MLC Election: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ; NDA ಅಭ್ಯರ್ಥಿ ಎ.ಪಿ.ರಂಗನಾಥ್ ನಾಮಪತ್ರ ಸಲ್ಲಿಕೆ - Vistara News

ರಾಜಕೀಯ

MLC Election: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ; NDA ಅಭ್ಯರ್ಥಿ ಎ.ಪಿ.ರಂಗನಾಥ್ ನಾಮಪತ್ರ ಸಲ್ಲಿಕೆ

MLC Election: ವಿಧಾನ ಪರಿಷತ್‌ಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ (NDA) ಅಭ್ಯರ್ಥಿಯಾದ ಎ.ಪಿ.ರಂಗನಾಥ್ ಅವರು ಸೋಮವಾರ (ಜ. 29) ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

VISTARANEWS.COM


on

MLC Election Bangalore Teachers Constituency By election NDA candidate AP Ranganath files nomination
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭೆ ಚುನಾವಣೆಗೆ (Lok sabha Elections 2024) ಇನ್ನು ಕೆಲವೇ ತಿಂಗಳು ಬಾಕಿ ಇದೆ. ರಾಜ್ಯ ರಾಜಕಾರಣ (Karnataka Politics) ರಂಗೇರಿದೆ. ಈ ನಡುವೆ ವಿಧಾನ ಪರಿಷತ್‌ಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ (NDA) ಅಭ್ಯರ್ಥಿಯಾದ ಎ.ಪಿ.ರಂಗನಾಥ್ ಅವರು ಸೋಮವಾರ (ಜ. 29) ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ ಅವರು, ಬಿಜೆಪಿ ಹಿರಿಯ ನಾಯಕರು ಹಾಗೂ ಮಾಜಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು, ಜೆಡಿಎಸ್‌ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ. ದೇವೇಗೌಡ, ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಮಾಜಿ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಎಚ್.ಎಂ.ರಮೇಶ್ ಗೌಡರು ಮಾಜಿ ಮುಖ್ಯಮಂತ್ರಿ ಅವರ ಜತೆಯಲ್ಲಿ ಇದ್ದರು.

ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದ ಬಿಜೆಪಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಬಿಜೆಪಿ – ಜೆಡಿಎಸ್‌ ಮೈತ್ರಿ (BJP JDS Alliance) ಮಾಡಿಕೊಂಡಿದ್ದು, ರಾಜ್ಯದಲ್ಲಿ ಲೋಕ ಸಮರಕ್ಕೆ ಸಜ್ಜಾಗಿದೆ. ಈಗ ಇದಕ್ಕಿಂತ ಮುಂಚಿತವಾಗಿ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ (Bangalore Teachers Constituency) ಫೆ. 16ರಂದು ಉಪ ಚುನಾವಣೆ ನಡೆಯುತ್ತಲಿದೆ. ಇದಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಯಾವ ಪಕ್ಷದವರನ್ನು ಕಣಕ್ಕಿಳಿಸಬೇಕು ಎಂಬ ಬಗ್ಗೆ ಈಚೆಗೆ ಮಾಜಿ ಸಿಎಂಗಳಾದ ಬಿ.ಎಸ್.‌ ಯಡಿಯೂರಪ್ಪ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಸುದೀರ್ಘ ಚರ್ಚೆ ನಡೆದಿತ್ತು. ಕೊನೆಗೆ ಜೆಡಿಎಸ್‌ಗೆ ಬಿಟ್ಟುಕೊಡಲು ರಾಜ್ಯ ಬಿಜೆಪಿ ನಾಯಕರು ಒಪ್ಪಿಕೊಂಡಿದ್ದರು. ಬಳಿಕ ಈ ತೀರ್ಮಾನವನ್ನು ಬಿಜೆಪಿ ಹೈಕಮಾಂಡ್‌ (BJP high command) ಗಮನಕ್ಕೆ ತಂದು ಅಲ್ಲಿಂದಲೂ ಒಪ್ಪಿಗೆ ಪಡೆದುಕೊಂಡಿದ್ದರು.

ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದ್ದ ಬಿ.ಎಸ್.‌ ಯಡಿಯೂರಪ್ಪ

ವಿಧಾನ ಪರಿಷತ್‌ಗೆ ಸೀಮಿತವಾಗಿ ಎಲ್ಲರೂ ಚರ್ಚೆ ಮಾಡಿದ್ದೇವೆ. ಚರ್ಚೆಯ ವಿಚಾರವನ್ನು ದೆಹಲಿಗೆ ತಿಳಿಸುತ್ತೇವೆ. ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಎಂಎಲ್‌ಸಿ ಚುನಾವಣೆ ಬಂದಿದ್ದು, ಒಟ್ಟಾಗಿ ಎದುರಿಸುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಅವರು ಅಂದಿನ ಸಭೆ ಬಳಿಕ ಮಾಧ್ಯಮದವರಿಗೆ ಹೇಳಿದ್ದರು.

ಇದನ್ನೂ ಓದಿ: Hanuman Flag : ಕಾಂಗ್ರೆಸ್‌ ಶಾಸಕ ರವಿ ಗಣಿಗ ಫ್ಲೆಕ್ಸ್‌ ಹರಿದು ಛಿದ್ರಗೊಳಿಸಿದ ಹನುಮ ಭಕ್ತರು

ಮುಂದಿನ ಚುನಾವಣೆಗೆ ಇಲ್ಲಿಂದಲೇ ಸಂದೇಶ ಎಂದು ಹೇಳಿದ್ದ ಎಚ್‌ಡಿಕೆ

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಇಂದು ಯಡಿಯೂರಪ್ಪ ಅವರ ಮನೆಯಲ್ಲಿ ಎರಡೂ ಪಕ್ಷದ ಪ್ರಮುಖ ನಾಯಕರು ಸಭೆ ನಡೆಸಿ ಚರ್ಚೆ ಮಾಡಿದ್ದೇವೆ. ಇದು ಮೊದಲ ಸಭೆಯಾಗಿದ್ದು, ಸಾಕಷ್ಟು ವಿಚಾರಗಳನ್ನು ಚರ್ಚೆ ಮಾಡಿದ್ದೇವೆ. ಶೀಘ್ರದಲ್ಲೇ ವಿಧಾನ ಪರಿಷತ್‌ಗೆ ಬೈ ಎಲೆಕ್ಷನ್ ಇದೆ. ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ಮಾಡಿದ್ದೇವೆ. ಬಿಜೆಪಿ ಹೈಕಮಾಂಡ್‌ಗೆ ಮಾಹಿತಿ ನೀಡುತ್ತೇವೆ. ಮುಂದಿನ ಚುನಾವಣೆಗೆ ಇಲ್ಲಿಂದಲೇ ಸಂದೇಶ ಕೊಡಲಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಒಟ್ಟಾಗಿ ಹೋಗುತ್ತೇವೆ. ರಾಜ್ಯದಲ್ಲಿ ಕೆಟ್ಟ ಸರ್ಕಾರ ಇದೆ. ಅದು ತೊಲಗಬೇಕು ಎಂದು ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Karnataka Assembly Live: ವಿಧಾನ ಮಂಡಲ ಮಳೆಗಾಲದ ಅಧಿವೇಶನ ಆರಂಭ; ಇಲ್ಲಿದೆ ‌ಕ್ಷಣಕ್ಷಣದ ಲೈವ್‌

ವಿಧಾನ ಮಂಡಲದ ಉಭಯ ಸದನಗಳ ಕಲಾಪ (Assembly Session) ಸೋಮವಾರ (ಜುಲೈ 15) ಆರಂಭವಾಗಲಿದ್ದು, ಪ್ರತಿಪಕ್ಷಗಳು ವಿವಿಧ ವಿಚಾರಗಳನ್ನು ಪ್ರಸ್ತಾವಿಸಿ ಸರ್ಕಾರದ ವಿರುದ್ಧ ಮುಗಿಬೀಳಲಿದೆ. ಸಿದ್ದರಾಮಯ್ಯ (CM Siddaramaiah) ಸರ್ಕಾರ ಕೂಡ ನಿನ್ನೆ ಅಧಿಕಾರಿಗಳ ಸಭೆ ನಡೆಸಿ ಪ್ರತ್ಯುತ್ತರ ನೀಡಲು ಸೂಕ್ತ ಸಿದ್ಧತೆ ಮಾಡಿಕೊಂಡಿದೆ. ವಿಧಾನಸಭೆ ಹಾಗೂ ವಿಧಾನ ಪರಿಷತ್‌ ಕಲಾಪಗಳ ಲೈವ್‌ (Karnataka Assembly Live) ವರದಿ ಇಲ್ಲಿದೆ.

VISTARANEWS.COM


on

karnataka assembly live CM Siddaramaiah and Vidhanasoudha
Koo

ಬೆಂಗಳೂರು: ವಿಧಾನ ಮಂಡಲದ ಉಭಯ ಸದನಗಳ ಕಲಾಪ (Assembly Session) ಸೋಮವಾರ (ಜುಲೈ 15) ಆರಂಭವಾಗಲಿದ್ದು, ಒಂಬತ್ತು ದಿನ ನಡೆಯಲಿದೆ. ಆಡಳಿತ ಪಕ್ಷದ ವಿರುದ್ಧ ಸಮರ ಸಾರಲು ಪ್ರತಿಪಕ್ಷಗಳು ಸಜ್ಜಾಗಿವೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಮುಡಾ ಹಗರಣ (MUDA Scam), ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ (Valmiki Corporation Scam), ಬೆಲೆ ಏರಿಕೆ (Price Hike) ಸೇರಿದಂತೆ ವಿವಿಧ ವಿಚಾರಗಳನ್ನು ಪ್ರಸ್ತಾವಿಸಿ ಸರ್ಕಾರದ ವಿರುದ್ಧ ಮುಗಿಬೀಳಲಿದೆ. ಸಿದ್ದರಾಮಯ್ಯ (CM Siddaramaiah) ಸರ್ಕಾರ ಕೂಡ ನಿನ್ನೆ ಅಧಿಕಾರಿಗಳ ಸಭೆ ನಡೆಸಿ ಪ್ರತ್ಯುತ್ತರ ನೀಡಲು ಸೂಕ್ತ ಸಿದ್ಧತೆ ಮಾಡಿಕೊಂಡಿದೆ. ವಿಧಾನಸಭೆ ಹಾಗೂ ವಿಧಾನ ಪರಿಷತ್‌ ಕಲಾಪಗಳ ಲೈವ್‌ (Karnataka Assembly Live) ವರದಿ ಇಲ್ಲಿದೆ.

ಸಮರ ಸಾರಲು ಸಜ್ಜಾಗಿರುವ ಮೈತ್ರಿಕೂಟ

ಸರ್ಕಾರದ ವಿರುದ್ಧ ಮುಗಿಬೀಳಲು ಸಜ್ಜಾಗಿರುವ ಬಿಜೆಪಿ, ಜೆಡಿಎಸ್‌ಗಳು ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣಗಳನ್ನೇ ಪ್ರಮುಖ ಅಸ್ತ್ರವಾಗಿ ಹಿಡಿದು ಸಿಎಂ ಅವರನ್ನು ಟಾರ್ಗೆಟ್ ಮಾಡಲಿವೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ಹಗರಣ ಸರ್ಕಾರಕ್ಕೆ ದೊಡ್ಡ ಮಟ್ಟದ ಮುಜುಗರ ತಂದಿದೆ. ಇದು ಈ ಬಾರಿಯ ಸರ್ಕಾರದ ಮೊದಲ ಬಹು ಕೋಟಿ ಹಗರಣ. ಪ್ರಕರಣ ಸಂಬಂಧ ಮಾಜಿ ಸಚಿವ ನಾಗೇಂದ್ರ ಬಂಧನ ಆಗಿದ್ದು, ಇನ್ನೂ ಹಲವರ ಬಂಧನ ಮಾಡುವ ಸಾಧ್ಯತೆ ಇದೆ. ನಿಗಮದ ಅಧ್ಯಕ್ಷ, ಶಾಸಕ ದದ್ದಲ್ ರಾಜೀನಾಮೆ ನೀಡದಿರುವ ಬಗ್ಗೆ ಪ್ರತಿಪಕ್ಷ ಧ್ವನಿ ಎತ್ತಲಿದೆ.

ಇನ್ನು ಮುಡಾ ಹಗರಣ ನಾಲ್ಕುವರೆ, ಐದು ಸಾವಿರ ಕೋಟಿ ರೂಪಾಯಿಗಳ ಹಗರಣ. ಇಲ್ಲಿ ಸ್ವತಃ ಸಿಎಂ ಕುಟುಂಬದ ಮೇಲೆ ಭ್ರಷ್ಟಾಚಾರ ಆರೋಪವಿದೆ. ನಿಯಮ ಬಾಹಿರವಾಗಿ 14 ಬದಲಿ ನಿವೇಶನ ಪಡೆದಿರುವ, ಇತರೆ ರಾಜಕಾರಣಿಗಳ ವಿರುದ್ಧವೂ ಅಕ್ರಮ ಸೈಟ್ ಪಡೆದಿರುವ ಆರೋಪ ಇದೆ.

ಇನ್ನು SCP-TSP ಹಗರಣದಲ್ಲಿ ಸರ್ಕಾರದ ಗ್ಯಾರಂಟಿಗೆ ದಲಿತರ ಹಣ ಬಳಕೆ ಮಾಡಿದ ಆರೋಪವಿದೆ. ಅಧಿಕಾರಕ್ಕೆ ಬಂದ ಮೂರೇ ತಿಂಗಳಲ್ಲಿ SC, STಗಳಿಗೆ ಮೀಸಲಿಟ್ಟ ಹಣವನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳಲಾಗಿದೆ. ಶಕ್ತಿ ಯೋಜನೆಗೆ ಮೊದಲು 11 ಸಾವಿರ ಕೋಟಿ ಹಣ ದುರ್ಬಳಕೆ, ಎರಡನೇ ಬಾರಿ ಶಕ್ತಿ ಯೋಜನೆಗೆ 14 ಸಾವಿರ ಕೋಟಿ ಹಣ ಬಳಕೆ ಮಾಡಲಾಗಿದೆ ಎನ್ನಲಾಗಿದೆ.

ಎರಡು ಸಾವಿರ ಕೋಟಿ‌ ರೂಪಾಯಿ ಮೊತ್ತದ ಅಪೆಕ್ಸ್ ಬ್ಯಾಂಕ್ ಹಗರಣದಲ್ಲಿ, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿದ್ದಾಗ ಹಾಲಿ ಸಚಿವ ರಾಜಣ್ಣ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಆರೋಪ ಬಂದಿದೆ. ನಿಯಮಬಾಹಿರವಾಗಿ ಸಾಲ ನೀಡಿರುವ ಆರೋಪ, ಬ್ಯಾಂಕ್‌ನಲ್ಲಿ ಠೇವಣಿದಾರ ಅಲ್ಲದವರಿಗೆ, ಸಕ್ಕರೆ ಕಾರ್ಖಾನೆ, ಇತರೆ ಸಂಸ್ಥೆಗಳಿಗೆ ಸಾಲ ನೀಡಿರುವ ಆರೋಪವಿದ್ದು, ಸಚಿವ ಕೆ.ಎನ್ ರಾಜಣ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸುವ ಸಂಭವ ಇದೆ.

ಸರ್ಕಾರದ ಪ್ರತ್ಯುತ್ತರವೇನು?

ಮುಡಾ ಕೇಸ್ ಪ್ರತಿಯಾಗಿ ಸೂಡಾ ಅಕ್ರಮ ಪ್ರಸ್ತಾಪ ಮಾಡಲು ಕಾಂಗ್ರೆಸ್‌ ಪ್ಲಾನ್ ಮಾಡಿಕೊಂಡಿದೆ. ಶಿವಮೊಗ್ಗ ಪ್ರಾಧಿಕಾರದಲ್ಲೂ ಸೈಟ್ ಹಂಚಿಕೆ ಗೋಲ್ ಮಾಲ್ ನಡೆದಿದ್ದು, ಬಿಜೆಪಿ ನಾಯಕರು ಹಾಗೂ ಅವರ ಕುಟುಂಬಸ್ಥರು ಶಾಮೀಲು ಆಗಿರುವ ಬಗ್ಗೆ ಮಾಹಿತಿಯಿದೆ ಎಂದು ಮಾಹಿತಿ ಸಂಗ್ರಹಿಸಲಾಗಿದ್ದು, ಈ‌ ಕುರಿತು ಸದನದಲ್ಲಿ ದಾಖಲೆ ಬಿಡುಗಡೆ ಮಾಡಲು ಚಿಂತಿಸಲಾಗಿದೆ.

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಕಾಲದಲ್ಲಿ ಮುಡಾ ಸೈಟ್ ಹಂಚಿಕೆ ಅಕ್ರಮ ಆಗಿದೆ. 48 ನಿವೇಶನ ಹಂಚಿಕೆಯ ವೇಳೆಯಲ್ಲಿ ಮಾಜಿ ಸಿಎಂ ಹೆಚ್ಡಿಕೆಗೂ 60 ಸಾವಿರ ಅಡಿ ನಿವೇಶನ ನೀಡಲಾಗಿದೆ‌. ಈ ಪ್ರಕರಣವನ್ನ ಸ್ವತಃ ಯಡಿಯೂರಪ್ಪ ಅವರೇ ಪರಿಷತ್ ನಲ್ಲಿ ಪ್ರಸ್ತಾಪ ಮಾಡಿದ್ದರು. ಜೊತೆಗೆ ಅಂದಿನ ಸಭಾಪತಿಗೆ ದಾಖಲೆ ಸಹ ನೀಡಿದ್ದರು ಎಂದು ಪ್ರಸ್ತಾಪ ಮಾಡಲು ಕೈ ಪಡೆ ತಯಾರಿ ನಡೆಸಿದೆ.

ವಾಲ್ಮೀಕಿ ‌ನಿಗಮದ ಅಕ್ರಮದ ಪ್ರತಿಯಾಗಿ ದೇವರಾಜ ಅರಸು ಟ್ರಕ್ ಟರ್ಮಿನಲ್ ಅಕ್ರಮ ಪ್ರಸ್ತಾಪ ಮಾಡಲಾಗುತ್ತಿದೆ. ಬಿಜೆಪಿ ಕಾಲದಲ್ಲಿ ಟ್ರಕ್ ಟರ್ಮಿನಲ್ ‌ನಿಗಮದಲ್ಲಿ‌ 200 ಕೋಟಿಗೂ ಹೆಚ್ಚು ಭ್ರಷ್ಟಾಚಾರ ನಡೆದಿದೆ. ಇದಕ್ಕೆ ಪೂರಕವಾಗಿ ವೀರಯ್ಯ ಬಂಧನವಾಗಿದೆ. ವೀರಯ್ಯ ಬಂಧನ ಪ್ರಸ್ತಾಪ ಮಾಡುವ ಮೂಲಕ ಬಿಜೆಪಿಗೆ ತಿರುಗೇಟು ಕೊಡುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ ಇದೆ. ಜೊತೆಗೆ ಈ ಹಗರಣದಲ್ಲಿ ಮಾಜಿ ಸಿಎಂ ಬೊಮ್ಮಾಯಿ, ಮಾಜಿ ಸಚಿವ ಶ್ರೀರಾಮಲು ಹೆಸರು ಉಲ್ಲೇಖ ಮಾಡುವ ಸಾಧ್ಯತೆಯಿದೆ.

ಇತರ ಆರೋಪಗಳು

ಇನ್ನು ಸರ್ಕಾರದಲ್ಲಿ ನಿರಂತರ ವರ್ಗಾವಣೆ ಮಾಡ್ತಿರುವ ಆರೋಪಗಳಿದ್ದು, ಪದೇ ಪದೆ ವರ್ಗಾವಣೆ ಮಾಡ್ತಿರುವ ಆರೋಪವಿದೆ. ಸ್ವಪಕ್ಷೀಯರೇ ಇದರ ವಿರುದ್ಧ ಧ್ವನಿ ಎತ್ತಿರೋದು ಸರ್ಕಾರಕ್ಕೆ ಮುಜುಗರ ತಂದಿದೆ. ಹೈನುಗಾರಿಕೆ ಮಾಡುವ ರೈತರಿಗೆ ಕಳೆದ ವರ್ಷದಿಂದ ಬೆಂಬಲ ಬೆಲೆ ತಲುಪಿಲ್ಲ. ಹಾಲಿನ ದರ ಹೆಚ್ಚಳ ಮಾಡಿ ಗ್ರಾಹಕರಿಂದ ಹಣ ಪಡೆಯುತ್ತಿರುವ ಸರ್ಕಾರ ರೈತರಿಗೆ ಕಳೆದ ವರ್ಷದಿಂದ ಒಂದು ಸಾವಿರ ಕೋಟಿ ಪ್ರೋತ್ಸಾಹ ದನ ಬಾಕಿ ಉಳಿಸಿಕೊಂಡಿದೆ. ಗ್ಯಾರಂಟಿ ಯೋಜನೆ ಸರಿದೂಗಿಸಲು ಹಲವು ರೀತಿ ದರ ಏರಿಕೆ ಮಾಡಿದೆ. ಪೆಟ್ರೋಲ್, ಡೀಸೆಲ್ ಸೆಸ್ ದರ ಹೆಚ್ಚಳ, ಪ್ರಾಪರ್ಟಿ, ಗೈಡ್ ಲೈನ್ಸ್ ವ್ಯಾಲ್ಯು, ಅಬಕಾರಿ ಸುಂಕ ಹೆಚ್ಚಳ, ಇದರಿಂದ ಇತರೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಾರ್ವಜನಿಕರ ಆಕ್ರೋಶವನ್ನು ಪ್ರತಿಪಕ್ಷಗಳು ಪ್ರಸ್ತಾವಿಸಲಿವೆ.

ಇದನ್ನೂ ಓದಿ: MUDA Scam: ಮುಡಾ ಕೇಸ್ ತನಿಖೆಗೆ ಏಕಸದಸ್ಯ ಆಯೋಗ ರಚಿಸಿದ ರಾಜ್ಯ ಸರ್ಕಾರ; ಅಧಿವೇಶನಕ್ಕೂ ಮುನ್ನವೇ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಯತ್ನ

Continue Reading

ಪ್ರಮುಖ ಸುದ್ದಿ

Assembly Session: ಇಂದಿನಿಂದ ವಿಧಾನ ಮಂಡಲ ಅಧಿವೇಶನ, ರಂಗೇರಲಿರುವ ಕೈ- ಕಮಲ ಕದನ; ಚಕಮಕಿಗೆ ಅಸ್ತ್ರ- ಪ್ರತ್ಯಸ್ತ್ರಗಳು ಸಜ್ಜು

Assembly Session: ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಮುಡಾ (MUDA Scam), ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ (Valmiki Corporation Scam), ಬೆಲೆ ಏರಿಕೆ (Price Hike) ಸೇರಿದಂತೆ ವಿವಿಧ ವಿಚಾರಗಳನ್ನು ಪ್ರಸ್ತಾವಿಸಿ ಸರ್ಕಾರದ ವಿರುದ್ಧ ಮುಗಿಬೀಳಲಿದೆ. ಸಿದ್ದರಾಮಯ್ಯ (CM Siddaramaiah) ಸರ್ಕಾರ ಕೂಡ ನಿನ್ನೆ ಅಧಿಕಾರಿಗಳ ಸಭೆ ನಡೆಸಿ ಪ್ರತ್ಯುತ್ತರ ನೀಡಲು ಸೂಕ್ತ ಸಿದ್ಧತೆ ಮಾಡಿಕೊಂಡಿದೆ.

VISTARANEWS.COM


on

assembly session
Koo

ಬೆಂಗಳೂರು: ವಿಧಾನ ಮಂಡಲದ ಉಭಯ ಸದನಗಳ ಕಲಾಪ (Assembly Session) ಸೋಮವಾರ (ಜುಲೈ 15) ಆರಂಭವಾಗಲಿದ್ದು, ಒಂಬತ್ತು ದಿನ ನಡೆಯಲಿದೆ. ಆಡಳಿತ ಪಕ್ಷದ ವಿರುದ್ಧ ಸಮರ ಸಾರಲು ಪ್ರತಿಪಕ್ಷಗಳು ಸಜ್ಜಾಗಿವೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಮುಡಾ ಹಗರಣ (MUDA Scam), ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ (Valmiki Corporation Scam), ಬೆಲೆ ಏರಿಕೆ (Price Hike) ಸೇರಿದಂತೆ ವಿವಿಧ ವಿಚಾರಗಳನ್ನು ಪ್ರಸ್ತಾವಿಸಿ ಸರ್ಕಾರದ ವಿರುದ್ಧ ಮುಗಿಬೀಳಲಿದೆ. ಸಿದ್ದರಾಮಯ್ಯ (CM Siddaramaiah) ಸರ್ಕಾರ ಕೂಡ ನಿನ್ನೆ ಅಧಿಕಾರಿಗಳ ಸಭೆ ನಡೆಸಿ ಪ್ರತ್ಯುತ್ತರ ನೀಡಲು ಸೂಕ್ತ ಸಿದ್ಧತೆ ಮಾಡಿಕೊಂಡಿದೆ.

ಅಧಿಕಾರಿಗಳ ಸಭೆ

ಅಧಿವೇಶನಕ್ಕೆ ಪೂರ್ವಭಾವಿಯಾಗಿ ನಿನ್ನೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ವಿಧಾನ ಮಂಡಲ ಅಧಿವೇಶನ ಚರ್ಚೆಗೆ ಸಮರ್ಪಕ ಉತ್ತರ ನೀಡಲು ಅಧಿಕಾರಿಗಳಿಗೆ ಸೂಚಿಸಿದರು. ಅಧಿವೇಶನದಲ್ಲಿ ಚರ್ಚೆಯಾಗುವ ವಿಷಯಗಳಿಗೆ ಸಮರ್ಪಕ ಉತ್ತರ ನೀಡಲು ಸಿದ್ಧರಾಗಿರುವಂತೆ, ಅಧಿವೇಶನದಲ್ಲಿ ಖುದ್ದು ಹಾಜರಿದ್ದು ಸಚಿವರಿಗೆ ತಮ್ಮ ಇಲಾಖೆಗಳ ವಿಷಯಗಳ ಕುರಿತ ಮಾಹಿತಿ ಒದಗಿಸಬೇಕು ಎಂದು ಸಿಎಂ ನಿರ್ದೇಶನ ನೀಡಿದರು.

ಸಿಎಂ ನಿನ್ನೆ ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ವಿವಿಧ ಇಲಾಖೆಗಳಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇರುವ ವಿಷಯಗಳ ಕುರಿತು ಇಲಾಖಾ ಕಾರ್ಯದರ್ಶಿಗಳಿಂದ ಮುಖ್ಯಮಂತ್ರಿಗಳು ಸವಿಸ್ತಾರವಾಗಿ ಸಿಎಂ ಮಾಹಿತಿ ಪಡೆದರು. ಚರ್ಚೆಯ ಸಾಧ್ಯತೆ ಇರುವ ವಿಷಯಗಳ ಕುರಿತು ದತ್ತಾಂಶಗಳನ್ನು ಸಂಗ್ರಹಿಸಲು ಸಹ ಸೂಚನೆ ನೀಡಿದರು. ಎಲ್ಲ ಕಾರ್ಯದರ್ಶಿಗಳೂ, ಇಲಾಖಾ ಮುಖ್ಯಸ್ಥರು ಅಧಿವೇಶನದಲ್ಲಿ ಹಾಜರಿರಬೇಕು, ಸಚಿವರಿಗೆ ಸಮರ್ಪಕವಾಗಿ ಮಾಹಿತಿ ನೀಡಬೇಕು. ಆಯಾ ಇಲಾಖಾ ಸಚಿವರು ಚರ್ಚೆಯ ವಿಷಯಗಳಿಗೆ ಉತ್ತರಿಸಬೇಕು, ಅಗತ್ಯವಿದ್ದರೆ ನಾನು ಮಧ್ಯಪ್ರವೇಶಿಸುತ್ತೇನೆ ಎಂದು ತಿಳಿಸಿದರು. ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಹಾಗೂ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಸಮರ ಸಾರಲು ಸಜ್ಜಾಗಿರುವ ಮೈತ್ರಿಕೂಟ

ಸರ್ಕಾರದ ವಿರುದ್ಧ ಮುಗಿಬೀಳಲು ಸಜ್ಜಾಗಿರುವ ಬಿಜೆಪಿ, ಜೆಡಿಎಸ್‌ಗಳು ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣಗಳನ್ನೇ ಪ್ರಮುಖ ಅಸ್ತ್ರವಾಗಿ ಹಿಡಿದು ಸಿಎಂ ಅವರನ್ನು ಟಾರ್ಗೆಟ್ ಮಾಡಲಿವೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ಹಗರಣ ಸರ್ಕಾರಕ್ಕೆ ದೊಡ್ಡ ಮಟ್ಟದ ಮುಜುಗರ ತಂದಿದೆ. ಇದು ಈ ಬಾರಿಯ ಸರ್ಕಾರದ ಮೊದಲ ಬಹು ಕೋಟಿ ಹಗರಣ. ಪ್ರಕರಣ ಸಂಬಂಧ ಮಾಜಿ ಸಚಿವ ನಾಗೇಂದ್ರ ಬಂಧನ ಆಗಿದ್ದು, ಇನ್ನೂ ಹಲವರ ಬಂಧನ ಮಾಡುವ ಸಾಧ್ಯತೆ ಇದೆ. ನಿಗಮದ ಅಧ್ಯಕ್ಷ, ಶಾಸಕ ದದ್ದಲ್ ರಾಜೀನಾಮೆ ನೀಡದಿರುವ ಬಗ್ಗೆ ಪ್ರತಿಪಕ್ಷ ಧ್ವನಿ ಎತ್ತಲಿದೆ.

ಇನ್ನು ಮುಡಾ ಹಗರಣ ನಾಲ್ಕುವರೆ, ಐದು ಸಾವಿರ ಕೋಟಿ ರೂಪಾಯಿಗಳ ಹಗರಣ. ಇಲ್ಲಿ ಸ್ವತಃ ಸಿಎಂ ಕುಟುಂಬದ ಮೇಲೆ ಭ್ರಷ್ಟಾಚಾರ ಆರೋಪವಿದೆ. ನಿಯಮ ಬಾಹಿರವಾಗಿ 14 ಬದಲಿ ನಿವೇಶನ ಪಡೆದಿರುವ, ಇತರೆ ರಾಜಕಾರಣಿಗಳ ವಿರುದ್ಧವೂ ಅಕ್ರಮ ಸೈಟ್ ಪಡೆದಿರುವ ಆರೋಪ ಇದೆ.

ಇನ್ನು SCP-TSP ಹಗರಣದಲ್ಲಿ ಸರ್ಕಾರದ ಗ್ಯಾರಂಟಿಗೆ ದಲಿತರ ಹಣ ಬಳಕೆ ಮಾಡಿದ ಆರೋಪವಿದೆ. ಅಧಿಕಾರಕ್ಕೆ ಬಂದ ಮೂರೇ ತಿಂಗಳಲ್ಲಿ SC, STಗಳಿಗೆ ಮೀಸಲಿಟ್ಟ ಹಣವನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳಲಾಗಿದೆ. ಶಕ್ತಿ ಯೋಜನೆಗೆ ಮೊದಲು 11 ಸಾವಿರ ಕೋಟಿ ಹಣ ದುರ್ಬಳಕೆ, ಎರಡನೇ ಬಾರಿ ಶಕ್ತಿ ಯೋಜನೆಗೆ 14 ಸಾವಿರ ಕೋಟಿ ಹಣ ಬಳಕೆ ಮಾಡಲಾಗಿದೆ ಎನ್ನಲಾಗಿದೆ.

ಎರಡು ಸಾವಿರ ಕೋಟಿ‌ ರೂಪಾಯಿ ಮೊತ್ತದ ಅಪೆಕ್ಸ್ ಬ್ಯಾಂಕ್ ಹಗರಣದಲ್ಲಿ, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿದ್ದಾಗ ಹಾಲಿ ಸಚಿವ ರಾಜಣ್ಣ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಆರೋಪ ಬಂದಿದೆ. ನಿಯಮಬಾಹಿರವಾಗಿ ಸಾಲ ನೀಡಿರುವ ಆರೋಪ, ಬ್ಯಾಂಕ್‌ನಲ್ಲಿ ಠೇವಣಿದಾರ ಅಲ್ಲದವರಿಗೆ, ಸಕ್ಕರೆ ಕಾರ್ಖಾನೆ, ಇತರೆ ಸಂಸ್ಥೆಗಳಿಗೆ ಸಾಲ ನೀಡಿರುವ ಆರೋಪವಿದ್ದು, ಸಚಿವ ಕೆ.ಎನ್ ರಾಜಣ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸುವ ಸಂಭವ ಇದೆ.

ಸರ್ಕಾರದ ಪ್ರತ್ಯುತ್ತರವೇನು?

ಮುಡಾ ಕೇಸ್ ಪ್ರತಿಯಾಗಿ ಸೂಡಾ ಅಕ್ರಮ ಪ್ರಸ್ತಾಪ ಮಾಡಲು ಕಾಂಗ್ರೆಸ್‌ ಪ್ಲಾನ್ ಮಾಡಿಕೊಂಡಿದೆ. ಶಿವಮೊಗ್ಗ ಪ್ರಾಧಿಕಾರದಲ್ಲೂ ಸೈಟ್ ಹಂಚಿಕೆ ಗೋಲ್ ಮಾಲ್ ನಡೆದಿದ್ದು, ಬಿಜೆಪಿ ನಾಯಕರು ಹಾಗೂ ಅವರ ಕುಟುಂಬಸ್ಥರು ಶಾಮೀಲು ಆಗಿರುವ ಬಗ್ಗೆ ಮಾಹಿತಿಯಿದೆ ಎಂದು ಮಾಹಿತಿ ಸಂಗ್ರಹಿಸಲಾಗಿದ್ದು, ಈ‌ ಕುರಿತು ಸದನದಲ್ಲಿ ದಾಖಲೆ ಬಿಡುಗಡೆ ಮಾಡಲು ಚಿಂತಿಸಲಾಗಿದೆ.

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಕಾಲದಲ್ಲಿ ಮುಡಾ ಸೈಟ್ ಹಂಚಿಕೆ ಅಕ್ರಮ ಆಗಿದೆ. 48 ನಿವೇಶನ ಹಂಚಿಕೆಯ ವೇಳೆಯಲ್ಲಿ ಮಾಜಿ ಸಿಎಂ ಹೆಚ್ಡಿಕೆಗೂ 60 ಸಾವಿರ ಅಡಿ ನಿವೇಶನ ನೀಡಲಾಗಿದೆ‌. ಈ ಪ್ರಕರಣವನ್ನ ಸ್ವತಃ ಯಡಿಯೂರಪ್ಪ ಅವರೇ ಪರಿಷತ್ ನಲ್ಲಿ ಪ್ರಸ್ತಾಪ ಮಾಡಿದ್ದರು. ಜೊತೆಗೆ ಅಂದಿನ ಸಭಾಪತಿಗೆ ದಾಖಲೆ ಸಹ ನೀಡಿದ್ದರು ಎಂದು ಪ್ರಸ್ತಾಪ ಮಾಡಲು ಕೈ ಪಡೆ ತಯಾರಿ ನಡೆಸಿದೆ.

ವಾಲ್ಮೀಕಿ ‌ನಿಗಮದ ಅಕ್ರಮದ ಪ್ರತಿಯಾಗಿ ದೇವರಾಜ ಅರಸು ಟ್ರಕ್ ಟರ್ಮಿನಲ್ ಅಕ್ರಮ ಪ್ರಸ್ತಾಪ ಮಾಡಲಾಗುತ್ತಿದೆ. ಬಿಜೆಪಿ ಕಾಲದಲ್ಲಿ ಟ್ರಕ್ ಟರ್ಮಿನಲ್ ‌ನಿಗಮದಲ್ಲಿ‌ 200 ಕೋಟಿಗೂ ಹೆಚ್ಚು ಭ್ರಷ್ಟಾಚಾರ ನಡೆದಿದೆ. ಇದಕ್ಕೆ ಪೂರಕವಾಗಿ ವೀರಯ್ಯ ಬಂಧನವಾಗಿದೆ. ವೀರಯ್ಯ ಬಂಧನ ಪ್ರಸ್ತಾಪ ಮಾಡುವ ಮೂಲಕ ಬಿಜೆಪಿಗೆ ತಿರುಗೇಟು ಕೊಡುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ ಇದೆ. ಜೊತೆಗೆ ಈ ಹಗರಣದಲ್ಲಿ ಮಾಜಿ ಸಿಎಂ ಬೊಮ್ಮಾಯಿ, ಮಾಜಿ ಸಚಿವ ಶ್ರೀರಾಮಲು ಹೆಸರು ಉಲ್ಲೇಖ ಮಾಡುವ ಸಾಧ್ಯತೆಯಿದೆ.

ಇತರ ಆರೋಪಗಳು

ಇನ್ನು ಸರ್ಕಾರದಲ್ಲಿ ನಿರಂತರ ವರ್ಗಾವಣೆ ಮಾಡ್ತಿರುವ ಆರೋಪಗಳಿದ್ದು, ಪದೇ ಪದೆ ವರ್ಗಾವಣೆ ಮಾಡ್ತಿರುವ ಆರೋಪವಿದೆ. ಸ್ವಪಕ್ಷೀಯರೇ ಇದರ ವಿರುದ್ಧ ಧ್ವನಿ ಎತ್ತಿರೋದು ಸರ್ಕಾರಕ್ಕೆ ಮುಜುಗರ ತಂದಿದೆ. ಹೈನುಗಾರಿಕೆ ಮಾಡುವ ರೈತರಿಗೆ ಕಳೆದ ವರ್ಷದಿಂದ ಬೆಂಬಲ ಬೆಲೆ ತಲುಪಿಲ್ಲ. ಹಾಲಿನ ದರ ಹೆಚ್ಚಳ ಮಾಡಿ ಗ್ರಾಹಕರಿಂದ ಹಣ ಪಡೆಯುತ್ತಿರುವ ಸರ್ಕಾರ ರೈತರಿಗೆ ಕಳೆದ ವರ್ಷದಿಂದ ಒಂದು ಸಾವಿರ ಕೋಟಿ ಪ್ರೋತ್ಸಾಹ ದನ ಬಾಕಿ ಉಳಿಸಿಕೊಂಡಿದೆ. ಗ್ಯಾರಂಟಿ ಯೋಜನೆ ಸರಿದೂಗಿಸಲು ಹಲವು ರೀತಿ ದರ ಏರಿಕೆ ಮಾಡಿದೆ. ಪೆಟ್ರೋಲ್, ಡೀಸೆಲ್ ಸೆಸ್ ದರ ಹೆಚ್ಚಳ, ಪ್ರಾಪರ್ಟಿ, ಗೈಡ್ ಲೈನ್ಸ್ ವ್ಯಾಲ್ಯು, ಅಬಕಾರಿ ಸುಂಕ ಹೆಚ್ಚಳ, ಇದರಿಂದ ಇತರೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಾರ್ವಜನಿಕರ ಆಕ್ರೋಶವನ್ನು ಪ್ರತಿಪಕ್ಷಗಳು ಪ್ರಸ್ತಾವಿಸಲಿವೆ.

ಇದನ್ನೂ ಓದಿ: MUDA Scam: ಮುಡಾ ಕೇಸ್ ತನಿಖೆಗೆ ಏಕಸದಸ್ಯ ಆಯೋಗ ರಚಿಸಿದ ರಾಜ್ಯ ಸರ್ಕಾರ; ಅಧಿವೇಶನಕ್ಕೂ ಮುನ್ನವೇ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಯತ್ನ

Continue Reading

ರಾಜಕೀಯ

Suvendu Adhikari: ಉಪಚುನಾವಣೆಯಲ್ಲಿ ಭಾರಿ ವಂಚನೆ? 2 ಲಕ್ಷ ಹಿಂದುಗಳ ವೋಟಿಂಗ್‌ ಹಕ್ಕು ಕಸಿಯಲಾಗಿತ್ತು ಎಂದ ಬಿಜೆಪಿ ನಾಯಕ

Suvendu Adhikari: ಉಪಚುನಾವಣೆ ವೇಳೆ ಸುಮಾರು 2 ಲಕ್ಷ ಹಿಂದುಗಳಿಗೆ ತಮ್ಮ ಹಕ್ಕು ಚಲಾಯಿಸಲು ಅವಕಾಶವನ್ನೇ ನೀಡಲಿಲ್ಲ ಎಂದು ಪಶ್ಚಿಮ ಬಂಗಾಳದ ಪ್ರತಿಪಕ್ಷದ ನಾಯಕ, ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ 13 ಸ್ಥಾನಗಳ ಪೈಕಿ ಪ್ರತಿಪಕ್ಷಗಳ ಇಂಡಿ ಒಕ್ಕೂಟ 10 ಕಡೆ ಗೆದ್ದಿದೆ. ಬಿಜೆಪಿ ಕೇವಲ 2 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಇನ್ನು ಒಂದು ಕಡೆ ಪಕ್ಷೇತರ ಅಭ್ಯರ್ಥಿ ಗೆಲುವಿನ ನಗೆ ಬೀರಿದ್ದಾರೆ.

VISTARANEWS.COM


on

Suvendu Adhikari
Koo

ಕೋಲ್ಕತ್ತಾ: ಜುಲೈ 10ರಂದು 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ (Bypolls Result). ಲೋಕಸಭಾ ಚುನಾವಣೆ (Lok Sabha Election)ಯ ಬಳಿಕ ನಡೆದ ಮೊದಲ ಎಲೆಕ್ಷನ್‌ ಎನ್ನುವ ಕಾರಣಕ್ಕೆ ಇದು ಕುತೂಹಲ ಕೆರಳಿಸಿತ್ತು. 13 ಸ್ಥಾನಗಳ ಪೈಕಿ ಪ್ರತಿಪಕ್ಷಗಳ ಇಂಡಿ ಒಕ್ಕೂಟ 10 ಕಡೆ ಗೆದ್ದು ಪ್ರಬಲ ಪೈಪೋಟಿಯ ಸೂಚನೆ ನೀಡಿದರೆ ಬಿಜೆಪಿ ಕೇವಲ 2 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಇನ್ನು ಒಂದು ಕಡೆ ಪಕ್ಷೇತರ ಅಭ್ಯರ್ಥಿ ಗೆಲುವಿನ ನಗೆ ಬೀರಿದ್ದಾರೆ. ಈ ಬಗ್ಗೆ ಮಾತನಾಡಿದ ಪಶ್ಚಿಮ ಬಂಗಾಳದ ಪ್ರತಿಪಕ್ಷದ ನಾಯಕ, ಬಿಜೆಪಿ ಮುಖಂಡ ಸುವೇಂದು ಅಧಿಕಾರಿ (Suvendu Adhikari), ಉಪಚುನಾವಣೆ ವೇಳೆ ಸುಮಾರು 2 ಲಕ್ಷ ಹಿಂದುಗಳಿಗೆ ತಮ್ಮ ಹಕ್ಕು ಚಲಾಯಿಸಲು ಅವಕಾಶವನ್ನೇ ನೀಡಲಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಲೋಕಸಭಾ ಚುನಾವಣೆಯ ವೇಳೆಯೂ ಸುಮಾರು 50 ಲಕ್ಷ ಹಿಂದುಗಳ ವೋಟಿಂಗ್‌ ಹಕ್ಕು ಕಸಿದುಕೊಳ್ಳಲಾಗಿತ್ತು. ಇದರ ವಿರುದ್ಧ ಕಾನೂನು ಸಮರ ಸಾರುವುದಾಗಿ ಘೋಷಿಸಿದ್ದಾರೆ.

ಸುವೇಂದು ಅಧಿಕಾರಿ ಹೇಳಿದ್ದೇನು?

ʼʼಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವ ಸಂಪೂರ್ಣ ನಾಶವಾಗಿದೆ. ಇದರ ವಿರುದ್ಧ ನಾವು ಹೋರಾಟ ನಡೆಸಲಿದ್ದೇವೆ. ಲೋಕಸಭಾ ಚುನಾವಣೆಯ ವೇಳೆ ಸುಮಾರು 50 ಲಕ್ಷ ಹಿಂದುಗಳಿಗೆ ತಮ್ಮ ಹಕ್ಕನ್ನು ಚಲಾಯಿಸಲು ಅವಕಾಶ ನೀಡಲಿಲ್ಲ. ಇನ್ನು ಇತ್ತೀಚೆಗೆ ನಡೆದ 4 ಕ್ಷೇತ್ರಗಳ ಉಪ ಚುನಾವಣೆಯಲ್ಲಿ 2 ಲಕ್ಷಕ್ಕಿಂತ ಅಧಿಕ ಹಿಂದುಗಳ ಹಕ್ಕನ್ನು ಹತ್ತಿಕ್ಕಲಾಯಿತುʼʼ ಎಂದು ಅವರು ಆರೋಪಿಸಿದ್ದಾರೆ.

ʼʼತಮ್ಮ ವೋಟಿಂಗ್‌ ಹಕ್ಕು ಕಳೆದುಕೊಂಡವರ ದೂರನ್ನು ಸ್ವೀಕರಿಸಲು ನಾನು ಪೋರ್ಟಲ್‌ ಒಂದನ್ನು ಆರಂಭಿಸುತ್ತಿದ್ದೇನೆ. ಮತ ಚಲಾವಣೆಯ ಹಕ್ಕು ನಿರಾಕರಿಸಲ್ಪಟ್ಟವರು ಇದರಲ್ಲಿ ತಮ್ಮ ದೂರನ್ನು ದಾಖಲಿಸಬಹುದು. ಅವರ ಹೆಸರನ್ನು ಸಂಪೂರ್ಣವಾಗಿ ಗೌಪ್ಯವಾಗಿ ಇಡಲಾಗುವುದು. ಯಾವುದೇ ರೀತಿಯ ಭಯ ಬೇಡ. ಜತೆಗೆ ನಾನು ಕಾನೂನು ಹೋರಾಟವನ್ನೂ ಕೈಗೊಳ್ಳಲಿದ್ದೇನೆʼʼ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. ಮಾತ್ರವಲ್ಲ ಅವರು ರಾಜಭವನದ ಮುಂದೆ ಪ್ರತಿಭಟನೆಯನ್ನೂ ನಡೆಸಿದ್ದಾರೆ.

ಇದನ್ನೂ ಓದಿ: Bypolls Result: 7 ರಾಜ್ಯಗಳ ಉಪಚುನಾವಣೆಯಲ್ಲಿ ಮುನ್ನಡೆ ಸಾಧಿಸಿದ ಇಂಡಿ ಒಕ್ಕೂಟ; ಬಿಜೆಪಿಗೆ ಮುಖಭಂಗ

ಉಪಚುನಾವಣೆಯ ಫಲಿತಾಂಶ

ಪಶ್ಚಿಮ ಬಂಗಾಳದ ರಾಯ್‌ಗಂಜ್‌, ರಣಘತ್ ದಕ್ಷಿಣ, ಬಾಗ್ಡಾ, ಮತ್ತು ಮಾನಿಕ್ತಾಲಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆದಿತ್ತು. ಈ ಪೈಕಿ ಈ ನಾಲ್ಕೂ ಸೀಟುಗಳಲ್ಲಿ ಆಡಳಿತ ರೂಢ ತೃಣಮೂಲ ಕಾಂಗ್ರೆಸ್‌ (Trinamool Congress)ನ ಅಭ್ಯರ್ಥಿಗಳು ಗೆದ್ದು ಕ್ಲೀನ್‌ ಸ್ವೀಪ್‌ ಸಾಧಿಸಿದ್ದಾರೆ. ವಿಶೇಷ ಎಂದರೆ ಈ ಪೈಕಿ ಮೂರು ಸ್ಥಾನಗಳನ್ನು ಹಿಂದೆ ಬಿಜೆಪಿ ಗೆದ್ದುಕೊಂಡಿತ್ತು. ಇನ್ನು ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ 42 ಕ್ಷೇತ್ರಗಳ ಪೈಕಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ 29 ಕಡೆ ಜಯಭೇರಿ ಬಾರಿಸಿತ್ತು. ಶನಿವಾರ ಬಿಜೆಪಿಯ ಸಂಸದ ಸುಕುಂತ ಮುಜುಂದಾರ್‌ ಕೂಡ ಉಪಚುನಾವಣೆಯಲ್ಲಿ ಮೋಸ ನಡೆದಿದೆ ಎಂದು ದೂರಿದ್ದರು. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದರು.

Continue Reading

ಕರ್ನಾಟಕ

Revenue Officers: ಹೆಚ್ಚು ದೂರುಗಳಿರುವ ಕಂದಾಯ ಅಧಿಕಾರಿಗಳ ಪಟ್ಟಿ ನೀಡುವಂತೆ ಸಚಿವ ಕೃಷ್ಣಭೈರೇಗೌಡ ಸೂಚನೆ

Revenue Officers: ಒಂದೇ ಸ್ಥಳದಲ್ಲಿ ದೀರ್ಘಕಾಲ ಸೇವೆ ಸಲ್ಲಿಸುತ್ತಿರುವ ಕೆಲವು ಅಧಿಕಾರಿಗಳ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ವಿವರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಸೂಚನೆ ನೀಡಿದ್ದಾರೆ.

VISTARANEWS.COM


on

Revenue Officers
Koo

ಬೆಂಗಳೂರು: ಒಂದೇ ಸ್ಥಳದಲ್ಲಿ ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಿರುವ ಹಾಗೂ ಸಾರ್ವಜನಿಕರಿಂದ ಹೆಚ್ಚು ದೂರುಗಳಿರುವ ಕಂದಾಯ ಅಧಿಕಾರಿಗಳ ಪಟ್ಟಿಯನ್ನು (Revenue Officers) ಶೀಘ್ರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ (Krishna Byre Gowda) ಸೂಚಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿಸಿ ಹಂಚಿಕೊಂಡಿರುವ ಸಚಿವರು, ಒಂದೇ ಸ್ಥಳದಲ್ಲಿ ದೀರ್ಘಕಾಲ ಸೇವೆ ಸಲ್ಲಿಸುತ್ತಿರುವ ಕೆಲವು ಅಧಿಕಾರಿಗಳ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬರುತ್ತಿವೆ. ಅಂತಹ ಕಂದಾಯ ಅಧಿಕಾರಿಗಳ ಪಟ್ಟಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Cauvery Dispute: ತಮಿಳುನಾಡಿಗೆ ನಿತ್ಯ 8000 ಕ್ಯುಸೆಕ್ ನೀರು ಬಿಡಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನ

ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆ ಸುತ್ತೋಲೆ

ಒಂದೇ ಸ್ಥಳದಲ್ಲಿ 5ಕ್ಕಿಂತ ಹೆಚ್ಚು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹಾಗೂ ದೂರುಗಳು ದಾಖಲಾಗಿರುವ ಕಂದಾಯ ಅಧಿಕಾರಿಗಳ ವಿವರ ನೀಡುವಂತೆ ಸಿಎಂ ಸೂಚನೆ ಮೇರೆಗೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದರ್‌ ಕುಮಾರ್‌ ಕಟಾರಿಯಾ ಸುತ್ತೋಲೆ ಹೊರಡಿಸಿದ್ದಾರೆ.

ಜುಲೈ 8ರಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳ ಸಭೆ ನಡೆದಿತ್ತು. ಈ ವೇಳೆ ಜನರ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಹಾಗೂ ಜಿಲ್ಲಾ ಮಟ್ಟದಲ್ಲಿ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಯಾಗುವಂತೆ ಸಮನ್ವಯತೆ ಸಾಧಿಸಲು ಅಧೀನ ಅಧಿಕಾರಿ, ಸಿಬ್ಬಂದಿಗೆ ನಿರ್ದೇಶನ ನೀಡುವಂತೆ ಸಿಎಂ ಸೂಚಿಸಿದ್ದರು. ಅಲ್ಲದೆ ಕಚೇರಿಯಲ್ಲಿ ಉತ್ತಮ ಕಾರ್ಯಕ್ಷಮತೆ, ಶಿಸ್ತು ಪಾಲಿಸುವಂತೆ ಕ್ರಮ ವಹಿಸಲು ಮತ್ತು ಒಂದು ವೇಳೆ ಈ ದಿಸೆಯಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿ, ಸಿಬ್ಬಂದಿ ಮೇಲೆ ನಿಯಮಾನುಸಾರ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವಂತೆ ಸಹ ಸೂಚಿಸಿದ್ದರು. ಯಾವುದೇ ಅಧಿಕಾರಿ, ನೌಕರರ ಬಗ್ಗೆ ಅಸಮರ್ಥತೆ ಅಥವಾ ದೂರುಗಳು ಇತ್ಯಾದಿಗಳ ಕಾರಣದಿಂದ ಅವರನ್ನು ವರ್ಗಾವಣೆ ಮಾಡಲು ಅಥವಾ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳಲು ಅಗತ್ಯವಿರುವ ಪ್ರಸ್ತಾವನೆಯನ್ನು ಕಳುಹಿಸುವಂತೆ ಸರ್ಕಾರ ಸೂಚಿಸಿದೆ.

ಇದನ್ನೂ ಓದಿ | Assembly Session: ನಾಳೆಯಿಂದ ಮುಂಗಾರು ಅಧಿವೇಶನ: ಚರ್ಚೆಗೆ ಸಮರ್ಪಕ ಉತ್ತರ ನೀಡಲು ಅಧಿಕಾರಿಗಳಿಗೆ ಸಿಎಂ ಸೂಚನೆ

ಹಲವು ಅಧಿಕಾರಿಗಳು ಮತ್ತು ನೌಕರರು ಒಂದೇ ಕಚೇರಿ ಅಥವಾ ಒಂದೇ ಸ್ಥಳದಲ್ಲಿ ಅವಧಿ ಮೀರಿ ಕೆಲಸ ಮಾಡುತ್ತಿರುವುದು. ಅಲ್ಲದೆ ಇಂತಹ ಹಲವು ಅಧಿಕಾರಿಗಳು, ನೌಕರರುಗಳ ವಿರುದ್ಧ ದೂರುಗಳು ಸಹ ಸ್ವೀಕೃತವಾಗಿರುವುದು ಸರ್ಕಾರದ ಗಮನಕ್ಕೂ ಬಂದಿದೆ. ಆದ್ದರಿಂದ ಒಂದೇ ಹುದ್ದೆ. ಸ್ಥಾನದಲ್ಲಿ ಅಥವಾ ಒಂದೇ ಸ್ಥಳದಲ್ಲಿ 5 ವರ್ಷ ಮೀರಿ ಮುಂದುವರಿದಿದ್ದಲ್ಲಿ ಮತ್ತು ಅಂತಹವರ ವಿರುದ್ಧ ದೂರುಗಳೇನಾದರೂ ಇದ್ದಲ್ಲಿ, ಅವರ ಅಧಿಕಾರಾವಧಿಯ ವಿವರಗಳೊಂದಿಗೆ ವಿವರವಾದ ಪಟ್ಟಿಯನ್ನು ಸರ್ಕಾರಕ್ಕೆ ಕಳುಹಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ರಾಜೇಂದರ್‌ ಕುಮಾರ್‌ ಕಟಾರಿಯಾ ಸೂಚಿಸಿದ್ದಾರೆ.

Continue Reading
Advertisement
Copa America Final
ಕ್ರೀಡೆ3 mins ago

Copa America Final: ದಾಖಲೆಯ ಕೊಪಾ ಅಮೆರಿಕ ಪ್ರಶಸ್ತಿ ಗೆದ್ದ ಅರ್ಜೆಂಟೀನಾ

World Record
ದೇಶ4 mins ago

World Record: ಒಂದೇ ದಿನ ಬರೋಬ್ಬರಿ 11 ಲಕ್ಷ ಗಿಡ ನೆಟ್ಟು ವಿಶ್ವ ದಾಖಲೆ ಬರೆದ ಇಂದೋರ್‌; ದೇಶದ ಸ್ವಚ್ಛ ನಗರಕ್ಕೆ ಇನ್ನೊಂದು ಗರಿ

karnataka Rain
ಮಳೆ7 mins ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

Anant Ambani Wedding AR Rahman Shreya Ghoshal sings wedding reception
ಬಾಲಿವುಡ್13 mins ago

Anant Ambani Wedding: ರಾಧಿಕಾ-ಅನಂತ್ ಅಂಬಾನಿ ಆರತಕ್ಷತೆ; ಮನಸೂರೆಗೊಂಡ ಗಾಯಕಿ ಶ್ರೇಯಾ ಘೋಷಾಲ್, ಎಆರ್ ರೆಹಮಾನ್ ಗಾಯನ!

karnataka assembly live CM Siddaramaiah and Vidhanasoudha
ಪ್ರಮುಖ ಸುದ್ದಿ23 mins ago

Karnataka Assembly Live: ವಿಧಾನ ಮಂಡಲ ಮಳೆಗಾಲದ ಅಧಿವೇಶನ ಆರಂಭ; ಇಲ್ಲಿದೆ ‌ಕ್ಷಣಕ್ಷಣದ ಲೈವ್‌

assault case udupi
ಕ್ರೈಂ35 mins ago

Assault Case: ಆಪದ್ಬಾಂಧವನಲ್ಲ ವಿಕೃತ! ಮಗಳ ಅಶ್ಲೀಲ ವಿಡಿಯೋ ಮಾಡಿದ ಆಸೀಫ್‌ನ ಇನ್ನೊಂದು ವಿಕೃತಿ ಬಯಲು

SBI
ದೇಶ44 mins ago

SBI: ದುಬಾರಿಯಾಗಲಿದೆ ಎಸ್‌ಬಿಐ ಸಾಲ; ಲೆಂಡಿಂಗ್‌ ದರದಲ್ಲಿ ಭಾರೀ ಏರಿಕೆ

Sanju Samson
ಕ್ರೀಡೆ1 hour ago

Sanju Samson: ‘ಔಟ್​ ಆಫ್​ ದಿ ಪಾರ್ಕ್​’​ ಸಿಕ್ಸರ್​ ಬಾರಿಸಿದ ಸಂಜು ಸ್ಯಾಮ್ಸನ್​; ವಿಡಿಯೊ ವೈರಲ್

Job Alert
ಉದ್ಯೋಗ1 hour ago

Job Alert: ಅಂಚೆ ಇಲಾಖೆಯಿಂದ ಗುಡ್‌ನ್ಯೂಸ್‌: 44,228 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ; ಅಪ್ಲೈ ಮಾಡುವ ವಿಧಾನ ಇಲ್ಲಿದೆ

Rakshit Shetty copy right issue Bachelor Party File a complaint
ಸ್ಯಾಂಡಲ್ ವುಡ್1 hour ago

Rakshit Shetty: ರಕ್ಷಿತ್‌ ಶೆಟ್ಟಿಗೆ ತಪ್ಪದ ಸಂಕಷ್ಟ; ಮತ್ತೊಂದು ದೂರು ದಾಖಲು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ7 mins ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ5 hours ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ17 hours ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ19 hours ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ22 hours ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ24 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ2 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ2 days ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

karnataka Rain Effect
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಯಂತಾದ ರಸ್ತೆಯಲ್ಲಿ ಬೈಕ್‌ ಚಲಾಯಿಸಿ ಮುಗ್ಗರಿಸಿ ಬಿದ್ದ ಸವಾರರು; ನಾಳೆಗೂ ರೈನ್‌ ಅಲರ್ಟ್‌

ಟ್ರೆಂಡಿಂಗ್‌