Site icon Vistara News

Exam Scam : ಸರ್ಕಾರಿ ನೇಮಕಾತಿ ಅಕ್ರಮ ತಡೆಯಲು ವಿಧೇಯಕ; ಅಧಿವೇಶನದಲ್ಲಿ ಮಂಡನೆ

CM SIddaramaiah infront of vidhanasowdha

ಬೆಂಗಳೂರು: ಕರ್ನಾಟಕ ಪಬ್ಲಿಕ್‌ ಎಗ್ಸಾಮಿನೇಷನ್‌ (ಭ್ರಷ್ಟಾಚಾರ ಮತ್ತು ಅಕ್ರಮ ವಿಧಾನಗಳ ತಡೆಗಟ್ಟುವಿಕೆ ಕ್ರಮಗಳು) ವಿಧೇಯಕ – 2023ಕ್ಕೆ ಶುಕ್ರವಾರ (ನ. 16) ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು, ಈ ವಿಧೇಯಕವನ್ನು ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ಮಂಡಿಸಲು ನಿರ್ಧರಿಸಿದ್ದೇವೆ. ಬಿಜೆಪಿ ಅವಧಿಯಲ್ಲಾಗಿದ್ದ ನೇಮಕಾತಿ ಪರೀಕ್ಷೆ (Exam Scam) ವೇಳೆ ಅಕ್ರಮದಂತಹ ಪ್ರಕರಣಗಳಿಗೆ ತಡೆಯೊಡ್ಡಲು ನಾವು ಕ್ರಮ ಕೈಗೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

ಈ ಬಗ್ಗೆ ತಮ್ಮ ಸೋಷಿಯಲ್‌ ಮೀಡಿಯಾ (social media) ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ಸರ್ಕಾರದ ಅವಧಿಯಲ್ಲಾಗಿದ್ದ ಪರೀಕ್ಷಾ ಅಕ್ರಮಗಳ ಬಗ್ಗೆ ಉಲ್ಲೇಖಿಸಿದ್ದಾರೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದಷ್ಟೇ ಅಲ್ಲ, ಅರ್ಹರಿಗೆ ಮಾತ್ರ ಉದ್ಯೋಗ ಸಿಗಬೇಕು ಎಂಬುದೂ ನಮ್ಮ ಆದ್ಯತೆಯಾಗಿದೆ ಎಂದು ಸಹ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಪೋಸ್ಟ್‌ನಲ್ಲೇನಿದೆ?

ಕರ್ನಾಟಕ ಪಬ್ಲಿಕ್‌ ಎಗ್ಸಾಮಿನೇಷನ್‌ (ಭ್ರಷ್ಟಾಚಾರ ಮತ್ತು ಅಕ್ರಮ ವಿಧಾನಗಳ ತಡೆಗಟ್ಟುವಿಕೆ ಕ್ರಮಗಳು) ವಿಧೇಯಕ – 2023ಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು, ಈ ವಿಧೇಯಕವನ್ನು ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ಮಂಡಿಸಲು ನಿರ್ಧರಿಸಲಾಗಿದೆ.

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಿಎಸ್‌ಐ, ಸಹಾಯಕ ಪ್ರಾಧ್ಯಾಪಕರ ಹುದ್ದೆ, ಎಫ್.ಡಿ.ಎ ಸೇರಿದಂತೆ ಸರ್ಕಾರದ ಹಲವು ನೇಮಕಾತಿಗಳಲ್ಲಿ ವ್ಯಾಪಕವಾಗಿ ಅಕ್ರಮಗಳು ನಡೆದಿದ್ದವು. ಇದರಿಂದ ವರ್ಷಾನುಗಟ್ಟಲೆಯಿಂದ ಪರೀಕ್ಷೆಗೆ ತಯಾರಿ ನಡೆಸಿ, ಪ್ರಾಮಾಣಿಕವಾಗಿ ಪರೀಕ್ಷೆ ಎದುರಿಸಿದ್ದ ಸಾವಿರಾರು ಅಭ್ಯರ್ಥಿಗಳು ಉದ್ಯೋಗದಿಂದ ವಂಚಿತರಾಗಿದ್ದರು. ಇಂತಹ ಅಕ್ರಮ, ಅವ್ಯವಹಾರವನ್ನು ತಡೆಗಡ್ಡಿ, ಅರ್ಹರಿಗೆ ಸರ್ಕಾರಿ ಉದ್ಯೋಗಗಳು ದೊರಕುವಂತೆ ಮಾಡಲು ಕಟ್ಟುನಿಟ್ಟಿನ ಪರೀಕ್ಷಾ ವಿಧಾನ, ಪಾರದರ್ಶಕ ನೇಮಕಾತಿ ಪ್ರಕ್ರಿಯೆಯ ಅಳವಡಿಕೆ ಮಾಡಲು ನೂತನ ಮಸೂದೆಯನ್ನು ಜಾರಿಗೆ ತರಲು ಉದ್ದೇಶಿಸಿದ್ದೇವೆ.

ಇದರ ಮೊದಲ ಹಂತವಾಗಿ ವಿಧೇಯಕವನ್ನು ಸಚಿವ ಸಂಪುಟದ ಮುಂದಿಟ್ಟು ಅನುಮೋದನೆಯನ್ನು ಪಡೆದಿದ್ದೇವೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದಷ್ಟೇ ಅಲ್ಲ, ಅರ್ಹರಿಗೆ ಮಾತ್ರ ಉದ್ಯೋಗ ಸಿಗಬೇಕು ಎಂಬುದೂ ನಮ್ಮ ಆದ್ಯತೆಯಾಗಿದೆ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದಲ್ಲದೆ ಸಚಿವ ಸಂಪುಟದಲ್ಲಿ ಇನ್ನೂ ಅನೇಕ ನಿರ್ಣಯಗಳನ್ನು ಕೈಗೊಳ್ಳಲಾಗಿತ್ತು. ಅಕ್ರಮ ಗಣಿಗಾರಿಕೆ ತನಿಖೆ ಹಾಗೂ ಪ್ರಕರಣ ವಿಚಾರಕ್ಕೆ ಸಂಬಂಧಪಟ್ಟಂತೆ ವಿಶೇಷ ತನಿಖಾ ತಂಡದ ಅವಧಿ ಇನ್ನೂ 8 ತಿಂಗಳಿಗೆ ವಿಸ್ತರಣೆ ಮಾಡಲು ಸಂಪುಟ ಒಪ್ಪಿಗೆ ಸೂಚಿಸಿತ್ತು. ಸಚಿವ ಸಂಪುಟದ ಇತರ ಪ್ರಮುಖ ನಿರ್ಧಾರವನ್ನು ಇಲ್ಲಿ ಕೊಡಲಾಗಿದೆ.

ಅಕ್ರಮ ಗಣಿಗಾರಿಕೆ ಪ್ರಕರಣ; ವಿಶೇಷ ತನಿಖಾ ತಂಡದ ಅವಧಿ ವಿಸ್ತರಣೆ

ಅಕ್ರಮ ಗಣಿಗಾರಿಕೆ ತನಿಖೆ ಹಾಗೂ ಪ್ರಕರಣ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದ್ದು, ವಿಶೇಷ ತನಿಖಾ ತಂಡದ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. ಕಳೆದ ಐದು ವರ್ಷಗಳಲ್ಲಿ ದಾಖಲಾಗಿರುವ 127 ಪ್ರಕರಣಗಳಲ್ಲಿ ಇದುವರೆಗೆ ಪ್ರಾಥಮಿಕ ತನಿಖೆ ಸಹ ಆಗಿಲ್ಲ. ಅದಿರು ಮೌಲ್ಯ ಮಾಪನ ವರದಿ ಕೂಡ ಇದುವರೆಗೆ ಸರಿಯಾಗಿ ಸಲ್ಲಿಕೆ ಆಗಿಲ್ಲ. ಈ ಬಗ್ಗೆ ತೀವ್ರ ಅಸಮಾಧಾನವನ್ನು ಹೊರಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡದ ಅವಧಿ ಇನ್ನೂ 8 ತಿಂಗಳಿಗೆ ವಿಸ್ತರಣೆ ಮಾಡಲಾಗಿದ್ದು, ತ್ವರಿತಗತಿಯಲ್ಲಿ ತನಿಖಾ ವರದಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್‌ ತಿಳಿಸಿದ್ದಾರೆ.

ವಾಣಿಜ್ಯ – ಸಂಸ್ಕೃತಿ ಹೆಸರಲ್ಲಿ ಪ್ರಾಧಿಕಾರ

ವಾಣಿಜ್ಯ ಸಂಸ್ಕೃತಿ ಪ್ರದರ್ಶನ ಕೇಂದ್ರ ಸ್ಥಾಪನೆಗೆ ಹಾಗೂ ಪ್ರಾಧಿಕಾರ ರಚನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಪ್ರಾಧಿಕಾರದ ಬಿಲ್ ಅನ್ನು ಬರುವ ಅಧಿವೇಶನದಲ್ಲಿ ಮಂಡನೆ ಮಾಡುವ ನಿರ್ಧಾರಕ್ಕೆ ಬರಲಾಗಿದೆ. 8 ಸಾವಿರ ಕೋಟಿ ರೂ. ಮೌಲ್ಯದ ಜಮೀನು ಇದಾಗಿದ್ದು, ವಾಣಿಜ್ಯ, ಸಂಸ್ಕೃತಿ ಹೆಸರಿನಲ್ಲಿ ಪ್ರಾಧಿಕಾರ ರಚನೆ ಮಾಡುವ ನಿರ್ಧಾರಕ್ಕೆ ಬರಲಾಗಿದೆ ಎಂದು ಎಚ್.ಕೆ. ಪಾಟೀಲ್ ತಿಳಿಸಿದರು.

ಇಂದಿರಾ ಕ್ಯಾಂಟೀನ್‌ಗೆ ಮರುಜೀವ; ರಾಜ್ಯದಲ್ಲಿ 188 ಕಡೆ ನಿರ್ಮಾಣಕ್ಕೆ ಸಚಿವ ಸಂಪುಟದ ಒಪ್ಪಿಗೆ

ನಗರಾಭಿವೃದ್ಧಿ ಇಲಾಖೆ, ಬಿಬಿಎಂಪಿ ಹೊರತುಪಡಿಸಿ ಸ್ಥಳೀಯ ಸಂಸ್ಥೆಗಳಲ್ಲಿ ಇಂದಿರಾ ಕ್ಯಾಂಟೀನ್ ಕಾಮಗಾರಿ ಮಾಡಲು ಕೆಟಿಪಿಪಿ ಕಾಯಿದೆಯ ಕಾಲಂ 4G ವಿನಾಯಿತಿ ನೀಡಲಾಗಿದೆ. ಬಿಬಿಎಂಪಿ ಹೊರತುಪಡಿಸಿ ನಗರದ ಇತರ ಕಡೆ ಕ್ಯಾಂಟಿನ್ ಮಾಡುವ ತೀರ್ಮಾನಕ್ಕೆ ಬರಲಾಗಿದೆ. ಮೊದಲ ಹಂತದಲ್ಲಿ ನಿರ್ಮಿಸಲಾದ ವಿಧಾನದ ಮಾದರಿಯಲ್ಲಿ ಅನುಮೋದಿತ ವಿನ್ಯಾಸದಲ್ಲಿ ಕ್ಯಾಂಟೀನ್ ನಿರ್ಮಾಣಕ್ಕೆ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ. ಒಟ್ಟು 154 ಕೋಟಿ ರೂಪಾಯಿ 188 ಇಂದಿರಾ ಕ್ಯಾಂಟೀನ್‌ ಅನ್ನು ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್‌ ತಿಳಿಸಿದ್ದಾರೆ.

ಇದನ್ನೂ ಓದಿ: Indira Canteen : ಇಂದಿರಾ ಕ್ಯಾಂಟೀನ್‌ಗೆ ಮರುಜೀವ; 188 ಕಡೆ ನಿರ್ಮಾಣಕ್ಕೆ ಸಂಪುಟ ಒಪ್ಪಿಗೆ

ಇತರ ಪ್ರಮುಖ ನಿರ್ಣಯಗಳು

Exit mobile version