ಬೆಂಗಳೂರು: ಜಾತಿನಿಂದನೆ ಹಾಗೂ ಜೀವ ಬೆದರಿಕೆ ಆರೋಪದಲ್ಲಿ ಸಿಲುಕಿರುವ ಮಾಜಿ ಸಚಿವ ಕಂ ಶಾಸಕ ಮುನಿರತ್ನ (MLA Muniratna)ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಈ ಮಧ್ಯೆ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಸಂಕಷ್ಟ ಎದುರಾಗಿದ್ದು, ಪ್ರಕರಣ ದಾಖಲಾಗಿದೆ. ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಎಫ್‌ಐಆರ್‌ನಲ್ಲಿನ ಅಂಶಗಳು ಏನೇನು?
1)ಕೋವಿಡ್ ಸಮಯದಲ್ಲಿ ನನ್ನ ಸೇವೆ ಗುರುತಿಸಿ ಕರೆ ಮಾಡಿದ್ದ ಮುನಿರತ್ನ
2) ನಮಸ್ತೆ ಲೀಡರ್ ನಾನು ನಿಮ್ಮ ಭಾಗದ ಶಾಸಕ ನನ್ನನ್ನು ಬಂದು ಕರೆ ಮಾಡಿ ಎಂದಿದ್ದ ಮುನಿರತ್ನ
3) ಅದರಂತೆ ಭೇಟಿ ಬಳಿಕ ಇಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು.
4) ಆಗಾಗ ವೀಡಿಯೊ ಕಾಲ್ ಮೂಲಕ ಮಾತನಾಡುತ್ತಿದ್ದರು.
5) ಈ ವೇಳೆ ನಗ್ನವಾಗಿ ಕರೆ ಮಾಡುವಂತೆ ಒತ್ತಾಯಿಸಿದಾಗ ನಾನು ನಿರಾಕರಿಸಿದ್ದೆ.
6) ಸ್ಪಾಟ್‌ವೊಂದಕ್ಕೆ ಬರೋದಕ್ಕೆ ಹೇಳಿ ನಿನ್ನ ನೋಡಿದರೆ ಮೈ ಜುಮ್ ಎನಿಸುತ್ತೆ ಎಂದೇಳಿ ತಬ್ಬಿಕೊಳ್ಳಲು ಮುಂದಾದರು.
7) ನಾನು ಆಕ್ಷೇಪಿಸಿದಾಗ ರಾಜಕೀಯಕ್ಕೆ ಬರಬೇಕಾದರೆ ಇದೆಲ್ಲಾ ಕಾಮನ್ ಎಂದರು.
8) ನಾನು ಕಿರುಚಿಕೊಳ್ಳುತ್ತೇನೆ ಎಂದಾಗ ಶಾಸಕನಿದ್ದೇನೆ ಅಪಾರ ಜನಬೆಂಬಲವಿದೆ ಸುಮ್ಮನಿದ್ದರೆ ಸರಿ , ಇಲ್ಲವಾದರೆ ನಿನ್ನ ವಿರುದ್ಧವೇ ಕಂಪ್ಲೆಂಟ್ ನೀಡುತ್ತೇನೆ ಎಂದು ಹೆದರಿಸಿ ಅತ್ಯಾಚಾರ ಎಸಗಿದರು.
9) ಅತ್ಯಾಚಾರದ ಬಳಿಕ ಈ ರೂಂನಲ್ಲಿ ಸೀಕ್ರೆಟ್ ವೀಡಿಯೊ ರೆಕಾರ್ಡರ್ ಇಟ್ಟಿದ್ದು, ಎಲ್ಲಾ ದೃಶ್ಯಗಳು ಸೆರೆಯಾಗಿದ್ದು , ನಿನ್ನ ವೀಡಿಯೊ ಎಡಿಟ್ ಮಾಡಿ ಹಂಚುತ್ತೇನೆ. ಹೇಳಿದಂತೆ ಕೇಳಬೇಕು ಅಂತಾ ಹನಿಟ್ರ್ಯಾಪ್ ಮಾಡುವಂತೆ ಹೇಳಿ ಬಳಸಿಕೊಂಡರು.
10) ಜತೆಗೆ ಚಿತ್ರೀಕರಿಸಿದ ವಿಡಿಯೊಗಳನ್ನು ಟಿವಿಯಲ್ಲಿ ಹಾಕಿ ನನಗೆ ತೋರಿಸಿದ್ದಾರೆ.
11) ಇದೇ ವಿಡಿಯೊ ಇಟ್ಕೊಂಡು 2020 ರಿಂದ 2022 ರ ಅವಧಿಯಲ್ಲಿ ನಿರಂತರ ಅತ್ಯಾಚಾರ ನಡೆಸಿದ್ದಾರೆ. ಇದೇ ವೇಳೆ ಹನಿಟ್ರ್ಯಾಪ್‌ಗು ಬಳಕೆ ಮಾಡಿಕೊಂಡಿದ್ದಾರೆ.
12) ಹೇಳಿದಂತೆ ಕೇಳಲಿಲ್ಲ ಅಂದರೆ ಗಂಡ ಮತ್ತು ಮಕ್ಕಳಿಗೆ ವಿಡಿಯೊ ತೋರಿಸೋದಾಗಿ ಬೆದರಿಕೆ ಹಾಕಿದ್ದಾರೆ.
13) ತನಗೆ ಪರಿಚಯ ಇರುವ ಮತ್ತೊಬ್ಬ ಮಹಿಳೆ ಜತೆ ಸೇರಿ ಆತ ಹೇಳಿದವರನ್ನು ಹನಿಟ್ರ್ಯಾಪ್ ಮಾಡಿಸಿದ್ದಾರೆ.
14) ಮರ್ಯಾದೆ ಹಾಗು ಪ್ರಾಣಕ್ಕೆ ಅಂಜಿ ಶಾಸಕ ಮುನಿರತ್ನ ಹೇಳಿದಂತೆ ಕೇಳಿದ್ದೇನೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಯಾವ್ಯಾವ ಸೆಕ್ಷನ್‌ನಡಿ ಕೇಸ್?
354A – ಲೈಂಗಿಕ ದೌರ್ಜನ್ಯ
354C – ಮಹಿಳೆಯರ ಇಚ್ಛೆಗೆ ವಿರುದ್ಧವಾಗಿ ಚಿತ್ರೀಕರಣ
376N(2) – ಸರ್ಕಾರಿ ಸೇವಕನಿಂದ ಅತ್ಯಾಚಾರ
506 – ಜೀವ ಬೆದರಿಕೆ
504 – ಉದ್ದೇಶಪೂರ್ವಕವಾಗಿ ನಿಂದನೆ
120(B) – ಅಪರಾಧಿಕ ಒಳಸಂಚು
149 -ಕಾನೂನು ಬಾಹಿರ ಸಭೆ
406 – ನಂಬಿಕೆ ದ್ರೋಹ
384 – ಸುಲಿಗೆ
308 – ಹತ್ಯೆ ಮಾಡಲು ಪ್ರಯತ್ನ, ಐಟಿ ಆಕ್ಟ್ 66,66e
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ