Site icon Vistara News

MLC Election: ಬಿಜೆಪಿ-ಜೆಡಿಎಸ್‌ ಮೈತ್ರಿ ತಿರಸ್ಕರಿಸಿದ ಮತದಾರ: ಸಿಎಂ ಸಿದ್ದರಾಮಯ್ಯ

Tax on temples and money used for other community Fictitious accusation Says CM Siddaramaiah

ಬೆಂಗಳೂರು: ವಿಧಾನ ಪರಿಷತ್‍ನ (MLC Election) ಬೆಂಗಳೂರು ಶಿಕ್ಷಕರ ಕ್ಷೇತ್ರದ (Bangalore Teachers Constituency) ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ (Congress candidate Puttanna) ಜಯಶಾಲಿಯಾಗಿದ್ದು, ಸಿಎಂ ಸಿದ್ದರಾಮಯ್ಯ (CM Siddaramaiah) ಹರ್ಷ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಬಿಜೆಪಿ ಮತ್ತು ಜೆಡಿಎಸ್ ನಾಯಕರ ನಡುವೆ ಮೈತ್ರಿ (BJP JDS Alliance) ಆಗಿದೆಯೇ ವಿನಃ ಇದಕ್ಕೆ ಮತದಾರರ ಒಪ್ಪಿಗೆ ಇಲ್ಲ ಎಂಬುದನ್ನು ವಿಧಾನ ಪರಿಷತ್ ಉಪ ಚುನಾವಣೆ ಫಲಿತಾಂಶ ಸ್ಪಷ್ಟಪಡಿಸಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಸಿಎಂ ಸಿದ್ದರಾಮಯ್ಯ, “ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ನ ಜಾತ್ಯತೀತ ಮುಖವಾಡ ಕಳಚಿದೆ, ಜೆಡಿಎಸ್‌ನ ಕೋಮುವಾದಿ ಅವತಾರಕ್ಕೆ ಮತದಾರ ಕಪಾಳಮೋಕ್ಷ ಮಾಡಿದ್ದಾನೆ.

ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣನವರಿಗೆ ಅಭಿನಂದನೆಗಳು. ಇದು ನಮ್ಮ ಸರ್ಕಾರದ 9 ತಿಂಗಳ ಜನಪರವಾದ ಆಡಳಿತ ಮತ್ತು ಸರ್ಕಾರದ ಬಗ್ಗೆ ಪ್ರಜ್ಞಾವಂತ ಮತದಾರರು ಇಟ್ಟಿರುವ ವಿಶ್ವಾಸದ ಗೆಲುವಾಗಿದೆ.

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ತಮ್ಮ‌ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಹೊರತಾಗಿಯೂ ಸೋಲು ಕಂಡಿವೆ. ಇದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಕುಮಾರಸ್ವಾಮಿ ಹಾಗೂ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರ ನಡುವಿನ ಮೈತ್ರಿಯೇ ಹೊರತು ಎರಡೂ ಪಕ್ಷಗಳ ಮತದಾರರ ನಡುವಿನ ಮೈತ್ರಿಯಲ್ಲ ಎಂಬುದು ಸಾಬೀತಾಗಿದೆ.

ಕುಟುಂಬದ ಹಿತಕ್ಕಾಗಿ‌ ಕೋಮುವಾದಿಗಳ ಜೊತೆ ಕೈಜೋಡಿಸಿರುವ ಜೆಡಿಎಸ್ ಪಕ್ಷವನ್ನು ಹಾಗೂ ಸದಾಕಾಲ ಕುಟುಂಬ ರಾಜಕಾರಣದ ವಿರುದ್ಧ ಟೀಕೆ ಮಾಡಿ, ಒಂದು ಕುಟುಂಬವೇ ರಾಜಕೀಯ ಪಕ್ಷದಂತಿರುವ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ಬಿಜೆಪಿಯನ್ನು ಮತದಾರ ಬಂಧುಗಳ ಸಾರಾಸಗಟಾಗಿ ತಿರಸ್ಕರಿಸಿದ್ದಾರೆ.

ಸ್ವಾರ್ಥ ಸಾಧನೆಯೊಂದೇ ಗುರಿಯಾಗಿರುವ ಈ ಅಪವಿತ್ರ ಮೈತ್ರಿಗೆ ಗ್ಯಾರಂಟಿ, ವಾರೆಂಟಿ ಯಾವುದೂ ಇಲ್ಲ.
ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿ ಮತ್ತವರ ಕುಟುಂಬ ಕೇಸರಿಶಾಲು ಕಿತ್ತೆಸೆಯುವುದು ನಿಶ್ಚಿತ” ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

1507 ಅಂತರದಲ್ಲಿ ಪುಟ್ಟಣ್ಣ ಗೆಲುವು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ (Congress candidate Puttanna) 1507 ಅಂತರದಲ್ಲಿ ಗೆಲುವು ಕಂಡಿದ್ದಾರೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯು ಫೆ. 17ರಂದು ನಡೆದಿತ್ತು. ಒಟ್ಟಾರೆ ಸುಮಾರು ಶೇ. 86.38ರಷ್ಟು ಮತದಾನವಾಗಿತ್ತು. ಬೆಂಗಳೂರು ನಗರ ಬಿಬಿಎಂಪಿ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಈ ಉಪ ಚುನಾವಣೆಗೆ ಮತದಾನ ನಡೆದಿತ್ತು. ಅಲ್ಲದೆ, ಈ ಬಾರಿ ದಾಖಲೆಯ ಪ್ರಮಾಣದಲ್ಲಿ ಮತದಾನವಾಗಿತ್ತು.

ಬೆಂಗಳೂರು ನಗರ ಜಿಲ್ಲೆಯಲ್ಲಿ ಶೇ.83.97, ಬಿಬಿಎಂಪಿ ಕೇಂದ್ರದಲ್ಲಿ ಶೇ.83.19, ಬಿಬಿಎಂಪಿ ಉತ್ತರದಲ್ಲಿ ಶೇ.82.43, ಬಿಬಿಎಂಪಿ ದಕ್ಷಿಣದಲ್ಲಿ 82.51ರಷ್ಟು ಮತದಾನವಾಗಿತ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅತಿ ಹೆಚ್ಚು ಶೇ.96.02ರಷ್ಟು ಮತದಾನವಾಗಿದ್ದರೆ, ರಾಮನಗರ ಜಿಲ್ಲೆಯಲ್ಲಿ ಶೇ.95.77ರಷ್ಟು ಮತದಾನವಾಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ, ಜೆಡಿಎಸ್ – ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಎ.ಪಿ. ರಂಗನಾಥ ಸೇರಿದಂತೆ ಚುನಾವಣೆಯಲ್ಲಿ 9 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದರು.

ಪುಟ್ಟಣ್ಣ ಅವಧಿ ಎಲ್ಲಿಯವರೆಗೆ?

ಈಗ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಉಪ ಚುನಾವಣೆಯಾಗಿದೆ. ಈ ಹಿಂದೆ ಸಹ ಪುಟ್ಟಣ್ಣ ಅವರು ಬಿಜೆಪಿಯಿಂದ ಜಯಗಳಿಸಿದ್ದರು. ಆದರೆ, ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸೇರ್ಪಡೆಗೊಂಡು ರಾಜಾಜಿನಗರದಲ್ಲಿ ಸ್ಪರ್ಧೆ ಮಾಡಿದ್ದರು. ಆದರೆ, ಅವರು ಅಲ್ಲಿ ಸೋಲು ಕಂಡಿದ್ದರು. ಹೀಗಾಗಿ ಮತ್ತೆ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಈಗ ಜಯ ಕಂಡಿದ್ದಾರೆ. ಇವರ ವಿಧಾನ ಪರಿಷತ್‍ನ ಸದಸ್ಯತ್ವದ ಅವಧಿ 2026ರ ನವೆಂಬರ್ 11ರವರೆಗೆ ಇರಲಿದೆ.

ಕಳೆದ ಬಾರಿ ನಡೆದಿದ್ದ ಚುನಾವಣೆಯಲ್ಲಿಯೂ ಇದೇ ರಂಗನಾಥ್ ಮತ್ತು ಪುಟ್ಟಣ್ಣ ಅವರ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿತ್ತು. ಕೊನೆಗೆ ಪುಟ್ಟಣ್ಣ ಜಯಗಳಿಸಿದ್ದರು. ಈಗ ಅದೇ ಪುಟ್ಟಣ್ಣ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿ ಗೆದ್ದು ಬಂದಂತಾಗಿದೆ.

ಇದನ್ನೂ ಓದಿ: Karnataka Budget Session 2024: ಕೇಂದ್ರದಿಂದ ಅನ್ಯಾಯ ಆಗಿದೆಯೇ? ಬಹಿರಂಗ ಚರ್ಚೆಗೆ ಬನ್ನಿ: ಸಿಎಂಗೆ ಎಚ್‌ಡಿಕೆ ಸವಾಲು

ಒಟ್ಟು ಮತಗಳ ವಿವರ:

Exit mobile version