Rajyasabha Election | ಕಾಂಗ್ರೆಸ್‌-ಜನತಾದಳದ ʼಆತ್ಮಸಾಕ್ಷಿʼ ಜಗಳ - Vistara News

ಪ್ರಮುಖ ಸುದ್ದಿ

Rajyasabha Election | ಕಾಂಗ್ರೆಸ್‌-ಜನತಾದಳದ ʼಆತ್ಮಸಾಕ್ಷಿʼ ಜಗಳ

ತಮ್ಮ ಮೂಗಿನ ನೇರಕ್ಕೆ ಯೋಚನೆ ಮಾಡುತ್ತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಈಗ ಗುದ್ದಾಡುತ್ತಿವೆ. Rajyasabha Election ಗೆಲ್ಲಲು ಎದುರಾಳಿ ಪಕ್ಷದ ಶಾಸಕರ ಆತ್ಮಸಾಕ್ಷಿಯನ್ನೇ ಕೆಣಕಲಾಗುತ್ತಿದೆ.

VISTARANEWS.COM


on

Siddaramaiah and HD Kumaraswamy class regarding coalition govt collapse
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ರಾಜ್ಯಸಭೆ ಚುನಾವಣೆಯಲ್ಲಿ (Rajyasabha Election) ನಾಲ್ಕನೇ ಅಭ್ಯರ್ಥಿಯನ್ನು ಗೆಲ್ಲಿಸುವ ಕುರಿತಾಗಿ ಕಾಂಗ್ರೆಸ್‌ ಹಾಗೂ ಜಾತ್ಯತೀತ ಜನತಾದಳ(ಜೆಡಿಎಸ್‌) ನಡುವೆ ಆತ್ಮಸಾಕ್ಷಿ ಜಗಳ ನಡೆಯುತ್ತಿದೆ. ಎದುರಾಳಿ ಪಕ್ಷದ ಶಾಸಕರು ತಮ್ಮ ʼಆತ್ಮಸಾಕ್ಷಿʼ ಮತಗಳನ್ನು ತಮಗೆ ನೀಡಬೇಕು ಎಂದು ಹಕ್ಕುಮಂಡನೆ ನಡೆಯುತ್ತಿದೆ.

ರಾಜ್ಯಸಭೆ ಚುನಾವಣೆ ಜೂನ್‌ 10ರಂದು ನಡೆಯಲಿದೆ. ರಾಜ್ಯದಿಂದ ನಾಲ್ಕು ಸ್ಥಾನಗಳನ್ನು ಆಯ್ಕೆ ಮಾಡಬೇಕಿದೆ. ಶಾಸಕರ ಸಂಖ್ಯೆಗೆ ಅನುಗುಣವಾಗಿ ಬಿಜೆಪಿಗೆ ಎರಡು, ಕಾಂಗ್ರೆಸ್‌ಗೆ ಒಂದು ಸ್ಥಾನ ಸುಲಭವಾಗಿ ಲಭಿಸುತ್ತದೆ. ಉಳಿದಂತೆ ಒಂದು ಸ್ಥಾನ ಪಡೆಯಲು ಮೂರೂ ಪಕ್ಷಗಳಿಗೆ ಸಂಖ್ಯೆ ಇಲ್ಲ. ಯಾವುದೇ ಎರಡು ಪಕ್ಷಗಳು ಮೈತ್ರಿ ಮಾಡಿಕೊಂಡು ಅಥವಾ ಅಕ್ರಮವಾಗಿ ಶಾಸಕರ ಮತ ಪಡೆದರಷ್ಟೆ ಗೆಲುವು ಸಾಧ್ಯ.

ಇದನ್ನೂ ಓದಿ | ರಾಜ್ಯಸಭೆ ಚುನಾವಣೆ | ದೇಶದ ವಿತ್ತ ಸಚಿವೆಗಿಂತ JDS ಅಭ್ಯರ್ಥಿ 230 ಪಟ್ಟು ಶ್ರೀಮಂತ!

ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಾಂಗ್ರೆಸ್‌ ಬೆಂಬಲ ಪಡೆದು ಜಯಗಳಿಸುವುದು ಉದ್ಯಮಿ ಕುಪೇಂದ್ರ ರೆಡ್ಡಿ ಆಸೆಯಾಗಿತ್ತು. ಇದಕ್ಕೆ ದೊಡ್ಡಗೌಡರೂ ಸಪೋರ್ಟ್‌ ಮಾಡಿದ್ದರು. ಸ್ವತಃ ಗೌಡರೇ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಹತ್ತಿರ ಮಾತನಾಡಿದ್ದರು ಎನ್ನುವುದು ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರ ಸಾಕ್ಷಿ. ಈ ಮಾತನ್ನು ಸೋನಿಯಾ ಗಾಂಧಿಯವರಿಗೆ ಗೌಡರು ಹೇಳುವಾಗ ಸ್ವತಃ ತಾನೇ ಇದ್ದೆ ಎಂದು ಎರಡು ದಿನದ ಹಿಂದೆ ಸುದ್ದಿಗೋಷ್ಠಿಯಲ್ಲಿ ರೇವಣ್ಣ ಹೇಳಿದ್ದಾರೆ. ಆದರೆ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸುವುದು ಖಚಿತವಾದ ಬೆನ್ನಲ್ಲೆ ಕಾಂಗ್ರೆಸ್‌ನಿಂದ ಹಿರಿಯ ನಾಯಕ ರೆಹಮಾನ್‌ ಖಾನ್‌ ಪುತ್ರ ಮನ್ಸೂರ್‌ ಖಾನ್‌ ಅವರನ್ನು ಸ್ಪರ್ಧೆಗೆ ಇಳಿಸಲಾಯಿತು.

ಇಲ್ಲಿಂದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ವಾಗ್ವಾದ ಆರಂಭವಾಗಿದೆ. ಈಗ ಎರಡೂ ಪಕ್ಷಗಳು ಮತ್ತೊಬ್ಬರ ಪಕ್ಷದ ಶಾಸಕರ ಆತ್ಮಸಾಕ್ಷಿ ಮತಗಳ ಮೇಲೆ ಕಣ್ಣಿಟ್ಟಿವೆ. ಕಾಂಗ್ರೆಸ್‌ ತಾನು ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಜೆಡಿಎಸ್‌ಗೆ ನಿಜವಾಗಲೂ ಅಲ್ಪಸಂಖ್ಯಾತರ ಮೇಲೆ ಪ್ರೀತಿ ಇದ್ದರೆ ಮನ್ಸೂರ್‌ ಖಾನ್‌ಗೆ ಮತ ನೀಡಬೇಕು ಎನ್ನುತ್ತದೆ. ಅದೇ ಜೆಡಿಎಸ್‌ ರಾಜ್ಯ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಮಾತಿನಲ್ಲೆ ಹೇಳುವುದಾದರೆ, ʼಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ಮೇಲೆ ಅಷ್ಟೊಂದು ಅಭಿಮಾನ ಇದ್ದಿದ್ದರೆ ಮೊದಲನೇ ಕ್ಯಾಂಡಿಡೇಟ್‌ ಮಾಡಬೇಕಿತ್ತು. ಆದರೆ ಅವರಿಗೆ ಇಲ್ಲ. ಗೆಲ್ಲುವುದಕ್ಕೆ ಜೈರಾಮ್‌ ರಮೇಶ್‌. ಸೋಲೋದಕ್ಕೆ ಸಾಬರಾ?ʼ ಎಂದು ಇಬ್ರಾಹಿಂ ತಮ್ಮದೇ ಶೈಲಿಯಲ್ಲಿ ಪ್ರಶ್ನಿಸಿದ್ದಾರೆ. ಕೋಮುವಾದಿ ಬಿಜೆಪಿಯನ್ನು ಗೆಲ್ಲದಂತೆ ತಡೆಯಬೇಕೆಂದರೆ ಜೆಡಿಎಸ್‌ಗೆ ಮತ ನೀಡಿ ಎಂದು ಜೆಡಿಎಸ್‌ ಹೇಳುತ್ತಿದೆ.

ಈ ಎಲ್ಲ ಬೆಳವಣಿಗೆಗಳ ಕುರಿತು ಮೈಸೂರಿನಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಅಲ್ಪಸಂಖ್ಯಾತ ಅಭ್ಯರ್ಥಿ ಗೆಲ್ಲಿಸಲು ಜೆಡಿಎಸ್ ತನ್ನ ಅಭ್ಯರ್ಥಿಯ ನಿವೃತ್ತಿ ಘೋಷಿಸಲಿ ಎಂದು ಜೆಡಿಎಸ್‌ಗೆ ಪುಕ್ಕಟ್ಟೆ ಸಲಹೆ ನೀಡಿದ್ದಾರೆ. ಜೆಡಿಎಸ್ ಮತ್ತು ಬಿಜೆಪಿಯ ಕೆಲ ಆತ್ಮಸಾಕ್ಷಿಯ ಮತಗಳು ಕಾಂಗ್ರೆಸ್‌ಗೆ ಬರುತ್ತವೆ. ನಮ್ಮ ಗೆಲುವಿಗೆ ಎಷ್ಟು ಮತ ಬೇಕೋ ಅಷ್ಟು ಮತಗಳು ಈ ಎರಡೂ ಪಕ್ಷಗಳಿಂದ ಬಂದೇ ಸಿಗುತ್ತವೆ. ಬಿಜೆಪಿ ಗೆಲ್ಲಬಾರದು ಎಂಬ ಇಚ್ಚೆ ಜೆಡಿಎಸ್‌ಗೆ ಈಗಲೂ ಇದ್ದರೆ ಅವರ ಅಭ್ಯರ್ಥಿಯನ್ನು ಕಣದಿಂದ ನಿವೃತ್ತಿ ಮಾಡಿಸಲಿ. ನಾವು ಈ ಹಿಂದೆ ಅನೇಕ ಬಾರಿ ಜೆಡಿಎಸ್‌ಗೆ ನೆರವು ನೀಡಿಲ್ವ ? ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸುವಾಗ ನಾವು ಬೆಂಬಲಿಸಲಿಲ್ವ? ಮೂವತ್ತೇಳು ಸ್ಥಾನ ಇದ್ದ ಜೆಡಿಎಸ್‌ಗೆ ನಾವು ಸಿಎಂ ಸ್ಥಾನ ಕೊಡಲಿಲ್ವ? ಹೀಗೆ ಹಲವು ಬಾರಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ನಾವು ಜೆಡಿಎಸ್‌ಗೆ ಸಹಕಾರ ಕೊಟ್ಟಿದ್ದೇವೆ. ಪ್ರತಿ ಬಾರಿಯೂ ಜೆಡಿಎಸ್ ಯಾಕೆ ಗೆಲ್ಲಬೇಕು.? ಎಂದಿದ್ದಾರೆ.

ಈ ಮಾತಿಗೆ ಮೈಸೂರಿನಲ್ಲೆ ಎಚ್‌.ಡಿ. ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಅವರೊಬ್ಬರಿಗೇ ಆತ್ಮಸಾಕ್ಷಿ ಇರೋದು, ನಮಗ್ಯಾರಿಗೂ ಇಲ್ವಾ.? ಆತ್ಮಸಾಕ್ಷಿಯನ್ನು ಅವರೊಬ್ಬರಿಗೆ ಗುತ್ತಿಗೆ ಕೊಟ್ಟಿದ್ದೇವ? 10ನೇ ತಾರೀಖು ಬರುವ ಫಲಿತಾಂಶವೇ ಎಲ್ಲದಕ್ಕೂ ಉತ್ತರ ಕೊಡಲಿದೆ‌. ಜಿ.ಟಿ. ದೇವೇಗೌಡರು ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತ ನೀಡುವುದಾಗಿ ಹೇಳಿದ್ದಾರೆ. ಈ ಬಗ್ಗೆ ಬೇರೆ ಯಾರೋ ಹೇಳುವ ಮಾತುಗಳಿಗೆ ಉತ್ತರ ಕೊಡಲ್ಲ. ಸಿದ್ದರಾಮಯ್ಯ, ಡಿ.ಕೆ‌.ಶಿವಕುಮಾರ್, ಧ್ರುವನಾರಾಯಣ್ ಆಡಿರುವ ಮಾತುಗಳನ್ನೆಲ್ಲ ಕೇಳಿದ್ದೇನೆ. ಎಲ್ಲದಕ್ಕೂ ಮಂಗಳವಾರ ವಿಸ್ತಾರವಾಗಿ ಉತ್ತರ ಕೊಡುತ್ತೇನೆ. ಎಲ್ಲ ವಿಷಯಗಳ ಬಗ್ಗೆ ಚರ್ಚೆ ಮಾಡಲು ಸಿದ್ಧವಾಗಿಯೇ ಇದ್ದೇನೆ.

ಕಳೆದ ಬಾರಿಯ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಒಂದೇ ಅಲ್ಲ, ಬಿಜೆಪಿಯೂ ಕೂಡ ದೇವೇಗೌಡರ ವಿರುದ್ಧ ಅಭ್ಯರ್ಥಿ ಹಾಕಿರಲಿಲ್ಲ. ಈ ಸಂಬಂಧ ಮೊದಲೇ ಬಿಜೆಪಿ ತೀರ್ಮಾನ ಕೈಗೊಂಡಿತ್ತು. ಬಿಜೆಪಿ ತೀರ್ಮಾನದ ಬಳಿಕ ಕಾಂಗ್ರೆಸ್ ಕೂಡ ಅಭ್ಯರ್ಥಿ ಹಾಕಲಿಲ್ಲ. ದೇವೇಗೌಡರನ್ನು ರಾಜ್ಯಸಭೆಗೆ ಕಳಿಸುವುದರಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳ ಕೇಂದ್ರದ ಮುಖಂಡರ ನಿರ್ಧಾರ ಇದೆ. ಇದರಲ್ಲಿ ರಾಜ್ಯ ಕಾಂಗ್ರೆಸ್‌ ಪಾತ್ರ ಏನೂ ಇಲ್ಲ.

ರಾಜ್ಯಸದಭೆ ಚುನಾವಣೆಯಲ್ಲಿ ನಮಗೆ 32 ಮತಗಳಿವೆ. ಕೊರತೆ ಮತಗಳನ್ನು ತುಂಬಿಸುವ ಪ್ರಯತ್ನ ಮಾಡುತ್ತಿದ್ದೇವೆ. ಇದಕ್ಕಾಗಿ ಯಾವುದೇ ಆಪರೇಷನ್ ಮಾಡಲ್ಲ. ಸಿದ್ದರಾಮಯ್ಯ ಹೇಳಿರುವಂತೆ ನಮ್ಮದೂ ಆತ್ಮಸಾಕ್ಷಿಯೇ ಎಂದು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಸಾಮಾನ್ಯವಾಗಿ ಚುನಾವಣೆ ಹಿಂದಿನ ದಿನ ವಿಪ್‌ ಹೊರಡಿಸಲಾಗುತ್ತದೆ. ಆದರೆ ಸಿದ್ದರಾಮಯ್ಯ ಇದೀಗ ಏಳು ದಿನ ಮೊದಲೇ ವಿಪ್‌ ಹೊರಡಿಸುವಂತೆ ಮಾಡಿದ್ದಾರೆ. ಈ ಮೂಲಕ, ಅಭ್ಯರ್ಥಿಯ ನಾಮಪತ್ರ ಹಿಂಪಡೆಯದಂತೆ ಕಾಂಗ್ರೆಸ್‌ ಹೈಕಮಾಂಡ್‌ ಮೇಲೆಯೇ ಒತ್ತಡ ತಂತ್ರ ಅನುಸರಿಸಿದ್ದಾರೆ. ಜೂನ್‌ 9ರಂದು ಶಾಸಕಾಂಗ ಪಕ್ಷದ ಸಭೆಯನ್ನೂ ಕರೆದಿದ್ದಾರೆ. ಈ ಮೂಲಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಮಲ್ಲಿಕಾರ್ಜುನ ಖರ್ಗೆ ಮಾತಿಗೆ ಮಣಿದು ಕಾಂಗ್ರೆಸ್‌ ಹೈಕಮಾಂಡ್‌ ತನ್ನ ಅಭ್ಯರ್ಥಿಯನ್ನು ಹಿಂಪಡೆಯದಂತೆ ʼಲಾಕ್‌ʼ ಮಾಡಲು ಪ್ರಯತ್ನಿಸಿದ್ದಾರೆ. ಇಲ್ಲಿಯವರೆಗೆ ಬಹುತೇಕ ಸಫಲವೂ ಆಗಿದ್ದಾರೆ.

ಇದೆಲ್ಲದರ ನಡುವೆ ಬಿಜೆಪಿ ಅಭ್ಯರ್ಥಿ ಲೆಹರ್‌ ಸಿಂಗ್‌ ಸಿರೋಯಾ ಗೆಲುವಿನ ಕನಸು ಕಾಣುತ್ತಿದ್ದಾರೆ. ಗಣೇಶ ಬಂದ ಕಾಯಿ ಕಡುಬು ತಿಂದ ಚಿಕ್ಕ ಕೆರೇಲಿ ಬಿದ್ದ ದೊಡ್ಡ ಕೆರೇಲಿ ಎದ್ದ ಎನ್ನುವಂತೆ, ರಾಜ್ಯದ ಮೇಲ್ಮನೆ ವಿಧಾನ ಪರಿಷತ್ತಿನ ಅವಧಿ ಮುಗಿಯುತ್ತಿದ್ದಂತೆಯೇ ನೇರವಾಗಿ ಕೇಂದ್ರದ ಮೇಲ್ಮನೆ ರಾಜ್ಯಸಭೆಯಲ್ಲಿ ಪ್ರತ್ಯಕ್ಷವಾಗುವ ಉಪಾಯ ಹೂಡಿದ್ದಾರೆ. ಚುನಾವಣೆಗೆ ಇನ್ನು ಮೂರು ದಿನ ಮಾತ್ರವೇ ಉಳಿದಿದ್ದು, ಕಾಲವೇ ಎಲ್ಲಕ್ಕೂ ಉತ್ತರ ನೀಡಲಿದೆ.
ಇದನ್ನೂ ಓದಿ | ನವರಸನಾಯಕನಿಗೆ ಒಲಿದ ರಾಜ್ಯಸಭೆ: ನಿರ್ಮಲಾ ಸೀತಾರಾಮನ್‌ ಜತೆಗೆ ಜಗ್ಗೇಶ್‌ಗೆ ಬಿಜೆಪಿ ಟಿಕೆಟ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

Neha Murder Case: ನೇಹಾ ಕೇಸ್‌ನಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ; ಡಿಜಿಗೆ ಸಿಎಂ ಸೂಚನೆ

Neha Murder Case: ಕಾವೇರಿ ನಿವಾಸದಲ್ಲಿ ಪೊಲೀಸ್‌ ಮಹಾನಿರ್ದೇಶಕ ಅಲೋಕ್ ಮೋಹನ್ ಹಾಗೂ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ. ಇಬ್ಬರು ಹಿರಿಯ ಅಧಿಕಾರಿಗಳ ಜತೆ ಸಿಎಂ ಸಿದ್ದರಾಮಯ್ಯ ಒಂದು ಗಂಟೆಗೂ ಹೆಚ್ಚು ಕಾಲ ಸುದೀರ್ಘ ಚರ್ಚೆ ನಡೆಸಿ, ಕಠಿಣ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ಇದು ಚುನಾವಣೆ ಸಮಯ ಆಗಿದ್ದು, ಜಾಗ್ರತೆ ವಹಿಸಲು ಸೂಚನೆ ನೀಡಿದ್ದಾರೆ.

VISTARANEWS.COM


on

Take strict action in Neha Murder Case CM instructs to DG
Koo

ಬೆಂಗಳೂರು: ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ಯುವತಿಯೊಬ್ಬಳನ್ನು ಪ್ರೀತಿಸಲು ನಿರಾಕರಣೆ ಮಾಡಿದಳು ಎಂಬ ಕಾರಣಕ್ಕೆ ಮಾಡಿದ ಹತ್ಯೆ (‌Neha Murder Case) ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಸಿದ್ದರಾಮಯ್ಯ (CM Siddaramaiah), ಪೊಲೀಸ್ ಮಹಾ ನಿರ್ದೇಶಕರು ಹಾಗೂ ಬೆಂಗಳೂರು ಪೊಲೀಸ್‌ ಆಯುಕ್ತರ ಜತೆಗೆ ಚರ್ಚೆ ನಡೆಸಿದ್ದಾರೆ. ಆರೋಪಿ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮವನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಕಾವೇರಿ ನಿವಾಸದಲ್ಲಿ ಪೊಲೀಸ್‌ ಮಹಾನಿರ್ದೇಶಕ ಅಲೋಕ್ ಮೋಹನ್ ಹಾಗೂ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ. ಇಬ್ಬರು ಹಿರಿಯ ಅಧಿಕಾರಿಗಳ ಜತೆ ಸಿಎಂ ಸಿದ್ದರಾಮಯ್ಯ ಒಂದು ಗಂಟೆಗೂ ಹೆಚ್ಚು ಕಾಲ ಸುದೀರ್ಘ ಚರ್ಚೆ ನಡೆಸಿದರು. ಚರ್ಚೆ ವೇಳೆ ಘಟನೆ ಕುರಿತು ಅಲೋಕ್ ಮೋಹನ್ ಅವರು ಸಿಎಂಗೆ ಹೆಚ್ಚಿನ ಮಾಹಿತಿ ನೀಡಿದರು.

Hubli Murder Case

ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ

ಈಗ ಚುನಾವಣಾ ಸಮಯವಾಗಿದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದಲ್ಲಿ ಯಾವುದೇ ರೀತಿಯಾದಂತಹ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು. ಇಂತಹ ಘಟನೆಗಳು ಮತ್ತೆ ಮತ್ತೆ ನಡೆಯದಂತೆ ಎಚ್ಚರ ವಹಿಸಬೇಕು. ಆರೋಪಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಮಹಾನಿರ್ದೇಶಕರಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇದೇ ವೇಳೆ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚದಂತೆ ನೋಡಿಕೊಳ್ಳಲು ಬೆಂಗಳೂರು ಪೊಲೀಸ್ ಆಯುಕ್ತರಿಗೂ ಎಚ್ಚರಿಕೆ ನೀಡಿದ್ದಾರೆ.

ನೇಹಾ ಹತ್ಯೆಗೆ ಸಿಎಂ ಸಂತಾಪ

ಹುಬ್ಬಳ್ಳಿಯಲ್ಲಿ ಕಾರ್ಪೋರೇಟರ್‌ ಮಗಳು ನೇಹಾ ಹಿರೇಮಠ ಹತ್ಯೆಯನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. ಘಟನೆ ಸಂಬಂಧ ಯಾರೊಬ್ಬರೂ ಉದ್ವೇಗಕ್ಕೆ ಒಳಗಾಗಿ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಹೇಳಿದ್ದಾರೆ.

ಸಿಎಂ ಟ್ವೀಟ್‌ನಲ್ಲೇನಿದೆ?

“ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ. ಮೃತ ಯುವತಿಯ ಕುಟುಂಬಕ್ಕೆ ನನ್ನ ಸಂತಾಪಗಳು.

ಘಟನೆ ಸಂಬಂಧ ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಕಟ್ಟುನಿಟ್ಟಿನ ತನಿಖೆ ನಡೆಸಿ, ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದೇನೆ.

ಘಟನೆ ಸಂಬಂಧ ಯಾರೊಬ್ಬರೂ ಉದ್ವೇಗಕ್ಕೆ ಒಳಗಾಗಿ ಕಾನೂನನ್ನು ಕೈಗೆತ್ತಿಕೊಳ್ಳುವುದಾಗಲೀ ಅಥವಾ ಸಮಾಜದ ಶಾಂತಿ ಕದಡುವ ಪ್ರಯತ್ನಕ್ಕೆ ಮುಂದಾಗಬಾರದು. ಯುವತಿಯ ಸಾವಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ‌ ಕರ್ತವ್ಯ, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಶಕ್ತಿಮೀರಿ ಶ್ರಮಿಸಲಿದೆ” ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದಾರೆ.

ಏನಿದು ಪ್ರಕರಣ?

ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್‌, ಕಾರ್ಪೋರೇಟರ್‌ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದಿದ್ದಾನೆ. ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲಿ ಕೊಲೆ ನಡೆದಿದೆ. ನೇಹಾ ಹಿರೇಮಠ ಕೊಲೆಯಾದ ಯುವತಿ. ನೇಹಾ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳಾಗಿದ್ದಾಳೆ.

ಪ್ರೀತಿಸಲು ನಿರಾಕರಿಸಿದ್ದಕ್ಕೆ ಕೊಲೆ

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ವೇಳೆ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ. ಯುವತಿಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದಾನೆ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದು, ನೇಹಾಳಿಗೆ ತೀವ್ರ ರಕ್ತಸ್ರಾವವಾಗಿದೆ. ಸ್ಥಳೀಯರು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

ಲವ್‌ ಜಿಹಾದ್‌ ಫಲಿಸದ್ದಕ್ಕೆ ಕೃತ್ಯ: ಪ್ರಮೋದ್‌ ಮುತಾಲಿಕ್

ಕೊಲೆ ಎನ್ನುವುದು ಇಸ್ಲಾಮ್‌ನಲ್ಲಿ ಸಹಜ ಪ್ರಕ್ರಿಯೆಯಾಗಿದೆ. ವಿದ್ಯಾರ್ಥಿನಿಯರಿಗೆ ರಕ್ಷಣೆ ಇಲ್ಲ ಎನ್ನುವಂತಾಗಿದೆ. ಆತ ಐಸಿಸ್ ಮಾದರಿಯಲ್ಲಿ ಕುತ್ತಿಗೆಗೆ ಚಾಕು ಹಾಕಿದ್ದಾನೆ. ಆರೋಪಿ ಫಯಾಜ್‌ ಲವ್ ಮಾಡಿ ಮತಾಂತರ ಮಾಡಲು ಮುಂದಾಗಿದ್ದ. ಲವ್ ಜಿಹಾದ್ ಯಶಸ್ವಿಯಾಗಲಿಲ್ಲವೆಂದು ಈಗ ಕೊಲೆ ಮಾಡಿದ್ದಾನೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಮೋದ್‌ ಮುತಾಲಿಕ್‌, ಫಯಾಜ್‌ ಐಸಿಸ್‌ ಮಾದರಿಯಲ್ಲಿ ಕುತ್ತಿಗೆಗೆ ಚಾಕು ಹಾಕಿದ್ದಾನೆ. ಚಾಕು ಹಾಕಲು ಆತ ಎಲ್ಲಿ ತರಬೇತಿ ಪಡೆದಿದ್ದಾನೆ? ಈ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಬೆಳೆಸಿದ ವಿಷಬೀಜವಿದು. ಕಾಂಗ್ರೆಸ್ ಹುಟ್ಟಿದಾಗ ಆ ಪಕ್ಷದ ನಾಯಕರು ಬ್ರಿಟಿಷರ ಪರವಿದ್ದರು. ಈಗ ಮುಸ್ಲಿಮರು, ಕೊಲೆಗಡುಕರ ಪರ‌ ಇದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿಜವಾಗಿ ಕಳಕಳಿ ಇದ್ದರೆ ಕೊಲೆಗಡುಕನನ್ನು ಎನ್ಕೌಂಟರ್ ಮಾಡಿಸಬೇಕು. ಕೊಲೆಗಡುಕನ ಮನೆಗೆ ಬುಲ್ಡೋಜರ್ ಹಚ್ಚಿಸಿ ಕಿತ್ತು ಬಿಸಾಕಬೇಕು. ಜಮಾತೆ ಇಸ್ಲಾಮಿನವರು ಕೂಡಲೇ ಫತ್ವಾ ಹೊರಡಿಸಿ ಅವರ ಮನೆಯನ್ನು ಬಹಿಷ್ಕರಿಸಬೇಕು. ವಕೀಲರು ಅವನ ಪರ ವಾದ ಮಾಡಲು ನಿಲ್ಲಬಾರದು. ಎಲ್ಲಿಯವರೆಗೆ ಕಾಂಗ್ರೆಸ್ ಇರುತ್ತೆದೆಯೋ ಅಲ್ಲಿಯವರೆಗೆ ಈ ರೀತಿ ಕೊಲೆಗಳು ಆಗುತ್ತಲೇ ಇರುತ್ತವೆ ಎಂದು ಪ್ರಮೋದ್‌ ಮುತಾಲಿಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಮತ್ತೊಂದು ಬಿಹಾರವಾಗುತ್ತಿದೆ: ಬಸವರಾಜ ಬೊಮ್ಮಾಯಿ

ಹಾಡಹಗಲೇ ಕಾಲೇಜು ಕ್ಯಾಂಪಸ್‌ನಲ್ಲಿ ಯುವತಿಯ ಹತ್ಯೆ ಮಾಡಿರುವುದು ಅತ್ಯಂತ ಆಘಾತಕಾರಿಯಾಗಿದೆ. ಸಮಾಜಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿರುವುದರಿಂದ ರಾಜಾರೋಷವಾಗಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿವೆ. ಕಾಲೇಜು ಯುವತಿಯ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌ಐಟಿ ಮೂಲಕ ತನಿಖೆ ನಡೆಸಬೇಕು. ಕರ್ನಾಟಕವು ಇನ್ನೊಂದು ಬಿಹಾರ ಆಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯ ಕಿಮ್ಸ್‌ಗೆ ಭೇಟಿ ನೀಡಿ ನೇಹಾ ಕುಟುಂಬದವರಿಗೆ ಸಾಂತ್ವನ ಹೇಳಿದ ಬಸವರಾಜ ಬೊಮ್ಮಾಯಿ, ಇದೊಂದು ಆಘಾತಕರ ವಿಚಾರ. ಈ ರೀತಿ ಹುಬ್ಬಳ್ಳಿಯಲ್ಲಿ ಯಾವತ್ತೂ ನಡೆದಿಲ್ಲ. ಇದೊಂದು ಸಮಾಜದ ನಡುವೆ ಇರುವ ಕ್ಷೋಭೆ. ಸಮಾಜಗಳ ನಡುವೆ ಸಾಮರಸ್ಯ ಕಡಿಮೆಯಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಗದಗಿನಲ್ಲಿ ನಮ್ಮ ನಗರ ಸಭೆಯ ಉಪಾಧ್ಯಕ್ಷರ ಕುಟುಂಬದವರು ಕಗ್ಗೊಲೆಯಾಗಿದೆ. ಬೆಂಗಳೂರಿನಲ್ಲಿ ಜೈ ಶ್ರೀರಾಮ್ ಹೇಳಿದವರ ಮೇಲೆ ಹಲ್ಲೆಯಾಗಿದೆ. ಸಮಾಜಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿದೆ. ಈ ಸರ್ಕಾರದಲ್ಲಿ ಗೂಂಡಾಗಳನ್ನು ರಕ್ಷಿಸುವವರು ಇದ್ದಾರೆ ಎನ್ನುವ ನಂಬಿಕೆ ಇರುವುದರಿಂದ ಈ ರೀತಿ ಘಟನೆ ನಡೆಯುತ್ತಿವೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಟ್ವೀಟ್ ಮಾಡಿ ಕೈತೊಳೆದುಕೊಳ್ಳಬಾರದು ಎಂದು ಹೇಳಿದರು.

ಇದನ್ನು ಕೇವಲ ವೈಯಕ್ತಿಕ ಘಟನೆ ಎಂದು ನೋಡಬಾರದು. ಇಂಥದ್ದು ಇಡೀ ಸಮಾಜದ ಮೇಲೆ ಪರಿಣಾಮ ಬೀರುತ್ತವೆ. ಕರ್ನಾಟಕವು ಇನ್ನೊಂದು ಬಿಹಾರ ಆಗುತ್ತಿದೆ. ಗೃಹ ಸಚಿವರು, ಡಿಜಿಪಿ ಏನು ಮಾಡುತ್ತಿದ್ದಾರೆ? ಈ ಸರ್ಕಾರದ ಅವಧಿಯಲ್ಲಿ ವಿಧಾನಸೌಧದಲ್ಲಿಯೇ ಪಾಕಿಸ್ತಾನ ಜಿಂದಾಬಾದ್ ಹೇಳುತ್ತಾರೆ. ಗದಗಿನಲ್ಲಿ ಕುಟುಂಬದ ಕಗ್ಗೊಲೆಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: Neha Murder Case: ನೇಹಾ ಕೊಲೆಗಾರ ಫಯಾಜ್‌ಗೆ 14 ದಿನ ನ್ಯಾಯಾಂಗ ಬಂಧನ; ʼಲವ್‌ ಜಿಹಾದ್‌ ಕೊಲೆʼ ವಿರೋಧಿಸಿ ಮೂರು ದಿನ ಮುನವಳ್ಳಿ ಬಂದ್

ಹುಬ್ಬಳ್ಳಿ ಕಮಿಷನರ್ ಹೇಳಿಕೆಗಳನ್ನು ನೋಡಿದಾಗ ಅವರು ಯಾವುದೇ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ನೇಹಾ ಹತ್ಯೆ ಪ್ರಕರಣವನ್ನು ಎಸ್‌ಐಟಿ ಮೂಲಕ ತನಿಖೆ ನಡೆಸಬೇಕು. ರಾಜ್ಯದಲ್ಲಿ ಎಲ್ಲ ಕುಟುಂಬಗಳು ಭಯಭೀತರಾಗಿದ್ದಾರೆ. ಅಪರಾಧ ವಿಭಾಗದ ಡಿಜಿಪಿ ಇದರ ಮುಂದಾಳತ್ವ ವಹಿಸಿ ತನಿಖೆ ನಡೆಸಬೇಕು. ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು. ಈ ಪ್ರಕರಣದ ತಾರ್ಕಿಕ ಅಂತ್ಯ ಆಗುವವರೆಗೂ ಹೋರಾಟ ಮಾಡುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಕುಟುಂಬಕ್ಕೆ ಸಾಂತ್ವನ

ಹತ್ಯೆಗೀಡಾದ ನೇಹಾ ಅವರ ತಂದೆಗೆ ದೂರವಾಣಿ ಮೂಲಕ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಈ ರೀತಿಯ ಘಟನೆ ದುರದೃಷ್ಟಕರ ನಾವು ನಿಮ್ಮೊಂದಿಗಿದ್ದೇವೆ. ಧೈರ್ಯವಾಗಿರಿ ಎಂದು ಸಾಂತ್ವನ ಹೇಳಿದರು.

Continue Reading

ಶಿಕ್ಷಣ

CET 2024 Exam: ಗಣಿತ, ಜೀವಶಾಸ್ತ್ರದ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ ವಿರುದ್ಧ ದೂರು; ಏಪ್ರಿಲ್‌ 24ಕ್ಕೆ ಸಮಿತಿ ರಚನೆಗೆ ಕೆಇಎ ನಿರ್ಧಾರ

CET 2024 Exam: ಜೀವಶಾಸ್ತ್ರದ 11 ಪ್ರಶ್ನೆಗಳು ಹಾಗೂ ಗಣಿತದ 9 ಪ್ರಶ್ನೆಗಳು ಔಟ್ ಆಫ್ ಸಿಲೆಬಸ್ ಕೇಳಲಾಗಿದೆ ಎಂದು ವಿದ್ಯಾರ್ಥಿಗಳು ಕೆಇಎಗೆ ದೂರು ನೀಡಿದ್ದಾರೆ. ಇವುಗಳಿಗೆ ಗ್ರೇಸ್ ಮಾರ್ಕ್ಸ್ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಪಠ್ಯಪುಸ್ತಕದಲ್ಲಿ ಇಲ್ಲದ ಪ್ರಶ್ನೆಗಳು ಬಂದಿವೆ. ಒಟ್ಟು 14 ಮಾರ್ಕ್ಸ್ ಔಟ್ ಆಫ್ ಸಿಲೆಬಸ್ ಬಂದಿದೆ ಎಂದು ಗುರುವಾರ ವಿದ್ಯಾರ್ಥಿಗಳು ಆರೋಪ ಮಾಡಿದ್ದರು. ಈಗ 11 ಮಾರ್ಕ್ಸ್ ಬಗ್ಗೆ ದೂರಿದ್ದಾರೆ. ಈಗ ಗ್ರೇಸ್‌ ಮಾರ್ಕ್ಸ್‌ ಕೊಡುವ ಬಗ್ಗೆ ಕೆಇಎ ಇನ್ನೂ ಯಾವುದೇ ನಿರ್ಧಾರವನ್ನು ಪ್ರಕಟ ಮಾಡಿಲ್ಲ. ಈ ಸಂಬಂಧ ಬುಧವಾರ ಸಭೆ ಕರೆಯಲಿದ್ದು, ಅಲ್ಲಿ ಚರ್ಚೆ ಮಾಡಿ ಸಮಿತಿಯೊಂದನ್ನು ರಚನೆ ಮಾಡುವುದಾಗಿ ಹೇಳಿದೆ.

VISTARANEWS.COM


on

CET 2024 exam Complaint against syllabus question of Mathematics and Biology KEA to set up committee on April 24
Koo

ಬೆಂಗಳೂರು: ಗುರುವಾರ ನಡೆದಿದ್ದ ಮೊದಲ ದಿನದ ಸಿಇಟಿ-2024 ಪರೀಕ್ಷೆಯಲ್ಲಿ (CET 2024 exam) ಗಣಿತ ಹಾಗೂ ಜೀವಶಾಸ್ತ್ರದ ವಿಷಯದಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ದೂರು ನೀಡಿದ್ದಾರೆ. ಅಲ್ಲದೆ, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಇಎ, ಗ್ರೇಸ್ ಮಾರ್ಕ್ಸ್ ಬಗ್ಗೆ ಬುಧವಾರ (ಏಪ್ರಿಲ್‌ 24) ಚರ್ಚಿಸಿ ತಜ್ಞರ ಸಮಿತಿಯನ್ನು ರಚನೆ ಮಾಡುವುದಾಗಿ ಹೇಳಿದೆ.

ಜೀವಶಾಸ್ತ್ರದ 11 ಪ್ರಶ್ನೆಗಳು ಹಾಗೂ ಗಣಿತದ 9 ಪ್ರಶ್ನೆಗಳು ಔಟ್ ಆಫ್ ಸಿಲೆಬಸ್ ಕೇಳಲಾಗಿದೆ ಎಂದು ವಿದ್ಯಾರ್ಥಿಗಳು ಕೆಇಎಗೆ ದೂರು ನೀಡಿದ್ದಾರೆ. ಇವುಗಳಿಗೆ ಗ್ರೇಸ್ ಮಾರ್ಕ್ಸ್ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಪಠ್ಯಪುಸ್ತಕದಲ್ಲಿ ಇಲ್ಲದ ಪ್ರಶ್ನೆಗಳು ಬಂದಿವೆ. ಒಟ್ಟು 14 ಮಾರ್ಕ್ಸ್ ಔಟ್ ಆಫ್ ಸಿಲೆಬಸ್ ಬಂದಿದೆ ಎಂದು ಗುರುವಾರ ವಿದ್ಯಾರ್ಥಿಗಳು ಆರೋಪ ಮಾಡಿದ್ದರು. ಈಗ 11 ಮಾರ್ಕ್ಸ್ ಬಗ್ಗೆ ದೂರಿದ್ದಾರೆ.

ಕೆಇಎ ಹೇಳೋದೇನು?

ಗ್ರೇಸ್ ಮಾರ್ಕ್ಸ್ ನೀಡುವ ಬಗ್ಗೆ ಕೆಇಎ ಈವರೆಗೆ ಯಾವುದೇ ತೀರ್ಮಾನವನ್ನು ತೆಗೆದುಕೊಂಡಿಲ್ಲ. ಗ್ರೇಸ್ ಮಾರ್ಕ್ಸ್ ಬಗ್ಗೆ ಬುಧವಾರ ಚರ್ಚಿಸಿ ತಜ್ಞರ ಸಮಿತಿಯನ್ನು ರಚನೆ ಮಾಡಲಾಗುವುದು. ನಂತರ ಗ್ರೇಸ್ ಮಾರ್ಕ್ಸ್ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ವಿಸ್ತಾರ ನ್ಯೂಸ್‌ಗೆ ಕೆಇಎ ಮಂಡಳಿ ಮಾಹಿತಿ ನೀಡಿದೆ. ಈ ಸಮಿತಿ ರಚನೆಯಾದ ಬಳಿಕ ಅಧ್ಯಯನ ಮಾಡಿ ಗ್ರೇಸ್‌ ಮಾರ್ಕ್ಸ್ ಕೊಡುವ ಬಗ್ಗೆ ನಿರ್ಧಾರವನ್ನು ಕೈಗೊಳ್ಳಲಾಗುವುದು.

ದಾಖಲೆ ಸಂಖ್ಯೆಯಲ್ಲಿ ಸಿಇಟಿ ಬರೆದಿರುವ ವಿದ್ಯಾರ್ಥಿಗಳು

ಈ ವರ್ಷ ಸಿಇಟಿ ಪರೀಕ್ಷೆಗೆ ದಾಖಲೆಯ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಕಳೆದ ವರ್ಷಕ್ಕಿಂತ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಸಿಇಟಿ ಪರೀಕ್ಷೆಯನ್ನು ಬರೆದಿದ್ದಾರೆ. ಈ ಹಿಂದೆ ಯಾವತ್ತೂ ಇಷ್ಟು ಪ್ರಮಾಣದಲ್ಲಿ ವಿದ್ಯಾರ್ಥಿಗಳು ನೋಂದಣಿ ಮಾಡಿರಲಿಲ್ಲ. ರಾಜ್ಯದಲ್ಲಿ 737 ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಲ್ಲಿ 167 ಕೇಂದ್ರಗಳಲ್ಲಿ ಮೊದಲ ದಿನದ ಪರೀಕ್ಷೆಯನ್ನು ನಡೆಸಲಾಗಿದೆ.

ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಭೇಟಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಅವರು ಗುರುವಾರ ಮಲ್ಲೇಶ್ವರಂ ಪಿಯು ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಶುಕ್ರವಾರ ನಡೆಯುವ ಪರೀಕ್ಷೆಗೂ ಬಿಗಿ ಭದ್ರತೆ ಇರಲಿದೆ ಎಂದು ಹೇಳಿದ್ದರು.

ಸಿಇಟಿಗೆ ಹೆಚ್ಚು ಅಂಕಗಳ ಪಟ್ಟಿ ಪರಿಗಣನೆ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಗುಡ್‌ನ್ಯೂಸ್‌ ನೀಡಿದೆ. ದ್ವಿತೀಯ ಪಿಯುಸಿಯ ಮೂರು ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳು ಯಾವುದರಲ್ಲಿ ಹೆಚ್ಚು ಅಂಕ ಪಡೆದಿರುತ್ತಾರೋ ಅದನ್ನೇ ಸಿಇಟಿ (CET 2024)ಗೆ ಪರಿಗಣಿಸಲು ಕೆಇಎ ಸಮ್ಮತಿ ಸೂಚಿಸಿದೆ. ಇದರಿಂದ ನೂರಾರು ವಿದ್ಯಾರ್ಥಿಗಳು ನಿರಾಳವಾಗಿದ್ದಾರೆ. ಎಂಜಿನಿಯರ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕೆಇಎ ಪ್ರತಿವರ್ಷ ಸಿಇಟಿ ನಡೆಸುತ್ತದೆ.

ಸಿಇಟಿ ಜತೆಗೆ ದ್ವಿತೀಯ ಪಿಯುಸಿಯಲ್ಲಿ ಗಳಿಸಿದ ಅಂಕವನ್ನೂ ರ‍್ಯಾಂಕಿಂಗ್​ಗೆ ಪರಿಗಣಿಸಲಾಗುತ್ತದೆ. ಇದುವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲಾದರೆ ಪೂರಕ ಪರೀಕ್ಷೆ ಬರೆದು ತೇರ್ಗಡೆಯಾಗಬೇಕಿತ್ತು. ಮುಖ್ಯ ಪರೀಕ್ಷೆ ಮತ್ತು ಪೂರಕ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಕ್ರೋಡೀಕರಿಸಿ ಅಂಕಪಟ್ಟಿ ನೀಡಲಾಗುತ್ತಿತ್ತು.

ನಿಯಮದಲ್ಲಿ ಬದಲಾವಣೆ

ಈ ಬಾರಿ ಈ ನಿಯಮದಲ್ಲಿ ಕೊಂಚ ಬದಲಾವಣೆ ತರಲಾಗಿದೆ. ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ಮೂರು ಪರೀಕ್ಷೆಗಳನ್ನು ಪರಿಚಯಿಸಲಾಗಿದೆ. ಒಂದು ವೇಳೆ ಕಡಿಮೆ ಅಂಕ ಬಂದಿದ್ದರೆ ಅದನ್ನು ಉತ್ತಮಪಡಿಸಿಕೊಳ್ಳಲು ವಿದ್ಯಾರ್ಥಿಗಳು ಇನ್ನು ಉಳಿದ ಎರಡು ಪರೀಕ್ಷೆಗಳನ್ನೂ ಬರೆಯಬಹುದು. ಹೆಚ್ಚು ಅಂಕ ಬಂದಿರುವುದನ್ನೇ ಪರಿಗಣಿಸಿ ಅಂತಿಮ ಅಂಕಪಟ್ಟಿ ನೀಡಲಾಗುತ್ತದೆ.

ಇದೀಗ ಆ ಹೆಚ್ಚುವರಿ ಅಂಕವನ್ನೇ ಸಿಇಟಿ ರ‍್ಯಾಂಕಿಂಗ್‌ಗೂ ಪರಿಣಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್‌.ರಮ್ಯಾ ಮಾತನಾಡಿ, ʼʼಹೆಚ್ಚು ಅಂಕ ಬಂದಿರುವ ಅಂತಿಮ ಅಂಕ ಪಟ್ಟಿಯನ್ನು ಸಿಇಟಿ ಅಂಕಗಳ ಜತೆ ರ‍್ಯಾಂಕಿಂಗ್‌ ಪಟ್ಟಿ ಸಿದ್ಧಪಡಿಸಲು ಪರೀಕ್ಷಾ ಪ್ರಾಧಿಕಾರ ಪರಿಗಣಿಸಲಿದೆʼʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Neha Murder Case: ಐಸಿಸ್‌ ಮಾದರಿಯಲ್ಲಿ ನೇಹಾಗೆ ಚಾಕು ಇರಿತ; ಲವ್‌ ಜಿಹಾದ್‌ ಫಲಿಸದ್ದಕ್ಕೆ ಕೃತ್ಯ: ಪ್ರಮೋದ್‌ ಮುತಾಲಿಕ್

ನಾಳೆ ಯಾವ ಪರೀಕ್ಷೆ?

ಸಿಇಟಿ 2024ರ ಪರೀಕ್ಷೆಗಳು ಏಪ್ರಿಲ್‌ 18ರಿಂದ ಆರಂಭವಾಗಿದ್ದು, ಏಪ್ರಿಲ್ 20ರವರೆಗೆ ನಡೆಯಲಿದೆ. ಏಪ್ರಿಲ್ 19ರ ಬೆಳಗ್ಗೆ 10.30ರಿಂದ ಭೌತಶಾಸ್ತ್ರ , ಮಧ್ಯಾಹ್ನ ರಸಾಯನ ಶಾಸ್ತ್ರ, ಏಪ್ರಿಲ್ 20 – ಹೊರನಾಡು ಮತ್ತು ಗಡಿನಾಡ ಕನ್ನಡಿಗರಿಗೆ ಭಾಷಾ ಪರೀಕ್ಷೆಯನ್ನು ಆಯೋಜಿಸಲಾಗಿದೆ.

Continue Reading

ಕರ್ನಾಟಕ

Neha Murder Case: ನೇಹಾ ಕೊಲೆ ಕೇಸ್; ಕರ್ನಾಟಕ ಮತ್ತೊಂದು ಬಿಹಾರವಾಗುತ್ತಿದೆ: ಬಸವರಾಜ ಬೊಮ್ಮಾಯಿ

Neha Murder Case: ಇದನ್ನು ಕೇವಲ ವೈಯಕ್ತಿಕ ಘಟನೆ ಎಂದು ನೋಡಬಾರದು. ಇಂಥದ್ದು ಇಡೀ ಸಮಾಜದ ಮೇಲೆ ಪರಿಣಾಮ ಬೀರುತ್ತವೆ. ಕರ್ನಾಟಕವು ಇನ್ನೊಂದು ಬಿಹಾರ ಆಗುತ್ತಿದೆ. ಗೃಹ ಸಚಿವರು, ಡಿಜಿಪಿ ಏನು ಮಾಡುತ್ತಿದ್ದಾರೆ? ಈ ಸರ್ಕಾರದ ಅವಧಿಯಲ್ಲಿ ವಿಧಾನಸೌಧದಲ್ಲಿಯೇ ಪಾಕಿಸ್ತಾನ ಜಿಂದಾಬಾದ್ ಹೇಳುತ್ತಾರೆ. ಗದಗಿನಲ್ಲಿ ಕುಟುಂಬದ ಕಗ್ಗೊಲೆಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಸವರಾಜ ಬೊಮ್ಮಾಯಿ ಹರಿಹಾಯ್ದಿದ್ದಾರೆ.

VISTARANEWS.COM


on

Neha murder case Karnataka is becoming another Bihar says Basavaraj Bommai
Koo

ಹುಬ್ಬಳ್ಳಿ: ಹಾಡಹಗಲೇ ಕಾಲೇಜು ಕ್ಯಾಂಪಸ್‌ನಲ್ಲಿ ಯುವತಿಯ ಹತ್ಯೆ (‌Neha Murder Case) ಮಾಡಿರುವುದು ಅತ್ಯಂತ ಆಘಾತಕಾರಿಯಾಗಿದೆ. ಸಮಾಜಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿರುವುದರಿಂದ ರಾಜಾರೋಷವಾಗಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿವೆ. ಕಾಲೇಜು ಯುವತಿಯ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌ಐಟಿ ಮೂಲಕ ತನಿಖೆ ನಡೆಸಬೇಕು. ಕರ್ನಾಟಕವು ಇನ್ನೊಂದು ಬಿಹಾರ ಆಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯ ಕಿಮ್ಸ್‌ಗೆ ಭೇಟಿ ನೀಡಿ ನೇಹಾ ಕುಟುಂಬದವರಿಗೆ ಸಾಂತ್ವನ ಹೇಳಿದ ಬಸವರಾಜ ಬೊಮ್ಮಾಯಿ, ಇದೊಂದು ಆಘಾತಕರ ವಿಚಾರ. ಈ ರೀತಿ ಹುಬ್ಬಳ್ಳಿಯಲ್ಲಿ ಯಾವತ್ತೂ ನಡೆದಿಲ್ಲ. ಇದೊಂದು ಸಮಾಜದ ನಡುವೆ ಇರುವ ಕ್ಷೋಭೆ. ಸಮಾಜಗಳ ನಡುವೆ ಸಾಮರಸ್ಯ ಕಡಿಮೆಯಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಗದಗಿನಲ್ಲಿ ನಮ್ಮ ನಗರ ಸಭೆಯ ಉಪಾಧ್ಯಕ್ಷರ ಕುಟುಂಬದವರು ಕಗ್ಗೊಲೆಯಾಗಿದೆ. ಬೆಂಗಳೂರಿನಲ್ಲಿ ಜೈ ಶ್ರೀರಾಮ್ ಹೇಳಿದವರ ಮೇಲೆ ಹಲ್ಲೆಯಾಗಿದೆ. ಸಮಾಜಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿದೆ. ಈ ಸರ್ಕಾರದಲ್ಲಿ ಗೂಂಡಾಗಳನ್ನು ರಕ್ಷಿಸುವವರು ಇದ್ದಾರೆ ಎನ್ನುವ ನಂಬಿಕೆ ಇರುವುದರಿಂದ ಈ ರೀತಿ ಘಟನೆ ನಡೆಯುತ್ತಿವೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಟ್ವೀಟ್ ಮಾಡಿ ಕೈತೊಳೆದುಕೊಳ್ಳಬಾರದು ಎಂದು ಹೇಳಿದರು.

ಇದನ್ನು ಕೇವಲ ವೈಯಕ್ತಿಕ ಘಟನೆ ಎಂದು ನೋಡಬಾರದು. ಇಂಥದ್ದು ಇಡೀ ಸಮಾಜದ ಮೇಲೆ ಪರಿಣಾಮ ಬೀರುತ್ತವೆ. ಕರ್ನಾಟಕವು ಇನ್ನೊಂದು ಬಿಹಾರ ಆಗುತ್ತಿದೆ. ಗೃಹ ಸಚಿವರು, ಡಿಜಿಪಿ ಏನು ಮಾಡುತ್ತಿದ್ದಾರೆ? ಈ ಸರ್ಕಾರದ ಅವಧಿಯಲ್ಲಿ ವಿಧಾನಸೌಧದಲ್ಲಿಯೇ ಪಾಕಿಸ್ತಾನ ಜಿಂದಾಬಾದ್ ಹೇಳುತ್ತಾರೆ. ಗದಗಿನಲ್ಲಿ ಕುಟುಂಬದ ಕಗ್ಗೊಲೆಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ವಾಗ್ದಾಳಿ ನಡೆಸಿದರು.

ಹುಬ್ಬಳ್ಳಿ ಕಮಿಷನರ್ ಹೇಳಿಕೆಗಳನ್ನು ನೋಡಿದಾಗ ಅವರು ಯಾವುದೇ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ನೇಹಾ ಹತ್ಯೆ ಪ್ರಕರಣವನ್ನು ಎಸ್‌ಐಟಿ ಮೂಲಕ ತನಿಖೆ ನಡೆಸಬೇಕು. ರಾಜ್ಯದಲ್ಲಿ ಎಲ್ಲ ಕುಟುಂಬಗಳು ಭಯಭೀತರಾಗಿದ್ದಾರೆ. ಅಪರಾಧ ವಿಭಾಗದ ಡಿಜಿಪಿ ಇದರ ಮುಂದಾಳತ್ವ ವಹಿಸಿ ತನಿಖೆ ನಡೆಸಬೇಕು. ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು. ಈ ಪ್ರಕರಣದ ತಾರ್ಕಿಕ ಅಂತ್ಯ ಆಗುವವರೆಗೂ ಹೋರಾಟ ಮಾಡುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಕುಟುಂಬಕ್ಕೆ ಸಾಂತ್ವನ

ಹತ್ಯೆಗೀಡಾದ ನೇಹಾ ಅವರ ತಂದೆಗೆ ದೂರವಾಣಿ ಮೂಲಕ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಈ ರೀತಿಯ ಘಟನೆ ದುರದೃಷ್ಟಕರ ನಾವು ನಿಮ್ಮೊಂದಿಗಿದ್ದೇವೆ. ಧೈರ್ಯವಾಗಿರಿ ಎಂದು ಸಾಂತ್ವನ ಹೇಳಿದರು.

ಇದನ್ನೂ ಓದಿ: Neha Murder Case: ನೇಹಾ ಕೊಲೆಗಾರ ಫಯಾಜ್‌ಗೆ 14 ದಿನ ನ್ಯಾಯಾಂಗ ಬಂಧನ; ʼಲವ್‌ ಜಿಹಾದ್‌ ಕೊಲೆʼ ವಿರೋಧಿಸಿ ಮೂರು ದಿನ ಮುನವಳ್ಳಿ ಬಂದ್

ಏನಿದು ಪ್ರಕರಣ?

ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್‌, ಕಾರ್ಪೋರೇಟರ್‌ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದಿದ್ದಾನೆ. ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲಿ ಕೊಲೆ ನಡೆದಿದೆ. ನೇಹಾ ಹಿರೇಮಠ ಕೊಲೆಯಾದ ಯುವತಿ. ನೇಹಾ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳಾಗಿದ್ದಾಳೆ.

ಪ್ರೀತಿಸಲು ನಿರಾಕರಿಸಿದ್ದಕ್ಕೆ ಕೊಲೆ

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ವೇಳೆ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ. ಯುವತಿಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದಾನೆ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದು, ನೇಹಾಳಿಗೆ ತೀವ್ರ ರಕ್ತಸ್ರಾವವಾಗಿದೆ. ಸ್ಥಳೀಯರು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Israel- Iran war: ಇರಾನ್‌ ವಾಯುನೆಲೆ ಮೇಲೆ ಇಸ್ರೇಲ್‌ ದಾಳಿ ಆರಂಭ; ಕಚ್ಚಾ ತೈಲ ಬೆಲೆ 4% ಏರಿಕೆ

Israel- Iran war: ಇಸ್ರೇಲ್ ಮೇಲೆ ಇರಾನ್‌ನ ಅಭೂತಪೂರ್ವ ಕ್ಷಿಪಣಿ ಮತ್ತು ಡ್ರೋನ್ ದಾಳಿಯ ನಂತರ ಈ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಇಸ್ರೇಲಿ ಮಿಲಿಟರಿ ಅಧಿಕಾರಿಗಳ ಪ್ರಕಾರ, ಕಳೆದ ಶನಿವಾರ ಇರಾನ್, ಇಸ್ರೇಲ್ ಸುತ್ತಲಿನ ಗುರಿಗಳ ಮೇಲೆ ಆಕ್ರಮಣವನ್ನು ಪ್ರಾರಂಭಿಸಿದೆ.

VISTARANEWS.COM


on

India’s Russian oil imports hit record high in February
Koo

ಹೊಸದಿಲ್ಲಿ: ಇರಾನ್‌ ವಾಯುನೆಲೆ ಮೇಲೆ ಇಸ್ರೇಲ್‌ ವಾಯುದಾಳಿ (Israel- Iran war) ಆರಂಭಿಸಿದೆ. ಮಧ್ಯಪ್ರಾಚ್ಯದಲ್ಲಿ ಸಂಘರ್ಷ ತೀವ್ರಗೊಳ್ಳುತ್ತಿರುವಂತೆ ಶುಕ್ರವಾರ ಕಚ್ಚಾ ತೈಲ ಬೆಲೆ (Crude Oil Price) 4%ರಷ್ಟು ಏರಿವೆ. ಬ್ರೆಂಟ್ (Brent) ತೈಲದ ಬೆಲೆ ಬ್ಯಾರೆಲ್‌ಗೆ $90ಕ್ಕಿಂತ ಹೆಚ್ಚಾಗಿದೆ. ಇಸ್ರೇಲಿನ ಕ್ಷಿಪಣಿಗಳು ಇರಾನ್‌ಗೆ ಅಪ್ಪಳಿಸಿದ ವರದಿಗಳು ಬಂದ ನಂತರ ತೈಲ ಬೆಲೆಗಳು ಹಠಾತ್‌ ಏರಿದವು.

ಜಾಗತಿಕ ಮಾನದಂಡವಾದ ಬ್ರೆಂಟ್ ತೈಲವು ಬ್ಯಾರೆಲ್‌ಗೆ $90.54ಕ್ಕೆ, 3.94%ರಷ್ಟು ಏರಿತು. ಆದರೆ US ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ (WTI) ಕಚ್ಚಾ ತೈಲವು 4.06%ರಷ್ಟು ಏರಿಕೆಯಾಗಿ $ 86.09ಕ್ಕೆ ತಲುಪಿದೆ.

ಇರಾನ್‌ನ ಫಾರ್ಸ್ ಸುದ್ದಿ ಸಂಸ್ಥೆ ಪ್ರಕಾರ, ಇರಾನಿನ ಇಸ್ಫಹಾನ್ ನಗರದ ವಿಮಾನ ನಿಲ್ದಾಣದಲ್ಲಿ ಸ್ಫೋಟದ ಸದ್ದು ಕೇಳಿಬಂದಿದೆ. ಇಸ್ಫಹಾನ್ ಇರಾನ್ ಮಿಲಿಟರಿಯ ಮುಖ್ಯ ವಾಯುನೆಲೆ ಮತ್ತು ಅದರ ಪರಮಾಣು ಕಾರ್ಯಕ್ರಮಕ್ಕೆ ಸಂಬಂಧಿಸಿದ ಸ್ಥಳಗಳಿಗೆ ನೆಲೆಯಾಗಿದೆ. ಇಸ್ಫಹಾನ್ ನಗರದ ಪ್ರಮುಖ ವಾಯುನೆಲೆಯ ಬಳಿ ಸ್ಫೋಟಗಳ ವರದಿಗಳ ನಂತರ ಇರಾನ್ ಶುಕ್ರವಾರ ಮುಂಜಾನೆ ವಾಯು ರಕ್ಷಣಾ ಸೆಲ್‌ಗಳನ್ನು ಹಾರಿಸಿತು.

ಇಸ್ರೇಲ್ ಮೇಲೆ ಇರಾನ್‌ನ ಅಭೂತಪೂರ್ವ ಕ್ಷಿಪಣಿ ಮತ್ತು ಡ್ರೋನ್ ದಾಳಿಯ ನಂತರ ಈ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಇಸ್ರೇಲಿ ಮಿಲಿಟರಿ ಅಧಿಕಾರಿಗಳ ಪ್ರಕಾರ, ಕಳೆದ ಶನಿವಾರ ಇರಾನ್, ಇಸ್ರೇಲ್ ಸುತ್ತಲಿನ ಗುರಿಗಳ ಮೇಲೆ ಆಕ್ರಮಣವನ್ನು ಪ್ರಾರಂಭಿಸಿದೆ. ಕ್ಷಿಪಣಿ ಉಡಾವಣೆಗಳು ಆಗಿವೆ. 300 ಮಾನವರಹಿತ ಡ್ರೋನ್‌ಗಳು ಮತ್ತು ಕ್ಷಿಪಣಿಗಳ ದಾಳಿಯನ್ನು ಇಸ್ರೇಲ್‌ ಎದುರಿಸಿದೆ.

ಕಚ್ಚಾ ತೈಲ ಬೆಲೆಗಳು ಮಧ್ಯಪ್ರಾಚ್ಯದಲ್ಲಿ ಹದಗೆಡುತ್ತಿರುವ ಬಾಂಧವ್ಯ ಮತ್ತು OPEC ಪೂರೈಕೆ ಕಡಿತ ಉಂಟಾಗಿರುವ ಪರಿಸ್ಥಿತಿಗಳಿಂದಾಗಿ ಈ ವರ್ಷ ತೈಲ ಬೆಲೆಗಳು ಇನ್ನಷ್ಟು ಏರಿವೆ.

ಇರಾನ್ ಇತ್ತೀಚೆಗೆ ನಡೆಸಿದ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳ ನಂತರ ಇಸ್ರೇಲಿ ಕ್ಷಿಪಣಿಗಳು ಇರಾನ್‌ ಅನ್ನು ಅಪ್ಪಳಿಸಿದವು. ಅಸೋಸಿಯೇಟೆಡ್ ಪ್ರೆಸ್ ಪ್ರಕಾರ, ಹಲವಾರು ವಾಣಿಜ್ಯ ವಿಮಾನಗಳನ್ನು ಪಶ್ಚಿಮ ಇರಾನ್‌ನಿಂದ ಬೇರೆ ಕಡೆಗೆ ತಿರುಗಿಸಿ ಬಿಡಲಾಯಿತು. ಇಸ್ಫಹಾನ್ ನಗರದಲ್ಲಿ ಸ್ಫೋಟಗಳು ಉಂಟಾದವು.

ಈ ನಡುವೆ ಇಸ್ರೇಲ್‌ ಗಡಿಭಾಗದಲ್ಲಿ ಡ್ರೋನ್‌ಗಳು ಮತ್ತು ಕ್ಷಿಪಣಿಗಳ ದಾಳಿ ಮುಂದುವರಿದಿದ್ದು, ಇಸ್ರೇಲ್ ಅದನ್ನು ತಡೆಹಿಡಿಯುತ್ತಲೇ ಇದೆ. ಏಪ್ರಿಲ್ 13ರಂದು ನಡೆದ ಇರಾನ್‌ನ ಕ್ಷಿಪಣಿ ಮತ್ತು ಡ್ರೋನ್ ದಾಳಿಗೆ ತಾನು ಕಠಿಣವಾಗಿ ಪ್ರತಿಕ್ರಿಯಿಸುವುದಾಗಿ ಇಸ್ರೇಲ್ ಈ ಹಿಂದೆಯೇ ಘೋಷಿಸಿದೆ.

ಸಿರಿಯಾದ ಡಮಾಸ್ಕಸ್‌ನಲ್ಲಿರುವ ಇರಾನ್‌ನ ಕಾನ್ಸುಲೇಟ್‌ ಕಟ್ಟಡದ ಮೇಲೆ ಎರಡು ವಾರಗಳ ಮೊದಲು ಇಸ್ರೇಲ್ ವೈಮಾನಿಕ ದಾಳಿ‌ ನಡೆಸಿ ಇಬ್ಬರು ಇರಾನಿನ ಜನರಲ್‌ಗಳನ್ನು ಕೊಂದಿತ್ತು. ಇದಕ್ಕೆ ಪ್ರತೀಕಾರವಾಗಿ ಏಪ್ರಿಲ್ 13ರಂದು ಇರಾನ್‌ ದಾಳಿ ನಡೆಸಿತ್ತು.

ಇದನ್ನೂ ಓದಿ: Israel Iran War : ಇಸ್ರೇಲ್​ ಮೇಲಿನ ದಾಳಿಗೆ ಪ್ರತಿಕಾರ; ಅಮೆರಿಕ, ಬ್ರಿಟನ್ ನಿಂದ ಇರಾನ್​​ಗೆ ಭಾರಿ ನಿರ್ಬಂಧ

Continue Reading
Advertisement
pesticide everest fish curry masala
ವೈರಲ್ ನ್ಯೂಸ್25 mins ago

Pesticide: ಎವರೆಸ್ಟ್‌ ಫಿಶ್‌ ಕರಿ ಮಸಾಲೆಯಲ್ಲಿ ಕೀಟನಾಶಕ; ಬ್ಯಾನ್‌ ಮಾಡಿದ ಸಿಂಗಾಪುರ

Take strict action in Neha Murder Case CM instructs to DG
ಕ್ರೈಂ1 hour ago

Neha Murder Case: ನೇಹಾ ಕೇಸ್‌ನಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ; ಡಿಜಿಗೆ ಸಿಎಂ ಸೂಚನೆ

IPL 2024
ಕ್ರಿಕೆಟ್1 hour ago

IPL 2024: ಸಿಕ್ಸರ್​ ಮೂಲಕ ದಾಖಲೆ ಬರೆದ ಹಿಟ್​ಮ್ಯಾನ್​ ರೋಹಿತ್​

Murder case In Raichur
ರಾಯಚೂರು2 hours ago

Murder Case : ಕಲ್ಲಿನಿಂದ ಜಜ್ಜಿ ಪತ್ನಿಯ ಕೊಂದು ನೇಣಿಗೆ ಶರಣಾದ ಅನುಮಾನ ಪಿಶಾಚಿ

Lok sabha election-2024
Latest2 hours ago

Lok Sabha Election 2024: ಲೋಕಸಭೆ ಚುನಾವಣೆ ಮೊದಲ ಹಂತದಲ್ಲಿ ಪ್ರಬಲ ಪೈಪೋಟಿಯ ಟಾಪ್ 10 ಕ್ಷೇತ್ರಗಳಿವು

tamanna bhatia gold
ಚಿನ್ನದ ದರ2 hours ago

Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ; ಬೆಂಗಳೂರಿನಲ್ಲಿ ಇಂದು ಹೀಗಿದೆ ದರ

CET 2024 exam Complaint against syllabus question of Mathematics and Biology KEA to set up committee on April 24
ಶಿಕ್ಷಣ2 hours ago

CET 2024 Exam: ಗಣಿತ, ಜೀವಶಾಸ್ತ್ರದ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ ವಿರುದ್ಧ ದೂರು; ಏಪ್ರಿಲ್‌ 24ಕ್ಕೆ ಸಮಿತಿ ರಚನೆಗೆ ಕೆಇಎ ನಿರ್ಧಾರ

Uttarakaanda Movie Yogaraj bhat entry
ಸ್ಯಾಂಡಲ್ ವುಡ್2 hours ago

Uttarakaanda Movie: ಪಾಟೀಲನಾಗಿ ‘ಉತ್ತರಕಾಂಡ’ ಸಿನಿಮಾಗೆ ಎಂಟ್ರಿ ಕೊಟ್ಟ ಯೋಗರಾಜ್ ಭಟ್

Suicide bomb Attack karachi
ವಿದೇಶ2 hours ago

Suicide bomb Attack: ಪಾಕ್‌ನಲ್ಲಿ ಜಪಾನೀಯರಿದ್ದ ವಾಹನಕ್ಕೆ ಆತ್ಮಹತ್ಯಾ ಬಾಂಬ್‌ ದಾಳಿ: 2 ಬಲಿ

Dubai Rain
ಕ್ರೀಡೆ2 hours ago

Dubai Rain: ಭಾರತೀಯ ಕುಸ್ತಿಪಟುಗಳ ಪ್ಯಾರಿಸ್​ ಒಲಿಂಪಿಕ್ಸ್​ ಕನಸಿಗೆ ತಣ್ಣೀರೆರಚಿದ ದುಬೈ ಮಳೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ10 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ1 week ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

ಟ್ರೆಂಡಿಂಗ್‌