Site icon Vistara News

CM Janaspandana: ವಿಶೇಷ ಚೇತನರಿದ್ದ ಜಾಗಕ್ಕೇ ತಿಂಡಿ ತಂದು ಕೊಟ್ಟ ಅಧಿಕಾರಿಗಳು!

pecialyy abled people in CM Janaspandana

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಮಟ್ಟದ ಎರಡನೇ ಸಿಎಂ ಜನಸ್ಪಂದನ (CM Janaspandana) ಕಾರ್ಯಕ್ರಮಕ್ಕೆ ಭಾರಿ ಸ್ಪಂದನೆ ವ್ಯಕ್ತವಾಗಿದೆ. ರಾಜ್ಯದ ಮೂಲೆ ಮೂಲೆಯಿಂದ ಜನಸಾಗರವೇ ಹರಿದುಬಂದಿದೆ. ಬೆಳಗ್ಗೆ 10 ಗಂಟೆಯಿಂದಲೇ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ನಾಗರಿಕರ ಅಹವಾಲುಗಳನ್ನು ಆಲಿಸಲು ಪ್ರಾರಂಭ ಮಾಡಿದ್ದು, ಸಂಜೆ 6 ಗಂಟೆವರೆಗೆ ಸಮಸ್ಯೆಗೆ ಪರಿಹಾರವನ್ನು ಕೊಡುವ ಕೆಲಸ ಮಾಡಲಿದ್ದಾರೆ. ಕಳೆದ ಬಾರಿ ಸುಮಾರು 5 ಸಾವಿರಕ್ಕೂ ಹೆಚ್ಚು ಮಂದಿ ಅರ್ಜಿ ಹಿಡಿದು ಧಾವಿಸಿದ್ದರು. ಆದರೆ, ಊಟ, ಉಪಾಹಾರದ ವ್ಯವಸ್ಥೆ ಇಲ್ಲದೆ ಪರದಾಡಿದ್ದರು. ಆದರೆ, ಈ ಬಾರಿ ಅಹವಾಲು ಹೊತ್ತು ತರುವವರ ಹೊಟ್ಟೆ ತುಂಬಿಸುವ ಕೆಲಸವನ್ನೂ ಮಾಡಲಾಗಿದ್ದು, ಮೆಚ್ಚುಗೆಗೆ ಪಾತ್ರವಾಗಿದೆ.

ಆಯಾ ಇಲಾಖಾವಾರು ಪ್ರತ್ಯೇಕ ಕೌಂಟರ್‌ಗಳನ್ನು ಮಾಡಲಾಗಿದೆ. ಅಲ್ಲದೆ, ವಿಶೇಷ ಚೇತನರಿಗೂ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಇದೇ ವೇಳೆ ಅಹವಾಲು ಹಿಡಿದು ಬಂದ ವಿಶೇಷ ಚೇತನರಿಗೆ ಇದ್ದಲ್ಲಿಗೇ ಉಪಾಹಾರವನ್ನು ತಂದು ಕೊಡುವ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ವಿಶೇಷ ಚೇತನರು ಆಹಾರಕ್ಕಾಗಿ ಎಲ್ಲಿಯೋ ಹೋಗಿ ಪರದಾಡುವುದನ್ನು ಸಹ ತಪ್ಪಿಸಲಾಗಿದೆ.

ಇಲಾಖಾವಾರು ಕೌಂಟರ್‌ಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನತಾದರ್ಶನ ನಡೆಯುವ ಸ್ಥಳದಲ್ಲಿ ಎಲ್ಲ ಇಲಾಖೆಗಳ ಸ್ಟಾಲ್‌ಗಳನ್ನು ಅಳವಡಿಸಲಾಗಿದ್ದು ಪ್ರತಿ ಸ್ಟಾಲ್‌ಗೆ ಸಂಖ್ಯೆಯನ್ನು ನೀಡಲಾಗಿದೆ. ಜನತಾದರ್ಶನಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ನಾಗರಿಕರನ್ನು ಪ್ರಥಮ ಹಂತದಲ್ಲಿ ವಿಚಾರಿಸಿ, ಯಾವ ಇಲಾಖೆಯ ಸ್ಟಾಲ್‌ಗೆ ನಿರ್ದೇಶಿಸಿ ಕಳಿಸಬೇಕು ಎಂದು ವಿಂಗಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ಇದಕ್ಕಾಗಿ ಅನುಭವಿ ಅಧಿಕಾರಿ – ಸಿಬ್ಬಂದಿಯುಳ್ಳ ವಿಚಾರಣಾ ಕೌಂಟರ್‌ಗಳನ್ನು (Enquiry counter) ತೆರೆಯಲಾಗಿದೆ. ಅಲ್ಲಿ ನಾಗರಿಕರ ಮೊಬೈಲ್ ನಂಬರ್ & ಪ್ರಾಥಮಿಕ ವಿವರಗಳನ್ನು ದಾಖಲಿಸಲು ರಿಜಿಸ್ಟರ್ ಹಾಗೂ ಅವರನ್ನು ಯಾವ ಇಲಾಖೆಗೆ ಕಳಿಸಲಾಗಿದೆ ಎಂದು ಸ್ಟಾಲ್ ನಂಬರ್ ನಮೂದಿಸಲಾಗುತ್ತಿದೆ. ಸ್ಟಾಲ್‌ಗಳಲ್ಲಿ ನಾಗರಿಕರಿಗೆ ಕುಳಿತುಕೊಳ್ಳಲು ಕುರ್ಚಿಗಳ ವ್ಯವಸ್ಥೆಯನ್ನು ಕಲ್ಪಿಸುವುದರ ಜತೆಗೆ ವಯೋವೃದ್ಧರು / ಹಿರಿಯ ನಾಗರಿಕರು / ವಿಕಲಚೇತನರು / ಗರ್ಭಿಣಿಯರು / ಸಣ್ಣ ಮಕ್ಕಳೊಂದಿಗೆ ಬಂದಂತಹ ನಾಗರಿಕರಿಗೆ ಆದ್ಯತೆ ನೀಡಲಾಗುತ್ತಿದೆ.

ಇಲಾಖೆಯ ಕಾರ್ಯದರ್ಶಿಗಳು ತಮ್ಮ ಇಲಾಖೆಯ ಸಚಿವಾಲಯದ ಹಾಗೂ ಅಧೀನ ಇಲಾಖೆಯ ಮುಖ್ಯಸ್ಥರು, ಅಧಿಕಾರಿ, ಸಿಬ್ಬಂದಿಯ ತಂಡದೊಡನೆ ಸ್ಟಾಲ್‌ನಲ್ಲಿದ್ದು, ಜನತಾದರ್ಶನಗಳಲ್ಲಿ ಬಂದ ಅರ್ಜಿಗಳನ್ನು ನಾಗರಿಕರಿಂದ ಸ್ವೀಕರಿಸುತ್ತಿದ್ದಾರೆ.

ಹಿರಿಯ ನಾಗರಿಕರು: ವಿಕಲಚೇತನರಿಗೆ ವ್ಹೀಲ್ ಚೇರ್ ವ್ಯವಸ್ಥೆ

ವಯೋವೃದ್ಧರು / ಹಿರಿಯ ನಾಗರಿಕರು / ವಿಕಲಚೇತನರು / ಗರ್ಭಿಣಿಯರಿಗಾಗಿ Battery ಚಾಲಿತ buggy/Wheel Chairs ಗಳ ವ್ಯವಸ್ಥೆ ಕಲ್ಪಿಸಲಾಗಿದ್ದು ಸಂಬಂಧಿಸಿದ ಇಲಾಖೆಯ ಸ್ಟಾಲ್‌ಗೆ ಅವರನ್ನು ಕರೆದೊಯ್ಯುವ ವ್ಯವಸ್ಥೆಯನ್ನು ಮಾಡಲಾಗಿದೆ.

ಊಟದ ವ್ಯವಸ್ಥೆ

ಜನತಾದರ್ಶನಕ್ಕೆ ಆಗಮಿಸುವ ನಾಗರಿಕರಿಗೆ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಐದರಿಂದ ಹತ್ತು ಸಾವಿರ ಜನರಿಗೆ ಆಹಾರ ಪೂರೈಸುವಂತಹ ವ್ಯವಸ್ಥೆಯನ್ನು ಮಾಡಲಾಗಿದೆ.

ಶೌಚಾಲಯ ವ್ಯವಸ್ಥೆ

ಜನತಾದರ್ಶನಕ್ಕೆ ಬರುವ ಎಲ್ಲ ಸಾರ್ವಜನಿಕರು ಹಾಗೂ ದಿವ್ಯಾಂಗರಿಗೆ ಸ್ವಚ್ಛ ಶೌಚಾಲಯಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಇದನ್ನೂ ಓದಿ: Janatha Darshan : 3 ತಿಂಗಳಲ್ಲಿ ಜನಸ್ಪಂದನ ಅರ್ಜಿಗೆ ಪರಿಹಾರ ಕೊಡಿ; ಅಧಿಕಾರಿಗಳಿಗೆ ಸಿಎಂ ಸ್ಪಷ್ಟ ಸೂಚನೆ

ಸಾರಿಗೆ ವ್ಯವಸ್ಥೆ

ಜನಸ್ಪಂದನಾ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳಲು ಬಿಎಂಟಿಸಿ ವತಿಯಿಂದ ಉಚಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

Exit mobile version