದೇ ಕಷ್ಟವಾಗತ್ತೆ ಅಂತ ಬೆದರಿಕೆ ಹಾಕಿ ಫೋನ್ ಕಟ್ ಮಾಡಿದ್ದರು. ನಿಮ್ಮ ರಿಯಲ್ ಎಸ್ಟೇಟ್ ಪ್ರಾಜೆಕ್ಟ್ ಕಂಪ್ಲೀಟ್ ಮಾಡಲಿಕ್ಕೆ ಬಿಡೊಲ್ಲ ಎಂದು ಹೇಳಿದ್ದರಂತೆ.

ಕುಮಾರಸ್ವಾಮಿ ಜತೆ ಫೋನ್‌ನಲ್ಲಿ ಮಾತಾಡುವ ವೇಳೆ ರಮೇಶ್ ಗೌಡ ಎದುರಲ್ಲಿ ಕುಳಿತಿದ್ದರು. ಈ ವೇಳೆ ರಮೇಶ್ ಗೌಡ ಕೂಡ ಐದು ಕೋಟಿ ಕೇಳಿದರು. ದೇವಾಲಯ ಹಾಗೂ ಶಾಲೆ ಕಟ್ಟಿಸುತ್ತಿದ್ದು ಅದಕ್ಕಾಗಿ ಐದು ಕೋಟಿ ರೂ. ಕೊಡಿ ಎಂದು ರಮೇಶ್ ಗೌಡ ಕೇಳಿದರು. ತುಂಬಾ ಕಷ್ಟ ಇದೆ ಯಾವುದೇ ಕಾರಣಕ್ಕೂ ಆಗಲ್ಲ ಅಂತ ಹೇಳಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಸಂಬಂಧ ಪ್ರತಿಕ್ರಿಯಿಸಿದ ಉದ್ಯಮಿ ವಿಜಯ್ ಟಾಟಾ ಕುಮಾರಸ್ವಾಮಿ ಹಾಗೂ ರಮೇಶ್ ಗೌಡ ವಿರುದ್ಧ ದೂರು ನೀಡಿದ್ದೇವೆ. ಒಂದು ವಾರದಿಂದ ಮೆಸೇಜ್, ಕಾಲ್ ಮಾಡುವ ಕೆಲಸ ರಮೇಶ್ ಗೌಡ ಮಾಡುತ್ತಿದ್ದರು. 2019ರ ಚುನಾವಣೆಗೆ ಅವರಿಗಾಗಿ ತುಂಬಾ ಖರ್ಚು ಮಾಡಿದ್ದೀವಿ. ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದೆ. ಕುಮಾರಸ್ವಾಮಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಬಿ ಎನ್ ಎಸ್ 352 ಅಡಿಯಲ್ಲಿ ಎನ್ ಸಿ ಆರ್ ದಾಖಲಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

MLA Muniratna: ಶಾಸಕ ಮುನಿರತ್ನ ಕೇಸ್‌; ರಾಜಕಾರಣಿಗಳ ಹನಿಟ್ರ್ಯಾಪ್‌ ಮಾಡುತ್ತಿದ್ದ ರೂಮಿನ ಸ್ಥಳ ಮಹಜರು ಮಾಡಿದ ಎಸ್‌ಐಟಿ ಅಧಿಕಾರಿಗಳು

MLA Muniratna: ಶಾಸಕ ಮುನಿರತ್ನ ಲೈಂಗಿಕ ದೌರ್ಜನ್ಯ, ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಸಂತ್ರಸ್ತೆಯೊಂದಿಗೆ ರಾಜಕಾರಣಿಗಳ ಹನಿಟ್ರ್ಯಾಪ್‌ ಮಾಡುತ್ತಿದ್ದ ರೂಮಿನ ಸ್ಥಳ ಮಹಜರು ಮಾಡಿದರು.

VISTARANEWS.COM


on

By

MLA Muniratna
Koo

ಬೆಂಗಳೂರು: ಶಾಸಕ ಮುನಿರತ್ನ (MLA Muniratna) ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಎಸ್‌ಐಟಿ ತನಿಖೆ ಮುಂದುವರಿದಿದೆ. ಸುದೀರ್ಘವಾಗಿ ಸಂತ್ರಸ್ತೆಯಿಂದ ಹೇಳಿಕೆ ದಾಖಲಿಸಿದ್ದು, ಈಗಾಗಲೇ ಮೊಬೈಲ್ ಸೀಜ್ ಮಾಡಿ ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ. ಅಧಿಕಾರಿಗಳಿಗೆ ಕೆಲ ವಿಡಿಯೊಗಳು ಮತ್ತು ಕೆಲ ದಾಖಲೆಗಳನ್ನು ಸಂತ್ರಸ್ತೆ ನೀಡಿದ್ದಾರೆ.

ಈ ಹಿಂದೆ ಅತ್ಯಾಚಾರ ಆರೋಪದ ಬೆನ್ನಲ್ಲೇ ಕಗ್ಗಲೀಪುರ ಪೊಲೀಸರು ಈ ಹಿಂದೆಯೇ ಸಂತ್ರಸ್ತೆಯನ್ನು ಕರೆದೊಯ್ದು ಸ್ಥಳ ಮಹಜರು ನಡೆಸಿದ್ದರು. ಇದೀಗ ಗುರುವಾರ ಜೆಪಿ ಪಾರ್ಕ್‌ನ ಗೋಡೌನ್‌, ರಾಮಯ್ಯ ಸಮಾಧಿ ಬಳಿ ಎಸ್‌ಐಟಿ ಅಧಿಕಾರಿಗಳು ಸ್ಥಳ ಮಹಜರ್‌ ಮಾಡಿದರು. ಹನಿಟ್ರ್ಯಾಪ್‌ ಮಾಡಿದ್ದ ಜೆಪಿ ಪಾರ್ಕ್ ಬಳಿಯ ಬಾಡಿಗೆ ಮನೆಯೊಂದರಲ್ಲಿ ಸಂತ್ರಸ್ತೆ ಕರೆತಂದು ಮಹಜರ್‌ ನಡೆಸಿದರು.

ಮಾಜಿ ಕಾರ್ಪೊರೇಟರ್ ವೇಲು ನಾಯ್ಕರ್ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ್ದಾರೆ. ಮುನಿರತ್ನ ಸಂಬಂಧಿತ ಕೆಲ ದಾಖಲೆಗಳನ್ನು ಕೊಟ್ಟಿದ್ದಾರೆ ಎನ್ನಲಾಗಿದೆ. ಜತೆಗೆ ಮುನಿರತ್ನ ಆಪ್ತ ಸಹಾಯಕನ ವಿಚಾರಣೆ ನಡೆಸಲಾಗಿದ್ದು, ಸಂತ್ರಸ್ತೆ ಪರಿಚಿತೆ ಈ ರೀತಿ ಯಾಕೆ ಕೊಟ್ಟಿದ್ದಾರೋ ಗೊತ್ತಿಲ್ಲ ಎಂದಿದ್ದಾರೆ.

ಆರು ಮಂದಿ ನಾಪತ್ತೆ

ಶಾಸಕ ಮುನಿರತ್ನ ನಾಯ್ಡು ವಿರುದ್ಧ ಕಳೆದ ಸೆಪ್ಟೆಂಬರ್ 18ರಂದು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಒಟ್ಟು ಏಳು ಜನರ ಆರೋಪಿಗಳ‌ ಹೆಸರು ದಾಖಲಾಗಿದೆ. ಸದ್ಯ ಮುನಿರತ್ನರನ್ನು ಬಂಧನ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ. ಎಸ್‌ಐಟಿ ಮುಂದೆ ಮುನಿರತ್ನ ನಂಗೇನು ಗೊತ್ತಿಲ್ಲ ಎಂದಿದ್ದಾರೆ. ಇನ್ನು ಇದುವರೆಗೂ ಪ್ರಕರಣದಲ್ಲಿ ಇನ್ನುಳಿದ ಆರೋಪಿಗಳು ನಾಪತ್ತೆಯಾಗಿದ್ದಾರೆ. ಪ್ರಕರಣ ದಾಖಲಾಗಿ 15 ದಿನ ಕಳೆದರೂ ಆರು ಜನ ಆರೋಪಿಗಳು ಪತ್ತೆಯಾಗಿದ್ದಾರೆ. ಮುನಿರತ್ನ‌ ನಾಯ್ಡು ಸೇರಿದಂತೆ ವಿಜಯ್ ಕುಮಾರ್, ಸುಧಾಕರ, ಕಿರಣ್ ಕುಮಾರ್, ಲೋಹಿತ್ ಗೌಡ, ಮಂಜುನಾಥ್ ಮತ್ತು ಲೋಕಿ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಸದ್ಯ ನಾಪತ್ತೆಯಾಗಿರುವ ಆರು ಜನ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಮುನಿರತ್ನರಿಗೆ ಡಿಎನ್‌ಎ ಟೆಸ್ಟ್‌

ಎಸ್‌ಐಟಿ ಅಧಿಕಾರಿಗಳು ಗುರುವಾರ 42ನೇ ಎಸಿಎಂಎಂ ಕೋರ್ಟ್‌ಗೆ ಶಾಸಕ ಮುನಿರತ್ನರನ್ನು ಹಾಜರು ಪಡಿಸಿದರು. ಇದೆ ವೇಳೆ ಎಸ್‌ಐಟಿ ಅಧಿಕಾರಿಗಳು ಡಿಎನ್‌ಎ ಟೆಸ್ಟ್ ಮಾಡಿಸಲು ಅನುಮತಿ ಕೇಳಿದರು. ಈ ವೇಳೆ ಡಿಎನ್‌ಎ ಪರೀಕ್ಷೆಗೆ ಅನುಮತಿ ನೀಡಿ ನ್ಯಾಯಾಧೀಶರು ಆದೇಶಿಸಿದರು. ಇದಕ್ಕೂ ಮೊದಲು ಪೊಲೀಸರಿಂದ ಏನಾದರೂ ಸಮಸ್ಯೆ ಆಯಿತಾ ಎಂದು ಮುನಿರತ್ನರನ್ನು ನ್ಯಾಯಾಧೀಶರು ಕೇಳಿದರು. ಯಾವುದೇ ಸಮಸ್ಯೆ ಇಲ್ಲ, ಆದರೆ ಇದೊಂದು ಪಿತೂರಿ‌ ಎಂದು ಅಳಲು ತೋಡಿಕೊಂಡರು.

ವೈದ್ಯರೊಂದಿಗೆ ಹಾಜರಾಗಿದ್ದ ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರ ಸಮ್ಮುಖದಲ್ಲಿ ಮುನಿರತ್ನರ ರಕ್ತದ ಮಾದರಿ ಸಂಗ್ರಹ ಮಾಡಲು ಮುಂದಾದರು. ಈ ವೇಳೆ ಮುನಿರತ್ನ ತಮ್ಮ ವಕೀಲರು ಬರಬೇಕು. ಅವರ ಮುಂದೆ ಸ್ಯಾಂಪಲ್ಸ್ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದರು. ಮನವಿಯನ್ನ ಪುರಸ್ಕರಿಸಿ ವಕೀಲರು ಬಂದ ಮೇಲೆ ಸ್ಯಾಂಪಲ್ಸ್ ತೆಗೆದುಕೊಳ್ಳಲು ಎಸ್ಐಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಕ್ತದ ಮಾದರಿ ಸಂಗ್ರಹಿಸುವ ಸಂಬಂಧ ಮುನಿರತ್ನ ಪರ ವಕೀಲ ಅಶೋಕ್ ಹಾರನಹಳ್ಳಿ ವಾದ ಮಂಡಿಸಿದರು. ರಾಜ್ಯದಲ್ಲಿ ಕೆಲವೊಂದು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ರಕ್ತದ ಮಾದರಿ ಸಂಗ್ರಹಿಸಲು ನಮ್ಮದು ಅಭ್ಯಂತರ ಇಲ್ಲ. ಆದರೆ ಯಾವ ಕಾರಣಕ್ಕಾಗಿ ಬ್ಲಡ್ ಸ್ಯಾಂಪಲ್ಸ್ ತೆಗೆದುಕೊಳ್ಳುತ್ತಿದ್ದಾರೆ ಎಂಬ ಕಾರಣ ಬೇಕು. ಘಟನೆ ನಡೆದು ವರ್ಷಗಳೆ ಕಳೆದಿದೆ. ಎಫ್ಎಸ್‌ಎಲ್‌ಗೆ ರವಾನೆ ಮಾಡಲು ಬ್ಲಡ್ ಸ್ಯಾಂಪಲ್ಸ್ ತೆಗೆದುಕೊಳ್ಳಲಿ. ಸ್ಟೇಟ್ ಏಜೆನ್ಸಿ ಹೊರತು ಪಡಿಸಿ ಸೆಂಟ್ರಲ್ ಏಜೆನ್ಸಿಗೆ ಪರೀಕ್ಷೆ ನಡೆಸಲು ರವಾನಿಸಬೇಕು. ಬ್ಲಡ್ ಸ್ಯಾಂಪಲ್ಸ್ ತೆಗೆದುಕೊಳ್ಳುವ ಮುನ್ನ ನಮ್ಮ ಗಮನಕ್ಕೆ ತರಬೇಕಿತ್ತು ಎಂದು ವಾದಿಸಿದರು.

ಪ್ರಕರಣ ತನಿಖಾ ಹಂತದಲ್ಲಿದೆ. ಅದರಲ್ಲೂ ಆರೋಪಿ ತನಿಖಾ ತಂಡದ ಕಸ್ಟಡಿಯಲ್ಲಿದ್ದಾರೆ. ಆ ಸಂದರ್ಭದಲ್ಲಿ ತನಿಖಾಧಿಕಾರಿಗಳ ಮನವಿಗೆ ಸ್ಪಂದಿಸಿ, ಆದೇಶ ಮಾಡಲಾಗಿದೆ. ನೀವು ಆಕ್ಷೇಪಣೆ ಸಲ್ಲಿಸುವುದಾದರೆ ಸಲ್ಲಿಕೆ ಮಾಡಿ ಎಂದು ಬ್ಲಡ್ ಸ್ಯಾಂಪಲ್ಸ್ ಸಂಗ್ರಹಿಸುವ ಪ್ರಕ್ರಿಯೆಯನ್ನು ನಾಳೆ ಶುಕ್ರವಾರ ಬೆಳಗ್ಗೆಗೆ ಮುಂದೂಡಿ 42ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ. ಮಧ್ಯಾಹ್ನದ ನಂತರ ರಕ್ತದ ಮಾದರಿ ಸಂಗ್ರಹಿಸಲು ವೈದ್ಯರಿಗೆ ಸೂಚನೆ ನೀಡಿದರು.

ಜಾಮೀನು ಅರ್ಜಿ ವಿಚಾರಣೆ ಶುಕ್ರವಾರಕ್ಕೆ ಮುಂದೂಡಿಕೆ

ಶಾಸಕ ಮುನಿರತ್ನ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯು 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಗುರುವಾರ ನಡೆಯಿತು. ಕೋರ್ಟ್‌ ಜಾಮೀನು ಅರ್ಜಿ ವಿಚಾರಣೆ ನಡೆಸಿ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಇಂದು ಗುರುವಾರ (ಅ.3) ಮುನಿರತ್ನ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಮತ್ತೊಂದು ಸುತ್ತಿನ ವಾದ ಮಂಡಿಸಿದರು. ಎಸ್‌ಐಟಿ ಪರ ಎಸ್‌ಪಿಪಿ ಪ್ರದೀಪ್ ಹಾಜರಾಗಿದ್ದರು. ಸೆಕ್ಷನ್ 376(2)n ಸಂಬಂಧಿಸಿದಂತೆ ಹಲವು ಕೋರ್ಟ್ ಆದೇಶಗಳ ಉಲ್ಲೇಖಿಸಿ ಅಶೋಕ್ ಹಾರನಹಳ್ಳಿ ವಾದ ಮಾಡಿದರು. ಎಸ್‌ಪಿಪಿ ವಾದ ಮಂಡಿಸಲು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ನಾಳೆ ಶುಕ್ರವಾರ 2:45ಕ್ಕೆ ವಿಚಾರಣೆ ಮುಂದೂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
karnataka Weather Forecast
ಮಳೆ6 ಗಂಟೆಗಳು ago

Karnataka Weather : ದಕ್ಷಿಣದಿಂದ ಉತ್ತರ ಒಳನಾಡಿನವರೆಗೂ ಗುಡುಗು ಸಹಿತ ವ್ಯಾಪಕ ಮಳೆ ಮುನ್ಸೂಚನೆ

Dina Bhavishya
ಭವಿಷ್ಯ6 ಗಂಟೆಗಳು ago

Dina Bhavishya : ನಂಬಿದ ವ್ಯಕ್ತಿಗಳಿಂದ ಈ ರಾಶಿಯವರು ಮೋಸ ಹೋಗುತ್ತೀರಿ

karnataka Weather Forecast
ಮಳೆ17 ಗಂಟೆಗಳು ago

Karnataka Weather : ಚಿಕ್ಕಮಗಳೂರಿನಲ್ಲಿ ಅಬ್ಬರಿಸುತ್ತಿರುವ ಮಳೆ; ನಾಳೆಗೂ ಭಾರಿ ವರ್ಷಧಾರೆ

Actor Darshan
ಬೆಂಗಳೂರು18 ಗಂಟೆಗಳು ago

Actor Darshan : ನಟ ದರ್ಶನ್‌ ಜಾಮೀನು ಭವಿಷ್ಯ ಅ.14ಕ್ಕೆ ನಿರ್ಧಾರ; ವಾದ-ಪ್ರತಿವಾದ ಆಲಿಸಿ ಆದೇಶ ಕಾಯ್ದಿರಿಸಿದ ಕೋರ್ಟ್‌

Fake journalist arrested for targeting bakeries For money
ಬೆಂಗಳೂರು19 ಗಂಟೆಗಳು ago

Fake journalist : ಜನ ಸಾಮಾನ್ಯರ ಬಳಿ ಸುಲಿಗೆ ಮಾಡುತ್ತಿದ್ದ ನಕಲಿ‌ ಪತ್ರಕರ್ತ ಅರೆಸ್ಟ್‌

Murder case
ತುಮಕೂರು21 ಗಂಟೆಗಳು ago

Murder Case : ಬುದ್ದಿವಾದ ಹೇಳಿದ್ದಕ್ಕೆ ತಾಯಿಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್‌

Ratan Tata missed england's royal honour to take care of sick dogs
ದೇಶ23 ಗಂಟೆಗಳು ago

Ratan Tata : ಕಾಯಿಲೆ ಬಿದ್ದ ನಾಯಿಗಳನ್ನು ನೋಡಿಕೊಳ್ಳಲು ಇಂಗ್ಲೆಂಡ್‌ನ ರಾಯಲ್‌ ಸನ್ಮಾನವನ್ನೇ ಮಿಸ್‌ ಮಾಡಿದ್ದರು ರತನ್‌ ಟಾಟಾ!

Ratan Tata joined the company as an ordinary employee but Why is he the guru of the industry
ದೇಶ23 ಗಂಟೆಗಳು ago

Ratan Tata : ರತನ್‌ ಟಾಟಾ ಕಂಪನಿ ಸೇರಿದ್ದು ಸಾಮಾನ್ಯ ಉದ್ಯೋಗಿಯಾಗಿ! ಉದ್ಯಮ ರಂಗದ ಗುರು ಆಗಿದ್ದೇಗೆ?

Ratan Tata
ದೇಶ24 ಗಂಟೆಗಳು ago

Ratan Tata : ಕೈಗಾರಿಕೋದ್ಯಮದ ರತ್ನ ʻರತನ್‌ ಟಾಟಾʼ ಇನ್ನಿಲ್ಲ; ಖ್ಯಾತ ಉದ್ಯಮಿಯ ನಿಧನಕ್ಕೆ ಗಣ್ಯರ ಸಂತಾಪ

Why Ratan Tata didn't get married
ದೇಶ1 ದಿನ ago

Ratan Tata: ರತನ್ ಟಾಟಾ ಯಾಕೆ ಮದ್ವೆ ಆಗಲಿಲ್ಲ! ತಮ್ಮ ಪ್ರೀತಿಯ ಕತೆ ಬಗ್ಗೆ ಹೇಳಿದ್ದೇನು?

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ1 ವಾರ ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌