ಹಾಸನ: ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ (Devarajegowda) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಪೆನ್ ಡ್ರೈವ್ ಪ್ರಕರಣದ ಹಿಂದೆ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಇದ್ದಾರೆ. ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಬಳಿ ಪೆನ್‌ಡ್ರೈವ್ ತರಿಸಿಕೊಂಡು ಎಲ್ಲವನ್ನೂ ರೆಡಿ ಮಾಡಿದ್ದು ಡಿಕೆಶಿ, ಇದರಲ್ಲಿ ಸುಮ್ಮನಾಗಲು 100 ಕೋಟಿ ರೂಪಾಯಿ ಆಫರ್ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ಜೆಡಿಎಸ್ ಟ್ವೀಟ್ ಮಾಡಿದ್ದು, “CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್” ಆರೋಪ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರುವುದೇ ಇದರ ಹಿಂದಿರುವ ಸಂಚಾಗಿದೆ ಎಂದು ಜೆಡಿಎಸ್ ಟ್ವೀಟ್ ಮೂಲಕ ಆರೋಪ ಮಾಡಿದೆ.
ಜೆಡಿಎಸ್ ಟ್ವೀಟ್‌ನಲ್ಲೇನಿದೆ?
“CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್”
1.ಡಿಸಿಎಂ ಡಿ.ಕೆ.ಶಿವಕುಮಾರ್
2.ಕೃಷಿ ಸಚಿವ ಚೆಲುವರಾಯಸ್ವಾಮಿ
3.ಕಂದಾಯ ಸಚಿವ ಕೃಷ್ಣಭೈರೇಗೌಡ
4. IT BT ಸಚಿವ ಪ್ರಿಯಾಂಕ್ ಖರ್ಗೆ
+
ಇನ್ನೂ ಒಬ್ಬ ಸಚಿವ
+
ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ
CDಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್!!
— Janata Dal Secular (@JanataDal_S) May 17, 2024
1.ಡಿಸಿಎಂ ಡಿ.ಕೆ.ಶಿವಕುಮಾರ್
2.ಕೃಷಿ ಸಚಿವ ಚೆಲುವರಾಯಸ್ವಾಮಿ
3.ಕಂದಾಯ ಸಚಿವ ಕೃಷ್ಣಭೈರೇಗೌಡ
4. IT BT ಸಚಿವ ಪ್ರಿಯಾಂಕ್ ಖರ್ಗೆ
+
ಇನ್ನೂ ಒಬ್ಬ ಸಚಿವ
+
ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ
•ಇವರೆಲ್ಲರೂ ಹೂಡಿರುವ ಸಂಚು ಏನ್ ಗೊತ್ತಾ?
ಪ್ರಧಾನಿಗಳಾದ ಮಾನ್ಯ ಶ್ರೀ @narendramodi ಅವರು ಹಾಗೂ… pic.twitter.com/CE90BpqDh7
ಇವರೆಲ್ಲರೂ ಹೂಡಿರುವ ಸಂಚು ಏನ್ ಗೊತ್ತಾ? ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರುವುದಾಗಿದೆ. ಈ ಸಂಚು ಸಾಕಾರಗೊಳಿಸಲು CD ಶಿವಕುಮಾರ್ ಸಾಹೇಬರು ವಕೀಲರಾದ ದೇವರಾಜೇಗೌಡರಿಗೆ ಆಫರ್ ಮಾಡಿದ ಮೊತ್ತ ಬರೋಬ್ಬರಿ 100 ಕೋಟಿ ರೂಪಾಯಿ” ಎಂದು ಜೆಡಿಎಸ್ ಟ್ವೀಟ್‌ನಲ್ಲಿ ಉಲ್ಲೇಖಿಸಿದೆ.
ಡಿಕೆಶಿಯಿಂದ 100 ಕೋಟಿ ರೂಪಾಯಿ ಆಫರ್; ದೇವರಾಜೇಗೌಡ ಆರೋಪ
ಹಾಸನ ಜೆಎಂಎಫ್‌ಸಿ ಕೋರ್ಟ್ ಹೊರಗೆ ಪೊಲೀಸ್ ವ್ಯಾನ್‌ನೊಳಗಿದ್ದ ವಕೀಲ ದೇವರಾಜೇಗೌಡ ಮಾಧ್ಯಮದವರೊಂದಿಗೆ ಮಾತನಾಡಿ, ಎಲ್.ಆರ್. ಶಿವರಾಮೇಗೌಡ ಮೂಲ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು. ಡಿ.ಕೆ. ಶಿವಕುಮಾರ್ ನೇರವಾಗಿ ನನ್ನ ಮಾತನಾಡಿದ್ದಲ್ಲ ಎಂದು ಹೇಳಿದರು.
ನಾಲ್ಕು ಜನ ಮಂತ್ರಿಗಳ ಕಮಿಟಿ ಎಂದು ನಾನು ಹೇಳಿದ್ದೆನಲ್ಲವೇ? ಅವರ ಬಗ್ಗೆ ಹೇಳುತ್ತೇನೆ. ಎನ್. ಚಲುವರಾಯಸ್ವಾಮಿ, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ ಹಾಗೂ ಇನ್ನೊಬ್ಬ ಸಚಿವರನ್ನು ಈ ಪ್ರಕರಣವನ್ನು ಹ್ಯಾಂಡಲ್ ಮಾಡಲು ಬಿಟ್ಟಿದ್ದಾರೆ. ಈಗ ನನ್ನ ಮೇಲೆ ನಿರಂತರವಾಗಿ ಒತ್ತಡ ಹಾಕುತ್ತಿದ್ದಾರೆ. ಆದರೆ, ಅದ್ಯಾವುದಕ್ಕೂ ನಾನು ಒಪ್ಪಲಿಲ್ಲ ಎಂದು ದೇವರಾಜೇಗೌಡ ಹೇಳಿದರು.
ಇಷ್ಟೆಲ್ಲ ದೊಡ್ಡ ಹಗರಣವಾಗಿರುವುದರಿಂದ ಇದರ ಮೂಲಕ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರಲು ಹೋಗಿದ್ದರು. ನಮಗೆ ಸುಮಾರು 100 ಕೋಟಿ ರೂಪಾಯಿ ಆಫರ್ ಕೊಟ್ಟಿದ್ದರು. ಅದರಲ್ಲಿ 5 ಕೋಟಿ ರೂಪಾಯಿ ಅಡ್ವಾನ್ಸ್ ಅನ್ನು ಬೋರಿಂಗ್ ಕ್ಲಬ್‌ನ ರೂಂ ನಂಬರ್ 110ಕ್ಕೆ ಕಳಿಸಿದ್ದರು. ಆ ಮೀಟಿಂಗ್‌ಗೆ ಚನ್ನರಾಯಪಟ್ಟಣದ ಎಂ.ಎ. ಗೋಪಾಲಸ್ವಾಮಿಯನ್ನು ಕಳಿಸಿದ್ದರು. ಐದು ಕೋಟಿ ರೂಪಾಯಿ ಕ್ಯಾಶ್ ಅನ್ನೂ ಕೊಟ್ಟು ಕಳಿಸಿದ್ದರು. ಈ 100 ಕೋಟಿ ರೂಪಾಯಿ ಆಫರ್ ಮಾಡಿದ್ದು ಡಿ.ಕೆ. ಶಿವಕುಮಾರ್ ಎಂದು ದೇವರಾಜೇಗೌಡ ಆರೋಪಿಸಿದರು.
ಒಪ್ಪದೇ ಇದ್ದಾಗ ಅಟ್ರಾಸಿಟಿ ಕೇಸ್
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳಂಕ ತರಬೇಕು. ರಾಜ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರ ನಾಯಕತ್ವವನ್ನು ಹಾಳು ಮಾಡಬೇಕು ಎಂಬ ಕಾರಣಕ್ಕೆ ನನ್ನನ್ನು ಬಳಸಿಕೊಳ್ಳಲು ನೋಡಿದರು. ಅದಕ್ಕೆ ನಾನು ಒಪ್ಪದೇ ಇದ್ದಾಗ ಮೊದಲಿಗೆ ಅಟ್ರಾಸಿಟಿ ಕೇಸ್ ದಾಖಲು ಮಾಡಿದರು. ಅದರಲ್ಲಿ ಡಾಕ್ಯುಮೆಂಟ್ ಸಿಗಲಿಲ್ಲ ಎಂದು ದೇವರಾಜೇಗೌಡ ಹೇಳಿದರು.
ಇದನ್ನೂ ಓದಿ: HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್; ರೇವಣ್ಣ ವಿರುದ್ಧ ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ!
ನನ್ನ ಮೇಲೆ ಸುಳ್ಳು ಕೇಸ್
ನನ್ನ ಮೇಲೆ ಹಾಕಲಾದ ಅಟ್ರಾಸಿಟಿ ಕೇಸ್‌ನಲ್ಲಿ ಯಾವುದೇ ಪ್ರಯೋಜನ ಆಗಿಲ್ಲವೆಂದು ಮತ್ತೊಬ್ಬಳ ಕೈಯಲ್ಲಿ 354a ಕೇಸ್ ಹಾಕಿಸಿದರು. ಅದೂ ವಿಫಲವಾದ ಮೇಲೆ ರೇಪ್ ಕೇಸ್ ಹಾಕಿಸಿದರು. ಈ ಅತ್ಯಾಚಾರ ಪ್ರಕರಣದಲ್ಲಿಯೂ ಅವರಿಗೆ ಯಾವುದೇ ದಾಖಲೆಗಳು ಸಿಗಲಿಲ್ಲ. ನಾಲ್ಕು ದಿನಗಳ ಕಾಲ ನಿರಂತರವಾಗಿ ವಿಚಾರಣೆ ನಡೆಸಿದ್ದಾರೆ. ಪೆನ್‌ಡ್ರೈವ್ ಸಿಕ್ಕಿದ್ದನ್ನು ಕೋರ್ಟ್‌ನಲ್ಲಿ ಸೀಜ್ ಮಾಡಿದ್ದಾರೆ.