Parliament Session: ಸಂಸತ್ ಅಧಿವೇಶನದಲ್ಲಿ ಪ್ರತಿಧ್ವನಿಸಲಿದೆ ವಯನಾಡು ದುರಂತ; ಕ್ಷಣ ಕ್ಷಣದ ಮಾಹಿತಿಗಾಗಿ Live ನೋಡಿ - Vistara News

ರಾಜಕೀಯ

Parliament Session: ಸಂಸತ್ ಅಧಿವೇಶನದಲ್ಲಿ ಪ್ರತಿಧ್ವನಿಸಲಿದೆ ವಯನಾಡು ದುರಂತ; ಕ್ಷಣ ಕ್ಷಣದ ಮಾಹಿತಿಗಾಗಿ Live ನೋಡಿ

Parliament Session: ಸಂಸತ್‌ನಲ್ಲಿ ಬಜೆಟ್‌ ಅಧಿವೇಶನ ನಡೆಯುತ್ತಿದ್ದು, ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದಕ್ಕೆ ರಾಜ್ಯಸಭೆ ಮತ್ಯಯ ಲೋಕಸಭೆ ಸಾಕ್ಷಿಯಾಗುತ್ತಿದೆ. ಇಂದು ಕೂಡ ಉಭಯ ಸದನಗಳಲ್ಲಿ ಕಾವೇರಿದ ಚರ್ಚೆ ನಡೆಯುವ ಸಾಧ್ಯತೆ ಇದೆ. ಜುಲೈ 23ರಂದು ಮಂಡಿಸಲಾದ 2024-25ರ ಕೇಂದ್ರ ಬಜೆಟ್ ಮತ್ತು ಕೇರಳದ ವಯನಾಡಿನಲ್ಲಿ ನಡೆದ ಭೀಕರ ಭೂಕುಸಿತದ ಬಗ್ಗೆ ಇಂದು ಸಂಸದರು ಧ್ವನಿ ಎತ್ತಲಿದ್ದಾರೆ.

VISTARANEWS.COM


on

Parliament Session
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಸಂಸತ್‌ನಲ್ಲಿ ಬಜೆಟ್‌ ಅಧಿವೇಶನ (Parliament Session) ನಡೆಯುತ್ತಿದ್ದು, ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದಕ್ಕೆ ರಾಜ್ಯಸಭೆ ಮತ್ಯಯ ಲೋಕಸಭೆ ಸಾಕ್ಷಿಯಾಗುತ್ತಿದೆ. ಇಂದು ಕೂಡ ಉಭಯ ಸದನಗಳಲ್ಲಿ ಕಾವೇರಿದ ಚರ್ಚೆ ನಡೆಯುವ ಸಾಧ್ಯತೆ ಇದೆ. ಜುಲೈ 23ರಂದು ಮಂಡಿಸಲಾದ 2024-25ರ ಕೇಂದ್ರ ಬಜೆಟ್ ಮತ್ತು ಕೇರಳದ ವಯನಾಡಿನಲ್ಲಿ ನಡೆದ ಭೀಕರ ಭೂಕುಸಿತದ ಬಗ್ಗೆ ಇಂದು ಸಂಸದರು ಧ್ವನಿ ಎತ್ತಲಿದ್ದಾರೆ.

18ನೇ ಲೋಕಸಭೆಯ ಮೊದಲ ಬಜೆಟ್ ಅಧಿವೇಶನದ ಜುಲೈ 22ರಂದು ಸಂಸತ್ತಿನಲ್ಲಿ ಪ್ರಾರಂಭವಾಗಿದ್ದು, ಆಗಸ್ಟ್ 12ರವರೆಗೆ ನಡೆಯಲಿದೆ. ಅಧಿವೇಶನ ಆರಂಭವಾದಾಗಿನಿಂದ ಪ್ರತಿಪಕ್ಷಗಳು ವಿವಿಧ ವಿಷಯಗಳನ್ನು ಪ್ರಸ್ತಾವಿಸಿ ಕೋಲಾಹಲ ಎಬ್ಬಿಸುತ್ತಿವೆ. ಬಜೆಟ್‌ನಲ್ಲಿ ರಾಜ್ಯಗಳಿಗೆ ಅನ್ಯಾಯವಾಗಿದೆ ಎಂದು ವಾದಿಸಿರುವ ಪ್ರತಿಪಕ್ಷಗಳು ನೀಟ್‌ ಹಗರಣ, ದೆಹಲಿ ಕೋಚಿಂಗ್‌ ಸೆಂಟರ್‌ನಲ್ಲಿ ವಿದ್ಯಾರ್ಥಿಗಳ ಸಾವಿನ ಪ್ರಕರಣಗಳನ್ನು ಮುಂದಿಟ್ಟು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.

ವಯನಾಡು ದುರಂತದ ಚರ್ಚೆ

ಇಂದು ಉಭಯ ಸದನಗಳಲ್ಲಿ ವಯನಾಡಿನಲ್ಲಿ ನಡೆದ ಭೀಕರ ಭೂಕುಸಿತದ ಬಗ್ಗೆ ವ್ಯಾಪಕ ಚರ್ಚೆ ನಡೆಯುವ ಸಾಧ್ಯತೆ ಇದೆ. ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತ ವಿಚಾರ ಬುಧವಾರ ಸಂಸತ್‌ನಲ್ಲೂ ಪ್ರತಿಧ್ವನಿಸಿತ್ತು. ಭೀಕರ ದುರ್ಘಟನೆ ಬಗ್ಗೆ ಸಂತಾಪ ಸೂಚಿಸಿದ ಕೇಂದ್ರ ಗೃಹಸಚಿವ ಅಮಿತ್‌ ಶಾ ಈ ವಿಚಾರದಲ್ಲಿ ರಾಜಕೀಯ ಬೇಡ ಎಂದು ಮನವಿ ಮಾಡಿದ್ದರು. ರಾಜ್ಯಸಭೆಯಲ್ಲಿ ಮಾತನಾಡಿದ ಶಾ, ಗುಡ್ಡಗಾಡು ಜಿಲ್ಲೆಗೆ ಭೂಕುಸಿತ ಸಂಭವಿಸುವ ಒಂದು ವಾರದ ಮೊದಲು ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರಕ್ಕೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿತ್ತು ಎಂದು ಹೇಳಿದ್ದರು. ಭಾರೀ ಮಳೆಯಾಗುವ ಮುನ್ಸೂಚನೆಯ ನಂತರ ಕೇಂದ್ರವು ಒಂಬತ್ತು ಎನ್‌ಡಿಆರ್‌ಎಫ್ ತಂಡಗಳನ್ನು ಕೇರಳಕ್ಕೆ ಕಳುಹಿಸಿತ್ತು ಎಂದಿದ್ದರು.

ʼʼಜುಲೈ 23ರಂದು ನನ್ನ ನಿರ್ದೇಶನದ ಮೇರೆಗೆ, ಭೂಕುಸಿತಗಳು ಸಂಭವಿಸಬಹುದು ಎಂದು ಪರಿಗಣಿಸಿ 9 ಎನ್‌ಡಿಆರ್‌ಎಫ್‌ ತಂಡಗಳನ್ನು ಕೇರಳಕ್ಕೆ ಕಳುಹಿಸಲಾಯಿತು. ಕೇರಳ ಸರ್ಕಾರ ಏನು ಮಾಡಿದೆ? ಜನರನ್ನು ಸ್ಥಳಾಂತರಿಸಲಾಗಿದೆಯೇ? ಅವರು ಸ್ಥಳಾಂತರಗೊಂಡರೆ ಹೇಗೆ ಸತ್ತರು? ಪೂರ್ವ ಎಚ್ಚರಿಕೆಯ ಯೋಜನೆಯು 2016ರಲ್ಲಿ ಪ್ರಾರಂಭವಾಯಿತು ಮತ್ತು 2023ರ ಹೊತ್ತಿಗೆ ಭಾರತವು ಅತ್ಯಾಧುನಿಕ ಮುನ್ನೆಚ್ಚರಿಕೆ ವ್ಯವಸ್ಥೆಯನ್ನು ಹೊಂದಿತ್ತು. ಇದೀಗ ಪ್ರಕೃತಿ ವಿಕೋಪಗಳನ್ನು 7 ದಿನಗಳ ಮುಂಚಿತವಾಗಿ ಊಹಿಸಲು ಸಾಮರ್ಥ್ಯವಿರುವ ಕೇವಲ 4 ದೇಶಗಳಲ್ಲಿ ಭಾರತವು ಒಂದುʼʼ ಎಂದು ಅವರು ಹೇಳಿದ್ದರು. ಇದು ಭಾರಿ ಚರ್ಚೆಗೆ ಕಾರಣವಾಗಿದೆ.

ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ

ವಯನಾಡು ದುರಂತದ ಬಗ್ಗೆ ಲೋಕಸಭೆಯಲ್ಲಿ ಮಾತನಾಡಿದ ಬೆಂಗಳೂರು ಸಂಸದ ಪೇಜಸ್ವಿ ಸೂರ್ಯ ವಯನಾಡಿನ ಮಾಜಿ ಸಂಸದ ರಾಹುಲ್‌ ಗಾಂಧ ವಿರುದ್ಧ ವಾಗ್ದಾಳಿ ನಡೆಸಿದ್ದರು. “ರಾಹುಲ್ ಗಾಂಧಿ ವಯನಾಡು ಸಂಸದರಾಗಿದ್ದಾಗಿನಿಂದ ಕಳೆದ 1,800 ದಿನಗಳಲ್ಲಿ ಅವರು ಸಂಸತ್ತಿನಲ್ಲಿ ಒಮ್ಮೆಯೂ ಭೂಕುಸಿತ ಮತ್ತು ಪ್ರವಾಹದ ವಿಷಯವನ್ನು ಎತ್ತಲಿಲ್ಲ” ಎಂದು ಹೇಳಿದ್ದರು.

ʼʼಕೇರಳ ವಿಪತ್ತು ನಿರ್ವಹಣಾ ಮಂಡಳಿಯ ಶಿಫಾರಸುಗಳ ಹೊರತಾಗಿಯೂ ವಯನಾಡಿನಲ್ಲಿ ಅಕ್ರಮ ಒತ್ತುವರಿಯನ್ನು ತೆಗೆದುಹಾಕಲಾಗಿಲ್ಲ. ಕೇರಳದ ಅರಣ್ಯ ಸಚಿವರು ಕೂಡ, ವಿವಿಧ ಧಾರ್ಮಿಕ ಸಂಘಟನೆಗಳ ಒತ್ತಡದಿಂದಾಗಿ ಅಕ್ರಮ ಒತ್ತುವರಿಯನ್ನು ತೆಗೆದುಹಾಕಲು ಅವರಿಗೆ ಸಾಧ್ಯವಾಗುತ್ತಿಲ್ಲ ಎನ್ನುವುದನ್ನು ವಿಧಾನಸಭೆಯಲ್ಲಿ ಒಪ್ಪಿಕೊಳ್ಳುತ್ತಾರೆʼʼ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದರು. ಈ ವಿಚಾರ ಇಂದು ಉಭಯ ಸದನಗಳನ್ನು ಪ್ರತಿಧ್ವನಿಸಲಿದೆ.

ಇದನ್ನೂ ಓದಿ: Parliament Session: RSS ಬಗ್ಗೆ ದೋಷಾರೋಪಣೆ ಸಲ್ಲದು; ಜಗದೀಪ್ ಧನ್‌ಕರ್ ಹೇಳಿಕೆ- ಪ್ರತಿಪಕ್ಷಗಳು ವಾಕ್‌ಔಟ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Wayanad Landslide: “ಧಾರ್ಮಿಕ ಸಂಘಟನೆಗಳ ಒತ್ತಡದಿಂದ ವಯನಾಡಿನಲ್ಲಿ ಭೂಮಿ ಒತ್ತುವರಿ ತೆರವು ಸಾಧ್ಯವಾಗ್ತಿಲ್ಲ”- ತೇಜಸ್ವಿ ಸೂರ್ಯ ಕಿಡಿ

wayanad Landslide: ರಾಹುಲ್​ ಗಾಂಧಿ ಅವರು ವಯನಾಡ್​ ಸಂಸದರಾಗಿದ್ದಾಗಿನಿಂದ ಕಳೆದ 1800 ದಿನಗಳಲ್ಲಿ ವಿಧಾನಸಭೆ ಮತ್ತು ಸಂಸತ್ತಿನಲ್ಲಿ ಒಮ್ಮೆಯೂ ತಮ್ಮ ಕ್ಷೇತ್ರದಲ್ಲಿನ ಭೂಕುಸಿತ ಮತ್ತು ಪ್ರವಾಹದ ಬಗ್ಗೆ ಎಂದಿಗೂ ಪ್ರಸ್ತಾಪಿಸಲಿಲ್ಲ. 2020ರಲ್ಲಿ ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ವಯನಾಡಿನಲ್ಲಿ ಭೂಕುಸಿತ ಪೀಡಿತ ಪ್ರದೇಶಗಳಿಂದ 4000 ಕುಟುಂಬಗಳನ್ನು ಸ್ಥಳಾಂತರಿಸಲು ಸಲಹೆ ನೀಡಿತು ಎಂದು ತೇಜಸ್ವಿ ಸೂರ್ಯ ಹೇಳಿದರು.

VISTARANEWS.COM


on

wayanad Landslide
Koo

ನವದೆಹಲಿ: ಕೇರಳದ ವಯನಾಡಿನಲ್ಲಿ ನಡೆದ ಭೂಕುಸಿತ(Wayanad Landslide) ದುರಂತ ವಿಚಾರವಾಗಿ ಸಂಸತ್‌ನಲ್ಲಿ ಕೋಲಾಹಲವೇ ಎದ್ದಿದೆ. ಈ ವಿಚಾರವನ್ನು ಪ್ರಸ್ತಾಪಿಸಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ(Tejasvi Surya) ವಿಪಕ್ಷ ನಾಯಕ ರಾಹುಲ್‌ ಗಾಂಧಿ(Rahul Gandhi) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಯನಾಡಿನಲ್ಲಿ ಅಕ್ರಮ ಒತ್ತುವಾರಿಯಿಂದಾಗಿಯೇ ಇಂತಹ ದುರಂತಗಳು ಪದೇ ಪದೆ ನಡೆಯುತ್ತಿದೆ. ಧಾರ್ಮಿಕ ಸಂಘಟನೆಗಳ ಒತ್ತಡದಿಂದಾಗಿ ಒತ್ತುವರಿ ತೆರವು ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು. ಈ ವೇಳೆ ಕಾಂಗ್ರೆಸ್‌ ಮತ್ತು ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.

ರಾಹುಲ್​ ಗಾಂಧಿ ಅವರು ವಯನಾಡ್​ ಸಂಸದರಾಗಿದ್ದಾಗಿನಿಂದ ಕಳೆದ 1800 ದಿನಗಳಲ್ಲಿ ವಿಧಾನಸಭೆ ಮತ್ತು ಸಂಸತ್ತಿನಲ್ಲಿ ಒಮ್ಮೆಯೂ ತಮ್ಮ ಕ್ಷೇತ್ರದಲ್ಲಿನ ಭೂಕುಸಿತ ಮತ್ತು ಪ್ರವಾಹದ ಬಗ್ಗೆ ಎಂದಿಗೂ ಪ್ರಸ್ತಾಪಿಸಲಿಲ್ಲ. 2020ರಲ್ಲಿ ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ವಯನಾಡಿನಲ್ಲಿ ಭೂಕುಸಿತ ಪೀಡಿತ ಪ್ರದೇಶಗಳಿಂದ 4000 ಕುಟುಂಬಗಳನ್ನು ಸ್ಥಳಾಂತರಿಸಲು ಸಲಹೆ ನೀಡಿತು. ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಮತ್ತು ವಯನಾಡನ್ನು ಪ್ರತಿನಿಧಿಸುವ ಸಂಸದರು ಇಲ್ಲಿಯವರೆಗೆ ಈ ವಿಷಯವನ್ನು ಪ್ರಸ್ತಾಪಿಸಲಿಲ್ಲ.” ಎಂದು ಆರೋಪಿಸಿದರು.

ಧಾರ್ಮಿಕ ಸಂಘಟನೆಗಳಿಂದ ಒತ್ತಡ

ಕೇರಳ ವಿಪತ್ತು ನಿರ್ವಹಣಾ ಮಂಡಳಿಯ ಶಿಫಾರಸುಗಳ ಹೊರತಾಗಿಯೂ ವಯನಾಡಿನಲ್ಲಿ ಅಕ್ರಮ ಒತ್ತುವರಿಯನ್ನು ತೆಗೆದುಹಾಕಲಾಗಿಲ್ಲ. ಕೇರಳದ ಅರಣ್ಯ ಸಚಿವರು ಕೂಡ, ವಿವಿಧ ಧಾರ್ಮಿಕ ಸಂಘಟನೆಗಳ ಒತ್ತಡದಿಂದಾಗಿ ಅಕ್ರಮ ಒತ್ತುವರಿಯನ್ನು ತೆಗೆದುಹಾಕಲು ಅವರಿಗೆ ಸಾಧ್ಯವಾಗುತ್ತಿಲ್ಲ ಎನ್ನುವುದನ್ನು ವಿಧಾನಸಭೆಯಲ್ಲಿ ಒಪ್ಪಿಕೊಳ್ಳುತ್ತಾರೆ. ರಾಹುಲ್​ ಗಾಂಧಿ ಅವರು ವಯನಾಡ್​ ಸಂಸದರಾಗಿದ್ದ ಅವಧಿಯಲ್ಲಿ ಭೂಕುಸಿತ ಮತ್ತು ಪ್ರವಾಹಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ವಿಫಲರಾಗಿದ್ದಾರೆ ಎಂದು ಟೀಕಿಸಿದರು.

ತೇಜಸ್ವಿ ಸೂರ್ಯ ಆರೋಪಕ್ಕೆ ಕಾಂಗ್ರೆಸ್‌ ಕಿಡಿ

ಇನ್ನು ತೇಜಸ್ವಿ ಸೂರ್ಯ ಆರೋಪಕ್ಕೆ ಕಾಂಗ್ರೆಸ್‌ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ವಯಾನಾಡು ದುರಂತ ದೇಶವನ್ನೇ ಬೆಚ್ಚಿ ಬೀಳಿಸಿದ್ದು, ಈ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ ಸಂಸದ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಯನಾಡ್ ಘಟನೆಯ ಬಗ್ಗೆ ಮಾತನಾಡಿದ ರೀತಿ ತಪ್ಪು. ಆಡಳಿತ ಪಕ್ಷದ ಸದಸ್ಯರ ಮಾತು ಬೇಸರ ತಂದಿದೆ ಎಂದರು. ಇದು ಇಡೀ ದೇಶ ಮತ್ತು ಕೇರಳ ಕಂಡ ಅತ್ಯಂತ ದುರಂತ ಘಟನೆಯಾಗಿದ್ದು, ತೇಜಸ್ವಿ ಸೂರ್ಯ ಅವರನ್ನು ವಜಾಗೊಳಿಸಬೇಕು ಎಂದು ಗೃಹ ಸಚಿವ ಅಮಿತ್ ಶಾ ಅವರನ್ನು ಆಗ್ರಹಿಸಿದ್ದಾರೆ.

ಇದನ್ನೂ ಓದಿ:Parliament Session: RSS ಬಗ್ಗೆ ದೋಷಾರೋಪಣೆ ಸಲ್ಲದು; ಜಗದೀಪ್ ಧನ್‌ಕರ್ ಹೇಳಿಕೆ- ಪ್ರತಿಪಕ್ಷಗಳು ವಾಕ್‌ಔಟ್‌!

Continue Reading

ಪ್ರಮುಖ ಸುದ್ದಿ

CM Siddaramaiah: ಮುಡಾ ಹಗರಣ ವಿಚಾರದಲ್ಲಿ ರಾಜ್ಯಪಾಲರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ‌ ನೋಟೀಸ್

CM Siddaramaiah: ಮೂರು ದಿನಗಳ ಹಿಂದೆ ದೂರುದಾರ ಟಿ.ಜೆ ಅಬ್ರಹಾಂ ಅವರನ್ನು ಕರೆದು ರಾಜ್ಯಪಾಲರು ಮಾಹಿತಿ ಪಡೆದಿದ್ದರು. ಬಿಜೆಪಿ ನಿಯೋಗ ಕೂಡ ರಾಜ್ಯಪಾಲರನ್ನು ಭೇಟಿಯಾಗಿ, ಸಿಎಂ ವಿರುದ್ಧ ತನಿಖೆ ಜರುಗಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತ್ತು.

VISTARANEWS.COM


on

cm siddaramaiah MUDA scam
Koo

ಬೆಂಗಳೂರು: ಮುಡಾ ಹಗರಣದ (MUDA Scam) ವಿಚಾರದಲ್ಲಿ ಬಂದಿರುವ ದೂರಿನ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಸರ್ಕಾರಕ್ಕೆ ರಾಜ್ಯಪಾಲರು (Governor) ನೋಟೀಸ್‌ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ (Prosecution) ಅನುಮತಿ ನೀಡಬೇಕು ಎಂದು ಬಂದಿರುವ ಮನವಿ ಹಿನ್ನೆಲೆಯಲ್ಲಿ ನೋಟೀಸ್‌ (Notice) ನೀಡಲಾಗಿದೆ.

ಮುಡಾ ಪ್ರಕರಣದ ಮಾಹಿತಿ ದಾಖಲೆ ಸಹಿತ ನೀಡುವಂತೆ ಸರ್ಕಾರಕ್ಕೆ ರಾಜ್ಯಪಾಲರು ನೋಟೀಸ್ ಕಳಿಸಿದ್ದಾರೆ. ಟಿ.ಜೆ ಅಬ್ರಹಾಂ ಎಂಬ ಸಾಮಾಜಿಕ ಕಾರ್ಯಕರ್ತರು ಈ ಕುರಿತು ಖಾಸಗಿ ದೂರು ಸಲ್ಲಿಸಿದ್ದರು. ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿಯಲ್ಲಿ ಕೇಳಲಾಗಿತ್ತು. ಮೂರು ದಿನಗಳ ಹಿಂದೆ ದೂರುದಾರ ಟಿ.ಜೆ ಅಬ್ರಹಾಂ ಅವರನ್ನು ಕರೆದು ರಾಜ್ಯಪಾಲರು ಮಾಹಿತಿ ಪಡೆದಿದ್ದರು. ಬಿಜೆಪಿ ನಿಯೋಗ ಕೂಡ ರಾಜ್ಯಪಾಲರನ್ನು ಭೇಟಿಯಾಗಿ, ಸಿಎಂ ವಿರುದ್ಧ ತನಿಖೆ ಜರುಗಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತ್ತು.

ಬಳಿಕ ಇದೀಗ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟೀಸ್ ಕಳುಹಿಸಲಾಗಿದೆ. ಅಬ್ರಹಾಂ ದೂರಿಗೆ ಸಂಬಂಧಿಸಿ ಪ್ರಕರಣದ ಬಗ್ಗೆ ಸಮಗ್ರ ಮಾಹಿತಿ ಕೊಡುವಂತೆ ನೋಟೀಸ್ ಜಾರಿ ಮಾಡಿದ್ದಾರೆ. ಈಗಾಗಲೇ ರಾಜ್ಯಪಾಲರು ನೋಟೀಸ್‌ ಕಳುಹಿಸಬಹುದು ಎಂಬ ವದಂತಿಯ ಆಧಾರದಲ್ಲಿ ಕಾಂಗ್ರೆಸ್‌ ಮುಖಂಡರು ಸಿಡಿದೆದ್ದಿದ್ದಾರೆ. ನಿನ್ನೆ ಕಂದಾಯ ಸಚಿವ ಕೃಷ್ಣಭೈರೇಗೌಡರು, ʼರಾಜ್ಯಪಾಲರ ಮೂಲಕ ಸರಕಾರ ಅಸ್ಥಿರಗೊಳಿಸುವ ದಾರಿ ಹಿಡಿದರೆ ನಾವು ಸುಪ್ರೀಂ ಕೋರ್ಟ್‌ ಮೊರೆ ಹೋಗಲಿದ್ದೇವೆʼ ಎಂದು ಎಚ್ಚರಿಸಿದ್ದರು.

ಇಡಿ ಜೊತೆಗೆ ರಾಜಭವನದ ದುರುಪಯೋಗ ಆಗುತ್ತಿದೆ ಎಂದು ಕಾಂಗ್ರೆಸ್‌ ಸಚಿವರು ಆರೋಪಿಸಿದ್ದರು. ಈ ನಡುವೆ ಮುಡಾ ವಿಚಾರದಲ್ಲಿ ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಡುವುದರ ವಿರುದ್ಧ ಇಂದು ನಡೆಯುವ ಕ್ಯಾಬಿನೆಟ್‌ ಸಭೆಯಲ್ಲಿ ವಿರೋಧಿ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆ ಇದೆ. ವಾಲ್ಮೀಕಿ ನಿಗಮ ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಇಡಿ, ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ಈವರೆಗೂ ಅನುಮತಿ ಕೇಳಿಲ್ಲ.

ಇದರ ಮಧ್ಯೆಯೇ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ. ನೀರಾವರಿ ಮತ್ತು ಬೆಂಗಳೂರು ಅಭಿವೃದ್ಧಿ ಸಂಬಂಧ ಪ್ರಧಾನಿಗಳ ಜೊತೆ ಡಿಸಿಎಂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಕೇಂದ್ರ ಸರಕಾರವನ್ನು ಪ್ರಶ್ನಿಸಿ: ಸಿದ್ದರಾಮಯ್ಯ

ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಹಂಚಿಕೆ (ಎಸ್ ಸಿಎಸ್ ಪಿ/ಟಿಎಸ್ ಪಿ) ಯೋಜನೆಯನ್ನು ಜಾರಿಗೊಳಿಸದೆ, ದಲಿತರ ಅಭಿವೃದ್ದಿಗೆ ನ್ಯಾಯಬದ್ಧವಾಗಿ ಸಲ್ಲಬೇಕಾಗಿರುವ ಬಜೆಟ್ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿ ಅನ್ಯಾಯ ಮಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕ ಅಧಿಕಾರ ಇದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ದಲಿತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎಸ್ ಸಿ/ಎಸ್ ಟಿ ಕಲ್ಯಾಣದ ಬಗ್ಗೆ ಕರ್ನಾಟಕ ಸರ್ಕಾರವನ್ನು ಪ್ರಶ್ನಿಸಬೇಕೆಂದು ಕರೆ ಕೊಟ್ಟಿದ್ದಾರೆ. ನಿರ್ಮಲಾ ಸೀತಾರಾಮನ್ ಅವರೇ, ನಿಮಗೆ ದಲಿತರ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯನ್ನು ಜಾರಿಗೆ ತಂದು ಕೇಂದ್ರ ಬಜೆಟ್ ನಲ್ಲಿ ದಲಿತರ ಜನಸಂಖ್ಯೆಗೆ ಅನುಗುಣವಾಗಿ ಶೇಕಡಾ 25ರಷ್ಟು ಅನುದಾನವನ್ನು ಮೀಸಲಿಡಿ, ಆ ಮೇಲೆ ನಮ್ಮನ್ನು ಪ್ರಶ್ನೆ ಮಾಡಲು ಬನ್ನಿ. ಅಲ್ಲಿಯ ವರೆಗೆ ಮೌನವಾಗಿರುವುದು ನಿಮಗೆ ಕ್ಷೇಮ ಎಂದಿದ್ದಾರೆ ಅವರು.

ಇದನ್ನೂ ಓದಿ: Muda Scam: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ; ಲೋಕಾಯುಕ್ತಕ್ಕೆ ಪ್ರಮುಖ ದಾಖಲೆ ಸಲ್ಲಿಕೆ

Continue Reading

ಕರ್ನಾಟಕ

Congress government: ನಮ್ಮ ಸರ್ಕಾರ ಅಲುಗಾಡಿಸಿದರೆ ರಕ್ತಕ್ರಾಂತಿ ಆಗುತ್ತೆ: ಕೆ.ಎಂ.ಶಿವಲಿಂಗೇಗೌಡ ಎಚ್ಚರಿಕೆ

Congress government: 136 ಸೀಟ್ ಬಂದಿರುವ ಸರ್ಕಾರವನ್ನು ಅನ್ಯ ಮಾರ್ಗದಲ್ಲಿ ತೆಗೆಯಲು ಹೋದರೆ ಈ ರಾಜ್ಯದಲ್ಲಿ ಯುದ್ಧವೇ ಆಗುತ್ತೆ, ರಕ್ತ ಕ್ರಾಂತಿ ಆಗುತ್ತೆ ಎಂದು ಬಿಜೆಪಿಗೆ ನಾಯಕರಿಗೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಎಚ್ಚರಿಕೆ ನೀಡಿದ್ದಾರೆ ನೀಡಿದ್ದಾರೆ.

VISTARANEWS.COM


on

Congress government
Koo

ಹಾಸನ: ರಾಜ್ಯದಲ್ಲಿ ಒಂದು ಇಂಚು ಸಿಎಂ ಸಿದ್ದರಾಮಯ್ಯ ಅಥವಾ ಕಾಂಗ್ರೆಸ್‌ ಸರ್ಕಾರವನ್ನು (Congress government) ಅಲುಗಾಡಿಸಿದರೆ ರಕ್ತಕ್ರಾಂತಿ ಆಗುತ್ತದೆ, ನೀವು ಎಚ್ಚರಿಕೆಯಿಂದ ಇರಬೇಕು. ನಿಮಗೆ ಏನಾದರೂ ಆ ಆಲೋಚನೆ ಇದ್ದರೆ, ವಾಪಸ್ ತೆಗೆದುಕೊಳ್ಳಿ, ಇಲ್ಲವಾದರೆ ರಕ್ತಕ್ರಾಂತಿ ಆಗುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ತೆಗೆದುಕೊಂಡು ಪ್ರಾಸಿಕ್ಯೂಷನ್‌ಗೆ ನೋಟೀಸ್ ನೀಡುತ್ತಾರೆ ಎಂಬ ಗುಮಾನಿ ಹರಡಿದೆ. ಟಿವಿ ಮಾಧ್ಯಮಗಳಲ್ಲಿ ಈ ಬಗ್ಗೆ ಬರುತ್ತಿದೆ. ಟಿವಿ ಮಾಧ್ಯಮಗಳಲ್ಲಿ ಬಂದಿದ್ದು, ಬಹುಶಃ ನಿಜ ಆಗಬಹುದು. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತೇನೆ. ಬಿಜೆಪಿ ಸರ್ಕಾರ ಎರಡು ಬಾರಿಯೂ ಮುಂಭಾಗಿಲಿನಿಂದ ಅಧಿಕಾರಕ್ಕೆ ಬಂದಿಲ್ಲ, ಹಿಂಭಾಗಿಲಿನಿಂದ ಅಧಿಕಾರಕ್ಕೆ ಬಂದಿದೆ. ಈ ಬಾರಿ ಪುನಃ ಇದೇ ಆಟವನ್ನು ಬಿಜೆಪಿಯವರು ಆಡಲು ಹೊರಟಿದ್ದಾರೆ ಎಂದು ಕಿಡಿಕಾರಿದರು.

ಇಂದು ಕಾಂಗ್ರೆಸ್ ಕಚೇರಿಯಲ್ಲಿ ಇಸತ್ಯಶೋಧನ ಸಮಿತಿ ಸಭೆ ನಡೆಸಿದ್ದೇವೆ. ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗೆ ಮನವಿ ನೀಡಿದ್ದೇವೆ. ಸರ್ಕಾರ ಬೀಳಿಸಿದರೆ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಉಗ್ರ ಹೋರಾಟ ಮಾಡುತ್ತೇವೆ, ರಕ್ತ ಕ್ರಾಂತಿ ಆಗುತ್ತೆ. ಇದಕ್ಕೆ ನಾವು ತಯಾರಾಗಿದ್ದೇವೆ, ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ. ಅನಿವಾರ್ಯ ಘಟನೆ ನಡೆದರೆ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಯುದ್ಧಕ್ಕೆ ತಯಾರಾಗಬೇಕು. ಈ ರಾಜ್ಯದಲ್ಲಿ ಯುದ್ಧವನ್ನೇ ಮಾಡಬೇಕಾಗುತ್ತೆ ಎಂದು ಹೇಳಿದರು.

ಇದನ್ನೂ ಓದಿ | MB Patil: ರಾಜ್ಯದಲ್ಲಿ ಟೊಯೋಟಾ ಕಂಪನಿಯ ಹೂಡಿಕೆ ಅಬಾಧಿತ; ಸಚಿವ ಎಂ‌.ಬಿ. ಪಾಟೀಲ

136 ಸೀಟ್ ಬಂದಿರುವ ಸರ್ಕಾರವನ್ನು ಅನ್ಯ ಮಾರ್ಗದಲ್ಲಿ ತೆಗೆಯಲು ಹೋದರೆ ಈ ರಾಜ್ಯದಲ್ಲಿ ಯುದ್ಧವೇ ಆಗುತ್ತೆ, ರಕ್ತ ಕ್ರಾಂತಿ ಆಗುತ್ತೆ. ಇದು ಬಿಜೆಪಿಗೆಯವರಿಗೆ ಎಚ್ಚರಿಕೆ. ಎರಡು ಬಾರಿ ನಿಮ್ಮ ಆಟ ನೋಡಿದ್ದೇವೆ, ಈ ಬಾರಿ ನಿಮ್ಮ ಆಟ ನಡೆಯಲ್ಲ. ಹಾಗೇನಾದರೂ ನೀವು ಅನಿವಾರ್ಯವಾಗಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ನೋಟಿಸ್ ಕೊಟ್ಟರೆ ಉಗ್ರಕ್ರಾಂತಿ ಆಗುತ್ತದೆ ಎಂದು ಎಚ್ಚರಿಕೆ ನೀಡಿದರು.

Continue Reading

ಕರ್ನಾಟಕ

BJP Protest: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ; ಪ್ರತಾಪ್ ಸಿಂಹ, ಹರೀಶ್‌ ಪೂಂಜಾ, ಪುನೀತ್ ಕೆರೆಹಳ್ಳಿ ವಿರುದ್ಧ ಎಫ್‌ಐಆರ್‌!

BJP Protest: ಬಸವೇಶ್ವರ ನಗರ ಪೊಲೀಸ್ ಠಾಣೆ ಮುಂದೆ ಗುಂಪುಗೂಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ, ಹರೀಶ್‌ ಪೂಂಜಾ ಹಾಗೂ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲಾಗಿದೆ.

VISTARANEWS.COM


on

BJP Protest
Koo

ಬೆಂಗಳೂರು: ಬಸವೇಶ್ವರ ನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ (BJP Protest) ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಹರೀಶ್‌ ಪೂಂಜಾ, ಪುನೀತ್ ಕೆರೆಹಳ್ಳಿ ಸೇರಿ ಇತರರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೊಲೀಸ್ ಠಾಣೆ ಮುಂದೆ ಗುಂಪುಗೂಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುನೀತ್‌ ಕೆರೆಹಳ್ಳಿ ಮೇಲೆ ಪೊಲೀಸರು ದೌರ್ಜನ್ಯ ಖಂಡಿಸಿ ಬಸವೇಶ್ವರ ನಗರದ ಪೊಲೀಸ್‌ ಠಾಣೆ ಎದುರು ಬಿಜೆಪಿ ಹಾಗೂ ಹಿಂದು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಪ್ರಕರಣ ದಾಖಲಾಗಿದ್ದು, ಎಫ್‌ಐಆರ್‌ನಲ್ಲಿ ಪುನೀತ್ ಕೆರೆಹಳ್ಳಿ ಎ1 ಹಾಗೂ ಪ್ರತಾಪ್ ಸಿಂಹ ಎ2, ಹರೀಶ್ ಪೂಂಜಾ A3 ಎಂದು ಉಲ್ಲೇಖಿಸಲಾಗಿದೆ. ಬಿಎನ್ಎಸ್ 126(2), 189(2), 191(2) 190BNS, ಮತ್ತು 103 ಕರ್ನಾಟಕ ಪೊಲೀಸ್ ಆ್ಯಕ್ಟ್ ಅಡಿ ಎಫ್ಐಆರ್ ದಾಖಲಾಗಿದೆ.

ಬಸವೇಶ್ವರ ನಗರದ ಪೊಲೀಸ್‌ ಠಾಣೆ ಎದುರು ಬುಧವಾರ ಮಧ್ಯಾಹ್ನ ಪ್ರತಿಭಟನೆ (BJP Protest) ನಡೆಸಲಾಗಿತ್ತು. ಈ ವೇಳೆ ಪುನೀತ್‌ ಕೆರೆಹಳ್ಳಿ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಮಾಜಿ ಸಂಸದ ಪ್ರತಾಪ್‌ ಸಿಂಹ, ಶಾಸಕ ಹರೀಶ್‌ ಪೂಂಜಾ ನೇತೃತ್ವದಲ್ಲಿ ಬಿಜೆಪಿ ಹಾಗೂ ಹಿಂದು ಕಾರ್ಯಕರ್ತರು ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಮಾಂಸ ಸಾಗಾಟಕ್ಕೆ ತಡೆ ಪ್ರಕರಣದಲ್ಲಿ ಬಂಧನವಾಗಿದ್ದ ಪುನೀತ್‌ ಕೆರೆಹಳ್ಳಿಗೆ ಲಾಕಪ್‌ನಲ್ಲಿ ಬಟ್ಟೆ ಬಿಚ್ಚಿಸಿ, ಹಿಂಸೆ ನೀಡಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದರು.

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಂಧನವಾಗಿದ್ದ ಪುನೀತ್ ಕೆರೆಹಳ್ಳಿ, ಜಾಮೀನು ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮತ್ತೆ ಪೊಲೀಸರು ವಶಕ್ಕೆ ಪಡೆದಿದ್ದರು. ಠಾಣೆಯಲ್ಲಿ ಬೆತ್ತಲುಗೊಳಿಸಿ ಹಿಂಸೆ ಕೊಟ್ಟಿದ್ದಾರೆ ಎಂದು ಎಸಿಪಿ ಚಂದನ್ ವಿರುದ್ಧ ಪ್ರತಾಪ್‌ ಸಿಂಹ ಕಿಡಿಕಾರಿದ್ದರು. ಹೀಗಾಗಿ ಪ್ರತಿಭಟನೆ ನಿಯಂತ್ರಿಸಲು ಪುನೀತ್‌ ಕೆರೆಹಳ್ಳಿಯನ್ನು ಬಸವೇಶ್ವರನಗರ ಪೊಲೀಸರು ವಶಕ್ಕೆ ಪಡೆದಿದ್ದರು.

ಬಳಿಕ ಮಾತನಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಮಾತನಾಡಿ, ಜು.26ರಂದು ರಾತ್ರಿ ಅಕ್ರಮವಾಗಿ ಮಾಂಸ ಬರುತ್ತಿದೆ ಎಂಬ ಮಾಹಿತಿ ಇತ್ತು. ಈ ಹಿಂದೆ ಎಲ್ಲರಿಗೂ ದೂರು ನೀಡಿದೂ ಪ್ರಯೋಜನೆ ಆಗಿರಲಿಲ್ಲ. ಹೀಗಾಗಿ ಪುನೀತ್ ಕೆರೆಹಳ್ಳಿ ಸ್ಥಳಕ್ಕೆ ಹೋಗಿದ್ದರು. ಆಗ ಅಬ್ದುಲ್ ರಜಾಕ್ ಸ್ಥಳಕ್ಕೆ ಬಂದಿದ್ದಾರೆ. ಮಾಂಸದ ಬಾಕ್ಸ್ ಓಪನ್ ಮಾಡಲು ಅಬ್ದುಲ್ ರಜಾಕ್ ಒಪ್ಪಿಲ್ಲ. ಸ್ಥಳಕ್ಕೆ ಪೊಲೀದರು ಬಂದು ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದು, ಕಾಟನ್ ಪೇಟೆ ಠಾಣೆಯಲ್ಲಿ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದಾರೆ ಎಂದು ಪುನೀತ್ ಆರೋಪ ಮಾಡಿದ್ದಾರೆ. ಪುನೀತ್ ಅಲ್ಲಿಗೆ ಹೋಗಿದ್ದು ತಪ್ಪಾ ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ | Wayanad Landslide: ವಯನಾಡು ಈಗ ಸಾವಿನ ಮನೆ: ಮೃತರ ಸಂಖ್ಯೆ 240, 160 ಶವ ಪತ್ತೆ, 220 ಜನ ಮಿಸ್ಸಿಂಗ್; ಭೀಕರ ಚಿತ್ರಣ ಇಲ್ಲಿದೆ

ಮಾಂಸ ತಂದ ಅಬ್ದುಲ್ ರಜಾಕ್ ವಿರುದ್ಧ ಕ್ರಮ ತೆಗೆದುಕೊಳ್ಳುವ ಬದಲು, ಸಾರ್ವಜನಿಕರ ಹಿತದೃಷ್ಟಿಯಿಂದ ಸ್ಥಳಕ್ಕೆ ಹೋದ ಕೆರೆಹಳ್ಳಿ ಅವರ ಮೇಲೆ ಕೇಸ್ ಹಾಕಿದ್ದಾರೆ. ಕಾನೂನಿನಲ್ಲಿ ಯಾವುದೇ ವ್ಯಕ್ತಿಗೆ ಟಾರ್ಚರ್ ಮಾಡೋಕ್ಕೆ ಅವಕಾಶ ಇಲ್ಲ. ಹೀಗಿರುವಾಗ ಯಾಕೆ ಬಟ್ಟೆ ಬಿಚ್ಚಿಸಿದರು?, ಅಬ್ದುಲ್ ರಜಾಕ್ ವಿರುದ್ಧ ಕೇಸ್ ದಾಖಲು ಮಾಡಬೇಕು. ಎಸಿಪಿ ಚಂದನ್ ವಿರುದ್ಧ ತನಿಖೆ ನಡೆಸಬೇಕು. ನಾನು ಯಾರಿಗೂ ವಾರ್ನಿಂಗ್ ಮಾಡಿಲ್ಲ. ಪೊಲೀಸ್ ಕಮಿಷನರ್‌ಗೆ ದೂರು ನೀಡುತ್ತೇವೆ ಎಂದು ಪ್ರತಾಪ್‌ ಸಿಂಹ ಹೇಳಿದ್ದರು.

Continue Reading
Advertisement
ಕ್ರೀಡೆ7 mins ago

Paris Olympics: ಇಂದು ಲಕ್ಷ್ಯ ಸೇನ್‌-ಪ್ರಣಯ್ ಮಧ್ಯೆ ಪ್ರೀ ಕ್ವಾರ್ಟರ್​ ಮುಖಾಮುಖಿ; ಭಾರತಕ್ಕೆ ಒಂದು ಪದಕ ನಷ್ಟ

police firing gadag
ಕ್ರೈಂ17 mins ago

Police Firing: ದರೋಡೆ ಎಸಗಿದ ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡು, ಬಂಧನ

Pushpa 2 Allu Arjun climax leaked Fans urge producers to take action
ಟಾಲಿವುಡ್20 mins ago

Pushpa 2: ಪುಷ್ಪ 2 ಕ್ಲೈ ಮ್ಯಾಕ್ಸ್‌ ದೃಶ್ಯ ಲೀಕ್‌; ಕೋಪ ಹೊರ ಹಾಕಿದ ಅರ್ಜುನ್‌ ಫ್ಯಾನ್ಸ್‌!

Supreme Court Sc St Quota
ದೇಶ38 mins ago

Supreme Court SC ST Quota: ಪರಿಶಿಷ್ಟ ಜಾತಿ- ಪಂಗಡ ಒಳಮೀಸಲಾತಿ ಕಾನೂನುಬದ್ಧ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

Gold Rate Today
ಚಿನ್ನದ ದರ58 mins ago

Gold Rate Today: ಮತ್ತೆ ಶಾಕ್‌ ಕೊಟ್ಟ ಚಿನ್ನದ ದರ; ಬಂಗಾರ ಇಂದು ಇಷ್ಟು ದುಬಾರಿ

Road Accident
ಚಿಕ್ಕಬಳ್ಳಾಪುರ1 hour ago

Road Accident : ಲಾರಿ ಗುದ್ದಿದ ರಭಸಕ್ಕೆ ಸ್ಥಳದಲ್ಲೇ ಪ್ರಾಣಬಿಟ್ಟ ಬೈಕ್‌ ಸವಾರರು

IND vs SL 1st ODI
ಕ್ರೀಡೆ1 hour ago

IND vs SL 1st ODI: ವಿಶ್ವಕಪ್​ ಫೈನಲ್​ ಸೋಲಿನ ಬಳಿಕ ಮೊದಲ ಏಕದಿನ ಆಡಲು ಸಜ್ಜಾದ ಕೊಹ್ಲಿ, ರೋಹಿತ್​, ಬುಮ್ರಾ

Heavy Rain
ದೇಶ2 hours ago

Heavy Rain: ನೋಡ ನೋಡುತ್ತಿದ್ದಂತೆ ನದಿಯಲ್ಲಿ ಕೊಚ್ಚಿ ಹೋಯ್ತು ಬಹುಮಹಡಿ ಕಟ್ಟಡ; ಭೀಕರ ದೃಶ್ಯ ಇಲ್ಲಿದೆ

India Couture Week 2024 Vicky Kaushal Rashmika Mandanna turn showstoppers
ಬಾಲಿವುಡ್2 hours ago

India Couture Week 2024: ಕೌಚರ್ ವೀಕ್ ಗ್ರ್ಯಾಂಡ್ ಫಿನಾಲೆಯಲ್ಲಿ ಮಿಂಚಿದ ರಶ್ಮಿಕಾ- ವಿಕ್ಕಿ ಕೌಶಲ್!

Self Harming
ಬೆಂಗಳೂರು2 hours ago

Self Harming : ವಯಸ್ಸಲ್ಲದ ವಯಸ್ಸಲ್ಲಿ ಲವ್; 15ನೇ ವರ್ಷಕ್ಕೆ ಮದುವೆ ಆದವಳು 17ನೇ ವರ್ಷಕ್ಕೆ ಆತ್ಮಹತ್ಯೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ4 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ4 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ4 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌