ಬೆಂಗಳೂರು: ಈಗ ಅಕ್ಷರಶಃ ಕೇಂದ್ರ ಬಿಜೆಪಿ ಸರ್ಕಾರ ವರ್ಸಸ್ ರಾಜ್ಯ ಕಾಂಗ್ರೆಸ್ ಸರ್ಕಾರ ಎನ್ನುವಂತಾಗಿದೆ. ಕೇಂದ್ರದಿಂದ ಬರಬೇಕಾದ ಅನುದಾನಕ್ಕೆ ಸಂಬಂಧಪಟ್ಟಂತೆ ಎರಡೂ ಪಕ್ಷಗಳಿಂದ ಆರೋಪ – ಪ್ರತ್ಯಾರೋಪಗಳು ಕೇಳಿಬರುತ್ತಿವೆ. ಗುರುವಾರವಷ್ಟೇ ಬಿಜೆಪಿ ಬಗ್ಗೆ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿ, ನರೇಂದ್ರ ಮೋದಿ (PM Narendra Modi) ಅವರಿಗೆ ಸಾಕಷ್ಟು ಪ್ರಶ್ನೆಗಳನ್ನು ಕೇಳಿದ್ದರು. ಈಗ ಕರ್ನಾಟಕ ಬಿಜೆಪಿ (BJP Karnataka) ಘಟಕವು ಟ್ವೀಟ್ ಮಾಡಿ, ಕಾಂಗ್ರೆಸ್‌ಗೆ (Congress Party) ತಿರುಗೇಟು ನೀಡಿದೆ. ವಿನಾಶಕಾಲ Vs ಅಮೃತಕಾಲ ಎಂದು ಫೋಟೊವೊಂದನ್ನು ಪೋಸ್ಟ್ ಮಾಡಿದ್ದು, ಕಾಂಗ್ರೆಸ್‌ನದ್ದು ವಿನಾಶಕಾಲ ಎಂದು ಕಿಡಿಕಾರಿದೆ.
ಕಾಂಗ್ರೆಸ್ ಸರ್ಕಾರದ 10 ವರ್ಷಗಳ ಅವಧಿಗೆ (2004-14) ಗೆ ಹೋಲಿಸಿದರೆ ಪ್ರಧಾನಿ ಮೋದಿ ಸರ್ಕಾರದಡಿ ಮೆಟ್ರೋ ರೈಲು, ಬ್ರಾಡ್‌ಗೇಜ್, ಡಿಬಿಟಿ ಫಲಾನುಭವಿಗಳ ಸಂಖ್ಯೆ ಮತ್ತು ಡಾಟಾ ಬಳಕೆಯಲ್ಲೂ ಗಮನಾರ್ಹ ಹೆಚ್ಚಳವಾಗಿದೆ. ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿಯೇ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಆದ್ಯತೆ! ಎಂದು ಬಿಜೆಪಿ ಫೋಟೊ ಸಹಿತ ಅಂಕಿ – ಅಂಶಗಳನ್ನು ಇಟ್ಟು ಪೋಸ್ಟ್ ಹಾಕಿದೆ.
ವಿನಾಶಕಾಲ Vs ಅಮೃತಕಾಲ
— BJP Karnataka (@BJP4Karnataka) February 9, 2024
ಕಾಂಗ್ರೆಸ್ ಸರ್ಕಾರದ 10 ವರ್ಷಗಳ ಅವಧಿಗೆ (2004-14) ಗೆ ಹೋಲಿಸಿದರೆ ಪ್ರಧಾನಿ ಮೋದಿ ಸರ್ಕಾರದಡಿ ಮೆಟ್ರೋ ರೈಲು, ಬ್ರಾಡ್‌ಗೇಜ್, ಡಿಬಿಟಿ ಫಲಾನುಭವಿಗಳ ಸಂಖ್ಯೆ ಮತ್ತು ಡಾಟಾ ಬಳಕೆಯಲ್ಲೂ ಗಮನಾರ್ಹ ಹೆಚ್ಚಳವಾಗಿದೆ.
ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿಯೇ ಪ್ರಧಾನಿ ಶ್ರೀ @narendramodi ಅವರ ಸರ್ಕಾರದ ಆದ್ಯತೆ !… pic.twitter.com/DLFhbg9G7O
ಹೌದು Mr Modi, ಇದು ನಿಮ್ದೇ ಓದಿ! ಕೇಂದ್ರದ ವಿರುದ್ಧ ಸರಣಿ ಪೋಸ್ಟ್ ಹಾಕಿದ ಸಿಎಂ ಸಿದ್ದರಾಮಯ್ಯ
ಈ ಬಾರಿಯ ಬಜೆಟ್ ಸಹಿತ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಹಲವು ರೀತಿಯಲ್ಲಿ ಅನ್ಯಾಯ ಆಗಿದೆ ಎಂದು ಈಗಾಗಲೇ ರಾಜ್ಯ ಸರ್ಕಾರ ಆರೋಪ ಮಾಡಿದ್ದಲ್ಲದೆ, ಬುಧವಾರ (ಫೆ. 7) ನವ ದೆಹಲಿಯಲ್ಲಿ ಪ್ರತಿಭಟನೆಯನ್ನೂ ನಡೆಸಿತು. ಈಗ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿರುದ್ಧ ಗುರುವಾರ ಸರಣಿ ಟ್ವೀಟ್ ಮಾಡಿದ್ದರು. ಅಲ್ಲದೆ, ರಾಜ್ಯ ಸರ್ಕಾರದ ಪ್ರತಿಭಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್‌ನಲ್ಲಿ ನೀಡಿದ ಹೇಳಿಕೆಯನ್ನು ಕಟುವಾಗಿ ಖಂಡಿಸಿದ್ದರು.
ಗುಜರಾತ್ ರಾಜ್ಯ ಕೇಂದ್ರ ಸರ್ಕಾರಕ್ಕೆ ರೂ.60,000 ಕೋಟಿ ನೀಡುತ್ತಿದೆ, ಇದರಲ್ಲಿ ನಮಗೆ ವಾಪಸ್ ಬಂದದ್ದು ಎಷ್ಟು? ಗುಜರಾತ್ ಭಿಕ್ಷುಕ ರಾಜ್ಯವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದರು.
ಇದನ್ನೂ ಓದಿ: CM Janaspandana: ಜನಸ್ಪಂದನದಲ್ಲಿ ಕೈಕೊಟ್ಟ ಸರ್ವರ್; ಸಿಎಂಗೆ ಧಿಕ್ಕಾರ ಕೂಗಿದಾತನಿಂದಲೇ ಮತ್ತೆ ಜೈಕಾರ!
ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯತ್ತಿದ್ದಾಗ @narendramodi ಅವರು ‘ಯುಪಿಎ ಸರ್ಕಾರ ಮತ್ತು ರೂಪಾಯಿ ಉರುಳಿ ಕೆಳಗೆ ಬೀಳುವುದರದಲ್ಲಿ ಪೈಪೋಟಿ ನಡೆಸುವಂತಿದೆ' ಎಂದು ವ್ಯಂಗ್ಯವಾಡಿದ್ದರು.
— CM of Karnataka (@CMofKarnataka) February 8, 2024
ಪೆಟ್ರೋಲ್ ಬೆಲೆ ಏರಿಕೆಯಿಂದಾಗಿ ಗುಜರಾತ್ ಜನ ಬವಣೆ ಪಡುವಂತಾಗಿದೆ ಎಂದು ಗೋಳಿಟ್ಟಿದ್ದ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾದ ನಂತರದ ದಿನಗಳಲ್ಲಿ… pic.twitter.com/CwQ1PDmnKl
ಸಿದ್ದರಾಮಯ್ಯ ಟ್ವೀಟ್‌ನಲ್ಲೇನಿದೆ?
ತೆರಿಗೆ ಹಂಚಿಕೆಯೂ ಸೇರಿದಂತೆ ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯವನ್ನು ಪ್ರತಿಭಟಿಸಿ ನಮ್ಮ ಸರ್ಕಾರ ನಡೆಸಿದ್ದ ‘’ದೆಹಲಿ ಚಲೋ’’ ಹೋರಾಟ ದೇಶದ ಏಕತೆ ಮತ್ತು ಭದ್ರತೆಗೆ ಬೆದರಿಕೆ ಒಡ್ಡಿದೆ ಎಂಬ ಪ್ರಧಾನಿ
ನರೇಂದ್ರ ಮೋದಿ ಅವರ ಹೇಳಿಕೆ ಅಚ್ಚರಿ ಉಂಟು ಮಾಡಿದೆ.
ಇದೇ ಮೋದಿಯವರು ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಯುಪಿಎ ಸರ್ಕಾರದ ವಿರುದ್ಧ ಪುಂಖಾನುಪುಂಖವಾಗಿ ನೀಡಿರುವ ಹೇಳಿಕೆಗಳನ್ನು ಅವರ ಗಮನಕ್ಕೆ ತರಬಯಸುತ್ತೇನೆ.
ಪ್ರಧಾನಿ ನರೇಂದ್ರ ಮೋದಿ ಅವರೇ, ನಿಮ್ಮ ಹೇಳಿಕೆಗಳು ದೇಶದ ಏಕತೆ ಮತ್ತು ಭದ್ರತೆಗೆ ಬೆದರಿಕೆ ಒಡ್ಡಿರಲಿಲ್ಲವೇ? ದಯವಿಟ್ಟು ಉತ್ತರ ಕೊಡಿ.
2008ರಲ್ಲಿ ವಡೋದರಾದ ಸಮಾರಂಭದಲ್ಲಿ ಅಂದಿನ ಗುಜರಾತ್ ಮುಖ್ಯಮಂತ್ರಿಯಾಗಿದ್ದ @narendramodi ಅವರು ಮಾತನಾಡುತ್ತಾ
— CM of Karnataka (@CMofKarnataka) February 8, 2024
‘ಗುಜರಾತ್ ರಾಜ್ಯ ಪ್ರತಿವರ್ಷ ರೂ.40,000 ಕೋಟಿ ರೂ.ಗಳನ್ನು ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಪಾವತಿಸುತ್ತಿದೆ. ಅದರಲ್ಲಿ ಕೇವಲ ಶೇಕಡಾ 2.5ರಷ್ಟು ಮಾತ್ರ ರಾಜ್ಯಕ್ಕೆ ವಾಪಸು ನೀಡಲಾಗುತ್ತದೆ. ಇಷ್ಟು ಜುಜುಬಿ… pic.twitter.com/aqGN45yHIF
ಕೇಂದ್ರ ಹಣಕಾಸು ಆಯೋಗದ ವಿರುದ್ಧ ಮೊದಲು ಮಾತನಾಡಿದ್ದೇ ನರೇಂದ್ರ ಮೋದಿ ಅವರು. ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ 2012ರ ಡಿಸೆಂಬರ್ 6ರಂದು ಹೇಳಿಕೆಯೊಂದನ್ನು ನೀಡಿ ‘’ಗುಜರಾತ್ ರಾಜ್ಯ ಕೇಂದ್ರ ಸರ್ಕಾರಕ್ಕೆ ರೂ.60,000 ಕೋಟಿ ನೀಡುತ್ತಿದೆ, ಇದರಲ್ಲಿ ನಮಗೆ ವಾಪಸ್ ಬಂದದ್ದು ಎಷ್ಟು? ಗುಜರಾತ್ ಭಿಕ್ಷುಕ ರಾಜ್ಯವೇ? ಎಂದು ಪ್ರಶ್ನಿಸಿದ್ದರು.
ಇದೇ ಮೋದಿ ವಾದ ಮಾಡಿದ್ದರು
“ಹದಿನಾಲ್ಕನೇ ಹಣಕಾಸು ಆಯೋಗದ ಜತೆಗಿನ ಮಾತುಕತೆಯಲ್ಲಿ ಇದೇ ನರೇಂದ್ರ ಅವರು ‘ಕೇಂದ್ರ ಸರ್ಕಾರ ರಾಜ್ಯದಿಂದ ಸಂಗ್ರಹಿಸುವ ತೆರಿಗೆಯಲ್ಲಿ ಕನಿಷ್ಠ ಶೇಕಡಾ 32ರಿಂದ 50ರ ವರೆಗೆ ರಾಜ್ಯಕ್ಕೆ ಪಾಲು ನೀಡಬೇಕು’ ಎಂದು ವಾದಿಸಿದ್ದರು.
‘’ತೆರಿಗೆ ಹಂಚಿಕೆಗೆ ಅನುಸರಿಸಲಾಗುತ್ತಿರುವ ಮಾನದಂಡವನ್ನು ಹಣಕಾಸು ಆಯೋಗ ಬದಲಾವಣೆ ಮಾಡಬೇಕು, ಉತ್ತಮ ರೀತಿಯಲ್ಲಿ ಹಣಕಾಸು ನಿರ್ವಹಣೆ ಮತ್ತು ಅಭಿವೃದ್ಧಿ ಕಾರ್ಯಗಳನ್ನು ನಡೆಸುವ ರಾಜ್ಯಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಹಣಕಾಸು ನಿರ್ವಹಣೆಯಲ್ಲಿ ಸೋತಿರುವ ರಾಜ್ಯಗಳಿಗೆ ಹೆಚ್ಚಿನ ಉತ್ತೇಜನ ನೀಡಿ ಉತ್ತಮ ರೀತಿಯಲ್ಲಿ ಹಣಕಾಸು ನಿರ್ವಹಣೆ ಮಾಡುತ್ತಿರುವ ರಾಜ್ಯಗಳನ್ನು ನಿರ್ಲಕ್ಷಿಸುವ ಈಗಿನ ತೆರಿಗೆ ಹಂಚಿಕೆ ವಿಧಾನವನ್ನು ಬದಲಿಸಬೇಕಾಗಿದೆ. ಮೂಲಸೌಕರ್ಯಗಳ ಸುಧಾರಣೆ ಮತ್ತು ದೇಶದ ಅಭಿವೃದ್ಧಿಗೆ ಗಣನೀಯ ಕೊಡುಗೆಗಳನ್ನು ನೀಡುವ ರಾಜ್ಯಗಳಿಗೆ ಹೆಚ್ಚಿನ ಉತ್ತೇಜನ ನೀಡಬೇಕು’’ ಎಂದು ಹಣಕಾಸು ಆಯೋಗದ ಮುಂದೆ ವಾದ ಮಾಡಿದ್ದರು. ಇದು ಕೇಂದ್ರ ಸರ್ಕಾರದ ವಿರುದ್ಧದ ನಿಲುವಲ್ಲವೇ?
ನಮಗೆ ಚಿಕ್ಕಾಸಿನ ನೆರವು ಸಿಗುತ್ತಿಲ್ಲ ಎಂದಿದ್ದ ಮೋದಿ
2008ರಲ್ಲಿ ವಡೋದರಾದ ಸಮಾರಂಭದಲ್ಲಿ ಅಂದಿನ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರು ಮಾತನಾಡುತ್ತಾ, ‘ಗುಜರಾತ್ ರಾಜ್ಯ ಪ್ರತಿವರ್ಷ ರೂ.40,000 ಕೋಟಿ ರೂ.ಗಳನ್ನು ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಪಾವತಿಸುತ್ತಿದೆ. ಅದರಲ್ಲಿ ಕೇವಲ ಶೇಕಡಾ 2.5ರಷ್ಟು ಮಾತ್ರ ರಾಜ್ಯಕ್ಕೆ ವಾಪಸ್ ನೀಡಲಾಗುತ್ತದೆ. ಇಷ್ಟು ಜುಜುಬಿ ಮೊತ್ತವನ್ನು ವಾಪಸ್ ನೀಡುವ ಬದಲಿಗೆ ಒಂದು ವರ್ಷದ ಅವಧಿಗೆ ನಮ್ಮ ತೆರಿಗೆಯನ್ನು ನಾವೇ ಬಳಸಿಕೊಳ್ಳಲು ಅವಕಾಶ ನೀಡಬಾರದೇಕೆ? ಎಂದು ಕೇಂದ್ರ ಸರ್ಕಾರದ ಅಸ್ತಿತ್ವನ್ನೇ ಪ್ರಶ್ನಿಸಿದ್ದರು.
ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ 2012ರ ಜನವರಿ ಒಂಭತ್ತರಂದು ನಡೆದಿದ್ದ ಹತ್ತನೇ ಪ್ರವಾಸಿ ಭಾರತೀಯ ಸಮ್ಮೇಳನದಲ್ಲಿ ಮಾತನಾಡುತ್ತಾ ‘ಕೇಂದ್ರ ಸರ್ಕಾರ ಇಲ್ಲವೆ ಪ್ರಧಾನ ಮಂತ್ರಿಯವರಿಂದ ನಮಗೆ ಚಿಕ್ಕಾಸಿನ ನೆರವು ಸಿಗುತ್ತಿಲ್ಲ. ನಾವು ನಮ್ಮ ಸಂಪನ್ಮೂಲವನ್ನೇ ನೆಚ್ಚಿಕೊಂಡಿದ್ದೇವೆ’ ಎಂದು ವಿದೇಶಿ ಗಣ್ಯರಿದ್ದ ವೇದಿಕೆಯಲ್ಲಿಯೇ ದೂರಿದ್ದರು.
ಎಫ್‌ಡಿಐ ಬಗ್ಗೆ ಮೋದಿ ಹೇಳಿದ್ದೇನು?
ಇದೇ ರೀತಿ ಕೇಂದ್ರ ಸರ್ಕಾರ ತನ್ನನ್ನು ರಕ್ಷಿಸಿಕೊಳ್ಳಲು ಮತ್ತು ವಿರೋಧಿಗಳನ್ನು ಹಣಿಯಲು ಸಿಬಿಐ ಸಂಸ್ಥೆಯನ್ನು ದುರುಪಯೋಗ ಮಾಡುತ್ತಿದೆ ಎಂದು ಗುಜರಾತ್ ಮುಖ್ಯಮಂತ್ರಿಯಾಗಿ ಆರೋಪಿಸುತ್ತಿದ್ದ ನರೇಂದ್ರ ಮೋದಿ ಅವರು ಈಗ ಸಿಬಿಐ, ಇಡಿ ಮತ್ತು ಆದಾಯ ತೆರಿಗೆ ಇಲಾಖೆಯ ಪ್ರಾಮಾಣಿಕತೆಯನ್ನು ಪ್ರಶ್ನಿಸಿದವರನ್ನು ದೇಶದ್ರೊಹಿಗಳೆಂದು ದೂರುತ್ತಿದ್ದಾರೆ.
ಯುಪಿಎ ಸರ್ಕಾರ ವಿದೇಶಿ ನೇರ ಬಂಡವಾಳ ಹೂಡಿಕೆಯ ಕಾನೂನನ್ನು ಜಾರಿಗೆ ತಂದಾಗ ಅದನ್ನು ವಿರೋಧಿಸಿದ್ದ ನರೇಂದ್ರ ಮೋದಿಯವರು ‘ಇನ್ನು ಮುಂದೆ ನಿತ್ಯ ಬಳಕೆಯ ಉಪ್ಪು, ಸಾಂಬಾರ್ ಪದಾರ್ಥಗಳನ್ನೂ ವಿದೇಶಿಯರೇ ಮಾರುತ್ತಾರೆ’ ಎಂದು ವ್ಯಂಗ್ಯವಾಡಿದ್ದರು. ಎಫ್‌ಡಿಐನಿಂದಾಗಿ ದೇಶದ ಸಣ್ಣ ಸಣ್ಣ ಅಂಗಡಿ ಮಾಲೀಕರು ಮತ್ತು ಉತ್ಪಾದನಾ ಕ್ಷೇತ್ರದಲ್ಲಿರುವವರು ನಿರುದ್ಯೋಗಿಗಳಾಗುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದ್ದರು.
ಆಧಾರ್ ಬಗ್ಗೆ ಮೋದಿ ಏನು ಹೇಳಿದ್ದರು?
ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯತ್ತಿದ್ದಾಗ ನರೇಂದ್ರ ಮೋದಿ ಅವರು ‘ಯುಪಿಎ ಸರ್ಕಾರ ಮತ್ತು ರೂಪಾಯಿ ಉರುಳಿ ಕೆಳಗೆ ಬೀಳುವುದರದಲ್ಲಿ ಪೈಪೋಟಿ ನಡೆಸುವಂತಿದೆ’ ಎಂದು ವ್ಯಂಗ್ಯವಾಡಿದ್ದರು.
ಪೆಟ್ರೋಲ್ ಬೆಲೆ ಏರಿಕೆಯಿಂದಾಗಿ ಗುಜರಾತ್ ಜನ ಬವಣೆ ಪಡುವಂತಾಗಿದೆ ಎಂದು ಗೋಳಿಟ್ಟಿದ್ದ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾದ ನಂತರದ ದಿನಗಳಲ್ಲಿ ಕಚ್ಚಾ ತೈಲದ ಬೆಲೆ ಇಳಿಯುತ್ತಿದ್ದರೂ ಪೆಟ್ರೋಲ್ ಬೆಲೆ ಏರಿಸುತ್ತಲೇ ಹೋದರು. ಇದರಿಂದ ಗುಜರಾತಿಗಳು ಮಾತ್ರವಲ್ಲ ಇಡೀ ದೇಶದ ಜನತೆ ಗೋಳಾಡಬೇಕಾಯಿತು.
ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಆಧಾರ್ ಗುರುತಿನ ಚೀಟಿಯ ಪ್ರಬಲ ವಿರೋಧಿಯಾಗಿದ್ದ ನರೇಂದ್ರ ಮೋದಿಯವರು ‘ಆಧಾರ್ ಕಾರ್ಡ್‌ಗೆ ಭವಿಷ್ಯದ ಮುನ್ನೋಟವೇ ಇಲ್ಲ, ಇದು ಕೇವಲ ರಾಜಕೀಯ ಗಿಮಿಕ್ ಎಂದು ಟೀಕಿಸಿದ್ದರು. ಅದೇ ಮೋದಿಯವರು ಪ್ರಧಾನಿಯಾದ ನಂತರ ತಮ್ಮ ನಿಲುವು ಬದಲಿಸಿ ಆಧಾರ್ ಗುರುತಿನ ಚೀಟಿಯ ಪ್ರಬಲ ಪ್ರತಿಪಾದಕರಾಗಿದ್ದಾರೆ.
ಇಂತಹ ಹತ್ತಾರು ಯೂ ಟರ್ನ್‌ಗಳನ್ನು ನಾನು ಪಟ್ಟಿ ಮಾಡಿಕೊಡಬಹುದು. ಆ ದಿನಗಳಲ್ಲಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದ, ಟೀಕಿಸಿದ್ದ ನರೇಂದ್ರ ಮೋದಿ ಅವರ ಹೇಳಿಕೆಗಳಿಂದ ದೇಶದ ಏಕತೆ ಮತ್ತು ಭದ್ರತೆಗೆ ಎದುರಾಗದ ಬೆದರಿಕೆ ಈಗ ನಮ್ಮ ಪ್ರತಿಭಟನೆಯಿಂದ ಹೇಗೆ ಎದುರಾಯಿತು ಎನ್ನುವುದನ್ನು ಪ್ರಧಾನಿ ನರೇಂದ್ರ ಮೋದಿಯವರೇ ವಿವರಿಸಬೇಕು.
ಈ ಆತ್ಮವಂಚನೆಯ ನಡವಳಿಕೆಯನ್ನು ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರೂ ಮುಂದುವರಿಸಿದ್ದಾರೆ.
2022ರ ಡಿಸೆಂಬರ್ ತಿಂಗಳಲ್ಲಿ ವಿಧಾನಸಭೆಯಲ್ಲಿಯೇ ನಾನು ಮಾತನಾಡುತ್ತಾ “15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದಾಗ ಆಗ ಮುಖ್ಯಮಂತ್ರಿಗಳಾಗಿದ್ದ @BSBommai ಅವರು ಅನ್ಯಾಯವಾಗಿರುವುದು ನಿಜ ಎಂದು ಒಪ್ಪಿಕೊಂಡಿರುವುದು ಸದನದ ದಾಖಲೆಯಲ್ಲಿದೆ, ಪತ್ರಿಕೆಗಳಲ್ಲಿಯೂ ಪ್ರಕಟವಾಗಿದೆ.
— CM of Karnataka (@CMofKarnataka) February 8, 2024
ಇದೇ ಬೊಮ್ಮಾಯಿಯವರು ಹಣಕಾಸು… pic.twitter.com/BHAlMEH78z
ಬೊಮ್ಮಾಯಿ ಒಪ್ಪಿಕೊಂಡಿದ್ದು ಸದನದ ದಾಖಲೆಯಲ್ಲಿದೆ!
2022ರ ಡಿಸೆಂಬರ್ ತಿಂಗಳಲ್ಲಿ ವಿಧಾನಸಭೆಯಲ್ಲಿಯೇ ನಾನು ಮಾತನಾಡುತ್ತಾ “15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದಾಗ ಆಗ ಮುಖ್ಯಮಂತ್ರಿಗಳಾಗಿದ್ದ ಬಸವರಾಜ ಬೊಮ್ಮಾಯಿ ಅವರು, ಅನ್ಯಾಯವಾಗಿರುವುದು ನಿಜ ಎಂದು ಒಪ್ಪಿಕೊಂಡಿರುವುದು ಸದನದ ದಾಖಲೆಯಲ್ಲಿದೆ, ಪತ್ರಿಕೆಗಳಲ್ಲಿಯೂ ಪ್ರಕಟವಾಗಿದೆ. ಇದೇ ಬೊಮ್ಮಾಯಿಯವರು ಹಣಕಾಸು ಆಯೋಗದಿಂದ ಅನ್ಯಾಯವೇ ಆಗಿಲ್ಲ ಎಂದು ಕೂಗಾಡುತ್ತಿದ್ದಾರೆ.
ಇದನ್ನೂ ಓದಿ: CM Janaspandana: ಆರೋಗ್ಯ ಚಿಕಿತ್ಸೆಗೆ ಸಹಾಯ ಕೋರಿ ಬಂದವರಿಗೆ ಪರಿಹಾರ ನೀಡಿದ ಸಿಎಂ ಸಿದ್ದರಾಮಯ್ಯ
ಇನ್ನೊಬ್ಬರು @hd_kumaraswamy ಅವರಿಗೆ ಸತ್ಯ ಮಾತನಾಡಿಯೇ ಗೊತ್ತಿಲ್ಲ. ಕೇಂದ್ರ ಸರ್ಕಾರ ತೆರಿಗೆ ಹಂಚಿಕೆ ಮಾಡುವಾಗ ಗುಜರಾತ್ ರಾಜ್ಯಕ್ಕೆ ಹೆಚ್ಚಿನ ಪಾಲು ನೀಡಿ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದ್ದರು. ಈಗ ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದು ಹೇಳುತ್ತಿರುವ ಕುಮಾರಸ್ವಾಮಿ ಗುಜರಾತ್ ರಾಜ್ಯದ ಹೆಸರೇ ಎತ್ತುತ್ತಿಲ್ಲ.… pic.twitter.com/ZOUlNOvRCM
— CM of Karnataka (@CMofKarnataka) February 8, 2024
ಕುಮಾರಸ್ವಾಮಿಗೆ ಸತ್ಯ ಮಾತನಾಡಿಯೇ ಗೊತ್ತಿಲ್ಲ
ಅವರಿಗೆ ಸತ್ಯ ಮಾತನಾಡಿಯೇ ಗೊತ್ತಿಲ್ಲ. ಕೇಂದ್ರ ಸರ್ಕಾರ ತೆರಿಗೆ ಹಂಚಿಕೆ ಮಾಡುವಾಗ ಗುಜರಾತ್ ರಾಜ್ಯಕ್ಕೆ ಹೆಚ್ಚಿನ ಪಾಲು ನೀಡಿ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದ್ದರು. ಈಗ ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದು ಹೇಳುತ್ತಿರುವ ಕುಮಾರಸ್ವಾಮಿ ಗುಜರಾತ್ ರಾಜ್ಯದ ಹೆಸರೇ ಎತ್ತುತ್ತಿಲ್ಲ. ಸುಳ್ಳಿನಲ್ಲಿ ಇವರು ಮೋದಿಯವರ ಜತೆಯಲ್ಲಿ ಪೈಪೋಟಿಗಿಳಿದಂತಿದೆ” ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್ ಮೂಲಕ ಕಿಡಿಕಾರಿದ್ದರು.