Site icon Vistara News

PM Modi: ಮೋದಿ ಬಂಡೀಪುರ ಭೇಟಿ ಆತಿಥ್ಯಕ್ಕೆ 6 ಕೋಟಿ ರೂ. ಖರ್ಚು; ಬಿಲ್‌ ಬಾಕಿಗೆ ಕೇಂದ್ರ – ರಾಜ್ಯ ಇಲಾಖೆಗಳ ಜಟಾಪಟಿ

Tiger Project PM Modi hotel bill in Karnataka dues Rs 6 crore and Centre vs state departments clash

ಬೆಂಗಳೂರು: ಕಳೆದ ವರ್ಷ ಏಪ್ರಿಲ್‌ನಲ್ಲಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್.ಟಿ.ಸಿ.ಎ) ವತಿಯಿಂದ ರಾಜ್ಯದಲ್ಲಿ ಆಯೋಜಿಸಲಾಗಿದ್ದ ಹುಲಿ ಯೋಜನೆ – 50 (Tiger Project 50) ಕಾರ್ಯಕ್ರಮಕ್ಕಾಗಿ ಕಳೆದ ವರ್ಷ ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಆತಿಥ್ಯಕ್ಕೆ ಸಂಬಂಧಪಟ್ಟಂತೆ 6.33 ಕೋಟಿ ರೂಪಾಯಿ ವೆಚ್ಚವಾಗಿತ್ತು. ಇದರಲ್ಲಿ 3 ಕೋಟಿ ರೂಪಾಯಿ ಬಂದಿದ್ದು, ಇನ್ನೂ 3 ಕೋಟಿ 33 ಲಕ್ಷ ರೂಪಾಯಿ ಬಾಕಿ ಬರಬೇಕಿದೆ. ಇದರಲ್ಲಿ ಖಾಸಗಿ ಹೋಟೆಲ್‌ ಬಿಲ್‌ (Hotel Bill) ಕೂಡಾ ಇದೆ. ಆದರೆ, ಇದರ ವೆಚ್ಚವನ್ನು ಯಾರು ಹೊರುವುದು? ಎಂಬುದೇ ಈಗ ಜಟಾಪಟಿಗೆ ಕಾರಣವಾಗಿದೆ. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ್ದೇ (National Tiger Conservation Authority) ಹೊಣೆ ಎಂದು ರಾಜ್ಯ ಅರಣ್ಯ ಇಲಾಖೆ (Karnataka State Forest Department) ಹೇಳುತ್ತಿದೆ. ಈಗ ಈ ಬಿಲ್ ಬಾಕಿ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ (Ishwar Khandre) ಪ್ರತಿಕ್ರಿಯೆ ನೀಡಿದ್ದು, ಪ್ರಧಾನಿ ಮೋದಿ (PM Modi) ಆತಿಥ್ಯ ವೆಚ್ಚಕ್ಕೆ ಸಂಬಂಧಪಟ್ಟಂತೆ ಇರುವ ಸಮಸ್ಯೆಯನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದ್ದಾರೆ.

Rs 6 crore spent on hosting PM Modi visit to Bandipur Centre and state departments tussle over bill arrears

ಬೆಂಗಳೂರಿನಲ್ಲಿ ಶನಿವಾರ (ಮೇ 25) ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ, 2023ರ ಏಪ್ರಿಲ್‌ನಲ್ಲಿ “ಹುಲಿ ಯೋಜನೆ – 50” ಕಾರ್ಯಕ್ರಮವನ್ನು ನಡೆಸಲಾಗಿತ್ತು. ಆದರೆ, ಆ ಸಮಯದಲ್ಲಿ ವಿಧಾನಸಭಾ ಚುನಾವಣೆ ಇದ್ದಿದ್ದರಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿತ್ತು. ಹೀಗಾಗಿ ರಾಜ್ಯ ಸರ್ಕಾರ ಭಾಗಿ ಆಗಿರಲಿಲ್ಲ. ರಾಜ್ಯ ಲಾಂಛನದ ಬಳಕೆಯೂ ಆಗಿರಲಿಲ್ಲ. ಇದು ಸಂಪೂರ್ಣ ಎನ್.ಟಿ.ಸಿ.ಎ. ಕಾರ್ಯಕ್ರಮವಾಗಿತ್ತು ಎಂದು ವಿವರಿಸಿದರು.

Rs 6 crore spent on hosting PM Modi visit to Bandipur Centre and state departments tussle over bill arrears

ಎನ್.ಟಿ.ಸಿ.ಎ. ಖರ್ಚಿನ ಹೊಣೆ ಹೊತ್ತಿತ್ತು

ದೇಶದ ಪ್ರಧಾನಿಯವರು ರಾಜ್ಯಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಆತಿಥ್ಯ ನಿರ್ವಹಣೆಗಾಗಿ ಸ್ಥಳೀಯವಾಗಿ ರಚಿಸಲಾಗಿದ್ದ ಸಮಿತಿಯಲ್ಲಿ ನಮ್ಮ ಅರಣ್ಯ ಇಲಾಖೆಯ ಅಧಿಕಾರಿಗಳು ಇದ್ದರು. ವಾಸ್ತವವಾಗಿ ಈ ಕಾರ್ಯಕ್ರಮಕ್ಕೆ ಆಗುವ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಎನ್.ಟಿ.ಸಿ.ಎ. ಹೇಳಿತ್ತು ಎಂದು ಈಶ್ವರ ಖಂಡ್ರೆ ವಿವರಿಸಿದರು.

Rs 6 crore spent on hosting PM Modi visit to Bandipur Centre and state departments tussle over bill arrears

ಕಾರ್ಯಕ್ರಮಕ್ಕೆ ಆಗಿರುವ ವೆಚ್ಚ 6.33 ಕೋಟಿ ರೂಪಾಯಿ ಆಗಿದೆ. ಈ ಪೈಕಿ 3 ಕೋಟಿ ರೂಪಾಯಿ ಬಂದಿದ್ದು, ಇನ್ನೂ 3 ಕೋಟಿ 33 ಲಕ್ಷ ರೂಪಾಯಿ ಬಾಕಿ ಬರಬೇಕಿದೆ. ಇದರಲ್ಲಿ ರಾಡಿಸನ್ ಬ್ಲೂ ಆತಿಥ್ಯ ವೆಚ್ಚ ಸುಮಾರು 80 ಲಕ್ಷ ರೂ. ಸೇರಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಇದನ್ನೂ ಓದಿ: Prajwal Revanna Case: ವಿಡಿಯೊ ವೈರಲ್ ಅಪರಾಧದ ಸೆಕ್ಷನ್ ಹೇಳಿದ ಎಚ್‌ಡಿಕೆ; ಸಿಎಂ ಕುರ್ಚಿಯಲ್ಲಿ ಊಸರವಳ್ಳಿ ಎಂದು ಕಿಡಿ

ಪತ್ರ ಬರೆದರೂ ಬಾಕಿ ಹಣ ನೀಡಿಲ್ಲ

ಈ ಬಗ್ಗೆ ನಮ್ಮ ಇಲಾಖೆಯ ಅಧಿಕಾರಿಗಳು ಹಲವು ಬಾರಿ ಪತ್ರ ಬರೆದಿದ್ದರೂ, ಫೋನ್ ಮಾಡಿದ್ದರೂ ಎನ್.ಟಿ.ಸಿ.ಎ. (ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ) ಈ ಬಾಕಿ ಹಣ ನೀಡಿಲ್ಲ. ಈಗ ವಿಷಯ ತಮ್ಮ ಗಮನಕ್ಕೆ ಬಂದಿದ್ದು, ಸೌಹಾರ್ದಯುತವಾಗಿ ಪರಿಹರಿಸಲು ಪ್ರಯತ್ನಿಸುವುದಾಗಿ ಈಶ್ವರ ಖಂಡ್ರೆ ಹೇಳಿದರು.

Exit mobile version