Site icon Vistara News

Rajya Sabha Election: ಕಾಂಗ್ರೆಸ್‌ನ ಮೂರೂ ಅಭ್ಯರ್ಥಿಗಳು ಗೆಲ್ಲುತ್ತಾರೆ: ಸಿಎಂ ಸಿದ್ದರಾಮಯ್ಯ

Rajya Sabha election All three Congress candidates will win says CM Siddaramaiah

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ (Rajya Sabha Election) ಕಾಂಗ್ರೆಸ್‌ನ ಅಜಯ ಮಾಕನ್, ಚಂದ್ರಶೇಖರ್ ಹಾಗೂ ಸೈಯ್ಯದ್ ನಾಸಿರ್ ಹುಸೇನ್, ಮೂರೂ ಅಭ್ಯರ್ಥಿಗಳು ಸುಲಭವಾಗಿ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಆಮಿಷಗಳು ಹಾಗೂ ಬೆದರಿಕೆ ಹಾಕಿದ್ದರಿಂದ ಒಟ್ಟಿಗಿದ್ದು ಮತ ಚಲಾವಣೆ ಮಾಡಲಾಗಿದೆ. ಚುನಾವಣೆಗೆ ನಿಲ್ಲುವವರೆಲ್ಲಾ ಗೆಲ್ಲುತ್ತೇವೆ ಎಂದೇ ಹೇಳುವುದು. ಸೋಲುತ್ತೇವೆ ಎಂದು ಯಾರೂ ನಿಲ್ಲುವುದಿಲ್ಲ. ಆದರೆ, ಅವರಿಗೆ ಎಷ್ಟು ಮತಗಳು ಬೇಕೋ ಅಷ್ಟು ಮತಗಳಿಲ್ಲ. ಅವರಿಗಿರುವುದೇ ಇರುವುದೇ 19 ಮತಗಳು. ಅದರಿಂದ ಅವರು ಅಭ್ಯರ್ಥಿಯನ್ನು ನಿಲ್ಲಿಸಬೇಕಿರಲಿಲ್ಲ. ಆದರೂ ನಿಲ್ಲಿಸಿದ್ದಾರೆ. ನಮ್ಮ ಎಲ್ಲ ಶಾಸಕರು ನಿಷ್ಠೆಯಿಂದ ಕಾಂಗ್ರೆಸ್ ಪರವಾಗಿ ಮತ ಹಾಕಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯೇ ಗೆಲ್ಲುವುದು. ಜೆಡಿಎಸ್ ಐದನೇ ಅಭ್ಯರ್ಥಿಯನ್ನು ನಿಲ್ಲಿಸಿದ್ದರಿಂದ ನಾವೆಲ್ಲ ಒಟ್ಟಿಗೆ ಇದ್ದು ಮತ ಹಾಕಬೇಕಾಯಿತು. ನಮ್ಮ ಶಾಸಕರಿಗೆ ಆಸೆ ಆಮಿಷಗಳನ್ನು ಒಡ್ಡುವುದು ಬೆದರಿಕೆ ಹಾಕುವುದನ್ನು ಮಾಡುತ್ತಿದ್ದರು. ಅದಕ್ಕೆ ಎಲ್ಲರೂ ಒಟ್ಟಿಗಿದ್ದು ಮತ ಚಲಾಯಿಸಿದ್ದೇವೆ ಎಂದರು.

ಆತ್ಮ ಎಲ್ಲಿದೆ?

ಜೆಡಿಎಸ್‌ಗೆ ಆತ್ಮಸಾಕ್ಷಿ ಎನ್ನುವುದೇ ಇಲ್ಲ. ಜೆಡಿಎಸ್ ಎಂದು ಹೆಸರಿಟ್ಟುಕೊಂಡು ಬಿಜೆಪಿ ಜತೆ ಸೇರಿರುವವರಿಗೆ ಆತ್ಮ ಎಲ್ಲಿದೆ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಆಮಿಷ ಒಡ್ಡುವ ಪ್ರಮೇಯ ಇಲ್ಲ

ನಮ್ಮ ಸರ್ಕಾರದ ಬಗ್ಗೆ ಒಳ್ಳೆ ಅಭಿಪ್ರಾಯ ಇರುವ ಬೇರೆ ಪಕ್ಷದ ಮತಗಳೂ ಬರಬಹುದು ಎಂದರು. ನಮಗೆ ಸಾಕಷ್ಟು ಮತಗಳಿರುವಾಗ ಆಸೆ ಆಮಿಷ ಒಡ್ಡುವ ಪ್ರಮೇಯ ಎಲ್ಲಿದೆ? ನಮಗೆ 136 ಮತಗಳಿವೆ. ಸ್ವತಂತ್ರ ಅಭ್ಯರ್ಥಿ ಲತಾ ಪ್ರಕಾಶ್, ಮಲ್ಲಿಕಾರ್ಜುನ ಹಾಗೂ ದರ್ಶನ್ ಪುಟ್ಟಣ್ಣಯ್ಯ, ಪುಟ್ಟಸ್ವಾಮಿ ಗೌಡ ಹಾಗೂ ಜನಾರ್ದನ ರೆಡ್ಡಿ ಇವರ ಮತಗಳಿದ್ದ ಮೇಲೆ ಆಸೆ ಆಮಿಷ ಒಡ್ಡುವ ಪ್ರಮೇಯ ಎಲ್ಲಿದೆ? ಆಮಿಷ, ಬೆದರಿಕೆ ಒಡ್ಡುತ್ತಿರುವವರು ಜೆಡಿಎಸ್ ಹಾಗೂ ಬಿಜೆಪಿಯವರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅಡ್ಡಮತದಾನ ಬಿಜೆಪಿಯಲ್ಲಿ ಮಾತ್ರ ಸಾಧ್ಯ

ಜೆಡಿಎಸ್ ಹಾಗೂ ಬಿಜೆಪಿ ಕಾಂಗ್ರೆಸ್ ನಿಂದ ಅಡ್ಡ ಮತದಾನದ ನಿರೀಕ್ಷೆಯಲ್ಲಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ತಮ್ಮ ಶಾಸಕರನ್ನು ಭದ್ರವಾಗಿತ್ತುಕೊಳ್ಳಲಿ, ಅಡ್ಡ ಮತದಾನ ಬಿಜೆಪಿಯಲ್ಲಿ ಮಾತ್ರ ಸಾಧ್ಯ ಎಂದು ಹೇಳಿದರು.

Ghar Wapsi: ಎಸ್‌.ಟಿ. ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಬಿಜೆಪಿಗೆ ಗುಡ್‌ ಬೈ? ಇಂದೇ ರಾಜೀನಾಮೆ?

ಬೆಂಗಳೂರು: ಬಿಜೆಪಿಯಲ್ಲಿರುವ (BJP Karnataka) ಇಬ್ಬರು ರೆಬೆಲ್‌ ಶಾಸಕರಾದ ಎಸ್‌.ಟಿ. ಸೋಮಶೇಖರ್‌ (ST Somashekhar) ಹಾಗೂ ಶಿವರಾಂ ಹೆಬ್ಬಾರ್‌ (Shivaram Hebbar) ನಡೆ ಈಗ ಕುತೂಹಲ ಮೂಡಿಸಿದೆ. ರಾಜ್ಯಸಭಾ ಚುನಾವಣೆಯಲ್ಲಿ (Rajya Sabha Election) ಈಗಾಗಲೇ ಎಸ್‌ಟಿಎಸ್‌ ಅಡ್ಡ ಮತದಾನ ಮಾಡಿದ್ದಾರೆ. ಹೆಬ್ಬಾರ್‌ ಇನ್ನೂ ಮತದಾನಕ್ಕೆ ಬಂದಿಲ್ಲ. ಈ ನಡುವೆ ಎಸ್‌.ಟಿ. ಸೋಮಶೇಖರ್‌ ಹಾಗೂ ಶಿವರಾಂ ಹೆಬ್ಬಾರ್‌ ಅವರು ಇಂದು ಬಿಜೆಪಿಗೆ ಗುಡ್‌ಬೈ ಹೇಳುವ ಸಾಧ್ಯತೆ ಇದ್ದು, ಕಾಂಗ್ರೆಸ್‌ (Congress Karnataka) ಸೇರ್ಪಡೆಯಾಗುವ ಮುಖಾಂತರ ಘರ್‌ ವಾಪ್ಸಿಗೆ (Ghar Wapsi) ನಿರ್ಧಾರ ಮಾಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ರಾಜ್ಯಸಭಾ ಚುನಾವಣೆಗೆ (Rajyasabha Election) ಸಂಬಂಧಿಸಿ ಅತಿ ದೊಡ್ಡ ಬೆಳವಣಿಗೆಯೊಂದು ನಡೆದಿದೆ. ಬಿಜೆಪಿಯಿಂದ ಗೆದ್ದ ಯಶವಂತಪುರ ಶಾಸಕ ಎಸ್‌.ಟಿ ಸೋಮಶೇಖರ್‌ (ST Somashekhar) ಅವರು ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಥವಾ ಮೈತ್ರಿ ಅಭ್ಯರ್ಥಿಗೆ ಮತ ಹಾಕುವ ಬದಲು ಕಾಂಗ್ರೆಸ್‌ನ ಮೂರನೇ ಅಭ್ಯರ್ಥಿಗೆ (Congress Candidate) ಮತ ಹಾಕಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಬಿಜೆಪಿಯ ಚುನಾವಣಾ ಏಜೆಂಟ್‌ ಆಗಿರುವ ಸುನಿಲ್‌ ಕುಮಾರ್‌ ಅವರು ಕೂಡಾ ಇದನ್ನು ಸ್ಪಷ್ಟಪಡಿಸಿದ್ದಾರೆ. ಇನ್ನು ಮತ್ತೊಬ್ಬ ರೆಬೆಲ್‌ ಶಾಸಕ ಶಿವರಾಂ ಹೆಬ್ಬಾರ್‌ ನಡೆ ಇನ್ನೂ ಗೊತ್ತಾಗಿಲ್ಲ. ಅವರಿನ್ನೂ ಬಿಜೆಪಿ ನಾಯಕರ ಸಂಪರ್ಕಕ್ಕೆ ಸಿಗುತ್ತಿಲ್ಲ ಎನ್ನಲಾಗಿದೆ.

ಎಸ್‌ಟಿಎಸ್‌, ಹೆಬ್ಬಾರ್‌ರಿಂದ ಇಂದೇ ರಾಜೀನಾಮೆ?

ಮಂಗಳವಾರ (ಫೆ. 27) ಸಂಜೆ ಸ್ಪೀಕರ್‌ ಯು.ಟಿ. ಖಾದರ್‌ ಅವರನ್ನು ಸಂಪರ್ಕ ಮಾಡಲಿರುವ ಎಸ್‌.ಟಿ. ಸೋಮಶೇಖರ್‌ ಹಾಗೂ ಶಿವರಾಂ ಹೆಬ್ಬಾರ್‌ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಕಾಂಗ್ರೆಸ್‌ಗೆ ಘರ್ ವಾಪ್ಸಿ ಆಗುವ ಸಾಧ್ಯತೆ ದಟ್ಟವಾಗಿದೆ ಎಂದು ಹೇಳಲಾಗುತ್ತಿದೆ.

ಉಚ್ಚಾಟನೆ ಕಾಯುತ್ತಾರೋ?

ಈಗಾಗಲೇ ಅಡ್ಡ ಮತದಾನ ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಿಸ್ತು ಕ್ರಮಕ್ಕೆ ಮುಂದಾಗುವುದಾಗಿ ಹೇಳಿದೆ. ಜತೆಗೆ ಈ ನಿಟ್ಟಿನಲ್ಲಿ ಕಾನೂನು ತಜ್ಞರೊಂದಿಗೆ ಚರ್ಚೆಯನ್ನೂ ನಡೆಸುತ್ತಿದೆ. ಇನ್ನು ಪಕ್ಷದಿಂದ ಉಚ್ಚಾಟನೆ ಮಾಡುವುದಲ್ಲದೆ ಶಾಸಕತ್ವದಿಂದ ಅನರ್ಹ ಮಾಡುವಂತೆ ಸಹ ಸ್ಪೀಕರ್‌ ಮೊರೆ ಹೋಗಲು ಬಿಜೆಪಿ ನಿರ್ಧಾರವನ್ನು ಮಾಡಿದೆ. ಒಂದು ವೇಳೆ ಅನರ್ಹ ಮಾಡುವಂತೆ ಮಾಡುವ ಮನವಿಗೆ ಸ್ಪೀಕರ್‌ ಯು.ಟಿ. ಖಾದರ್‌ ಸ್ಪಂದಿಸದೇ ಹೋದರೆ, ಕಡತವನ್ನು ಬಾಕಿ ಇಟ್ಟರೆ ಸುಪ್ರೀಂ ಕೋರ್ಟ್‌ ಮೊರೆ ಹೋಗಲು ಬಿಜೆಪಿ ನಿರ್ಧಾರ ಮಾಡಿದೆ ಎನ್ನಲಾಗಿದೆ. ಪಕ್ಷದಲ್ಲಿದ್ದುಕೊಂಡು ಪಕ್ಷ ವಿರೋಧಿ ಚಟುವಟಿಕೆಯನ್ನು ಮಾಡಿರುವವರಿಗೆ ಬುದ್ಧಿ ಕಲಿಸಲೇಬೇಕು ಎಂದು ಪಣ ತೊಟ್ಟಿರುವ ಬಿಜೆಪಿ ಆ ನಿಟ್ಟಿನಲ್ಲಿ ಚರ್ಚೆಗಳನ್ನು ನಡೆಸುತ್ತಿದೆ.

ಇದನ್ನೂ ಓದಿ: Rajya sabha Election: ಎಸ್‌.ಟಿ. ಸೋಮಶೇಖರ್‌ ಅಡ್ಡಮತ; ಬಿಜೆಪಿಯಿಂದ ಏನು ಕ್ರಮ? ಶಾಸಕತ್ವ ಉಳಿಯುತ್ತಾ?

ಕಾದು ನೋಡುವ ತಂತ್ರಕ್ಕೆ ಎಸ್‌.ಟಿ. ಸೋಮಶೇಖರ್‌ ಮೊರೆ?

ಹೀಗಾಗಿ ಎಸ್‌.ಟಿ. ಸೋಮಶೇಖರ್‌ ಅವರು ಬಿಜೆಪಿಯ ಮುಂದಿನ ನಡೆ ಬಗ್ಗೆ ಕಾದು ನೋಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಪಕ್ಷದಿಂದ ಉಚ್ಚಾಟನೆ ಮಾಡಿದರೂ ತಮ್ಮ ಶಾಸಕತ್ವಕ್ಕೆ ಯಾವುದೇ ರೀತಿಯಲ್ಲಿ ಅಪಾಯವಾಗದು ಎಂಬ ಹಿನ್ನೆಲೆಯಲ್ಲಿ ಎಸ್‌ಟಿಎಸ್‌ ಕಾದು ನೋಡುವ ತಂತ್ರವನ್ನು ಸಹ ಅನುಸರಿಸಬಹುದಾಗಿದೆ ಎನ್ನಲಾಗುತ್ತಿದೆ.

Exit mobile version