Site icon Vistara News

Maria Alam Khan: “ಜಿಹಾದ್‌ಗಾಗಿ ಮತ ನೀಡಿ..”ಮಾಜಿ ಕೇಂದ್ರ ಸಚಿವರ ಸೊಸೆಯಿಂದ ಭಾರೀ ಎಡವಟ್ಟು

Maria alam Khan

ನವದೆಹಲಿ: ಸಮಾಜವಾದಿ ಪಕ್ಷದ (SP) ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್‌(Salman Khurshid) ಅವರ ಸೋದರ ಸೊಸೆ ಜಿಹಾದ್‌ಗಾಗಿ ಮತ ನೀಡಿ ಎಂದು ಕರೆ ನೀಡುವ ಮೂಲಕ ವಿವಾದಕ್ಕೀಡಾಗಿದ್ದಾರೆ. ಉತ್ತರಪ್ರದೇಶದ ಫಾರೂಖ್‌ಬಾದ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಸಲ್ಮಾನ್‌ ಖುರ್ಷಿದ್‌ ಅವರ ಸೊಸೆ ಮರಿಯಾ ಆಲಂ ಖಾನ್‌(Maria Alam Khan) ಹೀಗಿನ ಪರಿಸ್ಥಿತಿಯಲ್ಲಿ ಜಿಹಾದ್‌ಗಾಗಿ ವೋಟ್‌ ಮಾಡಬೇಕಿದೆ ಎಂದು ಹೇಳಿಕೆ ನೀಡಿದ್ದರು. ಈ ವಿಡಿಯೋ ವೈರಲ್‌(Viral Video) ಆಗುತ್ತಿದ್ದಂತೆ ಮರಿಯಾ ಖಾನ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಮರಿಯಾ ಹೇಳಿದ್ದೇನು?

I.N.D.I.A ಒಕ್ಕೂಟದ ಅಭ್ಯರ್ಥಿ ನಾವಲ್‌ ಕಿಶೋರ್‌ ಸಾಕ್ಯ ಪರ ಫಾರೂಖ್‌ಬಾದ್‌ನಲ್ಲಿ ಪ್ರಚಾರ ಕೈಗೊಂಡಿದ್ದ ಮರಿಯಾ ಮಾತಿನ ಭರದಲ್ಲಿ ಜಿಹಾದ್‌ಗಾಗಿ ಮತ ನೀಡಿ. ಬಿಜೆಪಿ ಸರ್ಕಾರದ ಆಡಳಿತದಿಂದ ಅಲ್ಪ ಸ‍ಂಖ್ಯಾತರಿಗಾಗುತ್ತಿರುವ ಅನ್ಯಾಯದ ವಿರುದ್ಧ ಹೋರಾಡಲು ಜಿಹಾದ್‌ನ ಅವಶ್ಯಕತೆ ಇದೆ. ಹೀಗಾಗಿ ನಾವೆಲ್ಲಾ ಒಗ್ಗಟ್ಟಾಗಿ ಜಿಹಾದ್‌ಗಾಗಿ ಮತ ನೀಡೋಣ. ಯಾವುದೇ ಆಮೀಷ, ಭಾವನೆಗಳಿಗೆ ಬಲಿಯಾಗದೇ ಮತ ನೀಡೋಣ. ಈ ʼಸಂಘಿʼ ಸರ್ಕಾರವನ್ನು ಕೆಳಗಿಳಿಸಲು ಜಿಹಾದಿಯಿಂದ ಮಾತ್ರ ಸಾಧ್ಯ. ಇಲ್ಲವಾದಲ್ಲಿ ಈ ಸಂಘಿ ಸರ್ಕಾರ ನಮ್ಮ ಅಸ್ತಿತ್ವವನ್ನೇ ನಾಶ ಮಾಡುತ್ತದೆ ಎಂದು ಅವರು ಹೇಳಿಕೆ ನೀಡಿದ್ದರು.

ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದೆ ಎಂದು ಜನ ಭೀತಿಗೊಳಗಾಗಿದ್ದಾರೆ. ಆದರೆ ಪ್ರಜಾಪ್ರಭುತ್ವ ಮಾತ್ರವಲ್ಲ ಮಾನವೀಯತೆ ಕೂಡ ಅಪಾಯದಲ್ಲಿದೆ. ಈಗ ಮಾನವೀಯತೆ ಮೇಲೆ ದಾಳಿಗಳು ನಡೆಯುತ್ತಿವೆ. ನೀವು ನಮ್ಮ ಈ ದೇಶದ ಸಂಸ್ಕೃತಿ, ಪರಂಪರೆ ಮತ್ತು ಸೌಂದರ್ಯ ಉಳಿಯಬೇಕೆಂದು ಬಯಸುವುದಾದರೆ ಬುದ್ದಿವಂತಿಕೆಯಿಂದ ಮತ ಚಲಾಯಿಸಿ ಎಂದು ಕರೆ ನೀಡಿದ್ದರು.

ಮರಿಯಾ, ಖುರ್ಷಿದ್‌ ವಿರುದ್ಧ FIR

ಇನ್ನು ಮರಿಯಾ ನೀಡಿರುವ ಈ ಹೇಳಿಕೆ ಎಲ್ಲೆಡೆ ಭಾರೀ ವೈರಲ್‌ ಆಗುತ್ತಿದ್ದು, ಬಿಜೆಪಿ ನಾಯಕರು ಕಿಡಿ ಕಾರಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮರಿಯಾ ವಿರುದ್ಧ ದೂರು ದಾಖಲಾಗಿದೆ. ಅಲ್ಲದೇ ರ್ಯಾಲಿಯಲ್ಲಿ ಭಾಗಿಯಾಗಿದ್ದ ಸಲ್ಮಾನ್‌ ಖುರ್ಷಿದ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಇನ್ನು ಘಟನೆ ಬಗ್ಗೆ ಸಲ್ಮಾನ್‌ ಖುರ್ಷಿದ್‌ ಸ್ಪಷ್ಟನೆ ನೀಡಿದ್ದು, ಜಿಹಾದ್‌ ಅಂದರೆ ಪ್ರತಿಕೂಲ ಪರಿಸ್ಥಿತಿ ವಿರುದ್ಧ ಹೋರಾಡುವುದು. ಜನರ ಸಾಂವಿಧಾನಿಕ ಹಕ್ಕನ್ನು ರಕ್ಷಿಸುವ ನಿಟ್ಟಿನಲ್ಲಿ ಆಕೆ ಈ ಹೇಳಿಕೆಯನ್ನು ನೀಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:Movie Release: ಈ ವಾರ ಒಟಿಟಿಯಲ್ಲಿ ನೀವು ನೋಡಬಹುದಾದ ಸಿನಿಮಾ, ವೆಬ್‌ ಸಿರೀಸ್‌ಗಳಿವು; ಟ್ರೈಲರ್‌ಗಳನ್ನು ಇಲ್ಲಿ ನೋಡಿ

ಚುನಾವಣಾ ಪ್ರಚಾರದಲ್ಲಿ ವಿವಾದಾತ್ಮಕ ಹೇಳಿಕೆಗಳು, ಆ ಹೇಳಿಕೆ ಮೇಲೆ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಇತ್ತ ಛತ್ತೀಸ್‌ಗಡದಲ್ಲಿ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಅಧ್ಯಕ್ಷ ಎಐಸಿಸಿ ಮಲ್ಲಿಕಾರ್ಜುನ ಖರ್ಗೆಯವರು ಭಗವಾನ್‌ ಶಿವನ ಬಗ್ಗೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಛತ್ತೀಸ್‌ಗಡದಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಶಿವಕುಮಾರ್‌ ದಹಾರಿಯಾ ಪರ ಪ್ರಚಾರದ ವೇಳೆ ಶಿವಕುಮಾರ್‌ ಅವರನ್ನು ಭಗವಾನ್‌ ಶಿವನಿಗೆ ಹೋಲಿಸಿ ಹೇಳಿಕೆಯೊಂದನ್ನು ನೀಡಿದ್ದಾರೆ. ಬಿಜೆಪಿ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದೆ.

Exit mobile version