Site icon Vistara News

ಬೆಂಗಳೂರಿಗೆ ರಾಷ್ಟ್ರಪತಿ ಕೋವಿಂದ್‌ ಆಗಮನ: ಇಂದು ಮಿಲಿಟರಿ ಶಾಲೆ ಅಮೃತ ಮಹೋತ್ಸವ

president arrived in bengaluru

ಬೆಂಗಳೂರು: ಎರಡು ದಿನಗಳ ಪ್ರವಾಸಕ್ಕಾಗಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಸೋಮವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದರು.

ವಿಶೇಷ ವಿಮಾನದ ಮೂಲಕ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿ ಅವರನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೊಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮತ್ತಿತರರ ಅಧಿಕಾರಿಗಳು ಸ್ವಾಗತಿಸಿದರು.

ಬೆಂಗಳೂರಿನ ರಾಷ್ಟ್ರೀಯ ಮಿಲಿಟರಿ ಶಾಲೆಯು ಸ್ಥಾಪನೆಯಾಗಿ 75 ವರ್ಷಗಳನ್ನು ಸಂಭ್ರಮಿಸುತ್ತಿದೆ. ಶಾಲೆಯ ಚಾಣಕ್ಯ ಆಡಿಟೋರಿಯಂನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮಗಳನ್ನು ರಾಮನಾಥ ಕೋವಿಂದ್‌ ಸೋಮವಾರ (ಜೂನ್‌ 13) ಉದ್ಘಾಟಿಸಲಿದ್ದಾರೆ.

ಬೆಂಗಳೂರಿನ ಕನಕಪುರ ರಸ್ತೆಯ ಸಮೀಪದಲ್ಲಿರುವ ವಸಂತಪುರದ ವೈಕುಂಠ ಬೆಟ್ಟದಲ್ಲಿ ಅಂತಾರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘ ( ಇಸ್ಕಾನ್‌ ) ನೂತನವಾಗಿ ನಿರ್ಮಿಸಿರುವ ರಾಜಾಧಿರಾಜ ‍ಶ್ರೀ ಗೋವಿಂದ ದೇವಾಲಯವನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಮಂಗಳವಾರ( ಜೂನ್‌ 14) ಲೋಕಾರ್ಪಣೆ ಮಾಡಲಿದ್ದಾರೆ.

ಇದನ್ನೂ ಓದಿ | ರಾಷ್ಟ್ರಪತಿ ಬೆಂಗಳೂರು ಪ್ರವಾಸ: ಭಾಗವಹಿಸುವ 2 ಕಾರ್ಯಕ್ರಮಗಳ ವಿವರ ಇಲ್ಲಿದೆ

Exit mobile version