ನಾನು, ಶಿವಕುಮಾರ್‌ ಒಟ್ಟಾಗಿದ್ದೇವೆ; ನಮ್ಮ ನಡುವೆ ಬಿರುಕಿಲ್ಲ: ಸಿದ್ದರಾಮಯ್ಯ ಪ್ರತಿಪಾದನೆ - Vistara News

ಪ್ರಮುಖ ಸುದ್ದಿ

ನಾನು, ಶಿವಕುಮಾರ್‌ ಒಟ್ಟಾಗಿದ್ದೇವೆ; ನಮ್ಮ ನಡುವೆ ಬಿರುಕಿಲ್ಲ: ಸಿದ್ದರಾಮಯ್ಯ ಪ್ರತಿಪಾದನೆ

75ನೇ ವರ್ಷದ ಸಂದರ್ಭದಲ್ಲಿ ದಾವಣಗೆರೆಯಲ್ಲಿ ಆಯೋಜನೆ ಮಾಡಲಾಗಿದ್ದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ನೆರೆದಿದ್ದ ಲಕ್ಷಾಂತರ ಜನರನ್ನುದ್ದೇಶಿಸಿ ಮಾಜಿ ಸಿದ್ದರಾಮಯ್ಯ ಮಾತನಾಡಿದರು.

VISTARANEWS.COM


on

Siddaramaiah speech in siddaramotsava
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹಾಗೂ ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾವಿಬ್ಬರೂ ಒಟ್ಟಾಗಿದ್ದೇವೆ. ನಮ್ಮಿಬ್ಬರ ನಡುವೆ ಬಿರುಕು ಇದೆ ಎನ್ನುವುದು ವಿರೋಧ ಪಕ್ಷಗಳು ಹಾಗೂ ಕೆಲವು ಮಾಧ್ಯಮಗಳ ಸೃಷ್ಟಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬುಧವಾರ ಪ್ರತಿಪಾದಿಸಿದರು.

ತಮ್ಮ 75ನೇ ವರ್ಷದ ಪ್ರಯುಕ್ತ ದಾವಣಗೆರೆಯಲ್ಲಿ ಆಯೋಜನೆ ಮಾಡಲಾಗಿದ್ದ ಬೃಹತ್‌ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ನೆರೆದಿದ್ದ ಜನಸ್ತೋಮವನ್ನುದ್ದೇಶಿಸಿ ಮಾತನಾಡಿದರು.

ನಾನು ಕಾಂಗ್ರೆಸ್‌ ಸೇರಿದ ದಿನದಿಂದ ಇವತ್ತಿನವರೆಗೂ ರಾಹುಲ್‌ ಗಾಂಧಿಯವರು ನನ್ನ ಮೇಲೆ ಅಪಾರವಾದ ಪ್ರೀತಿಯನ್ನು ಇಟ್ಟುಕೊಂಡೊದ್ದಾರೆ. ನಾನು ಬೇರೆ ಪಕ್ಷದಿಂದ ಬಂದಿದ್ದರೂ, ರಾಹುಲ್‌ ಗಾಂಧಿ, ಸೋನಿಯಾ ಗಾಂಧಿಯವರು, ನಾನು ಮುಖ್ಯಮಂತ್ರಿ ಆಗಲು ಕಾರಣ ಎಂಬುದನ್ನು ಇಂದು ನೆನೆಯಬೇಕಿದೆ. ನಾನು ಮುಖ್ಯಮಂತ್ರಿಯಾದ ನಂತರ ಐದು ವರ್ಷ ಬಂಡೆಯಂತೆ ನನಗೆ ಎಲ್ಲ ಸಹಕಾರ, ಬೆಂಬಲವನ್ನು, ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಕೊಟ್ಟಿದ್ದಾರೆ ಎಂದರು.

75 ವರ್ಷದಲ್ಲಿ ಸುಮಾರು ಐವತ್ತು ವರ್ಷಗಳು ನಾನು ಈ ನಾಡಿನ ಜನರ ಜತೆ ಇದ್ದೇನೆ. 1972ರ ಆಗಸ್ಟ್‌ ತಿಂಗಳಲ್ಲಿ ನಾನು ವಕೀಲನಾಗಿ ಸೇರ್ಪಡೆಯಾದೆ. ಆದಾದ ನಂತರ 1978ರಲ್ಲಿ ತಾಲೂಕು ಅಭಿವೃದ್ಧಿ ಮಂಡಲಿ ಸದಸ್ಯನಾದೆ. 83ರಲ್ಲಿ ಶಾಸಕ, 84ರಲ್ಲಿ ಮಂತ್ರಿಯಾದೆ. ಅಂದಿನಿಂದ ಇಂದಿನವರೆಗೆ ನಿರಂತರವಾಗಿ ರಾಜ್ಯದ ಜನರ ಸಂಪರ್ಕವನ್ನು ಇಟ್ಟುಕೊಂಡು ಜನಸೇವೆಯನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ ಎಂದು ನೆನೆದರು.

ಇದನ್ನೂ ಓದಿ | ಡಿಕೆಶಿ-ಸಿದ್ದರಾಮಯ್ಯ ಒಗ್ಗಟ್ಟಿನ ಶಕ್ತಿ ರಾಜ್ಯದ ಬಿಜೆಪಿ ಸರಕಾರವನ್ನು ಕಿತ್ತೊಗೆಯಲಿದೆ ಎಂದ ರಾಹುಲ್‌ ಗಾಂಧಿ

ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನಸೇವೆ, ಜನಶಕ್ತಿಯೇ ಮುಖ್ಯ. ಅದೊಂದು ಇಲ್ಲದಿದ್ದರೆ ಯಾರೂ ದೀರ್ಘ ಕಾಲದವರೆಗೆ ಸೇವೆ ಮಾಡಲು ಸಾಧ್ಯವಾಗುವುದಿಲ್ಲ ಎಂದ ಸಿದ್ದರಾಮಯ್ಯ, ನನಗೆ ಈ ರೀತಿ ನಿರಂತರವಾಗಿ ಜನಸೇವೆ ಮಾಡಲು ಅವಕಾಶ ಸಿಕ್ಕಿದ್ದಕ್ಕೆ ಕರ್ನಾಟಕದ ಜನರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ದೈಹಿಕ, ಮಾನಸಿಕವಾಗಿ ಸದೃಢನಾಗಿರುವವರೆಗೆ ಸಕ್ರಿಯ ರಾಜಕಾರಣದಲ್ಲಿದ್ದುಕೊಂಡು ನಾಡಿನ ಸೇವೆಯನ್ನು ಮಾಡುತ್ತೇನೆ ಎಂದರು.

ತಮ್ಮ ಹಾಗೂ ಶಿವಕುಮಾರ್‌ ನಡುವಿನ ವಿಚಾರವನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್‌ ಇದ್ದಾರೆ. ಅನೇಕ ಬಾರಿ ವಿರೋಧ ಪಕ್ಷದವರು ಹಾಗೂ ಮಾಧ್ಯಮದವರು ತಪ್ಪು ಮಾಹಿತಿ ನೀಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ನಡುವೆ ಬಿರುಕಿದೆ ಎಂದು ಹೇಳುತ್ತಾರೆ. 75ನೇ ಹುಟ್ಟುಹಬ್ಬ ಆಚರಿಸಲು ಶಿವಕುಮಾರ್‌ ವಿರೋಧ ಇದೆ ಎಂದು ಹೇಳುತ್ತಾರೆ. ಇದು ವಿರೋಧಪಕ್ಷದವರ ಭ್ರಮೆ ಹಾಗೂ ಕೆಲವು ಮಾಧ್ಯಮಗಳ ಸೃಷ್ಟಿ. ನಾನು ಹಾಗೂ ಶಿವಕುಮಾರ್‌ ಒಟ್ಟಾಗಿದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಹೇಳಿದರು.

ಇವತ್ತು ನಮ್ಮ ಮುಂದಿರುವ ಸವಾಲು ಎಂದರೆ, ಕರ್ನಾಟಕದಲ್ಲಿರುವ ಭ್ರಷ್ಟ, ಜನಪೀಡಕ ಹಾಗೂ ಕೋಮುವಾದಿ ಸರ್ಕಾರವನ್ನು ಕಿತ್ತೊಗೆದು ರಾಹುಲ್‌ ಗಾಂಧಿಯವರ ನಾಯಕತ್ವದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ. ಅದಕ್ಕೆ ಕರ್ನಾಟಕದ ಜನರ ಆಶೀರ್ವಾದ ಬೇಕು. ನನ್ನ 44ವರ್ಷದ ಸಕ್ರಿಯ ರಾಜಕಾರಣದಲ್ಲಿ, ಈಗಿರುವಂತಹ ಬಿಜೆಪಿ ಸರ್ಕಾರದಷ್ಟು ಭ್ರಷ್ಟ, ಕೋಮುವಾದಿ ಸರ್ಕಾವನ್ನು ನೋಡಿರಲಿಲ್ಲ. ನನಗೆ ಹುಟ್ಟುಹಬ್ಬದ ಶುಭ ಕೋರುವುದರ ಮೂಲಕ, ಈ ಕೋಮುವಾದಿ ಸರ್ಕಾರವನ್ನು ಕಿತ್ತೊಗೆಯುತ್ತೇವೆ ಎಂದು ಶಪಥ ಮಾಡಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ | Video | ಸಿದ್ದರಾಮಯ್ಯ @75: ಸಿದ್ದರಾಮೋತ್ಸವಕ್ಕೂ ಮುನ್ನ ಒಂದು ಸಿಪ್‌ ಬಿಯರ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Actor Darshan: ದರ್ಶನ್‌ಗೆ 40 ಲಕ್ಷ ರೂ ನೀಡಿದ ವ್ಯಕ್ತಿ ಈಗ ನಾಪತ್ತೆ! ಯಾರೀ ಆಸಾಮಿ?

Actor Darshan: ಪ್ರಕರಣದಲ್ಲಿ ತನ್ನ ಹೆಸರು ಹೊರಗಡೆ ಬರುತ್ತಿದ್ದಂತೆ ಮೋಹನ್‌ ರಾಜು ಫೋನ್ ಸ್ವಿಚಾಫ್‌ ಮಾಡಿಕೊಂಡಿದ್ದಾನೆ. ಫೋನ್ ಸ್ವಿಚಾಫ್ ಆಗಿರುವುದರಿಂದ ಮನೆಗೆ ಹೋಗಿ ನೋಟಿಸ್ ನೀಡಲು ಕಾಮಾಕ್ಷಿ ಪಾಳ್ಯ ಪೊಲೀಸರು ಮುಂದಾಗಿದ್ದಾರೆ.

VISTARANEWS.COM


on

ram mohan raju actor darshan
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ (Renuka Swamy Murder Case) ಪ್ರಕರಣವನ್ನು ಮುಚ್ಚಿ ಹಾಕಲು ನಟ ದರ್ಶನ್‌ (Actor Darshan) ತನ್ನ ಸಹಚರರಿಗೆ ನೀಡಿದ್ದ 30 ಲಕ್ಷ ರೂ. ಹಣವನ್ನು ಒಬ್ಬ ಮಾಜಿ ಕಾರ್ಪೊರೇಟರ್‌ನಿಂದ ಪಡೆದಿದ್ದು ಗೊತ್ತಾಗಿದೆ. ಈ ಕುರಿತು ಈ ವ್ಯಕ್ತಿಯನ್ನು ಪೊಲೀಸರು ಪ್ರಶ್ನಿಸಲು ಮುಂದಾಗಿದ್ದಾರೆ. ಆದರೆ ಈ ಆಸಾಮಿ ಯಾರ ಕಣ್ಣಿಗೂ ಬೀಳದೆ (Absconded) ನಾಪತ್ತೆಯಾಗಿದ್ದಾರೆ.

ರೇಣುಕಾ ಸ್ವಾಮಿ ಕೇಸ್‌ನಲ್ಲಿ ಮತ್ತೊಬ್ಬ ವ್ಯಕ್ತಿಯ ಕೈವಾಡ ಇರುವುದು ಪತ್ತೆಹಚ್ಚಿದ ಪೊಲೀಸರಿಗೆ ಗೊತ್ತಾಗಿರುವುದು ದರ್ಶನ್‌ಗೆ ಲಕ್ಷ ಲಕ್ಷ ಹಣ ನೀಡಿದ ಆ ವ್ಯಕ್ತಿಯ ಬಗ್ಗೆ. ಕೊಲೆ‌ ನಡೆದ ಬೆನ್ನಲ್ಲೇ ದರ್ಶನ್ ಆ ವ್ಯಕ್ತಿಯಿಂದ ಹಣ ಪಡೆದಿದ್ದಾನೆ. ಸಾಕ್ಷಿ ನಾಶ ಮಾಡುವುದಕ್ಕೆಂದೇ 40 ಲಕ್ಷ ರೂ. ಹಣವನ್ನು ಇವರಿಂದ ದರ್ಶನ್‌ ಪಡೆದಿದ್ದ. ಆ 40 ಲಕ್ಷ ಹಣವನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಇದೀಗ ಹಣದ ಬಗ್ಗೆ ಆ ವ್ಯಕ್ತಿಯನ್ನು ಪ್ರಶ್ನಿಸಬೇಕಿದೆ.

ಮಾಜಿ ಕಾರ್ಪೊರೇಟರ್‌ ಆಗಿರುವ ಮೋಹನ್ ರಾಜ್ ಎಂಬಾತನೇ ಈ ವ್ಯಕ್ತಿಯಾಗಿದ್ದು, ಈತನಿಂದ ದರ್ಶನ್‌ಗೆ ಹಣ ಸಂದಾಯವಾಗಿದೆ. ದರ್ಶನ್‌ಗೆ ಆಪ್ತ ಸ್ನೇಹಿತ ಆಗಿರುವ ಮೋಹನ್ ರಾಜ್, ಆತನಿಗೆ 40 ಲಕ್ಷ ರೂ. ಹಣ ನೀಡಿದ್ದಾನೆ. ಈ ಹಣವನ್ನು ತನ್ನ ಸಹಚರರಿಗೆ ನೀಡಿರುವ ದರ್ಶನ್‌, ತನ್ನ ಹೆಸರು ಎಲ್ಲಿಯೂ ಕಾಣಿಸಿಕೊಳ್ಳದಂತೆ ತಿಳಿಸಿದ್ದಾನೆ. ಇದೀಗ ಇರುವ ಪ್ರಶ್ನೆಯೆಂದರೆ, ಈ ಹಣ ಪಡೆಯುವಾಗ ಮೋಹನ್‌ ರಾಜ್‌ಗೆ ಈ ಕೊಲೆಯ ಬಗ್ಗೆ ತಿಳಿದಿತ್ತೇ ಇಲ್ಲವೇ ಎಂಬುದು. ತಿಳಿದಿತ್ತು ಎಂದಾದರೆ, ಕೊಲೆ ಪ್ರಕರಣ ಮೋಹನ್‌ ರಾಜ್‌ ಕೊರಳಿಗೂ ಸುತ್ತಿಕೊಳ್ಳಲಿದೆ.

ಹಣದ ಬಗ್ಗೆ ರಿಮ್ಯಾಂಡ್ ಅಪ್ಲಿಕೇಶನ್‌ನಲ್ಲಿ ಪೊಲೀಸರು ಉಲ್ಲೇಖ ಮಾಡಿದ್ದಾರೆ. ಮೋಹನ್ ರಾಜ್‌ಗಾಗಿ ಹುಡುಕಾಟ ನಡೆಸುತ್ತಿದ್ದು, ಬಂಧನ ಸಾಧ್ಯತೆಯೂ ಇದೆ. ಈ ಮೋಹನ್‌ ರಾಜು 2019ರಲ್ಲಿ ಬೆಂಗಳೂರಿನ ಉಪಮೇಯರ್ ಆಗಿದ್ದ. ಬೊಮ್ಮನಹಳ್ಳಿ ವಾರ್ಡ್ ಕಾರ್ಪೋರೇಟರ್ ಆಗಿದ್ದ. ರಾಜಕೀಯ ವಲಯದಲ್ಲಿ ಸಾಕಷ್ಟು ಪ್ರಭಾವಿಯೂ ಆಗಿದ್ದಾನೆ.

ಪ್ರಕರಣದಲ್ಲಿ ತನ್ನ ಹೆಸರು ಹೊರಗಡೆ ಬರುತ್ತಿದ್ದಂತೆ ಮೋಹನ್‌ ರಾಜು ಫೋನ್ ಸ್ವಿಚಾಫ್‌ ಮಾಡಿಕೊಂಡಿದ್ದಾನೆ. ಫೋನ್ ಸ್ವಿಚಾಫ್ ಆಗಿರುವುದರಿಂದ ಮನೆಗೆ ಹೋಗಿ ನೋಟಿಸ್ ನೀಡಲು ಕಾಮಾಕ್ಷಿ ಪಾಳ್ಯ ಪೊಲೀಸರು ಮುಂದಾಗಿದ್ದಾರೆ. ಬಂಧಿತರು ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿದ್ದಾರೆ.

ವಿಶೇಷವೆಂದರೆ, 2018ರಲ್ಲಿ ಇದೇ ಮೋಹನ್ ರಾಜ್ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಜಮೀನು ವಿಚಾರವಾಗಿ ಕಿರುಕುಳ ಕೊಡುತ್ತಿದ್ದಾರೆಂದು ಆರೋಪಿಸಿ, ಬೊಮ್ಮನಹಳ್ಳಿ ಸಮೀಪದ ಫಾರ್ಮ್ ಹೌಸ್‌ನಲ್ಲಿ ಪೊಲೀಸ್ ಸಿಬ್ಬಂದಿ ಎದುರೇ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದ. ಮೈಗೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ.

ಇದನ್ನೂ ಓದಿ: Actor Darshan: ದರ್ಶನ್‌ಗೆ ಗಲ್ಲು ಶಿಕ್ಷೆ ಆಗಬೇಕು ಎಂದ ರಮ್ಯಾಗೆ ಕೌಂಟರ್‌ ಕೊಟ್ಟ ಸಂಜನಾ ಗಲ್ರಾನಿ!

Continue Reading

Latest

IRCTC Ticket Booking: ರೈಲ್ವೆ ಟಿಕೆಟ್ ಈ ರೀತಿ ಬುಕ್ ಮಾಡಿದರೆ ಜೈಲೂಟ ಗ್ಯಾರಂಟಿ!

ಸಾಮಾನ್ಯವಾಗಿ ಯಾರಾದರೂ ರೈಲಿನಲ್ಲಿ ಪ್ರಯಾಣ ಮಾಡಬೇಕು ಎಂದುಕೊಂಡರೆ ಸ್ಟೇಷನ್ಗೆ ಹೋಗಿ ಟಿಕೆಟ್ ತೆಗೆದುಕೊಳ್ಳುವುದಕ್ಕಿಂತ ಹೆಚ್ಚಾಗಿ ಯಾರ ಹತ್ತಿದ IRCTC Ticket Booking IRCTC ಐಡಿ ಇದ್ದವರ ಬಳಿ ಹೋಗಿ ಟಿಕೆಟ್ ಮಾಡಿಸಿಕೊಳ್ಳುತ್ತಾರೆ.ಆದರೆ ಇನ್ನು ಮುಂದೆ ಹೀಗೆ ಮಾಡುವ ಹಾಗಿಲ್ಲವಂತೆ. ನಿಮ್ಮ ಐಡಿಯಿಂದ ನಿಮ್ಮ ಮನೆಯವರನ್ನು ಬಿಟ್ಟು ಬೇರೆಯವರಿಗೆ ಟಿಕೆಟ್ ಬುಕ್ ಮಾಡಿಸಿಕೊಟ್ಟರೆ 3 ವರ್ಷಗಳ ಜೈಲು ಶಿಕ್ಷೆ ಅಥವಾ 10,000ರೂ. ದಂಡ ತೆರಬೇಕಾಗುತ್ತದೆಯಂತೆ. ನಿಮ್ಮ ಐಡಿಗೆ ಆಧಾರ್ ಲಿಂಕ್ ಮಾಡಿಲ್ಲದಿದ್ದರೆ ಅಂತವರ ಐಡಿಯಿಂದ ತಿಂಗಳಿಗೆ 12 ಟಿಕೆಟ್ ಗಳನ್ನು ಮಾತ್ರ ಬುಕ್ ಮಾಡುವ ಅವಕಾಶವಿರುತ್ತದೆ. ಆದರೆ ಆ 12 ಟಿಕೆಟ್ ನೀವು ಹಾಗೂ ನಿಮ್ಮ ಕುಟುಂಬದವರಿಗೆ ಮಾತ್ರ ಮೀಸಲಾಗಿರಬೇಕು. ಇಲ್ಲವಾದರೆ ಅದು ಅಪರಾಧವಾಗುತ್ತದೆ.

VISTARANEWS.COM


on

IRCTC Ticket Booking
Koo

ಬೆಂಗಳೂರು : IRCTC ಒಂದು ಸಾರ್ವಜನಿಕ ವಲಯದ ಸಂಸ್ಥೆಯಾಗಿದ್ದು, ಇದು ಸರ್ಕಾರಿ ಸ್ವಾಮ್ಯದ ಭಾರತೀಯ ರೈಲ್ವೆಗೆ ಟಿಕೆಟಿಂಗ್ (IRCTC Ticket Booking), ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ಸೇವೆಗಳನ್ನು ಒದಗಿಸುತ್ತದೆ. ಹೆಚ್ಚಿನ ಜನರು IRCTC ಐಡಿ ಬಳಸಿ ಟಿಕೆಟ್ ಗಳನ್ನು ಬುಕ್ ಮಾಡುತ್ತಾರೆ. ಆದರೆ ನಿಮ್ಮ ಐಡಿಯನ್ನು ಬಳಸಿಕೊಂಡು ಬೇರೆಯವರಿಗೆ ಟಿಕೆಟ್ ಬುಕ್ ಮಾಡಿದರೆ ಅಂತವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅದಕ್ಕಾಗಿ ಅವರಿಗೆ 3 ವರ್ಷಗಳ ಜೈಲು ಶಿಕ್ಷೆ ಅಥವಾ 10,000 ರೂ. ದಂಡ ವಿಧಿಸಲಾಗುತ್ತದೆ. ಹಾಗಾಗಿ IRCTCಯಿಂದ ಟಿಕೆಟ್ ಬುಕ್ ಮಾಡುವವರು ಈ ನಿಯಮ ತಿಳಿದಿರಿ.

  • -ವೈಯಕ್ತಿಕ ಐಡಿ ಬಳಸಿ ಬೇರೆಯವರಿಗೆ ಟಿಕೆಟ್ ಬುಕ್ ಮಾಡುವುದು ಅಪರಾಧ. ಹಾಗಾಗಿ ವೈಯಕ್ತಿಕ ಐಡಿ ಬಳಸಿಕೊಂಡು ಇತರರಿಗೆ ಟಿಕೆಟ್ ಗಳನ್ನು ಬುಕ್ ಮಾಡುವವರು ದಂಡ ಕಟ್ಟಬೇಕಾಗುತ್ತದೆ.
  • -ವಾಸ್ತವವಾಗಿ ರೈಲ್ವೆ ಕಾಯಿದೆ ಸೆಕ್ಷನ್ 143ರ ಪ್ರಕಾರ, ಅಧಿಕೃತವಾಗಿ ನೇಮಕಗೊಂಡ ವ್ಯಕ್ತಿ ಮಾತ್ರ ತಮ್ಮ ಐಡಿಯಿಂದ ಇತರರಿಗೆ ಟಿಕೆಟ್ ಗಳನ್ನು ಬುಕ್ ಮಾಡಿಕೊಡಬಹುದು
  • -ಆದರೆ ಒಬ್ಬ ಸಾಮಾನ್ಯ ವ್ಯಕ್ತಿ ತನ್ನ ವೈಯಕ್ತಿಕ ಐಡಿಯಿಂದ ತನ್ನ ಕುಟುಂಬದವರಿಗೆ ಮತ್ತು ಅವರ ಹೆಸರನ್ನೇ ಹೊಂದಿರುವ ವ್ಯಕ್ತಿಗಳಿಗೆ ಮಾತ್ರ ಟಿಕೆಟ್ ಬುಕ್ ಮಾಡಬಹುದು. ಇದಲ್ಲದೇ ನಿಮ್ಮ ಸ್ನೇಹಿತರಿಗೆ ಅಥವಾ ಇತರರಿಗೆ ಟಿಕೆಟ್ ಬುಕ್ ಮಾಡಿದರೆ 10,000 ರೂ. ದಂಡ ಅಥವಾ 3 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ.

IRCTC ವೆಬ್ ಸೈಟ್ ನಲ್ಲಿ ಒಂದು ಐಡಿಯಲ್ಲಿ ಒಬ್ಬ ವ್ಯಕ್ತಿ ಒಂದು ತಿಂಗಳಿನಲ್ಲಿ 24 ಟಿಕೆಟ್ ಗಳನ್ನು ಬುಕ್ ಮಾಡಬಹುದು. ಆದರೆ ಇವರ ಐಡಿಯನ್ನು ಆಧಾರ್ ಕಾರ್ಡ್ ಗೆ ಲಿಂಕ್ ಮಾಡಿರಬೇಕು. ಒಂದು ವೇಳೆ ನಿಮ್ಮ ಐಡಿಗೆ ಆಧಾರ್ ಲಿಂಕ್ ಮಾಡಿಲ್ಲದಿದ್ದರೆ ಅಂತವರ ಐಡಿಯಿಂದ ತಿಂಗಳಿಗೆ 12 ಟಿಕೆಟ್ ಗಳನ್ನು ಮಾತ್ರ ಬುಕ್ ಮಾಡುವ ಅವಕಾಶವಿರುತ್ತದೆ. ಆದರೆ ಆ 12 ಟಿಕೆಟ್ ನೀವು ಹಾಗೂ ನಿಮ್ಮ ಕುಟುಂಬದವರಿಗೆ ಮಾತ್ರ ಮೀಸಲಾಗಿರಬೇಕು. ಇಲ್ಲವಾದರೆ ಅದು ಅಪರಾಧವಾಗುತ್ತದೆ.

ಇದನ್ನೂ ಓದಿ: Amithab Bacchan :14ನೇ ವರ್ಷಕ್ಕೆ ಕಾಲಿಟ್ಟ ʼರಾವಣ್ʼ ಚಿತ್ರ; ಮಗನನ್ನು ಹೊಗಳಿ ಸೊಸೆಯನ್ನು ನಿರ್ಲಕ್ಷಿಸಿದ ಅಮಿತಾಭ್!

IRCTC ಐಡಿ ಬಳಸಿ ನೀವು ತತ್ಕಾಲ್ ಎಸಿ ಟಿಕೆಟ್ ಬುಕ್ ಮಾಡುವುದಾದರೆ ಬೆಳಿಗ್ಗೆ 10 ಗಂಟೆಯ ನಂತರ ಪ್ರಾರಂಭಿಸಬೇಕಾಗುತ್ತದೆ. ಹಾಗೇ ನಾನ್ ಎಸಿ ಟಿಕೆಟ್ ಬುಕ್ ಮಾಡುವವರು ಬೆಳಿಗ್ಗೆ 11 ಗಂಟೆಯ ನಂತರ ಬುಕ್ ಮಾಡಬಹುದಾಗಿದೆ.

Continue Reading

Latest

Viral Video : ಇನ್‌ಸ್ಟಾಗ್ರಾಂ ರೀಲ್ಸ್ ಕ್ರೇಜ್‌; ಪಾಳುಬಿದ್ದ ಕಟ್ಟಡದ ಮೇಲಿಂದ ನೇತಾಡಿದ ಹುಡುಗಿ!

Viral Video: ಇಂದಿನ ಯುವಜನಾಂಗಕ್ಕೆ ಸೋಷಿಯಲ್ ಮೀಡಿಯಾದ್ದೇ ಗೀಳು. ಏನೇ ಮಾಡಿದರೂ ಅದನ್ನು ರೀಲ್ಸ್ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಅದಕ್ಕೆ ಬರುವ ಲೈಕ್ಸ್, ಕಮೆಂಟ್‌ಗಳಿಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಾ ಕುಳಿತುಕೊಳ್ಳುತ್ತಾರೆ. ಸೋಷಿಯಲ್ ಮೀಡಿಯಾದ ಆಚೆಗೂ ಒಂದು ಬದುಕಿದೆ, ತಮ್ಮನ್ನು ನಂಬಿಕೊಂಡುವರು ಇದ್ದಾರೆ ಎಂಬ ಸೂಕ್ಷ್ಮ ಕೂಡ ಇಲ್ಲದೇ ಬದುಕುತ್ತಿದ್ದಾರೆ. ರೀಲ್ಸ್‌ಗಾಗಿ ಯಾವ ಸರ್ಕಸ್ ಮಾಡುವುದಕ್ಕೆ ಕೂಡ ಹಿಂದೆ-ಮುಂದೆ ನೋಡಲ್ಲ. ಇಲ್ಲೊಬ್ಬಳು ಹುಡುಗಿ ತನ್ನ ಜೀವವನ್ನೇ ಪಣಕ್ಕಿಟ್ಟು ರೀಲ್ಸ್ ಮಾಡಿದ್ದಾಳೆ. ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

VISTARANEWS.COM


on

Viral Video
Koo

ಪುಣೆ : ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಗಳು ಈಗ ಹೆಚ್ಚು ಟ್ರೆಂಡ್ ಆಗುತ್ತಿದೆ. ಹಾಗಾಗಿ ಯುವಕ-ಯುವತಿಯರು ತಮ್ಮ ಫಾಲೋವರ್ಸ್ ಅನ್ನು ಹೆಚ್ಚಿಸಿಕೊಳ್ಳಲು ಹಾಗೂ ಹೆಚ್ಚು ವೀವ್ಸ್ ಮತ್ತು ಲೈಕ್ಸ್ ಪಡೆಯಲು ಜೀವಕ್ಕೆ ಅಪಾಯವಾಗುವಂತಹ ಸ್ಟಂಟ್ ಗಳನ್ನು ಮಾಡುತ್ತಿದ್ದಾರೆ. ಇದರಿಂದ ಅನೇಕರು ಸಾವನಪ್ಪಿರುವುದು, ಗಾಯಗೊಂಡಿರುವುದು ನಾವು ಆಗಾಗ ನೋಡಿದ್ದೇವೆ. ಆದರೂ ಜನರಿಗೆ ರೀಲ್ಸ್ ಹುಚ್ಚು ಬಿಡುವುದಿಲ್ಲ. ಇದೀಗ ಪುಣೆಯಲ್ಲಿ ಹುಡುಗಿಯೊಬ್ಬಳು, ಹುಡುಗನೊಬ್ಬನ ಕೈಯನ್ನು ಹಿಡಿದುಕೊಂಡು ಪಾಳುಬಿದ್ದ ಕಟ್ಟಡದ ಮೇಲಿಂದ ನೇತಾಡುತ್ತಿರುವ ವಿಡಿಯೊ ವೈರಲ್ (Viral Video) ಆಗಿದೆ.

ವಿಡಿಯೊದಲ್ಲಿ ಹುಡುಗನೊಬ್ಬ ಕಟ್ಟಡದ ತುದಿಯಲ್ಲಿ ಮಲಗಿದ್ದಾನೆ. ಹುಡುಗಿ ಆತನ ಕೈಯನ್ನು ಹಿಡಿದುಕೊಂಡು ಕಟ್ಟದಿಂದ ಇಳಿಯುತ್ತಿರುವುದನ್ನು ಕಾಣಬಹುದು. ಇನ್ನೊಂದು ಬದಿಯಲ್ಲಿ ಆಕೆಯ ಸ್ನೇಹಿತರು ವಿವಿಧ ಆ್ಯಂಗಲ್ ನಲ್ಲಿ ವಿಡಿಯೊ ರೆಕಾರ್ಡ್ ಮಾಡಿದ್ದಾರೆ. ಈ ವಿಡಿಯೊವನ್ನು ಪುಣೆಯ ಜಂಬುಲ್ವಾಡಿ ಸ್ವಾಮಿನಾರಾಯಣ ಮಂದಿರದ ಬಳಿಯ ಪಾಳುಬಿದ್ದ ಕಟ್ಟಡದಲ್ಲಿ ತೆಗೆಯಲಾಗಿದೆ. ಜೂನ್ 19ರಂದು ಈ ವಿಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಲಾಗಿದೆ. ಇದಕ್ಕೆ 55,000ಕ್ಕೂ ಹೆಚ್ಚು ವೀವ್ಸ್ ಸಿಕ್ಕಿದೆ ಮತ್ತು ಅನೇಕರು ಅವರ ಮೂರ್ಖತನಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Genitals Removed Case: ಮಲಗುವಾಗ ಗಂಡಾಗಿದ್ದ, ಎದ್ದಾಗ ಹೆಣ್ಣಾಗಿದ್ದ! ಬಲವಂತದಿಂದ ಲಿಂಗ ಪರಿವರ್ತನೆ

ವ್ಯಕ್ತಿಯೊಬ್ಬರು ಈ ವಿಡಿಯೊವನ್ನು ಪುಣೆ ಪೊಲೀಸರಿಗೆ ಟ್ಯಾಗ್ ಮಾಡಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ತಡೆಯಲು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ರೀಲ್ಸ್ ಮಾಡಲು ಹೋಗಿ ಜೀವ ಕಳೆದುಕೊಂಡ ಹಲವಾರು ಘಟನೆಗಳು ವರದಿಯಾದ ಮೇಲೂ ಇಂತಹ ಬೇಜವಾಬ್ದಾರಿ ಕೆಲಸ ನಿಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದು ಅಗತ್ಯ. ಫಾಲೋವರ್ಸ್ ಅನ್ನು ಹೆಚ್ಚಿಸಿಕೊಳ್ಳಲು ತನ್ನ ಕುಟುಂಬವನ್ನು ಜೀವನಪರ್ಯಂತ ನರಳುವಂತೆ ಮಾಡುವ ಮನೋಭಾವ ಇದು ಎಂದು ಮತ್ತೊಬ್ಬ ಬಳಕೆದಾರರು ಕಿಡಿಕಾರಿದ್ದಾರೆ.

Continue Reading

ಪ್ರಮುಖ ಸುದ್ದಿ

Liquor Price Karnataka: ಮದ್ಯ ಪ್ರಿಯರಿಗೆ ಕಿಕ್‌ ಏರಿಸುವ ನ್ಯೂಸ್‌; ಜುಲೈ 1ರಿಂದ ಬೆಲೆ ಇಳಿಕೆ

Liquor Price Karnataka: ಇತರ ರಾಜ್ಯಗಳ ಮದ್ಯದ ದರಗಳಿಗೆ ಸಮೀಪಿಸುವಂತೆ ರಾಜ್ಯದ ದರ ಪರಿಷ್ಕರಿಸುವುದಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಫೆಬ್ರವರಿಯಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ ಹೇಳಿದ್ದರು. ಈ ಘೋಷಣೆಯು ಈಗ ಜಾರಿಯಾಗಲಿದೆ. ರಾಜ್ಯ ಸರ್ಕಾರವು ವರಮಾನ ಸಂಗ್ರಹ ಹೆಚ್ಚಿಸಿಕೊಳ್ಳುವುದಕ್ಕಾಗಿ ಹೀಗೆ ಮಾಡುತ್ತಿದೆ.

VISTARANEWS.COM


on

Liquor Price Karnataka
Koo

ಬೆಂಗಳೂರು: ಮದ್ಯ ಪ್ರಿಯರಿಗೆ ಕಿಕ್‌ ಏರಿಸುವ ಸುದ್ದಿಯನ್ನು ರಾಜ್ಯ ಸರಕಾರ (Karnataka Government) ನೀಡಿದ್ದು, ಜುಲೈ ಒಂದರಿಂದ ಮದ್ಯದ ದರಗಳನ್ನು ಕಡಿಮೆ (Liquor Price Karnataka) ಮಾಡುತ್ತಿದೆ. ಭಾರಿ ಬೆಲೆಯ ಪ್ರೀಮಿಯಂ ಬ್ರಾಂಡ್‌ಗಳ (Premium brand) ಮದ್ಯದ ದರಗಳು ಜುಲೈ 1ರಿಂದ ಇಳಿಕೆಯಾಗಲಿವೆ.

ಇತರ ರಾಜ್ಯಗಳ ಮದ್ಯದ ದರಗಳಿಗೆ ಸಮೀಪಿಸುವಂತೆ ರಾಜ್ಯದ ದರ ಪರಿಷ್ಕರಿಸುವುದಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಫೆಬ್ರವರಿಯಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ ಹೇಳಿದ್ದರು. ಈ ಘೋಷಣೆಯು ಈಗ ಜಾರಿಯಾಗಲಿದೆ. ರಾಜ್ಯ ಸರ್ಕಾರವು ವರಮಾನ ಸಂಗ್ರಹ ಹೆಚ್ಚಿಸಿಕೊಳ್ಳುವುದಕ್ಕಾಗಿ ಹೀಗೆ ಮಾಡುತ್ತಿದೆ.

ಹೆಚ್ಚುವರಿ ಅಬಕಾರಿ ತೆರಿಗೆ ರಾಜ್ಯದಲ್ಲಿ ಹೆಚ್ಚು ಇರುವ ಕಾರಣದಿಂದ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಮದ್ಯದ ದರ ದುಬಾರಿಯಾಗಿದೆ. ಈ ಕಾರಣದಿಂದ ದೊಡ್ಡ ಪ್ರಮಾಣದಲ್ಲಿ ನೆರೆಯ ರಾಜ್ಯಗಳಿಂದಲೂ ರಾಜ್ಯಕ್ಕೆ ಅಕ್ರಮವಾಗಿ ಮದ್ಯ ಪೂರೈಕೆಯಾಗುತ್ತಿರುವುದೂ ಕಂಡುಬರುತ್ತಿದೆ. ಗಡಿ ಭಾಗದ ಜಿಲ್ಲೆಗಳ ಜನರು ನೆರೆಯ ರಾಜ್ಯಗಳಿಗೆ ಹೋಗಿ ಮದ್ಯ ಖರೀದಿಸುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಅಬಕಾರಿ ತೆರಿಗೆ ನಷ್ಟವಾಗುತ್ತಿದೆ.

ಮದ್ಯ ಮಾರಾಟ ಹೆಚ್ಚಿಸಿ, ಅಬಕಾರಿ ತೆರಿಗೆ ಮೂಲದ ವರಮಾನವನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ದರ ಪರಿಷ್ಕರಣೆ ಮಾಡಲಾಗಿದೆ. ಮೊದಲ ಐದು ಸ್ಲಾಬ್‌ಗಳಲ್ಲಿ ಈಗ ಇರುವ ಹೆಚ್ಚುವರಿ ಅಬಕಾರಿ ತೆರಿಗೆ ವ್ಯತ್ಯಾಸವಾಗುತ್ತಿಲ್ಲ. ಆದರೆ, ಆರರಿಂದ 16ನೇ ಸ್ಲಾಬ್‌ಗಳಲ್ಲಿ ಹೆಚ್ಚುವರಿ ಅಬಕಾರಿ ತೆರಿಗೆ ದರ ಗಣನೀಯವಾಗಿ ಇಳಿಕೆಯಾಗಲಿದೆ. ಈ ಬಗ್ಗೆ ಅಬಕಾರಿ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ.

ಈಗ 750 ಎಂ.ಎಲ್. ಗಾತ್ರದ ಬಾಟಲಿಗೆ ₹2,000 ದರ ಇರುವ ಬ್ರಾಂಡ್‌ಗಳ ಮದ್ಯದ ದರವು ಜುಲೈ 1ರಿಂದ ₹1,700ರಿಂದ ₹1,800ಕ್ಕೆ ಇಳಿಕೆಯಾಗಲಿದೆ. ಪ್ರತಿ ಬಾಟಲಿಗೆ ₹5,000 ದರ ಇರುವ ಬ್ರಾಂಡ್ ಮದ್ಯಗಳ ದರ ₹3,600ರಿಂದ 23,700ಕ್ಕೆ ಇಳಿಯಲಿದೆ. ಪ್ರತಿ ಬಾಟಲಿಗೆ 27,100 ಇರುವ ಮದ್ಯದ ದರ 5,200ರ ಅಸುಪಾಸಿಗೆ ಕಡಿಮೆಯಾಗುವ ಸಾಧ್ಯತೆಯೂ ಇದೆ.

ಸೆಮಿ ಪ್ರೀಮಿಯಂ ಮತ್ತು ಪ್ರೀಮಿಯಂ ಸ್ಲ್ಯಾಬ್‌ಗಳ ಮದ್ಯದ ದರ ಸಾಕಷ್ಟು ದುಬಾರಿಯೇ ಇದೆ. ಈ ಹಿನ್ನೆಲೆಯಲ್ಲಿ ಕರಡು ಅಧಿಸೂಚನೆ ಪ್ರಕಟಿಸಿದ ಸರಕಾರ, ಜುಲೈ 1ರಿಂದ ಪರಿಷ್ಕೃತ ಮದ್ಯ ದರ ಅನ್ವಯಿಸಲಿದೆ ಎಂದು ಗೊತ್ತಾಗಿದೆ. ಗ್ಯಾರಂಟಿಗಳಿಗೆ ಹಣ ಹೊಂಚಬೇಕಾದ ಸ್ಥಿತಿಯಲ್ಲಿರುವ ಸರಕಾರ, ವರಮಾನ ಹೆಚ್ಚಳಕ್ಕಾಗಿ ಹೆಚ್ಚುವರಿ ಅಬಕಾರಿ ತೆರಿಗೆ (ಎಇಡಿ) ಇಳಿಕೆಗೆ ಮುಂದಾಗಿದೆ ಎಂದು ತಿಳಿದುಬಂದಿದೆ.

ಟಾರ್ಗೆಟ್‌ ಮೀರಿ ಹೋದ ಅಬಕಾರಿ ಇಲಾಖೆ; 15 ಪರ್ಸೆಂಟ್‌ ಹೆಚ್ಚು ವರಮಾನ

ಸರ್ಕಾರದ ಬೊಕ್ಕಸಕ್ಕೆ ಮದ್ಯಪ್ರಿಯರು ಭರ್ಜರಿ ಕಿಕ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ದರ ಏರಿಕೆ ನಡುವೆಯೂ ಮದ್ಯ ಮಾರಾಟ ಬಾರಿ ಹೆಚ್ಚಳ ಕಂಡಿದೆ. 2023-24ನೇ ಸಾಲಿನಲ್ಲಿ ಸಾವಿರಾರು ಕೋಟಿ ರೂಪಾಯಿ ರಾಜ್ಯ ಸರ್ಕಾರದ ಖಜಾನೆ ಸೇರಿದೆ.

ಅಬಕಾರಿ ಇಲಾಖೆಗೆ ವಾರ್ಷಿಕ 34,500 ಕೋಟಿ ರೂಪಾಯಿ ಟಾರ್ಗೆಟ್ ಅನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೀಡಿತ್ತು. ಈಗ 2023-24ನೇ ಸಾಲಿನಲ್ಲಿ ಅಬಕಾರಿ ಇಲಾಖೆಯು ಟಾರ್ಗೆಟ್ ರೀಚ್ ಮಾಡಿದೆ. ಕಳೆದ ಏಪ್ರಿಲ್‌ನಿಂದ ಮಾರ್ಚ್‌ವರೆಗೆ ಹೆಚ್ಚುವರಿ 128 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಸಂಗ್ರಹವಾಗಿದೆ.

2023-24ನೇ ಸಾಲಿನಲ್ಲಿ 34,628 ಕೋಟಿ ರೂಪಾಯಿ ಆದಾಯವು ಅಬಕಾರಿ ಇಲಾಖೆಗೆ ಹರಿದುಬಂದಿದೆ. ಕಳೆದ ವರ್ಷ 29,920 ಕೋಟಿ ರೂಪಾಯಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಸಂಗ್ರಹ ಮಾಡಿದ್ದರು. ಕಳೆದ ಒಂದು ವರ್ಷದಲ್ಲಿ ಮೂರು ಬಾರಿ ಮದ್ಯ ದರ ಪರಿಷ್ಕರಣೆ ಮಾಡಲಾಗಿದೆ. ಆದರೂ, ತಲೆಕೆಡಿಸಿಕೊಳ್ಳದೆ ಮದ್ಯ ಪ್ರಿಯರು ಮದ್ಯ ಖರೀದಿ ಮಾಡಿದ್ದಾರೆ.

ಇದನ್ನೂ ಓದಿ: CM Siddaramaiah: ಅಬಕಾರಿ ಪರವಾನಗಿ ನವೀಕರಣಕ್ಕೆ ಕಿರುಕುಳ ನೀಡಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

Continue Reading
Advertisement
Engineering Seats
ಶಿಕ್ಷಣ1 min ago

Engineering Seats: ಎಂಜಿನಿಯರಿಂಗ್ ಆಕಾಂಕ್ಷಿಗಳಿಗೆ ಸಿಹಿಸುದ್ದಿ; ಈ ಬಾರಿ ಹೆಚ್ಚು ಸೀಟುಗಳು ಲಭ್ಯ!

Pavithra Gowda Number 6024 in parappana jail
ಕ್ರೈಂ1 min ago

Pavithra Gowda: ಪವಿತ್ರಾ ಗೌಡ ಈಗ ಕೈದಿ ನಂಬರ್ 6024; ಹೈಫೈ ಲೈಫ್ ಲೀಡ್ ಮಾಡಿದ್ದ ನಟಿ ಈಗ ಜೈಲು ಹಕ್ಕಿ!

assault Case
ಕ್ರೈಂ16 mins ago

Assault Case: 3 ವರ್ಷದ ಮಗಳ ಗುಪ್ತಾಂಗ ಕಚ್ಚಿ ಮಲತಂದೆಯ ಕ್ರೌರ್ಯ; ಸಿಗರೇಟ್‌ನಿಂದ ಸುಟ್ಟು ವಿಕೃತಿ

ram mohan raju actor darshan
ಪ್ರಮುಖ ಸುದ್ದಿ20 mins ago

Actor Darshan: ದರ್ಶನ್‌ಗೆ 40 ಲಕ್ಷ ರೂ ನೀಡಿದ ವ್ಯಕ್ತಿ ಈಗ ನಾಪತ್ತೆ! ಯಾರೀ ಆಸಾಮಿ?

Darshan Arrested in IT trouble! Is the money paid to a MLA's friend
ಸ್ಯಾಂಡಲ್ ವುಡ್23 mins ago

Darshan Arrested: ದರ್ಶನ್‌ಗೆ ಕೊಲೆ ಆರೋಪದ ಜತೆಗೆ ಐಟಿ ಸಂಕಷ್ಟ! ಹಣ ಸಂದಾಯ ಮಾಡಿದ್ರಾ ಶಾಸಕರೊಬ್ಬರ ಆಪ್ತ?

IRCTC Ticket Booking
Latest39 mins ago

IRCTC Ticket Booking: ರೈಲ್ವೆ ಟಿಕೆಟ್ ಈ ರೀತಿ ಬುಕ್ ಮಾಡಿದರೆ ಜೈಲೂಟ ಗ್ಯಾರಂಟಿ!

Viral Video
Latest42 mins ago

Viral Video : ಇನ್‌ಸ್ಟಾಗ್ರಾಂ ರೀಲ್ಸ್ ಕ್ರೇಜ್‌; ಪಾಳುಬಿದ್ದ ಕಟ್ಟಡದ ಮೇಲಿಂದ ನೇತಾಡಿದ ಹುಡುಗಿ!

Israel-Hamas Conflict
ವಿದೇಶ47 mins ago

Israel-Hamas Conflict: ಇಸ್ರೇಲ್‌ ಏರ್‌ಸ್ಟ್ರೈಕ್- ಹಮಾಸ್‌ ಕಮಾಂಡರ್‌ ಹತ್ಯೆ

Actor Darshan case sanjana galrani Reaction about ramya statement
ಸ್ಯಾಂಡಲ್ ವುಡ್1 hour ago

Actor Darshan: ದರ್ಶನ್‌ಗೆ ಗಲ್ಲು ಶಿಕ್ಷೆ ಆಗಬೇಕು ಎಂದ ರಮ್ಯಾಗೆ ಕೌಂಟರ್‌ ಕೊಟ್ಟ ಸಂಜನಾ ಗಲ್ರಾನಿ!

Liquor Price Karnataka
ಪ್ರಮುಖ ಸುದ್ದಿ1 hour ago

Liquor Price Karnataka: ಮದ್ಯ ಪ್ರಿಯರಿಗೆ ಕಿಕ್‌ ಏರಿಸುವ ನ್ಯೂಸ್‌; ಜುಲೈ 1ರಿಂದ ಬೆಲೆ ಇಳಿಕೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ17 hours ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು4 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು4 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ5 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ5 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ5 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ6 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ7 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

ಟ್ರೆಂಡಿಂಗ್‌