Site icon Vistara News

Prajwal Revanna Case: ಪ್ರಜ್ವಲ್‌ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ವೈರಲ್‌ ಮಾಡಿದ್ದು ಸಚಿವ ಜಮೀರ್‌ ಅಹ್ಮದ್‌ ಆಪ್ತ?

Prajwal Revanna Case Minister Zameer Ahmed close aide makes Prajwal obscene video pen drive viral

ಹಾಸನ: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಮತ್ತೊಂದು ಸ್ಫೋಟಕ ಸಂಗತಿ ಹೊರಬಿದ್ದಿದೆ. ಪೆನ್ ಡ್ರೈವ್‌ನಲ್ಲಿದ್ದ ಅಶ್ಲೀಲ ವಿಡಿಯೊಗಳನ್ನು ವೈರಲ್ ಮಾಡಿದ್ದು ಪ್ರಭಾವಿ ಕಾಂಗ್ರೆಸ್ ಸಚಿವರ ಆಪ್ತನೇ ಎಂಬ ಶಂಕೆ ಹುಟ್ಟಿಕೊಂಡಿದೆ. ವಿಡಿಯೊ ವೈರಲ್ ಮಾಡಿದ್ದ ನವೀನ್ ಗೌಡ ಪ್ರಭಾವಿ ಸಚಿವ ಜಮೀರ್ ಅಹ್ಮದ್‌ ಖಾನ್ ಆಪ್ತ ಎಂದು ಹೇಳಲಾಗುತ್ತಿದೆ.

ಈ ನಡುವೆ ಈ ಜಮೀರ್‌ ಜತೆಗೆ ನವೀನ್‌ ಗೌಡ ಇರುವ ಫೋಟೊಗಳು ವೈರಲ್‌ ಆಗಿವೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ ನವೀನ್ ಗೌಡ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಬೆನ್ನಲ್ಲೇ ಜಮೀರ್‌ ಜತೆಗಿರುವ ಫೋಟೊಗಳು ಸೋಷಿಯಲ್‌ ಮೀಡಿಯಾಗಳಲ್ಲಿ ಕಾಣಿಸಿಕೊಳ್ಳಲಾರಂಭಿಸಿವೆ.

Prajwal Revanna Case Minister Zameer Ahmed close aide makes Prajwal obscene video pen drive viral

ಜಮೀರ್ ಅಹಮದ್ ಜತೆ ಹಲವು ಫೋಟೊ ತೆಗೆಸಿಕೊಂಡಿರುವ ನವೀನ್ ಗೌಡ ಮೇಲೆ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎಂಬ ವಿಡಿಯೊವುಳ್ಳ ಪೆನ್‌ ಡ್ರೈವ್‌ ಹರಿಬಿಟ್ಟ ಆರೋಪದಲ್ಲಿ ಹಾಸನದ ಸೈಬರ್ ಕ್ರೈಮ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸಂಸದ ಪ್ರಜ್ವಲ್ ಅವರ ಚುನಾವಣಾ ಏಜೆಂಟ್ ಈ ಬಗ್ಗೆ ದೂರು ನೀಡಿದ್ದರು. ಹೀಗಾಗಿ ಏಪ್ರಿಲ್ 23ರಂದು ಪ್ರಕರಣವನ್ನು ದಾಖಲು ಮಾಡಿಕೊಳ್ಳಲಾಗಿತ್ತು.

ಆದರೆ, ಈಗ ಸಚಿವ ಜಮೀರ್‌ ಜತೆಗೆ ನವೀನ್‌ ಆತ್ಮೀಯವಾಗಿರುವ ಫೋಟೊಗಳು ವೈರಲ್‌ ಆಗಿದ್ದು, ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ಹಾಗಾದರೆ, ಇದನ್ನು ಚುನಾವಣೆ ಸಮಯದಲ್ಲಿ ಬೇಕೆಂದೇ ಮಾಡಲಾಗಿದೆಯೇ? ಅಥವಾ ಇನ್ಯಾವುದೋ ದುರುದ್ದೇಶದಿಂದ ಮಾಡಲಾಗಿದೆಯೇ? ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ

Prajwal Revanna Case Minister Zameer Ahmed close aide makes Prajwal obscene video pen drive viral

ಪ್ರಜ್ವಲ್‌ ಅರೆಸ್ಟ್‌ ಆದಲ್ಲಿ ಎಸ್‌ಐಟಿ ಕೇಳುವ ಪ್ರಶ್ನೆಗಳಿವು! ರೇವಣ್ಣಗೂ ತಟ್ಟುವ ಬಿಸಿ

ಪ್ರಜ್ವಲ್‌ ಎಸ್ಐಟಿ ಅಧಿಕಾರಿಗಳ ಮುಂದೆ ಹಾಜರಾದಲ್ಲಿ ಇಲ್ಲವೇ ಅವರನ್ನು ಬಂಧಿಸಿ ಕರೆತಂದಲ್ಲಿ ಅವರಿಗೆ ಸರಣಿ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಈಗಾಗಲೇ ಹಲವು ಪ್ರಶ್ನೆಗಳನ್ನು ಎಸ್‌ಐಟಿ ಸಿದ್ಧಪಡಿಸಿಟ್ಟುಕೊಂಡಿದೆ ಎನ್ನಲಾಗಿದೆ. ಪ್ರಕರಣ ಸಂಬಂಧ ಸಣ್ಣ ಸಣ್ಣ ಪ್ರಶ್ನೆಗಳನ್ನೂ ಕೇಳಿ ಪ್ರಜ್ವಲ್‌ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲಾಗುತ್ತದೆ. ಪ್ರಜ್ವಲ್‌ ಅವರ ವಯಸ್ಸಿನಿಂದ ಹಿಡಿದು ಹಲವು ಪ್ರಶ್ನೆಗಳನ್ನು ಕೇಳಲಿದ್ದಾರೆ. ಆರೋಪಗಳ ಬಗ್ಗೆ ಏನು ಹೇಳುತ್ತೀರಿ? ನೀವೇ ರೆಕಾರ್ಡ್‌ ಮಾಡಿಕೊಂಡಿದ್ದೀರಿ ಎಂಬ ಆರೋಪ ಇದೆ. ರೆಕಾರ್ಡ್‌ಗೆ ಯಾವ ಸಾಧನವನ್ನು ಬಳಸಿಕೊಂಡಿದ್ದೀರಿ. ಡಿಯೋ ಇಟ್ಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಿರಾ? ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಅದೇ ರೀತಿ ಪ್ರಜ್ವಲ್‌ ರೇವಣ್ಣ ಅವರ ತಂದೆ ಎಚ್.ಡಿ. ರೇವಣ್ಣ ಅವರಿಗೂ ಹಲವು ಪ್ರಶ್ನೆಗಳನ್ನು ಕೇಳಲು ಎಸ್‌ಐಟಿ ರೆಡಿಯಾಗಿದೆ. ನಿಮ್ಮ ಪುತ್ರನ ಮೇಲೆ ಆರೋಪಿವಿರುವುದು ಗಮನಕ್ಕೆ ಬಂದಿತ್ತಾ? ನಿಮ್ಮ ಗಮನಕ್ಕೆ ಬಂದಿದ್ರೆ ಅದರ ಬಗ್ಗೆ ಪ್ರಜ್ವಲ್‌‌ ಜತೆ ಚರ್ಚಿಸಿದ್ದಿರಾ? ಒಂದು ವೇಳೆ ಚರ್ಚೆ ಮಾಡಿದರೆ ನಿಮ್ಮ ಪುತ್ರ ಏನು ಹೇಳಿದ್ದರು? ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಲಾಗುತ್ತದೆ ಎಂದು ಹೇಳಲಾಗಿದೆ.

ಪ್ರಜ್ವಲ್ ರೇವಣ್ಣಗೆ SIT ಕೇಳುವ ಸಂಭಾವ್ಯ ಪ್ರಶ್ನೆಗಳು

1- ಪ್ರಜ್ವಲ್ ಅವರೇ ನಿಮಗೆ ವಯಸ್ಸು ಎಷ್ಟು?
2- ನೀವು ಏನು ಓದಿದ್ದೀರಿ? ಎಲ್ಲಿ ಓದಿದ್ದು?
3- ಎಲೆಕ್ಷನ್ ಮುಗಿದ ತಕ್ಷಣ ತಾವು ಎಲ್ಲಿಗೆ ಹೋದಿರಿ?
4- ನೀವು ಹೆಚ್ಚಾಗಿ ವಾಸವಿರೋದು ಹಾಸನವಾ? ದೆಹಲಿಯಾ? ಅಥವಾ ಬೆಂಗಳೂರಲ್ಲೋ?
5- ನಿಮ್ಮ ಮೇಲೆ ಕೇಳಿ ಬಂದಿರುವ ಆರೋಪಗಳ ಬಗ್ಗೆ ಏನಂತೀರಿ?
6- ಅಸಲಿಗೆ ಅವು ನಿಮ್ಮ ವಿಡಿಯೊಗಳಾ?
7- ವಿಡಿಯೋದಲ್ಲಿರುವ ಧ್ವನಿ ನಿಮ್ಮದಲ್ಲವೇ?
8- ನಿಮ್ಮಿಂದಲೇ ರೆಕಾರ್ಡ್‌ ಎನ್ನಲಾಗುತ್ತಿದೆ, ಹೌದೇ?
9- ರೆಕಾರ್ಡ್ ಮಾಡಲು ಬಳಸಿದ ಸಾಧನ ಯಾವುದು?
10- ನೀವೇ ರೆಕಾರ್ಡ್ ಮಾಡಿದ್ದಂತೆ. ಯಾಕೆ ಮಾಡಿದಿರಿ?
11 – ವಿಡಿಯೋ ಇಟ್ಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಿರಾ?
12- ನಿಮ್ಮ ಮೋಜಿಗೆ ವಿಡಿಯೊಗಳನ್ನು ಮಾಡಿಕೊಳ್ಳುತ್ತಿದ್ದಿರಾ?
13- ರೆಕಾರ್ಡ್ ಮಾಡುವುದು ತಪ್ಪು ಎಂದು ನಿಮಗೆ ಗೊತ್ತಿಲ್ವೆ?
14- ದೃಶ್ಯಗಳಲ್ಲಿ ಇರುವ ಮಹಿಳೆಯರು ನಿಮಗೆ ಪರಿಚಯವೇ?
15- ಆ ಮಹಿಳೆಯರನ್ನು ನೀವು ಎಲ್ಲಿ ಭೇಟಿ ಮಾಡಿದಿರಿ?
16- ದೈಹಿಕ ಸಂಪರ್ಕ ಬೆಳೆಸಲು ಏನಾದರೂ ಆಮಿಷ ಒಡ್ಡಿದ್ರಾ?
17 – ಅದು ಅತ್ಯಾಚಾರಕ್ಕೆ ಸಮ ಎಂದು ಗೊತ್ತಿದೆಯೇ?
18- ಪ್ರಮೋಷನ್, ಕೆಲಸದ ನೆಪದಲ್ಲಿ ದೈಹಿಕ ಸಂಪರ್ಕ ಮಾಡಿದಿರಾ?
19- ನಿಮಗೇನಾದರೂ ಮಾನಸಿಕ ಸಮಸ್ಯೆ ಇದೆಯಾ?
20- ನೀವು ದೌರ್ಜನ್ಯ ನಡೆಸುತ್ತಿರುವಂತಿದೆ, ಏನಂತೀರಿ?
21- ನೋಟಿಸ್ ಕೊಟ್ಟರೂ 7 ದಿನ ಟೈಮ್ ಯಾಕೆ ಕೇಳಿದಿರಿ?
22- ನೀವು ದೃಶ್ಯ ಶೂಟ್ ಮಾಡಲು ಬಳಸಿದ ಸಾಧನ ಎಲ್ಲಿದೆ?
23- ಬೇರೆ ಯಾರ ಬಳಿಯಾದರೂ ವಿಡಿಯೊ ಶೇರ್ ಮಾಡಿದಿರಾ?
24- ಖಾಸಗಿ ದೃಶ್ಯಗಳು ಹೇಗೆ ಹೊರಗೆ ಬಂದವು ಹೇಳಬಹುದಾ?
25- ನಿಮಗೆ ಕಾರ್ತಿಕ್ ಎಂಬ ವ್ಯಕ್ತಿ ಗೊತ್ತಾ?
26 – ನಿಮಗೂ ಕಾರ್ತಿಕ್‌ಗೂ ಸ್ನೇಹವಿತ್ತಾ?
27 – ನಿಮ್ಮ ವಿರುದ್ಧ ಸುದ್ದಿ ಪ್ರಸಾರವಾಗದಂತೆ ತಡೆ ತಂದಿದ್ದಿರಿ ಯಾಕೆ?
28 – ನಿಮ್ಮ ಮೇಲಿನ ಪಿತೂರಿ ಅಂತಾದರೆ ನೀವ್ಯಾಕೆ ದೂರು ನೀಡಲಿಲ್ಲ?
29 – ನಿಮ್ಮ ವಿರುದ್ಧ ಆರೋಪ ಬಂದ ಕೂಡಲೇ ಯಾಕೆ ದೇಶ ಬಿಟ್ಟು ಹೋದಿರಿ?
30 – ಮನೆಯಲ್ಲಿ ಯಾರ ಬಳಿಯಾದರೂ ಈ ವಿಷಯಗಳನ್ನು ಹೇಳಿಕೊಳ್ಳುತ್ತಿದ್ದಿರಾ?
31 – ಕೆಲಸದಾಕೆಯ ಆರೋಪದ ಬಗ್ಗೆ ಏನಂತೀರಿ?
32 – ಪ್ರಜ್ವಲ್ ನೀವು ತನಿಖೆಗೆ ಸಹಕರಿಸಬೇಕು
33 – ತನಿಖೆ ಪೂರ್ಣವಾಗುವವರೆಗೂ ದೇಶ ಬಿಟ್ಟು ಹೋಗಬೇಡಿ

ಎಂಬಿತ್ಯಾದಿ ಪ್ರಶ್ನೆಗಳನ್ನು ಎಸ್‌ಐಟಿ ಕೇಳಲಿದೆ. ಒಂದು ವೇಳೆ ಇವುಗಳಿಗೆ ಆರೋಪಿ ಪ್ರಜ್ವಲ್‌ ಸ್ಪಂದಿಸದೆ ಸಮರ್ಪಕ ಉತ್ತರ ನೀಡಿದ್ದರೆ ಮುಂದಿನ ಕ್ರಮದ ಬಗ್ಗೆ ಎಸ್‌ಐಟಿ ಚಿಂತನೆ ನಡೆಸಲಿದೆ ಎನ್ನಲಾಗಿದೆ.

ಇದನ್ನೂ ಓದಿ: Prajwal Revanna Case: SIT ಮುಂದೆ ಹಾಜರಾಗಲು ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ? ತನಿಖೆಗೆ ಆತುರ ಏಕೆ?

ಎಚ್‌‌‌‌.ಡಿ.ರೇವಣ್ಣಗೆ SIT ಕೇಳುವ ಸಂಭಾವ್ಯ ಪ್ರಶ್ನೆಗಳು!

1) ನಿಮ್ಮ ಹೆಸರೇನು..? ಏನು ಕೆಲಸ ಮಾಡಿಕೊಂಡಿದ್ದೀರಿ..?
2) ಯಾವ ವಿಳಾಸದಲ್ಲಿ ವಾಸವಾಗಿದ್ದೀರಾ? ಎಷ್ಟು ವರ್ಷ..?
3) ನಿಮ್ಮ ಮೇಲೆ ಸಂತ್ರಸ್ತೆ ನೀಡಿದ ದೂರಿನ ಬಗ್ಗೆ ಮಾಹಿತಿ ಇದೆಯಾ?
4) ದೂರು ನೀಡಿರುವ ಮಹಿಳೆ ಪರಿಚಯಸ್ಥರಾ? ಸಂಬಂಧಿನಾ?
5) ಎಷ್ಟು ವರ್ಷಗಳಿಂದ ನಿಮ್ಮ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದಾರೆ..?
6) ದೂರಿನಲ್ಲಿ ಉಲ್ಲೇಖಿಸಿದಂತೆ ಲೈಂಗಿಕ ದೌರ್ಜನ್ಯ ಎಸಗಿದ್ದೀರಾ?
7) ನಿಮ್ಮ ಪುತ್ರನ ಮೇಲೂ ಆರೋಪಿವಿದೆ ಗಮನಕ್ಕೆ ಬಂದಿತ್ತಾ..?
8) ನಿಮ್ಮ ಗಮನಕ್ಕೆ ಬಂದಿದ್ದರೆ ಅದರ ಬಗ್ಗೆ ಪ್ರಜ್ವಲ್‌‌ ಜತೆ ಚರ್ಚಿಸಿದ್ದಿರಾ?
9) ಒಂದು ವೇಳೆ ಚರ್ಚೆ ಮಾಡಿದ್ದರೆ ನಿಮ್ಮ ಪುತ್ರ ಏನು ಹೇಳಿದ್ದರು?
10) ನಿಮ್ಮ ಪುತ್ರನ ಕಾರು ಚಾಲಕ ಕಾರ್ತಿಕ್ ಎಷ್ಟು ವರ್ಷಗಳಿಂದ ಕೆಲಸ ಮಾಡುತ್ತಿದ್ದ ?
11) ನಿಮ್ಮ ಡ್ರೈವರ್ ಕಾರ್ತಿಕ್ ಜತೆ ಏನಾದರೂ ಗಲಾಟೆ ಆಗಿತ್ತಾ?
12) ವಿಡಿಯೊ ನಾನೇ ಕೊಟ್ಟಿದ್ದು ಎಂದು ಕಾರ್ತಿಕ್ ಹೇಳಿಕೆ ನೀಡಿದ್ದಾರಲ್ವಾ, ಇದು ಸತ್ಯನಾ?
13) ಪೆನ್‌ಡ್ರೈವ್‌ನಲ್ಲಿರೋ ವಿಡಿಯೊ ಪ್ರಜ್ವಲ್ ರೇವಣ್ಣನವರೆದ್ದೇನಾ..?
14) ಇಲ್ಲ ಅಂದಾದರೆ ಕೋರ್ಟ್‌ನಲ್ಲಿ ಸ್ಟೇ ತಂದಿದ್ದು ಯಾಕೆ?
15) ಮನೆ ಕೆಲಸದವಳು ಮಾಡುವ ಆರೋಪಕ್ಕೆ ನಿಮ್ಮ ಪ್ರತಿಕ್ರಿಯೆ ಏನು?

Exit mobile version