Site icon Vistara News

Narendra Modi: ಪ್ರಧಾನಿ ಮೋದಿ ಅನರ್ಹತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ

Vote Jihad

PM Narendra Modi Says UP Leader's "Vote Jihad" Remark Exposed INDIA Bloc Strategy

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(Narendra Modi) ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ನೀತಿ ಸಂಹಿತೆ ಉಲ್ಲಂಘನೆ(Code of conduct) ಮಾಡಿದ್ದಾರೆ ಅವರನ್ನು ಚುನಾವಣೆಯಿಂದ 6 ವರ್ಷ ಅನರ್ಹಗೊಳಿಸಬೇಕಂದು ಮನವಿ ಮಾಡಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದಿಲ್ಲಿ ಕೋರ್ಟ್‌ ವಜಾ ಮಾಡಿದೆ. ಆನಂದ್‌ ಎಸ್‌. ಜೋಂದಲ್‌ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ದಿಲ್ಲಿ ಕೋರ್ಟ್‌(Delhi court) ಅದನ್ನು ವಜಾಗೊಳಿಸಿದೆ. ಉತ್ತರಪ್ರದೇಶದ ಪಿಲಿಬಿತ್‌ನಲ್ಲಿ ಏ.6ರಂದು ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಸಿಖ್‌ ಮತ್ತು ಹಿಂದೂ ಭಕ್ತರ ಭಕ್ತ ಬಗ್ಗೆ ಉಲ್ಲೇಖಸಿದ್ದರು ಆ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದರು ಎಂದು ಅರ್ಜಿಯಲ್ಲಿ ತಿಳಿಸಿದ್ದರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವುದನ್ನು ಇಂಡಿಯಾ ಒಕ್ಕೂಟ ಸದಾ ದ್ವೇಷಿಸಿತ್ತು. ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ನೀಡಿದ್ದರೂ ಅದನ್ನು ತಿರಸ್ಕರಿಸಿ ರಾಮಲಲ್ಲಾಗೆ ಅವಮಾನ ಮಾಡಿದ್ದರು. ಅವರ ಪಕ್ಷಗಳಿಂದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಾಯಕರನ್ನು ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿತ್ತು. ʼಶಕ್ತಿʼಯನ್ನು ನಿರ್ಣಾಮ ಮಾಡಬೇಕೆಂದು ಇಂಡಿಯಾ ಪಣತೊಟ್ಟಿದೆ. ಇಡೀ ದೇಶವೇ ಪೂಜಿಸುವ ಶಕ್ತಿಯನ್ನು ಕಾಂಗ್ರೆಸ್‌ ಅವಮಾನಿಸಿದೆ. ಶಕ್ತಿಯನ್ನು ಪೂಜಿಸುವ ದೇಶದ ಜನ ಕಾಂಗ್ರೆಸ್‌ ಅನ್ನು ಎಂದೂ ಕ್ಷಮಿಸಲ್ಲ ಎಂದು ಪಿಲಿಬಿತ್‌ ಅಭ್ಯರ್ಥಿ ಜಿತಿನ್‌ ಪ್ರಸಾದ್‌ ಪರ ಪ್ರಚಾರದ ವೇಳೆ ಪ್ರಧಾನಿ ವಾಗ್ದಾಳಿ ನಡೆಸಿದ್ದರು.

ಲೋಕಸಭೆ ಚುನಾವಣೆಯ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕುರಿತಂತೆ ಚುನಾವಣೆ ಆಯೋಗವು ಪ್ರಧಾನಿ ನರೇಂದ್ರ ಮೋದಿಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಪ್ರತಿಕ್ರಿಯೆ ಕೇಳಿತ್ತು. ಏಪ್ರಿಲ್‌ 29ರ ಬೆಳಗ್ಗೆ 11 ಗಂಟೆಯೊಳಗೆ ಇಬ್ಬರೂ ನಾಯಕರು ಪ್ರತಿಕ್ರಿಯೆ ನೀಡಬೇಕು ಎಂಬುದಾಗಿ ಚುನಾವಣೆ ಆಯೋಗವು ಸೂಚನೆ ನೀಡಿತ್ತು. ನರೇಂದ್ರ ಮೋದಿ ಹಾಗೂ ರಾಹುಲ್‌ ಗಾಂಧಿ ಅವರು ಚುನಾವಣೆ ಪ್ರಚಾರದ ವೇಳೆ ಜಾತಿ, ಧರ್ಮ, ಸಮುದಾಯ ಹಾಗೂ ಭಾಷೆ ಆಧಾರದ ಮೇಲೆ ಮತಗಳನ್ನು ಕೇಳಿದ್ದಾರೆ. ದ್ವೇಷ ಹರಡುವ ರೀತಿಯಲ್ಲಿ ಇವರು ಮಾತನಾಡಿದ್ದಾರೆ ಎಂಬ ಕುರಿತು ಆರೋಪಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಚುನಾವಣೆ ಆಯೋಗವು ಇಬ್ಬರು ನಾಯಕರ ಪ್ರತಿಕ್ರಿಯೆ ಕೇಳಿತ್ತು.

ಇದನ್ನೂ ಓದಿ: Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಆಸ್ತಿ ಹಂಚಿಕೆ ವಿಷಯ ಪ್ರಸ್ತಾಪಿಸಿದ್ದರು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನಿಮ್ಮ ಮಂಗಳಸೂತ್ರವನ್ನು ಮುಸ್ಲಿಮರಿಗೆ ನೀಡುತ್ತದೆ ಎಂದಿದ್ದರು. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ನಿಮ್ಮ ಆದಾಯ ಮತ್ತು ಆಸ್ತಿಯ ಮೇಲೆ ಕಣ್ಣಿಟ್ಟಿವೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಇದನ್ನು ಉಲ್ಲೇಖಿಸಿದೆ. ಮಹಿಳೆಯರು ಚಿನ್ನವನ್ನು ಆಭರಣಗಳ ರೂಪದಲ್ಲಿ ಧರಿಸಲು ಮಾತ್ರವಲ್ಲ, ಅದನ್ನು ರಸಕ್ಷಿಸಲು ಕಾನೂನಿನಲ್ಲಿ ಅವಕಾಶವಿದೆ. ಆದರೆ ಈಗ ಅವರ ಕಣ್ಣು ಮಹಿಳೆಯರ ಮಂಗಳಸೂತ್ರದ ಮೇಲೆ ನೆಟ್ಟಿದೆ. ತಾಯಿ ಮತ್ತು ಸಹೋದರಿಯರ ಚಿನ್ನವನ್ನು ದೋಚುವುದು ಇವರ ಉದ್ದೇಶ. ಹೀಗಾಗಿ ಅವರು ಅಧಿಕಾರಕ್ಕೆ ಬಂದರೆ ನಿಮ್ಮ ಮಂಗಳಸೂತ್ರವೂ ಸುರಕ್ಷಿತವಲ್ಲ ಎಂದು ಮೋದಿ ಹೇಳಿದ್ದರು.

Exit mobile version