MLC Election: ಪದವೀಧರರ ಧ್ವನಿಯಾಗಿ ಕಾರ್ಯನಿರ್ವಹಿಸುವೆ: ಡಾ. ಧನಂಜಯ ಸರ್ಜಿ - Vistara News

ರಾಜಕೀಯ

MLC Election: ಪದವೀಧರರ ಧ್ವನಿಯಾಗಿ ಕಾರ್ಯನಿರ್ವಹಿಸುವೆ: ಡಾ. ಧನಂಜಯ ಸರ್ಜಿ

MLC Election: ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಪಕ್ಷದ ಹಿರಿಯರು ಸ್ಪರ್ಧಿಸಲು ಅವಕಾಶ ನೀಡಿದ್ದು, ದೇಶದ ಪ್ರಗತಿಗಾಗಿ ಮತದಾರರು ತಮ್ಮ ಗೆಲುವಿಗೆ ಸಾಕ್ಷಿಯಾಗಲಿದ್ದಾರೆ ಎಂದು ತಿಳಿಸಿದ ನೈರುತ್ಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಅಭ್ಯರ್ಥಿ ಡಾ. ಧನಂಜಯ ಸರ್ಜಿ, ಕೃಷಿ ಕುಟುಂಬದಿಂದ ಬಂದ ನಾನು ಪದವಿ ಹಂತದಲ್ಲಿಯೇ ಪದವೀಧರರ ಸಮಸ್ಯೆಯನ್ನು ಹತ್ತಿರದಿಂದ ಬಲ್ಲವನಾಗಿದ್ದೇನೆ. ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಮೂಲಕ ಪದವೀಧರರ ಧ್ವನಿಯಾಗಿ ಕಾರ್ಯನಿರ್ವಹಿಸುವ ಹಂಬಲವಿದೆ ಎಂದು ಹೇಳಿದ್ದಾರೆ.

VISTARANEWS.COM


on

MLC Election South West Graduate Constituency bjp Candidate Dr Dhananjaya Sarji pressmeet
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸೊರಬ: ನೈರುತ್ಯ ಪದವೀಧರರ ಕ್ಷೇತ್ರದ (MLC Election) ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಪಕ್ಷದ ಹಿರಿಯರು ಸ್ಪರ್ಧಿಸಲು ಅವಕಾಶ ನೀಡಿದ್ದು, ದೇಶದ ಪ್ರಗತಿಗಾಗಿ ಮತದಾರರು ತಮ್ಮ ಗೆಲುವಿಗೆ ಸಾಕ್ಷಿಯಾಗಲಿದ್ದಾರೆ ಎಂದು ನೈರುತ್ಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಅಭ್ಯರ್ಥಿ ಡಾ. ಧನಂಜಯ ಸರ್ಜಿ ತಿಳಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೈದ್ಯಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಕಷ್ಟು ಸೇವೆ ಮಾಡಿದ್ದೇನೆ. ಜತೆಗೆ ಅನೇಕ ಸಂಘ-ಸಂಸ್ಥೆಗಳಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದ ಅನುಭವವಿದೆ. ಕೃಷಿ ಕುಟುಂಬದಿಂದ ಬಂದ ನಾನು ಪದವಿ ಹಂತದಲ್ಲಿಯೇ ಪದವೀಧರರ ಸಮಸ್ಯೆಯನ್ನು ಹತ್ತಿರದಿಂದ ಬಲ್ಲವನಾಗಿದ್ದೇನೆ. ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಮೂಲಕ ಪದವೀಧರರ ಧ್ವನಿಯಾಗಿ ಕಾರ್ಯನಿರ್ವಹಿಸುವ ಹಂಬಲವಿದೆ ಎಂದು ಹೇಳಿದರು.

ಇದನ್ನೂ ಓದಿ: UPSC: ಐಇಎಸ್‌ / ಐಎಸ್‌ಎಸ್‌ಇ 2024 ಪರೀಕ್ಷೆಯ ದಿನಾಂಕ ಪ್ರಕಟ: ಇಲ್ಲಿದೆ ವೇಳಾಪಟ್ಟಿ

ಕಾರ್ಯಕರ್ತರನ್ನೇ ಶಕ್ತಿಯನ್ನಾಗಿಸಿಕೊಂಡಿರುವ ಬಿಜೆಪಿಯಲ್ಲಿ ಸಂಘಟನಾತ್ಮಕವಾಗಿ ಕಾರ್ಯಕರ್ತರು ತಾವೇ ಅಭ್ಯರ್ಥಿ ಎನ್ನುವಂತೆ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ನೈರುತ್ಯ ಪದವೀಧರರ ಕ್ಷೇತ್ರದಲ್ಲಿ ಸುಮಾರು 85 ಸಾವಿರ ಮತದಾರರಿದ್ದು, ಹೆಚ್ಚಿನ ಬಹುಮತದೊಂದಿಗೆ ಗೆಲುವು ಸಾಧಿಸುವ ವಿಶ್ವಾಸವಿದೆ. ದೇಶದ ಉತ್ತಮ ಭವಿಷ್ಯಕ್ಕಾಗಿ ಮತ್ತು ಭದ್ರತೆಗಾಗಿ ಬಿಜೆಪಿಗೆ ಮತ ನೀಡುವಂತೆ ಅವರು ಮನವಿ ಮಾಡಿದರು.

ಮಾಜಿ ಸಚಿವ ಎಸ್. ಕುಮಾರ್ ಬಂಗಾರಪ್ಪ ಮಾತನಾಡಿದರು.

ಇದನ್ನೂ ಓದಿ: Diabetes Management Tips: ಈ ಏಳು ಪಾನೀಯಗಳನ್ನು ಸೇವಿಸಿ, ಮಧುಮೇಹ ನಿಯಂತ್ರಿಸಿ

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್, ಎಚ್.ಎಸ್. ಮಂಜಪ್ಪ, ಬಿಜೆಪಿ ತಾಲೂಕು ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಪುರಸಭೆ ಸದಸ್ಯ ಎಂ.ಡಿ. ಉಮೇಶ್, ಪ್ರಮುಖರಾದ ದೇವೇಂದ್ರಪ್ಪ, ಮಾಲತೇಶ್, ಜಾನಕಪ್ಪ ಒಡೆಯರ್ ಯಲಸಿ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

UGC-NET: ಯುದ್ಧವನ್ನೇ ನಿಲ್ಲಿಸುವ ಸಾಮರ್ಥ್ಯವಿರುವ ಮೋದಿ ಪ್ರಶ್ನೆ ಪತ್ರಿಕೆ ಸೋರಿಕೆ ಯಾಕೆ ತಡೆಯುತ್ತಿಲ್ಲ? ರಾಹುಲ್‌ ಗಾಂಧಿ ವ್ಯಂಗ್ಯ

UGC-NET: ಜೂನ್‌ 18ರಂದು ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನೇ ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಈ ವಿಚಾರವಾಗಿ ಇದೀಗ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ”ಪ್ರಧಾನಿ ಮೋದಿ ಅವರಿಗೆ ರಷ್ಯಾ-ಉಕ್ರೇನ್ ಯುದ್ಧವನ್ನೇ ನಿಲ್ಲಿಸುವ ಸಾಮರ್ಥ್ಯವಿದೆ ಎಂದು ಹೇಳಲಾಗುತ್ತಿದೆ. ಆದರೆ ಕೆಲವು ಕಾರಣಗಳಿಂದಾಗಿ ನರೇಂದ್ರ ಮೋದಿ ಅವರಿಗೆ ಭಾರತದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಅಥವಾ ಅದನ್ನು ನಿಯಂತ್ರಿಸಲು ಅವರು ಬಯಸುತ್ತಿಲ್ಲ” ಎಂದು ದೂರಿದ್ದಾರೆ.

VISTARANEWS.COM


on

UGC-NET
Koo

ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET 2024) ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಪರೀಕ್ಷೆಯನ್ನೇ ರದ್ದುಗೊಳಿಸಬೇಕು ಎಂಬ ಆಗ್ರಹ ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಜೂನ್‌ 18ರಂದು ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನೇ (NET 2024) ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಈ ವಿಚಾರವಾಗಿ ಇದೀಗ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ʼʼಭಾರತ್‌ ಜೋಡೋ ನ್ಯಾಯ ಯಾತ್ರೆ ವೇಳೆಯೇ ಸಾವಿರಾರು ಮಂದಿ ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆ ದೂರು ನೀಡಿದ್ದರು. ಪ್ರಧಾನಿ ಮೋದಿ ಅವರಿಗೆ ರಷ್ಯಾ-ಉಕ್ರೇನ್ ಯುದ್ಧವನ್ನೇ ನಿಲ್ಲಿಸುವ ಸಾಮರ್ಥ್ಯವಿದೆ ಎಂದು ಹೇಳಲಾಗುತ್ತಿದೆ. ಆದರೆ ಕೆಲವು ಕಾರಣಗಳಿಂದಾಗಿ ನರೇಂದ್ರ ಮೋದಿ ಅವರಿಗೆ ಭಾರತದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಅಥವಾ ಅದನ್ನು ನಿಯಂತ್ರಿಸಲು ಅವರು ಬಯಸುತ್ತಿಲ್ಲ” ಎಂದು ರಾಹುಲ್ ಗಾಂಧಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.  “ಶಿಕ್ಷಣ ವ್ಯವಸ್ಥೆಯನ್ನು ಬಿಜೆಪಿಯ ಮಾತೃ ಸಂಸ್ಥೆ ವಶಪಡಿಸಿಕೊಂಡಿದೆ. ಈ ಕಾರಣಕ್ಕೆ ಪ್ರಶ್ನೆ ಪತ್ರಿಕೆ ಸೋರಿಕೆ ನಡೆಯುತ್ತಿದೆ. ಇದು ರಾಷ್ಟ್ರ ವಿರೋಧಿ ಚಟುವಟಿಕೆ” ಎಂದು ಅವರು ಟೀಕಿಸಿದ್ದಾರೆ.

“ಒಂದು ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಇನ್ನೊಂದನ್ನು ರದ್ದುಗೊಳಿಸಲಾಗುತ್ತದೆಯೇ ಅಥವಾ ಇಲ್ಲವೇ ಎಂದು ನಮಗೆ ತಿಳಿದಿಲ್ಲ. ಅದೇನೇ ಇರಲಿ ತಪ್ಪಿತಸ್ಥರನ್ನು ಬಂಧಿಸಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

ನಾಳೆ ದೇಶಾದ್ಯಂತ ಪ್ರತಿಭಟನೆ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET-UG) ಅಕ್ರಮ ನಡೆದಿದ್ದು, ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್‌ ಶುಕ್ರವಾರ (ಜೂನ್‌ 21) ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲಿದೆ. ಈ ಬಗ್ಗೆ ಮಾಹಿತಿ ನೀಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್, “ನೀಟ್ ಪರೀಕ್ಷೆಯಲ್ಲಿನ ಭ್ರಷ್ಟಾಚಾರ ಮತ್ತು ಅಕ್ರಮಗಳು ಮತ್ತು ಎನ್‌ಡಿಎ ಸರ್ಕಾರದ ನಿಷ್ಕೀಯತೆಯನ್ನು ಎತ್ತಿ ತೋರಿಸಿದೆ. ವಿದ್ಯಾರ್ಥಿಗಳ ನ್ಯಾಯಕ್ಕಾಗಿ ಒತ್ತಾಯಿಸಿ ಎಲ್ಲ ಪ್ರದೇಶ ಕಾಂಗ್ರೆಸ್ ಸಮಿತಿಗಳು ಜೂನ್ 21ರಂದು ರಾಜ್ಯ ಪ್ರಧಾನ ಕಚೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಬೇಕು. ಇದರಲ್ಲಿ ಹಿರಿಯ ನಾಯಕರು ಮತ್ತು ಪಕ್ಷದ ಕಾರ್ಯಕರ್ತರು ಭಾಗಿಯಾಗಬೇಕು” ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: NET 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ರದ್ದುಗೊಳಿಸಿದ ಕೇಂದ್ರ ಸರ್ಕಾರ; ಏನಿದು ಕೇಸ್?‌

ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಇನ್ನು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಟ್​ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅವರು, “ನರೇಂದ್ರ ಮೋದಿಯವರೇ, ನೀವು ಪರೀಕ್ಷೆಗಳ ಬಗ್ಗೆ ಸಾಕಷ್ಟು ಚರ್ಚಿಸುತ್ತೀರಿ. ಆದರೆ ನೀವು ಯಾವಾಗ ‘ನೀಟ್ ಪರೀಕ್ಷಾ ಪೇ ಚರ್ಚಾ’ ನಡೆಸುತ್ತೀರಿ? ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಗೊಳಿಸುವ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳ ಉತ್ಸಾಹಕ್ಕೆ ತಣ್ಣೀರೆರಚಿದ್ದೀರಿ. ಇದು ಮೋದಿ ಸರ್ಕಾರದ ದುರಹಂಕಾರದ ಸೋಲು” ಎಂದು ಖರ್ಗೆ ಟೀಕಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

BY Vijayendra: ʼರಣಹೇಡಿ ಕಾಂಗ್ರೆಸ್‌ ಸರ್ಕಾರ…ʼ ವಿಜಯೇಂದ್ರ ಆಕ್ರೋಶ, ಪೆಟ್ರೋಲ್‌ ಬೆಲೆ ಏರಿಕೆ ವಿರೋಧಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

BY Vijayendra: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಬೆಂಗಳೂರು ಘಟಕದಿಂದ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿತ್ತು. ಮಲ್ಲೇಶ್ವರ ಜಗನ್ನಾಥ ಭವನದಿಂದ, ಎಂಜಿ ರಸ್ತೆ ಗಾಂಧಿ ಪ್ರತಿಮೆವರೆಗೂ ನಡೆಯಬೇಕಿತ್ತು. ಸೈಕಲ್‌ ರ್ಯಾಲಿ ವಿಜಯೇಂದ್ರ ನೇತೃತ್ವದಲ್ಲಿ ಆರಂಭವಾಗಿ, ನೂರು ಮೀಟರ್‌ಗಳಲ್ಲಿ ಅದನ್ನು ಪೊಲೀಸರು ತಡೆದಿದ್ದು, ಮುಂದುವರಿಯಲು ಬಿಡಲಿಲ್ಲ.

VISTARANEWS.COM


on

by vijayendra
Koo

ಬೆಂಗಳೂರು: ಪೆಟ್ರೋಲ್-‌ ಡೀಸೆಲ್‌ ಬೆಲೆ ಏರಿಕೆ (Petrol Diesel price hike) ಖಂಡಿಸಿ ಇಂದು ಬೆಳಗ್ಗಿನಿಂದ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಸ್ತೆ ತಡೆ, ಪ್ರತಿಭಟನೆ (BJP protest) ನಡೆಸಿದರು. ಈ ಸಂದರ್ಭದಲ್ಲಿ ಹಲವಾರು ಬಿಜೆಪಿ ನಾಯಕರನ್ನು (BJP leaders) ಬಂಧಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಅವರು ಇದನ್ನು ಖಂಡಿಸಿದ್ದು, “ಬಿಜೆಪಿ ಹೋರಾಟ ಹತ್ತಿಕ್ಕಲು ಪೋಲಿಸ್ ಬಳಸಿಕೊಳ್ಳುತ್ತಿರುವ ರಣಹೇಡಿ ಕಾಂಗ್ರೆಸ್ ಸರ್ಕಾರ” ಎಂದು ಎಕ್ಸ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಬೆಂಗಳೂರು ಘಟಕದಿಂದ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿತ್ತು. ಮಲ್ಲೇಶ್ವರ ಜಗನ್ನಾಥ ಭವನದಿಂದ, ಎಂಜಿ ರಸ್ತೆ ಗಾಂಧಿ ಪ್ರತಿಮೆವರೆಗೂ ನಡೆಯಬೇಕಿತ್ತು. ಸೈಕಲ್‌ ರ್ಯಾಲಿ ವಿಜಯೇಂದ್ರ ನೇತೃತ್ವದಲ್ಲಿ ಆರಂಭವಾಗಿ, ನೂರು ಮೀಟರ್‌ಗಳಲ್ಲಿ ಅದನ್ನು ಪೊಲೀಸರು ತಡೆದಿದ್ದು, ಮುಂದುವರಿಯಲು ಬಿಡಲಿಲ್ಲ. ಶಾಸಕ ಅಶ್ವಥ್ ನಾರಾಯಣ್, ವಿಧಾನಪರಿಷತ್ ಸದಸ್ಯ ಸಿ.ಟಿ ರವಿ, ಛಲವಾದಿ ನಾರಾಯಣಸ್ವಾಮಿ ಮುಂತಾದವರು ರ್ಯಾಲಿಯಲ್ಲಿ ಭಾಗಿಗಳಾಗಿದ್ದರು. ಸೈಕಲ್ ಏರಿ ಹೊರಟ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ತಡೆದು ಬಂಧಿಸಿದರು.

ಇದನ್ನು ಖಂಡಿಸಿ ವಿಜಯೇಂದ್ರ ಟ್ವೀಟ್‌ ಮಾಡಿದ್ದಾರೆ. “ನಾಡಿನ ಜನರ ಮೇಲೆ ದಿನದಿಂದ ದಿನಕ್ಕೆ ಬೆಲೆ ಏರಿಕೆಯ ಬರೆ ಎಳೆಯುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ. ಜನ ವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಿಂದ ವಿಧಾನಸೌಧದವರೆಗೆ ಸೈಕಲ್‌ ಜಾಥಾ ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ಹೋರಾಟಕ್ಕೆ ಬೆದರಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಜಾಥಾ ಆರಂಭಕ್ಕೂ ಮುನ್ನವೇ ಪೊಲೀಸರ ಮೂಲಕ ಬಂಧಿಸಿದ್ದಾರೆ. ಅಧಿಕಾರ ಬಲದಿಂದ ನಮ್ಮ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ. ನಿಮ್ಮ ಸರ್ಕಾರದ ವಿರುದ್ಧ ರಾಜ್ಯದ ಜನಸಾಮಾನ್ಯರ ಸಹನೆಯ ಕಟ್ಟೆಯೊಡೆದು ಅವರು ಬೀದಿಗಿಳಿದು ಹೋರಾಡುವ ದಿನ ದೂರವಿಲ್ಲ. ದಿನಕ್ಕೊಂದು ದರ ಏರಿಕೆಯ ನಿರ್ಧಾರಗಳನ್ನು ಕೈ ಬಿಡುವ ತನಕ ಅಥವಾ ನೀವು ಅಧಿಕಾರ ಬಿಟ್ಟು ತೊಲಗುವ ತನಕ ಬಿಜೆಪಿ ಹೋರಾಟ ಕೊನೆಗಾಣದು” ಎಂದು ವಿಜಯೇಂದ್ರ Xನಲ್ಲಿ ಪೋಸ್ಟ್ ಮಾಡಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ನಾನಾ ಜಿಲ್ಲಾ ಕೇಂದ್ರಗಳಲ್ಲಿ ಕೂಡ ಆಯಾ ಜಿಲ್ಲಾಧ್ಯಕ್ಷರು, ಬಿಜೆಪಿ ಮುಖಂಡರು ಪ್ರತಿಭಟನೆ, ಸೈಕಲ್‌ ರ್ಯಾಲಿ, ರಸ್ತೆ ತಡೆ ನಡೆಸಿದರು.

ಇದನ್ನೂ ಓದಿ: Petrol Diesel Price: ಪೆಟ್ರೋಲ್ ದರ ಹೆಚ್ಚಳ ಆದೇಶ‌ ವಾಪಸ್ ಪಡೆಯದಿದ್ದರೆ ಉಗ್ರ ಪ್ರತಿಭಟನೆ: ವಿಜಯೇಂದ್ರ ಎಚ್ಚರಿಕೆ

Continue Reading

ಕರ್ನಾಟಕ

Channapatna By Election: ಚನ್ನಪಟ್ಟಣದಲ್ಲಿ ಡಿಕೆಶಿ ಎದುರು ಸೈನಿಕ; ಬಿಜೆಪಿಯಿಂದಲಾ, ಜೆಡಿಎಸ್‌ನಿಂದಲಾ?

Channapatna By Election:
ಚನ್ನಪಟ್ಟಣದಲ್ಲಿ ಡಿಕೆ ಶಿವಕುಮಾರ್ ಅಥವಾ ಸಹೋದರ ಡಿಕೆ ಸುರೇಶ್ ಕಾಂಗ್ರೆಸ್‌ನಿಂದ ಅಭ್ಯರ್ಥಿಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಬೊಂಬೆನಾಡಿನಲ್ಲಿ ಬೈ ಎಲೆಕ್ಷನ್ ಜಿದ್ದಾಜಿದ್ದಿನ ಕಾದಾಟದ ಕಣವಾಗುವುದು ಫಿಕ್ಸ್‌ ಆಗಿದೆ. ಈಗ ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ಯಾರೆಂಬ ತೀವ್ರ ಕುತೂಹಲ ಮೂಡಿದೆ.

VISTARANEWS.COM


on

cp yogeshwar dk shivakumar channapatna by election
Koo

ಚನ್ನಪಟ್ಟಣ: ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಅವರು ಕಣಕ್ಕಿಳಿಯುವ ಆಕಾಂಕ್ಷೆ ತೋರಿಸಿರುವ ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ ಉಪ ಚುನಾವಣೆ (Channapatna By Election) ಕಣ ತೀವ್ರ ಕುತೂಹಲ ಕೆರಳಿಸಿದೆ. ಇವರ ಎದುರು ಮೈತ್ರಿ ಅಭ್ಯರ್ಥಿಯಾಗಿ ಸಿ.ಪಿ ಯೋಗೇಶ್ವರ್‌ (CP Yogeshwar) ನಿಲ್ಲುವುದು ಬಹುತೇಕ ಖಚಿತವಾಗಿದ್ದು, ಬಿಜೆಪಿಯಿಂದ (BJP) ನಿಲ್ತಾರಾ ಅಥವಾ ಜೆಡಿಎಸ್‌ನಿಂದಲಾ (JDS) ಎಂಬ ಕುತೂಹಲ ಮೂಡಿದೆ.

ಚನ್ನಪಟ್ಟಣದಲ್ಲಿ ಡಿಕೆ ಶಿವಕುಮಾರ್ ಅಥವಾ ಸಹೋದರ ಡಿಕೆ ಸುರೇಶ್ ಕಾಂಗ್ರೆಸ್‌ನಿಂದ ಅಭ್ಯರ್ಥಿಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಬೊಂಬೆನಾಡಿನಲ್ಲಿ ಬೈ ಎಲೆಕ್ಷನ್ ಜಿದ್ದಾಜಿದ್ದಿನ ಕಾದಾಟದ ಕಣವಾಗುವುದು ಫಿಕ್ಸ್‌ ಆಗಿದೆ. ಈಗ ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ಯಾರೆಂಬ ತೀವ್ರ ಕುತೂಹಲ ಮೂಡಿದೆ.

ಚನ್ನಪಟ್ಟಣದಲ್ಲಿ ʼಸೈನಿಕʼ ಸಿಪಿ ಯೋಗೇಶ್ವರ್ ಮೈತ್ರಿ ಅಭ್ಯರ್ಥಿಯಾಗಿ ಅಖಾಡಕ್ಕೆ ಧುಮುಕುವ ಸಾಧ್ಯತೆ ಹೆಚ್ಚಿದೆ.‌ ಸಿಪಿವೈ ಬಿಜೆಪಿ ಅಭ್ಯರ್ಥಿಯಾಗುವ ಬದಲು ಜೆಡಿಎಸ್ ಅಭ್ಯರ್ಥಿಯಾದರೆ ಹೇಗೆ ಅಂತಲೂ ಚರ್ಚೆ ಶುರುವಾಗಿದೆ. ಯಾಕೆಂದರೆ ಡಿಕೆಶಿ ಎಂಟ್ರಿಯಿಂದ ಕ್ಷೇತ್ರ ʼಕೈʼ ವಶ ಆಗದಂತೆ ತಡೆಯಲು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಈಗ ತಲೆ ಕೆಡಿಸಿಕೊಳ್ಳಬೇಕಾಗಿದೆ.

ಈ ಹಿನ್ನೆಲೆಯಲ್ಲಿ ಒಗ್ಗಟ್ಟಿನಿಂದ ಹೋರಾಟ ಮಾಡಿ ಗೆಲುವು ಸಾಧಿಸಬೇಕಾಗಿದ್ದರೆ, ಯೋಗೇಶ್ವರ್ ಜೆಡಿಎಸ್‌ನಿಂದ ಸ್ಪರ್ಧೆ ಮಾಡಿದರೆ ಗೆಲುವು ಸುಲಭ ಅನ್ನುವ ಲೆಕ್ಕಾಚಾರದಲ್ಲಿ ಹೆಚ್‌ಡಿಕೆ ಇದ್ದಾರೆ. ಇಲ್ಲಿ ಒಕ್ಕಲಿಗ ಮತಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಸಾಂಪ್ರದಾಯಿಕ ಒಕ್ಕಲಿಗ ಮತಗಳು ಜೆಡಿಎಸ್‌ ಪರವಾಗಿವೆ.

ಜೊತೆಗೆ ಚನ್ನಪಟ್ಟಣದಲ್ಲಿ ಸಿಪಿವೈ ತಮ್ಮದೇ ಆದ ಸ್ವತಃ ಶಕ್ತಿಯನ್ನು ಹೊಂದಿದ್ದಾರೆ. ಚನ್ನಪಟ್ಟಣದಲ್ಲಿ ಬಿಜೆಪಿಗೆ ಮತಗಳ ಬೇಸ್ ಇಲ್ಲ. ಇಲ್ಲಿರುವುದು ಯೋಗೇಶ್ವರ್ ಮತಗಳೇ ಆಗಿವೆ. ಕಳೆದ ನಾಲ್ಕು ಬಾರಿ ಬೇರೆ ಬೇರೆ ಚಿಹ್ನೆಗಳಿಂದ ನಿಂತಿದ್ದರೂ ಸಿಪಿವೈ ಗೆದ್ದು ಬಂದಿದ್ದಾರೆ. 1999ರಲ್ಲಿ ಪಕ್ಷೇತರನಾಗಿ, 2004, 2008ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ, 2011ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ, 2013ರಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದಾರೆ.

ಸ್ವಂತ ಶಕ್ತಿಯಿಂದ ಬಿಜೆಪಿ ಮತಗಳನ್ನು ಯೋಗೇಶ್ವರ್ ಪಡೆಯಬಹುದು. ಜೊತೆಗೆ ಜೆಡಿಎಸ್ ಚಿಹ್ನೆಯಿಂದ ಸ್ಪರ್ಧಿಸಿದರೆ ಜೆಡಿಎಸ್ ಮತಗಳನ್ನೂ ಪಡೆಯಬಹುದು. ಜೆಡಿಎಸ್ ಚಿಹ್ನೆಯಿಂದ ಸಿಪಿವೈ ಸ್ಪರ್ಧಿಸಿದರೆ ನಮ್ಮ ಕಾರ್ಯಕರ್ತರು ಪಕ್ಷದ ಪರ ಕೆಲಸ ಮಾಡುತ್ತಾರೆ. ಯಾವುದೇ ಗೊಂದಲವಿಲ್ಲದೇ ಚುನಾವಣೆ ಗೆದ್ದು ಕಾಂಗ್ರೆಸ್‌ಗೆ ಸೋಲಿನ ರುಚಿ ತೋರಿಸಬಹುದು. ಈ ಹಿನ್ನೆಲೆಯಲ್ಲಿ ಸಿಪಿವೈ ಜೆಡಿಎಸ್‌ನಿಂದ ಸ್ಪರ್ಧೆ ಮಾಡಬೇಕು ಎಂಬ ಚಿಂತನೆಯಲ್ಲಿ ಎಚ್‌ಡಿಕೆ ಇದ್ದಾರೆ.

ಆದರೆ ಇದಕ್ಕೆ ಸಿಪಿವೈ ಒಪ್ಪುತ್ತಾರಾ? ಬಿಜೆಪಿ ನಾಯಕರು ಏನ್ ಹೇಳ್ತಾರೆ? ಎಂಬ ಚಿಂತೆಯೂ ಇದೆ. ಚನ್ನಪಟ್ಟಣ ಕ್ಷೇತ್ರ ಇದುವರೆಗೆ ಪಕ್ಷಕ್ಕಿಂತ ವ್ಯಕ್ತಿ ಮುಖ್ಯ ಎನ್ನುವುದನ್ನು ತೋರಿಸಿದೆ. ಯೋಗೇಶ್ವರ್‌ ಇಲ್ಲಿ ಭದ್ರ ಹಿಡಿತ ಸಾಧಿಸಿದ್ದಾರೆ. ಆದರೆ ಡಿಕೆಶಿ ಸ್ಪರ್ಧಿಸಿದರೆ ಇಲ್ಲಿ ಲೆಕ್ಕಾಚಾರ ತಲೆಕೆಳಗಾಗಬಹುದು ಎಂಬ ಆತಂಕವೂ ಇದೆ. 2008ರಲ್ಲಿ ಕಾಂಗ್ರೆಸ್‌ನಿಂದಲೇ ಯೋಗೇಶ್ವರ್ ಗೆದ್ದಿದ್ದು ಬಿಟ್ಟರೆ ಮತ್ತೆ ಕಾಂಗ್ರೆಸ್ ಅಲ್ಲಿ ಮತ್ತೆ ಗೆಲ್ಲಲು ಸಾಧ್ಯವಾಗಿಲ್ಲ. ಈಗ ಡಿಸಿಎಂ ತಮ್ಮ ಶಕ್ತಿ ಹಾಗೂ ಹಣವನ್ನೆಲ್ಲ ಈ ಕ್ಷೇತ್ರದಲ್ಲಿ ತಂದು ಸುರಿಯುವ ಸಾಧ್ಯತೆ ಇರುವುದರಿಂದ ಬಿಜೆಪಿ- ಜೆಡಿಎಸ್‌ ಕೂಡ ತಲೆ ಕೆಡಿಸಿಕೊಳ್ಳಬೇಕಾಗಿದೆ.

ಇದನ್ನೂ ಓದಿ: DK Shivakumar: ಜನ ಒಲವು ತೋರಿದರೆ ಚನ್ನಪಟ್ಟಣದಲ್ಲಿ ಸ್ಪರ್ಧೆ ಎಂದ ಡಿ.ಕೆ. ಶಿವಕುಮಾರ್

Continue Reading

ದೇಶ

Rahul Gandhi: ‘ವೈಟ್‌ ಟಿ ಷರ್ಟ್‌’ ಅಭಿಯಾನ ಆರಂಭಿಸಿದ ರಾಹುಲ್‌ ಗಾಂಧಿ; ಏನಿದರ ವಿಶೇಷತೆ?

Rahul Gandhi: ಕಾಂಗ್ರೆಸ್‌ ನಾಯಕ, ಸಂಸದ ರಾಹುಲ್‌ ಗಾಂಧಿ ಬುಧವಾರ (ಜೂನ್‌ 19) 54ನೇ ಹುಟ್ಟುಹಬ್ಬ ಆಚರಿಸಿಕೊಂಡರು. ಈ ವೇಳೆ ಅವರು ವೈಟ್‌ ಟಿ ಷರ್ಟ್‌ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಹಾಗಾದರೆ ಏನಿದು ಅಭಿಯಾನ? ರಾಹುಲ್‌ ಗಾಂಧಿ ಯಾಕೆ ಯಾವತ್ತು ಬಿಳಿ ಟಿ ಷರ್ಟ್‌ ಅನ್ನು ಧರಿಸುತ್ತಾರೆ? ಮುಂತಾದ ಪ್ರಶ್ನೆಗಳಿಗೆ ಅವರೇ ಉತ್ತರಿಸಿದ್ದಾರೆ.

VISTARANEWS.COM


on

Rahul Gandhi
Koo

ನವದೆಹಲಿ: ಕಾಂಗ್ರೆಸ್‌ ನಾಯಕ, ಸಂಸದ ರಾಹುಲ್‌ ಗಾಂಧಿ (Rahul Gandhi) ಬುಧವಾರ (ಜೂನ್‌ 19) 54ನೇ ಹುಟ್ಟುಹಬ್ಬ ಆಚರಿಸಿಕೊಂಡರು. ಈ ವೇಳೆ ಅವರು ವೈಟ್‌ ಟಿ ಷರ್ಟ್‌ ಅಭಿಯಾನ (‘White T-shirt’ campaign)ಕ್ಕೆ ಚಾಲನೆ ನೀಡಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಹಾಗಾದರೆ ಏನಿದು ಅಭಿಯಾನ? ರಾಹುಲ್‌ ಗಾಂಧಿ ಯಾಕೆ ಯಾವತ್ತು ಬಿಳಿ ಟಿ ಷರ್ಟ್‌ ಅನ್ನು ಧರಿಸುತ್ತಾರೆ? ಈ ಎಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

ʼʼನಾನು ಯಾವಾಗಲೂ ‘ಬಿಳಿ ಟಿ ಷರ್ಟ್’ ಏಕೆ ಧರಿಸುತ್ತೇನೆ ಎಂದು ಹಲವರು ಆಗಾಗ್ಗೆ ಕೇಳುತ್ತಾರೆ. ಈ ಬಿಳಿ ಟಿ ಷರ್ಟ್ ಪಾರದರ್ಶಕತೆ, ದೃಢತೆ ಮತ್ತು ಸರಳತೆಯನ್ನು ಸಂಕೇತಿಸುತ್ತದೆ. ಈ ಮೌಲ್ಯಗಳು ನಿಮ್ಮ ಜೀವನದಲ್ಲಿ ಎಲ್ಲಿ ಮತ್ತು ಎಷ್ಟು ಉಪಯುಕ್ತವಾಗಿವೆ? #WhiteTshirtArmy ಹ್ಯಾಶ್‌ ಟ್ಯಾಗ್‌ ಬಳಸಿ ವಿಡಿಯೊ ಮೂಲಕ ನನಗೆ ತಿಳಿಸಿ. ನಾನು ನಿಮಗೆ ಬಿಳಿ ಟಿ ಷರ್ಟ್ ಅನ್ನು ಉಡುಗೊರೆಯಾಗಿ ನೀಡುತ್ತೇನೆʼʼ ಎಂದು ಅವರು ಬರೆದುಕೊಂಡಿದ್ದಾರೆ.

ಹುಟ್ಟುಹಬ್ಬದ ಸಂದರ್ಭದಲ್ಲಿ ರಾಹುಲ್‌ ಗಾಂಧಿ ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ದೆಹಲಿಯ ಕಾಂಗ್ರೆಸ್‌ ಕಚೇರಿಗೆ ಭೇಟಿ ನೀಡಿದರು. ದೆಹಲಿಯ 10 ಜನಪಥ್ (ಸೋನಿಯಾ ಗಾಂಧಿ ಅವರ ನಿವಾಸ) ಮತ್ತು ಪಕ್ಷದ ಪ್ರಧಾನ ಕಚೇರಿಯ ಸುತ್ತಲೂ ರಾಹುಲ್ ಗಾಂಧಿ ಅವರಿಗೆ ಜನ್ಮದಿನದ ಶುಭಾಶಯ ಕೋರುವ ಹೋರ್ಡಿಂಗ್‌ ಮತ್ತು ಬ್ಯಾನರ್‌ಗಳನ್ನು ಅಳವಡಿಸಲಾಗಿದೆ.

1970ರ ಜೂನ್ 19ರಂದು ಜನಿಸಿದ ರಾಹುಲ್ ಗಾಂಧಿ ಐದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಈ ಲೋಕಸಭಾ ಚುನಾವಣೆಯಲ್ಲಿ ಅವರು ಕೇರಳದ ವಯನಾಡು ಮತ್ತು ಉತ್ತರ ಪ್ರದೇಶದ ರಾಯ್‌ ಬರೇಲಿಯಿಂದ ಸ್ಪರ್ಧಿಸಿ ಎರಡೂ ಕಡೆ 3 ಲಕ್ಷಕ್ಕಿಂತ ಅಧಿಕ ಮತಗಳಿಂದ ಜಯ ಗಳಿಸಿದ್ದಾರೆ. 2019ರಲ್ಲಿ ಉತ್ತರ ಪ್ರದೇಶದ ಅಮೇಥಿ ಮತ್ತು ವಯನಾಡಿನಲ್ಲಿ ಸ್ಪರ್ಧಿಸಿದ್ದ ಅವರು ಅಮೇಥಿಯಲ್ಲಿ ಬಿಜೆಪಿಯ ಸ್ಲೃತಿ ಇರಾನಿ ವಿರುದ್ಧ ಸೋತಿದ್ದರು.

ವಯನಾಡು ಕ್ಷೇತ್ರವನ್ನು ಸಹೋದರಿಗೆ ಬಿಟ್ಟುಕೊಟ್ಟ ರಾಹುಲ್‌ ಗಾಂಧಿ

ಎರಡು ಕಡೆ ಗೆದ್ದಿರುವ ರಾಹುಲ್‌ ಗಾಂಧಿ ನಿಯಮ ಪ್ರಕಾರ ಒಂದು ಸ್ಥಾನವನ್ನು ಬಿಟ್ಟು ಕೊಡಬೇಕಿದೆ. ಇದೀಗ ಅವರು ರಾಯ್‌ ಬರೇಲಿಯನ್ನು ಉಳಿಸಿಕೊಂಡು ವಯನಾಡು ಕ್ಷೇತ್ರವನ್ನು ತ್ಯಜಿಸಲು ನಿರ್ಧರಿಸಿದ್ದಾರೆ. ಈ ಸ್ಥಾನದಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ. ಹಲವು ವರ್ಷಗಳಿಂದ ರಾಜಕೀಯದಲ್ಲಿ ಸಕ್ರಿಯರಾಗಿರುವ ಪ್ರಿಯಾಂಕಾ ಗಾಂಧಿ ಇದೇ ಮೊದಲ ಬಾರಿ ಕಣಕ್ಕಿಳಿಯಲಿದ್ದು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ನಾನು ವಯನಾಡಿನ ಜನತೆ ಜತೆ ಕಳೆದ ಐದು ವರ್ಷಗಳಿಂದ ಭಾವನಾತ್ಮಕ ಸಂಬಂಧ ಹೊಂದಿದ್ದೇನೆ. ಕಳೆದ ಐದು ವರ್ಷಗಳಿಂದ ವಯನಾಡು ಸಂಸದನಾಗಿದ್ದ ನನಗೆ ಅಲ್ಲಿನ ಜನ ತೋರಿಸಿದ ಪ್ರೀತಿ, ಬೆಂಬಲ ಅಪಾರವಾದುದು. ಈಗ ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ವಾದ್ರಾ ಅವರು ಸ್ಪರ್ಧಿಸಲಿದ್ದಾರೆ. ನಾನು ಕೂಡ ವಯನಾಡಿಗೆ ಆಗಾಗ ಭೇಟಿ ನೀಡುತ್ತಿರುತ್ತೇನೆ. ಇನ್ನು ವಯನಾಡಿಗೆ ಇಬ್ಬರು ಸಂಸದರು ಇರಲಿದ್ದಾರೆ” ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: Rahul Gandhi: ರಾಯ್‌ಬರೇಲಿಯನ್ನೇ ಆಯ್ಕೆ ಮಾಡಿಕೊಂಡ ರಾಹುಲ್‌ ಗಾಂಧಿ; ವಯನಾಡಿನಲ್ಲಿ ಪ್ರಿಯಾಂಕಾ ಸ್ಪರ್ಧೆ!

Continue Reading
Advertisement
IRCTC Ticket Booking
Latest5 mins ago

IRCTC Ticket Booking: ರೈಲ್ವೆ ಟಿಕೆಟ್ ಈ ರೀತಿ ಬುಕ್ ಮಾಡಿದರೆ ಜೈಲೂಟ ಗ್ಯಾರಂಟಿ!

Viral Video
Latest8 mins ago

Viral Video : ಇನ್‌ಸ್ಟಾಗ್ರಾಂ ರೀಲ್ಸ್ ಕ್ರೇಜ್‌; ಪಾಳುಬಿದ್ದ ಕಟ್ಟಡದ ಮೇಲಿಂದ ನೇತಾಡಿದ ಹುಡುಗಿ!

Israel-Hamas Conflict
ವಿದೇಶ13 mins ago

Israel-Hamas Conflict: ಇಸ್ರೇಲ್‌ ಏರ್‌ಸ್ಟ್ರೈಕ್- ಹಮಾಸ್‌ ಕಮಾಂಡರ್‌ ಹತ್ಯೆ

Actor Darshan case sanjana galrani Reaction about ramya statement
ಸ್ಯಾಂಡಲ್ ವುಡ್41 mins ago

Actor Darshan: ದರ್ಶನ್‌ಗೆ ಗಲ್ಲು ಶಿಕ್ಷೆ ಆಗಬೇಕು ಎಂದ ರಮ್ಯಾಗೆ ಕೌಂಟರ್‌ ಕೊಟ್ಟ ಸಂಜನಾ ಗಲ್ರಾನಿ!

Liquor Price Karnataka
ಪ್ರಮುಖ ಸುದ್ದಿ48 mins ago

Liquor Price Karnataka: ಮದ್ಯ ಪ್ರಿಯರಿಗೆ ಕಿಕ್‌ ಏರಿಸುವ ನ್ಯೂಸ್‌; ಜುಲೈ 1ರಿಂದ ಬೆಲೆ ಇಳಿಕೆ

Pakistan Violence
ವಿದೇಶ1 hour ago

Pakistan Violence: ಕುರಾನ್‌ಗೆ ಅಪಮಾನ; ಪೊಲೀಸ್‌ ಸ್ಟೇಶನ್‌ಗೆ ಬೆಂಕಿ..ಠಾಣೆಯೊಳಗೇ ಆರೋಪಿಯ ಬರ್ಬರ ಕೊಲೆ

Actor Darshan was careful at every step to escape from Renuka case
ಸ್ಯಾಂಡಲ್ ವುಡ್1 hour ago

Actor Darshan: ಕೇಸ್‌ನಿಂದ ತಪ್ಪಿಸಿಕೊಳ್ಳೋಕೆ ಪ್ರತಿ ಹಂತದಲ್ಲೂ ಎಚ್ಚರವಹಿಸಿದ್ದ ದರ್ಶನ್; ಬೇಟೆಯ ಹಿಂದೆ ಭರ್ಜರಿ ಮಾಸ್ಟರ್‌ ಪ್ಲ್ಯಾನ್‌!

pm narendra modi international yoga day 2024
ಪ್ರಮುಖ ಸುದ್ದಿ2 hours ago

International Yoga Day 2024: ಯೋಗ ದಿನಚರಿಯ ಭಾಗವಾಗಲಿ: ಶ್ರೀನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ

Darshan Arrested troll of pavithra darshan in SSE A
ಸ್ಯಾಂಡಲ್ ವುಡ್2 hours ago

Darshan Arrested: ಇದು ʻಸಪ್ತ ಶೆಡ್ಡಿನಾಚೆ SSE side ‘D’! ಟ್ರೋಲ್‌ ಆದ್ರು ದರ್ಶನ್‌-ಪವಿತ್ರಾ!

Pavithra Gowda is restless without proper food and sleep in Parappa Agrahara
ಕ್ರೈಂ2 hours ago

Pavithra Gowda: ಪರಪ್ಪನ ಅಗ್ರಹಾರದಲ್ಲಿ ಸರಿಯಾಗಿ ಊಟ, ನಿದ್ರೆ ಮಾಡದೆ ಚಡಪಡಿಸುತ್ತಿರುವ ಪವಿತ್ರ ಗೌಡ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ16 hours ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು4 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು4 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ5 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ5 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ5 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ6 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ7 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

ಟ್ರೆಂಡಿಂಗ್‌