ಬೆಂಗಳೂರು: ಒಂದು ದಿನದ ಹೆಣ್ಣು ಮಗುವನ್ನು ಕಟ್ಟಡದಿಂದ ಎಸೆದಿರುವ ಅಮಾನವೀಯ ಘಟನೆ ತಿಲಕ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರು ಪತ್ರ ಬರೆದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಮಾನ್ಯ ಸಿದ್ದರಾಮಯ್ಯನವರೇ, ಬೆಂಗಳೂರಿನಲ್ಲಿ ಕಟ್ಟಡದಿಂದ ಒಂದು ದಿನದ ಹೆಣ್ಣು ಮಗುವನ್ನು ಎಸೆಯಲಾಗಿದ್ದು, ಆ ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಮಗುವನ್ನು ಎಸೆಯುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ರಕ್ತದ ಮಡುವಿನಲ್ಲಿ ಶಿಶು ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಲೆಗೆ ತೀವ್ರ ಗಾಯಗಳಾಗಿದ್ದವು. ಆಸ್ಪತ್ರೆಗೆ ದಾಖಲಿಸಿದ್ದರೂ ಆ ಮಗು ಬದುಕುಳಿದಿಲ್ಲ. ಇದು ಅತ್ಯಂತ ಗಂಭೀರ ಈ ವಿಷಯವಾಗಿದ್ದು, ಈ ಬಗ್ಗೆ ಕೂಡಲೇ ಎಫ್‌ಐಆರ್ ದಾಖಲಿಸಿ, ಸೂಕ್ತ ತನಿಖೆಯನ್ನು ನಡೆಯಬೇಕು. ಹಾಗೆಯೇ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಹೆಣ್ಣು ಮಗುವನ್ನು ಉಳಿಸಲು ನಮಗೆ ಸಾಧ್ಯವಾಗಲಿಲ್ಲ, ಆದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಲು ಸರ್ಕಾರವು ತುರ್ತು ಕ್ರಮ ತೆಗೆದುಕೊಳ್ಳಬೇಕು ಎಂದು ನಾನು ವಿನಂತಿಸುತ್ತೇನೆ ಎಂದು ಸಿಎಂಗೆ ಸ್ವಾತಿ ಮಲಿವಾಲ್ ಮನವಿ ಮಾಡಿದ್ದಾರೆ.
बेंगलुरु में 'एक दिन की उम्र' की बच्ची की बिल्डिंग से फेंककर हत्या का दिल दहला देने वाला वीडियो वायरल है। बच्ची की अस्पताल में मृत्यु हो गई है।@siddaramaiah जी को पत्र लिखा है कि तुरंत FIR हो और अपराधियों के खिलाफ़ सख्त कार्रवाई की जाए। pic.twitter.com/jgBIZidbm0
— Swati Maliwal (@SwatiJaiHind) January 27, 2024
ಇದನ್ನೂ ಓದಿ | ಇನ್‌ಸ್ಟಾಗ್ರಾಂ ಗೆಳೆಯನಿಂದ ಯುವತಿ ಮೇಲೆ ಅತ್ಯಾಚಾರ; ಯುವತಿಯರೇ ಹುಷಾರ್!
Kalaburagi News: ಅಂಬೇಡ್ಕರ್ ಪೂಜೆಗೆ ಬಾರದ ವಿದ್ಯಾರ್ಥಿಗೆ ಥಳಿಸಿ, ಅರೆಬೆತ್ತಲೆ ಮೆರವಣಿಗೆ
ಕಲಬುರಗಿ: ಹಾಸ್ಟೆಲ್‌ನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪೂಜೆಗೆ ಬರಲಿಲ್ಲ ಎನ್ನುವ ಕಾರಣಕ್ಕೆ ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆಸಿ, ಅರೆಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ ನಗರದಲ್ಲಿ (Kalaburagi News) ನಡೆದಿದೆ. ವಿದ್ಯಾರ್ಥಿಯ ಬಟ್ಟೆ ಬಿಚ್ಚಿಸಿ ಥಳಿಸಿರುವ ಹಾಸ್ಟೆಲ್ ವಿದ್ಯಾರ್ಥಿಗಳು, ಆತನನ್ನು ಅರೆಬೆತ್ತಲೆಗೊಳಿಸಿ ಕೈಯಲ್ಲಿ ಅಂಬೇಡ್ಕರ್ ಫೋಟೊ ಕೊಟ್ಟು ಮೆರವಣಿಗೆ ಮಾಡಿ ಅಮಾನವೀಯವಾಗಿ ವರ್ತಿಸಿದ್ದಾರೆ.
ನಗರದ ಹೈಕೋರ್ಟ್ ಹತ್ತಿರದ ಬಾಲಕರ ಹಾಸ್ಟೆಲ್‌ನಲ್ಲಿ ಗುರುವಾರ ಘಟನೆ ನಡೆದಿದೆ. ಹಾಸ್ಟೆಲ್‌ನಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ವಿದ್ಯಾರ್ಥಿಗಳು ಪೂಜೆ ಸಲ್ಲಿಸುತ್ತಿದ್ದರು. ಆದರೆ, ಕೆಲಸದ ನಿಮಿತ್ತ ಪೂಜೆಗೆ ಹೋಗಲು ವಿದ್ಯಾರ್ಥಿಗೆ ಸಾಧ್ಯವಾಗಿರಲಿಲ್ಲ ಎನ್ನಲಾಗಿದೆ. ಅದೇ ಕಾರಣಕ್ಕೆ ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿ, ಅರೆಬೆತ್ತಲೆಗೊಳಿಸಿ ಮೆರವಣಿಗೆ ಮಾಡಲಾಗಿದೆ.
ಹಲ್ಲೆಗೊಳಗಾದ 17 ವರ್ಷದ ವಿದ್ಯಾರ್ಥಿಯು, ಜಿಲ್ಲೆಯ ಕಮಲಾಪುರ ತಾಲೂಕಿನ ತಾಂಡಾವೊಂದರ ನಿವಾಸಿಯಾಗಿದ್ದಾನೆ. ಈತ ಖಾಸಗಿ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದಾನೆ. ಈತನ ತಂದೆ-ತಾಯಿ ಮುಂಬೈನಲ್ಲಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ವಿದ್ಯಾರ್ಥಿಯು ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ನಲ್ಲಿ ಇದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದ.
ಇದನ್ನೂ ಓದಿ | Bus Accident : ಅಡ್ಡ ಬಂದ ಬೈಕ್ ತಪ್ಪಿಸಲು ಹೋಗಿ ಪಲ್ಟಿ ಹೊಡೆದ ಬಸ್; ಹೊತ್ತಿ ಉರಿದ ಸ್ಕೂಟರ್
ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿರುವ ವಿದ್ಯಾರ್ಥಿಗಳೆಲ್ಲರೂ ಅಪ್ರಾಪ್ತ ವಯಸ್ಸಿನ ಬಾಲಕರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ವಿದ್ಯಾರ್ಥಿಗಳ ವಿಚಾರಣೆ ನಡೆಸಿದ್ದಾರೆ. ಘಟನೆ ಸಂಬಂಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆ.341, 323, 504, 505(2) 506 ಅಡಿ ಪ್ರಕರಣ ದಾಖಲಾಗಿದೆ.