HD Kumaraswamy : ಕಾಂಗ್ರೆಸ್‌ ಸಚಿವರ ಪಾಪದ ದುಡ್ಡಲ್ಲಿ ವಿದೇಶಕ್ಕೆ ಹೋಗಲಾ? ಎಚ್‌ಡಿಕೆ ಗರಂ - Vistara News

ಕರ್ನಾಟಕ

HD Kumaraswamy : ಕಾಂಗ್ರೆಸ್‌ ಸಚಿವರ ಪಾಪದ ದುಡ್ಡಲ್ಲಿ ವಿದೇಶಕ್ಕೆ ಹೋಗಲಾ? ಎಚ್‌ಡಿಕೆ ಗರಂ

HD Kumaraswamy : ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ವಿದೇಶದಲ್ಲಿಯೇ ಇರಲಿ, ಅದಕ್ಕೆ ಬೇಕಾದ ವ್ಯವಸ್ಥೆ ನಾವು ಮಾಡುತ್ತೇವೆ ಎಂದು ಹೇಳಿದ್ದ ಕೃಷಿ ಸಚಿವ ಚಲುವರಾಯಸ್ವಾಮಿ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

VISTARANEWS.COM


on

HD Kumaraswamy infront of vidhanasoudha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇಲ್ಲಿ ಲೂಟಿ ಹೊಡೆಯೋಕೆ ನಮ್ಮನ್ನು ಬಿಟ್ಟುಬಿಡಿ, ನೀವು ವಿದೇಶದಲ್ಲಿ ಇರಿ ಅಂತ ಕೆಲವು ಸಚಿವರು ಸಲಹೆ ಕೊಟ್ಟಿದ್ದಾರೆ. ಅದನ್ನು ಪಾಲಿಸಬೇಕಲ್ಲ. ಯಾಕೆಂದರೆ ಇಲ್ಲಿ ದರೋಡೆ ಮಾಡಿಕೊಂಡು ಕುಳಿತಿದ್ದಾರಲ್ಲ ಮಾನ ಮಾರ್ಯಾದೆ ಇಲ್ಲದೆ. ಇಂಥವರಿಂದ ವ್ಯವಸ್ಥೆ ಮಾಡಿಕೊಂಡು ನಾನು ವಿದೇಶಕ್ಕೆ ಹೋಗಬೇಕಾ? ಆ ಪಾಪದ ಹಣ ತಗೊಂಡು ಹೋಗಬೇಕಾ? ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ಅವರು ಕಾಂಗ್ರೆಸ್‌ ಸರ್ಕಾರ (Congress Government) ಹಾಗೂ ಸಚಿವರ ವಿರುದ್ಧ ಗುಡುಗಿದ್ದಾರೆ. ರಾಜ್ಯ ರಾಜಕೀಯದಲ್ಲಿ (Karnataka Politics) ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಕಿಡಿಕಾರಿದ್ದಾರೆ.

ಕುಮಾರಸ್ವಾಮಿ ವಿದೇಶದಲ್ಲಿಯೇ ಇರಲಿ, ಅದಕ್ಕೆ ಬೇಕಾದ ವ್ಯವಸ್ಥೆ ನಾವು ಮಾಡುತ್ತೇವೆ ಎಂದು ಹೇಳಿದ್ದ ಕೃಷಿ ಸಚಿವ ಚಲುವರಾಯಸ್ವಾಮಿ (Agriculture Minister Chaluvarayaswamy) ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: Actor Upendra: ಜಾತಿನಿಂದನೆ ಕೇಸ್; ವಿಚಾರಣೆಗೆ ಹಾಜರಾಗದೆ ನಟ ಉಪೇಂದ್ರ ಎಸ್ಕೇಪ್‌, ಫೋನ್‌ ಸ್ವಿಚ್ಡ್‌ ಆಫ್!

ಕಾಂಬೋಡಿಯಾ ಹೊಗಳಿದ ಎಚ್‌ಡಿಕೆ

ವಿದೇಶಿ ಪ್ರವಾಸಕ್ಕೆ (Foreign Trip) ನಾನು ಅವರಿಂದ ವ್ಯವಸ್ಥೆ ಮಾಡಿಸಿಕೊಂಡು ಹೋಗಬೇಕಾ? ಆ ಪಾಪದ ಹಣ ತಗೊಂಡು ಹೋಗಬೇಕಾ? ವಿದೇಶಕ್ಕೆ ಹೋಗುವ ಯೋಗ್ಯತೆಯೂ ನನಗಿಲ್ಲವೇ? ಕಳೆದ 12 ವರ್ಷದಿಂದ ಪಕ್ಷದ ಸಂಘಟನೆಗೆ ಸಮಯ ಮೀಸಲಿಟ್ಟಿದ್ದೆ. ಎಲ್ಲೂ ಹೊರಗೆ ಹೋಗಿ ಬರುವ ಅವಕಾಶ ಸಿಕ್ಕಿರಲಿಲ್ಲ. ದೇಶ ಸುತ್ತು, ಕೋಶ ಓದು ಎಂದು ಹಿರಿಯರ ಮಾತಿದೆ. ಯಾವ ದೇಶದಲ್ಲಿ ಏನೇನಿದೆ ಎಂಬುದನ್ನು ತಿಳಿದುಕೊಳ್ಳಬೇಕಲ್ಲ? ಅಲ್ಲಿ ಯಾವ ರೀತಿ ಇದೆ? ನಮ್ಮಲ್ಲಿ ಯಾವ ರೀತಿ ಇದೆ ನೋಡಬೇಕಲ್ಲ. ಕಾಂಬೋಡಿಯಾಗೆ (Cambodia Tour) ಸ್ನೇಹಿತರ ಆಹ್ವಾನ ಇತ್ತು, ಹೋಗಿದ್ದೆ. ಅಲ್ಲಿನ ವಿಶಾಲ ಪ್ರದೇಶದಲ್ಲಿ ಕಟ್ಟಿರುವ ಅದ್ಭುತವಾದ ದೇವಸ್ಥಾನ ಇದೆ. ನಮ್ಮ ದೇಶದಲ್ಲೂ ಅಂತ ದೇವಸ್ಥಾನ ಇಲ್ಲ. ಬ್ರಹ್ಮ, ವಿಷ್ಣು, ಮಹೇಶ್ವರ ತ್ರಿಮೂರ್ತಿಗಳು ಇರುವ ದೇವಸ್ಥಾನ (Brahma, Vishnu, Maheshwara Temple) ಅದಾಗಿದ್ದು, ಅದನ್ನು ಕಂಡು ನಾನು ವಿಸ್ಮಿತನಾದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಇತ್ತೀಚೆಗೆ ಆ ದೇಶ ಆರ್ಥಿಕವಾಗಿ ವೇಗವಾಗಿ ಬೆಳೆಯುತ್ತಿದೆ. ಒಂದು ಕಾಲದಲ್ಲಿ ಭಾರಿ ಸಂಕಷ್ಟದಲ್ಲಿದ್ದ ಆ ದೇಶ ಈಗ ತುಂಬ ಅದ್ಭುತವಾಗಿ ಬೆಳೆಯುತ್ತಿದೆ. ಕಾಂಬೋಡಿಯಾದ ಜಿಡಿಪಿ (Cambodia GDP) ಶೇ. 7.7ರಷ್ಟಿದೆ ಎಂದು ಅಲ್ಲಿನ ಮಂತ್ರಿಗಳೊಬ್ಬರು ಹೇಳಿದರು. ಸಾರ್ವಜನಿಕರ ಹಣದ ವಿನಿಯೋಗದ ಬಗ್ಗೆ ಅಲ್ಲಿ ಕಠಿಣ ನಿಯಮಗಳಿವೆ. ಆದರೆ, ನಮ್ಮಲ್ಲಿ ಹಣಕ್ಕೆ ಕೊರತೆ ಇಲ್ಲ, ಈಗ ಲೂಟಿ ಮಾಡ್ತಾ ಇದ್ದಾರೆ ಇವರು ಎಂದು ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಈಗ ಮಧ್ಯಪ್ರದೇಶದಲ್ಲಿಯೂ 40% ಸರ್ಕಾರ ಅಂತಾ ಹೇಳಿ ಪೋಸ್ಟರ್ ಹಾಕಿಕೊಂಡಿದ್ದಾರೆ. ಈ ದೇಶವನ್ನು ಇವರು ಎಲ್ಲಿಗೆ ತಗೊಂಡು ಹೋಗುತ್ತಿದ್ದಾರೆ? ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ರಾಜ್ಯಪಾಲರ ಬಳಿ ಏಕೆ ಹೋದರು?

ಕೃಷಿ ಅಧಿಕಾರಿಗಳು ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಬರೆದಿದ್ದಾರೆನ್ನಲಾದ ಪತ್ರದ ಬಗ್ಗೆ ಪ್ರತಿಕ್ರಿಯೆ ನೀಡಿದ ಎಚ್.ಡಿ. ಕುಮಾರಸ್ವಾಮಿ, ತಮ್ಮ ವಿರುದ್ಧ ಬರೆದಿರುವ ಪತ್ರ ನಕಲಿ ಎನ್ನುವುದಾದರೆ ಕೃಷಿ ಸಚಿವರು ರಾಜ್ಯಪಾಲರ ಬಳಿಗೆ ಏಕೆ ಹೋದರು? ಎಂದು ಪ್ರಶ್ನಿಸಿದರು.

ನಾನು ಆ ಪ್ರಕರಣದ ಬಗ್ಗೆ ಚರ್ಚೆಯನ್ನೇ ಮಾಡಿಲ್ಲ. ಎಲ್ಲೂ ಆ ಬಗ್ಗೆ ಮಾತನಾಡಿಲ್ಲ. ನನ್ನ ಹೆಸರು ಯಾಕೆ ತಳುಕು ಹಾಕುತ್ತಿದ್ದಾರೆ ಅಲ್ಲಿ? ಅವರಿಗೆ ಅಲ್ಲೂ ನನ್ನ ಹೆಸರೇ ಬೇಕಾ? ಏಕೆಂದರೆ ನನ್ನದೇ ಭಯ ಇರೋದು ಅವರಿಗೆ ಎಂದು ಎಚ್.ಡಿ. ಕುಮಾರಸ್ವಾಮಿ ಕುಟುಕಿದರು.

ಇದನ್ನೂ ಓದಿ: ದೇವಸ್ಥಾನದಲ್ಲಿ ದಲಿತರೆಡೆಗೆ ಪ್ರಸಾದ ಎಸೆದು, ಜಾತಿ ನಿಂದನೆ; ಬಿದ್ದ ತಿನಿಸು ಹೆಕ್ಕಲು ಓಡಿದ ಮಕ್ಕಳು

ಮೊದಲು ಪ್ರಾಮಾಣಿಕವಾಗಿ ನಡೆದುಕೊಳ್ಳುವುದನ್ನು ಕಲಿಯಬೇಕು. ಪ್ರಾಮಾಣಿಕವಾಗಿ ನಡೆದುಕೊಂಡರೆ ಇಂತಹ ಪರಿಸ್ಥಿತಿ ಏನಕ್ಕೆ ಬರುತ್ತದೆ? ಮಂತ್ರಿಗಿರಿ ಸಿಕ್ಕಿದೆ ಅಂತಾ ಹಗಲು ದರೋಡೆ ಮಾಡೋದಲ್ಲ. ಒಳ್ಳೆಯ ಕೆಲಸ ಮಾಡಲಿ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಮಾಜಿ ಸಚಿವ ಸಾ.ರಾ.ಮಹೇಶ್, ಮಾಜಿ ಶಾಸಕ ಮಂಜುನಾಥ್ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್‌ ರೇವಣ್ಣ ಆಗಮನಕ್ಕೆ ಕೌಂಟ್‌ಡೌನ್‌, ವಿಮಾನ ಏರ್ತಾರಾ ಇಲ್ವಾ?

Prajwal Revanna Case: ಫ್ಲೈಟ್ ಟಿಕೆಟ್ ಬುಕ್‌ ಮಾಡಿರುವ ಆಧಾರದಂತೆ ಇಂದು ಮಧ್ಯರಾತ್ರಿ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಆಗಮಿಸಲಿದ್ದಾರೆ. ಮಧ್ಯರಾತ್ರಿ 12.35ಕ್ಕೆ ಟರ್ಮಿನಲ್ 2ಗೆ ಆಗಮಿಸಲಿರುವ ಪ್ರಜ್ವಲ್ ಅನ್ನು ʼಸ್ವಾಗತಿಸಲುʼ ಟರ್ಮಿನಲ್ 2ನಲ್ಲಿ ಎಸ್ಐಟಿ ತಂಡ ಬೀಡು ಬಿಟ್ಟಿದೆ. ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್ ವಿಮಾನ ಹತ್ತಿದ್ದಾರೆಯೇ ಇಲ್ಲವೇ ಎಂಬುದು ಖಚಿತವಾಗಲಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ನಾಳೆ ಎಸ್ಐಟಿ (SIT) ಎದುರು ಹಾಜರಾಗುವುದಾಗಿ ಪ್ರಜ್ವಲ್ ರೇವಣ್ಣ (Prajwal Revanna Case) ಬಿಡುಗಡೆ ಮಾಡಿದ ವಿಡಿಯೋದಲ್ಲಿ (pen drive case) ಹೇಳಿರುವ ಹಾಗೂ ಇಂದು ಮಧ್ಯಾಹ್ನ ಜರ್ಮನಿಯ ಮ್ಯೂನಿಚ್‌ನಿಂದ ಪ್ರಜ್ವಲ್ ರೇವಣ್ಣ ಹೆಸರಲ್ಲಿ ಫ್ಲೈಟ್ ಟಿಕೆಟ್ ಬುಕ್ ಮಾಡಿರುವ ಹಿನ್ನೆಲೆಯಲ್ಲಿ, ಹಾಸನ ಸಂಸದರ (Hassan MP) ಬಂಧನಕ್ಕೆ ಪೊಲೀಸರು ಕ್ಷಣಗಣನೆ ಆರಂಭಿಸಿದ್ದಾರೆ.

ಫ್ಲೈಟ್ ಟಿಕೆಟ್ ಬುಕ್‌ ಮಾಡಿರುವ ಆಧಾರದಂತೆ ಇಂದು ಮಧ್ಯರಾತ್ರಿ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಆಗಮಿಸಲಿದ್ದಾರೆ. ಮಧ್ಯರಾತ್ರಿ 12.35ಕ್ಕೆ ಟರ್ಮಿನಲ್ 2ಗೆ ಆಗಮಿಸಲಿರುವ ಪ್ರಜ್ವಲ್ ಅನ್ನು ʼಸ್ವಾಗತಿಸಲುʼ ಟರ್ಮಿನಲ್ 2ನಲ್ಲಿ ಎಸ್ಐಟಿ ತಂಡ ಬೀಡು ಬಿಟ್ಟಿದೆ. ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್ ವಿಮಾನ ಹತ್ತಿದ್ದಾರೆಯೇ ಇಲ್ಲವೇ ಎಂಬುದು ಖಚಿತವಾಗಲಿದೆ.

ಪ್ರಜ್ವಲ್ ವಿಡಿಯೋ ಮಾಡಿ ಕಳಿಸಿರುವುದು ಎಲ್ಲಿಂದ ಎಂಬುದನ್ನು ನಿನ್ನೆಯೇ ಎಸ್‌ಐಟಿ ಪತ್ತೆ ಹಚ್ಚಿದೆ. ಯುರೋಪ್‌ನ ಹಂಗೇರಿನಿಂದ ಈ ವಿಡಿಐೋ ಬಿಡುಗಡೆಯಾಗಿದೆ. ಅಲ್ಲಿಂದ ಮ್ಯೂನಿಚ್‌ಗೆ ಬಂದು ಪ್ರಜ್ವಲ್‌ ವಿಮಾನ ಹಿಡಿಯಬೇಕಿದೆ. ಹಂಗೇರಿ, ಬುಡಾಪೆಸ್ಟ್‌, ಜರ್ಮನಿ ಎಂದು ಕಳೆದ ಒಂದು ತಿಂಗಳಿನಿಂದ ಪ್ರಜ್ವಲ್‌ ಓಡಾಡುತ್ತಿದ್ದಾರೆ. ಅವರು ಇಲ್ಲೆಲ್ಲಾ ತಮ್ಮ ಗೆಳೆಯರ ಆಶ್ರಯ ಪಡೆದಿದ್ದರೇ, ಎಲ್ಲಿ ತಂಗಿದ್ದರು ಎಂಬ ಮಾಹಿತಿ ದೊರೆಯಬೇಕಿದೆ.

ಇನ್ನೊಂದೆಡೆ, ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ರೊಚ್ಚಿಗೆದ್ದಿರುವ ಮಹಿಳಾ ಸಂಘಟನೆಗಳು, ಕೆಂಪೇಗೌಡ ವಿಮಾನ ನಿಲ್ದಾಣದ ಮುಂದೆ ಪ್ರತಿಭಟನೆಗೆ ಇಳಿಯಲು ಸಿದ್ಧತೆ ನಡೆಸಿವೆ. ಹಾಸನದಲ್ಲಿ ಇಂದು ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ನೂರಕ್ಕೂ ಹೆಚ್ಚು ಸಂಘಟನೆಗಳಿಂದ ಬೃಹತ್‌ ಪ್ರತಿಭಟನೆ ನಡೆಯುತ್ತಿದೆ. ಜಿಲ್ಲೆಯ ವಿವಿಧ ಭಾಗಗಳಿಂದ 10 ಸಾವಿರಕ್ಕೂ ಹೆಚ್ಚು ಹೋರಾಟಗಾರರು ಆಗಮಿಸುವ ಸಾಧ್ಯತೆ ಇದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಸನದಲ್ಲಿ ಪೊಲೀಸ್ ಬಿಗಿ ಭದ್ರತೆ ಹಾಕಲಾಗಿದೆ.

ನಿಜಕ್ಕೂ ವಾಪಸಾಗ್ತಾರಾ ಪ್ರಜ್ವಲ್?‌

ಪ್ರಜ್ವಲ್ ರೇವಣ್ಣ ಕುಟುಂಬ ಸಲ್ಲಿಸಿದ ಜಾಮೀನು ಅರ್ಜಿಗಳೆಲ್ಲವೂ ಕೂಡ ನ್ಯಾಯಾಲಯದಲ್ಲಿ ಇತ್ಯರ್ಥವಾಗದೆ ಮುಂದೂಡಿಕೆ ಆಗುತ್ತಲೇ ಇವೆ. ಹೀಗಾಗಿ ಪ್ರತಿ ದಿನ ರೇವಣ್ಣ ಕುಟುಂಬ ಟೆನ್ಷನ್‌ನಲ್ಲಿರಬೇಕಾಗಿದೆ. ನಿನ್ನೆ ನಡೆದ ಭವಾನಿ ರೇವಣ್ಣ ಅವರ ಸುದೀರ್ಘ ವಿಚಾರಣೆ ಬಳಿಕವೂ ವಿಚಾರಣೆಯನ್ನು ಮುಂದೂಡಲಾಗಿದೆ. ಈ ಬೆಳವಣಿಗಯಿಂದ ಪ್ರಜ್ವಲ್ ವಾಪಾಸಾಗ್ತಾರಾ ಎಂಬುದೇ ಅನುಮಾನಕ್ಕೀಡು ಮಾಡಿದೆ.‌

ಪ್ರಜ್ವಲ್ ಬರುತ್ತಿದ್ದಂತೆ SIT ಅಧಿಕಾರಿಗಳು ಪ್ರಜ್ವಲ್‌ರನ್ನು ಬಂಧಿಸಲು ಸಿದ್ಧರಾಗಿದ್ದಾರೆ. ಅದಕ್ಕೂ ಮುನ್ನ ಹೈ ಅಲಟ್೯ ಆದ ಪ್ರಜ್ವಲ್ ರೇವಣ್ಣ, ಇದೇ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇದಕ್ಕೆ ಅವಕಾಶ ನೀಡದ ನ್ಯಾಯಾಲಯ, ಮೊದಲು ಅವರು ಬರಲಿ ಆಮೇಲೆ ನೋಡೋಣ, ಮೇ 31ಕ್ಕೆ ಅರ್ಜಿ ವಿಚಾರಣೆ ಮಾಡೋಣ ಅಂತ ಹೇಳಿ SIT ಅಧಿಕಾರಿಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದ್ದಾರೆ. ಸದ್ಯ 3 ಪ್ರಕರಣಗಳಲ್ಲೂ ನಿರೀಕ್ಷಣಾ ಜಾಮೀನಿಗೆ ಪ್ರಜ್ವಲ್‌ ಅರ್ಜಿ ಸಲ್ಲಿಸಿದ್ದಾರೆ. ಸಿಐಡಿ ಪೊಲೀಸ್ ಠಾಣೆ, ಸೈಬರ್ ಕ್ರೈಂ ಠಾಣೆ, ಹೊಳೆನರಸೀಪುರ ಠಾಣೆಗಳಲ್ಲಿ ಕೇಸ್‌ ದಾಖಲಾಗಿವೆ.

ಮೈಸೂರಿನ ಕೆ.ಆರ್. ನಗರ ಠಾಣೆಯ ಸಂತ್ರಸ್ತ ಮಹಿಳೆಯ ಕಿಡ್ನಾಪ್ ಕೇಸ್ ವಿಚಾರದಲ್ಲಿ ಭವಾನಿ ರೇವಣ್ಣಗೆ ಬಂಧನದ ಭೀತಿ ಶುರುವಾಗಿದೆ. ಇದೇ ವಿಚಾರಕ್ಕೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದು, SIT ಕೂಡಾ ಆಕ್ಷೇಪಣಾ ಅರ್ಜಿ ಸಲ್ಲಿಸಿ ಯಾವುದೇ ಕಾರಣಕ್ಕೂ ಭವಾನಿ ರೇವಣ್ಣಗೆ ಜಾಮೀನು ಮಂಜೂರು ಮಾಡಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿದೆ. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ವಿಚಾರದ ಆದೇಶವನ್ನು ಮೇ 31ಕ್ಕೆ ಮುಂದೂಡಿದ್ದಾರೆ.

ತನಿಖೆಗೆ ಸಹಕರಿಸುವುದಾಗಿ ಪ್ರಜ್ವಲ್‌ ಹೇಳಿದ್ದಾರೆ. ಆದರೆ ನಿರೀಕ್ಷಣಾ ಜಾಮೀನು ಸಿಗದ ಹಿನ್ನೆಲೆಯಲ್ಲಿ, ಬಂಧನ ತಪ್ಪಿಸಿಕೊಳ್ಳಲು ಅಲ್ಲೇ ಉಳಿಯುವ ಚಿಂತನೆ ಮಾಡುವ ಸಾಧ್ಯತೆಯೂ ಇದೆ. ಕಳೆದ ಬಾರಿಯೂ SIT ವಿಚಾರಣೆಗೆ ಬರಲು ಪ್ರಜ್ವಲ್‌ ಒಂದು ವಾರ ಕಾಲಾವಕಾಶ ಕೇಳಿದ್ದರು. ಆದರೆ ಒಂದು ತಿಂಗಳ ನಂತರವೂ SIT ವಿಚಾರಣೆಗೆ ಬಂದಿಲ್ಲ.

ಇದನ್ನೂ ಓದಿ: Prajwal Revanna Case: ಬೆಂಗಳೂರಿಗೆ ಪ್ರಜ್ವಲ್‌ ರೇವಣ್ಣ ಟಿಕೆಟ್ ಬುಕ್; ನಾಳೆ ಮಧ್ಯಾಹ್ನ ಜರ್ಮನಿಯಿಂದ ಪ್ರಯಾಣ

Continue Reading

ಕ್ರೈಂ

Veer Savarkar: ವೀರ ಸಾವರ್ಕರ್‌ ಅವಹೇಳನ ಮಾಡಿದ ಆರೋಪಿ ಹುಸೇನಸಾಬ ಬಂಧನ

Veer Savarkar: ಕುಷ್ಟಗಿ ತಾಲೂಕಿನ ದೋಟಿಹಾಳದ ಹುಸೇನಸಾಬ ಕೊಳ್ಳಿ ಎಂಬಾತನ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಈತ ಫೇಸ್‌ಬುಕ್ ಖಾತೆಯಲ್ಲಿ, ಸಾವರ್ಕರ್‌ ಫೋಟೋ ಹಾಕಿ, “ಸಾವರ್ಕರ್ ದೇಶದ ಮೊದಲ ಟೆರರಿಸ್ಟ್” ಎಂದು ಬರೆದಿದ್ದ. ʼರಣಹೇಡಿ ಸಾವರ್ಕರ್‌ʼ ಎಂದೂ ಬರೆದಿದ್ದಾನೆ.

VISTARANEWS.COM


on

veer savarkar derogatory post
Koo

ಕೊಪ್ಪಳ: ಸಾಮಾಜಿಕ ಜಾಲತಾಣದಲ್ಲಿ (Social media) ವೀರ ಸಾವರ್ಕರ್‌ (Veer Savarkar) ವಿರುದ್ಧ ಅವಹೇಳನಕಾರಿ ಪೋಸ್ಟ್ (Derogatory post) ಹಾಕಿದ ಹಿನ್ನೆಲೆಯಲ್ಲಿ ಹುಸೇನಸಾಬ ಕೊಳ್ಳಿ ಎಂಬಾತನನ್ನು ಬಂಧಿಸಲಾಗಿದೆ. ಈತ ಕೊಪ್ಪಳದವನಾಗಿದ್ದು, ಕೊಪ್ಪಳ (Koppala news) ಜಿಲ್ಲೆ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಷ್ಟಗಿ ತಾಲೂಕಿನ ದೋಟಿಹಾಳದ ಹುಸೇನಸಾಬ ಕೊಳ್ಳಿ ಎಂಬಾತನ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಈತ ಫೇಸ್‌ಬುಕ್ ಖಾತೆಯಲ್ಲಿ, ಸಾವರ್ಕರ್‌ ಫೋಟೋ ಹಾಕಿ, “ಸಾವರ್ಕರ್ ದೇಶದ ಮೊದಲ ಟೆರರಿಸ್ಟ್” ಎಂದು ಬರೆದಿದ್ದ. ʼರಣಹೇಡಿ ಸಾವರ್ಕರ್‌ʼ ಎಂದೂ ಬರೆದಿದ್ದಾನೆ.

ಈತ ತನ್ನ ಎಫ್‌ಬಿ ಖಾತೆಯ ಹೆಸರನ್ನು ʼಟಿಪ್ಪು ಟಿಪ್ಪುʼ ಎಂದು ಇಟ್ಟುಕೊಂಡಿದ್ದಾನೆ. ಹಲವು ಕೋಮು ಭಾವನೆ ಕೆರಳಿಸುವ ಪೋಸ್ಟ್‌ಗಳನ್ನು ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಕೋಮು ಸೂಕ್ಷ್ಮ ಪ್ರದೇಶವಾಗಿರುವ ದೋಟಿಹಾಳದಲ್ಲಿ ಕೋಮುಭಾವನೆ ಕೆರಳಿಸುವ ದುರುದ್ದೇಶದಿಂದ ಇದರ ಹಿಂದಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ಪ್ರಶ್ನಿಸಲಾಗುತ್ತಿದೆ.

ಬೆಳ್ಳೂರು ಪ್ರಕರಣದಲ್ಲಿ ದೂರು ದಾಖಲಿಸದ ಪಿಎಸ್‌ಐ ಸಸ್ಪೆಂಡ್

ಮಂಡ್ಯ: ಮಂಡ್ಯ ಜಿಲ್ಲೆಯ (Mandya news) ಬೆಳ್ಳೂರು (Belluru Assault case) ಪಟ್ಟಣದಲ್ಲಿ ಹಿಂದೂ ಯುವಕನ (Hindu youth) ಮೇಲೆ ಅನ್ಯ ಕೋಮಿನ ಪುಂಡರು ಹಲ್ಲೆ ನಡೆಸಿದ ಪ್ರಕರಣದಲ್ಲಿ ದೂರು ಸ್ವೀಕರಿಸಲು ನಿರಾಕರಿಸಿದ್ದ ಪಿಎಸ್‌ಐ ಅನ್ನು ಅಮಾನತು (Suspend) ಮಾಡಲಾಗಿದೆ. ಕರ್ತವ್ಯ ಲೋಪ ಕಾರಣ ನೀಡಿ ಬೆಳ್ಳೂರು ಠಾಣೆ ಪಿಎಸ್‌ಐ ಬಸವರಾಜ ಚಿಂಚೋಳಿ ಅವರನ್ನು ಅಮಾನತು ಮಾಡಿ ಮಂಡ್ಯ ಎಸ್‌ಪಿ ಎನ್. ಯತೀಶ್ ಆದೇಶ ಹೊರಡಿಸಿದ್ದಾರೆ.

ಬೆಳ್ಳೂರು ಗ್ರಾಮಸ್ಥರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟಿಸಿದ್ದರು. ಕಡೆಗೆ ಪ್ರಕರಣದ ಗಂಭೀರತೆ ಅರಿತು ಪೊಲೀಸರು ದೂರು ಪಡೆದಿದ್ದರು. ಘಟನೆ ಸಂಬಂಧ 3 ಪ್ರತ್ಯೇಕ ದೂರು ದಾಖಲಾಗಿತ್ತು. ಈ ಹಿಂದೆ ದೂರು ಸ್ವೀಕರಿಸದ ಪಿಎಸ್‌ಐ ವಿರುದ್ಧವೂ ಕಂಪ್ಲೆಂಟ್ ದಾಖಲಾಗಿದೆ. ದೂರಿನ ಬೆನ್ನಲ್ಲೇ ಪಿಎಸ್‌ಐ ಅಮಾನತು ಮಾಡಿ ಎಸ್‌ಪಿ ಯತೀಶ್ ಆದೇಶ ನೀಡಿದ್ದಾರೆ.

ಹಲ್ಲೆ ಪ್ರಕರಣ ಸಂಬಂಧ 11ಕ್ಕೂ ಹೆಚ್ಚು ಆರೋಪಿಗಳ ಮೇಲೆ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಅಭಿಲಾಷ್ ತಂದೆ ರಾಮು ನೀಡಿದ ದೂರಿನ ಅನ್ವಯ ಎಫ್‌ಐಆರ್‌ ದಾಖಲಾಗಿದೆ. ನವೀದ್, ಸೂಫಿಯಾನ್, ಇಮ್ರಾನ್, ಸಮೀರ್, ಮುದಾಸೀರ್ ಸೇರಿ 11ಕ್ಕೂ ಹೆಚ್ಚು ಮಂದಿ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 341, 307, 504, 506 ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.‌

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ಸೋಮವಾರ (ಮೇ 27) ಸಂಜೆ ಅಭಿಲಾಷ್​ ಎಂಬ ಯುವಕನ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ್ದರು. ಅತಿ ವೇಗದಲ್ಲಿ ಕಾರು ಚಾಲನೆ ಮಾಡಿದ್ದನ್ನು ಪ್ರಶ್ನಿಸಿದ್ದ ಅಭಿಲಾಷ್​ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ಮಾಡಿತ್ತು. ಘಟನೆ ಬಳಿಕ ಬೆಳ್ಳೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಗಂಭೀರವಾಗಿ ಪೆಟ್ಟು ತಿಂದಿರುವ ಅಭಿಲಾಷ್​ ಅವರನ್ನು ಬೆಳ್ಳೂರಿನ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಳೆದ ಶುಕ್ರವಾರ ಮುಸ್ಲಿಂ ಯುವಕರ ಗುಂಪು ಬೆಳ್ಳೂರಿನ ಸಂತೆ ಬೀದಿಯಲ್ಲಿ ಅತಿ ವೇಗದಲ್ಲಿ ಪಟ್ಟಣದೊಳಗೆ ಕಾರು ಓಡಿಸಿಕೊಂಡು ಹೋಗಿದೆ. ಅಪಾಯಕಾರಿ ರೀತಿಯಲ್ಲಿ ವಾಹನ ಓಡಿಸಿದ್ದನ್ನು ಹಲ್ಲೆಗೆ ಒಳಗಾಗಿರುವ ಅಭಿಲಾಷ್ ಹಾಗೂ ಅವರ ಜತೆಗಾರ ನಾಗೇಶ್​ ಎಂಬುವರು ಪ್ರಶ್ನಿಸಿದ್ದರು. ಮಿತಿ ಮೀರಿದ ವೇಗದಲ್ಲಿ ಕಾರು ಓಡಿಸದಂತೆ ಆ ಗುಂಪಿಗೆ ಬುದ್ಧಿವಾದ ಹೇಳಿದ್ದರು. ಈ ವೇಳೆ ಸಣ್ಣ ಮಟ್ಟಿನ ಮಾತಿನ ಚಕಮಕಿ ನಡೆದಿತ್ತು. ಅದೇ ದ್ವೇಷವನ್ನು ಇಟ್ಟುಕೊಂಡಿದ್ದ ಮುಸ್ಲಿಂ ಯುವಕರ ಗುಂಪಿ ಇನ್ನಷ್ಟು ದೊಡ್ಡ ಗುಂಪನ್ನು ಕಟ್ಟಿಕೊಂಡು ಬಂದು ಸೋಮವಾರ ಸಂಜೆ ಹಲ್ಲೆ ಮಾಡಿದ್ದರು.

ದೊಡ್ಡ ಗುಂಪು ಹಲ್ಲೆ ಮಾಡಿದ್ದ ಅಭಿಲಾಷ್​ ಅವರಿಗೆ ಗಂಭೀರ ಗಾಯಗಳಾಗಿವೆ ಎಂದು ಅವರ ಆಪ್ತರು ಹೇಳಿದ್ದಾರೆ. ತಕ್ಷಣ ಸ್ಥಳೀಯರು ಅವರನ್ನು ಏಮ್ಸ್​ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಸುದ್ದಿಯಾದ ಬಳಿಕ ಬೆಳ್ಳೂರು ಪಟ್ಟಣದಲ್ಲಿ ಆತಂಕ ಮನೆ ಮಾಡಿತ್ತು. ಗಲಾಟೆ ಸಂಭವಿಸುವ ಸಾಧ್ಯತೆಗಳನ್ನು ಮನಗಂಡಿರುವ ಪೊಲೀಸರು ಬೆಳ್ಳೂರು ಪಟ್ಟಣ ಹಾಗೂ ಬಿಜಿಎಸ್ ಆಸ್ಪತ್ರೆಗೆ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಿದ್ದಾರೆ.

ಇದನ್ನೂ ಓದಿ | Physical Abuse: 7ನೇ ಕ್ಲಾಸ್‌ ಹುಡುಗಿ 3 ತಿಂಗಳ ಗರ್ಭಿಣಿ! ಅತ್ಯಾಚಾರವೆಸಗಿದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಅರೆಸ್ಟ್‌

Continue Reading

ಕರ್ನಾಟಕ

Mantralaya: ಬೇಸಿಗೆ ರಜೆ ಎಫೆಕ್ಟ್;‌ ಮಂತ್ರಾಲಯದಲ್ಲಿ ಈ ಬಾರಿಯ ಕಾಣಿಕೆ ಸಂಗ್ರಹ ನೋಡಿ

ಈ ಬಾರಿ ಬೇಸಿಗೆ ರಜೆ (Summer holidays) ಇದ್ದುದರಿಂದ ಮಂತ್ರಾಲಯದ (Mantralaya) ಶ್ರೀ ಗುರು ರಾಘವೇಂದ್ರರ ಮಠಕ್ಕೆ ಭೇಟಿ ನೀಡಿದ ಜನರ ಸಂಖ್ಯೆ ಹೆಚ್ಚಿದೆ. ಹಾಗೆಯೇ ಕಾಣಿಕೆಯ ಸಂಗ್ರಹವೂ ಅಧಿಕವಾಗಿರುವುದು ಕಂಡುಬಂದಿದೆ.

VISTARANEWS.COM


on

mantralaya 1
Koo

ರಾಯಚೂರು: ಮಂತ್ರಾಲಯದ (Mantralaya) ಶ್ರೀ ಗುರು ರಾಘವೇಂದ್ರರ ಮಠದಲ್ಲಿ (Sri Guru Raghavendra Mutt Mantralayam) ನಿನ್ನೆ ಹುಂಡಿ (Hundi) ಎಣಿಕೆ ಕಾರ್ಯ ನಡೆಯಿತು. 29 ದಿನಗಳಲ್ಲಿ 2 ಕೋಟಿ 93 ಲಕ್ಷ ರೂಪಾಯಿ ಕಾಣಿಕೆ ಸಂಗ್ರಹವಾಗಿರುವುದು ಕಂಡುಬಂದಿದೆ.

100ಕ್ಕೂ ಹೆಚ್ಚು ಮಠದ ಸಿಬ್ಬಂದಿಗಳು ಮತ್ತು ಭಕ್ತರಿಂದ ಹುಂಡಿ ಎಣಿಕೆ ನಡೆಯಿತು. ಮೇ ತಿಂಗಳಲ್ಲಿ ಹುಂಡಿಯಲ್ಲಿ ಹಾಕಿರುವ ರಾಯರ ಭಕ್ತರ ಕಾಣಿಕೆ ಇದಾಗಿದ್ದು, ದೊಡ್ಡ ಹಾಗೂ ಸಣ್ಣ ಮೌಲ್ಯದ ಕರೆನ್ಸಿ ನೋಟುಗಳ ಜೊತೆಗೆ 136 ಗ್ರಾಂ ಬಂಗಾರ, 1510 ಗ್ರಾಂ ಬೆಳ್ಳಿ ಕೂಡ ಭಕ್ತರಿಂದ ಕಾಣಿಕೆಯಾಗಿ ಬಂದಿದೆ. ಮಂತ್ರಾಲಯದ ಪೀಠಾಧಿಪತಿ ಶ್ರೀ ಡಾ. ಸುಬುದೇಂದ್ರ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು. ಮಠದ ಲೆಕ್ಕಾಧಿಕಾರಿಗಳು, ಆಡಳಿತಗಾರರು ಉಪಸ್ಥಿತರಿದ್ದರು.

ಈ ಬಾರಿ ಬೇಸಿಗೆ ರಜೆ (Summer holidays) ಇದ್ದುದರಿಂದ ಮಂತ್ರಾಲಯಕ್ಕೆ ಭೇಟಿ ನೀಡಿದ ಜನರ ಸಂಖ್ಯೆ ಹೆಚ್ಚಿದೆ. ಹಾಗೆಯೇ ಕಾಣಿಕೆಯ ಸಂಗ್ರಹವೂ ಅಧಿಕವಾಗಿರುವುದು ಕಂಡುಬಂದಿದೆ.

ಕಲಿಯುಗದ ಕಾಮಧೇನು ಎಂದು ಭಕ್ತರಿಂದ ಕೀರ್ತಿಸಿಕೊಳ್ಳುವ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆ ಕರ್ನಾಟಕದ ವಿವಿಧ ಕಡೆಗಳಿಂದ ಮಾತ್ರವಲ್ಲದೆ ಸುತ್ತಮುತ್ತಲಿನ ರಾಜ್ಯಗಳಿಂದಲೂ ಭಕ್ತಾದಿಗಳು ಆಗಮಿಸುತ್ತಾರೆ. ತುಂಗಭದ್ರಾ ನದಿ ತೀರದಲ್ಲಿ ನಿಂತಿರುವ ರಾಯರ ಸನ್ನಿಧಾನಕ್ಕೆ ನಿತ್ಯ ಸಾವಿರಾರು ಜನ ಭಕ್ತರು ಭೇಟಿ ನೀಡುತ್ತಾರೆ. ಬೇಸಿಗೆ ರಜೆ ಮುಗಿಯುವ ಮುನ್ನವೇ ಮಂತ್ರಾಲಯಕ್ಕೆ ಹೋಗಿ ಬರಬೇಕೆಂದಿದ್ದರೆ, ಬೆಂಗಳೂರಿನಿಂದ ಮಂತ್ರಾಲಯಕ್ಕೆ ಹೋಗಲು ಇರುವ ರೈಲುಗಳ ಬಗ್ಗೆ ಮಾಹಿತಿ ಇಲ್ಲಿದೆ.

ಒಂದನೇ ರೈಲು: ಇದು ವಂದೇ ಭಾರತ್ ರೈಲು. ಈ ರೈಲು ಸಂಖ್ಯೆ KLBG VANDeBHARAT(22232). ಇದು ಕೆಎಸ್ಆರ್ ಬೆಂಗಳೂರಿನಿಂದ ಮಧ್ಯಾಹ್ನ 2.40 ಗಂಟೆಗೆ ಹೊರಡುತ್ತದೆ. ರಾತ್ರಿ 8:18ಕ್ಕೆ ಮಂತ್ರಾಯಲವನ್ನು ತಲುಪುತ್ತದೆ. ಇದರ ಪ್ರಯಾಣ ದರ cc: 1175 ರೂಪಾಯಿ ಇದೆ.

ಎರಡನೇ ರೈಲು: ಬೆಂಗಳೂರಿನಿಂದ ಮಂತ್ರಾಲಯಕ್ಕೆ ಇರುವ ಮೊದಲನೇ ರೈಲು 11014. ಇದು ಕೆಎಸ್‌ಆರ್‌ ಬೆಂಗಳೂರಿನಿಂದ ಸಂಜೆ 4 ಗಂಟೆಗೆ ಹೊರಡುತ್ತದೆ. ರಾತ್ರಿ 11.14ಕ್ಕೆ ತಲುಪುತ್ತದೆ. ಪ್ರಯಾಣ ದರ SL 245 ರೂಪಾಯಿ ಇದೆ.

ಮೂರನೇ ರೈಲು: ಎರಡನೇ ರೈಲು ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ರಾತ್ರಿ 11.15ಕ್ಕೆ ಹೊರಡುತ್ತದೆ. ಬೆಳಿಗ್ಗೆ 7.39ಕ್ಕೆ ಮಂತ್ರಾಲಯವನ್ನು ತಲುಪುತ್ತದೆ. ಈ ರೈಲು ಸಂಖ್ಯೆ YPR BIDR EXP(16577). ಶನಿವಾರ ಮಾತ್ರ ಈ ರೈಲು ಇರುತ್ತದೆ. ಪ್ರಯಾಣ ದರ SL: 235 ರೂಪಾಯಿ ಇದೆ.

ನಾಲ್ಕನೇ ರೈಲು: ಇನ್ನೊಂದು ಕೆಎಸ್ಆರ್ ಬೆಂಗಳೂರಿನಿಂದ ರಾತ್ರಿ 8:40ಕ್ಕೆ ಹೊರಡುತ್ತದೆ. ಬೆಳಗ್ಗೆ 3:49ಕ್ಕೆ ಮಂತ್ರಾಲಯವನ್ನು ತಲುಪುತ್ತದೆ. ಈ ಬೆಂಗಳೂರು ಮಂತ್ರಾಲಯ ರೈಲು ಸಂಖ್ಯೆ UDYAN EXP(11302). ಇದರ ಪ್ರಯಾಣ ದರ SL:255 ರೂಪಾಯಿ ಇದೆ. ವಾರದ ಎಲ್ಲಾ ದಿನ ಈ ರೈಲು ಸಂಚರಿಸಲಿದೆ.

ಐದನೇ ರೈಲು: ಮತ್ತೊಂದು ರೈಲು ಸಂಖ್ಯೆ HAS SUR EXP(11312). ಈ ರೈಲು ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ರಾತ್ರಿ 8:50ಕ್ಕೆ ಹೊರಡುತ್ತದೆ. ಬೆಳಿಗ್ಗೆ 2:34ಕ್ಕೆ ಮಂತ್ರಾಲಯ ತಲುಪುತ್ತದೆ. ಪ್ರಯಾಣ ದರ SL:256 ಇದೆ.

ಗುರುರಾಯರ ಮಠಕ್ಕೆ ಮಂತ್ರಾಲಯ ರೈಲ್ವೆ ಸ್ಟೇಷನ್ ತುಂಬಾ ಹತ್ತಿರದಲ್ಲಿದೆ. ಮಂತ್ರಾಲಯ ರೈಲ್ವೆ ಸ್ಟೇಷನ್‌ನಿಂದ ಮಠವು 15 ಕಿಮೀ ದೂರದಲ್ಲಿದೆ.

ಇದನ್ನೂ ಓದಿ: ಅಧಿಕಾರಕ್ಕೆ ಬಂದ್ರೆ ನಿಮ್ಮ ಖಾತೆಗೆ ಟಕಾಟಕ್ 1 ಲಕ್ಷ ಎಂದಿದ್ದ ರಾಹುಲ್ ಗಾಂಧಿ! ಪೋಸ್ಟ್ ಆಫೀಸ್ ಮುಂದೆ ಮುಸ್ಲಿಂ ಮಹಿಳೆಯರ ನೂಕುನುಗ್ಗಲು!!

Continue Reading

ಪ್ರಮುಖ ಸುದ್ದಿ

Raitha Siri Yojana: ಸಿರಿ ಧಾನ್ಯ ಬೆಳೆಯುವವರಿಗೆ ಸಿಹಿ ಸುದ್ದಿ; ನಿಮ್ಮ ಖಾತೆಗೇ ಬರುತ್ತೆ 10 ಸಾವಿರ ರೂ.

ರೈತ ಸಿರಿ ಯೋಜನೆ (Raitha Siri Yojana) ಹಣ ನೇರವಾಗಿ ರೈತರ ಖಾತೆಗೆ ಜಮಾ ಆಗುತ್ತದೆ. ಸಿರಿಧಾನ್ಯ ಬೆಳೆ ಕುರಿತು ರೈತರಲ್ಲಿ ಅರಿವು ಮೂಡಿಸಲು ಹಂತ ಹಂತವಾಗಿ ಟ್ರೈನಿಂಗ್‌ ಕೂಡ ನೀಡಲು ಉದ್ದೇಶಿಲಾಗಿದೆ. ಈ ಯೋಜನೆಯ ಫಲಾನುಭವ ಪಡೆಯಲು ಬೇಕಾದ ಅರ್ಹತೆಗಳು ಹೀಗಿವೆ.

VISTARANEWS.COM


on

Raitha Siri Yojana
Koo

ಬೆಂಗಳೂರು: ಸಿರಿಧಾನ್ಯ (millet, Siridhanya) ಬೆಳೆಯುವ ಹಾಗೂ ಸಣ್ಣ ಪ್ರಮಾಣದ ಜಮೀನು (small land) ಹೊಂದಿರುವ ರೈತರಿಗೆ (farmers) ಸಿಹಿ ಸುದ್ದಿಯನ್ನು ಸರ್ಕಾರ ನೀಡಿದೆ. ಸಿರಿಧಾನ್ಯ ಬೆಳೆಯನ್ನು ಪ್ರೋತ್ಸಾಹಿಸುವ ಸಲುವಾಗಿ ರೈತ ಸಿರಿ ಯೋಜನೆ (Raitha Siri Yojana) ಜಾರಿಗೆ ತಂದಿದ್ದು, ಇದರಡಿಯಲ್ಲಿ ಧಾನ್ಯ ಬೆಳೆಯುವುದಕ್ಕೆ ಬೇಕಾಗಿರುವ ಬೀಜಗಳು (seeds) ಮತ್ತು ರಸಗೊಬ್ಬರ (manure) ಪೂರೈಕೆಗಾಗಿ ಸರ್ಕಾರ 10,000 ರೂ. ನೀಡಲಿದೆ.

ಈ ಹಣ ನೇರವಾಗಿ ರೈತರ ಖಾತೆಗೆ ಜಮಾ ಆಗುತ್ತದೆ. ಸಿರಿಧಾನ್ಯ ಬೆಳೆ ಕುರಿತು ರೈತರಲ್ಲಿ ಅರಿವು ಮೂಡಿಸಲು ಹಂತ ಹಂತವಾಗಿ ಟ್ರೈನಿಂಗ್‌ ಕೂಡ ನೀಡಲು ಉದ್ದೇಶಿಲಾಗಿದೆ. ಈ ಯೋಜನೆಯ ಫಲಾನುಭವ ಪಡೆಯಲು ಬೇಕಾದ ಅರ್ಹತೆಗಳು ಹೀಗಿವೆ:

  • ಅರ್ಜಿದಾರರು ಕರ್ನಾಟಕದ ಕಾಯಂ ನಾಗರಿಕರಾಗಿರಬೇಕು
  • ಅರ್ಜಿದಾರರು ವೃತ್ತಿಯಲ್ಲಿ ರೈತರಾಗಿರಬೇಕು
  • ರೈತ ಪ್ರಾಥಮಿಕವಾಗಿ ರಾಗಿ ಉತ್ಪಾದಕನಾಗಿರಬೇಕು
  • ಈ ಯೋಜನೆಗೆ ಅರ್ಹತೆ ಪಡೆಯಲು ಕನಿಷ್ಠ ಒಂದು ಹೆಕ್ಟೇರ್ ಕೃಷಿ ಆಸ್ತಿ ಅಗತ್ಯವಿದೆ

ಕರ್ನಾಟಕ ರೈತ ಸಿರಿ ಯೋಜನೆಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ದಾಖಲೆಗಳು ಅಗತ್ಯ:

  • ಆಧಾರ್ ಕಾರ್ಡ್ ಅಥವಾ ಗುರುತಿನ ಪುರಾವೆ
  • ಅರ್ಜಿದಾರರ ಭೂಮಿಗೆ ಸಂಬಂಧಿಸಿದ ದಾಖಲೆಗಳು
  • ಶಾಶ್ವತ ನಿವಾಸಿ ಪ್ರಮಾಣಪತ್ರ
  • ವಿಳಾಸ ಪುರಾವೆ
  • ಪಡಿತರ ಚೀಟಿ
  • ಬ್ಯಾಂಕ್ ಖಾತೆ ವಿವರಗಳು
  • ಮೊಬೈಲ್ ನಂಬರ್
  • ಭೂ ದಾಖಲೆ ವಿವರಗಳು
  • ಪಾಸ್‌ಪೋರ್ಟ್ ಗಾತ್ರದ ಫೋಟೋಗಳು

ರೈತ ಸಿರಿ ಯೋಜನೆಯ ಉದ್ದೇಶ:

  • ರಾಜ್ಯದಲ್ಲಿ ಸಾವಯವ ಕೃಷಿಯನ್ನು ಉತ್ತೇಜಿಸುವುದು
  • ಕೃಷಿ ಕ್ಷೇತ್ರವನ್ನು ಉತ್ತೇಜಿಸುವುದು
  • ರಾಜ್ಯದ ರೈತರಿಗೆ ಆರ್ಥಿಕ ನೆರವು ನೀಡುವುದು
  • ರಾಗಿ ಬೆಳೆಗಾರರಿಗೆ ಪ್ರತಿ ಹೆಕ್ಟೇರ್‌ಗೆ 10,000 ರೂ ನೆರವು
  • ರಾಜ್ಯದ ಒಣಭೂಮಿಯಲ್ಲಿ ನೀರನ್ನು ಪುನಃಸ್ಥಾಪಿಸಲು ಕೃಷಿ ಹೊಂಡಗಳನ್ನು ನಿರ್ಮಿಸುವುದು

ಹೆಚ್ಚಿನ ಮಾಹಿತಿಗಾಗಿ https://raitamitra.karnataka.gov.in/info-2/Raita+Siri/en ಭೇಟಿ ನೀಡಿ

ಇದನ್ನೂ ಓದಿ: Headless Chicken: ತಲೆ ಕತ್ತರಿಸಿದರೂ ಈ ಕೋಳಿ 18 ತಿಂಗಳು ಬದುಕಿತ್ತು! ಸಾಯುವ ಮೊದಲು ಮಾಲೀಕನನ್ನು ಶ್ರೀಮಂತಗೊಳಿಸಿತು!

Continue Reading
Advertisement
Lok Sabha Election 2024
ದೇಶ14 seconds ago

Lok Sabha Election 2024: ಎಕ್ಸಿಟ್‌ ಪೋಲ್‌ ಬಗ್ಗೆ ನಿಮಗೆಷ್ಟು ಗೊತ್ತು? ಅದನ್ನು ನಡೆಸುವವರು ಯಾರು? ಹೇಗಿರುತ್ತೆ ಪ್ರಕ್ರಿಯೆ?

All We Imagine As Light actor rejected audition call by The Kerala Story
ಮಾಲಿವುಡ್8 mins ago

All We Imagine As Light: ʻದಿ ಕೇರಳ ಸ್ಟೋರಿʼ ಸಿನಿಮಾ ಆಡಿಷನ್‌ ರಿಜೆಕ್ಟ್‌ ಮಾಡಿದ್ರಂತೆ ಕಾನ್‌ ಪ್ರಶಸ್ತಿ ವಿಜೇತೆ!

IND vs PAK
ಕ್ರೀಡೆ9 mins ago

IND vs PAK: ಉಗ್ರರಿಂದ ‘ಒಂಟಿ ತೋಳ’ ದಾಳಿ ಬೆದರಿಕೆ; ಭಾರತ-ಪಾಕ್​ ಪಂದ್ಯಕ್ಕೆ ಭಾರೀ ಭದ್ರತಾ ವ್ಯವಸ್ಥೆ

Prajwal Revanna Case
ಪ್ರಮುಖ ಸುದ್ದಿ31 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಆಗಮನಕ್ಕೆ ಕೌಂಟ್‌ಡೌನ್‌, ವಿಮಾನ ಏರ್ತಾರಾ ಇಲ್ವಾ?

Viral Video
ಕ್ರೀಡೆ42 mins ago

Viral Video: ಜಡಿ ಮಳೆಗೆ ಒದ್ದೆಯಾಗುತ್ತಲೇ ಓಡೋಡಿ ಬಂದು ಕಾರು ಹತ್ತಿದ ರೋಹಿತ್​, ದ್ರಾವಿಡ್​

Lok Sabha Election
Lok Sabha Election 20241 hour ago

Lok Sabha Election: ಫಲೋಡಿ ಸಟ್ಟಾ ಬಜಾರ್ ಲೇಟೆಸ್ಟ್ ಲೆಕ್ಕಾಚಾರದ ಪ್ರಕಾರ ಕಾಂಗ್ರೆಸ್ ಒಕ್ಕೂಟಕ್ಕೆ ಬರುವ ಸೀಟೆಷ್ಟು?

Ravichandran Birthday will give surprise To Fans
ಸ್ಯಾಂಡಲ್ ವುಡ್1 hour ago

Ravichandran Birthday: ಇಂದು ಕನಸುಗಾರನ ಜನುಮದಿನ: ಫ್ಯಾನ್ಸ್‌ಗೆ ಸರ್‌ಪ್ರೈಸ್‌ ಕೊಡ್ತಾರಾ ‘ಕ್ರೇಜಿ ಸ್ಟಾರ್’?

Norway Chess
ಕ್ರೀಡೆ1 hour ago

Norway Chess: ವಿಶ್ವ ನಂ.1 ಮ್ಯಾಗ್ನಸ್‌ ಕಾರ್ಲ್‌ಸನ್​ಗೆ ಸೋಲುಣಿಸಿದ ಪ್ರಜ್ಞಾನಂದ

Viral Video
ವೈರಲ್ ನ್ಯೂಸ್1 hour ago

Viral Video: ಬಾಯ್‌ಫ್ರೆಂಡನ್ನು ಹೆದರಿಸಲು ರೈಲ್ವೇ ಟ್ರ್ಯಾಕ್‌ಗೆ ಇಳಿದಳು.. ಆಮೇಲೆ ಆಗಿದ್ದೇ ಬೇರೆ! ಶಾಕಿಂಗ್‌ ವಿಡಿಯೋ ನೋಡಿ

Viral Video
ವೈರಲ್ ನ್ಯೂಸ್2 hours ago

Viral Video: ಮುಂಬೈನ ಚಕಾಚಕ್‌ ʻರಜನೀಕಾಂತ್‌ʼ ಶೈಲಿಯ ದೋಸೆ ಈಗ ವೈರಲ್!‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌