Rama Devotees Insult: ಗೋಧ್ರಾ ಮಾದರಿ ರೈಲು ಸುಡುವ ಬೆದರಿಕೆ: ಬಿ.ಕೆ. ಹರಿಪ್ರಸಾದ್‌ರನ್ನೂ ತನಿಖೆಗೊಳಪಡಿಸಿ: ಸಿ.ಟಿ. ರವಿ - Vistara News

ರಾಜಕೀಯ

Rama Devotees Insult: ಗೋಧ್ರಾ ಮಾದರಿ ರೈಲು ಸುಡುವ ಬೆದರಿಕೆ: ಬಿ.ಕೆ. ಹರಿಪ್ರಸಾದ್‌ರನ್ನೂ ತನಿಖೆಗೊಳಪಡಿಸಿ: ಸಿ.ಟಿ. ರವಿ

Rama Devotees Insult: ಗೋಧ್ರಾ ಮಾದರಿಯಲ್ಲಿ ಹತ್ಯಾಕಾಂಡ ನಡೆಸುವ ಬೆದರಿಕೆ ಹಾಕುವಂಥ ಮನಸ್ಥಿತಿ ಏಕಾಏಕಿ ಬಂದಿರುತ್ತದೆ ಎಂದು ಭಾವಿಸಬಾರದು. ಇದರ ಹಿಂದೆ ಯಾವುದೋ ಪಿತೂರಿ ಆಗಿರುವ ಸಾಧ್ಯತೆ ಇದೆ ಎಂದು ಸಿ.ಟಿ. ರವಿ ಆತಂಕ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Rama Devotees Insult Godhra model train burning threat Conduct thorough probe CT Ravi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಜಯನಗರ ಜಿಲ್ಲೆಯ ಹೊಸಪೇಟೆಯ ರೈಲು ನಿಲ್ದಾಣದಲ್ಲಿ ಅಯೋಧ್ಯೆಧಾಮ (Ayodhya Dham) ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಶ್ರೀರಾಮಭಕ್ತರನ್ನು (Sri Rama Devotees) ಅವಹೇಳನ (Rama Devotees Insult) ಮಾಡಿದ ಪ್ರಕರಣ ಸಂಬಂಧ ಬಿಜೆಪಿ ತೀವ್ರ ಆಕ್ರೋಶವನ್ನು ಹೊರಹಾಕಿದೆ. ಈ ಸಂಬಂಧ ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (CT Ravi) ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದು, ಗೋಧ್ರಾ ಮಾದರಿಯಲ್ಲಿ ರೈಲನ್ನು ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ ಪ್ರಕರಣದ ಸಮಗ್ರ ತನಿಖೆ ಮಾಡಬೇಕು. ಅಲ್ಲದೆ, ಈ ಹಿಂದೆ ಹೇಳಿಕೆ ನೀಡಿದ್ದ ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ (BK Hariprasad) ಅವರನ್ನು ತನಿಖೆಗೆ ಒಳಪಡಿಸಿ ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಿ.ಟಿ. ರವಿ, ಅಯೋಧ್ಯೆಯಿಂದ ವಾಪಸಾಗುತ್ತಿದ್ದ ವಿಶೇಷ ರೈಲಿಗೆ ಹೊಸಪೇಟೆಯಲ್ಲಿ ಒಬ್ಬ ಮತಾಂಧ ವ್ಯಕ್ತಿ ಹತ್ತಿದ್ದ. ಅಯೋಧ್ಯೆಗೆ ತೆರಳಿ ಹಿಂತಿರುಗುತ್ತಿದ್ದ ರಾಮಭಕ್ತರನ್ನು ಬೆದರಿಸಿ ಗೋಧ್ರಾ ಮಾದರಿಯಲ್ಲಿ ನಿಮ್ಮನ್ನೆಲ್ಲ ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ. ಎಲ್ಲ ರಾಮಭಕ್ತರು ಸೇರಿ ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದರೂ ಕೂಡ ಆರೋಪಿ ತಪ್ಪಿಸಿಕೊಂಡು ಹೋಗಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದರು.

ಎಲ್ಲ ರಾಮಭಕ್ತರು ಸೇರಿ ಪ್ರತಿಭಟನೆ ಮಾಡಿದ ಬಳಿಕ ಸಿಸಿಟಿವಿ ಫೂಟೇಜ್ ಆಧರಿಸಿ ಆರೋಪಿಯನ್ನು ಬಂಧಿಸಿದ ಮಾಹಿತಿ ಇದೆ. ಗೋಧ್ರಾ ಮಾದರಿಯಲ್ಲಿ ಹತ್ಯಾಕಾಂಡ ನಡೆಸುವ ಬೆದರಿಕೆ ಹಾಕುವಂಥ ಮನಸ್ಥಿತಿ ಏಕಾಏಕಿ ಬಂದಿರುತ್ತದೆ ಎಂದು ಭಾವಿಸಬಾರದು. ಇದರ ಹಿಂದೆ ಯಾವುದೋ ಪಿತೂರಿ ಆಗಿರುವ ಸಾಧ್ಯತೆ ಇದೆ ಎಂದು ಸಿ.ಟಿ. ರವಿ ವಿಶ್ಲೇಷಿಸಿದರು.

ಈಚೆಗೆ ರಾಮನಗರದಲ್ಲಿ ವಕೀಲನೊಬ್ಬ ವಾರಾಣಸಿ ಜ್ಞಾನವಾಪಿಗೆ ಸಂಬಂಧಿಸಿದಂತೆ ನ್ಯಾಯಾಲಯ ಕೊಟ್ಟ ತೀರ್ಪನ್ನು ವಿರೋಧಿಸಲು ಬಳಸಿದ ಭಾಷೆ, ಈಗ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಕೃತ್ಯ- ಇವು ಕೇವಲ ಪ್ರತ್ಯೇಕ ಘಟನೆ ಎಂದು ಭಾವಿಸಬಾರದು. ಇದರ ಹಿಂದೆ ಪಿತೂರಿಯ ಸಾಧ್ಯತೆಗಳಿರುತ್ತವೆ. ‘ಕಾಲ ಮಿಂಚಿ ಹೋದ ಮೇಲೆ ಚಿಂತಿಸಿ ಫಲವಿಲ್ಲ’ ಎಂಬ ಗಾದೆ ಮಾತಿದೆ. ಹಾಗಾಗಿ ಅನಾಹುತ ಆಗುವುದಕ್ಕೂ ಮುಂಚೆ ಎಚ್ಚರಿಕೆ ವಹಿಸಬೇಕು. ಅದಕ್ಕಾಗಿ ಸಮಗ್ರ ತನಿಖೆ ನಡೆಸಲು ಆಗ್ರಹಿಸುವುದಾಗಿ ಸಿ.ಟಿ. ರವಿ ಹೇಳಿದರು.

ಪೊಲೀಸರ ಕರ್ತವ್ಯಲೋಪ- ಕ್ರಮಕ್ಕೆ ಒತ್ತಾಯ

ರಾಮಭಕ್ತರೇ ಆರೋಪಿಯನ್ನು ಹಿಡಿದು ಕೊಟ್ಟ ನಂತರ ಕೂಡ ಪೊಲೀಸರು ವಶಕ್ಕೆ ತೆಗೆದುಕೊಳ್ಳದೆ, ಅವನು ತಪ್ಪಿಸಿಕೊಳ್ಳಲು ಕಾರಣರಾಗಿದ್ದು ಗಂಭೀರವಾಗಿ ಪರಿಗಣಿಸಬೇಕಾದ ಸಂಗತಿಯಾಗಿದೆ. ಸ್ಥಳದಲ್ಲಿದ್ದ ಪೊಲೀಸರು ಕರ್ತವ್ಯಲೋಪ ಎಸಗಿದ್ದಾರೆ. ಅವರ ಮೇಲೂ ಕ್ರಮ ಕೈಗೊಳ್ಳಿ ಎಂದು ಸಿ.ಟಿ.ರವಿ ಒತ್ತಾಯಿಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಬಿ.ಕೆ. ಹರಿಪ್ರಸಾದ್ ಅವರು, ರಾಜ್ಯಸಭಾ ಸದಸ್ಯರೂ ಆಗಿದ್ದರು. ಅವರಿಗೆ ಬರುವ ಮಾಹಿತಿಯನ್ನು ಸುಮ್ಮನೆ ಹೇಳಿದ್ದಾರೆ ಅಂದುಕೊಳ್ಳಬಾರದು. ಅವರನ್ನು ಕೂಡ ಇದಕ್ಕೆ ಸಂಬಂಧಿಸಿದಂತೆ ತನಿಖೆಗೆ ಒಳಪಡಿಸಿ ಎಂದಿದ್ದೆ. ಈಗ ನಡೆದ ಘಟನೆ ಕೇವಲ ಕಾಕತಾಳೀಯ ಆಗಿರಲಾರದು. ಹಾಗಾಗಿ ಹೊಸಪೇಟೆಯಲ್ಲಿ ಬಂಧಿಸಿದ ವ್ಯಕ್ತಿ ಮಾತ್ರವಲ್ಲದೆ ಹರಿಪ್ರಸಾದರನ್ನೂ ತನಿಖೆಗೆ ಒಳಪಡಿಸಿ. ಗೋಧ್ರಾ ಮಾದರಿ ಹತ್ಯೆ ಎಂಬ ಅವರ ಹೇಳಿಕೆಗೆ ಸುದ್ದಿ ಮೂಲ ಏನು ಎಂದು ತಿಳಿದುಕೊಳ್ಳಬೇಕಿದೆ. ಪೊಲೀಸರಿಗೆ ಮಾಹಿತಿ ಹಂಚಿಕೊಳ್ಳುವುದು ಅವರ ಕರ್ತವ್ಯ ಎಂದು ಪ್ರಶ್ನೆಯೊಂದಕ್ಕೆ ಸಿ.ಟಿ. ರವಿ ಉತ್ತರ ನೀಡಿದರು.

ಈ ವಿಷಯದಲ್ಲಿ ತನಿಖೆಗೆ ನೋಟಿಸ್ ಕೊಟ್ಟಾಗ ಬಿ.ಕೆ. ಹರಿಪ್ರಸಾದ್ ಉರಿದುಬಿದ್ದಿದ್ದರು. ಈಗ ಆಗಿರುವ ಘಟನೆ ಗಮನಿಸಿದಾಗ ಇದನ್ನು ಲಘುವಾಗಿ ಪರಿಗಣಿಸದೆ ಗಂಭೀರವಾಗಿ ತೆಗೆದುಕೊಳ್ಳಬೇಕೆಂದು ರಾಜ್ಯದ ಗೃಹ ಸಚಿವರು ಮತ್ತು ಪೊಲೀಸ್ ಇಲಾಖೆಯ ವರಿಷ್ಠಾಧಿಕಾರಿಗಳನ್ನು ಆಗ್ರಹಿಸುವುದಾಗಿ ಹೇಳಿದರು.

ತುಘಲಕ್‍ನಿಂದ ಪ್ರೇರಣೆ ಪಡೆದ ಸರ್ಕಾರ?

ಕಳೆದ 10-15 ದಿನಗಳಿಂದ ರಾಜ್ಯ ಸರ್ಕಾರವು ಯಾವ ರೀತಿ ಸುತ್ತೋಲೆಯನ್ನು ಹೊರಡಿಸುತ್ತಿದೆ. ಯಾವ ರೀತಿ ವಾಪಸ್ ಪಡೆಯುತ್ತದೆ ಎಂಬುದನ್ನು ನೋಡಿದಾಗ ಇದು ಮಹಮ್ಮದ್ ಬಿನ್ ತುಘಲಕ್ ನೀತಿಯಂತೆ ಭಾಸವಾಗುತ್ತಿದೆ. ಆತ ಬೆಳಗ್ಗೆ ಒಂದು ಸುತ್ತೋಲೆ ಹೊರಡಿಸಿ ಸಂಜೆ ಅದನ್ನು ವಾಪಸ್ ಪಡೆಯುತ್ತಿದ್ದನಂತೆ. ಆತ ದೆಹಲಿಯಿಂದ ದೌಲತಾಬಾದ್‍ಗೆ ತನ್ನ ರಾಜಧಾನಿಯನ್ನು ಸ್ಥಳಾಂತರಿಸಿದ್ದ. ಜನ, ಜಾನುವಾರು ಸಮೇತ ಹೋಗಲು ಸೂಚಿಸಿದ್ದನಂತೆ. ಸ್ಥಳಾಂತರದ ವೇಳೆ ಅರ್ಧ ಜನ ಜೀವ ಕಳಕೊಂಡರಂತೆ. ಸ್ವಲ್ಪ ದಿನದ ಬಳಿಕ ನಿರ್ಣಯ ವಾಪಸ್ ಪಡೆದು, ಮತ್ತೆ ಅಲ್ಲಿಗೇ ಹೋಗಲು ತಿಳಿಸಿದನಂತೆ. ಆಗ ಇನ್ನೂ ಒಂದಷ್ಟು ಜನ ಸತ್ತರಂತೆ. ಇದನ್ನು ತುಘಲಕ್ ನೀತಿ ಎನ್ನುತ್ತಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ಸರ್ಕಾರವು ಕೂಡ ಮಹಮ್ಮದ್ ಬಿನ್ ತುಘಲಕ್‌ನಿಂದ ಪ್ರೇರಣೆ ಪಡೆದಂತಿದೆ ಎಂದು ಸಿ.ಟಿ.ರವಿ ವ್ಯಂಗ್ಯವಾಡಿದರು.

ಇದನ್ನೂ ಓದಿ: Karnataka Politics: ಕಾಂಗ್ರೆಸ್‌ನಿಂದ ರಾಜ್ಯಗಳಿಗೆ ಅನ್ಯಾಯ; ಪೈಸೆ ಪೈಸೆ ಲೆಕ್ಕ ಕೊಟ್ಟ ಬೊಮ್ಮಾಯಿ

ಆದೇಶ ಕೊಡುವುದು – ವಾಪಸ್‌ ಪಡೆಯುವುದು

ಆ ಪ್ರೇರಣೆ ಪಡೆದೇ ಯುಗಾದಿ, ರಂಜಾನ್ ಮತ್ತಿತರ ಸಾಂಸ್ಕೃತಿಕ ಹಬ್ಬಗಳನ್ನು ಆಚರಿಸದೆ ಇರಲು ಸುತ್ತೋಲೆ ಹೊರಡಿಸಿದ್ದರು. ಆಮೇಲೆ ಅದನ್ನು ವಾಪಸ್ ಪಡೆದರು. ಕುವೆಂಪು ಅವರ ಕಾವ್ಯದಿಂದ ಪ್ರೇರಣೆ ಪಡೆದು ಹಾಕಿದ ‘ಜ್ಞಾನದೇಗುಲವಿದು, ಕೈ ಮುಗಿದು ಒಳಗೆ ಬಾ’ ಘೋಷವಾಕ್ಯ ಬದಲಿಸುತ್ತಾರೆ. ಆದೇಶ ಮಾಡಿ ಜನವಿರೋಧ ವ್ಯಕ್ತ ಆಗುತ್ತಿದ್ದಂತೆ ಹಾಗೇ ಸುಮ್ಮನೆ ಎಂದು ಹೇಳಿ ವಾಪಸ್ ಪಡೆಯುತ್ತಾರೆ ಎಂದು ಸಿ.ಟಿ. ರವಿ ಟೀಕಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

V Srinivas Prasad: ಮಣ್ಣಲ್ಲಿ ಮಣ್ಣಾದ ಸಂಸದ ಶ್ರೀನಿವಾಸ ಪ್ರಸಾದ್; ಬೌದ್ಧ ಸಂಪ್ರದಾಯದಂತೆ ಅಂತ್ಯಕ್ರಿಯೆ

V Srinivas Prasad: ಮೈಸೂರಿನ ಅಶೋಕಪುರಂ ಬಳಿಯ ಡಾ.ಬಿ.ಆರ್‌.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ, ಬೌದ್ಧ ಧರ್ಮ ಸಂಪ್ರದಾಯದಂತೆ ಸಂಸದ ಶ್ರೀನಿವಾಸ ಪ್ರಸಾದ್‌ ಅವರ ಅಂತ್ಯ ಸಂಸ್ಕಾರ ನೆರವೇರಿತು.

VISTARANEWS.COM


on

V Srinivas Prasad
Koo

ಮೈಸೂರು: ಬಿಜೆಪಿಯ ಹಿರಿಯ ನಾಯಕ, ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್‌ (V Srinivas Prasad) ಅವರು ಮಣ್ಣಲ್ಲಿ ಮಣ್ಣಾಗಿದ್ದಾರೆ. ನಗರದ ಅಶೋಕಪುರಂ ಬಳಿಯಿರುವ ಡಾ.ಬಿ.ಆರ್‌.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ, ಬೌದ್ಧ ಧರ್ಮ ಸಂಪ್ರದಾಯದಂತೆ ಮಂಗಳವಾರ ಅಂತ್ಯಕ್ರಿಯೆ ನೆರವೇರಿತು. ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ ಸ್ವಾಭಿಮಾನಿ ಚಕ್ರವರ್ತಿಯ ನೆನೆದು ಕುಟುಂಬಸ್ಥರು ಸೇರಿ ಸಾವಿರಾರು ಅಭಿಮಾನಿಗಳು ಕಣ್ಣೀರಿಟ್ಟರು.

ಅಂತ್ಯ ಸಂಸ್ಕಾರಕ್ಕೂ ಮುನ್ನ ಶ್ರೀನಿವಾಸ ಪ್ರಸಾದ್‌ ಅವರಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಅವರಿಂದ ಸರ್ಕಾರಿ ಗೌರವ ಸಲ್ಲಿಕೆ ಮಾಡಲಾಯಿತು. ಇದೇ ವೇಳೆ ರಾಷ್ಟ್ರಗೀತೆ ನುಡಿಸಿ, ಗಾಳಿಯಲ್ಲಿ ಗುಂಡು ಹಾರಿಸಿ ಪೊಲೀಸರುಗೌರವ ಸಲ್ಲಿಸಿದರು. ಶ್ರೀನಿವಾಸ್ ಪ್ರಸಾದ್ ಪತ್ನಿಗೆ ಜಿಲ್ಲಾಧಿಕಾರಿಗಳು ರಾಷ್ಟ್ರ ಧ್ವಜ ಹಸ್ತಾಂತರ ಮಾಡಿದರು. ನಂತರ ಬೆಂಗಳೂರಿನ ಮಹಾಬೋದಿಯ ಶ್ರೀ ಆನಂದ ಬಂತೇಜಿ, ಮೈಸೂರಿನ ವಿಶ್ವಮೈತ್ರಿ ಬುದ್ಧ ವಿಹಾರದ ಶ್ರೀ ಕಲ್ಯಾಣಸಿರಿ ಬಂತೇಜಿ ನೇತೃತ್ವದಲ್ಲಿ ಅಂತಿಮ ವಿಧಿವಿಧಾನ ನಡೆಯಿತು. ಸುಮಾರು 15ಕ್ಕೂ ಹೆಚ್ಚು ಬೌದ್ಧ ಬಿಕ್ಕುಗಳಿಂದ ಪ್ರಾರ್ಥನೆ ಸಲ್ಲಿಸಲಾಯಿತು.

ಬಂತೇಜಿಗಳಿಂದ ಬುದ್ಧವಂದನ, ದಮ್ಮವಂದನ, ಸಂಘ ವಂದನ, ಎಲ್ಲಾ ಜನರಿಗೆ ತ್ರಿಸರಣ, ಪಂಚಶೀಲ ಬೋಧನೆ, ಬಂತೇಜಿಗಳಿಂದ ರತನ ಸೂತ್ರ ಪಠಣ, ಎಲ್ಲ ಜನರಿಂದ ಧ್ಯಾನ ಪಠಣ, ತಿರೋಕುಡ್ಡ ಸೂತ್ರ ಪಠಣ, ಬೌದ್ಧ ಬಂತೇಜಿಗಳಿಗೆ ವಸ್ತ್ರದಾನ, ಹಣ್ಣುಗಳ ಅರ್ಪಣೆ, ನೀರು ಸುರಿಸಿ ಪುಣ್ಯಾನುಮೋದನೆ, ಕುಟುಂಬಸ್ಥರು ಗೌರವ ಸಲ್ಲಿಸಿದ ಬಳಿಕ ದೇಹ ಗುಂಡಿಗಿಳಿಸಿ ಮಂತ್ರ ಪಠಣ ಸೇರಿ ಹಲವು ವಿಧಿ ವಿಧಾನ ನಡೆಯಿತು.

ಇದಕ್ಕೂ ಮೊದಲು ಸೋಮವಾರ ಇಡೀ ರಾತ್ರಿ ಅಶೋಕಪುರಂ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮಂಗಳ ಮಧ್ಯಾಹ್ನ ಅಶೋಕಪುರಂನ ಪ್ರಮುಖ ರಸ್ತೆಗಳಲ್ಲಿ ಸಾವಿರಾರು ಬೆಂಬಲಿಗರು, ಕಾರ್ಯಕರ್ತರ ಸಮ್ಮುಖದಲ್ಲಿ ಮೆರವಣಿಗೆ ನಡೆಸಲಾಯಿತು. ಬಳಿಕ ಅಶೋಕಪುರಂ ಬಳಿಯಿರುವ ಡಾ.ಬಿ.ಆರ್‌.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು.

ಇದನ್ನೂ ಓದಿ | M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಧರ್ಮ ಪತ್ನಿ ರುದ್ರಾಂಬಾ ನಿಧನ

ಅಂತ್ಯಕ್ರಿಯೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಟಿ.ಎಸ್.ಶ್ರೀವತ್ಸ, ಎ.ಆರ್.ಕೃಷ್ಣಮೂರ್ತಿ, ಮಾಜಿ ಸಚಿವ ಎನ್.ಮಹೇಶ್, ಮಾಜಿ ಶಾಸಕ ಎಲ್.ನಾಗೇಂದ್ರ, ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್, ಎಚ್.ವಿ.ರಾಜೀವ್ ಸೇರಿದಂತೆ ಸಾವಿರಾರು
ಜನರು ಭಾಗಿಯಾಗಿದ್ದರು.

Continue Reading

ರಾಜಕೀಯ

Lok Sabha Election 2024: ಬಿಜೆಪಿ ಅಭ್ಯರ್ಥಿ ರಾಜಾಅಮರೇಶ್ವರ ನಾಯಕಗೆ ಬೆಂಬಲಿಸಲು ವೆಂಕಟರೆಡ್ಡಿ ಮುದ್ನಾಳ ಮನವಿ

Lok Sabha Election 2024: ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾಅಮರೇಶ್ವರ ನಾಯಕ ಪರ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಹಾಗೂ ಪಕ್ಷದ ಮುಖಂಡರು ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ನಡೆಸಿದರು.

VISTARANEWS.COM


on

Lok Sabha Election 2024 former MLA Venkatreddy Mudnala election campaign for Raichur Lok Sabha constituency BJP candidate Raja Amareshwar Nayaka
Koo

ಯಾದಗಿರಿ: ನರೇಂದ್ರ ಮೋದಿ (PM Narendra Modi) ಅವರು 10 ವರ್ಷಗಳ ಕಾಲ ಪಿಎಂ ಆಗಿ ದೇಶದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಮತ್ತೊಮ್ಮೆ ಮೋದಿ ಅವರನ್ನು ಪಿಎಂ ಮಾಡಲು ಬಿಜೆಪಿ ಅಭ್ಯರ್ಥಿ ರಾಜಾಅಮರೇಶ್ವರ ನಾಯಕ ಅವರನ್ನು ಗೆಲ್ಲಿಸಬೇಕು ಎಂದು ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಮನವಿ (Lok Sabha Election 2024) ಮಾಡಿದರು.

ಜಿಲ್ಲೆಯ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾಅಮರೇಶ್ವರ ನಾಯಕ ಪರ ಹಮ್ಮಿಕೊಂಡ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಲೋಕಸಭಾ ಚುನಾವಣೆಯು ತೀವ್ರ ಜಿದ್ದಾಜಿದ್ದಿನ ಚುನಾವಣೆಯಾಗಿದೆ. ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಇಲ್ಲಸಲ್ಲದ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದ ಅವರು, ಪಿಎಂ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಡಜನರಿಗೆ ಪಡಿತರ ಅಕ್ಕಿ ನೀಡುವ ಮೂಲಕ ಬಡಜನರ ಹಸಿವು ನೀಗಿಸುವ ಕಾರ್ಯ ಮಾಡಿದೆ. ಸರ್ಕಾರವು ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಮಾಡುತ್ತಿಲ್ಲ. ಕೇಂದ್ರ ಸರಕಾರವು ಜೆಜೆಎಂ ಯೋಜನೆ ಜಾರಿಗೆ ತಂದು ಹಳ್ಳಿಯ ಜನರಿಗೆ ಕುಡಿಯುವ ನೀರಿನ ಸಮಸ್ಯೆ ನೀಗಿಸಿದೆ. ಮೋದಿ ಅವರು ಉತ್ತಮ ಆಡಳಿತ ನೀಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Toyota Kirloskar Motor: ಟೊಯೊಟಾ ರುಮಿಯಾನ್‌ G-AT ಬುಕ್ಕಿಂಗ್‌ ಶುರು! ಏನಿದರ ವಿಶೇಷ?

ಕೇಂದ್ರ ಸರ್ಕಾರವು ಯಾದಗಿರಿ ಜಿಲ್ಲಾ ಕೇಂದ್ರದಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ಅನುದಾನ ನೀಡಿ ಮೆಡಿಕಲ್ ಕಾಲೇಜು ಸ್ಥಾಪಿಸಲು ಮಹತ್ವದ ಕೊಡುಗೆ ನೀಡಿದೆ. ನನ್ನ ಅಧಿಕಾರಾವಧಿಯಲ್ಲಿ ಯಾದಗಿರಿ ವಿಧಾನಸಭೆ ಕ್ಷೇತ್ರದಲ್ಲಿ ರಸ್ತೆ, ಶಾಲೆಗಳ ಅಭಿವೃದ್ಧಿ, ಕುಡಿಯುವ ನೀರಿನ ಯೋಜನೆ ಸೇರಿದಂತೆ ಅನೇಕ ಸೌಲಭ್ಯಗಳನ್ನು ಕಲ್ಪಿಸಿದ್ದೇನೆ ಎಂದ ಅವರು, ಅಭ್ಯರ್ಥಿ ರಾಜಾಅಮರೇಶ್ವರ ನಾಯಕ ಅವರನ್ನು ಹೆಚ್ಚು ಮತಗಳಿಂದ ಗೆಲ್ಲಿಸಿ ತರಬೇಕು ಎಂದು ಮತದಾರರದಲ್ಲಿ ಮನವಿ ಮಾಡಿದರು.

ಬಿಜೆಪಿ ಯುವ ಮುಖಂಡ ಮಹೇಶರೆಡ್ಡಿ ಮುದ್ನಾಳ ಮಾತನಾಡಿ, ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿಗೆ ತಂದು ಸರ್ಕಾರವು ಯಾವುದೇ ಅಭಿವೃದ್ಧಿ ಮಾಡಿಲ್ಲ. ರಾಜ್ಯ ಸರ್ಕಾರವು ಕೇಂದ್ರದ ಕಿಸಾನ್ ಸಮ್ಮಾನ್ ಯೋಜನೆಗೆ ಕೊಡಮಾಡುವ 4 ಸಾವಿರ ರೂಪಾಯಿ ಸಹಾಯಧನವನ್ನು ಕಡಿತ ಮಾಡಿ, ರೈತರ ಹಿತ ಮರೆತಿದೆ ಎಂದು ಆರೋಪಿಸಿದರು.

ಬಿಜೆಪಿ ಮುಖಂಡ ಸಿದ್ದಣ್ಣಗೌಡ ಕಾಡಂನೋರ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ದೇವರಾಜ್ ನಾಯಕ ಮಾತನಾಡಿದರು.

ಇದನ್ನೂ ಓದಿ: Labour Day 2024: ಕಾರ್ಮಿಕ ದಿನಾಚರಣೆ ಸಂದರ್ಭದಲ್ಲಿ ಉದ್ಯೋಗಿಗಳಿಗೆ ಉಪಯುಕ್ತ ಹಣಕಾಸು ಟಿಪ್ಸ್‌ ಇಲ್ಲಿದೆ

ಈ ಸಂದರ್ಭದಲ್ಲಿ ಮುಖಂಡರಾದ ಉಮಾರೆಡ್ಡಿ ವಡ್ಡವಡಗಿ, ಶರಣಗೌಡ ಬಟಗೇರಿ, ಸುರೇಶ್ ಗೌಡ, ಸಂತೋಷಗೌಡ ವಡ್ಡವಡಗಿ, ಡಾ.ಎಂ.ಡಿ. ಮೊಲ್ಲಾ ರಾಯಚೂರು, ಸತೀಶ್ ಗೌಡ, ಬಸವರಾಜ ಮೇತ್ರಿ, ಈಶೆಪ್ಪ ಕೊಲ್ಲುರು, ಮರಳ ಸಿದ್ದಪ್ಪ, ಮಹಿಪಾಲರೆಡ್ಡಿ, ಸುರೇಶ್‌ಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ಹಾಸನ

Hassan Pen Drive Case: ನಾನು ವಿಡಿಯೊ ಕೊಟ್ಟಿದ್ದು ದೇವರಾಜೇಗೌಡರಿಗೆ ಮಾತ್ರ; ಅವರೇ ಲೀಕ್‌ ಮಾಡಿರಬೇಕು ಎಂದ ಕಾರ್ತಿಕ್!

Hassan Pen Drive Case: ನಾನು ಹದಿನೈದು ವರ್ಷದಿಂದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಡ್ರೈವರ್ ಆಗಿ ಕೆಲಸ ಮಾಡಿದ್ದೇನೆ. ಒಂದು ವರ್ಷದಿಂದ ಕೆಲಸವನ್ನು ಬಿಟ್ಟಿದ್ದೇನೆ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದರು. ಹಿಂಸೆ ಕೊಟ್ಟರು. ಆದ್ದರಿಂದ ಅವರ ಮನೆಯಿಂದ ಹೊರಬಂದೆ. ಆ ಸಮಯದಲ್ಲಿ ದೇವರಾಜೇಗೌಡ ಇವರ ಫ್ಯಾಮಿಲಿ ವಿರುದ್ಧ ಹೋರಾಟ ಮಾಡುತ್ತಿದ್ದರು. ಯಾರಿಂದಲೂ ನ್ಯಾಯ ಸಿಗಲ್ಲ ಅಂತ ದೇವರಾಜೇಗೌಡ ಬಳಿ ಹೋದೆ. ಯಾವುದೇ ಅಶ್ಲೀಲ ವಿಡಿಯೊ ರಿಲೀಸ್ ಮಾಡಬಾರದು ಎಂದು ಅಂದು ನನ್ನ ವಿರುದ್ಧ ಪ್ರಜ್ವಲ್‌ ರೇವಣ್ಣ ಸ್ಟೇ ತಂದಿದ್ದರು. ನಿನ್ನ ಬಳಿ ಇರುವ ವಿಡಿಯೊ, ಫೋಟೊಗಳನ್ನು ಕೊಡು. ನಾನು ಯಾರಿಗೂ ತೋರಿಸುವುದಿಲ್ಲ ಎಂದು ದೇವರಾಜೇಗೌಡ ಕೇಳಿದ್ದರು. ಅವರನ್ನು ನಂಬಿ ನನ್ನ ಬಳಿಯಿದ್ದ ವಿಡಿಯೊದ ಒಂದು ಕಾಪಿ ಕೊಟ್ಟೆ. ಅವರು ಅದನ್ನು ಸ್ವಾರ್ಥಕ್ಕೆ ಉಪಯೋಗಿಸಿಕೊಂಡರೋ ಏನೋ ಎಂಬುದು ಗೊತ್ತಿಲ್ಲ ಎಂದು ಪ್ರಜ್ವಲ್‌ ಮಾಜಿ ಕಾರು ಚಾಲಕ ಹೇಳಿದ್ದಾರೆ.

VISTARANEWS.COM


on

Hassan Pen Drive Case I gave video only to Devaraje Gowda says Karthik
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಪ್ರಜ್ವಲ್‌ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಈ ವಿಡಿಯೊಗಳು ನನ್ನ ಬಳಿ ಇತ್ತು ನಾನಿದನ್ನು ದೇವರಾಜೇಗೌಡ ಅವರಿಗೆ ಕೊಟ್ಟಿದ್ದೆ. ಅವರು ಇದನ್ನು ಸ್ವಾರ್ಥಕ್ಕೆ ಉಪಯೋಗಿಸಿಕೊಂಡರೋ ಏನೋ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಕಾರ್ತಿಕ್ ಅಜ್ಞಾತ ಸ್ಥಳದಲ್ಲಿದ್ದುಕೊಂಡು ವಿಡಿಯೊ ಮಾಡಿದ್ದು, ವಿಡಿಯೊ ಲೀಕ್ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ನಾನು ಹದಿನೈದು ವರ್ಷದಿಂದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಡ್ರೈವರ್ ಆಗಿ ಕೆಲಸ ಮಾಡಿದ್ದೇನೆ. ಒಂದು ವರ್ಷದಿಂದ ಕೆಲಸವನ್ನು ಬಿಟ್ಟಿದ್ದೇನೆ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದರು. ಹಿಂಸೆ ಕೊಟ್ಟರು. ಆದ್ದರಿಂದ ಅವರ ಮನೆಯಿಂದ ಹೊರಬಂದೆ. ಆ ಸಮಯದಲ್ಲಿ ದೇವರಾಜೇಗೌಡ ಇವರ ಫ್ಯಾಮಿಲಿ ವಿರುದ್ಧ ಹೋರಾಟ ಮಾಡುತ್ತಿದ್ದರು. ಯಾರಿಂದಲೂ ನ್ಯಾಯ ಸಿಗಲ್ಲ ಅಂತ ದೇವರಾಜೇಗೌಡ ಬಳಿ ಹೋದೆ. ಯಾವುದೇ ಅಶ್ಲೀಲ ವಿಡಿಯೊ ರಿಲೀಸ್ ಮಾಡಬಾರದು ಎಂದು ಅಂದು ನನ್ನ ವಿರುದ್ಧ ಪ್ರಜ್ವಲ್‌ ರೇವಣ್ಣ ಸ್ಟೇ ತಂದಿದ್ದರು. ನಿನ್ನ ಬಳಿ ಇರುವ ವಿಡಿಯೊ, ಫೋಟೊಗಳನ್ನು ಕೊಡು. ನಾನು ಯಾರಿಗೂ ತೋರಿಸುವುದಿಲ್ಲ ಎಂದು ದೇವರಾಜೇಗೌಡ ಕೇಳಿದ್ದರು. ಅವರನ್ನು ನಂಬಿ ನನ್ನ ಬಳಿಯಿದ್ದ ವಿಡಿಯೊದ ಒಂದು ಕಾಪಿ ಕೊಟ್ಟೆ. ಅವರು ಅದನ್ನು ಸ್ವಾರ್ಥಕ್ಕೆ ಉಪಯೋಗಿಸಿಕೊಂಡರೋ ಏನೋ ಎಂಬುದು ಗೊತ್ತಿಲ್ಲ ಎಂದು ಹೇಳಿದ್ದಾರೆ.

ದೇವರಾಜೇಗೌಡರಿಗೆ ಮಾತ್ರವೇ ಕೊಟ್ಟಿದ್ದೆ

ದೇವರಾಜೇಗೌಡರನ್ನು ಬಿಟ್ಟರೆ ಬೇರೆ ಯಾರಿಗೂ ನಾನು ವಿಡಿಯೊವನ್ನು ಕೊಟ್ಟಿಲ್ಲ. ಕಾಂಗ್ರೆಸ್‌ನವರಿಗಂತೂ ನಾನು ವಿಡಿಯೊ ಕೊಟ್ಟಿಲ್ಲ. ಕಾಂಗ್ರೆಸ್‌ನವರ ಮೇಲೆ ನಂಬಿಕೆ ಇಲ್ಲದೆ ದೇವರಾಜೇಗೌಡರ ಹತ್ತಿರ ಕೊಟ್ಟಿದ್ದೆ. ಪೆನ್‌ ಡ್ರೈವ್ ಅನ್ನು ಯಾರು ಹಂಚಿದರೋ ಗೊತ್ತಿಲ್ಲ. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ನಾನು ಕಾಂಗ್ರೆಸ್‌ನವರಿಗೆ ಕೊಡುವುದಿದ್ದರೆ ದೇವರಾಜೇಗೌಡ ಬಳಿ ಏಕೆ ಹೋಗುತ್ತಿದ್ದೆ? ಇವತ್ತು ಎಸ್‌ಐಟಿ ಮುಂದೆ ಹಾಜರಾಗಿ ಎಲ್ಲವನ್ನೂ ಹೇಳಿಕೊಳ್ಳುತ್ತೇನೆ. ನಂತರ ಮಾಧ್ಯಮದ ಮುಂದೆ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ ಎಂದು ಕಾರ್ತಿಕ್‌ ಹೇಳಿದರು.

ಇದನ್ನೂ ಓದಿ: Hassan Pen Drive Case: ಪ್ರಜ್ವಲ್‌ ರೇವಣ್ಣ ಕೇಸ್‌; ಎಸ್‌ಐಟಿ ತನಿಖೆ ಹೇಗಿರುತ್ತೆ? ತಪ್ಪಿಸಿಕೊಳ್ಳೋಕೆ ಇರೋ ಚಾನ್ಸ್‌ ಏನು?

ಎಸ್‌ಐಟಿ ಮುಂದೆ ಕೂಲಂಕಷವಾಗಿ ಹೇಳುವೆ

ಕಾಂಗ್ರೆಸ್‌ನವರ ಹೆಸರನ್ನು ಬೆರೆಸಬೇಡಿ. ದೇವೇಗೌಡರನ್ನು ಬಿಟ್ಟರೆ ಯಾರಿಗೂ ಒಂದು ತುಣುಕು ಕೊಟ್ಟಿಲ್ಲ. ಇವತ್ತು ಎಸ್‌ಐಟಿ ಮುಂದೆ ಹಾಜರಾಗಿ ಕೂಲಂಕಷವಾಗಿ ಹೇಳುತ್ತೇನೆ. ರೇವಣ್ಣ ಮನೆಯಲ್ಲಿ ಏನೆಲ್ಲ ನಡೆದಿದೆ ಎಂಬುದನ್ನು ನಾನು ನೋಡಿದ್ದೇನೆ. ಎಲ್ಲವನ್ನೂ ಎಸ್‌ಐಟಿ ಮುಂದೆ ಹೇಳುತ್ತೇನೆ. ಯಾರಿಗೆ ಅನ್ಯಾಯ ಆಗಿದೆ ಧೈರ್ಯವಾಗಿ ಮುಂದೆ ಬನ್ನಿ ಎಂದು ಕಾರ್ತಿಕ್‌ ಹೇಳುವ ಮೂಲಕ ತಮ್ಮ ಬಳಿ ವಿಡಿಯೊ ಇತ್ತು ಎಂಬುದನ್ನು ಒಪ್ಪಿಕೊಂಡಿದ್ದಾರೆ.

Continue Reading

ಕ್ರೈಂ

Hassan Pen Drive Case: ಪ್ರಜ್ವಲ್‌ ಕೇಸ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ ಎಂಟ್ರಿ; 3 ದಿನದಲ್ಲಿ ವರದಿ ಕೊಡಲು ಡಿಜಿಗೆ ಪತ್ರ

Hassan Pen Drive Case: ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗ ಮಹಿಳಾ ಆಯೋಗವು ಸುಮೊಟೊ ಕೇಸ್‌ ದಾಖಲು ಮಾಡಿಕೊಂಡಿದೆ. ಜತೆಗೆ ಡಿಜಿಗೆ ಪತ್ರ ಬರೆದು ಈ ಸಂಬಂಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಕೇಂದ್ರ ಮಹಿಳಾ ಆಯೋಗದ ಸದಸ್ಯರು ರಾಜ್ಯಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.

VISTARANEWS.COM


on

National Commission for Women enters Prajwal Hassan Pen Drive Case Letter to DG to submit report within 3 days
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ರಾಷ್ಟ್ರೀಯ ಮಹಿಳಾ ಆಯೋಗ (National Commission for Women) ಎಂಟ್ರಿ ಕೊಟ್ಟಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರು ದಿನದೊಳಗೆ ವರದಿ ನೀಡುವಂತೆ ಕರ್ನಾಟಕ ಪೊಲೀಸ್‌ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದೆ.

ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗ ಮಹಿಳಾ ಆಯೋಗವು ಸುಮೊಟೊ ಕೇಸ್‌ ದಾಖಲು ಮಾಡಿಕೊಂಡಿದೆ. ಜತೆಗೆ ಡಿಜಿಗೆ ಪತ್ರ ಬರೆದು ಈ ಸಂಬಂಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಕೇಂದ್ರ ಮಹಿಳಾ ಆಯೋಗದ ಸದಸ್ಯರು ರಾಜ್ಯಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.

ಪೆನ್‌ ಡ್ರೈವ್‌ ಹೊರ ಬಿಡುವ ಚಿಲ್ಲರೆ ಕೆಲಸ ಮಾಡಲ್ಲ; ಡಿಕೆಶಿ

ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ತಮ್ಮ ಮೇಲೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪವನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ ನಿರಾಕರಣೆ ಮಾಡಿದ್ದಾರೆ. ಪೆನ್‌ಡ್ರೈವ್‌ ಹೊರಬಿಡುವಂತಹ ಚಿಲ್ಲರೆ ಕೆಲಸವನ್ನು ನಾನಂತೂ ಮಾಡಲ್ಲ. ಚುನಾವಣೆಯಲ್ಲಿ ಫೇಸ್ ಮಾಡುತ್ತೇನೆ. ನಾನು ಪೆನ್ ಡ್ರೈವ್ ಇದೆ ಎಂದು ಹೆಸರಿಸುವುದಿಲ್ಲ. ಅಸೆಂಬ್ಲಿಗೆ ಬನ್ನಿ ಎಂದು ಕರೆದಿದ್ದೇನೆ‌ ಎಂದು ಸವಾಲು ಹಾಕಿದರು.

ಬೆಂಗಳೂರಿನಲ್ಲಿ ದಿಢೀರ್‌ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ನಾವು ನಮ್ಮ ಪೊಲಿಟಿಕಲ್ ಟೂರ್ ಬಗ್ಗೆ ಮೀಟಿಂಗ್ ಮಾಡಿದ್ದೇವೆ. ಯಾರು ಎಲ್ಲಿ ಪ್ರಚಾರ ಮಾಡಬೇಕು ಎಂದು ಚರ್ಚೆ ಮಾಡಿದ್ದೇವೆ. ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ರಾಜ್ಯಕ್ಕೆ ಮತ್ತೊಮ್ಮೆ ಆಗಮಿಸಲಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಎಲ್ಲಿ ಭಾಗಿಯಾಗಬೇಕು, ನಾನು ಎಲ್ಲಿ ಭಾಗಿಯಾಗಬೇಕು ಎಂದು ಚರ್ಚೆ ಮಾಡಿದ್ದೇವೆಯೇ ವಿನಃ ಪೆನ್ ಡ್ರೈವ್ ವಿಚಾರದ ಬಗ್ಗೆ ಚರ್ಚೆ ಮಾಡಿಲ್ಲ ಎಂದು ಹೇಳಿದರು.

ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಮತ್ತು ಅವರ ಕುಟುಂಬಕ್ಕೆ ನನ್ನ ನೆನಸಿಕೊಳ್ಳದೆ ಸ್ಫೂರ್ತಿ ಇರಲ್ಲ. ಕುಮಾರಸ್ವಾಮಿ ಅವರ ಭಾಷಣ ಕೇಳಿದ್ದೇನೆ. ಪ್ರಜ್ವಲ್‌ನನ್ನು ನನ್ನ ಮಗ ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನೂ ಇಲ್ಲ. ಅವರ ಕುಟುಂಬದ ಕುಡಿ. ನೂಲಿನಂತೆ ಸೀರೆ ಎಂದು ಡಿಕೆಶಿ ವ್ಯಂಗ್ಯವಾಡಿದರು.

ಹಳೆ ವಿಡಿಯೋ ಎಂದು ಪ್ರಜ್ವಲ್‌ ತಂದೆ ಎಚ್‌.ಡಿ. ರೇವಣ್ಣ ಹೇಳಿದ್ದಾರೆ. ಅಂದರೆ ಅವರು ಒಪ್ಪಿಕೊಂಡಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತೀರ್ಮಾನ ಮಾಡುತ್ತಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ಈ ಸಂಬಂಧ ದೇವರಾಜೇಗೌಡ ಅಮಿತ್ ಶಾಗೆ ಪತ್ರ ಬರೆದಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

10 ದಿನದ ಮುಂಚೆ ದೂರು ಕೊಡಬೇಕಿತ್ತು

ಕೇಂದ್ರ ಗೃಹ ಸಚಿವ ಅಮಿತ್ ಶಾ ಈಗ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಮಹಿಳೆಯರ ರಕ್ಷಣೆ ಬಗ್ಗೆ ಮಾತನಾಡುತ್ತಾರೆ. ಉಡುಪಿಯಲ್ಲಿ ಪೋಟೊ ಹಿಡಿದು ಅಂತಾರಾಷ್ಟ್ರೀಯ ಮಹಿಳಾ ಆಯೋಗ ಕಳುಹಿಸಿದರು. ಬಿಜೆಪಿಯವರು ಯಾಕೆ ಮಾತನಾಡುತ್ತಿಲ್ಲ. ಅವರ ಕುಟುಂಬದವರು ಹೌದೋ ಇಲ್ಲವೋ ನೀವು ಹೇಳಬೇಕು. ವಾರ ಹತ್ತು ದಿನದ ಮುಂಚೆ ದೂರು ಕೊಟ್ಟಿದ್ದರೆ ಕ್ರಮ ತೆಗೆದುಕೊಳ್ಳುತ್ತಿದ್ದೆವು. ಮಹಿಳಾ ಆಯೋಗಕ್ಕೆ ದೂರು ಕೊಟ್ಟಿದ್ದಾರೆ. ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಬಳಿಕ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಅಮಿತ್ ಶಾ ಅವರು ಮೈಸೂರಿಗೆ ಬಂದಾಗ ಪ್ರಜ್ವಲ್‌ ರೇವಣ್ಣ ಅವರಿಗೆ ಟಿಕೆಟ್ ಕೊಡಬೇಡಿ ಎಂದು ಹೇಳಿದ್ದರು. ಆದರೆ, ಕೊನೆಗೆ ಏಕೆ ಕೊಟ್ಟರು? ಅಮಿತ್‌ ಶಾ ಬೇಡವನ್ನೆಲು ಏನು ಕಾರಣ? ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆ ಮಾಡಿದರು.

ಎಚ್‌ಡಿಕೆ ವಿರುದ್ಧ ಏಕವಚನ ಪ್ರಯೋಗ

ಪಕ್ಷದಿಂದ ವಜಾ ಮಾಡಲಿ, ಒಳಗೆ ಇಟ್ಟುಕೊಳ್ಳಲಿ‌. ಅದೆಲ್ಲ ಕಣ್ಣು ಒರೆಸುವ ನಾಟಕ. ಈ ಅಮಾನತಿನ ಬಗ್ಗೆ ರಾಜಕಾರಣದಲ್ಲಿ ನನಗೂ ಗೊತ್ತಿದೆ. ನನ್ನ ವಿರುದ್ಧ ಮೊದಲು ಪ್ರತಿಭಟನೆ ಮಾಡಲಿ. ಕುಮಾರಸ್ವಾಮಿ ಯಾವ ಕರೆ ಕೊಡುತ್ತೀಯೋ ಕೊಡು‌. ಕರೆ ಕೊಡಬೇಕು ನೀನು‌. ನೀನು ಕೊಡಲಿ ಅಂತನೇ ಹೇಳುತ್ತಿದ್ದೇನೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಎಚ್‌.ಡಿ. ಎಂದರೆ ಏನು? ಕುಟಂಬ ಅಲ್ಲವೆಂದರೆ ಹೇಗೆ?

ಈಗ ಪ್ರಜ್ವಲ್‌ ರೇವಣ್ಣ ಅವರು ತಮ್ಮ ಕುಟುಂಬ ಅಲ್ಲ ಅಂತ ಹೇಳಿದರೆ ಹೇಗೆ ಒಪ್ಪಲು ಆಗುತ್ತದೆ? ಎಚ್‌.ಡಿ. ಎಂದರೆ ಏನು? ಎಚ್ ಡಿ ರೇವಣ್ಣ ಎಂದರೆ ಹೊಳೆನರಸೀಪುರ ದೇವೇಗೌಡರ‌ ಮಗ ಎಂದಲ್ಲವೇ? ಎಚ್.ಡಿ. ಕುಮಾರಸ್ವಾಮಿ ಅಂದರೂ ಹಾಗೇ ಎಂದು ಡಿಕೆಶಿ ಹೇಳಿದರು.

ಭಗವಂತ ಇದನ್ನು ಕ್ಷಮಿಸಲ್ಲ

ಮಹಿಳೆಯರಿಗೆ ರಕ್ಷಣೆ ಕೊಡಬೇಕು. ಮರ್ಯಾದೆ ಹೋಗುತ್ತದೆ. ಇವರ ಚಟಕ್ಕೆ ವಿಡಿಯೊ ಮಾಡಿಕೊಂಡು ಪದೇ ಪದೆ ಬರಬೇಕು ಎಂದು ಪೀಡಿಸುತ್ತಾರೆ. ಭಗವಂತ ಇದನ್ನು ಕ್ಷಮಿಸಲ್ಲ. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವಾಗ ಯಾರು ಜತೆಗೆ ಇದ್ದರು? ಯಾರು ಯಾರಿಗೆ ಕರೆ ಮಾಡಿದರು ಎಂದು ಅವರನ್ನೇ ಕೇಳಿ ಎಂದು ಡಿ.ಕೆ. ಶಿವಕುಮಾರ್ ಪ್ರಶ್ನೆ ಮಾಡಿದರು.

ಇದನ್ನೂ ಓದಿ: Hassan Pen Drive Case: ಲೈಂಗಿಕ ದೌರ್ಜನ್ಯ ಕೇಸ್;‌ ಪ್ರಜ್ವಲ್‌ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಬಿಜೆಪಿಯವರ ಸ್ಟ್ಯಾಂಡ್ ಹೇಳಲಿ

ಈ ವಿಚಾರದಲ್ಲಿ ಬಿಜೆಪಿಯವರ ಸ್ಟ್ಯಾಂಡ್ ಹೇಳಬೇಕು. ಪ್ರಲ್ಹಾದ್‌ ಜೋಶಿ, ಸುನೀಲ್ ಕುಮಾರ್, ಬಸವರಾಜ ಬೊಮ್ಮಾಯಿ, ಶೋಭಾ ಕರಂದ್ಲಾಜೆ ಯಾಕೆ ಮಾತನಾಡುತ್ತಿಲ್ಲ. ಅವರ ಪಾರ್ಟಿಯವರು ನೋಡಿಕೊಳ್ಳುತ್ತಾರೆ ಎಂದು ವಿಪಕ್ಷ ನಾಯಕ ಆರ್.‌ ಅಶೋಕ್ ಹೇಳುತ್ತಾರೆ. ಅಶೋಕ್ ಬೆನ್ನು ಮೂಳೆ ಇಲ್ಲದ ನಾಯಕ ಎಂದು ಡಿ.ಕೆ. ಶಿವಕುಮಾರ್‌ ಕಿಡಿಕಾರಿದರು.

ಬಿಜೆಪಿಯವರು ಸ್ವಲ್ಪ ಪ್ರಾಬ್ಲಮ್ ಇದೆ ಎಂದು ಹೇಳಿದ್ದರು ಬ್ರದರ್. ಐ ವಿಲ್ ಟೇಕ್ ಕೇರ್ ಎಂದು ದೊಡ್ಡವರು ಹೇಳಿದ್ದಾರೆ ಬ್ರದರ್ ಎಂಬುದಾಗಿ ಹೇಳಿದ್ದಾರೆ ಎಂದು ಕುಮಾರಸ್ವಾಮಿ ಶೈಲಿಯಲ್ಲೇ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.

Continue Reading
Advertisement
IPL 2024
ಪ್ರಮುಖ ಸುದ್ದಿ9 mins ago

IPL 2024 : ಐಪಿಎಲ್ ಪ್ಲೇಆಫ್​ ಹಂತಕ್ಕೆ ಇಂಗ್ಲೆಂಡ್ ಆಟಗಾರರು ಅಲಭ್ಯ; ಇದಕ್ಕೂ ಒಂದು ಕಾರಣವಿದೆ

Multivitamin Pill
ಆರೋಗ್ಯ10 mins ago

Multivitamin Pill: ಮಲ್ಟಿವಿಟಮಿನ್‌ ಮಾತ್ರೆಗಳ ಮೊರೆ ಹೋಗದೆ, ನೈಸರ್ಗಿಕವಾಗಿ ಪೋಷಣೆ ಪಡೆಯುವುದು ಹೇಗೆ?

Kannada New Movie
ಸ್ಯಾಂಡಲ್ ವುಡ್17 mins ago

Kannada New Movie: ‘ಕನ್ನಡ ಮಾಧ್ಯಮ’ ಸಿನಿಮಾಕ್ಕೆ ಹಿರಿಯ ಸಾಹಿತಿ ದೊಡ್ಡರಂಗೇಗೌಡರ ಸಾಥ್; ಮೋಷನ್ ಪೋಸ್ಟರ್ ರಿಲೀಸ್

V Srinivas Prasad
ಪ್ರಮುಖ ಸುದ್ದಿ32 mins ago

V Srinivas Prasad: ಮಣ್ಣಲ್ಲಿ ಮಣ್ಣಾದ ಸಂಸದ ಶ್ರೀನಿವಾಸ ಪ್ರಸಾದ್; ಬೌದ್ಧ ಸಂಪ್ರದಾಯದಂತೆ ಅಂತ್ಯಕ್ರಿಯೆ

KL Rahul
ಕ್ರೀಡೆ39 mins ago

KL Rahul : ವಿಶ್ವ ಕಪ್​ ತಂಡಕ್ಕೆ ರಾಹುಲ್ ಕೈಬಿಟ್ಟ ಬಿಸಿಸಿಐಗೆ ಟಾಂಗ್​ ಕೊಟ್ಟ ಲಕ್ನೊ ಫ್ರಾಂಚೈಸಿ

Actress Summer Fashion
ಫ್ಯಾಷನ್40 mins ago

Actress Summer Fashion: ಬಾಲಿವುಡ್‌ನವರನ್ನು ಮೀರಿಸಿದ ನಟಿ ಶಿಲ್ಪಾ ಮಂಜುನಾಥ್‌ ಪೂಲ್‌ಸೈಡ್‌ ಹಾಟ್‌ ಲುಕ್‌!

Hassan Pen Drive Case
ಸಿನಿಮಾ42 mins ago

Hassan Pen Drive Case: ಪ್ರಜ್ವಲ್ ರೇವಣ್ಣ ಮೃಗಕ್ಕಿಂತ ಕಡೆ; ಕಿಡಿ ಕಾರಿದ ಬಹುಭಾಷಾ ನಟಿ ಪೂನಂ ಕೌರ್

Physical Abuse
ಕ್ರೈಂ1 hour ago

Physical Abuse: ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ ಎಸಗಿದವನಿಗೆ 106 ವರ್ಷ ಜೈಲು ಶಿಕ್ಷೆ

Russia-Ukraine War
ರಷ್ಯಾ-ಉಕ್ರೇನ್‌ ಕದನ1 hour ago

Russia-Ukraine War: ಯುದ್ಧ ಭೂಮಿಯಿಂದ ಪಾರಾಗಲು 10 ಕಿ.ಮೀ ನಡೆದ 98 ವರ್ಷದ ವೃದ್ಧೆ!

Leg Swelling
ಆರೋಗ್ಯ1 hour ago

Leg Swelling: ಪ್ರಯಾಣಿಸುವಾಗ ನಮ್ಮ ಕಾಲುಗಳು ಊದಿಕೊಳ್ಳುವುದೇಕೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ13 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌