Site icon Vistara News

CM Siddaramaiah : ಎಚ್‌.ಡಿ. ಕುಮಾರಸ್ವಾಮಿ ಆರೋಪಕ್ಕೆ ಉತ್ತರಿಸಲ್ಲ, ಹೇಳೋದೆಲ್ಲ ಸುಳ್ಳು: ಸಿಎಂ ಸಿದ್ದರಾಮಯ್ಯ

HD Kumarswamy and CM Siddaramaiah

ಬೆಂಗಳೂರು: ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ (Former CM HD Kumaraswamya) ಅವರ ಆರೋಪಗಳಿಗೆ ನಾನು ಉತ್ತರ ಕೊಡೋದಿಲ್ಲ. ಗ್ಯಾರಂಟಿ ಯೋಜನೆಗಳಲ್ಲಿ (Congress Guarantee Scheme) ಒಂದಾದ “ಶಕ್ತಿ” (Shakti Scheme) ಅಡಿ ಒಂದು ಕೋಟಿಗೂ ಅಧಿಕ ಮಹಿಳೆಯರು ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ. ಇದು ಸಾಧನೆ ಅಲ್ವಾ? ಈ ಸಾಧನೆಗಳನ್ನು ಕುಮಾರಸ್ವಾಮಿಗೆ ಸಹಿಸಲು ಆಗುತ್ತಿಲ್ಲ. ಈ ಕಾರಣಕ್ಕೇ ಪರದಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಕಿಡಿಕಾರಿದ್ದಾರೆ.

ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ (Former Prime Minister Jawaharlal Nehru) ಅವರ 134 ನೇ ಜನ್ಮ ದಿನೋತ್ಸವದ ಅಂಗವಾಗಿ ವಿಧಾನಸೌಧದಲ್ಲಿರುವ ಪ್ರತಿಮೆಗೆ ಹೂಮಾಲೆ ಹಾಕಿ ಗೌರವ ಸಲ್ಲಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಎಚ್‌.ಡಿ. ಕುಮಾರಸ್ವಾಮಿ ಅವರು ಹೇಳುವುದು ಬರೀ ಸುಳ್ಳು. ಅವರು ಸುಳ್ಳನ್ನೇ ಬಂಡವಾಳ ಮಾಡಿಕೊಂಡಿರುವ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದರು.

ಮಾಜಿ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಅವರ 134ನೇ ವರ್ಷದ ಜನ್ಮ ದಿನಾಚರಣೆಯ ಅಂಗವಾಗಿ ಅವರ ಪ್ರತಿಮೆ ಗೆ ಮಾಲಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ.

ಇದನ್ನೂ ಓದಿ: HSRP Number Plate : ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಇನ್ನೂ ಹಾಕಿಸಿಲ್ವಾ, ಟೆನ್ಶನ್‌ ಬೇಡ! ಯಾಕಂದ್ರೆ..?

ಕಾವೇರಿ ನಿವಾಸದಲ್ಲಿ ಐಷಾರಾಮಿ ಜೀವನ ಸಾಗಿಸುತ್ತಿದ್ದಾರೆ ಎಂಬ ಎಚ್.ಡಿ. ಕುಮಾರಸ್ವಾಮಿ ಆರೋಪದ ಬಗ್ಗೆ ಮಾಧ್ಯಮದವರು ಪ್ರಶ್ನೆ ಮಾಡಿದಾಗ, ಬರೀ ಸುಳ್ಳೇ.. ಸುಳ್ಳು ಬಿಟ್ರೆ ಬೇರೆ ಏನೂ ಗೊತ್ತಿಲ್ಲ ಅವರಿಗೆ. ಅವರು ಸುಳ್ಳನ್ನೇ ಆರೋಪ‌ ಮಾಡೋದು. ಸುಳ್ಳು ಅಂತ ಗೊತ್ತಿದ್ದರೂ ನೀವು ಪ್ರಶ್ನೆ ಮಾಡುತ್ತೀರಾ? ಎಂದು ಮಾಧ್ಯಮದವರನ್ನೇ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.

ನೆಹರೂ ದೂರದೃಷ್ಟಿಯ ಫಲ ಇದು

ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ಜವಾಹರಲಾಲ್ ನೆಹರೂ. ಅವರ ದೂರದೃಷ್ಟಿಯ ಫಲವನ್ನು ಆಗಿನ-ಈಗಿನ ಪೀಳಿಗೆಯವರೂ ಅನುಭವಿಸುತ್ತಿದ್ದಾರೆ. ಮುಂದಿನ ಪೀಳಿಗೆಯವರೂ ಅನುಭವಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನೆಹರೂ ಮೌಲ್ಯವನ್ನು ಅಳವಡಿಸಿಕೊಳ್ಳೋಣ

ಪ್ರಜಾಪ್ರಭುತ್ವ-ಸಮಾಜವಾದ-ಜಾತ್ಯತೀತತೆ ನೆಹರೂ ಬದುಕಿನ ಮೌಲ್ಯಗಳು. ಈ ಮೌಲ್ಯಗಳನ್ನು ಪ್ರಧಾನಮಂತ್ರಿಯಾಗಿ ಭಾರತದಲ್ಲಿ ನೆಲೆಯೂರಿಸಲು ಶ್ರಮಿಸಿದರು. ಈ ಮೌಲ್ಯಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದೇ ನೆಹರೂ ಅವರಿಗೆ ನಾವು ಸಲ್ಲಿಸುವ ಅರ್ಥಪೂರ್ಣ ಶ್ರದ್ಧಾಂಜಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಆಧುನಿಕ ಭಾರತದ ಶಿಲ್ಪಿ

ಮಕ್ಕಳ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಕಾರಣಕ್ಕೇ ದೇಶದ ಮಕ್ಕಳ ಪಾಲಿಗೆ ಚಾಚಾ ನೆಹರೂ ಆದರು. ಸ್ವಾತಂತ್ರ್ಯ ಹೋರಾಟದಲ್ಲಿ 9 ವರ್ಷಗಳ ಕಾಲ ಜೈಲುವಾಸ ಅನುಭವಿಸಿದ್ದರು. ಸ್ವಾತಂತ್ರ್ಯಾ ನಂತರದಲ್ಲಿ ದೇಶದ ಪ್ರಧಾನಿಯಾಗಿ ಆಧುನಿಕ ಭಾರತದ ಶಿಲ್ಪಿ ಎನ್ನಿಸಿಕೊಂಡರು ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.

ನೆಹರೂ ಅವರು ಪ್ರಧಾನಿ ಆಗಿ ವಿರೋಧ ಪಕ್ಷದವರು ಮಾತನಾಡುವಾಗ ಸಹನೆಯಿಂದ ಕೇಳಿಸಿಕೊಳ್ಳುತ್ತಿದ್ದರು. ವಿರೋಧ ಪಕ್ಷದವರ ಮಾತಿಗೆ ಗೌರವ ಕೊಡುತ್ತಿದ್ದ ಘನತೆಯ ವ್ಯಕ್ತಿತ್ವ ಅವರದ್ದಾಗಿತ್ತು.

ನೆಹರೂ ಅವರು ಯೋಜನಾ ಆಯೋಗ ರಚಿಸಿದರು. ಪಂಚವಾರ್ಷಿಕ ಯೋಜನೆ ಜಾರಿಗೆ ತಂದರು. ಕೊನೇ ಕ್ಷಣದವರೆಗೂ ಪ್ರಜಾಪ್ರಭುತ್ವ, ಜಾತ್ಯತೀತ ತತ್ವ, ಸಮಾಜವಾದದ ಮೌಲ್ಯಗಳನ್ನು ಜನಮಾನಸಕ್ಕೆ ವಿಸ್ತರಿಸಲು ಶ್ರಮಿಸಿದರು ಎಂದು ಎಂದು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.

ಇದನ್ನೂ ಓದಿ: HD Kumaraswamy : ಎಚ್‌ಡಿಕೆಯಿಂದ ವಿದ್ಯುತ್‌ ಕಳ್ಳತನವೆಂದ ಕಾಂಗ್ರೆಸ್‌; ದಂಡ ಕಟ್ತೇನೆ ಅಂದ್ರು ಕುಮಾರಸ್ವಾಮಿ

ಡಿಸಿಎಂ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Exit mobile version