ಮಂಡ್ಯ : ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿಗೂ ಹೆಚ್ಚು ಹಣವನ್ನು ಮದ್ದೂರು ತಾಲೂಕಿನ ನಿಡಘಟ್ಟ ಬಳಿಯ ಮೈಸೂರು ಬೆಂಗಳೂರು ಹೆದ್ದಾರಿಯ ಚೆಕ್ ಪೋಸ್ಟ್ ನಲ್ಲಿ ವಶಕ್ಕೆ (Money Seize) ಪಡೆಯಲಾಗಿದೆ. ಕ್ರೆಟಾ ಕಾರಿನಲ್ಲಿ ಕೊಂಡೊಯ್ಯುತ್ತಿದ್ದ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಗಿರೀಶ್ ಎಂಬುವವರು ತಮ್ಮ ಕ್ರೆಡಾ ಕಾರಿನಲ್ಲಿ ಬೆಂಗಳೂರಿನಿಂದ ಕೆ.ಆರ್.ಪೇಟೆ ಕಡೆಗೆ ಪ್ರಯಾಣ ಮಾಡುತ್ತಿದ್ದರು. ಕೊಂಗಬೋರನದೊಡ್ಡಿ ಗ್ರಾಮದ ಬಳಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಆರಂಭಗೊಂಡಿರು ಚೆಕ್‌ಪೋಸ್ಟ್ ಸಿಬ್ಬಂದಿ ತಡೆದು ತಪಾಸಣೆ ನಡೆಸಿದ್ದಾರೆ. ಈ ವೇಳೆ ದೊಡ್ಡ ಚೀಲದಲ್ಲಿ ತುಂಬಿಟ್ಟಿದ್ದ ನಗದು ಪತ್ತೆಯಾಗಿದೆ.
ಈ ಬಗ್ಗೆ ಗಿರೀಶ್ ಅವರನ್ನು ಚುನಾವಣಾಧಿಕಾರಿಗಳು ಪ್ರಶ್ನಿಸಿದಾಗ ಸೂಕ್ತ ಉತ್ತರ, ಹಣಕ್ಕೆ ಪೂರಕ ದಾಖಲೆ ನೀಡಿರಲಿಲ್ಲ. ಹೀಗಾಗಿ ಅಧಿಕಾರಿಗಳು ಹಣವನ್ನು ಜಪ್ತಿ ಮಾಡಿದ್ದಾರೆ. ಈ ಕುರಿತು ಚುನಾವಣಾಧಿಕಾರಿಗಳು ಮದ್ದೂರು ಪಟ್ಟಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಳವಳ್ಳಿ ಡಿವೈಎಸ್‌ಪಿ ಕೃಷ್ಣಪ್ಪ, ತಹಶೀಲ್ದಾರ್ ಕೆ.ಎಸ್.ಸೋಮಶೇಖರ್, ಮದ್ದೂರು ಪೋಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಕೆ.ಆರ್.ಪ್ರಸಾದ್, ಚುನಾವಣಾಧಿಕಾರಿ ಲೋಕನಾಥ್ ಸ್ಥಳದಲ್ಲಿ ಹಾಜರಿದ್ದರು.
ಬೆಂಗಳೂರಲ್ಲಿ 13 ಲಕ್ಷ ರೂ. ಜಪ್ತಿ
ಬೆಂಗಳೂರು: ಲೋಕಸಭೆ ಚುನಾವಣೆ (Lok Sabha Election) ದಿನಾಂಕ ಘೋಷಣೆಯಾಗಿದೆ. ಶನಿವಾರದಿಂದಲೇ (ಮಾರ್ಚ್ 16) ಮಾದರಿ ನೀತಿ ಸಂಹಿತೆ (Code Of Conduct) ಜಾರಿಯಾಗಿದೆ. ಇದರ ಮಧ್ಯೆಯೇ, ಕರ್ನಾಟಕದಲ್ಲಿ ಹಣದ ಹೊಳೆ ಹರಿಯಲು ಶುರುವಾಗಿದೆ. ಇದಕ್ಕೆ ನಿದರ್ಶನ ಎಂಬಂತೆ, ಬೆಂಗಳೂರಿನಲ್ಲಿ (Bengaluru) ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13 ಲಕ್ಷ ರೂಪಾಯಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
Fraud Case : 10 ಕೋಟಿ ಮೌಲ್ಯದ ವಜ್ರ ಬರೀ 3 ಕೋಟಿಗೆ ಕೊಡ್ತೀವಿ ಅಂದವರು ಅಂದರ್!
ಶಾಂತಿ ನಗರದ ಚೆಕ್‌ಪೋಸ್ಟ್‌ನಲ್ಲಿ ಶನಿವಾರ (ಮಾರ್ಚ್ 16) ರಾತ್ರಿ ಕಬ್ಬನ್ ಪಾರ್ಕ್ ಪೊಲೀಸರು ಸುಮಾರು 13 ಲಕ್ಷ ರೂಪಾಯಿಯನ್ನು ಜಪ್ತಿ ಮಾಡಿದ್ದಾರೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಚೆಕ್‌ಪೋಸ್ಟ್‌ನಲ್ಲಿ ಕಾರಿನಲ್ಲಿ ಹಣ ಸಾಗಿಸಲಾಗುತ್ತಿತ್ತು. ಕಾರನ್ನು ತಡೆದ ಪೊಲೀಸರು ಪರಿಶೀಲನೆ ನಡೆಸಿದಾಗ 13 ಲಕ್ಷ ರೂ. ಸಿಕ್ಕಿದೆ. ಇದಕ್ಕೆ ದಾಖಲೆ ಇಲ್ಲದ ಕಾರಣ ಪೊಲೀಸರು ಹಣವನ್ನು ಜಪ್ತಿ ಮಾಡಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಕಠಿಣ ಕ್ರಮ ಎಂದ ರಾಜೀವ್ ಕುಮಾರ್
ಲೋಕಸಭೆ ಚುನಾವಣೆ ವೇಳೆ ಹಣ, ಉಚಿತ ಉಡುಗೊರೆಗಳ ವಿತರಣೆ ಕಂಡುಬಂದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಈಗಾಗಲೇ ಎಚ್ಚರಿಕೆ ನೀಡದ್ದಾರೆ. ಚುನಾವಣೆ ಆಯೋಗವು ಪಾರದರ್ಶಕವಾಗಿ, ಸುಸಜ್ಜಿತವಾಗಿ ನಡೆಸಲು ಚುನಾವಣೆ ಆಯೋಗವು ಬದ್ಧವಾಗಿದೆ. ಇದಕ್ಕಾಗಿ, ದೇಶಾದ್ಯಂತ ಚುನಾವಣಾ ಆಯೋಗದ ಅಧಿಕಾರಿಗಳು ಸಮೀಕ್ಷೆ ನಡೆಸಿದ್ದಾರೆ. ಜಿಲ್ಲಾಧಿಕಾರಿಗಳು ಸೇರಿ ಪ್ರಮುಖರೊಂದಿಗೆ ಮಾತುಕತೆ ನಡೆಸಿದ್ದಾರೆ. ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆಯನ್ನು ನಡೆಸುತ್ತೇವೆ ಎಂದು ರಾಜೀವ್ ಕುಮಾರ್ ಮಾಹಿತಿ ನೀಡಿದರು.
ಈಗಿನಿಂದಲೇ ದೇಶಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಯಾರು ಕೂಡ ನಿಯಮಗಳನ್ನು ಮೀರಬಾರದು. ಮಾದರಿ ನೀತಿ ಸಂಹಿತೆ ಜಾರಿ ವೇಳೆ ಹಿಂಸಾಚಾರ ಎಸಗಿದವರ ವಿರುದ್ಧ ಜಾಮೀನು ರಹಿತ ಕೇಸ್ ದಾಖಲಿಸಲಾಗುತ್ತದೆ. ಹಣ, ತೋಳ್ಬಲ, ತಪ್ಪು ಮಾಹಿತಿ ರವಾನೆಯನ್ನು ತಡೆಯಲು ಆಯೋಗವು ಸಕಲ ರೀತಿಯಲ್ಲಿ ಸಜ್ಜಾಗುತ್ತಿದೆ. ಇನ್ನು, ರಾಜಕೀಯ ವ್ಯಕ್ತಿಗಳು ಕೂಡ ವಿಷಯಗಳ ಆಧಾರಿತವಾಗಿ ಪ್ರಚಾರ ಮಾಡಬೇಕೇ ಹೊರತು, ಗೊಂದಲ, ಗಲಾಟೆಗೆ ಅವಕಾಶ ಮಾಡಿಕೊಡಬಾರದು ಎಂದು ಸೂಚಿಸಿದರು.