Site icon Vistara News

MLC Election: ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್‌ಗೆ ಬೆಂಬಲಿಸಲು ಮಾಜಿ ಸಚಿವ ಎಚ್. ಆಂಜನೇಯ ಮನವಿ

Election campaign meeting for Congress party candidate d t Srinivas in Holalkere

ಹೊಳಲ್ಕೆರೆ: ಶಿಕ್ಷಕರ ಯಾವುದೇ ಸಮಸ್ಯೆ ಪರಿಹರಿಸುವ ಶಕ್ತಿ ನಮ್ಮ ಸರ್ಕಾರಕ್ಕೆ ಇದೆ ಎಂದು ಮಾಜಿ ಸಚಿವ ಎಚ್.ಆಂಜನೇಯ (MLC Election) ತಿಳಿಸಿದರು.

ಪಟ್ಟಣದ ಸ್ನೇಹ ಕಂಪರ್ಟ್‌ನಲ್ಲಿ ಆಯೋಜಿಸಿದ್ದ ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಪರ ಕೈಗೊಂಡ ಪ್ರಚಾರ ಸಭೆಯನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ಶಿಕ್ಷಕರ ಯಾವುದೇ ಸಮಸ್ಯೆ ಪರಿಹರಿಸುವ ಶಕ್ತಿ ನಮ್ಮ ಸರ್ಕಾರಕ್ಕೆ ಇದೆ. ಶಿಕ್ಷಕರು ಚುನಾವಣೆಯಲ್ಲಿ ಸರ್ಕಾರಕ್ಕೆ ಬೆಂಬಲಿಸಬೇಕು. ಅದಕ್ಕೆ ಪ್ರತಿಫಲವಾಗಿ ಸೌಲಭ್ಯಗಳನ್ನು ಕೇಳಿ ಪಡೆದುಕೊಳ್ಳಬೇಕು. ಈ ಬಾರಿ ಶಿಕ್ಷಕರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್‌ ಗೆ ಬೆಂಬಲಿಸಿ, ಗೆಲ್ಲಿಸಿಕೊಂಡು ಬರಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: List of Movies Releasing: ಈ ವಾರ ಬಿಡುಗಡೆಗೆ ಸಜ್ಜಾಗಿವೆ ಈ ಸಾಲು ಸಾಲು ಸಿನಿಮಾಗಳು!

ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಈ ಬಾರಿ ಶಿಕ್ಷಕರು ಕಾಂಗ್ರೆಸ್ ಪಕ್ಷದ ಪರವಾಗಿದ್ದಾರೆ. ಶಿಕ್ಷಕರ ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡದ ವೈ.ಎ.ನಾರಾಯಣಸ್ವಾಮಿ ಅವರನ್ನು ಈ ಬಾರಿ ಸೋಲಿಸಲು ಶಿಕ್ಷಕರು ಈಗಾಗಲೇ ಎಲ್ಲಾ ಕಡೆಯಲ್ಲಿ ಶಪಥ ಮಾಡಿದ್ದಾರೆ ಎಂದರು. ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಮಾತನಾಡಿದರು.

ಇದನ್ನೂ ಓದಿ: Diabetes Management Tips: ಈ ಏಳು ಪಾನೀಯಗಳನ್ನು ಸೇವಿಸಿ, ಮಧುಮೇಹ ನಿಯಂತ್ರಿಸಿ

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹನುಮಂತಪ್ಪ, ಮಾಜಿ ಸಂಸದ ಬಿ.ಎಸ್. ಚಂದ್ರಪ್ಪ, ಹನುಮಲಿ ಷಣ್ಮುಖಪ್ಪ, ಜಿಲ್ಲಾಧ್ಯಕ್ಷ ತಾಜಾಪೀರ್, ಜಿ.ಎಸ್. ಮಂಜುನಾಥ, ಎ. ಚಿತ್ತಪ್ಪ, ತಿರುಮಲಾಪುರದ ವಿಜಿಕುಮಾರ್, ಹಳೇಹಳ್ಳಿ ವೀರಭದ್ರಪ್ಪ, ಉಗಣೆ ಕಟ್ಟೆ ವೆಂಕಟೇಶ್, ಜಿ.ಪಂ. ಸದಸ್ಯರಾದ ಬಿ. ಗಂಗಾಧರ, ಡಿ.ಕೆ. ಶಿವಮೂರ್ತಿ, ಎಂ.ಜಿ. ಲೋಹಿತ್ ಕುಮಾರ್, ಎಸ್.ಜಿ. ರಂಗಸ್ವಾಮಿ, ನರಸಿಂಹಮೂರ್ತಿ, ಕೃಷ್ಣಮೂರ್ತಿ, ಪುರಸಭಾ ಸದಸ್ಯರಾದ ಸೈಯದ್ ಸಜೀಲ್, ಕೆ.ಸಿ. ರಮೇಶ್ ಸೇರಿದಂತೆ ಅನೇಕ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.

Exit mobile version