Site icon Vistara News

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!

Prajwal Revanna Case Deve Gowda lashes out at Bhavani

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣ ಹಾಗೂ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭವಾನಿ ರೇವಣ್ಣ (Bhavani Revanna) ಅವರ ನಡೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು (HD Devegowda) ಗರಂ ಆಗಿದ್ದಾರೆ ಎನ್ನಲಾಗಿದೆ. ಇನ್ನು ಮುಂದೆ ಕುಟುಂಬಕ್ಕೆ ಕೆಟ್ಟ ಹೆಸರು ಬರದಂತೆ ನೋಡಿಕೋ, ಅವರಿಗೆ ಆ ನಿಟ್ಟಿನಲ್ಲಿ ಯಾವ ರೀತಿ ಎಚ್ಚರಿಕೆ ನೀಡುತ್ತೀಯೋ ನಿನಗೆ ಬಿಟ್ಟಿದ್ದು ಎಂಬುದಾಗಿ ಪುತ್ರ ಎಚ್.ಡಿ. ರೇವಣ್ಣ ಅವರಿಗೆ ಕಡ್ಡಿ ಮುರಿದಂತೆ ಹೇಳಿದ್ದಾರೆ ಎನ್ನಲಾಗಿದೆ.

ಪ್ರಜ್ವಲ್‌ ರೇವಣ್ಣ ಮೇಲೆ ಕೇಸ್‌ ದಾಖಲಾಗಿ 17 ದಿನವೇ ಗತಿಸಿಹೋಗಿದೆ. ಇನ್ನು ಈ ಕೇಸ್‌ಗೆ ಸಂಬಂಧಿಸಿ ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್‌ ಮಾಡಿದ ಆರೋಪ ಎದುರಿಸಿ ಎಚ್‌.ಡಿ. ರೇವಣ್ಣ ಜೈಲು ಸೇರಿದ್ದರೂ ಆ ಕಡೆ ಭವಾನಿ ಕಣ್ಣೆತ್ತಿಯೂ ನೋಡಿಲ್ಲ. ಇನ್ನು ಇದೇ ಕೇಸ್‌ ವಿಚಾರವಾಗಿ ಎಸ್ಐಟಿ ಎರಡು ಬಾರಿ ನೋಟಿಸ್‌ ಕೊಟ್ಟರೂ ಡೋಂಟ್‌ ಕೇರ್‌ ಎಂಬಂತೆ ಕುಳಿತುಬಿಟ್ಟಿದ್ದಾರೆ. ಪ್ರಜ್ವಲ್ ರೀತಿಯಲ್ಲಿ ತಾಯಿಯೂ ವಿಚಾರಣೆಗೆ ಬರಲು ಹಿಂದೇಟು ಹಾಕಿದ್ದಾರೆ. ಈ ಎಲ್ಲ ಬೆಳವಣಿಗೆ ಮಧ್ಯೆ ರೇವಣ್ಣ ಅವರಿಗೆ ಜಾಮೀನು ಸಿಕ್ಕರೂ ಖುಷಿ ವ್ಯಕ್ತಪಡಿಸೋಕೆ ಕೂಡಾ ಅವರು ಕಾಣಿಸಿಕೊಳ್ಳಲಿಲ್ಲ. ಅಲ್ಲದೆ, ದೇವೇಗೌಡರ ಮನೆಯತ್ತಲೂ ಸುಳಿಯಲಿಲ್ಲ. ಇದು ದೇವೇಗೌಡರ ಕೆಂಗಣ್ಣಿಗೆ ಗುರಿಯಾಗಿದೆ ಎನ್ನಲಾಗಿದೆ. ತಾವು ಗಳಿಸಿಟ್ಟ ಗೌರವ, ಹೆಸರನ್ನು ಮಣ್ಣು ಪಾಲಾಗಲು ಬಿಡುವುದಿಲ್ಲ. ಆ ರೀತಿ ಮಾಡಲು ಇನ್ನು ಮುಂದೆ ಅವಕಾಶವನ್ನೂ ಕೊಡುವುದಿಲ್ಲ ಎಂದು ಗುಡುಗಿದ್ದಾರೆನ್ನಲಾಗಿದೆ.

ದೇವೇಗೌಡರ ಕುಟುಂಬಕ್ಕೆ ತಲೆ ನೋವಾದ ಭವಾನಿ ರೇವಣ್ಣ!

ಹಾಗಾದರೆ ಭವಾನಿ ಅವರಿಗೆ ಎಚ್.ಡಿ. ರೇವಣ್ಣ ಅವರ ಮೇಲೆಯೂ ಪ್ರೀತಿ ಇಲ್ಲವೇ? ದೇವೇಗೌಡರ ಬಗ್ಗೆ ಭಯವಿಲ್ಲವೇ? ಯಾಕಿಷ್ಟು ಮೊಂಡುತನವನ್ನು ತೋರುತತಿದ್ದಾರೆ ಎಂಬ ಪ್ರಶ್ನೆಗಳು ಎದ್ದಿವೆ. ಪತಿಯ ಮೇಲೆ ಪ್ರೀತಿ ಇದ್ದಿದ್ದರೆ ಅವರು ಜೈಲು ಸೇರಿದಾಗ ಬೆಂಬಲಕ್ಕೆ ನಿಲ್ಲಬೇಕಿತ್ತು. ನಿಮ್ಮ ಜತೆಗೆ ನಾನಿದ್ದೇನೆ, ಹೆದರಬೇಡಿ ಎಂದು ಬೆನ್ನಿಗೆ ನಿಲ್ಲಬೇಕಿತ್ತು. ಆಸರೆಯ ಮಾತನಾಡಬೇಕಿತ್ತು. ಆದರೆ, ಈ ಯಾವುದನ್ನೂ ಮಾಡದ ಭವಾನಿ, ತಮ್ಮ ಸೇಫ್‌ ಅನ್ನು ಮಾತ್ರವೇ ನೋಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಇನ್ನು ಪುತ್ರ ಪ್ರಜ್ವಲ್ ಸಹ ತಂದೆ ಜೈಲುಪಾಲಾದರೂ ನನಗೇನು ಎಂಬ ರೀತಿಯಲ್ಲಿ ವಿದೇಶವನ್ನು ಬಿಟ್ಟು ಹೊರ ಬರುತ್ತಿಲ್ಲ. ಇದೆಲ್ಲವೂ ದೇವೇಗೌಡರಿಗೆ ಸಿಟ್ಟು ತರಿಸಿದೆ ಎನ್ನಲಾಗಿದೆ.

ಅಮ್ಮ – ಮಗನ ಆಟಕ್ಕೆ ರೇವಣ್ಣ ಬಲಿ ಎಂದು ಅಸಮಾಧಾನ

ಸಾಮಾನ್ಯವಾಗಿ ಪುತ್ರನ ಕುಟುಂಬದ ವ್ಯವಹಾರಗಳಿಗೆ ತಲೆ ಹಾಕದ ಎಚ್.ಡಿ. ದೇವೇಗೌಡರು, ಈ ಪ್ರಕರಣದಲ್ಲಿ ತಮ್ಮ ಹಾಗೂ ಕುಟುಂಬದ ಹೆಸರು ಮಣ್ಣುಪಾಲಾಗುತ್ತಿರುವುದನ್ನು ಕಂಡು ಅಸಮಾಧಾನಗೊಂಡಿದ್ದಾರೆ. ಹೀಗಾಗಿ ರೇವಣ್ಣ ಅವರನ್ನು ಕರೆದು ಒಂದಷ್ಟು ಬುದ್ಧಿ ಮಾತುಗಳನ್ನು ಹೇಳಿದ್ದಾರೆ. ಅಮ್ಮ – ಮಗನ ಆಟಕ್ಕೆ ನೀನು ಬಲಿಯಾಗುತ್ತಿರುವೆ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ. ನಿನ್ನ ಕಷ್ಟದ ಕಾಲದಲ್ಲಿಯೂ ಭವಾನಿ ಸಾಥ್‌ ಕೊಡಲಿಲ್ಲವೆಂದರೆ ಹೇಗೆ? ಎಂದು ಪ್ರಶ್ನೆ ಮಾಡಿದ್ದಾರೆ. ನಿನ್ನ ಒಳ್ಳೆಯತನವೇ ಮುಳುವಾಯಿತು ಎಂದು ಎಚ್‌.ಡಿ. ದೇವೇಗೌಡ ಕಿಡಿಕಾರಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Prajwal Revanna Case: ನಿಮ್ಮ ಸರ್ಕಾರದ ಮೇಲೆ ಮಹಿಳೆಯರು ವಿಶ್ವಾಸ ಇಡಬಹುದೇ? ಸಿದ್ದರಾಮಯ್ಯಗೆ ಸಾಹಿತಿಗಳ ಬಹಿರಂಗ ಪತ್ರ!

ಕರೆದು ಬುದ್ಧಿ ಹೇಳು, ಮತ್ತೆ ಹೀಗಾಗದಂತೆ ನೋಡಿಕೋ!!

ಭವಾನಿ ಮತ್ತು ಮಕ್ಕಳು ಏನು ಬೇಕಿದ್ದರೂ ಮಾಡಿಕೊಳ್ಳಲಿ. ಆದರೆ, ಇನ್ನು ಮುಂದೆ ಕುಟುಂಬಕ್ಕೆ ಕೆಟ್ಟ ಹೆಸರು ಬರದಂತೆ ನೋಡಿಕೊಳ್ಳಿ. ಈ ಬಗ್ಗೆ ಸಮಯ ನೋಡಿ ಅವರೆಲ್ಲರಿಗೂ ಎಚ್ಚರಿಕೆ ಕೊಡು. ಪ್ರಜ್ವಲ್ ವಿದೇಶದಿಂದ ಬಂದು ಕೋರ್ಟ್‌ನಿಂದ ಜಾಮೀನು ಪಡೆದ ಸಾರ್ವಜನಿಕ ಜೀವನದಲ್ಲಿ ಎಚ್ಚರಿಕೆಯಿಂದ ಇರಬೇಕು. ಈ ನಿಟ್ಟಿನಲ್ಲಿ ನೀನು ಜವಾಬ್ದಾರಿಯಿಂದ ನೋಡಿಕೊ ಎಂದು ಎಚ್.ಡಿ. ರೇವಣ್ಣ ಅವರಿಗೆ ಎಚ್.ಡಿ. ದೇವೇಗೌಡ ತಾಕೀತು ಮಾಡಿದ್ದಾರೆ.

Exit mobile version