ಬೆಂಗಳೂರು: ಒಂದೇ ಜಿಲ್ಲೆಯಲ್ಲಿ ( ಮಂಡ್ಯ) ವಿಭಿನ್ನ ಪಕ್ಷ ಹಾಗೂ ಜಿಲ್ಲೆಗಳಲ್ಲಿ ರಾಜಕೀಯ ಜೀವನ ಕಂಡುಕೊಂಡ ಬಿ.ಎಸ್. ಯಡಿಯೂರಪ್ಪ (B.S. Yediyurappa) ಅವರಿಗೆ ಮಾಜಿ ಸಿಎಂ ಎಸ್.ಎಂ. ಕೃಷ್ಣ ಶುಭ ಹಾರೈಸಿದ್ದಾರೆ. ಈ ಕುರಿತು ಪತ್ರವೊಂದನ್ನು ಬರೆಯುವ ಮೂಲಕ, ಯಡಿಯೂರಪ್ಪ ಅವರ ಜೀವನವನ್ನು ಮೆಲುಕು ಹಾಕಿದ್ದಾರೆ.
ನಾಲ್ಕು ದಶಕಗಳ ಸುಧೀರ್ಫ ರಾಜಕೀಯ ಜೀವನದಲ್ಲಿ ಹಲವು ಏಳು ಬೀಳುಗಳನ್ನು ಕಂಡು ರೈತಾಪಿ ವರ್ಗದ ಪರವಾಗಿ ಅಹರ್ನಿಶಿ ಹೋರಾಟ ನಡೆಸಿದ ತಾವು ಚುನಾವಣಾ ರಾಜಕೀಯದಿಂದ ದೂರ ಸರಿದು ಯುವ ಸಮೂಹಕ್ಕೆ ಮಾರ್ಗದರ್ಶಕರಾಗಲು ನಿಶ್ಚಯಸಿರುವ ತಮ್ಮ ನಿರ್ಧಾರವನ್ನು ಸ್ವಾಗತಿಸುತ್ತೇನೆ.
1983ರಿಂದ ಶಾಸನ ಸಭೆಯ ಸದಸ್ಯರಾಗಿ ಆಯ್ಕೆಯಾಗಿ ತಮ್ಮ ಸಿದ್ದಾಂತಕ್ಕೆ ಬದ್ದರಾಗಿ ಹಗಲಿರುಳು ಹೋರಾಡಿ ಬಿಜೆಪಿ ಪಕ್ಷವನ್ನು ದಕ್ಷಿಣ ಭಾರತದಲ್ಲಿ ಅಧಿಕಾರಕ್ಕೆ ತರುವಲ್ಲಿ ತಮ್ಮ ಪಾತ್ರ ಹಿರಿದಾದ್ದು. ನಾಲ್ಕು ಭಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಪ್ರತಿ ಹಂತದಲ್ಲೂ ಹೋರಾಟವೇ ನಿಮ್ಮ ಜೀವನದ ಮಂತ್ರವಾಗಿಸಿಕೊಂಡು ರಾಜ್ಯದ ಎಲ್ಲಾ ಸಮುದಾಯಗಳ ಏಳಿಗೆಗೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದು ಜನಮಾನಸದಲ್ಲಿ ಅಜರಾಮರಾಗಿದ್ದೀರಿ.
“ಯಡಿಯೂರಪ್ಪ ಗುಡುಗಿದರೆ ವಿಧಾನಸಭೆ ನಡುಗುವುದು” ಎನ್ನುವ ಮಟ್ಟಿಗೆ ನಿಮ್ಮ ಧ್ವನಿ ವಿಧಾನಸೌಧದಲ್ಲಿ ಮೊಳಗಿದೆ. ನಾವಿಬ್ಬರೂ ಒಂದೇ ಜಿಲ್ಲೆಯಿಂದ ಬಂದವರಾದರೂ ತಾವು ಶಿವಮೊಗ್ಗದ ಶಿಕಾರಿಪುರವನ್ನು ತಮ್ಮ ಕಾರ್ಯಕ್ಷೇತ್ರವನ್ನಾಗಿಸಿಕೊ೦ಡು ರಾಜ್ಯದ ಸರ್ವವ್ಯಾಪಿ ಸಂಚಾರಿಸಿ ಪಕ್ಷವನ್ನು ಅಧಿಕಾರಕ್ಕೆ ಏರಿಸಿ ಹನನಾಯಕಜಾಗಿ ರೂಪುಗೊಂಡು ಹಲವು ಯುವನಾಯಕರನ್ನು ಸೃಷ್ಠಿಸಿ ಯಶಸ್ವಿ ನಾಯಕರಾಗಿ ಸಾರ್ವಜನಿಕ ಜೀವನ ಸವೆಸಿ ಇಂದು
ಚುನಾವಣಾ ರಾಜಕೀಯದಿಂದ ವಿರಮಿಸುತ್ತಿರುವ ತಮಗೆ ಭಗವ೦ತ ಆಯಸ್ಸು ಆರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ನಿಮ್ಮ ಸೇವೆ ಬೇರೆ ರೂಪದಲ್ಲಿ ರಾಜ್ಯದ ಜನರಿಗೆ ದೊರೆತು ಸಮಾಜದ ಶ್ರೇಯೋಭಿವೃದ್ಧಿಗೆ
ಅನುವಾಗಲಿ, ತಮ್ಮ ಮುಂದಿನ ನಡೆ ಯುವಜನಾಂಗಕ್ಕೆ ದಾರಿದೀಪವಾಗಲಿ ಎಂದು ಹಾರೈಸುತ್ತೇನೆ ಎಂದು ಎಸ್. ಎಂ. ಕೃಷ್ಣ ಹೇಳಿದ್ದಾರೆ.