Parliament Election : ಚಿಕ್ಕಬಳ್ಳಾಪುರದಿಂದ ಶರತ್‌ ಬಚ್ಚೇಗೌಡರ ಪತ್ನಿ ಪ್ರತಿಭಾ ಕಣಕ್ಕೆ?; ಕುಟುಂಬ ಹೇಳಿದ್ದೇನು? - Vistara News

ರಾಜಕೀಯ

Parliament Election : ಚಿಕ್ಕಬಳ್ಳಾಪುರದಿಂದ ಶರತ್‌ ಬಚ್ಚೇಗೌಡರ ಪತ್ನಿ ಪ್ರತಿಭಾ ಕಣಕ್ಕೆ?; ಕುಟುಂಬ ಹೇಳಿದ್ದೇನು?

Parliament Election : ಹೊಸಕೋಟೆ ಶಾಸಕ ಶರತ್‌ ಬಚ್ಚೇಗೌಡ (Sharath Bacchegowda) ಅವರ ಪತ್ನಿ ಪ್ರತಿಭಾ ಶರತ್‌ (Prathibha Sharath Bacchegowda) ಅವರು ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿಯನ್ನು ಬಿ.ಎನ್‌.‌ ಬಚ್ಚೇಗೌಡ ಅವರು ನಿರಾಕರಿಸಿದ್ದಾರೆ.

VISTARANEWS.COM


on

Parliament Election chikkaballapura
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೇವನಹಳ್ಳಿ: ಮುಂದಿನ ಲೋಕಸಭಾ ಚುನಾವಣೆಯಲ್ಲಿ (Parliament Election 2024) ಚಿಕ್ಕಬಳ್ಳಾಪುರ ಕ್ಷೇತ್ರದಿಂದ (Chikkaballapura Constituency) ಅಭ್ಯರ್ಥಿಯಾಗಿ ಹೊಸಕೋಟೆ ಶಾಸಕ ಶರತ್‌ ಬಚ್ಚೇಗೌಡ (Sharath Bacchegowda) ಅವರ ಪತ್ನಿ ಪ್ರತಿಭಾ ಶರತ್‌ (Prathibha Sharath Bacchegowda) ಅವರು ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿ ಜೋರಾಗಿ ಕೇಳಿಬರುತ್ತಿದೆ. ಆದರೆ, ಅವರ ಕುಟುಂಬ ಮಾತ್ರ ಇದನ್ನು ಸ್ಪಷ್ಟವಾಗಿ ಅಲ್ಲಗಳೆದಿದೆ. ಸ್ವತಃ ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿ.ಎನ್‌.ಬಚ್ಚೇಗೌಡ (BN Bacchegowda) ಅವರು ನನ್ನ ಸೊಸೆ ಪ್ರತಿಭಾ ಶರತ್‌ ಅವರು ಭಾನುವಾರ ದೇವನಹಳ್ಳಿಯಲ್ಲಿ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದಾರೆ.

ಬಿ.ಎನ್‌. ಬಚ್ಚೇಗೌಡ ಅವರು ಈಗ ಚಿಕ್ಕಬಳ್ಳಾಪುರ ಕ್ಷೇತ್ರದ ಹಾಲಿ ಸಂಸದರು. ಅವರು ತಮ್ಮ ಅಧಿಕಾರಾವಧಿಯಲ್ಲಿ ಅಷ್ಟೇನೂ ಸಕ್ರಿಯರಾಗಿರಲಿಲ್ಲ ಎಂಬ ದೂರಿತ್ತು. ಜತೆಗೆ ಅವರಿಗೆ ವಯಸ್ಸಾದ ಹಿನ್ನೆಲೆಯಲ್ಲಿ ಈ ಬಾರಿ ಟಿಕೆಟ್‌ ಇಲ್ಲ ಎಂದು ಸ್ವತಃ ಪಕ್ಷವೇ ತಿಳಿಸಿದೆ. ಬಚ್ಚೇಗೌಡರು ಕೂಡಾ ಒಪ್ಪಿಕೊಂಡಿದ್ದಾರೆ.

Parliament Election chikkaballapura1

ಇತ್ತ ಅವರ ಪುತ್ರ ಶರತ್‌ ಬಚ್ಚೇಗೌಡ ಅವರು 2019ರಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರಿ ಈಗ ಎರಡನೇ ಬಾರಿ ಶಾಸಕರಾಗಿದ್ದಾರೆ. 2018ರ ಚುನಾವಣೆಯಲ್ಲಿ ಹೊಸಕೋಟೆಯಲ್ಲಿ ಕಾಂಗ್ರೆಸ್‌ನ ಎಂ.ಟಿ.ಬಿ ನಾಗರಾಜ್‌ ಅವರಿಗೂ ಬಿಜೆಪಿಯ ಶರತ್‌ ಬಚ್ಚೇಗೌಡ ಅವರಿಗೂ ಖಡಾಖಡಿ ಸಮರವಿತ್ತು. ಇದರಲ್ಲಿ ಗೆದ್ದ ಎಂ.ಟಿ.ಬಿ. ನಾಗರಾಜ್‌ ಅವರು ಗೆದ್ದಿದ್ದರು. ಆದರೆ, 2019ರಲ್ಲಿ ಆಪರೇಷನ್‌ ಕಮಲ ನಡೆದಾಗ ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರಿದ್ದ ಎಂ.ಟಿ.ಬಿ ನಾಗರಾಜ್‌ ಅವರು ಕಮಲದ ಚಿಹ್ನೆಯಿಂದ ಕಣಕ್ಕಿಳಿದರು. ಇದರಿಂದ ಸಿಟ್ಟಿಗೆದ್ದ ಶರತ್‌ ಬಚ್ಚೇಗೌಡ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರಿ ಕಣಕ್ಕಿಳಿದರು ಮತ್ತು ವಿಜಯಶಾಲಿಯೂ ಆದರು. ಮಗನನ್ನು ಬಿ.ಎನ್‌. ಬಚ್ಚೇಗೌಡರೂ ಬೆಂಬಲಿಸಿದ್ದರು.

ಈ ಬಾರಿ ಬಿಜೆಪಿಯಿಂದ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಯಾರು ಎಂಬ ಪ್ರಶ್ನೆ ಜೋರಾಗಿ ಚರ್ಚೆಯಲ್ಲಿದೆ. ಮಾಜಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಅವರಂತೂ ಹೈಕಮಾಂಡ್‌ ಮಟ್ಟದಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ. ಕಾಂಗ್ರೆಸ್‌ನಿಂದ ಮಾಜಿ ಸಂಸದ ವೀರಪ್ಪ ಮೊಯ್ಲಿ ಅವರೇ ಕಣಕ್ಕಿಳಿಯುವ ಹುಮ್ಮಸ್ಸಿನಲ್ಲಿದ್ದಾರೆ. ಜತೆಗೆ ಯುವ ಕಾಂಗ್ರೆಸ್‌ ಮುಖಂಡ ರಕ್ಷಾ ರಾಮಯ್ಯ ಅವರೂ ಸ್ಪರ್ಧೆಯಲ್ಲಿದ್ದಾರೆ.

Parliament Election chikkaballapura2

ಅದೆಲ್ಲದರ ನಡುವೆ ಶರತ್‌ ಬಚ್ಚೇಗೌಡರ ಪತ್ನಿ ಪ್ರತಿಭಾ ಶರತ್‌ ಅವರು ಹೆಸರು ಜೋರಾಗಿ ಕೇಳಿಬರುತ್ತಿದೆ. ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿರುವುದು ಕಾಂಗ್ರೆಸ್‌ನಿಂದ. ಅದೇ ಹೊತ್ತಿಗೆ ಮನಸ್ಸು ಮಾಡಿದರೆ ಬಿಜೆಪಿಯೂ ಕೊಡಬಹುದು ಎಂಬ ಚರ್ಚೆ ಎದ್ದಿತ್ತು.

ವಿದ್ಯಾವಂತೆಯಾಗಿರುವ ಪ್ರತಿಭಾ ಸಾಕಷ್ಟು ಅಭಿಮಾನಿಗಳನ್ನೂ ಹೊಂದಿದ್ದಾರೆ. ಗಂಡ ಮತ್ತು ಮಾವನ ರಾಜಕೀಯ ಜೀವನವನ್ನು ನೋಡಿರುವ ಅವರಿಗೆ ತಕ್ಕ ಮಟ್ಟಿಗೆ ಅದರ ಅನುಭವವೂ ಇದೆ ಎಂಬ ಕಾರಣಕ್ಕೆ ಅವರ ಹೆಸರು ಜೋರಾಗಿ ಚರ್ಚೆಯಲ್ಲಿದೆ.

ಇದನ್ನೂ ಓದಿ : BN Bacchegowda : ನಿವೃತ್ತಿ ಘೋಷಣೆ ಮರುದಿನವೇ ಸಿದ್ದರಾಮಯ್ಯ ಭೇಟಿ ಮಾಡಿದ ಸಂಸದ ಬಚ್ಚೇಗೌಡ; ಮುಂದಿನ ನಡೆ ಏನು?

ಚುನಾವಣೆಗೆ ಸೊಸೆ ಪ್ರತಿಭಾ ಶರತ್ ನಿಲ್ಲಲ್ಲ ಎಂದ ಬಚ್ಚೇಗೌಡ

ಆದರೆ, ಯಾವ ಕಾರಣಕ್ಕೂ ಸೊಸೆ ಪ್ರತಿಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಬಿ.ಎನ್‌. ಬಚ್ಚೇಗೌಡರು ಸ್ಪಷ್ಟಪಡಿಸಿದ್ದಾರೆ.

ನನ್ನ ಸೊಸೆ ಪ್ರತಿಭಾ ಶರತ್ ಗೌಡರನ್ನು ಚಿಕ್ಕಬಳ್ಳಾಪುರ ಕ್ಷೇತ್ರದ ಅಭ್ಯರ್ಥಿಯಾಗಲು ಕೇಳಿದ್ದಾರೆ. ಈ ಬಗ್ಗೆ ನಮ್ಮ‌ ಕುಟುಂಬದಲ್ಲಿ ಚರ್ಚೆ ಮಾಡಿಲ್ಲ. ಪ್ರತಿಭಾ ಶರತ್ ನಿಲ್ಲಲ್ಲ, ಅವರನ್ನು‌ ಚುನಾವಣೆಗೆ ನಿಲ್ಸಲ್ಲ ಎಂದು ಬಚ್ಚೇಗೌಡರು ಸ್ಪಷ್ಟಪಡಿಸಿದರು.

ʻʻನಾನು ಬಿಜೆಪಿ ಪಕ್ಷದಿಂದ ಚಿಕ್ಕಬಳ್ಳಾಪುರ ಸಂಸದನಾಗಿದ್ದೇನೆ. ಮಗ ಶರತ್ ಬಚ್ಚೇಗೌಡ ಕಾಂಗ್ರೆಸ್ ಪಕ್ಷದಿಂದ ‌ಹೊಸಕೋಟೆಯ‌ ಶಾಸಕರಾಗಿದ್ದಾರೆ. ಸೊಸೆ ನನ್ನ ಮಗನಿಗಾಗಿ ಹೊಸಕೋಟೆ ನಗರ ವ್ಯಾಪ್ತಿಯಲ್ಲಿ ಕೆಲಸ ಮಾಡಿದ್ದಾರೆʼʼ ಎಂದಿರುವ ಬಚ್ಚೇಗೌಡರು, ಮನೆಯ ಎಲ್ಲರೂ ರಾಜಕೀಯಕ್ಕೆ ಬರುವುದು ಬೇಡ. ಕುಟುಂಬ ರಾಜಕಾರಣ ಆಗಿಬಿಡುತ್ತದೆ. ಆದ್ದರಿಂದ ನನ್ನ ಸೊಸೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆಗೆ ನಿಲ್ಲಲ್ಲ ಎಂದು ತಿಳಿಸಿದರು.

Parliament Election chikkaballapura2

ʻʻಕೆಲವರು ಸೊಸೆಯನ್ನು ಚಿಕ್ಕಬಳ್ಳಾಪುರ ಕ್ಷೇತ್ರದಿಂದ ನಿಲ್ಲಿಸಿ ಎಂದು ಕೇಳಿರುವುದು ನಿಜ. ಪ್ರತಿಭಾರ ತಂದೆ ಪುಟ್ಟಸ್ವಾಮಿ ಅವರು ಗೌರಿಬಿದನೂರಿನ ಪಕ್ಷೇತರ ಶಾಸಕರಾಗಿದ್ದಾರೆ. ಪುಟ್ಟಸ್ವಾಮಿ ತಮ್ಮ ಮಂಜು ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಿಲ್ಲಲು ಕೆಲಸ ಮಾಡ್ತಿದ್ದಾರೆ. ಮಂಡ್ಯದ ಸಚಿವ ಚಲುವರಾಯಸ್ವಾಮಿ ಜೊತೆ ಮಂಡ್ಯದಲ್ಲಿ ಕೆಲಸ ಮಾಡ್ತಿದ್ದಾರೆ. ನಮ್ಮ ಕುಟುಂಬದಿಂದ ನನ್ನ ಮಗ ಶರತ್ ಹೊಸಕೋಟೆಯಲ್ಲಿ ಚನ್ನಾಗಿ ಕೆಲಸ ಮಾಡ್ತಿದ್ದಾನೆ. ನನ್ನ ಸೊಸೆ ರಾಜಕೀಯಕ್ಕೆ ಬರಲ್ಲ, ಚುನಾವಣೆಗೆ ನಿಲ್ಲಲ್ಲʼʼ ಎಂದು ಬಿ.ಎನ್‌. ಬಚ್ಚೇಗೌಡ ಸ್ಪಷ್ಟಪಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Mallikarjuna Kharge: ಶಿವ, ಶ್ರೀರಾಮನ ಬಗ್ಗೆ ಖರ್ಗೆ ವಿವಾದಾತ್ಮಕ ಹೇಳಿಕೆ; ಬಿಜೆಪಿ ಕಿಡಿ

Mallikarjuna Kharge:ಛತ್ತೀಸ್‌ಗಡದಲ್ಲಿ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಮಲ್ಲಿಕಾರ್ಜುನ ಖರ್ಗೆಯವರು ಭಗವಾನ್‌ ಶಿವನ ಬಗ್ಗೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಛತ್ತೀಸ್‌ಗಡದಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಶಿವಕುಮಾರ್‌ ದಹಾರಿಯಾ ಪರ ಪ್ರಚಾರದ ವೇಳೆ ಶಿವಕುಮಾರ್‌ ಅವರನ್ನು ಭಗವಾನ್‌ ಶಿವನಿಗೆ ಹೋಲಿಸಿ ಹೇಳಿಕೆಯೊಂದನ್ನು ನೀಡಿದ್ದಾರೆ.

VISTARANEWS.COM


on

Mallikarjuna Kharge
Koo

ಛತ್ತೀಸ್‌ಗಡ: ಚುನಾವಣಾ ಪ್ರಚಾರ(Lok sabha Election 2024)ದಲ್ಲಿ ವಿವಾದಾತ್ಮಕ ಹೇಳಿಕೆಗಳು, ಆ ಹೇಳಿಕೆ ಮೇಲೆ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಈ ಎಐಸಿಸಿ ಅಧ್ಯಕ್ಷ(AICC President) ಮಲ್ಲಿಕಾರ್ಜುನ ಖರ್ಗೆ(Mallikarjuna Kharge) ಭಾಷಣದ ಭರದಲ್ಲಿ ನೀಡಿರುವ ಹೇಳಿಕೆಯೊಂದು ವಿವಾದಕ್ಕೀಡಾಗಿದೆ. ಛತ್ತೀಸ್‌ಗಡದಲ್ಲಿ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಮಲ್ಲಿಕಾರ್ಜುನ ಖರ್ಗೆಯವರು ಭಗವಾನ್‌ ಶಿವನ ಬಗ್ಗೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಛತ್ತೀಸ್‌ಗಡದಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಶಿವಕುಮಾರ್‌ ದಹಾರಿಯಾ ಪರ ಪ್ರಚಾರದ ವೇಳೆ ಶಿವಕುಮಾರ್‌ ಅವರನ್ನು ಭಗವಾನ್‌ ಶಿವನಿಗೆ ಹೋಲಿಸಿ ಹೇಳಿಕೆಯೊಂದನ್ನು ನೀಡಿದ್ದಾರೆ. ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಶಿವಕುಮಾರ್‌ ಅವರು ಸಾಕ್ಷತ್‌ ಶಿವನಂತೆ. ಅವರು ಬಹಳ ಸುಲಭವಾಗಿ ರಾಮ(ಬಿಜೆಪಿ)ನ ಜೊತೆ ಸ್ಪರ್ಧೆಗಿಳಿಯಬಹುದು. ನನ್ನ ಹೆಸರು ಕೂಡ ಮಲ್ಲಿಕಾರ್ಜುನ. ಅಂದರೆ ಶಿವ ಎಂದರ್ಥ. ನಾನು ಕೂಡ ಶಿವನೇ ಆಂಧ‍್ರ ಪ್ರದೇಶದ ಶ್ರೀಶೈಲಂ ಮಲ್ಲಿಕಾರ್ಜುನ ಎಂಬ ಹೆಸರಿನಲ್ಲಿ ಜ್ಯೋತಿರ್ಲಿಂಗ ಇದೆ ಎಂದು ಹೇಳಿದ್ದರು.

ಬಿಜೆಪಿ ತಿರುಗೇಟು

ಖರ್ಗೆ ಹೇಳಿಕೆಗೆ ವೈರಲ್‌ ಆಗುತ್ತಿದ್ದಂತೆ ಇದೇ ವಿಚಾರವನ್ನು ಅಸ್ತ್ರವನ್ನಾಗಿಸಿಕೊಂಡಿರುವ ಬಿಜೆಪಿ, ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದೆ. ಛತ್ತೀಸ್‌ಗಡದ ಉಪ ಮುಖ್ಯಮಂತ್ರಿ ವಿಜಯ್‌ ಶರ್ಮಾ ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್‌ ರಾಮನನ್ನು ತಮ್ಮ ಶತ್ರು ಎಂದು ಭಾವಿಸಿದೆ ಎಂಬುದನ್ನು ಖರ್ಗೆ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಆದರೆ ಸ್ವತಃ ಶಿವನೇ ಶ್ರೀರಾಮನನ್ನು ತನ್ನ ದೇವರು ಎಂದು ಭಾವಿಸಿದ್ದ ಎಂಬುದು ಕಾಂಗ್ರೆಸಿಗರಿಗೆ ತಿಳಿದಿಲ್ಲ. ಕಾಂಗ್ರೆಸ್‌ ಪಕ್ಷ ಶ್ರೀರಾಮನ ಅಸ್ತಿತ್ವವನ್ನು ಆಗಾಗ ಪ್ರಶ್ನಿಸುತ್ತಲೇ ಬಂದಿದೆ. ಇದೇ ಖರ್ಗೆಯ ಪುತ್ರ ಪ್ರಿಯಾಂಕ್‌ ಖರ್ಗೆ ಶ್ರೀ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ನೀಡಲಾಗಿದ್ದ ಆಹ್ವಾನವನ್ನು ತಿರಸ್ಕರಿಸಿದ್ದರು. ಅಲ್ಲದೇ ಸನಾತನ ಧರ್ಮವನ್ನು ನಾಶ ಮಾಡುವುದಾಗಿ ಹೇಳಿಕೆ ನೀಡಿದ್ದವರಿಗೆ ಬೆಂಬಲ ಸೂಚಿಸಿದ್ದರು. ಅದೇ ಕಾರಣಕ್ಕೆ ಕಾಂಗ್ರೆಸ್‌ ಇದೀಗ ಸಂಕಷ್ಟ ಎದುರಿಸುತ್ತಿದೆ ಎಂದು ತಿರುಗೇಟು ಕೊಟ್ಟಿದ್ದಾರೆ.

ಇದನ್ನೂ ಓದಿ: Karnataka Weather: ಇಂದು ಚಿಕ್ಕಮಗಳೂರು, ಕೊಡಗು, ಮೈಸೂರು ಸೇರಿ ವಿವಿಧೆಡೆ ಮಳೆ ಮುನ್ಸೂಚನೆ

ಶ್ರೀರಾಮನ ಬಗ್ಗೆ ಸಚಿವ ಕೆ. ರಾಜಣ್ಣ ಕೂಡ ಕೆಲವು ತಿಂಗಳ ಹಿಂದೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ದೇಗುಲ ಟೂರಿಂಗ್ ಟಾಕೀಸ್‌, ಎರಡು ಗೊಂಬೆ ಇಟ್ಟು ರಾಮ, ರಾಮ ಅಂತಿದ್ರು ಎಂದು ರಾಜಣ್ಣ ಹೇಳಿದ್ದರು. ತುಮಕೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೆಎನ್ ರಾಜಣ್ಣ, ನಮ್ಮೂರಗಳಲ್ಲಿ ಸುಮಾರು ನೂರಾರು ವರ್ಷ ಇತಿಹಾಸ ಇರೋ ಶ್ರೀರಾಮ ದೇವಸ್ಥಾನಗಳಿವೆ. ಹೆಚ್ಚು ಪಾವಿತ್ರತ್ಯತೆ ಇರೋ ದೇವಸ್ಥಾನಗಳು ನಮ್ಮೂರುಗಳಲ್ಲಿವೆ ಎಂದು ಹೇಳಿದ್ದಾರೆ. ಚುನಾವಣೆಗೋಸ್ಕರ ಒಂದು ದೇವಸ್ಥಾನ ಕಟ್ಟಿ ಜನರಿಗೆ ಮೋಸ ಮಾಡುತ್ತಿದ್ದಾರೆ. ನಾನು ಶ್ರೀರಾಮ ಭಕ್ತ. ಅಂದು ನಾನು ಸಹ ಆ ಘಟನೆ ನಡೆದಾಗ ಅಯೋಧ್ಯೆಗೆ ಹೋಗಿದ್ದೆ. ಒಂದು ಟೆಂಟ್​​ನಲ್ಲಿ ಎರಡು ಗೊಂಬೆ ಇರಿಸಿ ಇವನೇ ಶ್ರೀರಾಮ ಅಂತ ಹೇಳ್ತಿದ್ರು ಎಂದು ಹೇಳಿಕೆ ನೀಡಿದ್ದರು.

Continue Reading

ರಾಜಕೀಯ

Prajwal Revanna: ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ; ಮೋದಿ ವಿರುದ್ಧ ನಟಿಯ ಆಕ್ರೋಶ!

Prajwal Revanna: ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಪ್ರಕರಣ ವಿವಾದ ಭುಗಿಲೇಳುತ್ತಿದ್ದಂತೆ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಕೂಡ ಎಕ್ಸ್ ಖಾತೆಯ ಮೂಲಕ ಕಿಡಿ ಕಾರಿದ್ದಾರೆ. ಅಪರಾಧಿ ಮುಸ್ಲಿಂ, ಟಿಎಂಸಿ ಇಲ್ಲವೇ ಕಾಂಗ್ರೆಸ್‌ನವರು ಆಗಿದ್ದರೆ ಮಾತ್ರ ಮಹಿಳಾ ಸುರಕ್ಷತೆ ಬಗ್ಗೆ ಕಾಳಜಿ ವಹಿಸುತ್ತಾರೆಂದು ಆಕ್ರೋಶ ಹೊರ ಹಾಕಿದ್ದಾರೆ. ಕನ್ನಡ ಸೇರಿದಂತೆ ವಿವಿಧ ಭಾಷೆಗಳ ಹಲವು ಚಿತ್ರಗಳಲ್ಲಿ ನಟಿಸಿರುವ ಜನಪ್ರಿಯ ನಟಿ ಪೂನಂ ಕೌರ್ (Poonam Kaur) ಪ್ರಜ್ವಲ್ ರೇವಣ್ಣ ವಿರುದ್ಧ ಕಿಡಿ ಕಾರಿದ್ದರು.

VISTARANEWS.COM


on

prajwal revanna actress swara bhasker angry government silence on prajwal revanna
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣ (Hassan Pen Drive Case) ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ಕನ್ನಡ ಸೇರಿದಂತೆ ವಿವಿಧ ಭಾಷೆಗಳ ಹಲವು ಚಿತ್ರಗಳಲ್ಲಿ ನಟಿಸಿರುವ ಜನಪ್ರಿಯ ನಟಿ ಪೂನಂ ಕೌರ್ (Poonam Kaur) ಪ್ರಜ್ವಲ್ ರೇವಣ್ಣ ವಿರುದ್ಧ ಕಿಡಿ ಕಾರಿದ್ದರು. ಇದರ ಬೆನ್ನಲ್ಲೇ ಈ ಪ್ರಕರಣದ ಬಗ್ಗೆ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಕೂಡ ಆಕ್ರೋಶ ಹೊರ ಹಾಕಿದ್ದಾರೆ.

ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಪ್ರಕರಣ ವಿವಾದ ಭುಗಿಲೇಳುತ್ತಿದ್ದಂತೆ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಕೂಡ ಎಕ್ಸ್ ಖಾತೆಯ ಮೂಲಕ ಕಿಡಿ ಕಾರಿದ್ದಾರೆ. ಅಪರಾಧಿ ಮುಸ್ಲಿಂ, ಟಿಎಂಸಿ ಇಲ್ಲವೇ ಕಾಂಗ್ರೆಸ್‌ನವರು ಆಗಿದ್ದರೆ ಮಾತ್ರ ಮಹಿಳಾ ಸುರಕ್ಷತೆ ಬಗ್ಗೆ ಕೆಲವರು ಕಾಳಜಿ ವಹಿಸುತ್ತಾರೆಂದು ಆಕ್ರೋಶ ಹೊರ ಹಾಕಿದ್ದಾರೆ.

ʻʻಲೈಂಗಿಕ ದೌರ್ಜನ್ಯದ ಅಪರಾಧಗಳ ಬಗ್ಗೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಮೌನಕ್ಕೆ ನಾವೇಕೆ ಶಾಕ್‌ ಆಗಿದ್ದೇವೆ? ಇವೆಲ್ಲ ಗೊತ್ತಿದ್ದೂ ಮೋದಿ ಅವರು ಪ್ರಚಾರ ಮಾಡಿದ್ದಕ್ಕೆ ನಾವೇಕೆ ಶಾಕ್‌ ಆಗಿದ್ದೇವೆ? ಕಥುವಾ, ಉನ್ನಾವೋ, ಹತ್ರಾಸ್, ಕುಲದೀಪ್ ಸೆಂಗರ್, ಬ್ರಿಜ್ಭೂಷಣ್ ಶರಣ್ ಮತ್ತು ಇತರರ ಉದಾಹರಣೆ ನಮ್ಮ ಮುಂದೆ ಇದೆ! ಅಪರಾಧಿ ಮುಸ್ಲಿಂ ಅಥವಾ ಟಿಎಂಸಿ/ಕಾಂಗ್ರೆಸ್‌ನವರಾಗಿದ್ದರೆ ಮಾತ್ರ ಅವರು ಮಹಿಳಾ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುತ್ತಾರೆʼʼಎಂದ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Prajwal Revanna Pen Drive: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಪರಮೇಶ್ವರ್

ಇದಕ್ಕೂ ಮುಂಚೆ ನಟಿ ಪೂನಂ ಕೌರ್ (Poonam Kaur) ಪ್ರತಿಕ್ರಿಯಿಸಿ, ಪ್ರಜ್ವಲ್ ರೇವಣ್ಣ ವಿರುದ್ಧ ಕಿಡಿ ಕಾರಿದ್ದರು. ʼಪ್ರಜ್ವಲ್ ರೇವಣ್ಣ ಮೃಗಕ್ಕಿಂತ ಕಡೆ. 2,900ಕ್ಕೂ ಹೆಚ್ಚು ವಿಡಿಯೊಗಳನ್ನು ಮಾಡಿದ್ದಾರೆ ಎಂದರೆ ಅವರೆಷ್ಟು ವಿಕೃತ ಮನೋಭಾವ ಹೊಂದಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತದೆ. ಪ್ರಾಣಿಗಳು ಕೂಡ ರೀತಿ ಮಾಡೋದಿಲ್ಲʼʼ ಎಂದು ಹೇಳಿದ್ದಾರೆ. ʼʼಈ ರೀತಿಯ ಕೃತ್ಯ ಎಸಗಿದ ಪ್ರಜ್ವಲ್ ರೇವಣ್ಣ ಅವರನ್ನು ಬಿಡಬೇಡಿʼʼ ಎಂದು ಅವರು ವಿಡಿಯೊ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು.

ʼʼಪ್ರಜ್ವಲ್‌ ಬಳಿ ದುಡ್ಡು ಹಾಗೂ ಅಧಿಕಾರ ಇದೆ. ಹೀಗಾಗಿ ಅವರ ವಿರುದ್ಧ ಧ್ವನಿ ಎತ್ತಿದರೂ, ದೂರು ಕೊಟ್ಟರೂ ಶಿಕ್ಷೆಯಾಗುತ್ತದೆ ಎನ್ನುವ ಬಗ್ಗೆ ಗ್ಯಾರಂಟಿ ಇಲ್ಲʼʼ ಎಂದು ಪೂನಂ ಕೌರ್‌ ಅನುಮಾನ ವ್ಯಕ್ತಪಡಿಸಿದ್ದಾರೆ. ʼʼಹೀಗಾಗಿ ನಾನು ಕೈ ಮುಗಿದು ಬೇಡಿಕೊಳ್ತಿನಿ. ಪ್ರಜ್ಚಲ್‌ಗೆ ಯಾರು ವೋಟ್ ಹಾಕಬೇಡಿ. ಅಂತಹವರು ಅಧಿಕಾರಕ್ಕೆ ಬಂದರೆ ಹೆಣ್ಣು ಮಕ್ಕಳಿಗೆ ರಕ್ಷಣೆ ಇರೋದಿಲ್ಲʼʼ ಎಂದು ಹೇಳಿದ್ದರು.

ಇದನ್ನೂ ಓದಿ: Swara Bhasker: ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಸ್ವರಾ ಭಾಸ್ಕರ್, ಮಗಳ ಹೆಸರು ‘ರಾಬಿಯಾ’

ʼʼಹೆಣ್ಣು ಮಕ್ಕಳು ಎಚ್ಚೆತ್ತುಕೊಳ್ಳಬೇಕು ಎಂದು ಅವರು ಕರೆ ನೀಡಿದ್ದಾರೆ. ಪ್ರತಿ ಮನೆಯ ಹೆಣ್ಣು ಮಗಳು ಎಚ್ಚರವಾದಾಗ ಮಾತ್ರ ದೇಶದ ಹೆಣ್ಣು ಮಕ್ಕಳು ಬಚವಾಗಲು ಸಾಧ್ಯ. ನಮ್ಮ ದೇಶ ರಾವಣ ರಾಜ್ಯದ ಕಡೆ ಹೋಗುತ್ತಿದೆಯಾ ಅಥವಾ ರಾಮರಾಜ್ಯದ ಕಡೆ ಹೋಗುತ್ತಿದೆಯಾ ?ʼ ಎಂದೂ ಅವರು ಪ್ರಶ್ನಿಸಿದ್ದರು.

ಸ್ವರಾ ಭಾಸ್ಕರ್ ಜೊತೆಗೆ ಕನ್ನಡದ ನಟ ಆದಿನಗಳು ಚೇತನ್, ಬಹುಭಾಷಾ ನಟ ಪ್ರಕಾಶ್ ರಾಜ್ ಸೇರಿದಂತೆ ಹಲವು ಆಕ್ರೋಶ ಹೊರಹಾಕಿದ್ದಾರೆ.

Continue Reading

ಕ್ರೈಂ

Hassan Pen Drive Case: SIT ತನಿಖೆಗೆ ಸಂತ್ರಸ್ತೆಯರ ಹಿಂದೇಟು; ವಿಚಾರಣೆ ಅಂತ ತೊಂದರೆ ಕೊಟ್ಟರೆ ಸೂಸೈಡ್‌ ಬೆದರಿಕೆ!

Hassan Pen Drive Case: ವಿಡಿಯೊ ಲೀಕ್‌ ವೇಳೆ ಸಂತ್ರಸ್ತೆಯರ ಮುಖವನ್ನು ಬ್ಲರ್‌ ಮಾಡಲಾಗಿಲ್ಲ. ಇದರಿಂದ ಅದೆಷ್ಟೋ ಹೆಣ್ಣು ಮಕ್ಕಳು ಹೊರಗಡೆ ತಲೆ ಎತ್ತಿ ತಿರುಗುವಂತೆ ಆಗುತ್ತಿಲ್ಲ. ಈ ಮಧ್ಯೆ ಎಸ್‌ಐಟಿ ಅಧಿಕಾರಿಗಳು ತನಿಖೆಗಾಗಿ ಅವರನ್ನು ಭೇಟಿ ಮಾಡಿ ಹೇಳಿಕೆ ಪಡೆಯಲು ಹೋದರೆ ಮೊದಲೇ ನೊಂದಿರುವ ನಮ್ಮನ್ನು ಮತ್ತಷ್ಟು ನೋಯಿಸಬೇಡಿ. ಈ ಬಗ್ಗೆ ನಮ್ಮ ಬಳಿ ಏನನ್ನೂ ಕೇಳಬೇಡಿ. ಇದು ನಮ್ಮ ಜೀವನದ ಪ್ರಶ್ನೆಯಾಗಿದೆ. ಅಷ್ಟಕ್ಕೂ ನೀವು ಒತ್ತಾಯ ಮಾಡಿದ್ದೇ ಆದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾದೀತು ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Hassan Pen Drive Case Victims reluctance to sit investigation and Suicide threat if he is disturbed by trial
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಎಸ್‌ಐಟಿಗೆ ಮಾಹಿತಿ ನೀಡಲು ಸಂತ್ರಸ್ತೆಯರು ಹಿಂದೇಟು ಹಾಕುತ್ತಿದ್ದಾರೆ. “ನನಗೆ ತೊಂದರೆ ಕೊಟ್ಟರೆ ಸೂಸೈಡ್ ಮಾಡಿಕೊಳ್ಳುತ್ತೇವೆ” ಎಂದು ಬೆದರಿಕೆ ಒಡ್ಡುತ್ತಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ.

ಪ್ರಜ್ವಲ್‌ ರೇವಣ್ಣ ಒಬ್ಬ ಸಂಸದ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ವಂಶದ ಕುಡಿ. ಈ ಹಿನ್ನೆಲೆಯಲ್ಲಿ ಇದೊಂದು ಹೈ ಪ್ರೊಫೈಲ್‌ ಕೇಸ್‌ ಆಗಿದೆ. ಇದರ ಜತೆಗೆ ವಿಡಿಯೊ ಲೀಕ್‌ ವೇಳೆ ಸಂತ್ರಸ್ತೆಯರ ಮುಖವನ್ನು ಬ್ಲರ್‌ ಮಾಡಲಾಗಿಲ್ಲ. ಇದರಿಂದ ಅದೆಷ್ಟೋ ಹೆಣ್ಣು ಮಕ್ಕಳು ಹೊರಗಡೆ ತಲೆ ಎತ್ತಿ ತಿರುಗುವಂತೆ ಆಗುತ್ತಿಲ್ಲ. ಈ ಮಧ್ಯೆ ಎಸ್‌ಐಟಿ ಅಧಿಕಾರಿಗಳು ತನಿಖೆಗಾಗಿ ಅವರನ್ನು ಭೇಟಿ ಮಾಡಿ ಹೇಳಿಕೆ ಪಡೆಯಲು ಹೋದರೆ ಮೊದಲೇ ನೊಂದಿರುವ ನಮ್ಮನ್ನು ಮತ್ತಷ್ಟು ನೋಯಿಸಬೇಡಿ. ಈ ಬಗ್ಗೆ ನಮ್ಮ ಬಳಿ ಏನನ್ನೂ ಕೇಳಬೇಡಿ. ಇದು ನಮ್ಮ ಜೀವನದ ಪ್ರಶ್ನೆಯಾಗಿದೆ. ಅಷ್ಟಕ್ಕೂ ನೀವು ಒತ್ತಾಯ ಮಾಡಿದ್ದೇ ಆದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾದೀತು ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

ದೂರುದಾರೆ ಹೊರತುಪಡಿಸಿ ಉಳಿದವರು ನೋ ರೆಸ್ಪಾನ್ಸ್!

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ವಿಡಿಯೊದಲ್ಲಿರುವ ಮಹಿಳೆಯರನ್ನು ಸಂಪರ್ಕಿಸಲು ಎಸ್‌ಐಟಿ ತಂಡವು ಸಾಕಷ್ಟು ಪ್ರಯತ್ನಪಟ್ಟಿದೆ. ಎಷ್ಟೇ ಪ್ರಯತ್ನ ಪಟ್ಟರೂ ಸಂತ್ರಸ್ತೆಯರು ಮಾತ್ರ ಇವರಿಗೆ ಸ್ಪಂದಿಸುತ್ತಿಲ್ಲ. ನಾವು ಏನೂ ಹೇಳಲ್ಲ, ಏನನ್ನೂ ಕೇಳಬೇಡಿ ಎಂದು ಸಂತ್ರಸ್ತೆಯರು ಹೇಳುತ್ತಿದ್ದಾರೆ.

ನಾವೇನು ದೂರು ಕೊಟ್ಟಿಲ್ಲ, ನಮ್ಮನ್ನು ಯಾಕೆ ಎಳೆದು ತರುತ್ತೀರಿ? ನಮ್ಮನ್ನು ನಮ್ಮ ಪಾಡಿಗೆ ಬಿಟ್ಟುಬಿಡಿ ಎಂದು ಹೇಳುತ್ತಿರುವುದರಿಂದ ಎಸ್‌ಐಟಿ ತನಿಖೆಗೆ ಸ್ವಲ್ಪ ಹಿನ್ನಡೆಯಾಗಿದೆ. ಹೀಗಾಗಿ ಸದ್ಯಕ್ಕೆ ದೂರುದಾರೆ ಸಂತ್ರಸ್ತೆಯ ಮಾಹಿತಿ ಆಧರಿಸಿ ತನಿಖೆಯನ್ನು ಮುನ್ನಡೆಸುವ ತೀರ್ಮಾನಕ್ಕೆ ಬರಲಾಗಿದೆ.

ಮೇ 3ರಂದು ಪ್ರಜ್ವಲ್‌ ರೇವಣ್ಣ ಬೆಂಗಳೂರಿಗೆ, ಬಂದ ತಕ್ಷಣ ಎಸ್‌ಐಟಿ ವಶಕ್ಕೆ?

ಅಶ್ಲೀಲ ವಿಡಿಯೋದಲ್ಲಿರುವ (Obscene video) ಪ್ರಧಾನ ಆರೋಪಿ, ಹಾಸನ ಸಂಸದ (Hassan MP) ಪ್ರಜ್ವಲ್‌ ರೇವಣ್ಣ (Prajwal Revanna) ಮೇ 3ರಂದು ತಡರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಗೊತ್ತಾಗಿದೆ. ಸದ್ಯ ಅವರು ಜರ್ಮನಿಯ ಫ್ರಾಂಕ್‌ಫರ್ಟ್‌ನಲ್ಲಿದ್ದಾರೆ.

ಲುಪ್ತಾನ್ಸಾ ಏರ್‌ಲೈನ್ಸ್‌ನಲ್ಲಿ ಮೇ 3ರ ಪ್ರಯಾಣಕ್ಕೆ ಪ್ರಜ್ವಲ್‌ ಟಿಕೆಟ್ ಬುಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮೇ 3 ಮಧ್ಯರಾತ್ರಿ ಕೆಂಪೇಗೌಡ ಏರ್‌ಪೋರ್ಟ್‌ಗೆ ಅವರು ಆಗಮಿಸಬಹುದು. ಮೇ 4ರಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಅಥವಾ ಅವರು ವಿಮಾನದಿಂದ ಇಳಿದ ಕೂಡಲೇ ಅವರನ್ನು ವಿಶೇಷ ತನಿಖಾ ತಂಡ (SIT) ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಮೊದಲ ಹಂತದ ಮತದಾನದ ದಿನವೇ ಪ್ರಜ್ವಲ್‌ ಅವರು ದೇಶ ಬಿಟ್ಟು ತೆರಳಿದ್ದರು. ಬ್ಯುಸಿನೆಸ್‌ ವೀಸಾವನ್ನು ಅವರು ಹೊಂದಿದ್ದಾರೆ. ಟೂರಿಸ್ಟ್‌ ವೀಸಾದಲ್ಲಿ ಅವರು ಜರ್ಮನಿಗೆ ತೆರಳಿದ್ದು, ಇದರ ಅವಧಿ 90 ದಿನಗಳ ಕಾಲ ಚಾಲೂ ಇರುತ್ತದೆ. CRPC41A ಸೆಕ್ಷನ್‌ ಪ್ರಕಾರ, ಅವರು ನೋಟಿಸ್‌ಗೆ ಸ್ಪಂದಿಸಿ ಹಾಜರಾಗದೆ ಇದ್ದರೆ ಅವರನ್ನು ಬಂಧಿಸಬಹುದಾಗಿದೆ.

ಏಕಾಏಕಿ ಬಂಧನವಿಲ್ಲ: ಪರಮೇಶ್ವರ್‌

ಆದರೆ ಹಾಗೆ ಏಕಾಏಕಿ ಯಾರನ್ನೂ ಬಂಧಿಸಲು ಮುಂದಾಗುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಇಂದು ಬೆಳಗ್ಗೆ ಹೇಳಿದ್ದಾರೆ. “ಅದಕ್ಕೆ ಪುರಾವೆಗಳು, ದೂರು, ದೂರಿನಲ್ಲಿ ಏನು ಹೇಳಿರುತ್ತಾರೆ ಅನ್ನೋದು ಮುಖ್ಯ. ಯಾವ ಸೆಕ್ಷನ್ ಬರುತ್ತೆ, ಅದರಲ್ಲಿ ‌ಅರೆಸ್ಟ್ ಮಾಡಬಹುದಾ, ಬೇಲ್ ಕೇಸಾ, ನಾನ್ ಬೇಲ್ ಕೇಸಾ ಅಂತ ನೋಡಬೇಕು. ಅದಕ್ಕೆ 41A CRPC ಸೆಕ್ಷನ್ ಅಡಿ‌ ನೋಟಿಸ್ ಕೊಟ್ಟಿದ್ದಾರೆ. ಅವರು 24 ಗಂಟೆ ಒಳಗೆ ಒಂದು ಹಾಜರಾಗಬೇಕು. ಹಾಜರಾಗದೇ ಹೋದರೆ SITಯವರು ಮುಂದಿನ ಪ್ರಕ್ರಿಯೆ ಮಾಡ್ತಾರೆ” ಎಂದಿದ್ದಾರೆ.

ಪ್ರಜ್ವಲ್‌ ತನಿಖೆ ಮುಖ್ಯ

ಸದ್ಯ ಪ್ರಜ್ವಲ್ ತನಿಖೆ ಎಸ್‌ಐಟಿಗೆ ತುಂಬಾ ಮುಖ್ಯವಾಗಿದೆ. ಎ1 ರೇವಣ್ಣ ಆಗಿದ್ದರೂ ಪ್ರಕರಣಗಳು ಹೊರಬಂದಿದ್ದು ಪ್ರಜ್ವಲ್ ರೇವಣ್ಣ ವಿಡೀಯೋಗಳಿಂದ ಆಗಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಸ್ಟೇಟ್‌ಮೆಂಟ್ ಇಲ್ಲಿ ಅಗತ್ಯವಿದೆ. ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna) ಹಾಗೂ ಪ್ರಜ್ವಲ್ ರೇವಣ್ಣ (Hassan MP Prajwal Revanna) ಇವರಿಬ್ಬರ ಹೊಳೆನರಸೀಪುರ ಮನೆಯ ಬಾಗಿಲಿಗೆ ಇಂದು ನೊಟೀಸ್ (Notice) ಅನ್ನು ಎಸ್‌ಐಟಿ (SIT) ಟೀಂ ಅಂಟಿಸಿದೆ. ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಯ ಬಾಗಿಲಿಗೆ ನೊಟೀಸ್ ಅಂಟಿಸಿದ್ದು, ಎಸ್‌ಐಟಿ ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ತನಿಖೆಗೆ ಬೇಕು ಎಂದರೆ ಪ್ರಜ್ವಲ್ ಹಾಜರಾಗ್ತಾನೆ ಎಂದು ಎಚ್.ಡಿ ರೇವಣ್ಣ ಹೇಳಿದ್ದಾರೆ. ಪ್ರಜ್ವಲ್ ಬಾರದಿದ್ದಲ್ಲಿ ತನಿಖೆ ನಿಧಾನಗತಿಯಲ್ಲಿ ಸಾಗಬಹುದು. ಆದರೆ ಈಗಾಗಲೇ ಎಸ್‌ಐಟಿ ವಿಚಾರಣೆ ನೋಟಿಸ್‌ ಜಾರಿ ಮಾಡಿದೆ. ಇದಕ್ಕೆ ಉತ್ತರಿಸದೆ ತಲೆ ಮರೆಸಿಕೊಂಡರೆ ಆರೋಪಿಗೆ ಇಂಟರ್‌ಪೋಲ್ ಮುಖಾಂತರ ರೆಡ್ ಕಾರ್ನರ್ ಅಥವಾ ಲುಕ್ ಔಟ್ ನೋಟಿಸ್ ಜಾರಿ ಮಾಡುವ ಸಾಧ್ಯತೆಯೂ ಎಸ್‌ಐಟಿ ಮುಂದಿದೆ.

ಈಗಾಗಲೇ ಡ್ರೈವರ್ ಕಾರ್ತಿಕ್‌ನನ್ನು ಎಸ್‌ಐಟಿ ವಿಚಾರಣೆಗೊಳಪಡಿಸಿದೆ. ಸಂತ್ರಸ್ತೆಯ ಹೇಳಿಕೆಯನ್ನೂ ದಾಖಲಿಸಿದೆ. ನಾಳೆ ಅಥವಾ ನಾಡಿದ್ದು CRPC 164 ಅಡಿಯಲ್ಲಿ ಸ್ಟೆಟ್ಮೆಂಟ್ ಪಡೆಯಲಿದೆ. ವಿಚಾರಣೆ ಬಳಿಕ ಕಾರ್ತಿಕ್ ಮೊಬೈಲ್ ಸೀಜ್ ಮಾಡಿ ಎಫ್ಎಸ್ಎಲ್‌ಗೆ ವಿಧಿವಿಜ್ಞಾನ ಪರಿಶೀಲನೆಗಾಗಿ ಕಳಿಸಲಾಗಿದೆ.

ಇದನ್ನೂ ಓದಿ: Hassan Pen Drive Case: ಹೊಳೆನರಸೀಪುರದ ಮನೆ ಬಾಗಿಲಿಗೆ ನೋಟಿಸ್‌ ಅಂಟಿಸಿ ಎಸ್‌ಐಟಿ ವಾಪಸ್!‌

ಹೋಮ ಮಾಡಿಸುತ್ತಿರುವ ರೇವಣ್ಣ

ತಮ್ಮ ವಿರುದ್ಧ ಎಸ್ಐಟಿ ತನಿಖೆ ಚುರುಕುಗೊಂಡಿರುವ ನಡುವೆ ರೇವಣ್ಣ ದೇವರು ದಿಂಡಿರ ಮೊರೆ ಹೋಗಿದ್ದಾರೆ. ಹೊಳೆನರಸೀಪುರದ ಅವರ ಮನೆಯಲ್ಲಿ ಹೋಮ ಹವನ ಮಾಡಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಎದುರಾದ ಸಂಕಷ್ಟ ನಿವಾರಣೆಗಾಗಿ ಮನೆಯೊಳಗೇ ಹೋಮ ಕುಂಡ ನಿರ್ಮಿಸಿ ಬೆಳಗ್ಗೆಯಿಂದ ಪೂಜೆ ಸಲ್ಲಿಸಲಾಗುತ್ತಿದೆ.

Continue Reading

ರಾಜಕೀಯ

Delhi Congress: ದಿಲ್ಲಿ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು; ಪಕ್ಷಕ್ಕೆ ಗುಡ್‌ಬೈ ಹೇಳಿದ ಮಾಜಿ ಶಾಸಕರು

Delhi Congress: ಕಳೆದ ವಾರವಷ್ಟೇ ದೆಹಲಿ ಕಾಂಗ್ರೆಸ್‌ ಅಧ್ಯಕ್ಷ ಅರವಿಂದ್‌ ಸಿಂಗ್‌ ಲವ್ಲಿ ರಾಜೀನಾಮೆ ನೀಡಿರುವ ಬೆನ್ನಲ್ಲೇ ಇದೀಗ ಕಾಂಗ್ರೆಸ್‌ನ ಇಬ್ಬರು ಮಾಜಿ ಶಾಸಕರು ಪಕ್ಷ ತೊರೆದಿದ್ದಾರೆ. ಪಕ್ಷದ ನಿರ್ಧಾರದಿಂದ ಮನನೊಂದಿರುವ ಮಾಜಿ ಶಾಸಕರಾದ ನೀರಜ್‌ ಬಸೋಯಾ ಮತ್ತು ನಸೀಬ್‌ ಸಿಂಗ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ನಿರ್ಧಾರದಿಂದ ಮನನೊಂದಿರುವ ಮಾಜಿ ಶಾಸಕರಾದ ನೀರಜ್‌ ಬಸೋಯಾ ಮತ್ತು ನಸೀಬ್‌ ಸಿಂಗ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

VISTARANEWS.COM


on

Delhi Congress
Koo

ನವದೆಹಲಿ: ಲೋಕಸಭೆ ಚುನಾವಣೆ(Lok sabha Election 2024)ಯ ದೇಶಾದ್ಯಂತ ಎರಡನೇ ಹಂತದ ಮತದಾನ ಮುಗಿದರೂ ದೆಹಲಿ ಕಾಂಗ್ರೆಸ್‌(Delhi Congress)ನ ಬಿಕ್ಕಟ್ಟು ಮಾತ್ರ ಶಮನ ಆಗುತ್ತಲೇ ಇಲ್ಲ. ಆಮ್‌ ಆದ್ಮಿ ಪಕ್ಷ(AAP)ದ ಜೊತೆ ಕಾಂಗ್ರೆಸ್‌ ಮೈತ್ರಿಗೆ ಸ್ವಪಕ್ಷದಲ್ಲೇ ತೀವ್ರ ವಿರೋಧ ಕೇಳಿ ಬಂದಿದ್ದು, ದಿನೇ ದಿನೇ ಬಿಕ್ಕಟ್ಟು ಹೆಚ್ಚಾಗುತ್ತಿದೆ. ಕಳೆದ ವಾರವಷ್ಟೇ ದೆಹಲಿ ಕಾಂಗ್ರೆಸ್‌ ಅಧ್ಯಕ್ಷ ಅರವಿಂದ್‌ ಸಿಂಗ್‌ ಲವ್ಲಿ(Aravind Singh Lovely) ರಾಜೀನಾಮೆ ನೀಡಿರುವ ಬೆನ್ನಲ್ಲೇ ಇದೀಗ ಕಾಂಗ್ರೆಸ್‌ನ ಇಬ್ಬರು ಮಾಜಿ ಶಾಸಕರು ಪಕ್ಷ ತೊರೆದಿದ್ದಾರೆ. ಪಕ್ಷದ ನಿರ್ಧಾರದಿಂದ ಮನನೊಂದಿರುವ ಮಾಜಿ ಶಾಸಕರಾದ ನೀರಜ್‌ ಬಸೋಯಾ ಮತ್ತು ನಸೀಬ್‌ ಸಿಂಗ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಬಗ್ಗೆ ಪತ್ರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪತ್ರ ಬರೆದಿರುವ ಮಾಜಿ ಶಾಸಕರು, ದೆಹಲಿಯಲ್ಲಿ ಆಪ್‌ ಜೊತೆಗಿನ ಮೈತ್ರಿ ತೀರ ಬೇಸರವನ್ನುಂಟು ಮಾಡಿದೆ. ಅಲ್ಲದೇ ಕಳೆದ ಏಳು ವರ್ಷಗಳಿಂದ ಅನೇಕ ಭ್ರಷ್ಟಾಚಾರ, ಹಗರಣಗಳಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಆಪ್‌ ಜೊತೆ ಕೈಜೋಡಿಸಿರುವುದು ಕಾರ್ಯಕರ್ತರಿಗೆ ಅವಮಾನವನ್ನುಂಟು ಮಾಡಿದೆ. ಆಪ್‌ನ ಪ್ರಮುಖ ಮೂರು ನಾಯಕರಾದ ಅರವಿಂದ ಕೇಜ್ರಿವಾಲ್‌, ಸತ್ಯೇಂದ್ರ ಜೈನ್‌ ಮತ್ತು ಮನೀಶ್‌ ಸಿಸೋಡಿಯಾ ಈಗಾಗಲೇ ಜೈಲಿನಲ್ಲಿದ್ದಾರೆ. ಇಂಥಹ ಸಂದರ್ಭದಲ್ಲಿ ಈ ಮೈತ್ರಿ ಸರಿಯಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ನಾವು ಆತ್ಮಗೌರವ ಇರುವ ಪಕ್ಷದ ನಾಯಕರು. ಆಪ್‌ ಜೊತೆಗಿನ ಮೈತ್ರಿ ನಂತರ ನಾನು ಪಕ್ಷದಲ್ಲಿ ಇರಲು ಸಾಧ್ಯವೇ ಇಲ್ಲ. ನೀವು ದೇವೇಂದ್ರ ಯಾದವ್‌ ಅವರನ್ನು ಪಂಜಾಬ್‌ ಕಾಂಗ್ರೆಸ್‌ ಮೇಲ್ವಿಚಾರಕರಾಗಿ ನೇಮಿಸಿದ್ದೀರಿ. ಅಲ್ಲಿ ಅವರು ಅರವಿಂದ್‌ ಕೇಜ್ರಿವಾಲ್‌ ಭ್ರಷ್ಟಾಚಾರದ ಬಗ್ಗೆ ತಮ್ಮ ಪ್ರಚಾರ ಭಾಷಣದಲ್ಲಿ ಉಲ್ಲೇಖಿಸುತ್ತಿದ್ದಾರೆ. ದೆಹಲಿಯಲ್ಲಿ ನಾವು ಆಪ್‌ ಸಾಧನೆಯನ್ನು ಹೊಗಳುತ್ತಿದ್ದೇವೆ. ಇಂತಹ ದ್ವಂಧ್ವದಿಂದ ನಾವು ಬೇಸತ್ತಿದ್ದೇವೆ. ಇತ್ತೀಚೆಗೆ ನಡೆಯತ್ತಿರುವ ರಾಜಕೀಯ ಬೆಳವಣಿಗೆಗಳಿಂದ ಪಕ್ಷ ಹಾಗೂ ಪಕ್ಷದ ಕಾರ್ತಕರ್ತರು ಮುಜುಗರಕ್ಕೀಡಾಗುತ್ತಿದ್ದಾರೆ. ಹೀಗಾಗಿ ತಾವು ರಾಜೀನಾಮೆ ನೀಡುತ್ತಿರುವುದಾಗಿ ಪತ್ರದಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ:‍Viral News: ಚಂದದ ಪ್ರೊಫೈಲ್‌ ಫೋಟೋಗೆ ಫಿದಾ ಆಗಿದ್ದವನಿಗೆ ಕಾದಿತ್ತು ಶಾಕ್‌; ಮುಂದೆ ನಡೆದಿದ್ದೇ ಬೇರೆ!

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಶತಾಯ-ಗತಾಯ ಸೋಲಿಸಬೇಕು ಎಂಬ ದೃಷ್ಟಿಯಿಂದ ಪಕ್ಷದದಲ್ಲಿ ವಿರೋಧ ವ್ಯಕ್ತವಾಗಿದ್ದರೂ ಅದನ್ನು ಮೀರಿ ಕಾಂಗ್ರೆಸ್‌ ದೆಹಲಿಯಲ್ಲಿ ಆಮ್‌ ಆದ್ಮಿ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡಿತ್ತು. ಇದರ ಬೆನ್ನಲ್ಲೇ ಈ ಮೈತ್ರಿಯಿಂದ ಬೇಸರಗೊಂಡಿದ್ದ ದಿಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಅರವಿಂದ್‌ ಸಿಂಗ್‌ ಲವ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಕುರಿತು ಸವಿಸ್ತಾರವಾದ ಪತ್ರ ಬರೆದಿದ್ದ ಅರವಿಂದ್‌ ಸಿಂಗ್‌ ಲವ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಸುಳ್ಳು, ಕಪೋಲಕಲ್ಪಿತ ಮತ್ತು ದುರುದ್ದೇಶಪೂರಿತ ಭ್ರಷ್ಟಾಚಾರ ಆರೋಪಗಳನ್ನು ಹೊರಿಸುವ ಏಕೈಕ ಆಧಾರದ ಮೇಲೆ ರಚಿಸಲಾದ ಆಪ್‌ ಜೊತೆಗೆ ಮೈತ್ರಿಗೆ ದೆಹಲಿ ಕಾಂಗ್ರೆಸ್ ಘಟಕದಿಂದ ವಿರುದ್ಧವಾಗಿತ್ತು. ಅದರ ಹೊರತಾಗಿಯೂ, ದೆಹಲಿಯಲ್ಲಿ ಎಎಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಪಕ್ಷವು ನಿರ್ಧರಿಸಿತು. ಇದರಿಂದ ತೀವ್ರ ಬೇಸರವಾಗಿದೆ ಎಂದು ಹೇಳಿದ್ದರು.

Continue Reading
Advertisement
Manvita Kamath marriage with arun Pics are here
ಸ್ಯಾಂಡಲ್ ವುಡ್2 seconds ago

Manvita Kamath: ಅರುಣ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ʼಟಗರು ಪುಟ್ಟಿʼ

Mallikarjuna Kharge
ರಾಜಕೀಯ7 mins ago

Mallikarjuna Kharge: ಶಿವ, ಶ್ರೀರಾಮನ ಬಗ್ಗೆ ಖರ್ಗೆ ವಿವಾದಾತ್ಮಕ ಹೇಳಿಕೆ; ಬಿಜೆಪಿ ಕಿಡಿ

Job Alert
ಉದ್ಯೋಗ15 mins ago

Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

bomb threat delhi ncr schools
ಪ್ರಮುಖ ಸುದ್ದಿ15 mins ago

‌Bomb Threat: ಬಾಂಬ್‌ ಬೆದರಿಕೆ ಇಮೇಲ್ ಮೂಲ ಪತ್ತೆ, ದಿಲ್ಲಿಯ 100ಕ್ಕೂ ಅಧಿಕ ಶಾಲೆ ಕ್ಲೋಸ್

prajwal revanna actress swara bhasker angry government silence on prajwal revanna
ರಾಜಕೀಯ20 mins ago

Prajwal Revanna: ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ; ಮೋದಿ ವಿರುದ್ಧ ನಟಿಯ ಆಕ್ರೋಶ!

Hassan Pen Drive Case Victims reluctance to sit investigation and Suicide threat if he is disturbed by trial
ಕ್ರೈಂ22 mins ago

Hassan Pen Drive Case: SIT ತನಿಖೆಗೆ ಸಂತ್ರಸ್ತೆಯರ ಹಿಂದೇಟು; ವಿಚಾರಣೆ ಅಂತ ತೊಂದರೆ ಕೊಟ್ಟರೆ ಸೂಸೈಡ್‌ ಬೆದರಿಕೆ!

Koppala ZP CEO Rahul Ratnam Pandeya Spoke in Progress review meeting at kanakagiri
ಕೊಪ್ಪಳ27 mins ago

Koppala News: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಿಗುವಂತೆ ಕ್ರಮ ಕೈಗೊಳ್ಳಲು ಜಿ.ಪಂ ಸಿಇಒ ಸೂಚನೆ

LPG Price Cut
ದೇಶ37 mins ago

LPG Price Cut: ತಿಂಗಳ ಆರಂಭದಲ್ಲೇ ಗುಡ್‌ನ್ಯೂಸ್‌; ಎಲ್‌ಪಿಜಿ ಬೆಲೆ 19 ರೂ. ಇಳಿಕೆ

Ambedkar Statue in kalaburagi news
ಕಲಬುರಗಿ46 mins ago

Ambedkar Statue: ಅಂಬೇಡ್ಕರ್‌ ಪ್ರತಿಮೆ ಅಪಮಾನ ಕೇಸ್‌; ಜಾಮೀನು ಪಡೆದ ಆರೋಪಿ ಮನೆಗೆ ಕಲ್ಲು ತೂರಾಟ

gold rate today 18
ಚಿನ್ನದ ದರ1 hour ago

Gold Rate Today: ಬಂಗಾರ‌ ಇಂದೇ ತಗೊಳ್ಳಿ! ಚಿನ್ನದ ಬೆಲೆ ಭಾರೀ ಇಳಿಕೆ; ಇಂದು ಇಷ್ಟಿದೆ ನೋಡಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ1 day ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌