Narendra Modi: ಇಂದು ಮೋದಿ ನೇತೃತ್ವದಲ್ಲಿ ಬಿಜೆಪಿ ಸಭೆ: ಮಹತ್ವದ ತೀರ್ಮಾನ ಸಾಧ್ಯತೆ; ಏನೆಲ್ಲ ಚರ್ಚೆಯಾಗಲಿದೆ? - Vistara News

ರಾಜಕೀಯ

Narendra Modi: ಇಂದು ಮೋದಿ ನೇತೃತ್ವದಲ್ಲಿ ಬಿಜೆಪಿ ಸಭೆ: ಮಹತ್ವದ ತೀರ್ಮಾನ ಸಾಧ್ಯತೆ; ಏನೆಲ್ಲ ಚರ್ಚೆಯಾಗಲಿದೆ?

Narendra Modi: ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶದ ಆಘಾತದಿಂದ ಬಿಜೆಪಿ ಇನ್ನೂ ಹೊರ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಬಿಜೆಪಿ ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಮತ್ತೆ ಮುಂದಾಗಿದೆ. ಅದರ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ.

VISTARANEWS.COM


on

Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆ (Lok Sabha Election)ಯ ಫಲಿತಾಂಶದ ಆಘಾತದಿಂದ ಬಿಜೆಪಿ (BJP) ಇನ್ನೂ ಹೊರ ಬಂದಿಲ್ಲ. ಕೇಂದ್ರದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೂ ಬಿಜೆಪಿಗೆ ಬಹುಮತ ಲಭಿಸದೇ ಇರುವುದು ಪಕ್ಷದ ಒಳಗೆ ತಳಮಳ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಮತ್ತೆ ಮುಂದಾಗಿದೆ. ಅದರ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು (ಜುಲೈ 18) ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ ಮೋದಿ ಸಂಜೆ 6 ಗಂಟೆಗೆ ಪಕ್ಷದ ಪ್ರಧಾನ ಕಚೇರಿಗೆ ತಲುಪಲಿದ್ದು, ಅಲ್ಲಿ ಅವರು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಹಲವು ಮಹತ್ವದ ವಿಚಾರಗಳ ಕುರಿತು ಅವರು ಚರ್ಚೆ ನಡೆಸಲಿದ್ದಾರೆ. 

ಉತ್ತರ ಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು?

2027ರಲ್ಲಿ ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈಗಲೇ ಪಕ್ಷ ಸಂಘಟನೆಗೆ ಬಿಜೆಪಿ ಮುಂದಾಗಿದೆ. ಅದರ ಜತೆಗೆ ಪಕ್ಷಕ್ಕೆ ತಕ್ಷಣದ ಸವಾಲು ಎಂಬಂತೆ ರಾಜ್ಯದ 10 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಎದುರಾಗಿದೆ. ಲೋಕಸಭಾ ಚುನಾವಣೆ ವೇಳೆ ರಾಜ್ಯದಲ್ಲಿ ಬಿಜೆಪಿ ಕಳಪೆ ಪ್ರದರ್ಶನ ತೋರಿದ ಹಿನ್ನೆಲೆಯಲ್ಲಿ ಈ ಉಪಚುನಾವಣೆಯಲ್ಲಿ ಪಕ್ಷ ತನ್ನ ಸಾಮರ್ಥ್ಯ ತೋರಿಸಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಚುನಾವಣಾ ಆಯೋಗ ಇನ್ನೂ ದಿನಾಂಕ ಘೋಷಿಸಿಲ್ಲ. ಅದಾಗ್ಯೂ ಬಿಜೆಪಿ ತಲೆಕೆಡಿಸಿಕೊಂಡಿದೆ. ಈ ಮಧ್ಯೆ ಈ ಉಪಚುನಾವಣೆಯಲ್ಲೂ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಊಹಾಪೋಹಗಳೂ ಹರಡಿದೆ.

ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಎಸ್‌ಪಿ 37 ಸ್ಥಾನಗಳನ್ನು ಗೆದ್ದರೆ, ಬಿಜೆಪಿ ಕೇವಲ 33 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಂಡಿದೆ. ಎಸ್‌ಪಿಯೊಂದಿಗೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ರಾಜ್ಯದಲ್ಲಿ ಆರು ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ.

ಯೋಗಿ ಆದಿತ್ಯನಾಥ್‌ ತಲೆದಂಡ?

ಇದರ ಜತೆಗೆ ಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಿಎಂ ಯೋಗಿ ಆದಿತ್ಯಾನಾಥ್‌ ಮತ್ತು ಡಿಸಿಎಂ ಕೇಶವ್‌ ಪ್ರಸಾದ್‌ ಮೌರ್ಯ ನಡುವಿನ ಮುಸುಕಿನ ಗುದ್ದಾಟ ಬಹಿರಂಗವಾಗಿದೆ. ಇಬ್ಬರ ನಡುವಿನ ಭಾರಿ ಭಿನ್ನಮತದ ಬೆನ್ನಲ್ಲೇ ಕೇಶವ್ ಪ್ರಸಾದ್ ಮೌರ್ಯ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ. ಅದೂ ಅಲ್ಲದೇ ಚುನಾವಣೆಯಲ್ಲಿನ ಹಿನ್ನಡೆ ಬಳಿಕ ಸಿಎಂ ಯೋಗಿ ಆದಿತ್ಯನಾಥ್ ತಲೆದಂಡವಾಗಲಿದೆ ಎಂಬ ವದಂತಿಗೆ ಮತ್ತಷ್ಟು ಪುಷ್ಠಿ ಸಿಕ್ಕಂತಾಗಿದೆ. ಈ ಎಲ್ಲ ಹಿನ್ನೆಲೆಯಲ್ಲಿ ಇಂದಿನ ಸಭೆ ಕುತೂಹಲ ಮೂಡಿಸಿದೆ.

ಜುಲೈ 14ರಂದು, ಉತ್ತರ ಪ್ರದೇಶ ಬಿಜೆಪಿ ಘಟಕವು ತನ್ನ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯನ್ನು ಲಖನೌ ಡಾ.ರಾಮ್ ಮನೋಹರ್ ಲೋಹಿಯಾ ಕಾನೂನು ವಿಶ್ವವಿದ್ಯಾಲಯದ ಅಂಬೇಡ್ಕರ್ ಸಭಾಂಗಣದಲ್ಲಿ ನಡೆಸಿತ್ತು. ಈ ಸಭೆಯಲ್ಲಿ 2024ರ ಲೋಕಸಭೆಯಲ್ಲಿ ಪಕ್ಷದ ಕಳಪೆ ಪ್ರದರ್ಶನದ ಬಗ್ಗೆ ಚರ್ಚಿಸಲಾಗಿತ್ತು. ಆ ಸಭೆಯಲ್ಲಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪ ಮುಖ್ಯಮಂತ್ರಿಗಳಾದ ಬ್ರಜೇಶ್ ಪಾಠಕ್ ಮತ್ತು ಕೆಪಿ ಮೌರ್ಯ ಮತ್ತು ಇತರ ಸಚಿವರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಇದನ್ನೂ ಓದಿ: UP CM v/s DCM: ಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ; ಯೋಗಿ ತಲೆದಂಡ ಪಕ್ಕಾನಾ?

ವಿಶೇಷವೆಂದರೆ ಜುಲೈ ಅಂತ್ಯದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಯುವ ಸಾಧ್ಯತೆ ಇದೆ. ಸಭೆಯಲ್ಲಿ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಉಪಸ್ಥಿತರಿರಲಿದ್ದಾರೆ. ಮೂಲಗಳ ಪ್ರಕಾರ ಲೋಕಸಭೆ ಚುನಾವಣೆ ಫಲಿತಾಂಶ ಹಾಗೂ ಸರ್ಕಾರ ಮತ್ತು ಸಂಘಟನೆಯ ನಡುವಿನ ಸಮನ್ವಯತೆ ಕುರಿತು ಚರ್ಚೆ ನಡೆಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Karnataka Assembly Live: ವಾಲ್ಮೀಕಿ ಹಗರಣದ ಆರೋಪಗಳಿಗೆ ಇಂದು ಸಿಎಂ ಉತ್ತರ; ವಿಧಾನಮಂಡಲ ಕಲಾಪ ಲೈವ್‌ ಇಲ್ಲಿದೆ

Karnataka Assembly Live: ವಾಲ್ಮೀಕಿ ನಿಗಮ ಹಗರಣ (Valmiki Corporation Live) ಕುರಿತು ಪ್ರತಿಪಕ್ಷದ ಆರೋಪಗಳಿಗೆ ಇಂದು ಸಿಎಂ ಸಿದ್ದರಾಮಯ್ಯ (CM Siddaramaiah) ಉತ್ತರ ನೀಡಲಿದ್ದಾರೆ. ಇದರ ಜೊತೆಗೆ, ಕನ್ನಡಿಗರಿಗೆ ಖಾಸಗಿ ಉದ್ಯಮದಲ್ಲಿ ಮೀಸಲು ವಿಧೇಯಕದ (Karnataka jobs reservation) ಕುರಿತು ಸರ್ಕಾರ ನಿಲುವು ಹಾಗೂ ನಡೆ ಚರ್ಚೆಗೆ ಗ್ರಾಸವಾಗಲಿದೆ.

VISTARANEWS.COM


on

vidhana sabha karnataka assembly live
Koo

ಬೆಂಗಳೂರು: ಸೋಮವಾರ ಆರಂಭವಾಗಿದ್ದ ವಿಧಾನಮಂಡಲ ಅಧಿವೇಶನ (Karnataka Assembly Live) ಇಂದು ಮತ್ತೆ ಮುಂದುವರಿಯಲಿದೆ. ಬುಧವಾರ ಮೊಹರಂ ಹಬ್ಬದ ಹಿನ್ನೆಲೆಯಲ್ಲಿ ವಿಧಾನಸಭೆ ಹಾಗೂ ವಿಧಾನ ಪರಿಷತ್‌ ಕಲಾಪಗಳಿಗೆ (Assembly Session) ವಿರಾಮ ನೀಡಲಾಗಿತ್ತು. ಇಂದು ಬೆಳಗ್ಗೆ ಅಧಿವೇಶನ ಮತ್ತೆ ಆರಂಭವಾಗಲಿದ್ದು, ವಾಲ್ಮೀಕಿ ನಿಗಮ ಹಗರಣ (Valmiki Corporation Live) ಕುರಿತು ಪ್ರತಿಪಕ್ಷದ ಆರೋಪಗಳಿಗೆ ಇಂದು ಸಿಎಂ ಸಿದ್ದರಾಮಯ್ಯ (CM Siddaramaiah) ಉತ್ತರ ನೀಡಲಿದ್ದಾರೆ. ಇದರ ಜೊತೆಗೆ, ಕನ್ನಡಿಗರಿಗೆ ಖಾಸಗಿ ಉದ್ಯಮದಲ್ಲಿ ಮೀಸಲು ವಿಧೇಯಕದ (Karnataka jobs reservation) ಕುರಿತು ಸರ್ಕಾರ ನಿಲುವು ಹಾಗೂ ನಡೆ ಚರ್ಚೆಗೆ ಗ್ರಾಸವಾಗಲಿದೆ.

ಸೋಮವಾರ ಸಂವಿಧಾನದ ಪೀಠಿಕೆ ಓದು ಹಾಗೂ ಈ ನಡುವೆ ಅಗಲಿದ ಗಣ್ಯರಿಗೆ ಸಂತಾಪ ಸೂಚನೆಯೊಂದಿಗೆ ಕಲಾಪ ಆರಂಭವಾಗಿತ್ತು. ನಂತರ ಪ್ರತಿಪಕ್ಷಗಳ ಬೇಡಿಕೆಯಂತೆ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ಕುರಿತು ಚರ್ಚೆಗೆ ಸ್ಪೀಕರ್‌ ಅವಕಾಶ ನೀಡಿದ್ದರು. ಇದರ ನಂತರ ಸೋಮವಾರ ಹಾಗೂ ಮಂಗಳವಾರ ವಿಧಾನಸಭೆ ಕಲಾಪ ಗದ್ದಲದ ಗೂಡಾಗಿತ್ತು. ವಿಪಕ್ಷ ನಾಯಕ ಆರ್.‌ ಅಶೋಕ್‌ ಅವರು ಈ ಬಗ್ಗೆ ಸುದೀರ್ಘವಾಗಿ ಮಾತನಾಡಿ ಮುಖ್ಯಮಂತ್ರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು.

ಈ ಸಂದರ್ಭದಲ್ಲಿ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ಸದಸ್ಯರ ನಡುವೆ ಜೋರಾದ ಮಾತಿನ ಚಕಮಕಿ ನಡೆದಿತ್ತು. ಸ್ಪೀಕರ್‌ ಹಲವು ಬಾರಿ ಕಲಾಪವನ್ನು ಮುಂದೂಡಿದ್ದರು. ʼಮುಖ್ಯಮಂತ್ರಿಗಳು ನೈತಿಕ ಹೊನೆ ಹೊತ್ತು ರಾಜೀನಾಮೆ ನೀಡಬೇಕುʼ ಎಂದು ಅಶೋಕ್‌ ಆಗ್ರಹಿಸಿದ್ದರು. ಡಿಸಿಎಂ ಡಿಕೆ ಶಿವಕುಮಾರ್‌, ಎಂಬಿ ಪಾಟೀಲ್‌ ಮುಂತಾದವರು ಸಿಎಂ ಸಿದ್ದರಾಮಯ್ಯ ಪರ ಬ್ಯಾಟಿಂಗ್‌ ಮಾಡಿದ್ದರು. ಅಶೋಕ್‌ ಅವರ ಮಾತು ಹಾಗೂ ಚಕಮಕಿಯ ಬಳಿಕ ಕಲಾಪದ ಅವಧಿ ಮುಗಿದದ್ದರಿಂದ ಸಿಎಂ ಇಂದು ಸದನದಲ್ಲಿ ಉತ್ತರ ನೀಡಬೇಕಾಗಿದೆ.

ವಿರೋಧ ಪಕ್ಷದವರ ಎಂಟತ್ತು ಗಂಟೆಗಳ ಆರೋಪ, ದಾಳಿ, ಆಕ್ರೋಶದ ನುಡಿಗಳನ್ನು ಬಹುತೇಕ ಎಲ್ಲವನ್ನೂ ಅಡ್ಡಿ ಪಡಿಸದೆ ಮುಖ್ಯಮಂತ್ರಿಗಳು ಮತ್ತು ಆಡಳಿತ ಪಕ್ಷದ ಸದಸ್ಯರು ಆಲಿಸಿದರು. ವಾಲ್ಮೀಕಿ ನಿಗಮ ಪ್ರಕರಣದ ವಿರೋಧ ಪಕ್ಷದವರ ಎಲ್ಲಾ ಆರೋಪ ಮತ್ತು ಮಾತುಗಳಿಗೆ ಮುಖ್ಯಮಂತ್ರಿಗಳು ಗುರುವಾರ ಉತ್ತರ ನೀಡಲಿದ್ದಾರೆ.

ಈ ನಡುವೆ, ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಮೀಸಲು ಒಸಗಿಸುವ ಬಗ್ಗೆ ವಿಧೇಯಕ ರೂಪಿಸಲು ಸರ್ಕಾರ ಮುಂದಾಗಿತ್ತು. ಶೇ. 100 ಉದ್ಯೋಗ ಮೀಸಲು ಇಡಬೇಕು ಎಂದು ಕ್ಯಾಬಿನೆಟ್‌ನಲ್ಲಿ ನಿರ್ಣಯವಾಗಿದೆ ಎಂದು ಸಿಎಂ ಟ್ವೀಟ್‌ ಮಾಡಿದ್ದರು. ಇದಕ್ಕೆ ಖಾಸಗಿ ಉದ್ಯಮಿಗಳಿಂದ ಭಾರಿ ಪ್ರತಿರೋಧ ವ್ಯಕ್ತವಾಗಿತ್ತು. ನಂತರ ಟ್ವೀಟ್‌ ಡಿಲೀಟ್‌ ಮಾಡಿದ್ದ ಸಿಎಂ, ಬಳಿಕ ʼಶೇ.75 ಉದ್ಯೋಗ ಮೀಸಲುʼ ಎಂದಿದ್ದರು. ಇದಕ್ಕೂ ವಿರೋಧ ಬಂದಿತ್ತು. ಇದಾದ ಬಳಿಕ ʼಸದ್ಯ ಈ ವಿಧೇಯಕವನ್ನು ತಡೆಹಿಡಿಯಲಾಗಿದೆʼ ಎಂದು ಸರಕಾರ ಹೇಳಿದೆ.

ಸರಕಾರದ ಈ ಯುಟರ್ನ್‌ ಅನ್ನು ವಿಪಕ್ಷ ತನ್ನ ಅನುಕೂಲಕ್ಕೆ ಬಳಸಿಕೊಳ್ಳಲಿದೆ. ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಈ ಬಗ್ಗೆ ಟ್ವೀಟ್‌ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ʼವಾಲ್ಮೀಕಿ ಹಗರಣ ವಿಚಾರದಲ್ಲಿ ಸರಕಾರಕ್ಕೆ ಆಗುತ್ತಿರುವ ಮುಖಭಂಗ ತಪ್ಪಿಸಲು, ಗಮನವನ್ನು ಬೇರೆಡೆಗೆ ಸೆಳೆಯಲು ಇದನ್ನು ಮಾಡಲಾಗಿದೆ. ಆದರೆ ಸಿಎಂ ಇದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲʼ ಎಂದು ವಿಪಕ್ಷ ನಾಯಕ ಅಶೋಕ್‌ ಗುಡುಗಿದ್ದಾರೆ. ಹೀಗಾಗಿ, ಕಲಾಪದಲ್ಲಿ ಈ ವಿಚಾರವನ್ನು ಬಿಜೆಪಿ ಎತ್ತಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲಿದೆಯಾ ಎಂಬ ಪ್ರಶ್ನೆಯೂ ಮೂಡಿದೆ.

ಇದನ್ನೂ ಓದಿ: Karnataka Assembly Live: ವಾಲ್ಮೀಕಿ ಹಗರಣ ಚರ್ಚೆಯ ನಡುವೆ ಗದ್ದಲ ಸೃಷ್ಟಿಸಿದ ರೇವಣ್ಣ ಪ್ರಕರಣ; ರೊಚ್ಚಿಗೆದ್ದ ರೇವಣ್ಣ

Continue Reading

ದೇಶ

PM Narendra Modi: ಚುನಾವಣೆಯಲ್ಲಿ ಕಳಪೆ ಪ್ರದರ್ಶನದಿಂದ ಕಂಗೆಟ್ರಾ ಮೋದಿ? ನಾಳೆ ಕಾರ್ಯಕರ್ತರ ದಿಢೀರ್ ಸಭೆ?

PM Narendra Modi: ಮೂಲಗಳ ಪ್ರಕಾರ, ಪ್ರಧಾನಿ ಮೋದಿ ಸಂಜೆ 6 ಗಂಟೆಗೆ ಪಕ್ಷದ ಪ್ರಧಾನ ಕಚೇರಿಗೆ ತಲುಪುತ್ತಾರೆ, ಅಲ್ಲಿ ಅವರು ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಹಲವು ಮಹತ್ವದ ವಿಚಾರಗಳ ಕುರಿತು ಅವರು ಚರ್ಚೆ ನಡೆಸಲಿದ್ದಾರೆ.

VISTARANEWS.COM


on

PM Narendra Modi
Koo

ಹೊಸದಿಲ್ಲಿ: ಈ ಬಾರಿ ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಗೆಲುವು ಸಿಗದೇ ಅಧಿಕಾರದಲ್ಲಿದ್ದರೂ ಅದರ ಕಂಗೆಟ್ಟಿರುವ ಬಿಜೆಪಿ(BJP) ಇದೀಗ ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಮತ್ತೆ ಮುಂದಾಗಿದೆ. ಇದರ ಮುನ್ನುಡಿ ಎಂಬಂತೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ನಾಳೆ ಪಕ್ಷದ ಕಾರ್ಯಕರ್ತರ ಸಭೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಪ್ರಧಾನಿ ಮೋದಿ ಸಂಜೆ 6 ಗಂಟೆಗೆ ಪಕ್ಷದ ಪ್ರಧಾನ ಕಚೇರಿಗೆ ತಲುಪುತ್ತಾರೆ, ಅಲ್ಲಿ ಅವರು ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಹಲವು ಮಹತ್ವದ ವಿಚಾರಗಳ ಕುರಿತು ಅವರು ಚರ್ಚೆ ನಡೆಸಲಿದ್ದಾರೆ. ನಾಳೆ ಸಂಜೆ ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ಮೋದಿ ದೀರ್ಘಕಾಲದ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ. ಅವರಲ್ಲಿ ಗುಮಾಸ್ತರು, ಪ್ಯೂನ್‌ಗಳು ಮತ್ತು ಇತರ ಕೆಲಸಗಾರರು ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಶೇಷವೆಂದರೆ ಜುಲೈ ಅಂತ್ಯದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಯುವ ಸಾಧ್ಯತೆ ಇದೆ. ಸಭೆಯಲ್ಲಿ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಉಪಸ್ಥಿತರಿರಲಿದ್ದಾರೆ. ಮೂಲಗಳ ಪ್ರಕಾರ ಲೋಕಸಭೆ ಚುನಾವಣೆ ಫಲಿತಾಂಶ ಹಾಗೂ ಸರ್ಕಾರ ಮತ್ತು ಸಂಘಟನೆಯ ನಡುವಿನ ಸಮನ್ವಯತೆ ಕುರಿತು ಚರ್ಚೆ ನಡೆಯಲಿದೆ.

ಜುಲೈ 14 ರಂದು, ಉತ್ತರ ಪ್ರದೇಶ ಭಾರತೀಯ ಜನತಾ ಪಕ್ಷವು ತನ್ನ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯನ್ನು ಲಕ್ನೋದ ಡಾ ರಾಮ್ ಮನೋಹರ್ ಲೋಹಿಯಾ ಕಾನೂನು ವಿಶ್ವವಿದ್ಯಾಲಯದ ಅಂಬೇಡ್ಕರ್ ಸಭಾಂಗಣದಲ್ಲಿ ನಡೆಸಿತ್ತು. ಈ ಸಭೆಯಲ್ಲಿ 2024 ರ ಲೋಕಸಭೆಯಲ್ಲಿ ಪಕ್ಷದ ಕಳಪೆ ಪ್ರದರ್ಶನದ ಬಗ್ಗೆ ಚರ್ಚಿಸಲಾಗಿತ್ತು. ಆ ಸಭೆಯಲ್ಲಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪ ಮುಖ್ಯಮಂತ್ರಿಗಳಾದ ಬ್ರಜೇಶ್ ಪಾಠಕ್ ಮತ್ತು ಕೆಪಿ ಮೌರ್ಯ ಮತ್ತು ಇತರ ಸಚಿವರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಪಕ್ಷಕ್ಕಾಗಿ ದುಡಿದು ಅಗಲಿದ ಪಕ್ಷದ ಕಾರ್ಯಕರ್ತರು ಹಾಗೂ ಅಧಿಕಾರಿಗಳಿಗೆ ಶ್ರದ್ಧಾಂಜಲಿ ಸಲ್ಲಿಸುವ ಜತೆಗೆ ರಾಜಕೀಯ ಪ್ರಸ್ತಾವನೆಗಳನ್ನು ಅಂಗೀಕರಿಸುವುದು ಸಭೆಯ ಪ್ರಮುಖ ಅಜೆಂಡಾವಾಗಿತ್ತು.
ರಾಜಕೀಯ ಪ್ರಸ್ತಾಪವು ಮುಂಬರುವ 10 ಸ್ಥಾನಗಳಿಗೆ ಉಪಚುನಾವಣೆ, ಲೋಕಸಭೆ ಚುನಾವಣೆಯ ಪರಾಮರ್ಶೆ ಮತ್ತು ಭವಿಷ್ಯದ ಮಾರ್ಗಸೂಚಿಗಳ ಕುರಿತು ಚರ್ಚೆಗಳನ್ನು ಒಳಗೊಂಡಿದೆ.

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದ ನಂತರ ಜುಲೈ 2 ರಂದು ಎನ್‌ಡಿಎ ಸಂಸದೀಯ ಪಕ್ಷದ ಸಭೆಯನ್ನು ರಾಷ್ಟ್ರ ರಾಜಧಾನಿಯಲ್ಲಿ ನಡೆಸಲಾಯಿತು.

ಇದನ್ನೂ ಓದಿ: UP CM v/s DCM: ಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ; ಯೋಗಿ ತಲೆದಂಡ ಪಕ್ಕಾನಾ?

Continue Reading

ರಾಜಕೀಯ

Karnataka Jobs Reservation: ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲು ಸಾಧ್ಯವೆ? ತೊಡಕುಗಳು ಏನೇನು?

ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ.75 ಮೀಸಲಾತಿ (Karnataka Jobs Reservation) ನಿಗದಿಪಡಿಸುವ ಕರಡು ಮಸೂದೆಗೆ ಕರ್ನಾಟಕದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ. ಇದಕ್ಕೆ ಖಾಸಗಿ ಕಂಪನಿಗಳ ಪ್ರಮುಖರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಸ್ಥಳೀಯರಿಂದ ಸಂತಸ ವ್ಯಕ್ತವಾಗಿದೆ. ಈ ಕಾಯಿದೆಯ ಹಿನ್ನೆಲೆ ಮುನ್ನೆಲೆ ಏನೇನು ಎಂಬ ವಿಸ್ತೃತ ಮಾಹಿತಿ ಇಲ್ಲಿದೆ.

VISTARANEWS.COM


on

By

Karnataka Jobs Reservation
Koo

ರಾಜ್ಯದ ಖಾಸಗಿ ಕೈಗಾರಿಕೆಗಳು (Private industry) ಹಾಗೂ ಇತರೆ ಸಂಸ್ಥೆಗಳಲ್ಲಿ ಸ್ಥಳೀಯರಿಗೆ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ. 50 ಮತ್ತು ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 75ರಷ್ಟು ಮೀಸಲಾತಿ (Karnataka Jobs Reservation) ಕಡ್ಡಾಯಗೊಳಿಸಿರುವ ಕರಡು ಮಸೂದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramiah) ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ (karnataka Cabinet meeting) ಅನುಮೋದನೆ ನೀಡಿಲಾಗಿದ್ದು, ಇದಕ್ಕೆ ಉದ್ಯಮ ರಂಗದ ಪ್ರಮುಖರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಆದರೆ, ಈ ಕಾಯಿದೆ ಜಾರಿಯಾದರೆ ಕನ್ನಡಿಗರಿಗೆ ಉದ್ಯೋಗದಲ್ಲಿ ನ್ಯಾಯ ಸಿಗಲಿದೆ ಎಂಬ ಸಂತಸ ಸ್ಥಳೀಯ ಯುವ ಜನತೆಯಿಂದ ವ್ಯಕ್ತವಾಗುತ್ತಿದೆ.

ಈ ಮಸೂದೆಯಲ್ಲಿ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ. 50ರಷ್ಟು ಮತ್ತು ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 75ರಷ್ಟು ಸ್ಥಳೀಯರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುತ್ತದೆ. ಸಾಕಷ್ಟು ಅರ್ಹ ಅಭ್ಯರ್ಥಿಗಳು ಇಲ್ಲದೇ ಇದ್ದರೆ ಸರ್ಕಾರದ ಸಹಯೋಗದೊಂದಿಗೆ ಉದ್ಯಮವು ಮೂರು ವರ್ಷಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ತರಬೇತಿ ನೀಡಿ ಅವರನ್ನು ತೊಡಗಿಸಿಕೊಳ್ಳಬೇಕು. ಪ್ರಸ್ತಾವಿತ ಕಾನೂನಿನ ನಿಬಂಧನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಉದ್ಯಮಕ್ಕೆ ಮೂರು ವರ್ಷಗಳ ಕಾಲಾವಕಾಶ ನೀಡಲು ಸರ್ಕಾರ ಯೋಜನೆ ರೂಪಿಸುತ್ತಿದೆ.

ಮೂರು ವರ್ಷಗಳ ಆನಂತರವೂ ಉದ್ಯಮಕ್ಕೆ ಈ ಸಮಸ್ಯೆ ಎದುರಾದರೆ ತರಬೇತಿಯ ಅನಂತರವೂ ಸಾಕಷ್ಟು ಸೂಕ್ತ ಸ್ಥಳೀಯರು ಲಭ್ಯವಾಗದೇ ಇದ್ದರೆ ವಿಚಾರಣೆಯ ಅನಂತರ ಉದ್ಯಮವನ್ನು ಮೀಸಲಾತಿ ನಿಬಂಧನೆಗಳಿಂದ ವಿನಾಯಿತಿ ನೀಡುವ ಸರ್ಕಾರದ ಅಧಿಕಾರವನ್ನು ಮಸೂದೆ ಒದಗಿಸುತ್ತದೆ. ವೃತ್ತಿಪರರನ್ನು ನೇಮಿಸಿಕೊಳ್ಳಲು ಕಂಪೆನಿಗಳಿಗೆ ಅವಕಾಶವನ್ನು ಒದಗಿಸುತ್ತದೆ. ಆದರೆ ಈ ಅವಕಾಶ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ. 25ರಷ್ಟು ಮತ್ತು ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 50ರಷ್ಟು ಸ್ಥಳೀಯರನ್ನು ಭರ್ತಿ ಮಾಡಿದರೆ ಮಾತ್ರ ಸಿಗುತ್ತದೆ ಎಂಬುದು ಗಮನಾರ್ಹ ಸಂಗತಿಯಾಗಿದೆ.

Karnataka Jobs Reservation


ಸ್ಥಳೀಯರು ಅಂದರೆ ಯಾರು?

ಕರ್ನಾಟಕದಲ್ಲಿ ಹುಟ್ಟಿರುವ, 15 ವರ್ಷಗಳಿಂದ ರಾಜ್ಯದಲ್ಲಿ ನೆಲೆಸಿರುವ, ಕನ್ನಡ ಭಾಷೆಯನ್ನು ಓದುವುದು ಮತ್ತು ಬರೆಯುವುದನ್ನು ಚೆನ್ನಾಗಿ ತಿಳಿದಿರುವವರನ್ನು ಸ್ಥಳೀಯರು ಎಂದು ಮಸೂದೆಯಲ್ಲಿ ವ್ಯಾಖ್ಯಾನಿಸಲಾಗಿದೆ.
ಈ ಕಾನೂನಿನ ಅಡಿಯಲ್ಲಿ ಪ್ರಯೋಜನವನ್ನು ಬಯಸುವವರು ಕನ್ನಡ ಮಾಧ್ಯಮದಲ್ಲಿ ಹಿರಿಯ, ಮಾಧ್ಯಮಿಕ ಹಂತದಲ್ಲಿ ಓದಿರುವವರು ರಾಜ್ಯ ಸರ್ಕಾರದ ಭಾಷಾ ಪ್ರಾವೀಣ್ಯತೆಯ ಪರೀಕ್ಷೆಯನ್ನು ತೇರ್ಗಡೆಗೊಳಿಸಬೇಕು.

ಆಡಳಿತಾತ್ಮಕ, ಆಡಳಿತಾತ್ಮಕವಲ್ಲದ ಹುದ್ದೆಗಳು ಯಾವುದು?

ಆಡಳಿತಾತ್ಮಕ ಹುದ್ದೆಗಳೆಂದರೆ ನಿರ್ದೇಶಕರನ್ನು ಹೊರತುಪಡಿಸಿ ಮೇಲ್ವಿಚಾರಣೆ, ತಾಂತ್ರಿಕ, ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಪಾತ್ರಗಳಲ್ಲಿನ ಸ್ಥಾನಗಳನ್ನು ಒಳಗೊಂಡಿದೆ. ಆಡಳಿತಾತ್ಮಕವಲ್ಲದ ಹೊರಗುತ್ತಿಗೆ ಉದ್ಯೋಗಗಳು ಸೇರಿದಂತೆ ಕ್ಲೆರಿಕಲ್ ಹುದ್ದೆಗಳು, ಅರೆ ಮತ್ತು ನುರಿತ ಕೆಲಸಗಾರರಂತಹ ಎಲ್ಲಾ ಇತರ ಹುದ್ದೆಗಳನ್ನು ಸೇರಿಸಲಾಗಿದೆ.

ಇದನ್ನು ಯಾರು ಜಾರಿಗೆ ತರುತ್ತಾರೆ?

ಈ ಕಾನೂನನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಸರ್ಕಾರವು ಏಜೆನ್ಸಿಯನ್ನು ನೇಮಿಸುತ್ತದೆ. ಬಹುತೇಕ ಕಾರ್ಮಿಕ ಇಲಾಖೆಯೇ ಇದನ್ನು ನಿರ್ವಹಿಸಲಿದೆ. ವ್ಯವಸ್ಥಾಪಕ ಮತ್ತು ನಿರ್ವಾಹಕೇತರ ಹುದ್ದೆಗಳ ನೇಮಕಾತಿಗಳ ಕುರಿತು ವರದಿ ಪಡೆಯಲು, ಅನುಸರಣೆ ಇಲ್ಲದಿದ್ದಲ್ಲಿ ವಿಚಾರಣೆ ನಡೆಸಲು ಏಜೆನ್ಸಿಗೆ ಅಧಿಕಾರವಿದೆ. ಕ್ಲೈಮ್‌ಗಳನ್ನು ಪರಿಶೀಲಿಸಲು ಏಜೆನ್ಸಿಯು ಉದ್ಯೋಗದಾತರಿಂದ ಯಾವುದೇ ದಾಖಲೆಗಳನ್ನು ಪಡೆಯಬಹುದು. ಅಗತ್ಯಬಿದ್ದರೆ ಉದ್ಯಮದೊಳಗೆ ಪ್ರವೇಶಿಸಿ ಪರಿಶೀಲಿಸುವ ಅಧಿಕಾರವೂ ಸಂಸ್ಥೆಯ ಅಧಿಕಾರಿಗಳಿಗೆ ಇರುತ್ತದೆ. ಪ್ರಸ್ತಾವಿತ ಕಾನೂನಿನ ಅನುಷ್ಠಾನಕ್ಕಾಗಿ ಪ್ರಾಧಿಕಾರವು ಸಹಾಯಕ ಕಾರ್ಮಿಕ ಆಯುಕ್ತರ ಶ್ರೇಣಿಗಿಂತ ಕಡಿಮೆಯಿಲ್ಲದ ಅಧಿಕಾರಿಯನ್ನು ನೇಮಿಸಲಿದೆ.

Karnataka Jobs Reservation


ಕಾನೂನು ಪಾಲನೆಯಾಗದೇ ಇದ್ದರೆ?

ಪ್ರಸ್ತಾವಿತ ಕಾನೂನು ಸರಿಯಾಗಿ ಪಾಲನೆ ಆಗದೇ ಇದ್ದರೆ ಅಥವಾ ಕಾನೂನನ್ನು ಉಲ್ಲಂಘಿಸಿದರೆ ಕನಿಷ್ಠ 10,000 ರೂ.ನಿಂದ ಗರಿಷ್ಠ 25,000 ರೂ.ವರೆಗೆ ದಂಡವನ್ನು ನಿಗದಿಪಡಿಸಲಾಗಿದೆ. ಕಾನೂನಿನ ಉಲ್ಲಂಘನೆ ಮುಂದುವರಿದರೆ ದಂಡದ ಮೊತ್ತವನ್ನು 1 ಲಕ್ಷ ರೂ.ವರೆಗೆ ಹೆಚ್ಚಿಸಲಾಗುತ್ತದೆ. ಜೈಲು ಶಿಕ್ಷೆಯ ಬಗ್ಗೆ ಉಲ್ಲೇಖವಿಲ್ಲ. ಮಸೂದೆಯು ಆರು ತಿಂಗಳವರೆಗೆ ಕಾಲಾವಕಾಶ ನೀಡಲಿದೆ.

ಏನು ಇದರ ಪರಿಣಾಮ?

ಪ್ರಸ್ತಾವಿತ ಈ ಕಾನೂನು ಜಾರಿಯಾದರೆ 1.5 ಮಿಲಿಯನ್ ಉದ್ಯೋಗಿಗಳನ್ನು ಹೊಂದಿರುವ 245 ಬಿಲಿಯನ್ ಡಾಲರ್ ಮೌಲ್ಯದ ಬೆಂಗಳೂರು ತಂತ್ರಜ್ಞಾನ ಉದ್ಯಮದಲ್ಲಿ ಕನ್ನಡಿಗರಿಗೆ ಹೆಚ್ಚು ಉದ್ಯೋಗ ಸಿಗಲಿದೆ. ಯಾಕೆಂದರೆ ಇಲ್ಲಿ ಕೆಲಸ ಮಾಡುವ ಹೆಚ್ಚಿನ ಜನರು ಕನ್ನಡೇತರರು. ಕನ್ನಡಿಗರಿಗೆ ಅನ್ಯಾಯ ಆಗುತ್ತಿದೆ ಎಂಬ ಕೂಗು ಮೊದಲಿನಿಂದಲೂ ಕೇಳಿ ಬರುತ್ತಿದೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರವು ರಾಜ್ಯದ ಜಿಡಿಪಿಗೆ ಶೇ. 25ರಷ್ಟು ಕೊಡುಗೆ ನೀಡುತ್ತದೆ. ಸ್ಥಳೀಯರಿಗೆ ಮೀಸಲಾತಿ ಜಾರಿಗೆ ತಂದರೆ ಉನ್ನತ ಪ್ರತಿಭೆಗಳು, ಕುಶಲತೆ ಹೊಂದಿರುವವರು ಸಾಕಷ್ಟು ಸಂಖ್ಯೆಯಲ್ಲಿ ಸಿಗುತ್ತಿಲ್ಲ ಎಂದು ಖಾಸಗಿ ಕಂಪನಿಗಳು ಈ ಕಾಯಿದೆ ವಿರೋಧಿಸಿ ಬೇರೆ ರಾಜ್ಯಗಳಿಗೆ ವಲಸೆ ಹೋಗಬಹುದು. ಇದರಿಂದ ರಾಜ್ಯಕ್ಕೆ ಹಿನ್ನಡೆ ಆಗಬಹುದು.

ರಾಜ್ಯ ಸರ್ಕಾರದ ಪ್ರಕಾರ ಬೆಂಗಳೂರು ಕರ್ನಾಟಕದ ಆರ್ಥಿಕತೆಗೆ ಶೇ. 43.86ರಷ್ಟು ಕೊಡುಗೆ ನೀಡುತ್ತಿದೆ. ಕಳೆದ ವರ್ಷ ಮಂಡಿಸಲಾದ 2022-23ರ ಬಜೆಟ್‌ನಲ್ಲಿ ರಾಜ್ಯ ಹಣಕಾಸು ಇಲಾಖೆಯ ಅಂದಾಜಿನ ಪ್ರಕಾರ ರಾಷ್ಟ್ರೀಯ ಜಿಡಿಪಿಗೆ ಕರ್ನಾಟಕ ಶೇ. 7ರಷ್ಟು ಕೊಡುಗೆ ನೀಡುತ್ತಿದೆ. ಮಸೂದೆಯಲ್ಲಿನ ನಿರ್ಬಂಧಗಳು ಮುಂದಿನ ಐದು ವರ್ಷಗಳಲ್ಲಿ ಒಂದು ಟ್ರಿಲಿಯನ್ ಡಾಲರ್ ಮೌಲ್ಯದ ರಾಜ್ಯ ಸರ್ಕಾರದ ಯೋಜನೆಗಳ ಮೇಲೆ ಪರಿಣಾಮ ಬೀರಬಹುದು ಎನ್ನುತ್ತಾರೆ ಉದ್ಯಮ ತಜ್ಞರು.

Karnataka Jobs Reservation


ಬೇರೆ ರಾಜ್ಯಗಳಲ್ಲಿ ಈ ನಿರ್ಬಂಧ ಇದೆಯೇ?

ಭಾರತದ ಖಾಸಗಿ ವಲಯದಲ್ಲಿ ಉದ್ಯೋಗಗಳಲ್ಲಿ ಮೀಸಲಾತಿ ಕಾಯ್ದಿರಿಸಿದ ಮೊದಲ ರಾಜ್ಯಗಳಲ್ಲಿ ಆಂಧ್ರ ಪ್ರದೇಶ ಮತ್ತು ಹರಿಯಾಣ ಸೇರಿವೆ. ಎರಡೂ ರಾಜ್ಯಗಳು ಸಂಬಳದ ಮಿತಿಯೊಂದಿಗೆ ಉದ್ಯೋಗಗಳಿಗೆ ಮೀಸಲಾತಿಯನ್ನು ಒದಗಿಸಿವೆ. ಹರಿಯಾಣದಲ್ಲಿ 30,000 ರೂ. ಮಾಸಿಕ ವೇತನದ ಉದ್ಯೋಗಗಳಿಗೆ ಶೇ.75ರಷ್ಟು ಮೀಸಲಾತಿ ಅನ್ವಯಿಸುತ್ತದೆ. ಆಂಧ್ರದಲ್ಲಿ ಶೇ. 75ರಷ್ಟು ಮೀಸಲಾತಿಗೆ ಮಾಸಿಕ ವೇತನದ ಮಿತಿ 50,000 ರೂ. ಆಗಿದೆ.

ಕರ್ನಾಟಕ ಮಸೂದೆಯು ಸಂಬಳದ ಮಿತಿಯನ್ನು ವಿಧಿಸಿಲ್ಲ. ನಿರ್ದೇಶಕರನ್ನು ಹೊರತುಪಡಿಸಿ ಎಲ್ಲಾ ಖಾಸಗಿ ವಲಯದ ಉದ್ಯೋಗಗಳ ಮೇಲೆ ಕೋಟಾವನ್ನು ವಿಧಿಸುತ್ತದೆ. ಆದರೆ ಆಂಧ್ರಪ್ರದೇಶದಂತೆ ಕರ್ನಾಟಕವೂ ಸಹ ರಾಜ್ಯ ಶಾಸಕಾಂಗವು ಒಮ್ಮೆ ಅಂಗೀಕರಿಸಿದ ಕಾನೂನನ್ನು ಜಾರಿಗೆ ತರಲು ಉದ್ಯಮಕ್ಕೆ ಮೂರು ವರ್ಷಗಳನ್ನು ಒದಗಿಸಿದೆ.

ಇದನ್ನೂ ಓದಿ: Karnataka Jobs Reservation: ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಶೇ.75 ಮೀಸಲಾತಿ ಮಾತ್ರ; ಆಡಳಿತ ಹುದ್ದೆಗಳಲ್ಲಿ ಶೇ.50; ಉದ್ಯಮಿಗಳಿಗೆ ಬೆಚ್ಚಿತೇ ಸರ್ಕಾರ?

ಯಾವ ರೀತಿ ಎದುರಾಗಲಿದೆ ಕಾನೂನು ತೊಡಕುಗಳು?

ಕರ್ನಾಟಕ ಸರ್ಕಾರ ಪ್ರಸ್ತಾಪಿಸಿರುವ ಈ ಕಾನೂನಿಗೆ ಕಾನೂನು ತೊಡಕುಗಳು ಎದುರಾಗಬಹುದು. ಹರಿಯಾಣವು ಸ್ಥಳೀಯ ಅಭ್ಯರ್ಥಿಗಳಿಗೆ ರಾಜ್ಯ ಉದ್ಯೋಗ ಕಾಯಿದೆಯನ್ನು 2020ರಲ್ಲಿ ಜಾರಿಗೊಳಿಸಿತು. ಖಾಸಗಿ ವಲಯದ ಉದ್ಯೋಗಗಳಲ್ಲಿ ಸ್ಥಳೀಯರಿಗೆ 30,000 ರೂ. ವರೆಗಿನ ವೇತನಕ್ಕಾಗಿ ಶೇ. 75ರಷ್ಟು ಮೀಸಲಾತಿಯನ್ನು ಒದಗಿಸಿತು. ಬಳಿಕ ಅದನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಆದರೆ ಇದು ಕಾನೂನನ್ನು ಸಂವಿಧಾನದ ಭಾಗ IIIರಲ್ಲಿ ಭಾರತದಾದ್ಯಂತ ಉದ್ಯೋಗ ಸ್ವಾತಂತ್ರ್ಯವನ್ನು ಒದಗಿಸುವ ಸಂವಿಧಾನದ 14 ಮತ್ತು 19ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು 2022ರಲ್ಲಿ ಹೈಕೋರ್ಟ್ ಈ ಕಾಯಿದೆಯನ್ನು ವಜಾಗೊಳಿಸಿತ್ತು.

Continue Reading

ದೇಶ

UP CM v/s DCM: ಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ; ಯೋಗಿ ತಲೆದಂಡ ಪಕ್ಕಾನಾ?

UP CM v/s DCM: ಜೆ ಪಿ ನಡ್ಡಾರ ಜೊತೆ ಕೇಶವ್‌ ಪ್ರಸಾದ್‌ ಭೇಟಿ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಭೂಪೇಂದ್ರ ಸಿಂಗ್‌ ಚೌಧರಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಆಗಿ ಮಾತುಕತೆ ನಡೆಸಿರುವುದು ಎಲ್ಲರ ಗಮನ ಸೆಳೆದಿದೆ. ಇನ್ನು ಭೂಪೇಂದ್ರ ಸಿಂಗ್ ಚೌಧರಿ, ಜೆಪಿ ನಡ್ಡಾ ಅವರನ್ನೂ ಸಹ ಭೇಟಿ ಮಾಡಿ ಪ್ರತ್ಯೇಕ ಸಭೆ ನಡೆಸಿದ್ದಾರೆ.

VISTARANEWS.COM


on

UP CM DCM
Koo

ಲಖನೌ: ಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ(UP CM v/s DCM) ಸ್ಫೋಟವಾಗಿದೆ. ಸಿಎಂ ಯೋಗಿ ಆದಿತ್ಯಾನಾಥ್‌(Yogi Adityanath) ಮತ್ತು ಡಿಸಿಎಂ ಕೇಶವ್‌ ಪ್ರಸಾದ್‌ ಮೌರ್ಯ(Keshav Prasad Mourya) ನಡುವಿನ ಮುಸುಕಿನ ಗುದ್ದಾಟ ಬಹಿರಂಗವಾಗಿದೆ. ಇಬ್ಬರ ನಡುವಿನ ಭಾರೀ ಭಿನ್ನಮತದ ಬೆನ್ನಲ್ಲೇ ಕೇಶವ್ ಪ್ರಸಾದ್ ಮೌರ್ಯ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ(JP Nadda) ಅವರನ್ನು ಭೇಟಿ ಮಾಡಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ. ಅದೂ ಅಲ್ಲದೇ ಚುನಾವಣಾ ಹಿನ್ನಡೆ ಬಳಿಕ ಸಿಎಂ ಯೋಗಿ ಆದಿತ್ಯನಾಥ್ ತಲೆದಂಡವಾಗಲಿದೆ ಎಂಬ ವದಂತಿಗೆ ಮತ್ತಷ್ಟು ಪುಷ್ಠಿ ಸಿಕ್ಕಂತಾಗಿದೆ.

ಇನ್ನು ಜೆ ಪಿ ನಡ್ಡಾರ ಜೊತೆ ಕೇಶವ್‌ ಪ್ರಸಾದ್‌ ಭೇಟಿ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಭೂಪೇಂದ್ರ ಸಿಂಗ್‌ ಚೌಧರಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಆಗಿ ಮಾತುಕತೆ ನಡೆಸಿರುವುದು ಎಲ್ಲರ ಗಮನ ಸೆಳೆದಿದೆ. ಇನ್ನು ಭೂಪೇಂದ್ರ ಸಿಂಗ್ ಚೌಧರಿ, ಜೆಪಿ ನಡ್ಡಾ ಅವರನ್ನೂ ಸಹ ಭೇಟಿ ಮಾಡಿ ಪ್ರತ್ಯೇಕ ಸಭೆ ನಡೆಸಿದ್ದಾರೆ.

ಜೆಪಿ ನಡ್ಡಾ ಭೇಟಿಗೂ ಮುನ್ನ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬಹಿರಂಗವಾಗಿ ಯೋಗಿ ಆದಿತ್ಯಾನಾಥ್‌ ವಿರುದ್ಧ ಕಿಡಿಕಾರಿದ್ದ ಮೌರ್ಯ “ಸರ್ಕಾರಕ್ಕಿಂತ ಸಂಘಟನೆ ದೊಡ್ಡದು. ನನ್ನ ಕಾರ್ಯಕರ್ತರ ನೋವು, ನನ್ನ ನೋವು ಕೂಡ. ಸಂಘಟನೆಗಿಂತ ಯಾರೂ ದೊಡ್ಡವರಲ್ಲ. ಕಾರ್ಯಕರ್ತರೇ ಹೆಮ್ಮೆ” ಎಂದು ಟ್ವೀಟ್ ಮಾಡಿತ್ತು. ಇದರ ಬೆನ್ನಲ್ಲೇ ಮೌರ್ಯ ಅವರ ದಿಲ್ಲಿ ಪ್ರವಾಸ ಸಂಚಲನ ಮೂಡಿಸಿತ್ತು.

ಕಳೆದ ಜೂನ್ 14ರಂದು ಲಖನೌದಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಲೋಕಸಭೆ ಚುನಾವಣೆಯ ಹಿನ್ನಡೆಗೆ ‘ಅತಿಯಾದ ಆತ್ಮವಿಶ್ವಾಸ’ ಕಾರಣ ಎಂದು ಸಿಎಂ ಯೋಗಿ ಆದಿತ್ಯನಾಥ್ ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಲೋಕಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಸೇರಿದಂತೆ ರಾಜ್ಯ ಬಿಜೆಪಿಯ ಹಲವು ನಾಯಕರು, ಯೋಗಿ ಆದಿತ್ಯನಾಥ್ ಅವರ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ತಮ್ಮ ಸೋಲಿಗೆ ಯೋಗಿ ಅವರ ಆಡಳಿತ ಶೈಲಿಯೇ ಕಾರಣ ಎಂದು ಆರೋಪಿಸುತ್ತಿದ್ದರು.

ಅಖಿಲೇಶ್‌ ಯಾದವ್‌ ಗೆ ತಿರುಗೇಟು

ಏತನ್ಮಧ್ಯೆ, ಮೌರ್ಯ ಅವರ ಪೋಸ್ಟ್ ಅನ್ನೇ ಅಸ್ತ್ರವನ್ನಾಗಿಸಿಕೊಂಡು ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ವ್ಯಂಗ್ಯವಾಡಿದೆ. ಈ ಬಗ್ಗೆ ಎಸ್ಪಿ ನಾಯಕ ಅಖಲೇಶ್‌ ಯಾದವ್‌ ಬಿಜೆಪಿಯನ್ನು ಟೀಕಿಸಿದ್ದರು. ಇದಕ್ಕೆ ಟಾಂಗ್‌ ಕೊಟ್ಟ, ಕೇಶವ್ ಪ್ರಸಾದ್ ಮೌರ್ಯ, ಇಂದು ಬಿಜೆಪಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರಬಲವಾಗಿದೆ ಮತ್ತು 2027 ರಲ್ಲಿ ಯುಪಿ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ಹೇಳಿದರು.

ಇದನ್ನೂ ಓದಿ:Director Arrest: ಕೊಲೆ ಕೇಸ್​​ನಲ್ಲಿ 20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಸ್ಯಾಂಡಲ್​ವುಡ್ ನಿರ್ದೇಶಕ ಅರೆಸ್ಟ್​!

Continue Reading
Advertisement
Pralhad Joshi
ದೇಶ4 mins ago

Pralhad Joshi: ಉಚಿತ ಅಕ್ಕಿ ವಿತರಣೆಯ ಪಿಎಂ ಗರೀಬ್ ಕಲ್ಯಾಣ್‌ ಅನ್ನ ಯೋಜನೆ 2029ರ ವರೆಗೆ ವಿಸ್ತರಣೆ: ಪ್ರಲ್ಹಾದ ಜೋಶಿ

Kannada New Movie life of mradula song out
ಸ್ಯಾಂಡಲ್ ವುಡ್15 mins ago

Kannada New Movie: ಹೊಸಬರ ತಂಡ ಸಿದ್ದಪಡಿಸಿರುವ ಹೊಸತನದ ಸಿನಿಮಾ; ಲೈಫ್ ಆಫ್ ಮೃದುಲ ಹಾಡು ಬಿಡುಗಡೆ!

road Accident
ರಾಯಚೂರು21 mins ago

Road Accident : ಪಾದಚಾರಿ ಬಲಿ ಪಡೆದು ಎಸ್ಕೇಪ್‌ ಆದ ಬಸ್‌ ಚಾಲಕ; ಬಾಲಕಿಗೆ ಗುದ್ದಿ ಪ್ರಾಣ ಕಸಿದ ಲಾರಿ

Paris Olympics 2024
ಕ್ರೀಡೆ22 mins ago

Paris Olympics 2024: ಈ ಬಾರಿ ಒಲಿಂಪಿಕ್ಸ್​ನಲ್ಲಿ ಕಣಕ್ಕಿಳಿಯಲಿದ್ದಾರೆ ಭಾರತದ 117 ಕ್ರೀಡಾಳುಗಳು; ಅಥ್ಲೆಟಿಕ್ಸ್​ ದೊಡ್ಡ ತಂಡ

Urvashi Rautela bathroom video leak on social media
ಸಿನಿಮಾ39 mins ago

Urvashi Rautela: ನಟಿ ಊರ್ವಶಿ ರೌಟೇಲಾ ಬಟ್ಟೆ ಬಿಚ್ಚಿ, ಸ್ನಾನ ಮಾಡುವ ವಿಡಿಯೊ ಲೀಕ್‌!

United Nations
ವಿದೇಶ47 mins ago

United Nations: ಗಾಜಾದಲ್ಲಿ ಸಂಪೂರ್ಣ ಕದನ ವಿರಾಮ ಘೋಷಿಸಿ; ವಿಶ್ವಸಂಸ್ಥೆಯಲ್ಲಿ ಪುನರುಚ್ಚರಿಸಿದ ಭಾರತ

Karnataka Jobs Reservation
ಪ್ರಮುಖ ಸುದ್ದಿ55 mins ago

Karnataka Jobs Reservation: ಉರಿವ ಮನೆಯಿಂದ ಗಳ ಹಿರಿದ ಆಂಧ್ರಪ್ರದೇಶ; ʼನಮ್ಮಲ್ಲಿಗೇ ಬನ್ನಿʼ ಎಂದು ಖಾಸಗಿ ಉದ್ಯಮಗಳಿಗೆ ಭಿಕ್ಷಾಪಾತ್ರೆ ಒಡ್ಡಿದ ಸಚಿವ

Maoists Attack
ದೇಶ1 hour ago

Maoists Attack: ಛತ್ತೀಸ್‌ಗಢದಲ್ಲಿ ಮತ್ತೆ ಮಾವೋವಾದಿಗಳ ಅಟ್ಟಹಾಸ; ಇಬ್ಬರು ಪೊಲೀಸರು ಹುತಾತ್ಮ

Viral Video
ಪ್ರಮುಖ ಸುದ್ದಿ1 hour ago

Viral Video: ಇನ್‌ಸ್ಟಾಗ್ರಾಂನಲ್ಲಿಯೇ ಗಂಡನಿಗೆ ಡಿವೋರ್ಸ್‌‌ ನೀಡಿದ ದುಬೈ ರಾಜಕುಮಾರಿ! ಏನು ಬರೆದಿದ್ದಾಳೆ ನೋಡಿ!

Hardik Pandya
ಕ್ರೀಡೆ1 hour ago

Hardik Pandya: ಫಿಟ್ನೆಸ್‌ ಬಗ್ಗೆ ಪ್ರಶ್ನೆ ಮಾಡಿದವರಿಗೆ ಸಿಕ್ಸ್​ ಪ್ಯಾಕ್​ ಮೂಲಕ ತಿರುಗೇಟು ಕೊಟ್ಟ ಹಾರ್ದಿಕ್​ ಪಾಂಡ್ಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ5 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌