Site icon Vistara News

Prajwal Revanna Case: ಕಾರ್ತಿಕ್‌ಗೆ ನೋಟಿಸ್‌ ನೀಡದ SIT; ರಾಜ್ಯಪಾಲ, ಕೋರ್ಟ್‌ ಮೊರೆ ಹೋಗಲು ಎಚ್‌ಡಿಕೆ ನಿರ್ಧಾರ

Prajwal Revanna Case SIT not issuing notice to Karthik HDK decides to approach Governor and Court

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದ (Hassan Pen Drive Case) ಸೂತ್ರಧಾರಿ ಕಾರ್ತಿಕ್‌ ಗೌಡನ ಬಗ್ಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಕಾರ್ತಿಕ್‌ ರಾಜಾರೋಷವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿದ್ದಾನೆ. ಇಷ್ಟಾದರೂ ಆತನಿಗೆ ಏಕೆ ಈವರೆಗೆ ನೋಟಿಸ್‌ ಕೊಡಲಾಗಿಲ್ಲ? ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಈ ಸಂಬಂಧ ಪ್ರಕರಣವನ್ನು ಸಿಬಿಐಗೆ ರಾಜ್ಯಪಾಲರು ಹಾಗೂ ಕೋರ್ಟ್‌ ಮೊರೆ ಹೋಗಲು ತೀರ್ಮಾನಿಸಿದ್ದಾಗಿ ಹೇಳಿದ್ದಾರೆ.

ಈ ಬಗ್ಗೆ ವಿಸ್ತಾರ ನ್ಯೂಸ್‌ನೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿಗಳಿಗೆ ಎಸ್ಐಟಿ ನೋಟಿಸ್ ನೀಡಿಲ್ಲ. ಇದು ಯಾವ ಸರಿಯೇ ಎಂದು ಪ್ರಶ್ನೆ ಮಾಡಿದ್ದಾರೆ.

ಅಲ್ಲದೆ, ಈ ಪ್ರಕರಣವನ್ನು ಸಿಬಿಐಗೆ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡುತ್ತೇನೆ. ಜತೆಗೆ ಕೋರ್ಟ್‌ನಲ್ಲಿಯೂ ಮನವಿ ಸಲ್ಲಿಸುತ್ತೇನೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿಯೂ ಹರಿಹಾಯ್ದಿದ್ದ ಎಚ್‌ಡಿಕೆ

‌ಅಶ್ಲೀಲ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮಂಗಳವಾರ ನಡೆಸಿದ್ದ ಸುದ್ದಿಗೋಷ್ಠಿಯಲ್ಲಿಯೂ ಹರಿಹಾಯ್ದಿದ್ದರು. ಕಾರ್ತಿಕ್‌ ಗೌಡ ಕಥೆ ಏನು? ಆತ ಎಲ್ಲಿದ್ದಾನೆ? ಆತನ ಹಿಂದೆ ಯಾರಿದ್ದಾರೆ? ನಿಮ್ಮ ಈ ತನಿಖೆಯ ವಿಸ್ತಾರ ಎಷ್ಟು? ಕೇವಲ ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧ ಅಷ್ಟೇ ನಿಮ್ಮ ತನಿಖೆಯೇ? ಇಲ್ಲವೇ ಆಯೋಗ ಹೇಳಿದಂತೆ ಎಲ್ಲ ರಾಜಕಾರಣಿಗಳ ವಿರುದ್ಧ ತನಿಖೆ ಮಾಡುತ್ತಿದ್ದೀರಾ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಪ್ರಶ್ನೆ ಮಾಡಿದ್ದರು.

ರೇವಣ್ಣ ಅರೆಸ್ಟ್ ಆದಾಗ ನನಗೆ ಗೊತ್ತೇ ಇಲ್ಲ ಅಂತ ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಏನು ಹೇಳಿದ್ದಾರೆ? ಈ ಪ್ರಕರಣದ ಹಿಂದೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಇದ್ದಾರೆ ಎಂಬುದಾಗಿ ಹೇಳಿದ್ದಾರೆ. ಈಗ ನನ್ನ ಪ್ರಶ್ನೆ ಎಂದರೆ ಈ ಪೆನ್‌ಡ್ರೈವ್‌ ರೂವಾರಿ ಕಾರ್ತಿಕ್‌ನನ್ನು ಏಕೆ ಬಿಟ್ಟಿದ್ದೀರಿ? ಎಸ್ಐಟಿ ಅಧಿಕಾರಿಗಳು ಏನು ಮಾಡುತ್ತಿದ್ದಾರೆ? ಎಂದು ಪ್ರಶ್ನೆ ಮಾಡಿದ್ದರು.

ಈ ವೇಳೆ ಪ್ರಜ್ವಲ್‌ ಪೆನ್‌ಡ್ರೈವ್‌ ವಿಷಯವಾಗಿ ಹಾಸನದ ನವೀನ್ ಗೌಡ ಮಾತನಾಡಿದ್ದಾರೆನ್ನಲಾದ ಆಡಿಯೊವನ್ನು ಎಚ್‌.ಡಿ. ಕುಮಾರಸ್ವಾಮಿ ಪ್ಲೇ ಮಾಡಿದರು. ಅಲ್ಲದೆ, ನವೀನ್ ಗೌಡ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಜತೆ ಇರುವ ಹಾಗೂ ಸಚಿವ ಜಮೀರ್ ಅಹಮದ್ ಜತೆ ಇರುವ ಫೋಟೊವನ್ನು ಬಿಡುಗಡೆ ಮಾಡಿದರು. ನವೀನ್‌ ಗೌಡನ ಮೇಲೆ ಯಾವ ಕ್ರಮವನ್ನು ತೆಗೆದುಕೊಂಡಿದ್ದೀರಿ? ಎಂದು ಪ್ರಶ್ನೆ ಮಾಡಿದ್ದರು.

ಪೆನ್‌ಡ್ರೈವ್‌ ಸಂಚಿನ ಹಿಂದಿರುವ ಡಿ.ಕೆ. ಶಿವಕುಮಾರ್‌ ವಜಾಗೆ ಕುಮಾರಸ್ವಾಮಿ ಆಗ್ರಹ

ಈ ಪೆನ್‌ಡ್ರೈವ್‌ ಹಂಚಿಕೆ ಸಂಚಿನ ಹಿಂದೆ ಇರುವ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಸಂಪುಟದಿಂದ ಕೂಡಲೇ ವಜಾ ಮಾಡಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದರು.

ಈ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಒಳಸಂಚಿದೆ. ಕ್ಯಾಬಿನೆಟ್‌ನಿಂದ ಮೊದಲು ಅವರನ್ನು ಕಿತ್ತುಹಾಕಿ. ಈ ಪ್ರಕರಣವನ್ನು ಅಷ್ಟು ಸುಲಭವಾಗಿ ನಾನು ಬಿಡಲ್ಲ. ಈ ಸಿಎಂ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೆ ಮೊದಲು ಡಿಕೆಶಿಯನ್ನು ಕೈಬಿಡಲಿ ಎಂದು ಆಗ್ರಹಿಸಿದ್ದರು.

ಎಸ್ಐಟಿ ಅಧಿಕಾರಿಗಳು ಸಿಎಂ, ಡಿಸಿಎಂಗೆ ಏಜೆಂಟ್‌

ಎಸ್ಐಟಿ ಅಧಿಕಾರಿಗಳು ಸಿಎಂ, ಡಿಸಿಎಂಗೆ ಏಜೆಂಟ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ. ದೇವರಾಜೇಗೌಡನನ್ನು ಯಾಕೆ ಕರೆಸಿಕೊಂಡರು? ಯಾಕೆ ಅವರ ಹೇಳಿಕೆಯಲ್ಲಿನ ಒಂದು ಪ್ಯಾರಾವನ್ನು ಡಿಲಿಟ್ ಮಾಡಿ ಎಂದು ಹೇಳಿದರು? ಡಿಕೆಶಿ ಇತಿಹಾಸ ಎಲ್ಲರಿಗೂ ಗೊತ್ತು. ಮೊದಲು ಈ ಒಳಸಂಚು ಮಾಡಿದ್ದರಿಂದ ಅವರ ಮೇಲೆ ಕ್ರಮವಾಗಲಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದರು.

ಇದನ್ನೂ ಓದಿ: Prajwal Revanna Case: ವಿಡಿಯೋ ಕಿಂಗ್‌ಪಿನ್‌ ಕಾರ್ತಿಕ್‌ ಕಾಂಗ್ರೆಸ್‌ ಅಭ್ಯರ್ಥಿ ಜೊತೆ ಕ್ಲೋಸ್;‌ ʼಕೈʼವಾಡಕ್ಕೆ ಸಾಕ್ಷಿ ಫೋಟೋಗಳು ಇಲ್ಲಿವೆ!

ಸಿಎಂ, ಡಿಕೆಶಿ ಇನ್ವೆಸ್ಟಿಗೇಷನ್‌ ಟೀಮ್

ಪ್ರಜ್ವಲ್‌ ಮೇಲಿನ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ದೂರು ಸಿದ್ಧಪಡಿಸಿ ಹೊಳೆನರಸೀಪುರಕ್ಕೆ ಕಳಿಸಿದ್ದರು. ಬಳಿಕ ಎಸ್ಐಟಿ ತನಿಖೆಗೆ ಆದೇಶಿಸಿ ದೂರು ದಾಖಲು ಮಾಡಿಕೊಂಡಿದ್ದಾರೆ. ಇದನ್ನು ಒಪ್ಪೋಣ. ಆದರೆ ನಿಷ್ಪಕ್ಷಪಾತ ತನಿಖೆ ಆಗುತ್ತದೆ ಎಂದು ನಾನು ಭಾವಿಸಿದೆ. ಇಲ್ಲಾಗಿದ್ದೇನು? ಸಿಎಂ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್‌ ಟೀಂ, ಡಿ.ಕೆ. ಶಿವಕುಮಾರ್ ಇನ್ವೆಸ್ಟಿಗೇಷನ್‌ ಟೀಮ್ ಎಂದು ಮಾಡಿಕೊಂಡಿದ್ದಾರೆ. ಈ ಕೇಸ್‌ಗೆ ಸಂಬಂಧಪಟ್ಟಂತೆ ನಡೆದ ಕಾಲ್ ರೆಕಾರ್ಡಿಂಗ್ ಹೊರಗೆ ಬರಬೇಕು. ಯಾರು ಯಾರು? ಯಾರ ಜತೆ ಮಾತನಾಡಿದ್ದಾರೆ ಎಂಬುದೆಲ್ಲವೂ ಹೊರಬರಬೇಕು ಎಂದು ಹೇಳಿದ್ದರು.

Exit mobile version