Satish Jarkiholi: ʼಹಿಂದುʼ ಅಶ್ಲೀಲ ಎಂದಿದ್ದ ಸತೀಶ್‌ ಜಾರಕಿಹೊಳಿಗೆ ಸಂಕಷ್ಟ; ಕ್ರಿಮಿನಲ್‌ ಕೇಸ್‌ಗೆ ಕೋರ್ಟ್‌ ಒಪ್ಪಿಗೆ - Vistara News

ರಾಜಕೀಯ

Satish Jarkiholi: ʼಹಿಂದುʼ ಅಶ್ಲೀಲ ಎಂದಿದ್ದ ಸತೀಶ್‌ ಜಾರಕಿಹೊಳಿಗೆ ಸಂಕಷ್ಟ; ಕ್ರಿಮಿನಲ್‌ ಕೇಸ್‌ಗೆ ಕೋರ್ಟ್‌ ಒಪ್ಪಿಗೆ

Satish Jarkiholi: ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ 2022ರ ನವೆಂಬರ್ 6ರಂದು ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸತೀಶ್ ಜಾರಕಿಹೊಳಿ ಅವರು, ಹಿಂದು ಹಾಗೂ ಹಿಂದುತ್ವದ ಪದದ ಬಗ್ಗೆ ಮಾತನಾಡಿದ್ದರು. ಹಿಂದು ಪದಕ್ಕೆ ಅಶ್ಲೀಲ ಎಂಬ ಅರ್ಥವಿದೆ ಎಂದು ಹೇಳಿದ್ದರು. ಈಗ ಈ ಪ್ರಕರಣ ಸಂಬಂಧ ಮೊಕದ್ದಮೆ ದಾಖಲು ಮಾಡಿಕೊಳ್ಳಲು ಕೋರ್ಟ್‌ ಒಪ್ಪಿಗೆ ನೀಡಿದೆ.

VISTARANEWS.COM


on

Satish Jarkiholi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಿಂದು ಪದಕ್ಕೆ ಅಶ್ಲೀಲ ಎಂಬ ಅರ್ಥವಿದೆ (word Hindu means obscene) ಎಂಬ ಹೇಳಿಕೆ ನೀಡಿದ್ದ ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi) ವಿರುದ್ಧ ಕ್ರಿಮಿನಲ್ ಮೊಕದ್ದಮೆ (Criminal Case) ದಾಖಲು ಮಾಡಲು ಜನಪ್ರತಿನಿಧಿಗಳ ನ್ಯಾಯಾಲಯ (Court of Representatives) ಒಪ್ಪಿಗೆ ಸೂಚಿಸಿ ಆದೇಶ ಹೊರಡಿಸಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ 2022ರ ನವೆಂಬರ್ 6ರಂದು ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸತೀಶ್ ಜಾರಕಿಹೊಳಿ ಅವರು, ಹಿಂದು ಹಾಗೂ ಹಿಂದುತ್ವದ ಪದದ ಬಗ್ಗೆ ಮಾತನಾಡಿದ್ದರು. ಹಿಂದು ಪದಕ್ಕೆ ಅಶ್ಲೀಲ ಎಂಬ ಅರ್ಥವಿದೆ ಎಂದು ಹೇಳಿದ್ದರು. ಇದರ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಟೀಕೆ, ಆಕ್ರೋಶಗಳು ವ್ಯಕ್ತವಾಗಿದ್ದವು. ಈ ಸಂಬಂಧ ಬಿಜೆಪಿ ನಾಯಕರು, ಹಿಂದು ಕಾರ್ಯಕರ್ತರು, ರಾಜ್ಯದ ಹಲವು ಕಡೆ ಸತೀಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದರು. ವಕೀಲ ದಿಲೀಪ್‌ ಕುಮಾರ್ ಅವರು ಕೋರ್ಟ್‌ ಮೊರೆ ಹೋಗಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯವು ಈಗ ಸತೀಶ್‌ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಆದೇಶ ನೀಡಿದೆ.

ನ್ಯಾಯಾದೀಶೆ ಜೆ ಪ್ರೀತ್ ಅವರಿಂದ ಆದೇಶ ನೀಡಲಾಗಿದೆ. ಹೀಗಾಗಿ ಸತೀಶ್‌ ಜಾರಕಿಹೊಳಿಗೆ ಈಗ ಸಂಕಷ್ಟ ಎದುರಾಗಿದೆ.

ಸಮರ್ಥನೆ ಮಾಡಿಕೊಂಡಿದ್ದ ಸತೀಶ್‌ ಜಾರಕಿಹೊಳಿ

ಹಿಂದು ಪದಕ್ಕೆ ಪರ್ಷಿಯನ್‌ ಡಿಕ್ಷ್‌ನರಿಯಲ್ಲಿ ನೀಡಿರುವ ಕೀಳು ಅರ್ಥವನ್ನು ಹುಡುಕಿಕೊಟ್ಟಿದ್ದಕ್ಕೆ ಬಿಜೆಪಿಯವರು ನನಗೆ ಕೃತಜ್ಞರಾಗಿರಬೇಕು ಎಂದಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ, ತಮ್ಮ ಹೇಳಿಕೆಯನ್ನು ಬಲವಾಗಿ ಸಮರ್ಥನೆ ಮಾಡಿಕೊಂಡಿದ್ದಾರೆ. ಹಿಂದು ಪದದ ಕುರಿತು ಭಾಷಣದ ವಿಡಿಯೋ ಎಲ್ಲೆಡೆ ಹರಿದಾಡಿದ್ದರಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲ ಆಕ್ಷೇಪ ವ್ಯಕ್ತಪಡಿಸಿದ್ದರು. ದೇಶಾದ್ಯಂತ ವಿವಾದ ಹೆಚ್ಚಾಗುತ್ತಿರುವುದರಿಂದ ಒಂದು ಸ್ಪಷ್ಟನೆ ನೀಡುವಂತೆ ಸುರ್ಜೆವಾಲ ದೂರವಾಣಿ ಕರೆ ಮಾಡಿ ಹೇಳಿದ್ದರಿಂದ ಸತೀಶ್‌ ಜಾರಕಿಹೊಳಿ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತಮ್ಮ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Foreign Currency Transfer: ಧರ್ಮಸ್ಥಳದಲ್ಲಿ ಐವರ ಬಳಿ 42 ಸಿಮ್! ವಿದೇಶಿ ಕರೆನ್ಸಿ ವರ್ಗಾವಣೆ ದಂಧೆ?

ಪುಸ್ತಕದಲ್ಲಿದ್ದದ್ದನ್ನು ನಾನು ಹೇಳಿದ್ದೇನೆ. ತಮಗೆ ಬೈದಿದ್ದನ್ನು ಬಿಜೆಪಿಯವರು ನೋಡಿಲ್ಲ. ಇಂತಹದ್ದನ್ನು ಹುಡುಕಿ ಹೇಳಿದ್ದಕ್ಕೆ ನನಗೆ ಅವರು ಕೃತಜ್ಞತೆ ಸಲ್ಲಿಸಬೇಕು. ನಿಮ್ಮ ಬಗ್ಗೆ ಹೀಗೆ ಹೇಳಿದ್ದಾರೆ ಹುಡುಕಿ ಎಂದಿದ್ದೇನೆ. ನೀವು ಹಿಂದುವೋ ಅಥವಾ ಬೇರಾವುದೋ ಧರ್ಮದವರೋ ಎಂಬ ಪ್ರಶ್ನೆಗೆ, ನಾನು ಭಾರತೀಯ, ಇಂಡಿಯನ್‌ ಎಂದು ಉತ್ತರಿಸಿದ ಜಾರಕಿಹೊಳಿ, ಡಿಕ್ಷ್‌ನರಿಯಲ್ಲಿ ಹಿಂದು ಪದಕ್ಕೆ ಏನು ಬಳಕೆ ಮಾಡಿದ್ದಾರೆ ಎಂದು ತೆಗೆದುನೋಡಿ. ಹಿಂದು ಪದಕ್ಕೆ ಕೆಟ್ಟ ಶಬ್ದ ಬಳಸಿದ್ದಾರೆ ನೋಡಿ ಎಂದಿದ್ದೇನೆ. ಡಿಕ್ಷ್‌ನರಿಯಲ್ಲಿ ಹಿಂದು ಪದಕ್ಕೆ ಅಶ್ಲೀಲ ಅರ್ಥ ಇದೆ. ಇದರ ಬಗ್ಗೆ ವಾಜಪೇಯಿ ಅವರೂ ಸೇರಿ ಅನೇಕರು ಮಾತನಾಡಿದ್ದಾರೆ. ನಾನು ಯಾರ ಪರವಾಗಿಯೂ, ವಿರೋಧವಾಗಿಯೂ ಇಲ್ಲ. ನಾವು ಮನುಷ್ಯರ ಪರವಾಗಿದ್ದೇವೆ, ಅದರ ನ್ಯೂನತೆಗಳನ್ನು ನಾನು ಹೇಳಿದ್ದೇನೆ ಎಂದು ತಮ್ಮ ಮಾತನ್ನು ಸಮರ್ಥನೆ ಮಾಡಿಕೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

Prajwal Revanna Case: ಎಚ್‌.ಡಿ. ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ; ಅಮಾವಾಸ್ಯೆ ದಿನವೇ ಜೈಲಿಗೆ ಶಿಫ್ಟ್‌!

Prajwal Revanna Case: ಪ್ರಜ್ವಲ್ ತಪ್ಪು ಮಾಡಿರಬಹುದು. ಅದರ ಬಗ್ಗೆ ನನಗೇನು ಗೊತ್ತಿಲ್ಲ. ಬೇಕು ಎಂದೇ ನನ್ನ ಮೇಲೆ ಈ ರೀತಿ ಮಾಡುತ್ತಿದ್ದಾರೆ. ನನಗೆ ಹುಷಾರಿಲ್ಲ, ಬೆಳಗ್ಗೆ ಡ್ರಿಪ್ಸ್ ಹಾಕಿದ್ದಾರೆ. ಹುಷಾರಿಲ್ಲ ಹೊಟ್ಟೆ ಉರಿ ಬಂದಿದೆ. ಗ್ಲುಕೋಸ್ ಹಾಕಿದ್ದಾರೆ. ನಾನು ಶಾಸಕನಾಗಿ 25 ವರ್ಷ ಕಳೆದಿದೆ. ಬೇಕಂತಲೇ ಈ ರೀತಿ ಮಾಡಲಾಗಿದೆ. ವಾರಂಟ್ ಇಲ್ಲದೆಯೆ ಮನೆಗೆ ಬಂದು ಅರೆಸ್ಟ್ ಮಾಡಿದರು ಎಂದೆಲ್ಲ ಎಚ್‌.ಡಿ. ರೇವಣ್ಣ ನ್ಯಾಯಾದೀಶರ ಮುಂದೆ ಮಾಹಿತಿ ನೀಡಿದರು. ವಾದ – ಪ್ರತಿವಾದ ಆಲಿಸಿದ ನ್ಯಾಯಾದೀಶರು, ಮೇ 14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಹೀಗಾಗಿ ಇಂದಿನಿಂದ 7 ದಿನಗಳ ವರೆಗೆ ರೇವಣ್ಣ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಆಗಲಿದ್ದಾರೆ.

VISTARANEWS.COM


on

Prajwal Revanna Case HD Revanna sent to 7 day judicial custody
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive) ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ (HD Revanna) ಅವರ ಜಾಮೀನು ಅರ್ಜಿ ವಿಚಾರಣೆ ಬುಧವಾರ (ಮೇ 8) ನಡೆದಿದ್ದು, ಏಳು ದಿನ ಅಂದರೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ. ಹೀಗಾಗಿ ಪರಪ್ಪನ ಅಗ್ರಹಾರಕ್ಕೆ ರೇವಣ್ಣ ಶಿಫ್ಟ್‌ ಆಗಲಿದ್ದಾರೆ. ಅಮಾವಾಸ್ಯೆ ದಿನವೇ ರೇವಣ್ಣ ಅವರಿಗೆ ಜೈಲುವಾಸ ಆದಂತೆ ಆಗಿದೆ.

ವಾದ – ಪ್ರತಿವಾದ ಆಲಿಸಿದ 17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು, ರೇವಣ್ಣ ಅವರನ್ನುದ್ದೇಶಿಸಿ ನಿಮಗೆ ಪೊಲೀಸರಿಂದ ತೊಂದರೆ ಆಗಿದೆಯಾ? ಎಂದು ಪ್ರಶ್ನೆ ಮಾಡಿದರು. ಅದಕ್ಕೆ ರೇವಣ್ಣ, ಕಸ್ಟಡಿಗೆ ಬಂದು 3 ದಿನ ಆಗಿದೆ. ಮಾತ್ರೆ ತೆಗೆದುಕೊಳ್ಳಲು ತಡ ಆಗುತ್ತಿದೆ. ನನ್ನನ್ನು ಸುಮ್ಮನೆ ಸತಾಯಿಸುತ್ತಿದ್ದಾರೆ. ಪ್ರಕರಣ ದಾಖಲಾಗಿದ್ದು ನನಗೆ ಗೊತ್ತಿಲ್ಲ. ನನಗೆ ಕೇಳಿದ್ದನ್ನು ಹೇಳಿದ್ದೇನೆ. ಎಲ್ಲವೂ ದಾಖಲಿಸಿಕೊಂಡಿದ್ದಾರೆ. ಮೂರು ದಿನದಿಂದ ಹೊಟ್ಟೆ ನೋವು ಇದೆ. ಮಲಗಲು ಕೂಡ ಆಗಿಲ್ಲ. ಎಲ್ಲ ವಿಚಾರಣೆಯೂ ಮುಗಿದಿದೆ ಎಂದು ತನಿಖಾಧಿಕಾರಿಯು ನಿನ್ನೆಯೇ ಹೇಳಿದ್ದರು. ಆದರೆ, ಇಂದು ಮತ್ತೆ ವಿಚಾರಣೆ ಮಾಡಬೇಕಿದೆ ಎಂದು ಹೇಳುತ್ತಿದ್ದಾರೆ. ನನಗೆ ಹೊಟ್ಟೆ ನೋವಿದೆ. ಮೂರು ದಿನಗಳಿಂದ ಸತತವಾಗಿ ನಿದ್ದೆ ಮಾಡಿಲ್ಲ ಸರ್. ನಾನು ತಪ್ಪೇ ಮಾಡಿಲ್ಲ ಅಂದಾಗ ಯಾಕೆ ಒಪ್ಪಿಕೊಳ್ಳಬೇಕು? ದುರುದ್ದೇಶದಿಂದ ಎಲ್ಲವನ್ನೂ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮಾತು ಮುಂದುವರಿಸಿದ ಎಚ್.ಡಿ. ರೇವಣ್ಣ, ಪ್ರಜ್ವಲ್ ತಪ್ಪು ಮಾಡಿರಬಹುದು. ಅದರ ಬಗ್ಗೆ ನನಗೇನು ಗೊತ್ತಿಲ್ಲ. ಬೇಕು ಎಂದೇ ನನ್ನ ಮೇಲೆ ಈ ರೀತಿ ಮಾಡುತ್ತಿದ್ದಾರೆ. ನನಗೆ ಹುಷಾರಿಲ್ಲ, ಬೆಳಗ್ಗೆ ಡ್ರಿಪ್ಸ್ ಹಾಕಿದ್ದಾರೆ. ಹುಷಾರಿಲ್ಲ ಹೊಟ್ಟೆ ಉರಿ ಬಂದಿದೆ. ಗ್ಲುಕೋಸ್ ಹಾಕಿದ್ದಾರೆ. ನಾನು ಶಾಸಕನಾಗಿ 25 ವರ್ಷ ಕಳೆದಿದೆ. ಬೇಕಂತಲೇ ಈ ರೀತಿ ಮಾಡಲಾಗಿದೆ. ವಾರಂಟ್ ಇಲ್ಲದೆಯೆ ಮನೆಗೆ ಬಂದು ಅರೆಸ್ಟ್ ಮಾಡಿದರು ಎಂದೆಲ್ಲ ಮಾಹಿತಿ ನೀಡಿದರು.

ವಾದ – ಪ್ರತಿವಾದ ಆಲಿಸಿದ ನ್ಯಾಯಾದೀಶರು, ಮೇ 14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಹೀಗಾಗಿ ಇಂದಿನಿಂದ 7 ದಿನಗಳ ವರೆಗೆ ರೇವಣ್ಣ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಆಗಲಿದ್ದಾರೆ.

ವಾದ – ಪ್ರತಿವಾದ ಹೇಗಿತ್ತು?

ವಿಚಾರಣೆ ಆರಂಭವಾಗುತ್ತಿದ್ದಂತೆ, ಎಚ್‌.ಡಿ. ರೇವಣ್ಣ ಅವರನ್ನು ಕಸ್ಟಡಿಗೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ಮನವಿ ಮಾಡಿದರು. ಇದಕ್ಕೆ ಎಸ್ಐಟಿ ರಿಮ್ಯಾಂಡ್ ಅಪ್ಲಿಕೇಶನ್ ಸಲ್ಲಿಸಿತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೇವಣ್ಣ ಪರ ವಕೀಲರು, ಎಸ್ಐಟಿ ಸಲ್ಲಿಸಿರೋ ವರದಿಯಲ್ಲಿ ಆರೋಪಿ ತನಿಖೆ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಎಂದು ಉಲ್ಲೇಖಿಸಿದ್ದಾರೆ. ಮೌನ ವಹಿಸುವುದು ಸಹ ವ್ಯಕ್ತಿ ಹಕ್ಕಾಗಿದೆ ಎಂದು ಹೇಳಿದರು.

ಆದರೆ, ಈ ವೇಳೆ ಮಧ್ಯಪ್ರವೇಶ ಮಾಡಿದ ವಿಶೇಷ ಸಾರ್ವಜನಿಕ ಅಭಿಯೋಜಕರು, ಜಾಮೀನು ನೀಡದೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಮನವಿ ಮಾಡಿದರು. ಇದಕ್ಕೆ ರೇವಣ್ಣ ಪರ ವಕೀಲರಿಂದ ಆಕ್ಷೇಪಣೆ ವ್ಯಕ್ತವಾಗಿದೆ. ಅಲ್ಲದೆ, ಹಳೇ ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ ಎಂದು ಹೇಳಿದರು.

ಆಗ ಎಸ್‌ಐಟಿ ಪರ ವಕೀಲರು, ಆರೋಪಿ ಜಾಮೀನು ನೀಡಿದರೆ ಸಾಕ್ಷಿಯನ್ನು ನಾಶ ಪಡಿಸುತ್ತಾರೆ. ಈಗಾಗಲೇ 354a ಪ್ರಕರಣ ದಾಖಲಾಗಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಈ ವಿಚಾರಗಳನ್ನು ಈ ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಿದರು.

ಆರೋಪಿ ಹೊಳೆನರಸೀಪುರ ತಾಲೂಕಿನಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಅವೆಲ್ಲವೂ ಜಾಮೀನು ಸಹಿತ ಸೆಕ್ಷನ್‌ಗಳಾಗಿವೆ ಎಂದು ವಾದ ಮಂಡಿಸಿದ್ದಾರೆ.

ರಿಮ್ಯಾಂಡ್ ಅಪ್ಲಿಕೇಷನ್‌ನಲ್ಲಿ ನೀಡಿರುವ ಮಾಹಿತಿ ಮೆಲೆ ರೇವಣ್ಣ ಪರ ವಕೀಲರು ವಾದ ಮಂಡಿಸಿದ್ದು, ಮೌನ ವಹಿಸುವುದು ತನಿಖೆಗೆ ಸಹಕರಿಸಿಲ್ಲ ಎಂದು ಅಲ್ಲ ಎಂದು ಸುಪ್ರೀಂ ಕೋರ್ಟ್ ಕೂಡ ಮೌನದಿಂದ ಇರುವುದನ್ನು ಒಪ್ಪಿದೆ ಎಂದು ಪ್ರಕರಣವೊಂದನ್ನು ಉಲ್ಲೇಖಿಸಿ ವಾದಿಸಿದ್ದಾರೆ. ಮಹಿಳೆಯನ್ನು ಸ್ವ – ಇಚ್ಛೆಯಿಂದ ಬೈಕ್‌ನಲ್ಲಿ ಕೂರಿಸಿಕೊಂಡು ಹೋದರೆ ಅಪಹರಣ ಏನಾಗುತ್ತದೆ? ಕಳೆದ ಮೂರು ದಿನಗಳಿಂದ ವಿಚಾರಣೆ ನಡೆಸಿದ್ದಾರೆ. ನೀಡಿದ ಮಾಹಿತಿಯನ್ನು ದಾಖಲಿಸಿಕೊಂಡಿದ್ದಾರೆ. ಆದರೆ, ರಿಮ್ಯಾಂಡ್ ಅಪ್ಲಿಕೇಶನ್‌ನಲ್ಲಿ ನಕಾರಾತ್ಮಕ ಅಂತ ಹೇಳಿದರೆ ಏನು ಅರ್ಥ? ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Prajwal Revanna Case: ಕಾರ್ತಿಕ್‌ಗೆ ನೋಟಿಸ್‌ ನೀಡದ SIT; ರಾಜ್ಯಪಾಲ, ಕೋರ್ಟ್‌ ಮೊರೆ ಹೋಗಲು ಎಚ್‌ಡಿಕೆ ನಿರ್ಧಾರ

ಹಿಂದಿನ ವಿಚಾರಣೆಯಲ್ಲಿ ಏನಾಗಿತ್ತು?

ಜಾಮೀನು ನೀಡುವಂತೆ ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಧೀಶರು, ಆರೋಪಿ ಕಸ್ಟಡಿಯಲ್ಲಿದ್ದಾಗ ಜಾಮೀನು ಅರ್ಜಿ ವಿಚಾರಣೆ ನಡೆಸಲು ಯೋಗ್ಯವೇ ಎಂಬ ಬಗ್ಗೆ ಪ್ರಶ್ನೆ ಮಾಡಿದ್ದರು. ಆಗ ಈ ಬಗ್ಗೆ ರೇವಣ್ಣ ಪರ ಹಾಜರಾಗಿದ್ದ ಹಿರಿಯ ವಕೀಲ ಸಿ.ವಿ.‌ ನಾಗೇಶ್ ಅವರು ಕೆಲವು ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದ್ದರು. ವಾದ ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ಸೂಚಿಸಿದ್ದು, ಬುಧವಾರಕ್ಕೆ ವಿಚಾರಣೆಯನ್ನು ಮುಂದೂಡಿದ್ದರು.

Continue Reading

ರಾಜಕೀಯ

Prajwal Revanna Case: ಒಕ್ಕಲಿಗ ನಾಯಕರ ಪೈಪೋಟಿಯಂತೆ, ರಾಜೀನಾಮೆ ಬೇಕಂತೆ; ಕೊಡ್ತೇನೆ ಅಂದ್ರ ಡಿಕೆಶಿ!

Prajwal Revanna Case: ಎಚ್.ಡಿ. ಕುಮಾರಸ್ವಾಮಿ ಅವರ ಕೆಲಸ ಮುಗಿಸೋದೇ ಅಲ್ವಾ? ಅವರು ಕಿಂಗ್ ಆಫ್ ಬ್ಲ್ಯಾಕ್‌ಮೇಲರ್. ‌ಅಧಿಕಾರಿಗಳು, ರಾಜಕಾರಣಿಗಳನ್ನು ಹೆದರಿಸುತ್ತಿದ್ದಾರೆ. ಅವರದು ಇದೇ ಕೆಲಸವಾಗಿದೆ. ಈ ಎಲ್ಲ ವಿಷಯಗಳ ಬಗ್ಗೆ ಚರ್ಚೆ ಮಾಡಲು ಟೈಮ್ ಇದೆ. ಅಸೆಂಬ್ಲಿಯೂ ಇದೆ. ಎಲ್ಲವನ್ನೂ ತಗೊಂಡ್ ಬರ್ಲಿ ಚರ್ಚೆ ಮಾಡೋಣ. ಮೊದಲು ಅವರ ಹೆಸರು ಸ್ಟ್ಯಾಂಡ್ ಆಗಲಿ, ದೇವೇಗೌಡರು ನನ್ನ ಹೆಸರು ತೆಗೆದುಕೊಳ್ಳುವುದು ಬೇಡ ಅಂದರು. ಅವರದ್ದೇ ಬೇರೆ ಫ್ಯಾಮಿಲಿ, ನಮ್ಮದೇ ಬೇರೆ ಫ್ಯಾಮಿಲಿ ಎಂದಿದ್ದಾರೆ. ಉಪ್ಪು ತಿಂದವನು ನೀರು ಕುಡಿಯಬೇಕು ಎಂದವರು ಈಗ ಯಾಕೆ ಉರಿ ಮಾಡಿಕೊಳ್ಳುತ್ತಿದ್ದಾರೆ? ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Prajwal Revanna Case Will resign says DK Shivakumar and slams HD Kumaraswamy
Koo

ಚಿಕ್ಕಮಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣವು (Hassan Pen Drive Case) ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನಡುವೆ ಭಾರಿ ವಾಕ್ಸಮರಕ್ಕೆ ಕಾರಣವಾಗಿದೆ. ಆರೋಪ – ಪ್ರತ್ಯಾರೋಪಗಳು ತಾರಕಕ್ಕೇರಿವೆ. ಮಂಗಳವಾರವಷ್ಟೇ ಸುದ್ದಿಗೋಷ್ಠಿ ನಡೆಸಿದ್ದ ಎಚ್‌ಡಿಕೆ, ಸಂಪುಟದಿಂದ ಡಿಕೆಶಿ ವಜಾಕ್ಕೆ ಆಗ್ರಹಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಡಿ.ಕೆ. ಶಿವಕುಮಾರ್‌, ಒಕ್ಕಲಿಗ ನಾಯಕರ ಪೈಪೋಟಿಯಂತೆ, ರಾಜೀನಾಮೆ ಬೇಕಂತೆ ಕೊಡೋಣ ಎಂದು ವ್ಯಂಗ್ಯವಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಚುನಾವಣೆ ಮುಗಿಯಿತು. ನಾನೀಗ ಸಿದ್ದಾರ್ಥ್ ಮನೆಗೆ ರೆಸ್ಟ್ ಮಾಡಲು ಬಂದಿದ್ದೇನೆ. ಪೆನ್‌ಡ್ರೈವ್ ವಿಚಾರ ಎಲ್ಲವೂ ಕುಮಾರಸ್ವಾಮಿಗೆ ಗೊತ್ತು. ಕುಮಾರಣ್ಣನಿಗೆ ನನ್ನ ರಾಜೀನಾಮೆ ಬೇಕಂತೆ. ಒಕ್ಕಲಿಗ ನಾಯಕರ ಪೈಪೋಟಿಯಂತೆ, ರಾಜೀನಾಮೆ ಬೇಕಂತೆ ಕೊಡೋಣ ಎಂದು ಹೇಳಿದರು.

ಅಸೆಂಬ್ಲಿಗೆ ಎಲ್ಲವನ್ನೂ ತಗೊಂಡ್ ಬರ್ಲಿ ಚರ್ಚೆ ಮಾಡೋಣ

ಎಚ್.ಡಿ. ಕುಮಾರಸ್ವಾಮಿ ಅವರ ಕೆಲಸ ಮುಗಿಸೋದೇ ಅಲ್ವಾ? ಅವರು ಕಿಂಗ್ ಆಫ್ ಬ್ಲ್ಯಾಕ್‌ಮೇಲರ್. ‌ಅಧಿಕಾರಿಗಳು, ರಾಜಕಾರಣಿಗಳನ್ನು ಹೆದರಿಸುತ್ತಿದ್ದಾರೆ. ಅವರದು ಇದೇ ಕೆಲಸವಾಗಿದೆ. ಈ ಎಲ್ಲ ವಿಷಯಗಳ ಬಗ್ಗೆ ಚರ್ಚೆ ಮಾಡಲು ಟೈಮ್ ಇದೆ. ಅಸೆಂಬ್ಲಿಯೂ ಇದೆ. ಎಲ್ಲವನ್ನೂ ತಗೊಂಡ್ ಬರ್ಲಿ ಚರ್ಚೆ ಮಾಡೋಣ. ಮೊದಲು ಅವರ ಹೆಸರು ಸ್ಟ್ಯಾಂಡ್ ಆಗಲಿ, ದೇವೇಗೌಡರು ನನ್ನ ಹೆಸರು ತೆಗೆದುಕೊಳ್ಳುವುದು ಬೇಡ ಅಂದರು. ಅವರದ್ದೇ ಬೇರೆ ಫ್ಯಾಮಿಲಿ, ನಮ್ಮದೇ ಬೇರೆ ಫ್ಯಾಮಿಲಿ ಎಂದಿದ್ದಾರೆ. ಉಪ್ಪು ತಿಂದವನು ನೀರು ಕುಡಿಯಬೇಕು ಎಂದವರು ಈಗ ಯಾಕೆ ಉರಿ ಮಾಡಿಕೊಳ್ಳುತ್ತಿದ್ದಾರೆ? ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆ ಮಾಡಿದರು.

ಹೋಗಿ ವಾದ ಮಾಡಲಿ

ಇವರು ವಕೀಲರಾ? ನ್ಯಾಯಾಧೀಶರಾ? ಹೋಗಿ ವಾದ ಮಾಡಲಿ. ಶಿವಕುಮಾರ್, ಸಿದ್ದರಾಮಯ್ಯ, ಸುರ್ಜೆವಾಲ ಇನ್ವೆಸ್ಟಿಗೇಷನ್ ಟೀಮ್ ಎಂದು ಹೇಳುತ್ತಾರೆ. ಆದರೆ, ಈ ಪ್ರಕರಣದ ಕಥಾ ನಾಯಕ, ಡೈರೆಕ್ಟರ್, ಪ್ರೊಡ್ಯೂಸರ್ ಎಲ್ಲವೂ ಇವರೇ ಆಗಿದ್ದಾರೆ. ಎಲ್ಲವೂ ಗೊತ್ತಿದೆ. ಅವರ ಕಾರ್ಯಕರ್ತರು ಅಂತೆ, ಮರ್ಯಾದೆ ಇದ್ದರೆ ಹೋಗಿ ಧೈರ್ಯ ತುಂಬಲಿ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಇದನ್ನೂ ಓದಿ: Prajwal Revanna Case: ವಿಡಿಯೋ ಕಿಂಗ್‌ಪಿನ್‌ ಕಾರ್ತಿಕ್‌ ಕಾಂಗ್ರೆಸ್‌ ಅಭ್ಯರ್ಥಿ ಜೊತೆ ಕ್ಲೋಸ್;‌ ʼಕೈʼವಾಡಕ್ಕೆ ಸಾಕ್ಷಿ ಫೋಟೋಗಳು ಇಲ್ಲಿವೆ!

ಮೋರ್‌ ಸ್ಟ್ರಾಂಗ್‌ ಮೋರ್‌ ಎನಿಮಿ

ನನ್ನ ಮೇಲೆ ಆರೋಪ ಮಾಡದಿದ್ದರೆ ಎಚ್.ಡಿ. ಕುಮಾರಸ್ವಾಮಿಗೆ ಮಾರ್ಕೆಟ್‌ ಓಡಲ್ಲ. ನನ್ನ ಹೆಸರು ಇರದಿದ್ದರೆ ನೀವು ಮಾಧ್ಯಮದಲ್ಲಿ ತೋರಿಸಲಲ್ಲ. ನನ್ನ ಹೆಸರು ಇಲ್ಲದಿದ್ರೆ ಪಾಪ ಅವರಿಗೆ ನಿದ್ದೆಯೇ ಬರಲ್ಲ. ಮೋರ್‌ ಸ್ಟ್ರಾಂಗ್‌ ಮೋರ್‌ ಎನಿಮಿ, ಲೆಸ್‌ ಸ್ಟ್ರಾಂಗ್‌ ಲೆಸ್‌ ಎನಿಮಿ ಎಂದು ಡಿ.ಕೆ. ಶಿವಕುಮಾರ್‌ ಮಾರ್ಮಿಕವಾಗಿ ನುಡಿದರು.

Continue Reading

ರಾಜಕೀಯ

Prajwal Revanna Case: ಕಾರ್ತಿಕ್‌ಗೆ ನೋಟಿಸ್‌ ನೀಡದ SIT; ರಾಜ್ಯಪಾಲ, ಕೋರ್ಟ್‌ ಮೊರೆ ಹೋಗಲು ಎಚ್‌ಡಿಕೆ ನಿರ್ಧಾರ

Prajwal Revanna Case: ಕಾರ್ತಿಕ್‌ ರಾಜಾರೋಷವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿದ್ದಾನೆ. ಇಷ್ಟಾದರೂ ಆತನಿಗೆ ಏಕೆ ಈವರೆಗೆ ನೋಟಿಸ್‌ ಕೊಡಲಾಗಿಲ್ಲ? ಈ ಪ್ರಕರಣವನ್ನು ಸಿಬಿಐಗೆ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡುತ್ತೇನೆ. ಜತೆಗೆ ಕೋರ್ಟ್‌ನಲ್ಲಿಯೂ ಮನವಿ ಸಲ್ಲಿಸುತ್ತೇನೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

VISTARANEWS.COM


on

Prajwal Revanna Case SIT not issuing notice to Karthik HDK decides to approach Governor and Court
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದ (Hassan Pen Drive Case) ಸೂತ್ರಧಾರಿ ಕಾರ್ತಿಕ್‌ ಗೌಡನ ಬಗ್ಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಕಾರ್ತಿಕ್‌ ರಾಜಾರೋಷವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿದ್ದಾನೆ. ಇಷ್ಟಾದರೂ ಆತನಿಗೆ ಏಕೆ ಈವರೆಗೆ ನೋಟಿಸ್‌ ಕೊಡಲಾಗಿಲ್ಲ? ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಈ ಸಂಬಂಧ ಪ್ರಕರಣವನ್ನು ಸಿಬಿಐಗೆ ರಾಜ್ಯಪಾಲರು ಹಾಗೂ ಕೋರ್ಟ್‌ ಮೊರೆ ಹೋಗಲು ತೀರ್ಮಾನಿಸಿದ್ದಾಗಿ ಹೇಳಿದ್ದಾರೆ.

ಈ ಬಗ್ಗೆ ವಿಸ್ತಾರ ನ್ಯೂಸ್‌ನೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿಗಳಿಗೆ ಎಸ್ಐಟಿ ನೋಟಿಸ್ ನೀಡಿಲ್ಲ. ಇದು ಯಾವ ಸರಿಯೇ ಎಂದು ಪ್ರಶ್ನೆ ಮಾಡಿದ್ದಾರೆ.

ಅಲ್ಲದೆ, ಈ ಪ್ರಕರಣವನ್ನು ಸಿಬಿಐಗೆ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡುತ್ತೇನೆ. ಜತೆಗೆ ಕೋರ್ಟ್‌ನಲ್ಲಿಯೂ ಮನವಿ ಸಲ್ಲಿಸುತ್ತೇನೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿಯೂ ಹರಿಹಾಯ್ದಿದ್ದ ಎಚ್‌ಡಿಕೆ

‌ಅಶ್ಲೀಲ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮಂಗಳವಾರ ನಡೆಸಿದ್ದ ಸುದ್ದಿಗೋಷ್ಠಿಯಲ್ಲಿಯೂ ಹರಿಹಾಯ್ದಿದ್ದರು. ಕಾರ್ತಿಕ್‌ ಗೌಡ ಕಥೆ ಏನು? ಆತ ಎಲ್ಲಿದ್ದಾನೆ? ಆತನ ಹಿಂದೆ ಯಾರಿದ್ದಾರೆ? ನಿಮ್ಮ ಈ ತನಿಖೆಯ ವಿಸ್ತಾರ ಎಷ್ಟು? ಕೇವಲ ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧ ಅಷ್ಟೇ ನಿಮ್ಮ ತನಿಖೆಯೇ? ಇಲ್ಲವೇ ಆಯೋಗ ಹೇಳಿದಂತೆ ಎಲ್ಲ ರಾಜಕಾರಣಿಗಳ ವಿರುದ್ಧ ತನಿಖೆ ಮಾಡುತ್ತಿದ್ದೀರಾ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಪ್ರಶ್ನೆ ಮಾಡಿದ್ದರು.

ರೇವಣ್ಣ ಅರೆಸ್ಟ್ ಆದಾಗ ನನಗೆ ಗೊತ್ತೇ ಇಲ್ಲ ಅಂತ ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಏನು ಹೇಳಿದ್ದಾರೆ? ಈ ಪ್ರಕರಣದ ಹಿಂದೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಇದ್ದಾರೆ ಎಂಬುದಾಗಿ ಹೇಳಿದ್ದಾರೆ. ಈಗ ನನ್ನ ಪ್ರಶ್ನೆ ಎಂದರೆ ಈ ಪೆನ್‌ಡ್ರೈವ್‌ ರೂವಾರಿ ಕಾರ್ತಿಕ್‌ನನ್ನು ಏಕೆ ಬಿಟ್ಟಿದ್ದೀರಿ? ಎಸ್ಐಟಿ ಅಧಿಕಾರಿಗಳು ಏನು ಮಾಡುತ್ತಿದ್ದಾರೆ? ಎಂದು ಪ್ರಶ್ನೆ ಮಾಡಿದ್ದರು.

ಈ ವೇಳೆ ಪ್ರಜ್ವಲ್‌ ಪೆನ್‌ಡ್ರೈವ್‌ ವಿಷಯವಾಗಿ ಹಾಸನದ ನವೀನ್ ಗೌಡ ಮಾತನಾಡಿದ್ದಾರೆನ್ನಲಾದ ಆಡಿಯೊವನ್ನು ಎಚ್‌.ಡಿ. ಕುಮಾರಸ್ವಾಮಿ ಪ್ಲೇ ಮಾಡಿದರು. ಅಲ್ಲದೆ, ನವೀನ್ ಗೌಡ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಜತೆ ಇರುವ ಹಾಗೂ ಸಚಿವ ಜಮೀರ್ ಅಹಮದ್ ಜತೆ ಇರುವ ಫೋಟೊವನ್ನು ಬಿಡುಗಡೆ ಮಾಡಿದರು. ನವೀನ್‌ ಗೌಡನ ಮೇಲೆ ಯಾವ ಕ್ರಮವನ್ನು ತೆಗೆದುಕೊಂಡಿದ್ದೀರಿ? ಎಂದು ಪ್ರಶ್ನೆ ಮಾಡಿದ್ದರು.

ಪೆನ್‌ಡ್ರೈವ್‌ ಸಂಚಿನ ಹಿಂದಿರುವ ಡಿ.ಕೆ. ಶಿವಕುಮಾರ್‌ ವಜಾಗೆ ಕುಮಾರಸ್ವಾಮಿ ಆಗ್ರಹ

ಈ ಪೆನ್‌ಡ್ರೈವ್‌ ಹಂಚಿಕೆ ಸಂಚಿನ ಹಿಂದೆ ಇರುವ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಸಂಪುಟದಿಂದ ಕೂಡಲೇ ವಜಾ ಮಾಡಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದರು.

ಈ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಒಳಸಂಚಿದೆ. ಕ್ಯಾಬಿನೆಟ್‌ನಿಂದ ಮೊದಲು ಅವರನ್ನು ಕಿತ್ತುಹಾಕಿ. ಈ ಪ್ರಕರಣವನ್ನು ಅಷ್ಟು ಸುಲಭವಾಗಿ ನಾನು ಬಿಡಲ್ಲ. ಈ ಸಿಎಂ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೆ ಮೊದಲು ಡಿಕೆಶಿಯನ್ನು ಕೈಬಿಡಲಿ ಎಂದು ಆಗ್ರಹಿಸಿದ್ದರು.

ಎಸ್ಐಟಿ ಅಧಿಕಾರಿಗಳು ಸಿಎಂ, ಡಿಸಿಎಂಗೆ ಏಜೆಂಟ್‌

ಎಸ್ಐಟಿ ಅಧಿಕಾರಿಗಳು ಸಿಎಂ, ಡಿಸಿಎಂಗೆ ಏಜೆಂಟ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ. ದೇವರಾಜೇಗೌಡನನ್ನು ಯಾಕೆ ಕರೆಸಿಕೊಂಡರು? ಯಾಕೆ ಅವರ ಹೇಳಿಕೆಯಲ್ಲಿನ ಒಂದು ಪ್ಯಾರಾವನ್ನು ಡಿಲಿಟ್ ಮಾಡಿ ಎಂದು ಹೇಳಿದರು? ಡಿಕೆಶಿ ಇತಿಹಾಸ ಎಲ್ಲರಿಗೂ ಗೊತ್ತು. ಮೊದಲು ಈ ಒಳಸಂಚು ಮಾಡಿದ್ದರಿಂದ ಅವರ ಮೇಲೆ ಕ್ರಮವಾಗಲಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದರು.

ಇದನ್ನೂ ಓದಿ: Prajwal Revanna Case: ವಿಡಿಯೋ ಕಿಂಗ್‌ಪಿನ್‌ ಕಾರ್ತಿಕ್‌ ಕಾಂಗ್ರೆಸ್‌ ಅಭ್ಯರ್ಥಿ ಜೊತೆ ಕ್ಲೋಸ್;‌ ʼಕೈʼವಾಡಕ್ಕೆ ಸಾಕ್ಷಿ ಫೋಟೋಗಳು ಇಲ್ಲಿವೆ!

ಸಿಎಂ, ಡಿಕೆಶಿ ಇನ್ವೆಸ್ಟಿಗೇಷನ್‌ ಟೀಮ್

ಪ್ರಜ್ವಲ್‌ ಮೇಲಿನ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ದೂರು ಸಿದ್ಧಪಡಿಸಿ ಹೊಳೆನರಸೀಪುರಕ್ಕೆ ಕಳಿಸಿದ್ದರು. ಬಳಿಕ ಎಸ್ಐಟಿ ತನಿಖೆಗೆ ಆದೇಶಿಸಿ ದೂರು ದಾಖಲು ಮಾಡಿಕೊಂಡಿದ್ದಾರೆ. ಇದನ್ನು ಒಪ್ಪೋಣ. ಆದರೆ ನಿಷ್ಪಕ್ಷಪಾತ ತನಿಖೆ ಆಗುತ್ತದೆ ಎಂದು ನಾನು ಭಾವಿಸಿದೆ. ಇಲ್ಲಾಗಿದ್ದೇನು? ಸಿಎಂ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್‌ ಟೀಂ, ಡಿ.ಕೆ. ಶಿವಕುಮಾರ್ ಇನ್ವೆಸ್ಟಿಗೇಷನ್‌ ಟೀಮ್ ಎಂದು ಮಾಡಿಕೊಂಡಿದ್ದಾರೆ. ಈ ಕೇಸ್‌ಗೆ ಸಂಬಂಧಪಟ್ಟಂತೆ ನಡೆದ ಕಾಲ್ ರೆಕಾರ್ಡಿಂಗ್ ಹೊರಗೆ ಬರಬೇಕು. ಯಾರು ಯಾರು? ಯಾರ ಜತೆ ಮಾತನಾಡಿದ್ದಾರೆ ಎಂಬುದೆಲ್ಲವೂ ಹೊರಬರಬೇಕು ಎಂದು ಹೇಳಿದ್ದರು.

Continue Reading

ದೇಶ

EVMs Damage: ಚುನಾವಣಾ ಸಿಬ್ಬಂದಿ ಇದ್ದ ಬಸ್‌ನಲ್ಲಿ ಬೆಂಕಿ ಅವಘಡ; ಮತಯಂತ್ರಗಳು ಡ್ಯಾಮೇಜ್‌

EVMs Damage:ಮತದಾನ ಪ್ರಕ್ರಿಯೆ ಮುಗಿದ ಬಳಿಕ ರಾತ್ರಿ 11ಗಂಟೆಗೆ ವಾಪಾಸಾಗುತ್ತಿದ್ದ ವೇಳೆ ಬಸ್ಸಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತ್ತು. ಬಸ್‌ನಲ್ಲಿ ಆರು ಜನ ಸಿಬ್ಬಂದಿ ಮತ್ತು ಆರು ಇವಿಎಂ ಯಂತ್ರಗಳು ಇದ್ದವು. ಬೂತ್‌ ನಂಬರ್‌ 275, 276, 277, 278, 279 ಮತ್ತು 280 ಸೇರಿದಂತೆ ನಾಲ್ಕು ಮತಗಟ್ಟೆಗಳ ಇವಿಎಂಗಳು ಹಾನಿಗೊಳಗಾಗಿವೆ. ನಾಲ್ಕು ಇವಿಎಂ ಯಂತ್ರಗಳು ಹಾನಿಗೊಳಗಾಗಿದ್ದು, ಎರಡು ಇವಿಎಂಗಳು ಸುರಕ್ಷಿತವಾಗಿದೆ ಎಂದು ಜಿಲ್ಲಾಧಿಕಾರಿ ಸೂರ್ಯವಂಶಿ ಹೇಳಿದ್ದಾರೆ.

VISTARANEWS.COM


on

EVMs damage
Koo

ಮಧ್ಯಪ್ರದೇಶ: ಚುನಾವಣಾ ಸಿಬ್ಬಂದಿಯನ್ನು ಹೊತ್ತು ಸಾಗುತ್ತಿದ್ದ ಬಸ್ಸಿನಲ್ಲಿ ಬೆಂಕಿ ಅವಘಡ(Fire accident) ಸಂಭವಿಸಿದ್ದು, ಅನೇಕ ವಿದ್ಯುನ್ಮಾನ ಮತಯಂತ್ರ(EVMs damage)ಗಳು ಹಾನಿಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಇನ್ನು ಬಸ್‌ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಅದೃಷ್ಟವಶಾತ್‌ ಬಸ್‌ನಲ್ಲಿದ್ದ ಸಿಬ್ಬಂದಿ ಮತ್ತು ಚಾಲಕ ಯಾವುದೇ ಗಾಯಗಳಾಗದೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆ ವಿವರ:

ಬೀತುಲ್‌ ಜಿಲ್ಲೆಯಾ ಗೋಲಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮತದಾನ ಪ್ರಕ್ರಿಯೆ ಮುಗಿದ ಬಳಿಕ ರಾತ್ರಿ 11ಗಂಟೆಗೆ ವಾಪಾಸಾಗುತ್ತಿದ್ದ ವೇಳೆ ಬಸ್ಸಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತ್ತು. ಬಸ್‌ನಲ್ಲಿ ಆರು ಜನ ಸಿಬ್ಬಂದಿ ಮತ್ತು ಆರು ಇವಿಎಂ ಯಂತ್ರಗಳು ಇದ್ದವು. ಬೂತ್‌ ನಂಬರ್‌ 275, 276, 277, 278, 279 ಮತ್ತು 280 ಸೇರಿದಂತೆ ನಾಲ್ಕು ಮತಗಟ್ಟೆಗಳ ಇವಿಎಂಗಳು ಹಾನಿಗೊಳಗಾಗಿವೆ. ನಾಲ್ಕು ಇವಿಎಂ ಯಂತ್ರಗಳು ಹಾನಿಗೊಳಗಾಗಿದ್ದು, ಎರಡು ಇವಿಎಂಗಳು ಸುರಕ್ಷಿತವಾಗಿದೆ ಎಂದು ಜಿಲ್ಲಾಧಿಕಾರಿ ಸೂರ್ಯವಂಶಿ ಹೇಳಿದ್ದಾರೆ. ಇನ್ನು ಈ ಘಟನೆಯಿಂದ ಮತ ಎಣಿಕೆ ಮೇಲೆ ಏನಾದರೂ ಪ್ರಭಾವ ಬೀರಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಘಟನೆ ಬಗ್ಗೆ ಈಗಾಗಲೇ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಲಾಗಿದೆ. ಅವರು ಆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಒಂದು ವೇಳೆ ಮರು ಮತದಾನದ ಅವಶ್ಯಕತೆ ಇದಲ್ಲಿ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:Uttarakhand Wild fire:5 ತಿಂಗಳು.. 910 ಕಾಡ್ಗಿಚ್ಚು ಪ್ರಕರಣ;ಸುಪ್ರೀಂಕೋರ್ಟ್‌ನಲ್ಲಿ ಇಂದು ತುರ್ತು ವಿಚಾರಣೆ

ಮಧ್ಯಪ್ರದೇಶದಲ್ಲಿ ಮೂರನೇ ಹಂತದ ಮತದಾನ

ನಿನ್ನೆ ಮಧ್ಯಪ್ರದೇಶದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತನಾದನ ನಡೆದಿತ್ತು. ಬೀತುಲ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ. 72.65 ರಷ್ಟು ಮತದಾನ ನಡೆದಿತ್ತು. ಒಟ್ಟಾರೆ ಮಧ್ಯಪ್ರದೇಶದಲ್ಲಿ ಒಂಬತ್ತು ಕ್ಷೇತ್ರಗಳಲ್ಲಿ ಶೇ.66.05ರಷ್ಟು ಮತದಾನ ಆಗಿತ್ತು. ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಕೇಂದ್ರ ಸಚಿವ ಜ್ಯೋತಿರಾದಿತ್ಯಾ ಸಿಂದಿಯಾ, ಮಾಜಿ ಸಿಎಂಗಳಾದ ಶಿವರಾಜ್‌ ಸಿಂಗ್‌ ಚೌಹಾಣ್‌ ಮತ್ತು ದಿಗ್ವಿಜಯ್‌ ಸಿಂಗ್‌ ಸೇರಿದಂತೆ ಒಟ್ಟು 127 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಿನ್ನೆ ಮೊರೆನಾ, ಬಿಂದ್‌(ಎಸ್‌ಸಿ ಮೀಸಲು ಕ್ಷೇತ್ರ), ಗ್ವಾಲಿಯರ್‌, ಗುನಾ, ಸಾಗರ್‌, ವಿಧಿಶಾ, ಭೋಪಾಲ್‌, ರಾಜ್‌ಘರ್‌ ಮತ್ತು ಬೀತುಲ್‌(ಎಸ್‌ಟಿ ಮೀಸಲು ಕ್ಷೇತ್ರ)ನಲ್ಲಿ ಮತದಾನ ನಡೆದಿತ್ತು.

Continue Reading
Advertisement
Viral video
ವೈರಲ್ ನ್ಯೂಸ್6 mins ago

Viral Video: ಅಂಬಾನಿಗಿಂತಲೂ ರಿಚ್‌ ಈತ.. ಗದ್ದೆ ಉಳುಮೆಗೆ 20 ಲಕ್ಷದ ಕಾರೇ ಬೇಕು..!

Prajwal Revanna Case HD Revanna sent to 7 day judicial custody
ಕ್ರೈಂ9 mins ago

Prajwal Revanna Case: ಎಚ್‌.ಡಿ. ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ; ಅಮಾವಾಸ್ಯೆ ದಿನವೇ ಜೈಲಿಗೆ ಶಿಫ್ಟ್‌!

Shakib Al Hasan
ಕ್ರೀಡೆ11 mins ago

Shakib Al Hasan: ಸೆಲ್ಫಿ ತೆಗೆಯಲು ಬಂದ ಅಭಿಮಾನಿಗೆ ಥಳಿಸಲು ಮುಂದಾದ ಶಕಿಬ್; ವಿಡಿಯೊ ವೈರಲ್​

Ram Mandir
ದೇಶ25 mins ago

Ram Mandir: ರಾಮಮಂದಿರ ‘ಯೂಸ್‌ಲೆಸ್’ ಎಂದ ಸಮಾಜವಾದಿ ಪಕ್ಷದ ನಾಯಕ; ಬಿಜೆಪಿ ಆಕ್ರೋಶ

IPL 2024
ಕ್ರೀಡೆ49 mins ago

IPL 2024: ಅಂಪೈರ್​ ಜತೆ ವಾಗ್ವಾದ; ಸಂಜುಗೆ ಬಿತ್ತು ಭಾರೀ ದಂಡ

gold rate today tapasi
ಚಿನ್ನದ ದರ1 hour ago

Gold Rate today: ಇದು ಚಿನ್ನದಂಥಾ ವಿಷಯ! ಬಂಗಾರದ ಬೆಲೆ ತುಸು ಇಳಿಕೆ; ಎಷ್ಟಿದೆ ಇಂದು?

IPL 2024 Points Table
ಕ್ರಿಕೆಟ್1 hour ago

IPL 2024 Points Table: ಡೆಲ್ಲಿಗೆ ಗೆಲುವು ಅಂಕಪಟ್ಟಿಯಲ್ಲಿ ಕುಸಿತ ಕಂಡ ಲಕ್ನೋ

sam pitroda pm narendra modi
ಪ್ರಮುಖ ಸುದ್ದಿ2 hours ago

PM Narendra Modi: “ಚರ್ಮದ ಬಣ್ಣದ ಮೇಲಿನ ಈ ಅವಮಾನವನ್ನು ಸಹಿಸುವುದಿಲ್ಲ…” ಪಿತ್ರೋಡಾಗೆ ಮೋದಿ ತಪರಾಕಿ

ವೈರಲ್ ನ್ಯೂಸ್2 hours ago

Viral Video: ಅಬ್ಬಾ.. ಎಂಥಾ ಭೀಕರ ದೃಶ್ಯ! ಕರೆಂಟ್‌ ಶಾಕ್‌ ಹೊಡೆದು ವ್ಯಕ್ತಿ ಒದ್ದಾಡಿ ಸಾವು

Double Murder Fakirappa stabs brothers to death for falling behind daughter
ಕ್ರೈಂ2 hours ago

Double Murder: ಮಗಳ ಹಿಂದೆ ಬಿದ್ದಿದ್ದಕ್ಕೆ ಸಹೋದರರನ್ನೇ ಚಾಕುವಿನಿಂದ ಇರಿದು ಕೊಂದ ಫಕೀರಪ್ಪ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ19 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ22 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ24 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌