Site icon Vistara News

MLC Election: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ; NDA ಅಭ್ಯರ್ಥಿ ಎ.ಪಿ.ರಂಗನಾಥ್ ನಾಮಪತ್ರ ಸಲ್ಲಿಕೆ

MLC Election Bangalore Teachers Constituency By election NDA candidate AP Ranganath files nomination

ಬೆಂಗಳೂರು: ಲೋಕಸಭೆ ಚುನಾವಣೆಗೆ (Lok sabha Elections 2024) ಇನ್ನು ಕೆಲವೇ ತಿಂಗಳು ಬಾಕಿ ಇದೆ. ರಾಜ್ಯ ರಾಜಕಾರಣ (Karnataka Politics) ರಂಗೇರಿದೆ. ಈ ನಡುವೆ ವಿಧಾನ ಪರಿಷತ್‌ಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ (NDA) ಅಭ್ಯರ್ಥಿಯಾದ ಎ.ಪಿ.ರಂಗನಾಥ್ ಅವರು ಸೋಮವಾರ (ಜ. 29) ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ ಅವರು, ಬಿಜೆಪಿ ಹಿರಿಯ ನಾಯಕರು ಹಾಗೂ ಮಾಜಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು, ಜೆಡಿಎಸ್‌ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ. ದೇವೇಗೌಡ, ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಮಾಜಿ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಎಚ್.ಎಂ.ರಮೇಶ್ ಗೌಡರು ಮಾಜಿ ಮುಖ್ಯಮಂತ್ರಿ ಅವರ ಜತೆಯಲ್ಲಿ ಇದ್ದರು.

ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದ ಬಿಜೆಪಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಬಿಜೆಪಿ – ಜೆಡಿಎಸ್‌ ಮೈತ್ರಿ (BJP JDS Alliance) ಮಾಡಿಕೊಂಡಿದ್ದು, ರಾಜ್ಯದಲ್ಲಿ ಲೋಕ ಸಮರಕ್ಕೆ ಸಜ್ಜಾಗಿದೆ. ಈಗ ಇದಕ್ಕಿಂತ ಮುಂಚಿತವಾಗಿ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ (Bangalore Teachers Constituency) ಫೆ. 16ರಂದು ಉಪ ಚುನಾವಣೆ ನಡೆಯುತ್ತಲಿದೆ. ಇದಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಯಾವ ಪಕ್ಷದವರನ್ನು ಕಣಕ್ಕಿಳಿಸಬೇಕು ಎಂಬ ಬಗ್ಗೆ ಈಚೆಗೆ ಮಾಜಿ ಸಿಎಂಗಳಾದ ಬಿ.ಎಸ್.‌ ಯಡಿಯೂರಪ್ಪ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಸುದೀರ್ಘ ಚರ್ಚೆ ನಡೆದಿತ್ತು. ಕೊನೆಗೆ ಜೆಡಿಎಸ್‌ಗೆ ಬಿಟ್ಟುಕೊಡಲು ರಾಜ್ಯ ಬಿಜೆಪಿ ನಾಯಕರು ಒಪ್ಪಿಕೊಂಡಿದ್ದರು. ಬಳಿಕ ಈ ತೀರ್ಮಾನವನ್ನು ಬಿಜೆಪಿ ಹೈಕಮಾಂಡ್‌ (BJP high command) ಗಮನಕ್ಕೆ ತಂದು ಅಲ್ಲಿಂದಲೂ ಒಪ್ಪಿಗೆ ಪಡೆದುಕೊಂಡಿದ್ದರು.

ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದ್ದ ಬಿ.ಎಸ್.‌ ಯಡಿಯೂರಪ್ಪ

ವಿಧಾನ ಪರಿಷತ್‌ಗೆ ಸೀಮಿತವಾಗಿ ಎಲ್ಲರೂ ಚರ್ಚೆ ಮಾಡಿದ್ದೇವೆ. ಚರ್ಚೆಯ ವಿಚಾರವನ್ನು ದೆಹಲಿಗೆ ತಿಳಿಸುತ್ತೇವೆ. ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಎಂಎಲ್‌ಸಿ ಚುನಾವಣೆ ಬಂದಿದ್ದು, ಒಟ್ಟಾಗಿ ಎದುರಿಸುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಅವರು ಅಂದಿನ ಸಭೆ ಬಳಿಕ ಮಾಧ್ಯಮದವರಿಗೆ ಹೇಳಿದ್ದರು.

ಇದನ್ನೂ ಓದಿ: Hanuman Flag : ಕಾಂಗ್ರೆಸ್‌ ಶಾಸಕ ರವಿ ಗಣಿಗ ಫ್ಲೆಕ್ಸ್‌ ಹರಿದು ಛಿದ್ರಗೊಳಿಸಿದ ಹನುಮ ಭಕ್ತರು

ಮುಂದಿನ ಚುನಾವಣೆಗೆ ಇಲ್ಲಿಂದಲೇ ಸಂದೇಶ ಎಂದು ಹೇಳಿದ್ದ ಎಚ್‌ಡಿಕೆ

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಇಂದು ಯಡಿಯೂರಪ್ಪ ಅವರ ಮನೆಯಲ್ಲಿ ಎರಡೂ ಪಕ್ಷದ ಪ್ರಮುಖ ನಾಯಕರು ಸಭೆ ನಡೆಸಿ ಚರ್ಚೆ ಮಾಡಿದ್ದೇವೆ. ಇದು ಮೊದಲ ಸಭೆಯಾಗಿದ್ದು, ಸಾಕಷ್ಟು ವಿಚಾರಗಳನ್ನು ಚರ್ಚೆ ಮಾಡಿದ್ದೇವೆ. ಶೀಘ್ರದಲ್ಲೇ ವಿಧಾನ ಪರಿಷತ್‌ಗೆ ಬೈ ಎಲೆಕ್ಷನ್ ಇದೆ. ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ಮಾಡಿದ್ದೇವೆ. ಬಿಜೆಪಿ ಹೈಕಮಾಂಡ್‌ಗೆ ಮಾಹಿತಿ ನೀಡುತ್ತೇವೆ. ಮುಂದಿನ ಚುನಾವಣೆಗೆ ಇಲ್ಲಿಂದಲೇ ಸಂದೇಶ ಕೊಡಲಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಒಟ್ಟಾಗಿ ಹೋಗುತ್ತೇವೆ. ರಾಜ್ಯದಲ್ಲಿ ಕೆಟ್ಟ ಸರ್ಕಾರ ಇದೆ. ಅದು ತೊಲಗಬೇಕು ಎಂದು ಹೇಳಿದ್ದರು.

Exit mobile version