Parliament Session: ಸಂಸತ್‌ನ ಬಜೆಟ್‌ ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಸಜ್ಜು; Live ಇಲ್ಲಿ ವೀಕ್ಷಿಸಿ - Vistara News

ರಾಜಕೀಯ

Parliament Session: ಸಂಸತ್‌ನ ಬಜೆಟ್‌ ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಸಜ್ಜು; Live ಇಲ್ಲಿ ವೀಕ್ಷಿಸಿ

Parliament Session: ಸಂಸತ್‌ನಲ್ಲಿ ಈ ಬಾರಿ ಪ್ರತಿಪಕ್ಷಗಳ ಬಲ ಹೆಚ್ಚಾಗಿದ್ದು ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಿವೆ. ಸಂಸತ್‌ನ ಬಜೆಟ್‌ ಅಧಿವೇಶನ ಕಾವೇರಿದ ಚರ್ಚೆಗೆ ಸಾಕ್ಷಿಯಾಗುತ್ತಿದ್ದು ಇಂದು ಕೂಡ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕೋಲಾಹಲ ನಡೆಯುವ ನಿರೀಕ್ಷೆ ಇದೆ. ಜುಲೈ 23ರಂದು ಮಂಡಿಸಲಾದ 2024-25ರ ಕೇಂದ್ರ ಬಜೆಟ್ ಮತ್ತು ದೆಹಲಿಯ ಕೋಚಿಂಗ್ ಸೆಂಟರ್‌ನಲ್ಲಿ ನಡೆದ ಯುಪಿಎಸ್‌ಸಿ ಆಕಾಂಕ್ಷಿಗಳ ಸಾವಿನ ಪ್ರಕರಣ ಉಭಯ ಸದನಗಳಲ್ಲಿ ಇಂದು ಕೂಡ ಕೋಲಾಹಲ ಸೃಷ್ಟಿಸುವ ಸಾಧ್ಯತೆ ಇದೆ. ಹೀಗಾಗಿ ಕುತೂಹಲ ಕೆರಳಿಸಿರುವ ಅಧಿವೇಶನವನ್ನು ಲೈವ್‌ ಆಗಿ ಇಲ್ಲಿ ವೀಕ್ಷಿಸಿ.

VISTARANEWS.COM


on

Parliament Session
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ನವದೆಹಲಿ: ಸಂಸತ್‌ನ ಬಜೆಟ್‌ ಅಧಿವೇಶನ (Parliament Session) ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ಭಾರಿ ಚರ್ಚೆಗೆ ಸಾಕ್ಷಿಯಾಗುತ್ತಿದೆ. ಇಂದು ಕೂಡ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕೋಲಾಹಲ ನಡೆಯುವ ನಿರೀಕ್ಷೆ ಇದೆ. ಜುಲೈ 23ರಂದು ಮಂಡಿಸಲಾದ 2024-25ರ ಕೇಂದ್ರ ಬಜೆಟ್ ಮತ್ತು ದೆಹಲಿಯ ಕೋಚಿಂಗ್ ಸೆಂಟರ್‌ನಲ್ಲಿ ನಡೆದ ಯುಪಿಎಸ್‌ಸಿ ಆಕಾಂಕ್ಷಿಗಳ ಸಾವಿನ ಪ್ರಕರಣ ಉಭಯ ಸದನಗಳಲ್ಲಿ ಇಂದು ಕೂಡ ಕೋಲಾಹಲ ಸೃಷ್ಟಿಸುವ ಸಾಧ್ಯತೆ ಇದೆ.

ಬೆಳಿಗ್ಗೆ 11 ಗಂಟೆಗೆ ಸಂಸತ್ತಿನ ಕಲಾಪಗಳು ಪುನರಾರಂಭಗೊಳ್ಳಲಿದ್ದು, ಉಭಯ ಸದನಗಳು 2024-25ರ ಬಜೆಟ್ ಮೇಲಿನ ಚರ್ಚೆಗಳನ್ನು ಮುಂದುವರಿಸಲಿವೆ. ಸಂಸತ್ತಿನ ಆವರಣದಲ್ಲಿ ಮಾಧ್ಯಮಗಳನ್ನು ನಿರ್ಬಂಧಿಸುವ ಆದೇಶವನ್ನು ತೆಗೆದುಹಾಕುವಂತೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಸೋಮವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ (Om Birla) ಅವರಿಗೆ ಮನವಿ ಸಲ್ಲಿಸಿದ್ದಾರೆ.

ಇದಕ್ಕೆ ಉತ್ತರಿಸಿದ್ದ ಸ್ಪೀಕರ್‌ ಅವರು ಸಂಸತ್ತಿನ ಕಾರ್ಯವಿಧಾನದ ನಿಯಮಗಳ ಬಗ್ಗೆ ರಾಹುಲ್‌ ಗಾಂಧಿಗೆ ನೆನಪಿಸಿದ್ದರು. ಅಂತಹ ವಿಷಯಗಳನ್ನು ಸದನದಲ್ಲಿ ಚರ್ಚಿಸುವ ಬದಲು ಖಾಸಗಿಯಾಗಿ ಚರ್ಚಿಸಬೇಕೆಂದು ಸಲಹೆ ನೀಡಿದ್ದರು. ಬಳಿಕ ರಾಹುಲ್ ಗಾಂಧಿ ಅವರು ತೃಣಮೂಲ ಕಾಂಗ್ರೆಸ್‌ನ ಡೆರೆಕ್ ಒ’ಬ್ರಿಯಾನ್, ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಮತ್ತು ಶಿವಸೇನೆ-ಯುಬಿಟಿ ಸಂಸದೆ ಪ್ರಿಯಾಂಕಾ ಚತುರ್ವೇದಿ ಮತ್ತಿತತ ಪ್ರತಿಪಕ್ಷದ ನಾಯಕರೊಂದಿಗೆ ಮಾಧ್ಯಮ ಸಿಬ್ಬಂದಿಯನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು.

ನಂತರ ಓಂ ಬಿರ್ಲಾ ಅವರು ಪತ್ರಕರ್ತರ ಗುಂಪನ್ನು ಭೇಟಿಯಾಗಿ, ಅವರ ಕುಂದುಕೊರತೆಗಳನ್ನು ಪರಿಹರಿಸಲಾಗುವುದು ಮತ್ತು ಅವರ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಉತ್ತಮ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದ್ದರು.

ಲೋಕಸಭೆಯಲ್ಲಿ ಅಬ್ಬರಿಸಿದ ರಾಹುಲ್‌ ಗಾಂಧಿ

ಇನ್ನು ಸೋಮವಾರ ಬಜೆಟ್‌ ಮೇಲಿನ ಚರ್ಚೆ ವೇಳೆ ರಾಹುಲ್‌ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅದರಲ್ಲೂ, ಮಹಾಭಾರತದ ಚಕ್ರವ್ಯೂಹವನ್ನು ಉಲ್ಲೇಖಿಸಿದ ರಾಹುಲ್‌ ಗಾಂಧಿ ಅವರು ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ಬಾಣ ಪ್ರಯೋಗಿಸಿದ್ದರು. “ಮಹಾಭಾರತದ ಚಕ್ರವ್ಯೂಹದಂತೆ  ಈಗಲೂ ಒಂದು ಚಕ್ರವ್ಯೂಹ ರಚಿಸಲಾಗಿದೆ. ದೇಶದ ಜನರು ಆ ಚಕ್ರವ್ಯೂಹಕ್ಕೆ ಸಿಲುಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿ 6 ಮಂದಿಯು ಈ ಚಕ್ರವ್ಯೂಹವನ್ನು ನಿಯಂತ್ರಿಸುತ್ತಿದ್ದಾರೆ” ಎಂದು ಹೇಳಿದ್ದರು.

“ಚಕ್ರವ್ಯೂಹದಲ್ಲಿ ತುಂಬ ಜನ ಇರುತ್ತಾರೆ. ಆದರೆ, ಚಕ್ರವ್ಯೂಹದ ಮಧ್ಯದಲ್ಲಿ 6 ಜನ ಇರುತ್ತಾರೆ ಹಾಗೂ ಅವರು ಇಡೀ ಚಕ್ರವ್ಯೂಹವನ್ನು ನಿಯಂತ್ರಿಸುತ್ತಾರೆ. ಆಧುನಿಕ ಕಾಲದ ಚಕ್ರವ್ಯೂಹವನ್ನು ಕೂಡ ಆರು ಜನ ನಿಯಂತ್ರಿಸುತ್ತಿದ್ದಾರೆ. ನರೇಂದ್ರ ಮೋದಿ, ಅಮಿತ್‌ ಶಾ, ಮೋಹನ್‌ ಭಾಗವತ್‌, ಅಜಿತ್‌ ದೋವಲ್‌, ಮುಕೇಶ್‌ ಅಂಬಾನಿ ಹಾಗೂ ಗೌತಮ್‌ ಅದಾನಿಯೇ ಈಗ ಕಮಲದ ಆಕಾರದ ಚಕ್ರವ್ಯೂಹವನ್ನು ನಿಯಂತ್ರಿಸುತ್ತಿದ್ದಾರೆ” ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದರು.

ಅಗ್ನಿಪಥ್‌ ಯೋಜನೆಗೆ ವಿರೋಧ

ಇದರ ಜತೆಗೆ ರಾಹುಲ್‌ ಗಾಂಧಿ ಅಗ್ನಿಪಥ್‌ ಯೋಜನೆ ಬಗ್ಗೆಯೂ ಪ್ರಸ್ತಾವಿಸಿ ವಿರೋಧ ವ್ಯಕ್ತಪಡಿಸಿದ್ದರು. ʼʼಸೇನೆಯ ಸೈನಿಕರನ್ನು ಅಗ್ನಿವೀರ್ ಹೆಸರಿನ ಚಕ್ರವ್ಯೂಹದಲ್ಲಿ ಸಿಲುಕಿಸಲಾಯ್ತು. ಈ ಬಜೆಟ್‌ನಲ್ಲಿ ಅಗ್ನಿವೀರರ ಪಿಂಚಣಿಗಾಗಿ ಒಂದು ರೂಪಾಯಿಯನ್ನು ತೆಗೆದಿರಿಸಿಲ್ಲ. ನಿಮ್ಮನ್ನು ದೇಶಭಕ್ತರೆಂದು ಕರೆದುಕೊಳ್ಳುವ ನೀವು ಅಗ್ನಿವೀರರ ಪಿಂಚಣಿಗಾಗಿ ಅನುದಾನ ಘೋಷಣೆ ಮಾಡಿಲ್ಲ. ನಿಮ್ಮ ಚಕ್ರವ್ಯೂಹದಿಂದ ಹೊರಬರಲು ರೈತರು ಎಂಎಸ್‌ಪಿ ಲೀಗಲ್ ಗ್ಯಾರಂಟಿಯನ್ನು ಕೇಳಿದ್ದರು. ಆದ್ರೆ ನೀವು ರೈತರ ಜತೆ ಮಾತನಾಡಲು ಸಿದ್ಧವಿಲ್ಲʼʼ ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: Rahul Gandhi: ರಾಹುಲ್‌ ಮಾತಿಗೆ ಹಣೆ ಚಚ್ಚಿಕೊಂಡು, ಮುಖ ಮುಚ್ಚಿಕೊಂಡ ಸಚಿವೆ ನಿರ್ಮಲಾ: ಭಾರೀ ವೈರಲಾಗ್ತಿದೆ ಈ ವಿಡಿಯೋ

ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಅವರು, ʼʼಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅಗ್ನಿಪಥ್ ಯೋಜನೆಯ ವಿಚಾರದಲ್ಲಿ ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆʼʼ ಎಂದು ಹೇಳಿದ್ದರು. ಜತೆಗೆ ಯೋಜನೆ ಬಗ್ಗೆ ಚರ್ಚೆಗೆ ಸಿದ್ದ ಎಂದು ಸವಾಲು ಸ್ವೀಕರಿಸಿದ್ದರು. ಹೀಗಾಗಿ ಇಂದು ಕೂಡ ಸದನದಲ್ಲಿ ಬಿಸಿ ಬಿಸಿ ಚರ್ಚೆ ನಡೆಯುವ ಸಾಧ್ಯತೆ ದಟ್ಟವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಆಗಸ್ಟ್‌ 31ರ ಒಳಗೆ GBA ಚುನಾವಣೆ ನಡೆಸಿ- ಸುಪ್ರೀಂ ಕೋರ್ಟ್‌

VISTARANEWS.COM


on

ಆಗಸ್ಟ್‌ 31ರ ಒಳಗೆ ಜಿಬಿಎ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದೆ. ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗದ ಮನವಿಯನ್ನು ಪರಿಗಣಿಸಿದ ಸುಪ್ರೀಂಕೋರ್ಟ್‌, ಆಗಸ್ಟ್‌ 31ರವರೆಗೆ ಕಾಲಾವಕಾಶ ನೀಡಿದೆ. ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಇನ್ನೂ ಮೂರು ತಿಂಗಳ ಗಡುವು ವಿಸ್ತರಣೆ ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು.

ಈ ಹಿಂದೆ ಜೂನ್‌ 30ರೊಳಗೆ ಜಿಬಿಎ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿತ್ತು. ಆದರೆ ಇದೀಗ ಸರ್ಕಾರದ ಮನವಿ ಮೇರೆಗೆ ಚುನಾವಣಾ ಗಡುವನ್ನು ಆಗಸ್ಟ್‌ ಅಂತ್ಯದವರೆಗೆ ವಿಸ್ತರಿಸಲಾಗಿದೆ.

ಸೆಪ್ಟೆಂಬರ್‌ ಅಂತ್ಯದವರೆಗೆ ಕಾಲಾವಕಾಶ ನೀಡಬೇಕೆಂದು ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗದ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದವು. ಮನವಿಯನ್ನು ಆಲಿಸಿದ ಸಿಜೆಐ ಅವರನ್ನು ಒಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ. ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳಲ್ಲಿ, ರಾಜ್ಯದಲ್ಲಿ ಚುನಾವಣಾ ಸಿಬ್ಬಂದಿ ವರ್ಗ ಜನಗಣತಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ, ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಗಳಲ್ಲಿ ನಿರತರಾಗಿದ್ದಾರೆ. ಹೀಗಾಗಿ ಜಿಬಿಎ ಚುನಾವಣೆ ನಡೆಸಲು ಮೂರು ತಿಂಗಳ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದವು.

Continue Reading

Latest

ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ಕುಟುಂಬ ಸಮೇತ ತಿಮ್ಮಪ್ಪನ ದರ್ಶನ ಪಡೆದ ಡಿಕೆಶಿ

VISTARANEWS.COM


on


ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿ ನಡೆಯುತ್ತಿರುವಾಗಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.
ಕುಟುಂಬ ಸಮೇತರಾಗಿ ತಿರುಪತಿ ತಿರುಮಲಕ್ಕೆ ತೆರಳಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದ್ದಾರೆ.
ಡಿ.ಕೆ.ಶಿವಕುಮಾರ್‌ ನಿನ್ನೆಯಷ್ಟೇ ಕೇರಳಂ ನೂತನ ಸಿಎಂ ವಿ.ಡಿ.ಸತೀಶನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಜೊತೆ ಸಿಎಂ, ಡಿಸಿಎಂ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು. ಇಂದು ತುಮಕೂರಿನಲ್ಲಿ ಕಾಂಗ್ರೆಸ್‌ ಸರ್ಕಾರದ 3 ನೇ ವರ್ಷದ ಸಾಧನಾ ಸಮಾವೇಶ ನಡೆಯುತ್ತಿದೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ ಡಿಕೆಶಿ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳಿದ್ದು ಕುತೂಹಲ ಮೂಡಿಸಿದೆ.
ತಮ್ಮ ತಿರುಪತಿ ಭೇಟಿಯ ವಿಚಾರವಾಗಿ ʼಎಕ್ಸ್‌ʼ ನಲ್ಲಿ ಪೋಸ್ಟ್‌ ಮಾಡಿರುವ ಡಿಕೆಶಿ, ʼಇಂದು ಪವಿತ್ರ ತಿರುಮಲ ತಿರುಪತಿ ಕ್ಷೇತ್ರಕ್ಕೆ ಭೇಟಿ ನೀಡಿ, ಎಲ್ಲರ ಸಮೃದ್ಧಿ ಮತ್ತು ಯೋಗಕ್ಷೇಮಕ್ಕಾಗಿ ವೆಂಕಟೇಶ್ವರ ಸ್ವಾಮಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆʼ ಎಂದಿದ್ದಾರೆ.
ಡಿ.ಕೆ.ಶಿವಕುಮಾರ್‌ ಅವರು, ಮುಖ್ಯಮಂತ್ರಿ ಸ್ಥಾನ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸಲು ಹೋಗಿದ್ದಾರೆ ಎಂಬ ಚರ್ಚೆಗಳೂ ನಡೆಯುತ್ತಿವೆ.

Continue Reading

Latest

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

VISTARANEWS.COM


on

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್‌ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್‌ ಅರ್ಲೇಕರ್‌ ಅವರು ಪ್ರಮಾಣ ವಚನ ಬೋಧಿಸಿದರು. ತಿರುವನಂತಪುರದ ಸೆಂಟ್ರಲ್‌ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ವಿ.ಡಿ. ಸತೀಶನ್‌ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

10 ವರ್ಷಗಳ ನಂತರ ಯುಡಿಎಫ್‌ ಸರ್ಕಾರ ಅಧಿಕಾರ ಸ್ವೀಕಾರದೊಂದಿಗೆ ಕೇರಳ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ.

Continue Reading

ಪ್ರಮುಖ ಸುದ್ದಿ

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

VISTARANEWS.COM


on

ಚೆನ್ನೈ: ತಮಿಳು ನಟ ವಿಜಯ್‌ ಮುಖ್ಯಮಂತ್ರಿ ಆಗಿರುವುದಕ್ಕೆ ನನಗೆ ಯಾವುದೇ ಅಸೂಯೆ ಇಲ್ಲ ಎಂದು ತಮಿಳು ನಟ, ಸೂಪರ್‌ ಸ್ಟಾರ್‌ ರಜನೀಕಾಂತ್‌ ಸ್ಪಷ್ಟಪಡಿಸಿದ್ದಾರೆ.

ಚೆನ್ನೈನಲ್ಲಿ ಮಾತನಾಡಿದ ಅವರು, ಪ್ರಬಲ ಮೈತ್ರಿಕೂಟಗಳನ್ನು ಸೋಲಿಸಿ ವಿಜಯ್‌ ಸಿಎಂ ಆಗಿದ್ದಾರೆ. ಇದರಿಂದ ನನಗೆ ಯಾವುದೇ ಅಸೂಯೆ ಇಲ್ಲ. ನನಗೆ ತುಂಬಾ ಸಂತೋಷವಾಗಿದೆ ಎಂದಿದ್ದಾರೆ.

ನಾನು ರಾಜಕೀಯ ಪ್ರವೇಶಿಸಿದ್ದರೆ ಶೇ.100 ರಷ್ಟು ಯಶಸ್ಸು ಸಾಧಿಸುತ್ತಿದ್ದೆ. ಆದರೆ ನಾನು ರಾಜಕೀಯದಿಂದ ದೂರ ಸರಿದು ಬಹಳ ದಿನಗಳಾಗಿವೆ ಎಂದು ಹೇಳಿದ್ದಾರೆ.

ವಿಜಯ್‌ ಮತ್ತು ನನ್ನ ನಡುವೆ ಒಂದು ಜನರೇಶನ್‌ ಗ್ಯಾಪ್‌ ಇದೆ. ನಮ್ಮಿಬ್ಬರ ನಡುವೆ ಸುಮಾರು 25 ವರ್ಷದ ಅಂತರವಿದೆ. ಅವರ ಬಗ್ಗೆಯಾಗಲಿ, ಅವರ ಸಿಎಂ ಆಗಿರುವುದಕ್ಕಾಗಲಿ ನನಗೆ ಯಾವುದೇ ಅಸೂಯೆ ಇಲ್ಲ ಎಂದು ಸ್ಪಷ್ಟಪಡಿಸಿದರು. ವಿಜಯ್‌ ಸಿಎಂ ಆದ ತಕ್ಷಣವೇ ನಾನು ಅವರಿಗೆ ಅಭಿನಂದನೆ ಸಲ್ಲಿಸಿದ್ದೇನೆ ಎಂದು ರಜನೀಕಾಂತ್‌ ತಿಳಿಸಿದರು.

ಚುನಾವಣೆ ಬಳಿಕ ತಮ್ಮ ವಿರುದ್ಧ ಕೇಳಿಬರುತ್ತಿರುವ ಟೀಕೆಗಳ ಕುರಿತೂ ರಜನೀಕಾಂತ್‌ ಪ್ರತಿಕ್ರಿಯೆ ನೀಡಿದರು. ಚುನಾವಣೆ ನಂತರ ನನ್ನ ವಿರುದ್ಧ ಅನೇಕ ಟೀಕೆಗಳು ಬರುತ್ತಿವೆ. ನಾನು ಅವಕ್ಕೆ ಪ್ರತಿಕ್ರಿಯಿಸದಿದ್ದರೆ ಅವು ಸತ್ಯ ಎಂದು ಭಾವಿಸುವ ಸಾಧ್ಯತೆ ಇದೆ ಎಂದರು.

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿ ಮಾಡಿದ ವಿಚಾರಕ್ಕೂ ಸ್ಪಷ್ಟನೆ ನೀಡಿದ ರಜನೀಕಾಂತ್‌, ಸ್ಟಾಲಿನ್‌ ಮತ್ತು ನನ್ನ ಸ್ನೇಹ ರಾಜಕೀಯವನ್ನೂ ಮೀರಿದ್ದು, ನಮ್ಮ ಸ್ನೇಹಕ್ಕೆ ಸುಮಾರು 35 ವರ್ಷಗಳ ಇತಿಹಾಸ ಇದೆ ಎಂದು ಹೇಳಿದರು.

“ಕೊಳತ್ತೂರಿನಲ್ಲಿ ಸ್ಟಾಲಿನ್‌ ಸೋತಿದ್ದಕ್ಕೆ ನನಗೆ ಬೇಸರವಾಯಿತು. ಸ್ನೇಹಿತನಾಗಿ ಅವರನ್ನು ಭೇಟಿಯಾಗಿ ಸಮಾಧಾನ ಮಾಡಿದ್ದೇನೆ. ಆದರೆ ಆ ವಿಚಾರದಲ್ಲೂ ಕೆಲವರು ನನ್ನನ್ನು ಟೀಕಿಸುತ್ತಿದ್ದಾರೆ, ಅದಕ್ಕೆ ಈ ಸ್ಪಷ್ಟನೆ ನೀಡುತ್ತಿದ್ದೇನೆ ಎಂದು ರಜನೀಕಾಂತ್‌ ಹೇಳಿದ್ದಾರೆ.

Continue Reading
Advertisement
galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌