ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ (PM Modi) ಅಭಿನಂದಿಸಿದ್ದಾರೆ.
ʻʻಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯಜೀ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಜೀ ಅವರಿಗೆ ಅಭಿನಂದನೆಗಳು. ಫಲಪ್ರದ ಅಧಿಕಾರಾವಧಿಗಾಗಿ ನನ್ನ ಶುಭ ಹಾರೈಕೆಗಳುʼʼ ಎಂದು ಪ್ರಧಾನಿ ಮೋದಿ ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ.
ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಕೂಡ ಇವರಿಬ್ಬರನ್ನು ಅಭಿನಂದಿಸಿ ಟ್ವೀಟ್ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಟ್ವಿಟ್ಟರ್‌ನಲ್ಲಿ ತಮ್ಮ ಅಭಿನಂದನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ : Karnataka CM: … ಎಂಬ ಹೆಸರಿನವನಾದ ನಾನು…: ರಾಜ್ಯದ ನೂತನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರ ಪ್ರಮಾಣ