ರಾಜಕೀಯ
K. Manju: ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಿಂದ ನಿರ್ಮಾಪಕ ಕೆ ಮಂಜು? ರಾಜಕೀಯ ಅಖಾಡಕ್ಕೆ ಎಂಟ್ರಿ?
ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗುವ ಬಗ್ಗೆ ಇದೀಗ ನಿರ್ಮಾಪಕ ಕೆ.ಮಂಜು (K. Manju) ಮಾತನಾಡಿದ್ದಾರೆ. ಪದ್ಮನಾಭ ನಗರ (Padmanabha Nagar) ವಿಧಾನಸಭಾ ಕ್ಷೇತ್ರದಿಂದ ಅವರು ಸ್ಪರ್ಧಿಸುವ ಸಾಧ್ಯತೆ ಇದೆ. ಈ ಬಗ್ಗೆ ಅವರು ಶೀಘ್ರದಲ್ಲೇ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.
ಬೆಂಗಳೂರು: ರಾಜ್ಯದ ರಾಜಕಾರಣಕ್ಕೆ ನಿರ್ಮಾಪಕ ಕೆ ಮಂಜು (K. Manju) ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗುವ ಬಗ್ಗೆ ಇದೀಗ ನಿರ್ಮಾಪಕ ಕೆ.ಮಂಜು ಮಾತನಾಡಿದ್ದಾರೆ. ಪದ್ಮನಾಭ ನಗರ (Padmanabha Nagar) ವಿಧಾನಸಭಾ ಕ್ಷೇತ್ರದಿಂದ ಅವರು ಸ್ಪರ್ಧಿಸುವ ಸಾಧ್ಯತೆ ಇದೆ. ಈ ಬಗ್ಗೆ ಅವರು ಶೀಘ್ರದಲ್ಲೇ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.
ರಾಜಕೀಯಕ್ಕೆ ಬರುತ್ತಿರುವ ಬಗ್ಗೆ ಕೆ.ಮಂಜು ಮಾತನಾಡಿ ʻʻರಾಜ್ಯ ರಾಜಕಾರಣ ನೋಡಿಕೊಂಡು ಬಂದಿದ್ದೇನೆ. ನನಗೆ ಜನಸೇವೆ ಮಾಡುವುದಕ್ಕೆ ಒಂದು ಅವಕಾಶ ಕೊಡಿ. ಪಕ್ಷದ ಬಗ್ಗೆ ನಾಯಕ ತೀರ್ಮಾನ ಮಾಡಿಕೊಂಡು, ಅವರ ಸಲಹೆ ಸೂಚನೆ ಮೇರೆಗೆ ಅನೌನ್ಸ್ ಮಾಡುತ್ತೇನೆ. ಒಕ್ಕಲಿಗ ಜನಾಂಗದಲ್ಲಿ ಜನರ ಸೇವೆ ಮಾಡಲು ಅವಕಾಶ ಕೊಡಬೇಕು. ಟಿಕೆಟ್ ತೆಗೆದುಕೊಳ್ಳುವುದು ಮುಖ್ಯವಲ್ಲ ಜನರ ಆಶೀರ್ವಾದ ನನ್ನ ಮೇಲೆ ಇರಬೇಕು. ಜೆಡಿಎಸ್ ಅಥವಾ ಕಾಂಗ್ರೆಸ್ ಪಕ್ಷಗಳಲ್ಲಿ ಯಾವುದಾದರೂ ಒಂದು ಪಕ್ಷದಲ್ಲಿ ನಿಂತು ಸ್ಪರ್ಧಿಸ್ತೇನೆ. ಜೆಡಿಎಸ್, ಕಾಂಗ್ರೆಸ್ ಎರಡು ಪಕ್ಷಗಳಲ್ಲಿ ಒಂದು ಪಕ್ಷ ನನ್ನ ಕೈ ಹಿಡಿಯುತ್ತದೆ. ಪದ್ಮನಾಭನಗರ ನಾಯಕರ ಜತೆ ಸಂಪರ್ಕದಲ್ಲಿ ಇದ್ದೀನೆʼʼಎಂದು ಹೇಳಿದರು.
ಇದನ್ನೂ ಓದಿ: JDS Hassan: ಹಾಸನ ವಿಧಾನಸಭಾ ಕ್ಷೇತ್ರ ಟಿಕೆಟ್: ಭವಾನಿ-ಸ್ವರೂಪ್ ವಿವಾದದ ನಡುವೆ ಕೆ.ಎಂ. ರಾಜೇಗೌಡ ಅಭ್ಯರ್ಥಿ?
ಬಿಜೆಪಿಯ ಆರ್. ಅಶೋಕ್ ಅವರ ಪ್ರಾಬಲ್ಯ ಇರುವಂತಹ ಕ್ಷೇತ್ರ ಇದಾಗಿದ್ದು, ಒಂದು ವೇಳೆ ಕೆ. ಮಂಜು ಅವರು ಪದ್ಮನಾಭ ನಗರದಿಂದ ಚುನಾವಣೆಗೆ ಸ್ಪರ್ಧಿಸಿದ್ದೇ ಆದರೆ ಪೈಫೋಟಿ ಬಲವಾಗಲಿದೆ. ಅಶೋಕ್ ವಿರುದ್ಧ ಕಾಂಗ್ರೆಸ್ನಿಂದ ಪಿಜಿಆರ್ ಸಿಂಧ್ಯಾ ಅವರು ಸ್ಪರ್ಧಿಸುವ ಸಾಧ್ಯತೆ ದಟ್ಟವಾಗಿದೆ. ಜೆಡಿಎಸ್ನಿಂದ ಕೆ. ಮಂಜು ಸ್ಪರ್ಧಿಸಿದರೆ ಮೂರೂ ಪಕ್ಷಗಳ ನಡುವೆ ಹಣಾಹಣಿ ಜೋರಾಗಲಿದೆ. ರಾಜಕೀಯ ಅಖಾಡಟಕ್ಕೆ ಕೆ. ಮಂಜು ಬರಲಿದ್ದಾರಾ ಎಂಬುದು ಕಾದು ನೋಡಬೇಕಿದೆ.
ಕರ್ನಾಟಕ
ರಾಜಾಪುರ ಬ್ಯಾರೇಜ್‌ನಿಂದ 1500 ಕ್ಯುಸೆಕ್ ನೀರು ಬಿಡುಗಡೆ; ಕೃಷ್ಣಾ ನದಿಗೆ ಮತ್ತೆ ಜೀವಕಳೆ
Krishna river: ಉತ್ತರ ಕರ್ನಾಟಕ ಭಾಗದಲ್ಲಿ ಕುಡಿಯುವ ನೀರಿನ ಅಭಾವದ ಹಿನ್ನೆಲೆಯಲ್ಲಿ ಕೃಷ್ಣಾನದಿಗೆ 5 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಮಾಡಿದ್ದ ಮನವಿಗೆ ಮಹಾ ಸರ್ಕಾರ ಸ್ಪಂದಿಸಿದೆ.
ಬೆಳಗಾವಿ: ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ ಕೃಷ್ಣಾ ನದಿಗೆ 1500 ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಪಕ್ಷಾತೀತವಾಗಿ ಮಹಾ ಸರ್ಕಾರಕ್ಕೆ ನೀರು ಬಿಡುವಂತೆ ಮನವಿ ರಾಜ್ಯದ ಜನಪ್ರತಿನಿಧಿಗಳು ಮನವಿ ಮಾಡಿದ ಹಿನ್ನೆಲೆಯಲ್ಲಿ ನೀರು ಬಿಡುಗಡೆಯಾಗಿದೆ. ಇದರಿಂದ ಬತ್ತುವ ಹಂತ ತಲುಪಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ ಬಂದಿದೆ.
ಬೇಸಿಗೆ ಹಿನ್ನೆಲೆಯಲ್ಲಿ ಬೆಳಗಾವಿ ಸೇರಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳ ಜನರು ಕುಡಿಯುವ ನೀರಿಲ್ಲದೆ ಹೈರಾಣಾಗಿದ್ದರು. ಹೀಗಾಗಿ ಕೃಷ್ಣಾನದಿಗೆ 5 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರು ಮೇ 31ರಂದು ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿದ್ದರು. ಹೀಗಾಗಿ ಏಕನಾಥ್ ಶಿಂಧೆ ಸರ್ಕಾರವು, ರಾಜಾಪುರ ಬ್ಯಾರೇಜ್‌ನಿಂದ 1500 ಕ್ಯುಸೆಕ್ ನೀರು ಬಿಡುಗಡೆ ಮಾಡಿದೆ.
ಮಹಾರಾಷ್ಟ್ರದಿಂದ ಕೃಷ್ಣೆಗೆ ನೀರು ಬಿಟ್ಟ ಹಿನ್ನೆಲೆಯಲ್ಲಿ ನೀರಿಲ್ಲದೆ ಹೈರಾಣಾಗಿದ್ದ ಬೆಳಗಾವಿ ಭಾಗದ ನದಿ ತೀರದ ಜನರು ನಿರಾಳರಾಗಿದ್ದಾರೆ.
ಇದನ್ನೂ ಓದಿ | Loksabha 2024: ಹೇ ಕೂತ್ಕೊಳಪ್ಪ, ಮೋದಿ ಸೋತಾಗ ಗೊಬ್ಬರದ ರೇಟ್ ಕಡಿಮೆ ಮಾಡ್ತೀವಿ: ಅಭಿಮಾನಿಗೆ ರೇಗಿದ ಸಿಎಂ ಸಿದ್ದರಾಮಯ್ಯ
Viral news: ಮಳೆ ಬರದ ಊರಿನಲ್ಲಿ ಒಲ್ಲದ ವಧು- ವರನಿಗೆ ಕಂಕಣಯೋಗ!
ಬೆಳಗಾವಿ: ಮುಂಗಾರು ತಡವಾಗಿರುವುದರಿಂದ ಉತ್ತರ ಕರ್ನಾಟಕ ನೀರಿಗಾಗಿ ಪರಿತಪಿಸುತ್ತಿದೆ. ಹೀಗಾಗಿ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದವರು ಮಳೆ ಬರಲಿ ಎಂದು ಕತ್ತೆಗಳಿಗೆ ಮದುವೆ (donkey marriage) ಮಾಡಿಸಿದ್ದು, ವೈರಲ್ (Viral news) ಆಗಿದೆ.
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನಲ್ಲಿ ಮಳೆಯಾಗದೇ ಕುಡಿಯುವ ನೀರಿಗೆ ಹಾಹಾಕಾರ ಎದ್ದಿದೆ. ಬರಗಾಲದ ಆತಂಕವೂ ಮೂಡಿದೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ವರುಣನ ಆಗಮನಕ್ಕೆ ಪ್ರಾರ್ಥಿಸಿ ಶಾಸ್ತ್ರೋಕ್ತವಾಗಿ ಕತ್ತೆಗಳಿಗೆ ಮದುವೆ ಮಾಡಿಸಲಾಯಿತು.
ಇದನ್ನೂ ಓದಿ | Free Bus: ನಾಳೆ ಮಹಿಳೆಯರಲ್ಲಿ ‘ಶಕ್ತಿ’ ಸಂಚಾರ! ಉಚಿತ ಪ್ರಯಾಣಕ್ಕೆ ಇರಲಿ ಈ ದಾಖಲೆ, ಸ್ಮಾರ್ಟ್‌ಕಾರ್ಡ್ ಸಿಗೋದು ಯಾವಾಗ?
ಕತ್ತೆಗಳಿಗೆ ಮದುವೆ ಮಾಡಿಸಿದರೆ ಮಳೆ ಬರುತ್ತೆ ಎಂಬ ನಂಬಿಕೆ ಈ ಭಾಗದ ರೈತಾಪಿ ಜನರಲ್ಲಿದೆ. ಈ ಹಿಂದೆ ಹೀಗೆ ಮಾಡಿದಾಗ ಮಳೆ ಬಂದ ನಿದರ್ಶನಗಳನ್ನು ಜನ ನೆನೆಯುತ್ತಾರೆ. ಈ ಹಿನ್ನೆಲೆಯಲ್ಲಿ, ಕತ್ತೆಗಳಿಗೆ ಮದುವೆ ಮಾಡಿಸಿ ದೇವರಲ್ಲಿ ಪ್ರಾರ್ಥನೆ ಜನ ಮಾಡಿದ್ದಾರೆ. ಕತ್ತೆಗಳಿಗೆ ಬಿಳಿ ಪಂಚೆ, ಸೀರೆ ತೊಡಿಸಿ ತಿಲಕವಿಟ್ಟು ತಾಳಿ ಕಟ್ಟಿಸಿ ವಾದ್ಯಮೇಳದೊಂದಿಗೆ ಮದುವೆ ಗ್ರಾಮಸ್ಥರು ಮಾಡಿದರು. ಕತ್ತೆಗಳು ನಾಚಿಕೊಂಡು ನಿಂತಿದ್ದವು!
ಕರ್ನಾಟಕ
Siddaramaiah: ಡೋಂಟ್ ಡೂ ದಟ್!: ಮೈಸೂರು ಪೊಲೀಸರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದೇಕೆ ಸಿಎಂ ಸಿದ್ದರಾಮಯ್ಯ?
ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಕಾರಿನಿಂದ ಇಳಿದ ಕೂಡಲೆ ಪೊಲೀಸರನ್ನು ಹತ್ತಿರಕ್ಕೆ ಕರೆದರು. ಕೋಪಗೊಂಡವರಾಗಿಯೇ, ಜೀರೊ ಟ್ರಾಫಿಕ್ ಏಕೆ ಮಾಡಿದಿರಿ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
ಮೈಸೂರು: ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಸಿಎಂ ಆದ ನಂತರದಲ್ಲಿ, ತಮ್ಮ ಪ್ರಯಾಣಕ್ಕೆ ಜೀರೊ ಟ್ರಾಫಿಕ್ ಮಾಡುವುದು ಬೇಡ ಎಂದು ಪೊಲೀಸರಿಗೆ ತಿಳಿಸಿದ್ದರು. ಆದರೂ ಶನಿವಾರ ಮೈಸೂರಿನಲ್ಲಿ ಸಿದ್ದರಾಮಯ್ಯ ಪ್ರಯಾಣಕ್ಕೆ ಜೀರೊ ಟ್ರಾಫಿಕ್ ಮಾಡಿದ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ.
ಸಿಎಂ ಆದ ನಂತರ ವರುಣ ಕ್ಷೇತ್ರಕ್ಕೆ ಸಿದ್ದರಾಮಯ್ಯ ಮೊದಲ ಬಾರಿಗೆ ಭೇಟಿ ನೀಡಿದರು. ಅಲ್ಲಿ ಕೃತಜ್ಞತಾ ಸಮಾವೇಶನವನ್ನು ಮುಗಿಸಿ ಮೈಸೂರು ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯತ್ತ ಸಾಗಿದರು. ಮೈಸೂರು ವಿಮಾನ ನಿಲ್ದಾಣದಿಂದ ಜಿಲ್ಲಾ ಪಂಚಾಯಿತಿ ಕಚೇರಿವರೆಗೂ ಪೊಲೀಸರು ಜೀರೊ ಟ್ರಾಫಿಕ್ ಮಾಡಿದ್ದರು.
ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಕಾರಿನಿಂದ ಇಳಿದ ಕೂಡಲೆ ಪೊಲೀಸರನ್ನು ಹತ್ತಿರಕ್ಕೆ ಕರೆದರು. ಕೋಪಗೊಂಡವರಾಗಿಯೇ, ಜೀರೊ ಟ್ರಾಫಿಕ್ ಏಕೆ ಮಾಡಿದಿರಿ? ಎಂದು ಪ್ರಶ್ನಿಸಿದರು. ಯಾರೂ ಪೊಲೀಸರು ಮಾತನಾಡಲಿಲ್ಲ. ನನ್ನ ಸಂಚಾರಕ್ಕೆ ಜೀರೊ ಟ್ರಾಫಿಕ್ ಬೇಡ ಎಂದು ಈಗಾಗಲೆ ಹೇಳಿದ್ದೇನೆ. ಅದಾದರೂ ಗೊತ್ತೋ ಇಲ್ಲವೋ ನಿಮಗೆ? ಎಂದು ಗದರಿದರು. ಸ್ವಲ್ಪ ಹೊತ್ತು ಮೌನವಾಗಿದ್ದು, don’t do that ಎನ್ನುತ್ತಾ ಸಭೆಯತ್ತ ಸಾಗಿದರು.
ನಂತರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಸಚಿವರಾದ ಹೆಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್, ಶಾಸಕರಾದ ಜಿ.ಟಿ. ದೇವೇಗೌಡ, ತನ್ವೀರ್‌ಸೇಠ್, ಶ್ರೀವತ್ಸ, ರವಿಶಂಕರ್, ಅನಿಲ್ ಚಿಕ್ಕಮಾದು, ಜಿ.ಡಿ.ಹರೀಶ್‌ಗೌಡ, ವಿಧಾನ ಪರಿಷತ್ ಸದಸ್ಯ ತಿಮ್ಮಯ್ಯ ಸೇರಿ ಹಲವರು ಭಾಗಿಯಾಗಿದ್ದರು.
ಇದನ್ನೂ ಓದಿ: Free Bus Service: ನನ್ ಒಂದೇ ಓಟಲ್ಲ ಸ್ವಾಮಿ, ನಮ್ ಫ್ಯಾಮಿಲಿದೆಲ್ಲ ಇದೆ ಹುಷಾರ್: ಸಿದ್ದರಾಮಯ್ಯಗೆ ಆಟೋ ಡ್ರೈವರ್ ವಾರ್ನಿಂಗ್
ಕರ್ನಾಟಕ
Kannada and Culture: ಕುವೆಂಪು ಟ್ಯಾಬ್ಲೊ, ಬೆಟಗೇರಿ ಸ್ಮಾರಕ…: 24 ಟ್ರಸ್ಟ್‌ಗಳಿಂದ ಸಚಿವರಿಗೆ ಸಲಹೆಗಳ ಮಹಾಪೂರ
ಟ್ರಸ್ಟ್ ಗಳ ಮನವಿಗಳನ್ನು ಸಕಾರಾತ್ಮಕ ದೃಷ್ಟಿಯಿಂದಲೇ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುತ್ತೇನೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದರು
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಗೆ ಬರುವ ವಿವಿಧ ಟ್ರಸ್ಟ್‌ಗಳ ಕಾರ್ಯನಿರ್ವಹಣೆಗೆ ಹೆಚ್ಚಿನ ಬಲ ತುಂಬಲು ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಕನ್ನಡ ಭವನದ ʼಅಂತರಂಗʼ ಸಭಾಂಗಣದಲ್ಲಿ ವಿವಿಧ ಟ್ರಸ್ಟ್ ಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳೊಂದಿಗೆ ನಡೆಸಿದ ಸಮಾಲೋಚನಾ ಸಭೆಯನ್ನು ಸಚಿವರು ಭರವಸೆ ನೀಡಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿ 24 ಟ್ರಸ್ಟ್ ಗಳು ಕಾರ್ಯ ನಿರ್ವಹಿಸುತ್ತಿದ್ದು ಪ್ರತಿವರ್ಷ ಈ ಟ್ರಸ್ಟ್ ಗಳ ಕಾರ್ಯ ಚಟುವಟಿಕೆಗಾಗಿ ಅನುದಾನ ಒದಗಿಸಲಾಗುತ್ತಿದೆ. ಈ ಟ್ರಸ್ಟ್ ಗಳು ನಡೆಸುವ ಕಾರ್ಯ ಚಟುವಟಿಕೆಗಳು ಮತ್ತು ಅವುಗಳ ಕುಂದು ಕೊರತೆ ಹಾಗೂ ಅವುಗಳ ಪರಿಹಾರಗಳನ್ನು ಕುರಿತಂತೆ ಈ ಸಮಾಲೋಚನಾ ಸಭೆಯಲ್ಲಿ ವಿಸ್ತೃತವಾದ ಚರ್ಚೆ ನಡೆಯಿತು.
ಪ್ರತಿಯೊಂದು ಟ್ರಸ್ಟ್ ಗಳ ಬಗ್ಗೆ ಮಾಹಿತಿ ಪಡೆದ ಸಚಿವ ಶಿವರಾಜ ತಂಗಡಗಿ, ಜಿಲ್ಲಾ ಪ್ರವಾಸ ಮಾಡುವ ವೇಳೆ ಆಯಾ ಜಿಲ್ಲೆಗಳಲ್ಲಿರುವ ಟ್ರಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲಿಸುವುದಾಗಿ ಭರವಸೆ ನೀಡಿದರು. ಟ್ರಸ್ಟ್‌ಗಳ ಸದಸ್ಯರು ಸರ್ಕಾರಕ್ಕೆ ಅನೇಕ ಸಲಹೆಗಳನ್ನು ನೀಡಿದರು.
- ಬೆಟಗೇರಿ ಕೃಷ್ಣಶರ್ಮರ ಮನೆಯನ್ನು ಸ್ಮಾರಕವಾಗಿಸಬೇಕು.
- ಗುಬ್ಬಿ ವೀರಣ್ಣ ರಂಗಮಂದಿರಕ್ಕೆ ಅನುದಾನ ಹೆಚ್ಚಿಸಬೇಕು.
- ಹಾಲಬಾವಿ ಟ್ರಸ್ಟ್‌ನವರು ಹಾಲಭಾವಿ ಅವರ ಹೆಸರಿನಲ್ಲಿ ಆರ್ಟ್ ಗ್ಯಾಲರಿ ನಿರ್ಮಾಣ ಮಾಡಬೇಕು ಎಂಬ ಬೇಡಿಕೆಯನ್ನು ಸಚಿವರ ಮುಂದಿಟ್ಟರು.
- ನಿಜಲಿಂಗಪ್ಪ ಟ್ರಸ್ಟ್‌ಗೆ ಹೆಚ್ಚಿನ ಅನುದಾನ ನೀಡಬೇಕು
- ಕುವೆಂಪು ಅವರ ಮನೆಯನ್ನು ರಾಷ್ಟ್ರದ ಅತ್ಯುತ್ತಮ ಕವಿಮನೆಯಯಾಗಿದ್ದು, ಇಡೀ ರಾಷ್ಟ್ರದ ಗಮನ ಸೆಳೆಯುವಂತೆ ಮಾಡಲು ಗಣರಾಜ್ಯೋತ್ಸವ ಹಾಗೂ ಸ್ವಾತಂತ್ರ್ಯೋತ್ಸವದ ಸಂದರ್ಭಗಳಲ್ಲಿ ಮತ್ತು ದಸರಾ ಪ್ರದರ್ಶನಗಳಲ್ಲಿ ಕುವೆಂಪು ಅವರ ಮನೆಯ ಟ್ಯಾಬ್ಲೋ ಮಾಡಿ ಪ್ರದರ್ಶಿಸಲು ಕ್ರಮ ಕೈಗೊಳ್ಳಬೇಕು
- ಲಾಲ್ ಬಾಗ್ ನಲ್ಲಿ ಪ್ರತಿವರ್ಷ ಆಯೋಜಿಸುವ ಪುಷ್ಪ ಪ್ರದರ್ಶನದಲ್ಲಿ ಕುವೆಂಪು ಅವರ ಮನೆಯ ಮಾದರಿಯನ್ನು ಮಾಡಿದರೆ ಅದು ಅಸಂಖ್ಯ ಜನರ ಗಮನ ಸೆಳೆಯುತ್ತದೆ
- ಬೇಂದ್ರೆ ಅವರ ಜನ್ಮದಿನವನ್ನು ವಿಶ್ವಕವಿ ದಿನಾಚರಣೆ ಎಂದು ಆಚರಿಸಬೇಕು
ಎಲ್ಲ ಟ್ರಸ್ಟ್ ಗಳ ಮನವಿಗಳನ್ನು ಸಕಾರಾತ್ಮಕ ದೃಷ್ಟಿಯಿಂದಲೇ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುತ್ತೇನೆ ಎಂದು ಸಚಿವರು ತಿಳಿಸಿದರು. ಟ್ರಸ್ಟ್ ಗಳ ಕಾರ್ಯನಿರ್ವಹಣೆಗೆ ಅಗತ್ಯವಾದ ಅನುದಾನ ಹೆಚ್ಚಿಸಲು ತಾವು ಮುಂಬರುವ ಆಯವ್ಯಯದಲ್ಲಿ ಹೆಚ್ಚಿನ ಅನುದಾನವನ್ನು ಕೊಡುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ ಎಂದು ತಂಗಡಗಿ ಭರವಸೆ ನೀಡಿದರು.
ಇದನ್ನೂ ಓದಿ: Koppala News: ದಸರಾ ಮಾತ್ರವಲ್ಲ, ಕನ್ನಡ ತಾಯಿ ಭುವನೇಶ್ವರಿ ಮೂಲ ಹಂಪಿ: ಶಾಸಕ ಗಾಲಿ ಜನಾರ್ದನ ರೆಡ್ಡಿ
ಕರ್ನಾಟಕ
Free Bus Service: ನನ್ ಒಂದೇ ಓಟಲ್ಲ ಸ್ವಾಮಿ, ನಮ್ ಫ್ಯಾಮಿಲಿದೆಲ್ಲ ಇದೆ ಹುಷಾರ್: ಸಿದ್ದರಾಮಯ್ಯಗೆ ಆಟೋ ಡ್ರೈವರ್ ವಾರ್ನಿಂಗ್
ಜೂನ್ 11ರಂದು ರಾಜ್ಯಾದ್ಯಂತ ಶಕ್ತಿ ಯೋಜನೆಗೆ ಚಾಲನೆ ಸಿಗಲಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಯೋಜನೆಗೆ ಚಾಲನೆ ನೀಡಲಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರ ಜಾರಿ ಮಾಡಲು ಹೊರಟಿರುವ ಗ್ಯಾರಂಟಿ ಯೋಜನೆಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಸೇವೆ ಜೂನ್ 11ರ ಭಾನುವಾರದಿಂದ ಜಾರಿಗೆ ಬರಲಿದೆ. ಆದರೆ ಬೆಂಗಳೂರಿನಲ್ಲಿ ಈ ಯೋಜನೆಗೆ ಆಟೊ ಚಾಲಕರಿಂದ ವಿರೋಧ ವ್ಯಕ್ತವಾಗಿದೆ.
ಈ ಕುರಿತು ವಿಸ್ತಾರ ನ್ಯೂಸ್ ಜತೆಗೆ ಅನೇಕ ಆಟೊ ಚಾಲಕರು ಪ್ರತಿಕ್ರಿಯಿಸಿದ್ದಾರೆ. ಪ್ರತಿ ಸರ್ಕಾರಕ್ಕೆ ನಮ್ಮ ಬೆಂಬಲ ಇರುತ್ತದೆ. ಬಿಜೆಪಿ ಸರ್ಕಾರ ನಮಗೆ ಏನೂ ಮಾಡಲಿಲ್ಲ. ಅವರಿಗೆ ಏನಾಗಿದೆ ಎಲ್ಲರಿಗೂ ಗೊತ್ತಾಗಿದೆ. ನೀವು ಏನು ಮಾಡಿದರೂ ಚಾಲಕರ ಪರವಾಗಿರಿ. ಚಾಲಕರದ್ದು ಒಂದು ಓಟು ಮಾತ್ರ ಅಲ್ಲ. ನಮ್ಮ ಹೆಂಡತಿ ಮಕ್ಕಳು, ತಂದೆ ತಾಯಿಯೂ ಇದ್ದಾರೆ ಎಂದಿದ್ದಾರೆ.
ಕೆಎಸ್‌ಆರ್‌ಟಿಸಿ ಚಾಲಕರಿಗೂ ಸೌಲಭ್ಯ ಕೊಡಿ. ಫ್ರೀ ಕೊಡ್ತೀವಿ ಎಂದು ಹೇಳುತ್ತಿದ್ದೀರ, ಜನರ ದುಡ್ಡು ಕೊಡುತ್ತೀರ, ಕೊಡಿ. 75% ಮಹಿಳೆಯರು ಆಟೊದಲ್ಲಿ ಓಡಾಡುತ್ತಾರೆ. ಈಗ ಅವರೆಲ್ಲರೂ ಬಸ್‌ನಲ್ಲಿ ಓಡಾಡಿದರೆ ಆಟೊದವರಿಗೆ 75% ನಷ್ಟ ಆಗುತ್ತದೆ. ಉಚಿತ ಬಸ್ ಸೇವೆಯಿಂದ ಬಡವರಿಗೆ ಅನುಕೂಲ ಆಗುತ್ತದೆ, ಅದರಲ್ಲಿ ನನ್ನ ಹೆಂಡತಿ, ತಾಯಿಗೂ ಅನುಕೂಲ ಆಗುತ್ತದೆ. ಆದರೆ ಆಟೊ ಚಾಲಕರಿಗೆ ಹೊಡೆತ ಬೀಳುವುದು ಖಚಿತ. ಇದಕ್ಕೆ ಪರಿಹಾರ ಏನು ಗೊತ್ತಾಗುತ್ತಿಲ್ಲ. ಸರ್ಕಾರವೇ ಇದರ ಬಗ್ಗೆ ಯೋಚನೆ ಮಾಡಿ. ಈ ಯೋಜನೆ ಘೋಷಣೆ ಆದಾಗಿನಿಂದಲೇ ನಮಗೆ ಬಾಡಿಗೆ ಕಡಿಮೆ ಆಗಿದೆ ಎಂದಿದ್ದಾರೆ. ಆಟೊ ಚಾಲಕರ ಪ್ರತಿಕ್ರಿಯೆಗಳ ವಿಡಿಯೋ ಈ ಕೆಳಗಿದೆ…
ಜೂನ್ 11ರಂದು ರಾಜ್ಯಾದ್ಯಂತ ಶಕ್ತಿ ಯೋಜನೆಗೆ ಚಾಲನೆ ಸಿಗಲಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಯೋಜನೆಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ವಿಧಾನಸೌಧದ ಬಳಿ ಯೋಜನೆಗೆ ಚಾಲನೆ ನೀಡಿ ಸಿದ್ದರಾಮಯ್ಯ ಮಾತನಾಡಲಿದ್ದಾರೆ.
ಆದರೆ ಅದಕ್ಕೂ ಮುನ್ನ ಕೆಂಪೇಗೌಡ ಬಸ್ ನಿಲ್ದಾಣದಿಂದ(ಮೆಜೆಸ್ಟಿಕ್) ವಿಧಾನಸೌಧದವರೆಗೆ ಮಾರ್ಗ ಸಂಖ್ಯೆ 43ರಲ್ಲಿ ಸಿದ್ದರಾಮಯ್ಯ ಬಸ್‌ನಲ್ಲೇ ಚಲಿಸಲಿದ್ದಾರೆ. ಈ ವೇಳೆ ಉಚಿತ ಟಿಕೆಟ್‌ಗಳನ್ನು ಮಹಿಳೆಯರಿಗೆ ಸಿದ್ದರಾಮಯ್ಯ ನೀಡಲಿದ್ದಾರೆ. ಈ ರೀತಿ ವಿಧಾನಸೌಧದವರೆಗೂ ಕಂಡಕ್ಟರ್ ಆಗಿ ಕೆಲಸ ಮಾಡಲಿದ್ದಾರೆ.
ಇದನ್ನೂ ಓದಿ: Congress Guarantee: ಪಾರ್ಟ್ ಟೈಂ ಬಸ್ ಕಂಡಕ್ಟರ್ ಆಗಲಿದ್ದಾರೆ ಸಿಎಂ ಸಿದ್ದರಾಮಯ್ಯ!
-
ಸುವಚನ16 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಪ್ರಮುಖ ಸುದ್ದಿ16 hours ago
Horoscope Today: ಈ ರಾಶಿಯವರು ಸಾಲ ಕೊಟ್ಟಿದ್ದರೆ ಇಂದು ಹಣ ಹಿಂದಿರುಗುತ್ತದೆ!
-
ಪ್ರಮುಖ ಸುದ್ದಿ22 hours ago
ವಿಸ್ತಾರ ಸಂಪಾದಕೀಯ: ಪಠ್ಯ ಪುಸ್ತಕ ಪರಿಷ್ಕರಣೆ ಆಟ, ವಿದ್ಯಾರ್ಥಿಗಳಿಗೆ ಸಂಕಟ
-
ಕರ್ನಾಟಕ22 hours ago
Bellary News: ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಸಾವು
-
ಅಂಕಣ14 hours ago
ವಿಸ್ತಾರ ಅಂಕಣ: ಪಠ್ಯ ಪುಸ್ತಕ ಪರಿಷ್ಕರಣೆ ಎಂದರೆ ಮಕ್ಕಳ ಆಟ ಎಂದುಕೊಂಡಿದೆಯೇ ಸರ್ಕಾರ?
-
ದೇಶ23 hours ago
ಒಡಿಶಾ ರೈಲು ದುರಂತದ ಶವಗಳನ್ನು ಇರಿಸಿದ್ದ ಶಾಲೆಗೆ ಬರಲು ಹೆದರಿದ ಮಕ್ಕಳು; ಕಟ್ಟಡ ನೆಲಸಮ
-
ಕ್ರಿಕೆಟ್11 hours ago
Viral News: ಲಬುಶೇನ್ರನ್ನು ನಿದ್ರೆಯಿಂದ ಬಡಿದೆಬ್ಬಿಸಿದ ಸಿರಾಜ್; ಸಖತ್ ಮಜವಾಗಿದೆ ವಿಡಿಯೊ
-
ಕರ್ನಾಟಕ23 hours ago
300ರಿಂದ 1800 ರೂ.ಗೆ ಜಂಪ್; ಕರೆಂಟ್ ಬಿಲ್ ಕಟ್ಟೋದಿಲ್ಲ, ಏನಾದ್ರೂ ಆಗ್ಲಿ ಎಂದ ಮಹಿಳೆಯರು!