Site icon Vistara News

Revenue Village: ಕಂದಾಯ ಗ್ರಾಮಗಳಾಗಿ ಎಲ್ಲ ತಾಂಡಾಗಳು: ಸಿಎಂ ಸಿದ್ದರಾಮಯ್ಯ

Revenue Village All tandas as revenue villages CM Siddaramaiah

ಬೆಂಗಳೂರು: ಬಂಜಾರ ಸಮುದಾಯ ಸ್ವಾಭಿಮಾನಿಗಳಾಗಿ, ಸ್ವತಂತ್ರವಾಗಿ ಒಂದು ಕಡೆ ನೆಲೆಸಿ ಅಭಿವೃದ್ಧಿ ಕಾಣುವಂತೆ ಪ್ರೇರೇಪಿಸಿದವರು ಸಂತ ಸೇವಾಲಾಲ್ ಆಗಿದ್ದಾರೆ. ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲು ಮೊದಲು ಆದೇಶಿದ್ದೇ ನಮ್ಮ ಸರ್ಕಾರ. ಬಾಕಿ ಉಳಿದಿರುವ ತಾಂಡಾಗಳನ್ನೂ ಕಂದಾಯ ಗ್ರಾಮಗಳನ್ನಾಗಿ (Revenue Village) ಘೋಷಿಸಿ ಎನ್ನುವ ಸ್ಪಷ್ಟ ಸೂಚನೆಯನ್ನು ಅಧಿಕಾರಿಗಳಿಗೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು.

ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಂತ ಶ್ರೀ ಸೇವಾಲಾಲ್ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಸರ್ಕಾರ ಇದ್ದಾಗಲೇ ಸರ್ಕಾರವೇ ಸೇವಾಲಾಲ್ ಜಯಂತಿ ಆಚರಿಸಲು ಆದೇಶಿಸಿದ್ದೆವು. ಸೇವಾಲಾಲ್ ಅವರು ಒಂದು ಜಾತಿ, ಸಮುದಾಯಕ್ಕೆ ಸೇರಿದವರಲ್ಲ. ಅವರು ಮನುಷ್ಯ ಸಮಾಜದ ಬೆಳಕು. ಬಂಜಾರ ಸಮುದಾಯ ವಿದ್ಯಾವಂತರಾಗಿ, ಸ್ವಾಭಿಮಾನಿಗಳಾಗಿ ಬದುಕಲು ಪ್ರೇರಣೆ ಆದ ದಾರ್ಶನಿಕ ಸೇವಾಲಾಲ್ ಅವರನ್ನು ಸರ್ಕಾರವೇ ಮುಂದೆ ಗೌರವಿಸಬೇಕು ಎನ್ನುವ ಉದ್ದೇಶದಿಂದಲೇ ಕಾಂಗ್ರೆಸ್ ಸರ್ಕಾರ ಸೇವಾಲಾಲ್ ದಿನಾಚರಣೆಯನ್ನು ಆರಂಭಿಸಿತು ಎಂದು ವಿವರಿಸಿದರು.

‘ವಾಸ ಇರುವವನೇ ಮನೆಯ ಒಡೆಯ’ ಕಾನೂನು ತಂದಿದ್ದು ನಮ್ಮ ಸರ್ಕಾರ

ಸೇವಾಲಾಲ್ ಜನ್ಮಸ್ಥಳ ಅಭಿವೃದ್ಧಿಗೆ ಈ ಸರ್ಕಾರದಲ್ಲೂ ಅಗತ್ಯ ಅನುದಾನ ಒದಗಿಸಲಾಗುವುದು. ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗಲೂ ಅಗತ್ಯ ಅನುದಾನ ನೀಡಿದ್ದೆ. ವಾಸ ಇರುವವನೇ ಮನೆಯ ಒಡೆಯ ಎನ್ನುವ ಕಾನೂನು ತಂದಿದ್ದು ನಮ್ಮ ಸರ್ಕಾರ. ಇದರಿಂದ ತಾಂಡಾಗಳಲ್ಲಿ ನೆಲೆಸಿದ್ದ ಬಂಜಾರ ಸಮುದಾಯಕ್ಕೆ ಸಾಕಷ್ಟು ಅನುಕೂಲವಾಯಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: Karnataka Budget Session 2024: ‘ವಿಪಕ್ಷದವರು ಗೂಂಡಾಗಳು’ ಎಂಬ ಸಿಎಂ ಹೇಳಿಕೆಗೆ ಟಿ.ಎ. ಶರವಣ ಕಿಡಿ

ಬಂಜಾರ ಗುರುಪೀಠದ ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಅವರ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Exit mobile version