ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ (Rajyasabha Election) ಜಯ ಸಾಧಿಸಿದ ಮೂವರು ಕಾಂಗ್ರೆಸ್ ಅಭ್ಯರ್ಥಿಗಳ ಸಂಭ್ರಮಾಚರಣೆ ವೇಳೆ ವಿಧಾನಸೌಧದ ಆವರಣದಲ್ಲಿ ವಿಜೇತ ಅಭ್ಯರ್ಥಿ ನಾಸಿರ್ ಹುಸೇನ್ (Nasir Husein) ಅವರ ಅಭಿಮಾನಿಗಳು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ (Sedition Case) ಕೂಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ಕಾಂಗ್ರೆಸ್ ತನ್ನ ವಾದವನ್ನು ಮಂಡಿಸಿದೆ. ಕಾಂಗ್ರೆಸ್ ಪಕ್ಷದ ಪ್ರಕಾರ ಅಲ್ಲಿ ಪಾಕಿಸ್ತಾನ್ ಜಿಂದಾಬಾದ್ (Pakistan Zindabad) ಘೋಷಣೆ ಕೂಗಲಾಗಿಲ್ಲ. ಬದಲಾಗಿ ನಾಸಿರ್ ಸಾಬ್ ಜಿಂದಾಬಾದ್ (Nasir saab Zindabad) ಎಂಬ ಘೋಷಣೆಯನ್ನು ತಿರುಚಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದಂತೆ ಬಿಂಬಿಸಲಾಗುತ್ತಿದೆ.
ಕಾಂಗ್ರೆಸ್ ನಾಯಕರು ಈ ಬಗ್ಗೆ ತಮ್ಮ ಹೇಳಿಕೆಗಳನ್ನು ನೀಡಿದ್ದಾರೆ, ಜತೆಗೆ ಫ್ಯಾಕ್ಟ್ ಚೆಕ್ ಮಾಡಿದ್ದನ್ನು ಬಿಡುಗಡೆ ಮಾಡಿದ್ದಾರೆ. ಫ್ಯಾಕ್ಟ್ ಚೆಕ್ ವಿಡಿಯೊದಲ್ಲಿ ನಾಸಿರ್ ಸಾಬ್ ಜಿಂದಾಬಾದ್ ಎಂದು ಹೇಳಿದಂತೆ ಕೇಳಿಸಿದೆ.
ಸಚಿವ ಪ್ರಿಯಾಂಕ್ ಖರ್ಗೆ ಅವರ ವಾದವೇನು?
ಈ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ, ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆ ಅವರು ಟ್ವೀಟ್ ಪೋಸ್ಟ್ ಮಾಡಿ ಅಲ್ಲಿ ತಮ್ಮ ವಾದದ ವಿಚಾರವನ್ನು ಮುಂದಿಟ್ಟಿದ್ದಾರೆ. ಇದೊಂದು ವ್ಯವಸ್ಥಿತವಾದ ಷಡ್ಯಂತ್ರ ಎಂದಿದ್ದಾರೆ. ಮಾಧ್ಯಮಗಳಿಗೂ ಹಲವು ಪ್ರಶ್ನೆ ಕೇಳಿದ್ದಾರೆ. ಅಂತಿಮವಾಗಿ ಅಲ್ಲಿ ಏನೂ ನಡೆದಿಲ್ಲ. ಏನೋ ನಡೆದಿದೆ ಎಂಬಂತೆ ಬಿಂಬಿಸಲಾಗಿದೆ ಎಂದು ಅವರು ಹೇಳಿದ್ದಾರೆ.
- ದೇಶದಲ್ಲಿ ಬಿಜೆಪಿ ಸವಾಲುಗಳನ್ನು ಎದುರಿಸುವ ಸಂದರ್ಭ ಬಂದಾಗಲೆಲ್ಲ ಈ “ಪಾಕಿಸ್ತಾನ್ ಜಿಂದಾಬಾದ್” ಎನ್ನುವ ಶಬ್ದ ಸದ್ದು ಮಾಡುತ್ತದೆ!
- ಮಾಧ್ಯಮ ಸ್ನೇಹಿತರಲ್ಲಿ ಕೇಳಬೇಕು ಎನಿಸುವ ಒಂದಷ್ಟು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ,
-ವಿಜಯೋತ್ಸವ ಆಚರಣೆಯ ವೇಳೆ ಅಲ್ಲಿ ಉಪಸ್ಥಿತರಿದ್ದ ಒಂದಷ್ಟು ಮಾಧ್ಯಮ ಸ್ನೇಹಿತರು ಅಲ್ಲಿ “ನಾಸಿರ್ ಸಾಬ್ ಜಿಂದಾಬಾದ್” ಎಂದು ಕೂಗಿರುವುದಾಗಿ ಹೇಳಿದ್ದಾರೆ.
-ಅಕಸ್ಮಾತ್ ಅಲ್ಲಿ “ಪಾಕಿಸ್ತಾನ್” ಎಂದೇ ಕೂಗಿದ್ದರೆ ಎಲ್ಲರಿಗೂ ಒಂದೇ ರೀತಿ ಕೇಳಿಸಿರಬೇಕಲ್ಲವೇ?
– ಅಕಸ್ಮಾತ್ ಆತ ನಿಜಕ್ಕೂ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದರೆ ಸಹಜವಾಗಿ ಪತ್ರಕರ್ತರ ಪ್ರಜ್ಞೆ ಜಾಗೃತವಾಗಿ ಆತನತ್ತ ಗಮನ ಹರಿಸುತ್ತಿದ್ದರು, ಆತನತ್ತ ಕ್ಯಾಮರಾ ತಿರುಗಿಸುತ್ತಿದ್ದರು, ಆತನ ಮೇಲೆ ಮುಗಿಬೀಳುತ್ತಿದ್ದರು, ಆದರೆ ಇಲ್ಲಿ ಪತ್ರಕರ್ತರು ಆತನತ್ತ ಕಿಂಚಿತ್ತೂ ಗಮನಿಸುವುದಿಲ್ಲ,
-ಆತ ಹಾಗೆ ಕೂಗಿದ್ದೇ ಆಗಿದ್ದರೆ ಅಲ್ಲಿ ನೆರೆದಿದ್ದವರು ಖಂಡಿತಾ ಸುಮ್ಮನಿರುತ್ತಿರಲಿಲ್ಲ, ಕೂಡಲೇ ಆ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸುತ್ತಿದ್ದರು.
– ಪತ್ರಕರ್ತರೂ ಸೇರಿದಂತೆ ಅಲ್ಲಿ ನೆರೆದಿದ್ದವರ ಮ್ಯಾನರಿಸಂನಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ,
– ಅಕಸ್ಮಾತ್ ಆ ವ್ಯಕ್ತಿ ಹಾಗೆ ಘೋಷಣೆ ಕೂಗಿದ್ದಿದ್ದರೆ ಅಲ್ಲಿನ ಪತ್ರಕರ್ತರ “ದೇಶಭಕ್ತಿ“ ಜಾಗೃತವಾಗದೆ ಸಹಜವಾಗಿದ್ದಿದ್ದೇಕೆ? ಏನೂ ನಡೆದೇ ಇಲ್ಲ ಎನ್ನುವಂತೆ ನಡೆದುಕೊಂಡಿದ್ದೇಕೆ? ಪತ್ರಕರ್ತ ಸ್ನೇಹಿತರೇ ಉತ್ತರಿಸಬೇಕು.
ಮಾಧ್ಯಮ ಜಾಗೃತವಾಗಲಿ. ಜಾಗೃತ ಮಾಧ್ಯಮ ಜನಕಲ್ಯಾಣಕ್ಕೆ ಕಾರಣವಾಗಲಿ. ಈ ರೀತಿ ಭಜನೆಗಲ್ಲಾ.- ಎಂದಿದ್ದಾರೆ ಪ್ರಿಯಾಂಕ್ ಖರ್ಗೆ. - ಇದರ ಜತೆಗೆ ಪ್ರಿಯಾಂಕ್ ಖರ್ಗೆ ಅವರು ಕೆಲವೊಂದು ಮಾಧ್ಯಮದ ತುಣುಕುಗಳನ್ನು ಟ್ಯಾಗ್ ಮಾಡಿದ್ದಾರೆ.
ದೇಶದಲ್ಲಿ ಬಿಜೆಪಿ ಸವಾಲುಗಳನ್ನು ಎದುರಿಸುವ ಸಂದರ್ಭ ಬಂದಾಗಲೆಲ್ಲ ಈ “ಪಾಕಿಸ್ತಾನ್ ಜಿಂದಾಬಾದ್” ಎನ್ನುವ ಶಬ್ದ ಸದ್ದು ಮಾಡುತ್ತದೆ!
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) February 27, 2024
ಮಾಧ್ಯಮ ಸ್ನೇಹಿತರಲ್ಲಿ ಕೇಳಬೇಕು ಎನಿಸುವ ಒಂದಷ್ಟು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ,
• ವಿಜಯೋತ್ಸವ ಆಚರಣೆಯ ವೇಳೆ ಅಲ್ಲಿ ಉಪಸ್ಥಿತರಿದ್ದ ಒಂದಷ್ಟು ಮಾಧ್ಯಮ ಸ್ನೇಹಿತರು ಅಲ್ಲಿ “ನಾಸಿರ್ ಸಾಬ್… pic.twitter.com/BRDtQKx7dv
ಇದನ್ನೂ ಓದಿ : Sedition Case: ಪಾಕ್ ಪರ ಘೋಷಣೆಗೆ ಆಕ್ರೋಶ; ರಾಜ್ಯದ ವಿವಿಧೆಡೆ ಬಿಜೆಪಿ, ಹಿಂದು ಪರ ಕಾರ್ಯಕರ್ತರ ಪ್ರತಿಭಟನೆ
sedition Case : ಮೊಹಮ್ಮದ್ ಜುಬೇರ್ ಫ್ಯಾಕ್ಟ್ ಚೆಕ್ ಹೇಳೋದೇನು?
ಈ ನಡುವೆ, ವಿವಾದಿತ ಫ್ಯಾಕ್ಟ್ ಚೆಕರ್ ಮೊಹಮ್ಮದ್ ಜುಬೇರ್ ವಿಡಿಯೊದಲ್ಲಿರುವುದು ಪಾಕಿಸ್ತಾನ್ ಜಿಂದಾಬಾದ್ ಅಲ್ಲ, ನಾಸಿರ್ ಜಿಂದಾಬಾದ್ ಎಂದು- ಎಂದಿದ್ದಾರೆ. ಕಾಂಗ್ರೆಸ್ ನಾಯಕರು ಮತ್ತು ಬೆಂಬಲಿಗರು ತಮ್ಮ ವಾದಕ್ಕೆ ಪೂರಕವಾಗಿ ಈ ಟ್ವೀಟನ್ನು ಬಳಸಿಕೊಳ್ಳುತ್ತಿದ್ದಾರೆ.
A video of @NasirHussainINC's supporters saying 'Nasir Saab Zindabad' is reported/shared by several Kannada News Channels with the claim that it is 'Pakistan Zindabad'.
— Mohammed Zubair (@zoo_bear) February 27, 2024
The same is now getting shared by several BJP supporters. pic.twitter.com/vJrCOMG3ZT
ಈ ನಡುವೆ ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದಿರುವ ನಾಸಿರ್ ಹುಸೇನ್ ಅವರು ಕೂಡಾ ಸ್ಪಷ್ಟನೆ ನೀಡಿದ್ದು, ಅಲ್ಲಿ ಯಾರೂ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿಲ್ಲ. ಒಂದು ವೇಳೆ ಕೂಗಿದ್ದೇ ಹೌದಾದರೆ ತನಿಖೆ ನಡೆಸಿ ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದಿದ್ದಾರೆ.