ಎಂ.ಬಿ ಪಾಟೀಲ್ : ಇವರ ಪೂರ್ಣ ಹೆಸರು ಮಲ್ಲನಗೌಡ ಬಸನಗೌಡ ಪಾಟೀಲ. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಲ್ಲಿ ಇವರು ಪ್ರಮುಖಕರು. ಈ ಬಾರಿಯ ಚುನಾವಣೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನೆಡೆಸಿದವರು. ವಿಜಯಪುರ ಜಿಲ್ಲೆ ಬಬಲೇಶ್ವರ ಎಂ.ಬಿ. ಪಾಟೀಲ್ (M.B.Patil) ಅವರ ಕಾರ್ಯಕ್ಷೇತ್ರ. ಈ ಭಾಗದಲ್ಲಿ ಇವರೇ ಕಾಂಗ್ರೆಸ್‌ನ ಪ್ರಭಾವಶಾಲಿ ನಾಯಕರು.
ಸಿವಿಲ್ ಎಂಜಿನಿಯರಿಂಗ್ ಪದವೀಧರರಾದ ಎಂ.ಬಿ.ಪಾಟೀಲ್ ಹುಟ್ಟಿದ್ದು ವಿಜಯಪುರದ ತಾಲೂಕಿನ ತೊರವಿಯಲ್ಲಿ. ತಮ್ಮ 27ನೇ ವಯಸ್ಸಿನಲ್ಲಿಯೇ (1991ರಲ್ಲಿ) ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದ್ದರು. ತ್ರಿಕೋಟಾ ಕ್ಷೇತ್ರದ ಉಪಚುನಾವಣೆಯಲ್ಲಿ ಮೊದಲ ಬಾರಿಗೆ ಗೆದ್ದಿದ್ದರು. ಆ ನಂತರ 1998 ರಲ್ಲಿ ವಿಜಯಪುರ ಲೋಕಸಭಾ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿ ಆಯ್ಕೆಯಾಗಿದ್ದರು. 2004 ರಿಂದ ಸತತವಾಗಿ ಗೆಲ್ಲುತ್ತಲೇ (ಐದು ಬಾರಿ) ಬಂದಿದ್ದಾರೆ. 2013ರಲ್ಲಿ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಜಲಸಂಪನ್ಮೂಲ ಸಚಿವರಾಗಿ ಅತ್ಯುತ್ತಮವಾಗಿ ಕೆಲಸ ಮಾಡಿದ್ದಾರೆ. ಹಲವಾರು ಏತ ನೀರಾವರಿ ಯೋಜನೆಗಳನ್ನು ರೂಪಿಸಿ ಗಮನ ಸೆಳೆದಿದ್ದರು. ನಂತರ 2018 ರಲ್ಲಿ ರಚನೆಯಾದ ಸಮ್ಮಿಶ್ರ ಸರ್ಕಾರಗದಲ್ಲಿ ಗೃಹ ಸಚಿವರಾಗಿಯೂ ಕೆಲಸ ಮಾಡಿದ್ದಾರೆ.
ಪರಿಸರದ ಬಗ್ಗೆ ಅಪಾರದವಾದ ಕಾಳಜಿ ಹೊಂದಿರುವ ಎಂ.ಬಿ.ಪಾಟೀಲ್ ಬರಡು ಜಾಗದಲ್ಲಿ ಮರಗಳನ್ನು ಬೆಳೆಸುವ ಆಂದೋಲನ ನಡೆಸುತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಅವರು ಬಿಎಲ್‌ಡಿಇ ಸಂಸ್ಥೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆಶಾ ಪಾಟೀಲರವರನ್ನು ಮದುವೆಯಾಗಿರುವ ಎಂ.ಬಿ.ಪಾಟೀಲರಿಗೆ ಬಸನಗೌಡ ಹಾಗೂ ಧ್ರುವ ಎಂಬ ಇಬ್ಬರು ಮಕ್ಕಳಿದ್ದಾರೆ. ಇವರ ಕುಟುಂಬ ವಿಜಯಪುರದಲ್ಲಿ ವಾಸವಾಗಿದೆ.
ರಾಜಕೀಯ ಬದುಕಿನ ಹಿನ್ನೋಟ…
1991ರಲ್ಲಿ ಬಿ.ಎಂ.ಪಾಟೀಲರು ನಿಧನರಾದಾಗ, ತೆರವಾದ ಸ್ಥಾನಕ್ಕೆ 27ನೇ ವಯಸ್ಸಿನಲ್ಲಿ ತಿಕೋಟಾ ಕ್ಷೇತ್ರದ ಉಪಚುನಾವಣೆಯಲ್ಲಿ ಎಂ.ಬಿ.ಪಾಟೀಲರು ಸ್ಪರ್ಧಿಸಿ ಪ್ರಥಮ ಬಾರಿಗೆ ಬಾರಿಗೆ ವಿಧಾನಸಭೆ ಪ್ರವೇಶಿಸಿದರು.
1994 ಮತ್ತು 1999ರಲ್ಲಿ ನಡೆದ ತಿಕೋಟಾ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಶಿವಾನಂದ ಪಾಟೀಲರ ವಿರುದ್ಧ ಸೋತರು.
1998ರಲ್ಲಿ ವಿಜಯಪುರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಲೋಕಸಭೆ ಸ್ಪರ್ಧಿಸಿ ಆಯ್ಕೆಯಾಗಿದ್ದರು.
2004ರಲ್ಲಿ ತಿಕೋಟಾ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಎರಡನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದರು.
2008, 2013ಮತ್ತು 2018ರಲ್ಲಿ ವಿಜಯಪುರ ಜಿಲ್ಲೆಯ ಬಬಲೇಶ್ವರ ವಿಧಾನ ಸಭಾ ಕ್ಷೇತ್ರದಿಂದ ಹ್ಯಾಟ್ರಿಕ್ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
2013ರಲ್ಲಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದರು.
2018ರಲ್ಲಿ ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ಗೃಹ ಸಚಿವರಾಗಿದ್ದರು.
ಇದಲ್ಲದೆ ಎಐಸಿಸಿ, ಕೆಪಿಸಿಸಿ ಸಮನ್ವಯ ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ.
ಇದನ್ನೂ ಓದಿ : DK Shivakumar Profile : ರಾಜ್ಯ ಕಾಂಗ್ರೆಸ್‌ಗೆ ಬಲ ತುಂಬಿದ ಬಲಿಷ್ಠ ನಾಯಕ ಡಿ ಕೆ ಶಿವಕುಮಾರ್; ಇಲ್ಲಿದೆ ಅವರ ಜೀವನಚಿತ್ರ