ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ - Vistara News

ರಾಜಕೀಯ

ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ

Rajya Sabha Election: ನಾಸಿರ್ ಹುಸೇನ್ ಬೆಂಬಲಿಗರು ಶತ್ರು ರಾಷ್ಟ್ರ ಪಾಕಿಸ್ತಾನ ಪರ ಜೈಕಾರ ಕೂಗಿ ಉದ್ದಟತನ ಮೆರೆದಿದ್ದಾರೆ. ನಮ್ಮ ಭಾರತದ ಸೌರ್ವಭೌಮತ್ವವನ್ನು ಧಿಕ್ಕರಿಸಿ ಪಾಕ್‌ ಪರ ಘೋಷಣೆ ಕೂಗಿರುವ ಬಗ್ಗೆ ರಾಜ್ಯ ಸೇರಿ ದೇಶಾದ್ಯಂತ ಭಾರಿ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ ಕೂಡಲೇ ಸುಮೋಟೊ ಪ್ರಕರಣ ದಾಖಲು ಮಾಡಿ ಪಾಪಿಗಳನ್ನು ಬಂಧಿಸುವಂತೆ ಬಿಜೆಪಿ ಆಗ್ರಹಿಸಿದೆ.

VISTARANEWS.COM


on

Rajya Sabha election Pakistan Zindabad slogans raised inside Vidhana Soudha by Nasir Hussain supporters
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ರಾಜ್ಯಸಭಾ ಚುನಾವಣೆಯ (Rajya Sabha Election) ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್‌ ಕಾರ್ಯಕರ್ತರ ಸಂತಸ ಮುಗಿಲು ಮುಟ್ಟಿತ್ತು. ಗೆಲುವು ಸಾಧಿಸಿದ ಕಾಂಗ್ರೆಸ್‌ನ ಮೂವರು ಸದಸ್ಯರ ಪೈಕಿ ನಾಸಿರ್ ಹುಸೇನ್ ಬೆಂಬಲಿಗರು ಶತ್ರು ರಾಷ್ಟ್ರ ಪಾಕಿಸ್ತಾನ ಪರ ಜೈಕಾರ ಕೂಗಿ ಉದ್ಧಟತನ ಮೆರೆದಿದ್ದಾರೆ. ನಮ್ಮ ಭಾರತದ ಸೌರ್ವಭೌಮತ್ವವನ್ನು ಧಿಕ್ಕರಿಸಿ ಪಾಕ್‌ ಪರ ಘೋಷಣೆ ಕೂಗಿರುವ ಬಗ್ಗೆ ರಾಜ್ಯ ಸೇರಿ ದೇಶಾದ್ಯಂತ ಭಾರಿ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಇಂಥದ್ದೊಂದು ಪಾಪಿ ಕೃತ್ಯ, ಅಕ್ಷಮ್ಯ ಅಪರಾಧವನ್ನು ವಿಧಾನಸೌಧದೊಳಗೆ ಮಾಡಿರುವುದು ಮತ್ತೊಂದು ದುರಂತವಾಗಿದೆ.

ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕಾಂಗ್ರೆಸ್‌ನ ಮೂವರು ಹಾಗೂ ಬಿಜೆಪಿಯ ಒಬ್ಬರು ಗೆಲುವು ಸಾಧಿಸಿದ್ದಾರೆ ಎಂದು ಘೋಷಣೆಯಾಯಿತು. ಆಗ ನೂತನ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರನ್ನು ಕಾಂಗ್ರೆಸ್‌ ಬೆಂಬಲಿಗರು ಎತ್ತಿ ಖುಷಿಪಟ್ಟಿದ್ದಾರೆ. ಹಾರವನ್ನು ಹಾಕಿ ಸಂಭ್ರಮಿಸಿದ್ದಾರೆ. ಇದೇ ವೇಳೆ, ಕೆಲವು ಪಾಪಿಗಳು “ಪಾಕಿಸ್ತಾನ್‌ ಜಿಂದಾಬಾದ್‌” ಎಂದು ಘೋಷಣೆ ಕೂಗಿದ್ದಾರೆ.

Rajya Sabha election Pakistan Zindabad slogans raised inside Vidhana Soudha by Nasir Hussain supporters
ವಿಧಾನಸೌಧದೊಳಗೆ ಸಂಭ್ರಮಾಚರಣೆ ವೇಳೆ ಘೋಷಣೆ ಕೂಗಿದ ಕಾಂಗ್ರೆಸ್‌ ಬೆಂಬಲಿಗರು

ಇದು ಅತ್ಯಂತ ನಾಚಿಕೆಗೇಡಿನ ಸಂಗತಿ

ಈ ಬಗ್ಗೆ ವಿಧಾನ ಪರಿಷತ್‌ ಸದಸ್ಯ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.‌ ರವಿಕುಮಾರ್‌ ಪ್ರತಿಕ್ರಿಯೆ ನೀಡಿ, ಇದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ. ಇದಕ್ಕೆ ಸುಮೋಟೋ ಕೇಸ್‌ ಅನ್ನು ದಾಖಲು ಮಾಡಬೇಕು. ತಕ್ಷಣವೇ ತಪ್ಪಿತಸ್ಥರನ್ನು ಬಂಧಿಸಬೇಕು. ಇದು ದೇಶದ್ರೋಹದ ಕೆಲಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರು ಕೂಡಲೇ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ನಾನು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.

ಈ ಕೂಡಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಕೂಡಲೇ ಈ ಬಗ್ಗೆ ತಮ್ಮ ಹೇಳಿಕೆಯನ್ನು ನೀಡಬೇಕು. ಇದು ಅಕ್ಷಮ್ಯವಾಗಿದೆ. ಈ ಸರ್ಕಾರ ಏನು ಕ್ರಮವನ್ನು ತೆಗೆದುಕೊಳ್ಳುತ್ತದೆ ಎಂಬುದನ್ನು ನಾವು ಕಾದು ನೋಡುತ್ತೇವೆ ಎಂದು ರವಿಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ: Rajya sabha Election: ಎಸ್‌.ಟಿ. ಸೋಮಶೇಖರ್‌ ಅಡ್ಡಮತ; ಬಿಜೆಪಿಯಿಂದ ಏನು ಕ್ರಮ? ಶಾಸಕತ್ವ ಉಳಿಯುತ್ತಾ?

ಕಾಂಗ್ರೆಸ್‌ನ ಗೆಲುವು ದೇಶದ್ರೋಹಿಗಳ ಗೆಲುವಾ?

ಇದೊಂದು ಅಕ್ಷಮ್ಯ ಅಪರಾಧವಾಗಿದೆ. ಇದು ಪಾಕಿಸ್ತಾನ ಚುನಾವಣೆಯಾ? ಭಾರತದ ಚುನಾವಣೆಯಾ? ಇದು ಕಾಂಗ್ರೆಸ್‌ನ ಮಾನಸಿಕತನವನ್ನು ತೋರಿಸುತ್ತದೆ. ಕಾಂಗ್ರೆಸ್‌ ಗೆಲುವು ಸಾಧಿಸಿದ ಮೇಲೆ ಇಂಥ ವಿಧ್ವಂಸಕ ಕೃತ್ಯ ಎಸಗುವವರಿಗೆ ಬಲ ಸಿಕ್ಕಂತೆ ಆಗಿದೆ. ಇವರೇನು ಪಾಕಿಸ್ತಾನದ ಏಜೆಂಟರಾ? ಇದರ ವಿರುದ್ಧ ಈ ಸರ್ಕಾರ ಕ್ರಮವನ್ನು ಕೈಗೊಳ್ಳಬೇಕು. ಈ ದೇಶದ ಅನ್ನ ತಿಂದು, ಸೌಲಭ್ಯವನ್ನು ಪಡೆದು ಪಾಕಿಸ್ತಾನದ ಪರ ಘೋಷಣೆ ಕೂಗುತ್ತಾರಲ್ಲವೇ? ಇವರು ಹೊಟ್ಟೆಗೆ ಏನನ್ನು ತಿನ್ನುತ್ತಾರೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ

VISTARANEWS.COM


on

ರಾಜ್ಯದ ಎರಡು ವಿಧಾನಸಭಾ ಕ್ಷೇತಗಳಿಗೆ ನಡೆದ ಉಪಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌, ಬಿಜೆಪಿ ನಡುವಿನ ನೇರ ಹಣಾಹಣಿಯಲ್ಲಿ ಯಾರಿಗೆ ಗೆಲುವು ಸಿಗಲಿದೆ ಎಂಬ ಪ್ರಶ್ನೆಗೆ ನಾಳೆ(ಮೇ.4) ಉತ್ತರ ಸಿಗಲಿದೆ. ಬೆಳಗ್ಗೆ 8 ಗಂಟೆಯಿಂದ ಎರಡೂ ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಾರಂಭವಾಗಲಿದ್ದು, ಬಹುತೇಕ ಮಧ್ಯಾಹ್ನ 2 ಗಂಟೆಯೊಳಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಯಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಹಾಲಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ರ ಪುತ್ರ ಸಮರ್ಥ್‌ ಶಾಮನೂರು ಕಾಂಗ್ರೆಸ್‌ ಅಭ್ಯರ್ಥಿಯಾದ್ರೆ, ಬಿಜೆಪಿಯಿಂದ ಶ್ರೀನಿವಾಸ ದಾಸ್ ಕರಿಯಪ್ಪ ಕಣದಲ್ಲಿದ್ದಾರೆ.
ಬಾಗಲಕೋಟೆ ಶಾಸಕರಾಗಿದ್ದ ಎಚ್‌.ವೈ.ಮೇಟಿ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿದ್ದು, ಎಚ್‌.ವೈ.ಮೇಟಿ ಅವರ ಪುತ್ರ ಉಮೇಶ ಮೇಟಿ ಕಾಂಗ್ರೆಸ್‌ನಿಂದ ಕಣದಲ್ಲಿದ್ದಾರೆ. ಬಿಜೆಪಿಯಿಂದ ಮಾಜಿ ಶಾಸಕ ವೀರಣ್ಣ ಚರಂತಿಮಠ ಸ್ಪರ್ಧೆಯಲ್ಲಿದ್ದು ಯಾರ ಕೊರಳಿಗೆ ಜಯಮಾಲೆ ಬೀಳಲಿದೆ ಎಂಬುದು ಫಲಿತಾಂಶ ಬಂದ ನಂತರ ಗೊತ್ತಾಗಲಿದೆ. ಈಗಾಗಲೇ ಮತಎಣಿಕಾ ಕೇಂದ್ರಗಳ ಸುತ್ತ ಸೂಕ್ತ ಭದ್ರತಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

Continue Reading

Latest

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ

VISTARANEWS.COM


on

ದೇಶದ ಜನತೆಯ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ (ಮೇ.4) ಹೊರಬೀಳಲಿದೆ. ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಹಾಗೂ ಪುದುಚೇರಿ ವಿಧಾನಸಭಾ ಕ್ಷೇತ್ರಗಳ ಮತಎಣಿಕೆ ನಾಳೆ (ಮೇ.4) ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದ್ದು, ಬಹುತೇಕ ಮಧ್ಯಾಹ್ನ 2 ಗಂಟೆಯೊಳಗೆ ಸ್ಪಷ್ಟ ಚಿತ್ರಣ ಹೊರಬೀಳುವ ಸಾಧ್ಯತೆ ಇದೆ.

ಯಾರಿಗೆ ಪಶ್ಚಿಮ ಬಂಗಾಳ?
ಪಶ್ಚಿಮ ಬಂಗಾಳದಲ್ಲಿ ಈ ಬಾರಿ ತೃಣಮೂಲ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ನಡೆದಿದ್ದು, ಯಾರಿಗೆ ವಿಜಯಲಕ್ಷ್ಮಿ ಒಲಿಯಲಿದ್ದಾಳೆ ಎಂಬುದು ನಾಳೆ ಮತಎಣಿಕೆಯ ನಂತರ ಗೊತ್ತಾಗಲಿದೆ. ರಾಜ್ಯದಲ್ಲಿ ನಾಲ್ಕನೇ ಬಾರಿ ಅಧಿಕಾರ ಹಿಡಿಯಲು ಮುಂದಾಗಿರುವ ಟಿಎಂಸಿಗೆ ಈ ಚುನಾವಣೆ “ಮಾಡು ಇಲ್ಲವೇ ಮಡಿ” ಎಂಬಂತಾಗಿದೆ. ಪಶ್ಚಿಮ ಬಂಗಾಳದಲ್ಲಿ ಕಮಲ ಅರಳಿಸಲೇಬೇಕೆಂದು ಪಣತೊಟ್ಟಿದ್ದ ಬಿಜೆಪಿ ನಾಯಕರು ಈ ಚುನಾವಣೆಯನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದ್ದರು. ಈ ಬಾರಿ ಪಶ್ಚಿಮ ಬಂಗಾಳದ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆಯ ಮತದಾನ ನಡೆದಿರುವುದು ಫಲಿತಾಂಶದ ಪರಿಣಾಮ ಬೀರಿರುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳದಲ್ಲಿ ಒಟ್ಟು 294 ವಿಧಾನಸಭಾ ಕ್ಷೇತ್ರಗಳಿದ್ದು, ಸರ್ಕಾರ ರಚನೆಗೆ ಯಾವುದೇ ಪಕ್ಷ 148 ಸ್ಥಾನಗಳನ್ನು ಪಡೆಯಬೇಕು. ಬಹುತೇಕ ಮತದಾನೋತ್ತರ ಸಮೀಕ್ಷೆಗಳು ಈ ಬಾರಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸ್ಪಷ್ಟ ಜನಾದೇಶ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ.

ದ್ರಾವಿಡ ಕೋಟೆಯ ಅಧಿಪತಿ ಯಾರು..?
ತಮಿಳುನಾಡು ವಿಧಾನಸಭೆಗೆ ನಡೆದ ಚುನಾವಣೆ ದೇಶಾದ್ಯಂತ ಭಾರಿ ಕುತೂಹಲವನ್ನೇ ಮೂಡಿಸಿದೆ. ಇದುವರೆಗೆ ಡಿಎಂಕೆ ಮತ್ತು ಎಐಎಡಿಎಂಕೆ ನಡುವೆ ನೇರ ಸ್ಪರ್ಧೆ ಇರುತ್ತಿತ್ತು. ಈ ಬಾರಿ ಚಿತ್ರನಟ ವಿಜಯ್‌ ಅವರ ಟಿವಿಕೆ ಪಕ್ಷ ಕಣದಲ್ಲಿದ್ದು, ಯಾರಿಗೆ ದ್ರಾವಿಡ ಕೋಟೆ ಒಲಿಯಲಿದೆ ಎನ್ನುವ ಪ್ರಶ್ನೆಗೆ ನಾಳೆಯ ಫಲಿತಾಂಶದ ಮೂಲಕ ಉತ್ತರ ಸಿಗಲಿದೆ. ಕೆಲವು ಮತದಾನೋತ್ತರ ಸಮೀಕ್ಷೆಗಳು ಆಡಳಿತಾರೂಢ ಡಿಎಂಕೆ ಪುನಃ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ ಎಂದು ಹೇಳಿವೆ. ಇದರ ನಡುವೆ ಆಶ್ಚರ್ಯ ಎಂಬಂತೆ ಕೆಲವು ಸಮೀಕ್ಷೆಗಳು ವಿಜಯ್‌ ನೇತೃತ್ವದ ಟಿವಿಕೆ ಬಹುಮತ ಪಡೆಯಲಿದೆ ಎಂದಿವೆ. ವಿಜಯ್‌ ಕಿಂಗ್‌ಮೇಕರ್‌ ಆಗುವ ಸಾಧ್ಯತೆಯ ಬಗ್ಗೆಯೂ ಕೆಲ ಸಮೀಕ್ಷೆಗಳು ಸುಳಿವು ನೀಡಿವೆ. ತಮಿಳುನಾಡಿನಲ್ಲಿ ಒಟ್ಟು 234 ವಿಧಾನಸಭಾ ಕ್ಷೇತ್ರಗಳಿದ್ದು, ಬಹುಮತ ಪಡೆಯಲು 148 ಸ್ಥಾನಗಳ ಅಗತ್ಯವಿದೆ.

ಕೇರಳದಲ್ಲಿ ಜಯ ಯಾರಿಗೆ?
ದೇವರ ನಾಡು ಎಂದೇ ಕರೆಯಲ್ಪಡುವ ಕೇರಳದಲ್ಲಿ ಈ ಬಾರಿ ಅಧಿಕಾರ ಯಾರ ಪಾಲಾಗಲಿದೆ ಎಂಬ ಕುತೂಹಲಕ್ಕೆ ನಾಳೆ ತೆರೆಬೀಳಲಿದೆ. ಸತತ ಮೂರನೇ ಬಾರಿಗೆ ಅಧಿಕಾರಕ್ಕೇರಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ನೇತೃತ್ವದ ಎಲ್‌ಡಿಎಫ್‌ ಪ್ರಯತ್ನ ನಡೆಸಿದ್ರೆ, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸಹ ಈ ಬಾರಿಯ ಚುನಾವಣೆಯಲ್ಲಿ ತೀವ್ರ ಸ್ಪರ್ಧೆ ನೀಡಿದೆ. ಮತದಾನೋತ್ತರ ಸಮೀಕ್ಷೆಗಳ ಪ್ರಕಾರ ಯುಡಿಎಫ್‌ ಜಯಭೇರಿ ಸಾಧಿಸುವ ಸಾಧ್ಯತೆ ಕಂಡುಬಂದಿದೆ. ಕೇರಳದಲ್ಲಿ ಒಟ್ಟು 140 ಸ್ಥಾನಗಳಿದ್ದು, ಸರಳ ಬಹುಮತಕ್ಕೆ 71 ಸ್ಥಾನಗಳ ಅಗತ್ಯವಿದೆ.

ಹ್ಯಾಟ್ರಿಕ್ ಗೆಲುವು ಸಾಧಿಸುತ್ತಾ ಬಿಜೆಪಿ?
ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಮತ್ತೊಮ್ಮೆ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬರುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಮತದಾನೋತ್ತರ ಸಮೀಕ್ಷೆಗಳು ತಿಳಿಸಿವೆ. ಅಸ್ಸಾಂನ 126 ವಿಧಾನಸಭಾ ಕ್ಷೇತ್ರಗಳ ಪೈಕಿ ಸರಳ ಬಹುಮತಕ್ಕೆ 64 ಸ್ಥಾನಗಳು ಬೇಕು. ಸತತ ಎರಡು ಬಾರಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಈ ಬಾರಿ ಗೆಲುವು ಸಾಧಿಸಿದರೆ ಹ್ಯಾಟ್ರಿಕ್ ಗೆಲುವಿನ ಸಾಧನೆ ಮಾಡಲಿದೆ.

ಪುದುಚೇರಿ ಯಾರಿಗೆ?
ಪುದುಚೇರಿ ವಿಧಾನಸಭೆ ಚುನಾವಣಾ ಮತದಾನೋತ್ತರ ಸಮೀಕ್ಷೆಗಳ ಪ್ರಕಾರ ಪುನಃ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬರಬಹುದೆಂದು ಅಂದಾಜಿಸಲಾಗಿದೆ. ರಾಜ್ಯದ ಒಟ್ಟು 30 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ನೇತೃತ್ವದ ಎನ್‌ಡಿಎ 15ರಿಂದ 20 ಸ್ಥಾನಗಳನ್ನು ಪಡೆದು ಎರಡನೇ ಬಾರಿಗೆ ಅಧಿಕಾರ ಗದ್ದುಗೆ ಹಿಡಿಯಬಹುದೆಂದು ಹೇಳಲಾಗುತ್ತಿದೆ.

Continue Reading

Latest

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

VISTARANEWS.COM


on

ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಪ್ರಚಂಡ ಜಯಭೇರಿ ಸಾಧ್ಯತೆ, ಪಶ್ಚಿಮ ಬಂಗಾಳದಲ್ಲಿ ದೀದಿಗೆ ಸಮಬಲದ ಟಕ್ಕರ್‌, ತಮಿಳುನಾಡು-ಕೇರಳಂನಲ್ಲಿ ವೋಟ್‌ ಶೇರ್‌ ಹೆಚ್ಚಳ – ಪಂಚ ರಾಜ್ಯಗಳ ಎಕ್ಸಿಟ್‌ ಪೋಲ್‌ನಲ್ಲಿ ಬಿಜೆಪಿ ಕುರಿತ ಈ ಸಮೀಕ್ಷೆ ನಿಜವಾದರೆ ಅದು ಮತ್ತೊಮ್ಮೆ ಮೋದಿ ಮ್ಯಾಜಿಕ್‌ ಎಂದೇ ಹೇಳಬಹುದು.
ಪಂಚ ರಾಜ್ಯಗಳ ಚುನಾವಣಾ ಸನ್ನಿವೇಶವೇ ಮೋದಿ ನೇತೃತ್ವದ ಬಿಜೆಪಿಗೆ ಒಂದು ಸವಾಲಾಗಿತ್ತು. ಮಧ್ಯಪ್ರಾಚ್ಯ ಯುದ್ಧದ ಪರಿಣಾಮಗಳು ಪ್ರಧಾನಿ ಮೋದಿಯವರಿಗೆ ಅತಿದೊಡ್ಡ ಸವಾಲು ಸೃಷ್ಟಿಸಿತ್ತು. ಏಕಾಏಕಿ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ, ಹೊಟೇಲು-ಇತರ ಉದ್ಯಮಗಳಿಗೆ ಕಮರ್ಶಿಯಲ್‌ ಗ್ಯಾಸ್‌ ಪೂರೈಕೆ ಬುಡಮೇಲು, ಬೆಲೆ ಏರಿಕೆ, ರೂಪಾಯಿ ಮೌಲ್ಯ ಕುಸಿತ. ಇವೆಲ್ಲಾ ಚುನಾವಣೆಯ ಮುಖ್ಯ ವಿಷಯಗಳಾಗಿದ್ದವು. ಹರಿಯಾಣ, ಮಹಾರಾಷ್ಟ್ರ, ದೆಹಲಿ, ಬಿಹಾರ ಗೆಲುವಿನ ನಂತರ ಅಸ್ಸಾಂ, ಪುದುಚೇರಿ, ಮುಖ್ಯವಾಗಿ ಪಶ್ಚಿಮ ಬಂಗಾಳವನ್ನು ಗೆಲ್ಲಲ್ಲೇ ಬೇಕಾದ ಹಠಕ್ಕೆ ಬಿಜೆಪಿ ಬಿದ್ದಿತ್ತು. ಈ ಗೆಲುವಿಗೆ ಬಿಜೆಪಿ ಅವಲಂಬಿಸಿದ್ದು ಪ್ರಧಾನಿ ಮೋದಿಯವರ ಜನಪ್ರಿಯತೆಯನ್ನು. ಸಂಕಷ್ಟದ ಕಾಲದಲ್ಲಿ ಮೋದಿ ಸರ್ಕಾರ ನಿರ್ವಹಿಸಿದ ರೀತಿ ಜನ ಮೆಚ್ಚುಗೆಗೆ ಪಾತ್ರವಾಗಿತ್ತು. ಗೃಹ ಬಳಕೆ ಗ್ಯಾಸ್‌ ಪೂರೈಕೆ ವ್ಯತ್ಯಯವಾಗಲು ಮೋದಿ ಸರ್ಕಾರ ಬಿಡಲಿಲ್ಲ. ಬಹುತೇಕ ದೇಶಗಳು ಪೆಟ್ರೋಲ್‌, ಡೀಸೆಲ್‌ ಬೆಲೆ ಶೇಕಡಾ 20ರಿಂದ 30 ರಷ್ಟು ಏರಿಕೆ ಮಾಡಿದರೂ, ಮೋದಿ ಸರ್ಕಾರ ಸಾಧಾರಣ ಪೆಟ್ರೋಲ್‌ ಡೀಸೆಲ್‌ ಬೆಲೆ ಏರಿಸಲಿಲ್ಲ. ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ನೇರ ಜನರ ಮೇಲೆ ಬೀಳಲು ಮೋದಿ ಸರ್ಕಾರ ಬಿಡಲಿಲ್ಲ.
ಪ.ಬಂಗಾಳ ಗೆದ್ದರೆ ಅತಿ ದೊಡ್ಡ ಸಾಧನೆ:
ದೀದಿ ನಾಡನ್ನು ಗೆಲ್ಲಲು ಬಿಜೆಪಿ ಕಳೆದ 15 ವರ್ಷಗಳಿಂದ ಶಕ್ತಿ ಮೀರಿ ಶ್ರಮಿಸುತ್ತಿದೆ. ಈ ಸಲ, ದೀದಿ ನಾಡಲ್ಲಿ ಮೋದಿ ಹವಾ ಸೃಷ್ಟಿಯಾಗಿದೆ ಎಂದೇ ಎಕ್ಸಿಟ್‌ ಪೋಲ್‌ಗಳು ಹೇಳುತ್ತಿವೆ. ಬಂಗಾಳವನ್ನು ಗೆದ್ದರೆ ಬಿಜೆಪಿಯ ದಿಗ್ವಿಜಯದ ಪಟ್ಟಿಯಲ್ಲೊಂದು ಮೈಲಿಗಲ್ಲು. ಮೋದಿ ಜನಪ್ರಿಯತೆ ಕಡಿಮೆಯಾಗಿಲ್ಲ, ಬದಲಿಗೆ ಇನ್ನಷ್ಟು ಗಟ್ಟಿಯಾಗುತ್ತಿದೆ ಎನ್ನುವುದರ ಸೂಚಕ.
ಇನ್ನು ಪುದುಚೇರಿ, ತಮಿಳುನಾಡು, ಕೇರಳಂನಲ್ಲೂ ಮೋದಿ ಜನಪ್ರಿಯತೆ ಇನ್ನಷ್ಟು ಹೆಚ್ಚಾಗಿರೋದು ಎಕ್ಸಿಟ್‌ ಪೋಲ್‌ ದತ್ತಾಂಶಗಳು ಹೇಳುತ್ತಿವೆ. ತಮಿಳುನಾಡು, ಕೇರಳಂನಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಸಾಧ್ಯತೆಗಳು ಇಲ್ಲದೇ ಹೋದರೂ ಕೂಡಾ, ಬಿಜೆಪಿಯ ಮತ ಪ್ರಮಾಣ ಏರಿಕೆಯಾಗಿದೆ ಎನ್ನುತ್ತಿವೆ ಸಮೀಕ್ಷೆಗಳು.
ಹಾಗೇ ನೋಡಿದರೆ, ಜಾಗತಿಕ ಮಟ್ಟದಲ್ಲಿ ಮೋದಿ ಅತಿ ಜನಪ್ರಿಯ ವ್ಯಕ್ತಿ. ಮಾರ್ಚ್‌ 2026ರ ಅವಧಿಯಲ್ಲಿ ಮೋದಿ ಅಪ್ರೂವಲ್‌ ರೇಟ್‌ ಶೇ 70ರಷ್ಟಿತ್ತು. ವಿಶ್ವದ ಜನಪ್ರಿಯ ನಾಯಕರ ಸಾಲಿನಲ್ಲಿ ಪ್ರಧಾನಿ ಮೋದಿಯೇ ಮೊದಲಿಗರಾಗಿದ್ದಾರೆ.

Continue Reading

Latest

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

VISTARANEWS.COM


on

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌
ಐದು ರಾಜ್ಯಗಳ ಎಕ್ಸಿಟ್‌ ಪೋಲ್‌ ಫಲಿತಾಂಶ ಹೊರಬಿದ್ದಿದೆ. ಅಸ್ಸಾಂನಲ್ಲಿ ಬಿಜೆಪಿ, ಕೇರಳದಲ್ಲಿ ಯುಡಿಎಫ್‌, ಪುದುಚೇರಿಯಲ್ಲಿ ಎನ್‌ಡಿಎ ಜಯಭೇರಿ ಬಾರಿಸಲಿದೆ ಎಂದು ಎಲ್ಲಾ ಎಕ್ಸಿಟ್‌ ಪೋಲ್‌ಗಳು ಹೇಳಿವೆ. ಆದರೆ, ಪ.ಬಂಗಾಳ ಮತ್ತು ತಮಿಳುನಾಡು ಮತದಾನೋತ್ತರ ಸಮೀಕ್ಷೆಗಳು ಮಾತ್ರ ಭಿನ್ನ ಫಲಿತಾಂಶ ನೀಡಿವೆ.
ಅಸ್ಸಾಂನಲ್ಲಿ ಕಮಲ ಕಿಲಕಿಲ:
126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುವ ಸಾಧ್ಯತೆಯನ್ನು ಎಲ್ಲಾ ಎಕ್ಸಿಟ್‌ ಪೋಲ್‌ಗಳು ಹೇಳಿವೆ. ಹಿಮಂತ ಬಿಸ್ವ ಶರ್ಮಾ ಎರಡನೇ ಅವಧಿಗೆ ಸಿಎಂ ಆಗುವ ಸಾಧ್ಯತೆ ಹೆಚ್ಚಿವೆ. ಆಕ್ಸಿಸ್‌ ಮೈ ಇಂಡಿಯಾ, ಪಿ-ಮಾರ್ಕ್‌, ಮಾಟ್ರಿಜ್‌, ಜೆವಿಸಿ ಮತ್ತು ಚಾಣಕ್ಯ ಸ್ಟ್ರಾಟಜಿಸ್‌ ಬಿಜೆಪಿ ಭಾರೀ ಬಹುಮತ ದಾಖಲಿಸಲಿದೆ ಎಂದು ಭವಿಷ್ಯ ನುಡಿದಿವೆ. ಕಾಂಗ್ರೆಸ್‌ ಪ್ರತಿಪಕ್ಷಕ್ಕೆ ಸೀಮಿತಗೊಳ್ಳಲಿದೆ.
ಕೇರಳಂನಲ್ಲಿ ಯುಡಿಎಫ್‌ಗೆ ಅಧಿಕಾರ?:
ಕೇರಳಂ ವಿಧಾನಸಭೆಯ ಬಲ 140. ಬಹುಮತಕ್ಕೆ 71 ಸೀಟುಗಳು ಬೇಕು. ಕೇರಳಂನಲ್ಲಿ ಹ್ಯಾಟ್ರಿಕ್‌ ದಾಖಲಿಸುವ ಎಲ್‌ಡಿಎಫ್‌ ಕನಸು ನುಚ್ಚುನೂರಾಗುವ ಸಾಧ್ಯತೆಗಳಿವೆ. ಈ ಸಲ ಕಾಂಗ್ರೆಸ್‌ ನೇತೃತ್ವದ ಯುನೈಟೆಡ್‌ ಡೆಮಾಕ್ರಾಟಿಕ್‌ ಫ್ರಂಟ್‌ – ಯುಡಿಎಫ್‌, ಜಯಭೇರಿ ಬಾರಿಸಲಿದೆ ಎಂದು ಆಕ್ಸಿಸ್‌ ಮೈ ಇಂಡಿಯಾ, ಪಿ-ಮಾರ್ಕ್‌, ಮಾಟ್ರಿಜ್‌, ಮನೋರಮಾ ನ್ಯೂಸ್‌ ಸಿವೋಟರ್ಸ್‌ ಮತ್ತು ಜೆವಿಸಿ ಸಮೀಕ್ಷೆಗಳು ಹೇಳಿವೆ. ಬಿಜೆಪಿ ಕೇರಳಂನಲ್ಲಿ ಮೂರರಿಂದ ಏಳು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಗಳಿವೆ.
ಪುದುಚೇರಿಯಲ್ಲಿ ಎನ್‌ಡಿಎ?:
ಪುದುಚೇರಿ ವಿಚಾರದಲ್ಲಿ ಎಕ್ಸಿಟ್‌ ಪೋಲ್‌ ಏಜೆನ್ಸಿಗಳಿಗೆ ಯಾವುದೇ ಅನುಮಾನ ಇಲ್ಲ. 30 ಸದಸ್ಯಬಲದ ಪುದುಚೇರಿ ಅಸೆಂಬ್ಲಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ದಿಗ್ವಿಜಯ ಬಾರಿಸಲಿದೆ ಎಂದು ಎಲ್ಲಾ ಚುನಾವಣೋತ್ತರ ಭವಿಷ್ಯ ನುಡಿದಿವೆ.
ಪ. ಬಂಗಾಳದಲ್ಲಿ ದೀದಿಯೋ, ಮೋದಿಯೋ?
ಪಶ್ಚಿಮ ಬಂಗಾಳದ ಎಕ್ಸಿಟ್‌ ಪೋಲ್‌ನಲ್ಲಿ ಏಕಮತ ಇಲ್ಲ. 6 ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ, 4 ಸಮೀಕ್ಷೆಗಳು ಬಿಜೆಪಿ ಗೆಲುವಿನ ಭವಿಷ್ಯ ನುಡಿದಿವೆ. 2 ಸಮೀಕ್ಷೆಗಳು ಟಿಎಂಸಿಯೇ ಅಧಿಕಾರದಲ್ಲಿ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿವೆ. ಪಿ-ಮಾರ್ಕ್‌, ಮಾಟ್ರಿಜ್‌, ಜೆವಿಸಿ, ಚಾಣಕ್ಯ ಈ ನಾಲ್ಕು ಸಮೀಕ್ಷೆಗಳಲ್ಲಿ ಬಿಜೆಪಿ ಸರಿಸುಮಾರು 150ಕ್ಕೂ ಅಧಿಕ ಸೀಟು ಗಳಿಸುವ ಸಾಧ್ಯತೆಗಳಿವೆ ಎಂದು ಹೇಳಿವೆ. ಪೀಪಲ್ಸ್‌ ಪಲ್ಸ್‌, ಜನಮತ ಪೋಲ್ಸ್‌ ಈ ಎರಡೂ ಸಮೀಕ್ಷೆಗಳ ಪ್ರಕಾರ ಟಿಎಂಸಿ 170ರಿಂದ 200 ಸೀಟು ಗೆದ್ದು ಅಧಿಕಾರದಲ್ಲಿ ಮುಂದುವರಿಯಲಿದೆ. ಅಂದ ಹಾಗೆ, 294 ಸದಸ್ಯ ಬಲದ ಪ.ಬಂಗಾಳ ಅಸೆಂಬ್ಲಿಯಲ್ಲಿ ಅಧಿಕಾರಕ್ಕೇರಲು 147 ಸೀಟುಗಳನ್ನು ಗೆಲ್ಲಲೇ ಬೇಕು.
ದ್ರಾವಿಡ ದಂಗಲ್‌ನಲ್ಲಿ ಅಚ್ಚರಿ ಫಲಿತಾಂಶ?:
ತಮಿಳುನಾಡಿನಲ್ಲಿ ಬಹುತೇಕ ಎಲ್ಲಾ ಎಕ್ಸಿಟ್‌ ಪೋಲ್‌ಗಳು ಡಿಎಂಕೆ ಅಧಿಕಾರದಲ್ಲಿ ಮುಂದುವರಿಯಲಿದೆ ಎಂದು ಭವಿಷ್ಯ ನುಡಿದಿವೆ. ಎಐಎಡಿಎಂಕೆ ನೇತೃತ್ವದ ಎನ್‌ಡಿಎ 50 ರಿಂದ 80 ಸ್ಥಾನಗಳನ್ನು ಗಳಿಸುವ ಸಾಧ್ಯತೆಗಳಿವೆ. ಆದರೆ, ಇಲ್ಲೊಂದು ಟ್ವಿಸ್ಟ್‌ ಇದೆ. ಆಕ್ಸಿಸ್‌ ಮೈ ಇಂಡಿಯಾ ಮಾತ್ರ ವಿಜಯ್‌ ನೇತೃತ್ವದ ಟಿವಿಕೆಗೆ ಬಹುಮತ ಸಿಗಲಿದೆ ಎಂದು ಹೇಳಿದೆ. ದಳಪತಿ ವಿಜಯ್‌ ನೇತೃತ್ವದ ಟಿವಿಕೆ ತನ್ನ ಚೊಚ್ಚಲ ಯತ್ನದಲ್ಲೇ 98ರಿಂದ 120 ಸ್ಥಾನ ಗಳಿಸುವ ಸಾಧ್ಯತೆಗಳಿವೆ ಎಂದು ಆಕ್ಸಿಸ್‌ ಮೈ ಇಂಡಿಯಾ ಹೇಳಿವೆ. 234 ಸದಸ್ಯಬಲದ ತಮಿಳುನಾಡು ಅಸೆಂಬ್ಲಿಯಲ್ಲಿ ಅಧಿಕಾರಕ್ಕೇರಲು 117 ಸೀಟುಗಳು ಬೇಕು.

Continue Reading
Advertisement
Latest37 minutes ago

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ

Latest1 hour ago

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ

Latest2 hours ago

‘ಟಾಕ್ಸಿಕ್’ ಸಿನಿಮಾದಲ್ಲಿ ಬೋಲ್ಡ್ ದೃಶ್ಯಕ್ಕೆ ಕತ್ತರಿ ಹಾಕಿ ಕಿಯಾರಾ ಅಡ್ವಾಣಿ ಮನವಿ?

Latest1 day ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

Latest1 day ago

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

Latest2 days ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest3 days ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest3 days ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest3 days ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest3 days ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌