Site icon Vistara News

MLC Election: ಕ್ಷೇತ್ರದೆಲ್ಲೆಡೆ ಪದವೀಧರ ಮತದಾರರಿಂದ ಉತ್ತಮ ಸ್ಪಂದನೆ: ನಾರಾ ಪ್ರತಾಪ್‌ ರೆಡ್ಡಿ

MLC North East Graduate Constituency Non Party Candidate Nara Pratap Reddy election campaign in Vijayanagara District

ವಿಜಯನಗರ: ವಿಧಾನ ಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ನಾರಾ ಪ್ರತಾಪ್‌ ರೆಡ್ಡಿ, ವಿಜಯನಗರ ಜಿಲ್ಲೆಯ ವಿವಿಧೆಡೆ ಸೋಮವಾರ ಚುನಾವಣಾ (MLC Election) ಪ್ರಚಾರ ಕೈಗೊಂಡು ಮತಯಾಚನೆ ನಡೆಸಿದರು.

ಜಿಲ್ಲೆಯ ಹೂವಿನ ಹಡಗಲಿ, ಹರಪನಹಳ್ಳಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ತಾಲೂಕು ಸೇರಿದಂತೆ ವಿವಿಧೆಡೆ ವಿಧಾನ ಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಅಂಗವಾಗಿ ಪ್ರಚಾರ ಕಾರ್ಯ ಕೈಗೊಂಡು, ಪದವೀಧರ ಮತದಾರರನ್ನು ಭೇಟಿಯಾಗಿ ಅವರು ಮತಯಾಚನೆ ಮಾಡಿದರು.

ಇದನ್ನೂ ಓದಿ: Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಇದೇ ವೇಳೆ ಕೊಟ್ಟೂರಿನ ಇಂದು ಸ್ಕೂಲ್ ಅಂಡ್ ಕಾಲೇಜ್‌ಗೆ ತೆರಳಿ ಪಕ್ಷೇತರ ಅಭ್ಯರ್ಥಿ ನಾರಾ ಪ್ರತಾಪ್ ರೆಡ್ಡಿ, ಮತಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ನಾರಾ ಪ್ರತಾಪ್‌ ರೆಡ್ಡಿ, ಏಳೂ ಜಿಲ್ಲೆಗಳಲ್ಲಿ ಪದವೀಧರ ಮತದಾರರಿಂದ ಉತ್ತಮ ಸ್ಪಂದನೆ ಇದೆ. ಒಬ್ಬ ಸಮರ್ಥ ಪ್ರತಿನಿಧಿ ಬೇಕೆನ್ನುವ ನಿರೀಕ್ಷೆಗಳಿವೆ. ಈ ಹಿಂದಿನ ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳಿಂದ ಆಯ್ಕೆಯಾಗಿದ್ದ ವಿಧಾನ ಪರಿಷತ್‌ ಸದಸ್ಯರಿಂದ ಯಾವುದೇ ಅನುಕೂಲತೆಗಳು ಆಗಿಲ್ಲ ಎಂಬ ಕೊರಗು ಮತದಾರರಿಂದಲೇ ಕೇಳಿಬರುತ್ತಿದೆ. ಈ ಹಿನ್ನಲೆಯಲ್ಲಿ ಈ ಬಾರಿ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.

ಈ ಬಾರಿಯ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿ, ನಾನು ವಿಧಾನ ಪರಿಷತ್‌ನಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದು ಪದವೀಧರ ಮತದಾರರಲ್ಲಿ ಅವರು ಮನವಿ ಮಾಡಿದರು.

ಇದನ್ನೂ ಓದಿ: Lok Sabha Election 2024: ಲೋಕಸಭೆ ಚುನಾವಣೆ ಮತ ಎಣಿಕೆ; ಜೂ. 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ

ಕಳೆದ ಬಾರಿ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿಧಾನ ಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ನಾರಾ ಪ್ರತಾಪ್‌ ರೆಡ್ಡಿ ಅವರು ಕೂದಲೆಳೆಯ ಅಂತರದಿಂದ ಪರಾಜಿತರಾಗಿದ್ದರು. ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು ಕ್ಷೇತ್ರದ ಎಲ್ಲೆಡೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ.

Exit mobile version