MP Pratapsimha : ಯದುವೀರ್‌ಗೇ ಟಿಕೆಟ್‌ ಪಕ್ಕಾ; ಉಗ್ರಪ್ರತಾಪಿಯಂತೆ ಸಿಡಿದೆದ್ದ ಪ್ರತಾಪ್‌ಸಿಂಹ - Vistara News

ರಾಜಕೀಯ

MP Pratapsimha : ಯದುವೀರ್‌ಗೇ ಟಿಕೆಟ್‌ ಪಕ್ಕಾ; ಉಗ್ರಪ್ರತಾಪಿಯಂತೆ ಸಿಡಿದೆದ್ದ ಪ್ರತಾಪ್‌ಸಿಂಹ

MP Pratapsimha : ಸಂಸದ ಪ್ರತಾಪ್‌ಸಿಂಹ ಅವರಿಗೆ ಮೈಸೂರು ಟಿಕೆಟ್‌ ಮಿಸ್‌ ಆಗುವುದು ಖಚಿತವಾಗಿದೆ. ಹೀಗಾಗಿ ಪ್ರತಾಪ್‌ ಸಿಂಹ ಅವರು ಸಿಡಿದೆದ್ದಿದ್ದಾರೆ. ಇದೀಗ ರಾಜ್ಯ ಬಿಜೆಪಿ ಉಸ್ತುವಾರಿಗಳು ಅವರಿಗೆ ಬುಲಾವ್‌ ನೀಡಿದ್ದಾರೆ.

VISTARANEWS.COM


on

MP Pratapsimha yaduveer
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮೈಸೂರು: ಕಳೆದ ಕೆಲವು ದಿನಗಳಿಂದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ (Mysore Lokasabha Constituency) ಟಿಕೆಟ್‌ಗಾಗಿ ಶತಪ್ರಯತ್ನ ಮಾಡಿದ್ದ ಹಾಲಿ ಸಂಸದ ಪ್ರತಾಪ್‌ಸಿಂಹ (MP Pratapsimha) ಅವರು ಈಗ ಶಸ್ತ್ರತ್ಯಾಗ ಮಾಡಿದಂತೆ ಕಂಡುಬರುತ್ತಿದೆ. ಅವರು ನಂಬಿದ ಕಾರ್ಯಕರ್ತರು, ಚಾಮುಂಡೇಶ್ವರಿ ದೇವಿಯ ಕೃಪೆಯನ್ನು ಮೀರಿ ಹೈಕಮಾಂಡ್‌ ಟಿಕೆಟ್‌ (BJP Mysore Ticket) ನಿರ್ಧಾರ ಮಾಡಿದಂತಿದೆ. ಹೀಗಾಗಿ ಅವರು ಕೂಡಾ ತಮ್ಮ ಹೋರಾಟವನ್ನು ನಿಲ್ಲಿಸಿ ಪಕ್ಷ ಹೇಳಿದ ಅಭ್ಯರ್ಥಿಯನ್ನು ಒಪ್ಪಿಕೊಳ್ಳುವ ಮನೋಸ್ಥಿತಿಗೆ ಬಂದಂತಿದೆ. ಮಂಗಳವಾರ ಮೈಸೂರಿನಲ್ಲಿ ಅವರು ಆಡಿದ ಮಾತು ಈ ಸೂಚನೆಗಳನ್ನು ನೀಡಿದೆ. ಜತೆಗೆ ಅವರು ಉಗ್ರ ಪ್ರತಾಪಿಯಾಗಿ ಹಲವು ವಿಚಾರಗಳನ್ನು ಹೇಳಿಕೊಂಡಿದ್ದಾರೆ.

ಈಗಲೂ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ. ಒಂದು ವೇಳೆ ಟಿಕೆಟ್ ಕೈ ತಪ್ಪಿದರೂ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ನಾನು ಕೂಡ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇನೆ. ಪಕ್ಷದ ಅಭ್ಯರ್ಥಿ ಪರ ಬಂಟಿಂಗ್ಸ್ ಬ್ಯಾನರ್ ಕಟ್ಟಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸುತ್ತೇನೆ ಎಂದು ಹೇಳುವ ಮೂಲಕ ಅವರು ತಮಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆಯ ಮೊದಲ ಸುಳಿವು ನೀಡಿದರು.

MP Pratapsimha : ಯದುವೀರ್‌ ಜನಪ್ರತಿನಿಧಿಯಾದರೆ ಒಳ್ಳೆಯದು ಎಂದ ಪ್ರತಾಪ್‌ಸಿಂಹ

ಇದರ ಜತೆಗೆ ರಾಜವಂಶಸ್ಥ ಯದುವೀರ್‌ಗೆ (BJP Ticket for Yaduveer) ಬಿಜೆಪಿ ಟಿಕೆಟ್‌ ನೀಡಬಹುದು ಎಂಬ ಪರೋಕ್ಷ ಘೋಷಣೆಯನ್ನು ಸ್ವತಃ ಪ್ರತಾಪ್‌ ಸಿಂಹ ಅವರೇ ಮಾಡಿದ್ದಾರೆ. ʻʻರಾಜವಂಶಸ್ಥರು ಮತ್ತು ಸರ್ಕಾರದ ನಡುವೆ ವ್ಯಾಜ್ಯ ಇದೆ. ಯದುವೀರ್ ಜನಪ್ರತಿನಿಧಿಯಾದ್ರೆ ಎಲ್ಲ ಬಗೆಹರಿಯುತ್ತದೆʼʼ ಎಂದು ಹೇಳುವ ಮೂಲಕ ಯದುವೀರ್‌ ಅವರಿಗೇ ಟಿಕೆಟ್‌ ಸಿಗಲಿದೆ ಎಂದು ಪರೋಕ್ಷವಾಗಿ ಹೇಳಿದರು.

ʻʻಯದುವೀರ್ ಹವಾನಿಯಂತ್ರಿತ ವ್ಯವಸ್ಥೆಯೊಳಗೆ ಇದ್ದವರು. ದೊಡ್ಡಗಡಿಯಾರದ ಬಳಿ ಬಿಜೆಪಿ ಕಾರ್ಯಕರ್ತರ ಜತೆ ಕುಳಿತು ಧಿಕ್ಕಾರ ಕೂಗುತ್ತಾರೆ. ರಾಜರಾಗಿದ್ದೂ ಪ್ರಜೆಯಾಗಲು ರೆಡಿ ಆಗಿದ್ದಾರೆʼʼ ಎಂದು ಹೇಳಿದರು ಪ್ರತಾಪ್‌ ಸಿಂಹ.

ಕೆಣಕುತ್ತಲೇ ಸ್ವಾಗತ ಕೋರಿದ ಪ್ರತಾಪ್‌ ಸಿಂಹ, ಇನ್ನು ಮೈಸೂರಿನ ಜಾಗ ಸರ್ಕಾರಕ್ಕೆ ಬರುತ್ತೆ!

ಪ್ರತಾಪ್‌ ಸಿಂಹ ಅವರು ಯದುವೀರ್‌ ಅವರಿಗೆ ಸ್ವಾಗತ ನೀಡುತ್ತಲೇ ಒಂದಿಷ್ಟು ಕೆಣಕುವ ಮಾತುಗಳನ್ನೂ ಆಡಿದ್ದಾರೆ.

ಚಾಮುಂಡಿಬೆಟ್ಟಕ್ಕೆ ಹೊಸ ಪೈಪ್ ಲೈನ್ ಆಗಲು ಪ್ರಮೋದಾದೇವಿ ಒಡೆಯರ್ ಬಿಟ್ಟಿರಲಿಲ್ಲ. ಮುಂದೆ ಹೊಸ ಪೈಪ್ ಲೈನ್ ಆಗುತ್ತದೆ ಎಂದು ಕೆಣಕಿದ್ದಾರೆ ಪ್ರತಾಪ್‌ ಸಿಂಹ.

ಮೈಸೂರಿನ ಲಲಿತ ಮಹಲ್ ಅರಮನೆ, ಸಮೀಪದ ಹೆಲಿಪ್ಯಾಡ್ ಜಾಗ, ಸರ್ವೇ ನಂಬರ್ 4ರ ಸುಮಾರು 1200 ಎಕರೆ ಜಾಗ, ವಿಜಯಶ್ರೀಪುರದ ಮನೆಗಳು, ವಸ್ತು ಪ್ರದರ್ಶನ ಪ್ರಾಧಿಕಾರದ ಜಾಗ ಎಲ್ಲದರ ಬಗ್ಗೆ ವ್ಯಾಜ್ಯಗಳು ಇವೆ. ಯದುವೀರ್ ಜನಪ್ರತಿನಿಧಿಯಾದ್ರೆ ಆ ಎಲ್ಲ ಜಾಗವನ್ನೂ ಜನರಿಗೆ ಬಿಟ್ಟು ಕೊಡಬೇಕಾಗುತ್ತೆ. ಹೀಗಾಗಿ ಯದುವೀರ್ ಅವರನ್ನು ಸ್ವಾಗತ ಮಾಡುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

MP Pratapsimha : ನೀವು ಅವರ ಮನೆ ಕಾಯೋ ಸ್ಥಿತಿ ಬರಬಾರದು: ಯದುವೀರ್‌ಗೆ ಟಾಂಗ್‌

ನಿಮ್ಮ ಮನೆ ಕಾಯುವವರಿಗೆ ಟಿಕೆಟ್ ಕೊಡಬೇಕೇ ಹೊರತು ನಾವು ಅವರ ಮನೆ ಕಾಯುವ ಸ್ಥಿತಿ ಬರಬಾರದು ಎಂದು ಹೇಳುವ ಮೂಲಕ ಪ್ರತಾಪ್‌ ಸಿಂಹ ಅವರು ಯದುವೀರ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ವಿರುದ್ಧ ಮಾತನಾಡಲು ನಾಯಕರಿಗೆ ತೊಡೆ ನಡುಗುತ್ತದೆ

ಹಳೇ ಮೈಸೂರು ಭಾಗದಲ್ಲಿ ಸಿದ್ದರಾಮಯ್ಯ ‌ವಿರುದ್ಧ ತೊಡೆ ತಟ್ಟಿದ ಏಕೈಕ ವ್ಯಕ್ತಿ ಪ್ರತಾಪ್ ಸಿಂಹ. ಸಿದ್ದರಾಮಯ್ಯ ವಿರುದ್ಧ ಮಾತನಾಡಲು ನಮ್ಮ ನಾಯಕರಿಗೆ ತೊಡೆ ನಡುಗುತ್ತದೆ ಎಂದು ಟಿಕೆಟ್‌ ಕಳೆದುಕೊಂಡ ಆಕ್ರೋಶದಲ್ಲಿ ಸ್ವಪಕ್ಷದ ನಾಯಕರ ವಿರುದ್ಧವೇ ಸಂಸದ ಪ್ರತಾಪ‌ಸಿಂಹ ವಾಗ್ದಾಳಿ ನಡೆಸಿದ್ದಾರೆ.

ನಾನು ದುಡ್ಡು ಮಾಡಿಲ್ಲ, ಅಡ್ಜಸ್ಟ್‌ಮೆಂಟ್‌ ಮಾಡಲಿಲ್ಲ!

ʻʻನಾನು ರಿಯಲ್ ಎಸ್ಟೇಟ್ ಮಾಡ್ಲಿಲ್ಲ, ಕಮಿಷನ್ ಪಡೆದಿಲ್ಲ. ಭಟ್ಟಂಗಿಗಳನ್ನು ಕಟ್ಟಿಕೊಂಡು ಓಡಾಡಲಿಲ್ಲ. ಅಭಿವೃದ್ಧಿ ಮಾತ್ರ ಮಾಡಿದ್ದೇನೆ. ಅಡ್ಜಸ್ಟ್‌ಮೆಂಟ್ ಪಾಲಿಟಿಕ್ಸ್ ಮಾಡಲಿಲ್ಲʼʼ ಎಂದು ಪ್ರತಾಪ್ ಸಿಂಹ ನುಡಿದರು. ʻʻಈ ಹಿಂದೆ ಬಿಜೆಪಿಯಿಂದ ಗೆದ್ದವರು ಪಕ್ಷವನ್ನು ಹೇಗೆ ಕಟ್ಟಿದ್ರು, ಎಷ್ಟು ಜನರನ್ನು ಬೆಳೆಸಿದ್ದಾರೆ ಹೇಳಿ?ʼʼ ಎಂದು ಪ್ರಶ್ನಿಸಿದರು.

ನನ್ನ ಬಗ್ಗೆ ಗಾಸಿಪ್‌ ಹರಡಿಸಬೇಡಿ, ನಾನು ಓಡಿ ಹೋಗಲ್ಲ

ʻʻನಾನು ಪಲಾಯನವಾದಿಯಲ್ಲ. ನಿಮ್ಮ ಜತೆ ನಾನು ಸದಾ ಇರುತ್ತೇನೆ. ಮುಂದಿನ ದಿನಗಳಲ್ಲಿ ಗಾಸಿಪ್‌ಗಳನ್ನು ಹರಡಿಸಬೇಡಿ. ಜನರ ಪ್ರೀತಿಯನ್ನು ಸಂಪಾದನೆ ಮಾಡಿದ್ದೇನೆʼʼ ಎಂದು ಅವರು ಹೇಳಿದರು.

ಇದನ್ನೂ ಓದಿ : Lok Sabha Election 2024: ಮೋದಿ ಇದ್ದ ಸಭೆಯಲ್ಲಿ ಅನಂತ್‌ ಕುಮಾರ್‌ ಹೆಗಡೆ, ಪ್ರತಾಪ್‌ ಸಿಂಹ ಬಗ್ಗೆ ಚರ್ಚೆ! ಅಶೋಕ್‌ ಹೇಳಿದ್ದೇನು?

ಯಾರೂ ತಲೆ ಕೆಡಿಸಿಕೊಳ್ಳಬೇಡಿ, ಗಟ್ಟಿ ಪಿಂಡ ನಾನು ಎಂದ ಪ್ರತಾಪ್‌

ಕೊಡಗು- ಮೈಸೂರು ಬಿಜೆಪಿ ಭದ್ರ ಕೋಟೆ. ಇವತ್ತು ನನಗೆ ಟಿಕೆಟ್ ಕೊಟ್ರೆ ಮೂರು ಲಕ್ಷ ಮತಗಳಿಂದ ಗೆಲ್ಲುತ್ತೇನೆ. ಆಲ್ ಪಾರ್ಟಿ ಮೆಂಬರ್ ನಾನು. ಒಳ್ಳೆಯ ಕೆಲಸ ಮಾಡಿದ್ದೇನೆ ಪಕ್ಷಕ್ಕೆ ಕೆಲಸ ಮಾಡುತ್ತೇನೆ. ಅವಕಾಶ ಸಿಕ್ಕರೆ ಕೊಡಗಿನ ಜನರನ್ನ ಋಣ ತೀರಿಸುತ್ತೇನೆ ಎಂದು ಪ್ರತಾಪ್‌ ಸಿಂಹ ಹೇಳಿದರು.

ʻʻಕಾರ್ಯಕರ್ತರೇ ನನ್ನ ದೊಡ್ಡ ಶಕ್ತಿ. ಯಾರು ತಲೆ ಕಡೆಸಿಕೊಳ್ಳಬೇಡಿ. ಗಟ್ಟಿ ಪಿಂಡ ನಾನು. ಯಾವ ಹಿನ್ನೆಲೆಯೂ ಇಲ್ಲದೆ ಇಲ್ಲಿ ತನಕ ಬಂದಿದ್ದೇನೆ. ನಾನು ಪಾರ್ಟಿಗೋಸ್ಕರ ಬಾವುಟ ಕಟ್ಟುತ್ತೇನೆ. ಕೈ ಮುಗಿದು ಬೇಡಿಕೊಳ್ಳುತ್ತೇನೆ, ಲೀಡರ್ ಗಳ ಹಿಂದೆ ಹೋಗಬೇಡಿ. ಪಕ್ಷದ ಜತೆ ಹೋಗಿ. ಅಪಪ್ರಚಾರ ಮಾಡಬೇಡಿ. ನಾನೇ ಆಗಲಿ ಮತ್ತೊಬ್ಬರೇ ಆಗಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸೋಣ.ʼʼ ಎಂದು ಪ್ರತಾಪ್‌ ಸಿಂಹ ಮನವಿ ಮಾಡಿದರು.

ರಾಜ್ಯ ಉಸ್ತುವಾರಿ ನಾಯಕರಿಂದ ಬುಲಾವ್‌

ಈ ನಡುವೆ, ಆಕ್ರೋಶಭರಿತರಾಗಿರುವ ಪ್ರತಾಪ್‌ ಸಿಂಹ ಅವರನ್ನು ಸಮಾಧಾನ ಮಾಡಲು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್‌ ಅವರು ಪ್ರತಾಪ್‌ಗೆ ಬುಲಾವ್‌ ನೀಡಿದ್ದಾರೆ. ಬೆಂಗಳೂರಿಗೆ ಬರುವಂತೆ ಅವರಿಗೆ ಸೂಚನೆ ನೀಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

VISTARANEWS.COM


on

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್‌ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್‌ ಅರ್ಲೇಕರ್‌ ಅವರು ಪ್ರಮಾಣ ವಚನ ಬೋಧಿಸಿದರು. ತಿರುವನಂತಪುರದ ಸೆಂಟ್ರಲ್‌ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ವಿ.ಡಿ. ಸತೀಶನ್‌ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

10 ವರ್ಷಗಳ ನಂತರ ಯುಡಿಎಫ್‌ ಸರ್ಕಾರ ಅಧಿಕಾರ ಸ್ವೀಕಾರದೊಂದಿಗೆ ಕೇರಳ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ.

Continue Reading

ಪ್ರಮುಖ ಸುದ್ದಿ

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

VISTARANEWS.COM


on

ಚೆನ್ನೈ: ತಮಿಳು ನಟ ವಿಜಯ್‌ ಮುಖ್ಯಮಂತ್ರಿ ಆಗಿರುವುದಕ್ಕೆ ನನಗೆ ಯಾವುದೇ ಅಸೂಯೆ ಇಲ್ಲ ಎಂದು ತಮಿಳು ನಟ, ಸೂಪರ್‌ ಸ್ಟಾರ್‌ ರಜನೀಕಾಂತ್‌ ಸ್ಪಷ್ಟಪಡಿಸಿದ್ದಾರೆ.

ಚೆನ್ನೈನಲ್ಲಿ ಮಾತನಾಡಿದ ಅವರು, ಪ್ರಬಲ ಮೈತ್ರಿಕೂಟಗಳನ್ನು ಸೋಲಿಸಿ ವಿಜಯ್‌ ಸಿಎಂ ಆಗಿದ್ದಾರೆ. ಇದರಿಂದ ನನಗೆ ಯಾವುದೇ ಅಸೂಯೆ ಇಲ್ಲ. ನನಗೆ ತುಂಬಾ ಸಂತೋಷವಾಗಿದೆ ಎಂದಿದ್ದಾರೆ.

ನಾನು ರಾಜಕೀಯ ಪ್ರವೇಶಿಸಿದ್ದರೆ ಶೇ.100 ರಷ್ಟು ಯಶಸ್ಸು ಸಾಧಿಸುತ್ತಿದ್ದೆ. ಆದರೆ ನಾನು ರಾಜಕೀಯದಿಂದ ದೂರ ಸರಿದು ಬಹಳ ದಿನಗಳಾಗಿವೆ ಎಂದು ಹೇಳಿದ್ದಾರೆ.

ವಿಜಯ್‌ ಮತ್ತು ನನ್ನ ನಡುವೆ ಒಂದು ಜನರೇಶನ್‌ ಗ್ಯಾಪ್‌ ಇದೆ. ನಮ್ಮಿಬ್ಬರ ನಡುವೆ ಸುಮಾರು 25 ವರ್ಷದ ಅಂತರವಿದೆ. ಅವರ ಬಗ್ಗೆಯಾಗಲಿ, ಅವರ ಸಿಎಂ ಆಗಿರುವುದಕ್ಕಾಗಲಿ ನನಗೆ ಯಾವುದೇ ಅಸೂಯೆ ಇಲ್ಲ ಎಂದು ಸ್ಪಷ್ಟಪಡಿಸಿದರು. ವಿಜಯ್‌ ಸಿಎಂ ಆದ ತಕ್ಷಣವೇ ನಾನು ಅವರಿಗೆ ಅಭಿನಂದನೆ ಸಲ್ಲಿಸಿದ್ದೇನೆ ಎಂದು ರಜನೀಕಾಂತ್‌ ತಿಳಿಸಿದರು.

ಚುನಾವಣೆ ಬಳಿಕ ತಮ್ಮ ವಿರುದ್ಧ ಕೇಳಿಬರುತ್ತಿರುವ ಟೀಕೆಗಳ ಕುರಿತೂ ರಜನೀಕಾಂತ್‌ ಪ್ರತಿಕ್ರಿಯೆ ನೀಡಿದರು. ಚುನಾವಣೆ ನಂತರ ನನ್ನ ವಿರುದ್ಧ ಅನೇಕ ಟೀಕೆಗಳು ಬರುತ್ತಿವೆ. ನಾನು ಅವಕ್ಕೆ ಪ್ರತಿಕ್ರಿಯಿಸದಿದ್ದರೆ ಅವು ಸತ್ಯ ಎಂದು ಭಾವಿಸುವ ಸಾಧ್ಯತೆ ಇದೆ ಎಂದರು.

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿ ಮಾಡಿದ ವಿಚಾರಕ್ಕೂ ಸ್ಪಷ್ಟನೆ ನೀಡಿದ ರಜನೀಕಾಂತ್‌, ಸ್ಟಾಲಿನ್‌ ಮತ್ತು ನನ್ನ ಸ್ನೇಹ ರಾಜಕೀಯವನ್ನೂ ಮೀರಿದ್ದು, ನಮ್ಮ ಸ್ನೇಹಕ್ಕೆ ಸುಮಾರು 35 ವರ್ಷಗಳ ಇತಿಹಾಸ ಇದೆ ಎಂದು ಹೇಳಿದರು.

“ಕೊಳತ್ತೂರಿನಲ್ಲಿ ಸ್ಟಾಲಿನ್‌ ಸೋತಿದ್ದಕ್ಕೆ ನನಗೆ ಬೇಸರವಾಯಿತು. ಸ್ನೇಹಿತನಾಗಿ ಅವರನ್ನು ಭೇಟಿಯಾಗಿ ಸಮಾಧಾನ ಮಾಡಿದ್ದೇನೆ. ಆದರೆ ಆ ವಿಚಾರದಲ್ಲೂ ಕೆಲವರು ನನ್ನನ್ನು ಟೀಕಿಸುತ್ತಿದ್ದಾರೆ, ಅದಕ್ಕೆ ಈ ಸ್ಪಷ್ಟನೆ ನೀಡುತ್ತಿದ್ದೇನೆ ಎಂದು ರಜನೀಕಾಂತ್‌ ಹೇಳಿದ್ದಾರೆ.

Continue Reading

Latest

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

VISTARANEWS.COM


on

ತಿರುವನಂತಪುರಂ: ಕೇರಳಂ ಕಾಂಗ್ರೆಸ್‌ನ ಹಿರಿಯ ನಾಯಕ ವಿ.ಡಿ. ಸತೀಶನ್‌ ಅವರು ನಾಳೆ ಕೇರಳಂನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ತಿರುವನಂತಪುರಂನ ಸೆಂಟ್ರಲ್‌ ಸ್ಟೇಡಿಯಂನಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

ನಾಳೆ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲರು, ಸತೀಶನ್ ಅವರಿಗೆ ಪ್ರಮಾಣ ವಚನ ಭೋದಿಸಲಿದ್ದಾರೆ. ಇದೇ ವೇಳೆ ಹೊಸ ಸಚಿವ ಸಂಪುಟದ ಸದಸ್ಯರೂ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ಈ ಬಾರಿ 21 ಸದಸ್ಯರ ಸಚಿವ ಸಂಪುಟ ರಚನೆಗೆ ಯುಡಿಎಫ್‌ ಸಿದ್ಧತೆ ನಡೆಸಿದೆ. ಈಗಾಗಲೇ ಈ ಕುರಿತು ಮಿತ್ರ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿರುವ ಕಾಂಗ್ರೆಸ್‌, ಕ್ಯಾಬಿನೆಟ್‌ ರಚನೆಯ ಕಸರತ್ತು ನಡೆಸುತ್ತಿದೆ. ಸದ್ಯದ ಮಾಹಿತಿಯ ಪ್ರಕಾರ ಕ್ಯಾಬಿನೆಟ್‌ನಲ್ಲಿ ಮುಸ್ಲಿಂ ಲೀಗ್‌ಗೆ ಐದು ಸ್ಥಾನಗಳು ಲಭಿಸಬಹುದು ಎನ್ನಲಾಗಿದೆ.

ಪ್ರಮಾಣವಚನ ಸಮಾರಂಭಕ್ಕೆ ರಾಜಕೀಯ ನಾಯಕರು, ಗಣ್ಯರು ಹಾಗೂ ಸಾವಿರಾರು ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆಯಿದೆ.

Continue Reading

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading
Advertisement
Latest10 hours ago

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

Latest12 hours ago

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

Latest15 hours ago

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

Latest16 hours ago

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

ಪ್ರಮುಖ ಸುದ್ದಿ2 days ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest2 days ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest3 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest4 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest4 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest4 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌