Site icon Vistara News

ವಿಧವೆ ಅನ್ನೋದಕ್ಕೆ ರಾಷ್ಟ್ರಪತಿಯನ್ನು ಸಂಸತ್‌ ಭವನ ಉದ್ಘಾಟನೆಗೆ ಮೋದಿ ಆಹ್ವಾನಿಸಿಲ್ಲವೆಂದ ಕುಂ. ವೀರಭದ್ರಪ್ಪ

Kum Veerabhadrappa and Droupadi murmu

ಚಾಮರಾಜನಗರ: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi murmu) ಅವರು ವಿಧವೆ ಎಂಬ ಕಾರಣಕ್ಕಾಗಿ ನೂತನ ಸಂಸತ್ ಭವನದ (New Parliament Building) ಉದ್ಘಾಟನೆ ಸಮಾರಂಭಕ್ಕೆ ಅವರನ್ನು ಆಹ್ವಾನಿಸಿಲ್ಲ ಎಂದು ಸಾಹಿತಿ ಕುಂ. ವೀರಭದ್ರಪ್ಪ (Kum Veerabhadrappa) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಚಾಮರಾಜನಗರದ ರಂಗಮಂದಿರದಲ್ಲಿ ಗುರುವಾರ (ಜೂನ್‌ 8) ನಡೆದ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಕುಂ.ವೀರಭದ್ರಪ್ಪ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂಸತ್ ಭವನದ ಉದ್ಘಾಟನೆಗೆ ಕರೆಯದಿರುವುದಕ್ಕೆ ಕಾರಣ ಇದೆ. ಶುಭ ಕಾರ್ಯಕ್ಕೆ ವಿಧವೆ ಬಂದರೆ ಅಮಂಗಲವೆಂಬ ಕಾರಣಕ್ಕೆ ಅವರನ್ನು ಕರೆದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: Textbook Revision: ಬುದ್ಧಿಜೀವಿ ಎಂದು ಹೇಳಿಕೊಂಡು ಕೆಲವರು ಓಡಾಡುತ್ತಿದ್ದಾರೆ!: ಸರ್ಕಾರಕ್ಕೆ ಹಿಗ್ಗಾಮುಗ್ಗಾ ಜಾಡಿಸಿದ ಮಾಜಿ ಸಚಿವ ಬಿ.ಸಿ. ನಾಗೇಶ್‌

ರಾಷ್ಟ್ರಪತಿ ಅವರನ್ನು ಕಾರ್ಯಕ್ರಮದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಹೊರಗಿಟ್ಟರು. ಸಂಸತ್ ದೇಶದ ಶಕ್ತಿ ಕೇಂದ್ರ, ಅದನ್ನು ರಾಷ್ಟ್ರಪತಿಯಾದವರು ಉದ್ಘಾಟಿಸಬೇಕಿತ್ತು. ಅಲ್ಲದೆ, ರಾಷ್ಟ್ರಪತಿಯವರು ಹಿಂದುಳಿದ ಜಾತಿಯವರಾಗಿರುವುದೂ ಅವರನ್ನು ಕರೆಯದೇ ಇರುವುದಕ್ಕೆ ಮತ್ತೊಂದು ಕಾರಣವಾಗಿದೆ. ಇದನ್ನು ಯಾರೂ ಸಹ ಪ್ರಶ್ನೆಯನ್ನೇ ಮಾಡಲಿಲ್ಲ ಎಂದು ಕುಂ. ವೀರಭದ್ರಪ್ಪ ಕಿಡಿಕಾರಿದರು.

ಹಿಂದಿನ ಪಠ್ಯದಲ್ಲಿ ಹುಸಿ ದೇಶಭಕ್ತಿ ಅಂದಿದ್ದ ಕುಂ. ವೀರಭದ್ರಪ್ಪ!

ಇದಕ್ಕೂ ಮೊದಲು ಮಾಧ್ಯಮದವರೊಂದಿಗೆ ಮಾತನಾಡಿದ್ದ ಕುಂ. ವೀರಭದ್ರಪ್ಪ, ಹಿಂದಿನ ಸರ್ಕಾರ ಪಠ್ಯ ಪುಸ್ತಕದಲ್ಲಿ ಭಾರಿ ಲೋಪ ಎಸಗಿದೆ. ಕೆಲವು ಹುಸಿ ದೇಶಭಕ್ತರನ್ನು ಬಿಂಬಿಸುವ ಪ್ರಯತ್ನವನ್ನು ಬಿಜೆಪಿ ಸರ್ಕಾರ ಮಾಡಿದೆ. ರೋಹಿತ್ ಚಕ್ರತೀರ್ಥ ಎಂಬ ಅಪಕ್ವ ವ್ಯಕ್ತಿಯನ್ನು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಗೆ ಅಧ್ಯಕ್ಷನನ್ನಾಗಿ ಮಾಡಿತ್ತು. ಅವರು ಮಾಡಿದ ತಪ್ಪನ್ನು ಈಗ ಸರಿಪಡಿಸಬೇಕು. ಹೊಸ ಪಠ್ಯಪುಸ್ತಕ ಜಾರಿಗೆ ತರಬೇಕು ಎಂದು ಹೇಳಿದ್ದರು.

ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ಪರಿಷ್ಕರಣೆಗೊಂಡು ಮಕ್ಕಳು ಅಭ್ಯಾಸ ಮಾಡುತ್ತಿದ್ದ ಪಠ್ಯ ಅತ್ಯುತ್ತಮವಾಗಿತ್ತು. ಆ ಪುಸ್ತಕಗಳೇ ಮತ್ತೆ ಬರಬೇಕು. ಬಿಜೆಪಿಯವರು ಹೇಳುವುದು ಭಾರತೀಯತೆ ಅಲ್ಲ, ಅವರು ಹೇಳುವುದು ಹಿಂದುತ್ವವಾಗಿದೆ ಎಂದು ಕುಂ. ವೀರಭದ್ರಪ್ಪ ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿ: Bengaluru Rain: ಡಿಕೆಶಿ ಅಪಾರ್ಟ್‌ಮೆಂಟ್ ಆದರೂ ಬುಲ್ಡೋಜರ್‌ ಪಕ್ಕಾ: ಡಿಸಿಎಂ ಡಿ.ಕೆ. ಶಿವಕುಮಾರ್‌ ಖಡಕ್‌ ಮಾತು

ದೇಶದ ಎಲ್ಲರ ಹಿತಾಸಕ್ತಿ ಕಾಪಾಡುವುದು ಭಾರತೀಯತೆಯಾಗಿದೆ. ಅವರು ಹೇಳುವ ಭಾರತೀಯತೆ ಒಪ್ಪಲು ಸಾಧ್ಯವಿಲ್ಲ. ಬಿಜೆಪಿಯವರು ಹೇಳುವುದು ಆರ್‌ಎಸ್ಎಸ್ ಪ್ರಣೀತ ಭಾರತೀಯತೆಯಾಗಿದೆ. ಅಂಬೇಡ್ಕರ್, ಗಾಂಧಿ ಆಶಯದ ಭಾರತೀಯತೆ ಅಲ್ಲ. ಹಳೇ ಪಠ್ಯಕ್ರಮವನ್ನು ಸರ್ಕಾರ ಜಾರಿಗೆ ತರಬೇಕು ಎಂದು ಸಾಹಿತಿ ಕುಂ. ವೀರಭದ್ರಪ್ಪ ಆಗ್ರಹಿಸಿದ್ದರು.

Exit mobile version