ರಿಪ್ಪನ್‌ಪೇಟೆ: ವಿಧಾನಪರಿಷತ್‌ನ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳು ಈ ಚುನಾವಣೆಯಲ್ಲಿ (MLC Election) ಗೆಲುವು ಸಾಧಿಸುವುದು ನಿಶ್ಚಿತ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು, ಸರ್ಕಾರಿ ಪ್ರೌಢಶಾಲೆ, ಹಾಗೂ ಮೇರಿ ಮಾತಾ ಪ್ರೌಢಶಾಲೆಗಳಲ್ಲಿ ಗುರುವಾರ ನೈಋತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮತಯಾಚನೆ ನಡೆಸಿ ಅವರು ಮಾತನಾಡಿದರು.
ಇದನ್ನೂ ಓದಿ: Singapore Open: ದ್ವಿತೀಯ ಸುತ್ತಿಗೆ ಆಟ ಮುಗಿಸಿದ ಭಾರತದ ಪಿ.ವಿ.ಸಿಂಧು
ಇದೇ ಜೂನ್ 3 ರಂದು ನಡೆಯುವ ರಾಜ್ಯ ವಿಧಾನಪರಿಷತ್ ಚುನಾವಣೆಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿರುವ ಆಯನೂರು ಮಂಜುನಾಥ್ ಹಾಗೂ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಕೆ.ಕೆ. ಮಂಜುನಾಥ್ ಅವರಿಗೆ ಮೊದಲ ಪ್ರಾಶಸ್ತ್ಯದ ಮತವನ್ನು ನೀಡಿ, ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.
ನೈರುತ್ಯ ಪದವೀಧರ ಕ್ಷೇತ್ರದ ವ್ಯಾಪ್ತಿಯಲ್ಲಿ 85 ಸಾವಿರ ಪದವೀಧರ ಮತದಾರರು ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ 24 ಸಾವಿರ ಮತದಾರರನ್ನು ಹೊಂದಿದ್ದು, ಕಾಂಗ್ರೆಸ್ ಪಕ್ಷದ ಪಕ್ಷದ ಅಭ್ಯರ್ಥಿಗಳು ಹಿರಿಯರು ನೀಡಿರುವ ಜವಾಬ್ದಾರಿಯನ್ನು ಯಾವುದೇ ಕಪ್ಪು ಚುಕ್ಕಿ ಬಾರದಂತೆ ಸಮರ್ಥವಾಗಿ ನಿರ್ವಹಿಸುವ ಮೂಲಕ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದಲ್ಲಿ ಸಮಸ್ಯೆಗಳಿಗೆ ಪರಿಷತ್‌ನಲ್ಲಿ ಧ್ವನಿಯಾಗಿ ಕೆಲಸ ಮಾಡುತ್ತಾರೆ ಎಂದು ತಿಳಿಸಿದರು.
ಇದನ್ನೂ ಓದಿ: Kantara Movie: `ಕಾಂತಾರ ಚಾಪ್ಟರ್ 1’ ಸಿನಿಮಾಗೆ ಖ್ಯಾತ ಮಾಲಿವುಡ್ ನಟ ಎಂಟ್ರಿ!
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಬಂಡಿ ರಾಮಚಂದ್ರ, ಹೊಸನಗರ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ, ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮೀ, ಪಕ್ಷದ ಹಿರಿಯ ಮುಖಂಡರುಗಳಾದ ಕೆರೆಹಳ್ಳಿ ರವಿ, ಫ್ಯಾನ್ಸಿ ರಮೇಶ್, ಮಧುಸೂದನ್, ಜಿ. ಆರ್. ಗೋಪಾಲಕೃಷ್ಣ, ಲೇಖನ, ಅಮೀರ್ ಹಂಜಾ, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.